Connect with us

ದಿನದ ಸುದ್ದಿ

‌ದಾವಣಗೆರೆ | ಆಗ್ನೇಯ ಪದವೀಧರರ ಕ್ಷೇತ್ರದ ಮತದಾರರ ಪಟ್ಟಿ ಸೇರ್ಪಡೆ ಮಾಹಿತಿ

Published

on

ಸುದ್ದಿದಿನ,ದಾವಣಗೆರೆ : ಭಾರತ ಚುನಾವಣಾ ಆಯೋಗವು ಆಗ್ನೇಯ ಪದವೀಧರರ ಕ್ಷೇತ್ರದ ಮತದಾರರ ಪಟ್ಟಿ ತಯಾರಿಕೆಗೆ ಸಂಬಂಧಿಸಿದಂತೆ ವೇಳಾಪಟ್ಟಿಯನ್ನು ಹೊರಡಿಸಿದ್ದು, ಈ ಕ್ಷೇತ್ರಕ್ಕೆ ದಾವಣಗೆರೆ ಜಿಲ್ಲೆಯ ದಾವಣಗೆರೆ, ಹರಿಹರ, ಜಗಳೂರು ತಾಲ್ಲೂಕುಗಳು ಒಳಗೊಳ್ಳುತ್ತವೆ. ಪ್ರತಿಯೊಂದು ಕ್ಷೇತ್ರಕ್ಕೂ ಈ ಕೆಳಕಂಡಂತೆ ಅಧಿಕಾರಿಗಳನ್ನು ನಿಯೋಜಿಸಲಾಗಿದೆ.

ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರ ಸಭೆಯಲ್ಲಿ ಸೂಚಿಸಿರುವಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಚೇರಿಗಳು, ಸರ್ಕಾರದ ಅನುದಾನಿತ ಕಚೇರಿಗಳ ನಿಗಮ ಮಂಡಳಿಗಳಲ್ಲಿ ಕಾರ್ಯನಿರ್ವಹಿಸುವ ಎಲ್ಲಾ ಸರ್ಕಾರಿ ಅಧಿಕಾರಿಗಳು/ಸಿಬ್ಬಂದಿಗಳು ಹಾಗೂ ಹೊರಗುತ್ತಿಗೆ ನೌಕರರು ಸೇರಿದಂತೆ ಅರ್ಹತಾ ದಿನಾಂಕ 01-11-2019 ಕ್ಕೆ (ಅರ್ಹತಾ ದಿನಾಂಕ) ಪದವಿ ಪೂರ್ಣಗೊಳಿಸಿ ಮೂರು ವರ್ಷ ಪೂರೈಸಿದ ಅಂದರೆ 01-11-2016 ಕ್ಕೆ ಮೊದಲು ಭಾರತದಲ್ಲಿರುವ ಯಾವುದಾದರೊಂದು ವಿಶ್ವವಿದ್ಯಾಲಯದ ಪದವೀಧರನಾಗಿರುವ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರುವವರು ಸೇರಿದಂತೆ ಈ ಕ್ಷೇತ್ರದ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ಅಧಿಕಾರಿ/ಸಿಬ್ಬಂದಿಗಳು (ದಾವಣಗೆರೆ, ಹರಿಹರ ಮತ್ತು ಜಗಳೂರು ತಾಲ್ಲೂಕು ವ್ಯಾಪ್ತಿಯಲ್ಲಿ ಬರುವ) ತಮ್ಮ ತಮ್ಮ ಸ್ಥಳೀಯ ನಿವಾಸಗಳ ಕ್ಷೇತ್ರದಲ್ಲಿ ಫಾರಂ-18 ಮತ್ತು ಅಗತ್ಯ ದಾಖಲೆಗಳನ್ನು ಸಲ್ಲಿಸಿ ಪದವೀಧರರ ಪಟ್ಟಿಯಲ್ಲಿ ನೋಂದಾಯಿಸಲು ಸೂಚಿಸಿದೆ.

  • ದಾವಣಗೆರೆ ನಗರದ ಸ್ಥಳೀಯ ನಿವಾಸಿ-ಮಹಾನಗರಪಾಲಿಕೆ ದಾವಣಗೆರೆ-ಗದಿಗೆಶ್ ಸಿ.ಸಿರ್ಸಿ,ಪರಿಷತ್ ಕಾರ್ಯದರ್ಶಿ-ಮೊ.ಸಂ: 9480473123
  • ದಾವಣಗೆರೆ ತಾಲ್ಲೂಕಿನ ಗ್ರಾಮದಲ್ಲಿ ವಾಸಿಸುವ ಅರ್ಹ ಪದವೀಧರರು ತಾಲ್ಲೂಕು ಕಚೇರಿ ದಾವಣಗೆರೆ ದೇವರಾಜ್ ಕೆ.ಆರ್ ತಹಶೀಲ್ದಾರ್ ಗ್ರೇಡ್-2 ಮೊ.ಸಂ: 8197128162
  • ಹರಿಹರ ತಾಲ್ಲೂಕಿನ ವಾಸಿಸುವ ಅರ್ಹ ಪಧವೀಧರರು ತಾಲ್ಲೂಕು ಕಚೇರಿ ಹರಿಹರ ಗಿರೀಶ್ ಬಾಬು ತಹಶೀಲ್ದಾರ್ ಗ್ರೇಡ್-2 ಮೊ.ಸಂ: 9483770354
  • ಜಗಳೂರು ತಾಲ್ಲೂಕಿನಲ್ಲಿ ವಾಸಿಸುವ ಅರ್ಹ ಪದವೀಧರರು ತಾಲ್ಲೂಕು ಕಚೇರಿ ಜಗಳೂರು ಯುವರಾಜ್ ನಾಯ್ಕ್ ಕ್ಷೇತ್ರ ಶಿಕ್ಷಣಧಿಕಾರಿಗಳು ಮೊ.ಸಂ:9480695476

ನಮೂನೆ-18 ರಲ್ಲಿ ಸಲ್ಲಿಸಬೇಕಾದ ದಾಖಲೆಗಳು

ಅನುಬಂಧ-3(ಸರ್ಕಾರಿ ಅಧಿಕಾರಿ/ನೌಕರರುಗಳು ಮಾತ್ರ), ಚುನಾವಣಾ ಗುರುತಿನ ಚೀಟಿ, ಆಧಾರ್ ಕಾರ್ಡ್ ಪ್ರತಿಗಳನ್ನು ಸಲ್ಲಿಸಬೇಕು.

ಸೂಚನೆ

ನಮೂನೆ 18 ಕನ್ನಡ, ಇಂಗ್ಲಿಷ್ ಮತ್ತು ಅನುಬಂಧ-3 ನ್ನು ಈ ಕೆಳಗೆ ನಮೂದಿಸಿರುವ ಲಿಂಕನ್ನು ಬಳಸಿ ಡೌನ್‍ಲೋಡ್ ಮಾಡಿಕೊಳ್ಳಬಹುದು.

ಇಂಗ್ಲೀಷ್ ನಲ್ಲಿ ಅರ್ಜಿ ಸಲ್ಲಿಸಲು ವೆಬ್‍ಸೈಟ್

http://drive.google.com/file/d/11mis8Wfmn-uZxj5lluSyBAdN*NBDIYBe/view?usp=sharing

ಕನ್ನಡದಲ್ಲಿ ಅರ್ಜಿ ಸಲ್ಲಿಸಲು ವೆಬ್‍ಸೈಟ್

https://drive.google.com/file/d/17UB4awAOCiC-TmbEp-D5MWPV7z4SEIzE/ view?usp=sharing.

ಅನುಬಂಧ-3 ಕ್ಕಾಗಿ

https://drive.google.com/file/d/1360GtLsBZ kF9F7fs52pB6WbcelVBbRe/view?usp=drivesdk

ಹೊರಗುತ್ತಿಗೆ ನೌಕರರು & ಸಾರ್ವಜನಿಕರು ನಮೂನೆ-18 ರ ಜೊತೆ ಸಲ್ಲಿಸಬೇಕಾದ ದಾಖಲೆಗಳು: ಚುನಾವಣಾ ಗುರುತಿನ ಚೀಟಿ, ಆಧಾರ್ ಕಾರ್ಡ್, ಡಿಗ್ರಿ ಸಮ್ಮೇಳನದ ಮಾಕ್ರ್ಸ್ ಕಾರ್ಡ್‍ಗಳನ್ನು ಸಲ್ಲಿಸಬೇಕು.

ಸೂಚನೆ: ಹೆಸರು ನೋದಾಯಿಸದ ಅಧಿಕಾರಿ/ಸಿಬ್ಬಂದಿಗಳ(ಹೊರಗುತ್ತಿಗೆ ನೌಕರರು ಒಳಗೊಂಡಂತೆ) ಹೆಸರು, ಹುದ್ದೆ, ಕಚೇರಿ ವಿಳಾಸ ಮತ್ತು ಮೊಬೈಲ್ ಸಂಖ್ಯೆಯೊಂದಿಗೆ ಸಲ್ಲಿಸಬೇಕೆಂದು ಆಗ್ನೇಯ ಪದವೀಧರರ ಕ್ಷೇತ್ರದ ಸಹಾಯಕ ಮತದಾರರ ನೋಂದಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ

Published

on

ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮಡಿಕೇರಿಯಲ್ಲಿ ನಡೆದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು ಎಂದು ಕರೆ ನೀಡಿದರು.

ಬಳಿಕ ತುಮಕೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಬಿಜೆಪಿ ಸಂಸದರು ವಿಫಲರಾಗಿದ್ದಾರೆ ಎಂದು ಮುಖ್ಯಮಂತ್ರಿ ಆರೋಪಿಸಿದರು.

ಮಹಿಳೆಯರ ಅಭ್ಯುದಯಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ನುಡಿದಂತೆ ಜಾರಿಗೆ ತಂದಿದ್ದೇವೆ. ಇದರಿಂದಾಗಿ ಮಹಿಳೆಯರ ಜೀವನದಲ್ಲಿ ಸುಧಾರಣೆ ಕಂಡಿದೆ, ಈ ಯೋಜನೆಯ ಫಲಾನುಭವಿಗಳ ಬಗ್ಗೆ ಟೀಕಿಸುವುದು ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ

Published

on

ಸುದ್ದಿದಿನ,ದಾವಣಗೆರೆ : 2024 ರ ಮಾರ್ಚ್‍ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದ್ದು ಶೇ 74.27 ಗಂಡು, ಶೇ 82.01 ರಷ್ಟು ಹೆಣ್ಣು ಮಕ್ಕಳು ಉತ್ತೀರ್ಣರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.

ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾ ಸಂಬಂಧ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಏಪ್ರಿಲ್ 10 ರಂದು ಫಲಿತಾಂಶ ಪ್ರಕಟವಾಗಿದ್ದು ಹೆಚ್ಚಿನ ವಿವರಗಳು ಬರಬೇಕಾಗಿದೆ. ಈ ವರ್ಷ ಜಿಲ್ಲೆಯಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆಯನ್ನು 19644 ರೆಗ್ಯುಲರ್, 422 ಖಾಸಗಿ ಸೇರಿ 20066 ವಿದ್ಯಾರ್ಥಿಗಳು ತೆಗೆದುಕೊಂಡಿದ್ದರು. ಇದರಲ್ಲಿ 15904 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ 80.96 ರಷ್ಟು ಫಲಿತಾಂಶ ಪಡೆದಿದ್ದಾರೆ.

ಕಳೆದ ವರ್ಷ ಶೇ 75.72 ರಷ್ಟು ಫಲಿತಾಂಶ ಬಂದಿತ್ತು, ಈ ವರ್ಷ ಶೇ 5.24 ರಷ್ಟು ಫಲಿತಾಂಶ ಹೆಚ್ಚಳವಾಗಿದೆ. ಜಿಲ್ಲೆಗೆ ಟಾಪ್ ಬಂದವರಲ್ಲಿ ಕಲಾ ವಿಭಾಗದಲ್ಲಿ ಹರಿಹರದ ಶ್ರೀಮತಿ ಗಿರಿಯಮ್ಮ ಕಾಂತಪ್ಪ ಮಹಿಳಾ ಪದವಿ ಪೂರ್ವ ಕಾಲೇಜಿನ ಹೀನಬಾನು ಪಿ.ಕೆ. 591 ಅಂಕ ಪಡೆದು ಶೇ 98.5, ವಾಣಿಜ್ಯ; ದಾವಣಗೆರೆ ತಾ; ಗೋಪನಾಳು ಸರ್ಕಾರಿ ಪದವಿ ಪೂರ್ವ ಕಾಲೇಜಿನ ರೇಷ್ಮಾ ಬಾನು 589 ಅಂಕ ಪಡೆದು ಶೇ 98.16 ರಷ್ಟು ಫಲಿತಾಂಶ ಪಡೆದು ಜಿಲ್ಲೆಗೆ ಮೊದಲಿಗರಾಗಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಲೋಕಿಕೆರೆ ರಸ್ತೆಯಲ್ಲಿನ ಸರ್‍ಎಂವಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಮೊಹಮ್ಮದ್ ಸುಹೇಲ್, ಅಮೃತ ದೊಡ್ಡ ಬಸಪ್ಪನವರ್, ಅನನ್ಯ ಹೆಚ್.ಎಸ್, ಆಕಾಶ್ ಸಿ.ಪಾಟೀಲ್ ಇವರು 593 ಅಂಕ ಶೇ 98.83 ರಷ್ಟು ಸಮನಾದ ಫಲಿತಾಂಶ ಹಂಚಿಕೊಂಡಿದ್ದಾರೆ ಎಂದರು.

ವಿಭಾಗವಾರು ಫಲಿತಾಂಶ; ಕಲಾ ವಿಭಾಗದಲ್ಲಿ ಶೇ 57.83 ರಷ್ಟು ಫಲಿತಾಂಶ ಬಂದಿದ್ದು ಇದರಲ್ಲಿ ಗಂಡು ಶೇ 45, ಹೆಣ್ಣು ಶೇ 66.46 ರಷ್ಟು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇ 76.22 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 65.5, ಹೆಣ್ಣು ಶೇ 80.8, ವಿಜ್ಞಾನ ವಿಭಾಗದಲ್ಲಿ ಶೇ 91.13 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 91.39 ಹಾಗೂ ಹೆಣ್ಣು ಶೇ 88.69 ರಷ್ಟು ಫಲಿತಾಂಶ ಬಂದಿದೆ.

ನಗರಕ್ಕಿಂತ ಗ್ರಾಮೀಣರ ಮೇಲುಗೈ; ಫಲಿತಾಂಶದಲ್ಲಿ ನಗರ ಪ್ರದೇಶಕ್ಕಿಂತ ಗ್ರಾಮೀಣ ವಿದ್ಯಾರ್ಥಿಗಳು ಶೇ 1.1 ರಷ್ಟು ಮೇಲುಗೈ ಸಾಧಿಸಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಶೇ 73.65 ಗಂಡು, ಶೇ 84.6 ಹೆಣ್ಣು ಉತ್ತೀರ್ಣರಾದರೆ ನಗರ ಪ್ರದೇಶದ ಒಟ್ಟು ಫಲಿತಾಂಶ ಶೇ 80.75 ರಲ್ಲಿ ಗಂಡು ಶೇ 74.41, ಹೆಣ್ಣು ಶೇ 81.37 ರಷ್ಟು ಫಲಿತಾಂಶ ಪಡೆದಿದ್ದಾರೆ.

ಶೇ 100 ರಷ್ಟು ಫಲಿತಾಂಶ ಪಡೆದ ಶಾಲೆಗಳು; ದಾವಣಗೆರೆ ಅಂಜುಂ ಪದವಿ ಪೂರ್ವ ಕಾಲೇಜು, ಲೇಬರ್ ಕಾಲೋನಿ, ಜೈನ್ ಟ್ರಿನಿಟಿ ಪದವಿ ಪೂರ್ವ ಕಾಲೇಜು, ಅನ್‍ಮೋಲ್ ಪದವಿ ಪೂರ್ವ ಕಾಲೇಜು, ಶ್ರೀ ಗೀತಂ ಪದವಿ ಪೂರ್ವ ಕಾಲೇಜು, ದಾವಣಗೆರೆ ಇವು ಶೇ 100 ರಷ್ಟು ಫಲಿತಾಂಶ ಪಡೆದ ಕಾಲೇಜುಗಳಾಗಿವೆ.

ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂರ್, ಶಾಲಾ ಶಿಕ್ಷಣ, ಪದವಿ ಪೂರ್ವ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್‍ಗೆ ರೂ.10 ಪಡೆದ ಶಾಪಿಂಗ್ ಮಾಲ್‍ಗೆ ದಂಡ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ ,ದಾವಣಗೆರೆ : ವಕೀಲ ವೃತ್ತಿಯಲ್ಲಿ ತೊಡಗಿಕೊಂಡಿರುವ ಆರ್. ಬಸವರಾಜ್ ಎಂಬುವವರು ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು ರೂ.1,499 ಪಾವತಿಸಿ, ಡೆನಿವಾ ಪ್ಯಾಂಟ್ ಖರೀದಿಸಿದರು. ಈ ವೇಳೆಯಲ್ಲಿ ಇಲ್ಲಿಯೇ ಲೈಫ್ ಸ್ಟೈಲ್ ಇಂಟರ್‍ನ್ಯಾಷನಲ್ ವಾಣಿಜ್ಯ ಸಂಸ್ಥೆ ಪ್ಯಾಂಟ್ ಮಾರಾಟದ ವೇಳೆ ಹೆಚ್ಚುವರಿಯಾಗಿ ರೂ.10/- ಪೇಪರ್ ಬ್ಯಾಗ್‍ಗೆ ಪಡೆಯಲಾಯಿತು.

ಗ್ರಾಹಕರಾದ ಆರ್. ಬಸವರಾಜ್ ಇವರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ದೂರನ್ನು ದಾಖಲಿಸಿ ವಾಣಿಜ್ಯ ಸಂಸ್ಥೆ ವಿರುದ್ದ ರೂ.50,000 ಮಾನಸಿಕ ಕಿರುಕುಳ ಹಾಗೂ ದೂರು ದಾಖಲಿಸಲು ಖರ್ಚು ಮಾಡಿದ ಮೊ ರೂ.10,000 ಗಳನ್ನು ಪಾವತಿಸುವಂತೆ ದೂರನ್ನು ದಾಖಲಿಸಿದರು.

ವಾಣಿಜ್ಯ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದ್ದು ಈ ಸಂಸ್ಥೆ ವಕೀಲರ ಮುಖಾಂತರ ಹಾಜರಾಗಿ ಬ್ಯಾಗ್‍ಗೆ ಹೆಚ್ಚುವರಿಯಾಗಿ ಪಡೆದ ಹಣಕ್ಕೆ ಸಮರ್ಥಿಸಿಕೊಂಡಿತ್ತು. ಆದರೆ ಗ್ರಾಹಕರ ಆಯೋಗ ಈ ಮೊದಲು ರಾಷ್ಟ್ರೀಯ ಗ್ರಾಹಕರ ಆಯೋಗ ಬಿಗ್ ಬಜಾರ್ ವಿರುದ್ಧ ಸಾಯಲ್ ದಾವ ಪ್ರಕರಣದ ನ್ಯಾಯ ನಿರ್ಣಯದ ತೀರ್ಪಿನ ಅನುಗುಣವಾಗಿ ವಾಣಿಜ್ಯ ಸಂಸ್ಥೆಗಳು ಕ್ಯಾರಿ ಬ್ಯಾಗ್‍ಗಳಿಗೆ ಹೆಚ್ಚಿನ ಹಣವನ್ನು ಪಡೆಯುವಂತಿಲ್ಲ ಎಂಬ ತೀರ್ಪನ್ನು ಉಲ್ಲೇಖಿಸಿ ಹೆಚ್ಚುವರಿಯಾಗಿ ರೂ.10 ಪಡೆದ ಸಂಸ್ಥೆಯ ಕ್ರಮವು ಗ್ರಾಹಕರ ಸಂರಕ್ಷಣಾ ಕಾಯ್ದೆಯ ಅಡಿಯಲ್ಲಿ ಅನುಚಿತ ವ್ಯಾಪಾರ ಪದ್ದತಿಯೆಂದು ಪರಿಗಣಿಸಿ ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಮಹಂತೇಶ ಈರಪ್ಪ ಶಿಗ್ಲಿ, ಸದಸ್ಯರಾದ ತ್ಯಾಗರಾಜನ್ ಮತ್ತು ಮಹಿಳಾ ಸದಸ್ಯರಾದ ಶ್ರೀಮತಿ ಬಿ.ಯು. ಗೀತಾ ಇವರು ವಾಣಿಜ್ಯ ಸಂಸ್ಥೆಗೆ ರೂ.7000 ದಂಡವಿದಿಸಿ ಆದೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending