Connect with us

ರಾಜಕೀಯ

ಸಚಿವ ಸುರೇಶ್ ಕುಮಾರ್ ರಾಜಕೀಯ ಭವಿಷ್ಯದ ನಿರ್ಧಾರಕ್ಕಿದು ಸಕಾಲ..! : ಸಚಿವರ ಮುಂದಿರೋ ಎರಡು ದಾರಿಗಳು..!

Published

on

ಜಿ.ಗೋವಿಂದೇಗೌಡರು ಶಿಕ್ಷಣ ಸಚಿವರಾಗಿದ್ದಾಗ ಶಿಕ್ಷಣ ಇಲಾಖೆಯ ಬಗ್ಗೆ ಆರೋಪ ಮಾಡುವುದು ಬಿಡಿ, ಕನಿಷ್ಠ ಇಲಾಖೆಯ ಬಗ್ಗೆ ಪಾಸಿಂಗ್ ಕಮೆಂಟ್ ಮಾಡಲೂ ರಾಜಕಾರಣಿಗಳು ಹೆದರುತ್ತಿದ್ದರು.‌ ಅದಕ್ಕೆ ಕಾರಣ ಗೋವಿಂದೇಗೌಡರು ಇಲಾಖೆಯಲ್ಲಿ ತಂದಿದ್ದ ಶಿಸ್ತು. ಅವತ್ತಿನಿಂದ ಇವತ್ತಿವರೆಗೆ ಶಿಕ್ಷಣ ಇಲಾಖೆಯೆಂದರೆ ಆ ಗತ್ತು, ಗೌರವ ಉಳಿಸಿಕೊಂಡು ಬಂದಿದೆ. ಎಸ್ ಸುರೇಶ್ ಕುಮಾರ್ ರವರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಬಳಿಕ ಇಲಾಖೆ ಬಗ್ಗೆ ಬೀದಿ ಬೀದಿಯಲ್ಲಿ ಮಾತನಾಡುವಂತಾಗಿದೆ. ಪ್ರತಿಭಟನೆಗಳು ಭುಗಿಲೇಳುತ್ತಿದೆ.

ಎಸ್ ಸುರೇಶ್ ಕುಮಾರ್ ಶಿಕ್ಷಣ ಸಚಿವರಾದ ಮೇಲೆ ವಿದ್ಯಾರ್ಥಿ ವಿರೋಧಿ ನಿಲುವುಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಖಾಸಾಗಿ ಶಿಕ್ಷಣ ಮಾಫಿಯಾಗೆ ಪೂರಕವಾಗಿ ಕೆಲಸ ಮಾಡುತ್ತಿರುವ ಸುರೇಶ್ ಕುಮಾರ್ ರಿಂದಾಗಿ ಇಷ್ಟೆಲ್ಲಾ ಸಮಸ್ಯೆಗಳು ಉದ್ಭವಿಸುತ್ತಿದೆ ಅನ್ನೋದಂತೂ ಸ್ಪಷ್ಟ.

ದಕ್ಷ, ಪ್ರಾಮಾಣಿಕ ಎಂಬ ವರ್ಚಸ್ಸನ್ಜು ಹೊಂದಿದ್ದ ಎಸ್ ಸುರೇಶ್ ಕುಮಾರ್ ಶಿಕ್ಷಣ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದಾಗ ರಾಜ್ಯದ ಪ್ರಜ್ಞಾವಂತರು ಹಲವು ನಿರೀಕ್ಷೆಗಳನ್ನು ಹೊಂದಿದ್ದರು. ಅದೆಲ್ಲವನ್ನೂ ಸುರೇಶ್ ಕುಮಾರ್ ಹುಸಿ ಮಾಡಿದ್ರು. ಸುರೇಶ್ ಕುಮಾರ್ ರವರ ಸೈಟ್ ಹಗರಣ, ಮಾರುಕಟ್ಟೆ ದರ ವಂಚನೆ ಮಾಡಿ ಸರ್ಕಾರದ ಬೊಕ್ಕಸಕ್ಕೆ ವಂಚಿಸಿದ ಪ್ರಕರಣಗಳನ್ನೆಲ್ಲಾ ಜನ ಮರೆತು ಶಿಕ್ಷಣ ಸಚಿವರನ್ನಾಗಿ ಸ್ವೀಕರಿಸಿದರು. ಅದನ್ನು ಉಳಿಸಿಕೊಳ್ಳುವ ಜವಾಬ್ದಾರಿ ಸುರೇಶ್ ಕುಮಾರ್ ಗೆ ಇರಬೇಕಿತ್ತು.

ಶಾಲೆಯನ್ನು ಆರಂಭಿಸಿ ಎಂದು ಮನವಿ ಕೊಟ್ಟದ್ದು ಖಾಸಗಿ ಶಾಲೆಗಳು ಮಾತ್ರ. ಸಾಮಾಜಿಕ ಜಾಲತಾಣಿಗರು, ಪೋಷಕರು, ವಿದ್ಯಾರ್ಥಿಗಳು, ಶಿಕ್ಷಣ ತಜ್ಞರು ಶಾಲೆ ಆರಂಭಿಸಬೇಡಿ ಎಂದು ಮನವಿ ಮಾಡುತ್ತಿದ್ದಾರೆ. ಜನಾಭಿಪ್ರಾಯವನ್ನು ಈ ರೀತಿ ಒಬ್ಬ ಜನಪ್ರತಿನಿಧಿ ಕಸದ ಬುಟ್ಟಿಗೆ ಹಾಕಿದ್ದು ಇದೇ ಮೊದಲು ! ಎಲ್ಲರನ್ನೂ ದಿಕ್ಕರಿಸಿ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಡೊನೇಷನ್ ವಸೂಲಿಗೆ ಅವಕಾಶ ಕೊಡಲು ಶಾಲೆ ಆರಂಭಿಸಲು ತಯಾರಿಯನ್ನು ಶಿಕ್ಷಣ ಸಚಿವರು ಮಾಡುತ್ತಾರೆ.

ಎಸ್ಎಸ್ಎಲ್ಸಿ ಪರೀಕ್ಷೆಯನ್ನು ನಡೆಸದೇ ಎಲ್ಲರನ್ನೂ ಪಾಸ್ ಮಾಡಲು ಇರೋ ಅಡ್ಡಿ ಆತಂಕಗಳೇನು ? ಎಂಬುದನ್ನು ಪ್ರಾಜ್ಞರಾದ ಸುರೇಶ್ ಕುಮಾರ್ ಜನರಿಗೆ ತಿಳಿಸಬೇಕು. ಲಕ್ಷ ಲಕ್ಷ ವಿದ್ಯಾರ್ಥಿಗಳ ಪ್ರಾಣ ಒತ್ತೆ ಇಟ್ಟು ಪರೀಕ್ಷೆ ನಡೆಸುವ ಅಗತ್ಯ ಏನು ? ವಿದ್ಯಾರ್ಥಿಗೆ ಬಂದ ಅಂಕ, ರ್ಯಾಂಕ್ ಆಧರಿಸಿ ಖಾಸಗಿ ಶಾಲೆಗಳು ಬಿಸಿನೆಸ್ ಮಾಡಬಹುದು ಎಂಬುದನ್ನು ಬಿಟ್ಟು ಬೇರೆ ಪ್ರಯೋಜನವೇನಾದ್ರೂ ಇದೆಯೇ ?

ರ್ಯಾಂಕ್ ಬಂದರೆ ಪ್ರತಿಷ್ಠಿತ ಖಾಸಗಿ ಶಾಲೆಗಳು ಉಚಿತ ಎಜುಕೇಶನ್ ಕೊಟ್ಟು ಆ ವಿದ್ಯಾರ್ಥಿಯ ಫೋಟೋ ಹಾಕಿ ತನ್ನ ಶಾಲೆಯಲ್ಲಿ ಜಾಹೀರಾತಿಗೆ ಬಳಸುತ್ತಾರೆ. ಕಡಿಮೆ ಅಂಕ ಬಂದವರು ರ‌್ಯಾಂಕ್ ಸ್ಟುಡೆಂಟ್ಸ್ ಕಲೀತಿರೋ ಶಾಲೆಯಲ್ಲಿ ಕಲಿಯಬೇಕಾದರೆ ಭಾರೀ ಮೊತ್ತದ ಡೊನೇಷನ್ ನೀಡಬೇಕು. ಇದಲ್ಲದೇ ಬೇರೆ ಯಾವ ಪ್ರಯೋಜನವೂ ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ ಇಲ್ಲ. ಎಸ್ಎಸ್ಎಲ್ಸಿ ರ‌್ಯಾಂಕ್ ನೋಡಿ ಎಲ್ಲೂ ಕೆಲಸವಂತೂ ಸಿಗೋ ಅವಕಾಶವಿಲ್ಲ. ಕಾಲೇಜುಗಳಲ್ಲಿ ಸೀಟು ಪಡೆಯಲಷ್ಟೇ ಅಂಕಗಳು ಮತ್ತು ರ‌್ಯಾಂಕ್ ಗಳು ಪ್ರಯೋಜನಕಾರಿ. ಇದೊಂದು ಪಕ್ಕಾ ಖಾಸಗಿ ಶಾಲಾ ಮಾಫಿಯಾ !

ಜೂನ್ 07 ರಂದು ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಪರೀಕ್ಷೆ ರದ್ದತಿಗೆ ಆಗ್ರಹಿಸಿ ಪ್ರತಿಭಟನೆ ನಡೆಯುತ್ತಿದೆ.‌ ಶಿಕ್ಷಕರು ಮತ್ತು ಮಕ್ಕಳನ್ನು ಜೀವನ್ಮರಣ ಸ್ಥಿತಿಗೆ ತಳ್ಳುವ ಪರೀಕ್ಷೆಯನ್ನು ನಡೆಸಕೂಡದು ಎಂಬುದು ಅದ್ಯಾಪಕರ ಆಗ್ರಹ. ನೂರಾರು ಶಿಕ್ಷಕರು, ಲಕ್ಷಾಂತರ ವಿದ್ಯಾರ್ಥಿಗಳು, ಲಕ್ಷಾಂತರ ಪೋಷಕರ ಅಭಿಪ್ರಾಯವನ್ನು ಧಿಕ್ಕರಿಸಿ ಕೈಗೊಳ್ಳುವ ನಿರ್ಧಾರದ ಹಿಂದೆ ಕಾಣದ ಕೈಗಳು ಕೆಲಸ ಮಾಡಿವೆ ಎನ್ನೋ ಅಂಗೈ ಹುಣ್ಣಿಗೆ ಕನ್ನಡಿ ಬೇಡ.

ಸಚಿವ ಸುರೇಶ್ ಕುಮಾರ್ ಜನವಿರೋಧಿ ನಿರ್ಧಾರ ವಿರೋಧಿಸಿ ಜೂನ್ 07 ರಂದು ನಡೆಯುವ ಪ್ರತಿಭಟನೆಗೆ ಪೂರಕವಾಗಿ ಲಕ್ಷಾಂತರ ವಿದ್ಯಾರ್ಥಿಗಳು, ಪೋಷಕರು ಸೋಶಿಯಲ್ ಮೀಡಿಯಾ ಕ್ಯಾಂಪೇನ್ ಮಾಡಲು ನಿರ್ಧರಿಸಿದ್ದಾರೆ. ಇಷ್ಟೆಲ್ಲಾ ಆದ ಬಳಿಕ ಒಂದೋ ಸುರೇಶ್‌ಕುಮಾರ್ ಜನಾಭಿಪ್ರಾಯಕ್ಕೆ ಮಣಿದು ಪರೀಕ್ಷೆ ರದ್ದು, ಶಾಲೆ ಆರಂಭಗೆ ತಡೆ ನೀಡುವ ನಿರ್ಧಾರ ತೆಗೆದುಕೊಳ್ಳಬೇಕು. ಇಲ್ಲದೇ ಇದ್ದರೆ ರಾಜೀನಾಮೆ ಕೊಡಬೇಕು. ಇವೆರಡೇ ದಾರಿ ಸುರೇಶ್ ಕುಮಾರ್ ಇರುವುದು !

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನ

Published

on

ಸುದ್ದಿದಿನ ಡೆಸ್ಕ್ : ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ.

ನಾಳೆ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಇದೇ 30 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಇದೇ ವೇಳೆ ಬಿಹಾರದಲ್ಲಿ ನಾಮಪತ್ರ ಸಲ್ಲಿಕೆಗೆ ನಾಳೆ ಕಡೆ ದಿನವಾಗಿದ್ದು, ಈ ತಿಂಗಳ 30 ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಏಪ್ರಿಲ್ 2ರಂದು ನಾಮತ್ರ ಹಿಂಪಡೆಯುವಿಕೆಗೆ ಕೊನೆಯ ದಿನವಾಗಿರುತ್ತದೆ.

ಏಪ್ರಿಲ್ 19 ರಂದು 17 ರಾಜ್ಯಗಳು ಮತ್ತು ನಾಲ್ಕು ಕೇಂದ್ರಾಡಳಿತ ಪ್ರದೇಶಗಳಲ್ಲಿನ 102ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ. ಅದರಂತೆ ತಮಿಳುನಾಡಿನಲ್ಲಿ 39, ರಾಜಸ್ಥಾನದಲ್ಲಿ 12, ಉತ್ತರ ಪ್ರದೇಶದಲ್ಲಿ 8, ಮಧ್ಯಪ್ರದೇಶದಲ್ಲಿ 6, ಉತ್ತರಾಖಂಡ, ಅಸ್ಸಾಂ ಮತ್ತು ಮಹಾರಾಷ್ಟ್ರದಲ್ಲಿ ತಲಾ 5 , ಬಿಹಾರದಲ್ಲಿ 4, ಪಶ್ಚಿಮ ಬಂಗಾಳದಲ್ಲಿ 3, ಅರುಣಾಚಲ ಪ್ರದೇಶ, ಮಣಿಪುರ, ಮೆಘಾಲಯದಲ್ಲಿ ತಲಾ 2 ಮತ್ತು ಛತ್ತೀಸ್‌ಗಢ, ಮಿಜೋರಾಂ, ನಾಗಾಲ್ಯಾಂಡ್, ಸಿಕ್ಕಿಂ, ತ್ರಿಪುರ, ಅಂಡಮಾನ್-ನಿಕೋಬಾರ್ ದ್ವೀಪಗಳು, ಜಮ್ಮು-ಕಾಶ್ಮೀರ, ಲಕ್ಷದ್ವೀಪ ಮತ್ತು ಪುದುಚೇರಿಯಲ್ಲಿ ತಲಾ ಒಂದು ಕ್ಷೇತ್ರದಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ.

ಎರಡನೇ ಹಂತದಲ್ಲಿ 89 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗ ನಾಳೆ ಅಧಿಸೂಚನೆ ಹೊರಡಿಸಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಲೋಕಸಭಾ ಚುನಾವಣೆ | ಹೊಸ ಮತದಾರರೆಷ್ಟು ಗೊತ್ತಾ..?

Published

on

ಸುದ್ದಿದಿನ ಡೆಸ್ಕ್ : 2024ರ ಲೋಕಸಭಾ ಚುನಾವಣೆಯಲ್ಲಿ ಅಂದಾಜು ಒಂದು ಕೋಟಿ 80 ಲಕ್ಷ ಹೊಸ ಮತದಾರರು ತಮ್ಮ ಅಮೂಲ್ಯ ಹಕ್ಕನ್ನು ಮೊದಲ ಬಾರಿಗೆ ಚಲಾಯಿಸಲಿದ್ದಾರೆ. ಇವರೆಲ್ಲ 18-19ರ ಪ್ರಾಯದವರು.

ಮೊದಲ ಬಾರಿಗೆ ಮತ ಚಲಾಯಿಸುವ ಯುವಕರಿಗೆ ಅವರ ಈ ಪವಿತ್ರ ಕರ್ತವ್ಯದ ಮಹತ್ವವನ್ನು ಮನಗಾಣಿಸುವ ಸಲುವಾಗಿ ಸಾಮಾಜಿಕ ಜಾಲತಾಣಗಳಲ್ಲಿ ’ನಾನು ಖಂಡಿತ ಮತ ಚಲಾಯಿಸುತ್ತೇನೆ’ ಎನ್ನುವ ಪ್ರಚಾರ ಆಂದೋಲನಗಳು ನಡೆಯುತ್ತಿವೆ.

ಈ ಬಾರಿ ಚುನಾವಣೆಯಲ್ಲಿ ಭಾಗವಹಿಸುವ ಯುವ ಮತದಾರರ ಪೈಕಿ 20ರಿಂದ 29ವರ್ಷ ವಯೋಮಾನದ ಅಂದಾಜು 19 ಕೋಟಿ 74 ಲಕ್ಷ ಮತದಾರರು ಪಾಲ್ಗೊಳ್ಳಲಿದ್ದಾರೆ. 18 ವರ್ಷಕ್ಕೆ ಮತದಾನದ ಹಕ್ಕು ದೊರೆಯುವುದಾದರೂ ಈಗ 17 ವರ್ಷ ತುಂಬಿರುವ ಯುವಜನ ಸಮೂಹದಿಂದ 13.4ಲಕ್ಷಕ್ಕೂ ಅಧಿಕ ಅರ್ಜಿಗಳನ್ನು ಮುಂಚಿತವಾಗಿಯೇ ಸ್ವೀಕರಿಸಲಾಗಿದೆ.

ಕೇಂದ್ರ ಚುನಾವಣಾ ಆಯೋಗ ಯುವ ಜನರಿಗೆ ಮತದಾನಕ್ಕೆ ಪ್ರೋತ್ಸಾಹ ನೀಡುವ ಸಲುವಾಗಿ ಸಚಿನ್ ತೆಂಡುಲ್ಕರ್ ಮತ್ತು ರಾಜಕುಮಾರ್ ರಾವ್ ಅವರಂತಹ ರಾಷ್ಟ್ರೀಯ ದಿಗ್ಗಜರಿಂದ ಸಂದೇಶಗಳನ್ನು ಪ್ರಸಾರ ಮಾಡುತ್ತಿದೆ. ಸಾಮಾಜಿಕ ಮಾಧ್ಯಮ ಅಭಿಯಾನಗಳು ಮತ್ತು ರೇಡಿಯೋ ಮೂಲಕವೂ ಸಂದೇಶಗಳನ್ನು ಪ್ರಸಾರ ಮಾಡಲಾಗುತ್ತದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಬೆಂಗಳೂರಿನಲ್ಲಿ ಬಿಜೆಪಿ ನೂತನ ಮಾಧ್ಯಮಕೇಂದ್ರ ಆರಂಭ

Published

on

ಸುದ್ದಿದಿನ,ಬೆಂಗಳೂರು : ದಕ್ಷಿಣ ಭಾರತದಲ್ಲಿ ಭಾರತೀಯ ಜನತಾಪಕ್ಷಕ್ಕೆ, ಕರ್ನಾಟಕ ಹೆಬ್ಬಾಗಿಲಿನಂತಿದ್ದು, ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಪಕ್ಷ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.

ಬರಲಿರುವ ಮಹಾಚುನಾವಣೆಗೆ ಪಕ್ಷದ ಕೇಂದ್ರಬಿಂದುವಾಗಿ ಕಾರ್ಯನಿರ್ವಹಿಸಲಿರುವ ನೂತನ ಮಾಧ್ಯಮ ಕೇಂದ್ರದಲ್ಲಿ ಪಕ್ಷದ ರಾಜ್ಯ ನಾಯಕರು ಇಂದು ಬೆಳಿಗ್ಗೆ ನಡೆಸಿದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ, ಜನಪರ ಆಡಳಿತ ನೀಡುವಲ್ಲಿ ಮತ್ತು ಬರಪರಿಸ್ಥಿತಿ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಆಪಾದಿಸಿದರು.

ಜನವಿರೋಧಿ ಕ್ರಮಗಳಿಂದಾಗಿ ರಾಜ್ಯದ ಜನತೆ ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.

ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಅತಿಹೆಚ್ಚು ಸ್ಥಾನಗಳನ್ನು ಗೆಲ್ಲುವ ಉದ್ದೇಶದಿಂದ ಕಾರ್ಯತಂತ್ರ ರೂಪಿಸಲು ತನ್ನ 200ಕ್ಕೂ ಹೆಚ್ಚು ಕಾರ್ಯಕರ್ತರಿಗೆ ಕಾರ್ಯಾಗಾರ ನಡೆಸಲು ಬಿಜೆಪಿ ನಿರ್ಧರಿಸಿದೆ. ಈ ನಡುವೆ ಲೋಕಸಭಾ ಚುನಾವಣೆ ಕುರಿತಂತೆ ದೆಹಲಿಯಲ್ಲಿ ಇಂದು ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿಯ ಸಭೆ ನಡೆಯಲಿದೆ.

ಚುನಾವಣೆಗೆ ಪಕ್ಷದ ಕಾರ್ಯತಂತ್ರಗಳನ್ನು ಕುರಿತು ಸಮಾಲೋಚಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಗೃಹ ಸಚಿವ ಅಮಿತ್ ಶಾ ಹಾಗೂ ಚುನಾವಣಾ ಸಮಿತಿಯ ಸದಸ್ಯರು ಮತ್ತಿತರ ಪದಾಧಿಕಾರಿಗಳು ಈ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending