Connect with us

ಸಿನಿ ಸುದ್ದಿ

ಬಾಂಬೆ ಹೀರೋಹಿನ್ ಗಳು ಕಡಿಮೆ ಸಂಭಾವನೆಗೆ ಕೆಲಸ ಮಾಡ್ತಾರೆ ಅಂದವರಿಗೆ ಹೀಗಂದ್ರು ನಟಿ ಕೃತ್ತಿಕಾ ರವೀಂದ್ರ..!

Published

on


ನಟಿ ಕೃತಿಕ ರವೀಂದ್ರ ಬಿಗ್ ಬಾಸ್ ರಿಯಾಲಿಟಿ ಶೋನ ಕಂಟೆಸ್ಟ್ಟೆಂಟ್ ಕೂಡ‌. ಇವರು ಇತ್ತೀಚಿಗೆ ಸಿನೆಮಾವೊಂದರಲ್ಲಿ ನಟಿಸಲು ಸಂಭಾವನೆ ವಿಷಯವಾಗಿ ನಡೆದ ಘಟನೆಯೊಂದನ್ನು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ‌. ಹೀಗಿದೆ ಆ ಬರಹ.


ಇದೇನ ಸಭ್ಯತೆ, ಇದೇನ ಸಂಸ್ಕೃತಿ !

ತ್ತೀಚೆಗೆ ಒಂದು ಕರೆ ಬಂದಿತ್ತು. ಒಂದು ಸಿನೆಮಾ ಮಾತುಕತೆ. ಅದ್ಭುತ ಕಥೆ ಅಲ್ಲದಿದ್ದರೂ ಮಾಡಲಸಾಧ್ಯ ಅನ್ನಿಸುವಂಥದ್ದಲ್ಲ. ನಾನು ಗಮನಿಸಿರುವ ಹಾಗೆ,ಸಂಭಾವನೆ ಕಥೆಗಿಂತ ಮುಖ್ಯ ಎಂಬುವುದು ವಿಷಾದಕರ ಸಂಗತಿ. ಇಲ್ಲಿಯೂ ಸಂಭಾವನೆಯ ವಿಷಯ ಬಂದಾಗ ನಾನು ಸುತ್ತಿ ಬಳಸಿ ಮಾತನಾಡದೇ ನೇರವಾಗಿ “ಇಷ್ಟು” ಕೊಟ್ಟರೆ ಸಂತೋಷ. ಆಗಲಿಲ್ಲ ಅಂದ್ರೆ ನಿಮ್ಮ “budjet” ಹೇಳಿ. ಇಬ್ಬರಿಗೂ ಹೊಂದಿಕೆಯಾದಲ್ಲಿ ಮುಂದುವರಿಯೋಣ ಅಂದೆ. 2 ದಿನ ಬಿಟ್ಟು ಕರೆ ಬಂತು. ಅವರು ಹೇಳಿದ ಸಂಭಾವನೆ ನನಗೆ ಹೊಂದಿಕೆಯಾಗದಿದ್ದರಿಂದ “ಕ್ಷಮಿಸಿ, ಇಷ್ಟು ಸಂಭಾವನೆಗೆ ಕೆಲಸ ಮಾಡೋದಕ್ಕೆ ನಂಗೆ ಕಷ್ಟ ಆಗತ್ತೆ” ಅಂದೆ.

ವಿಷಯ ಇದಲ್ಲ. ನನ್ನ ನೇರನುಡಿಯಿಂದ ಮುಖಭಂಗಗೊಂಡ ಆಸಾಮಿ ಮಾತನ್ನ ಅಷ್ಟಕ್ಕೇ ನಿಲ್ಲಿಸದೇ “ ನಾನು ನನ್ನ ಸಿನೆಮಾಗಳಿಗೆ ಬಾಂಬೆಯಿಂದಲೇ ಹೀರೋಯಿನ್ ಗಳನ್ನ ಕರೆಸೋದು. ತುಂಬಾ ಕಡಿಮೆ ಸಂಭಾವನೆಗೆ ಕೆಲಸ ಮಾಡ್ತಾರೆ. ಕನ್ನಡದವರನ್ನ ನನ್ನ ಸಿನೆಮಾಗಳಿಗೆ ತಗೊಳಲ್ಲ” ಅಂದ.

ನಾನು “ ಒಹ್ ತಾವು ಕನ್ನಡದವರನ್ನೇ ತಗೋಳಲ್ವ? ಹೆಂಗೆ ಸರ್. ಕನ್ನಡದವರಾಗಿ ಕನ್ನಡದವರಿಗೆ ಅವಕಾಶಗಳನ್ನ ಕೊಡಲ್ವಾ?” ಅಂದೆ.
ಆಸಾಮಿ ” ಅಯ್ಯೋ ಹಾಗಲ್ಲ ಮೇಡಂ. ಅಷ್ಟು ಕಡಿಮೆಗೆ ಅಲ್ಲಿಂದ ಬಂದು ಕೆಲಸ ಮಾಡಿ ಹೋಗ್ತಾರೆ ” ಅಂದ.

So basically, ಬಾಂಬೆ ಇಂದ ಹೀರೋಯಿನ್ಗಳನ್ನ ಕರೆಸೋದು, ಇಲ್ಲಿಯವರನ್ನ ಗಣನೆಗೆ ತಗೊಳ್ದೆ ಇರೋದು ಇದೇಲ್ಲಕ್ಕೂ ಸಂಭಾವನೆ ಕಾರಣ. ನಾನು ತುಂಬಾ ಕಡಿಮೆ ಸಂಭಾವನೆಗೆ ಕೆಲಸ ಮಾಡಿದೀನಿ ಗೆಳೆಯರೇ. ಸಂಭಾವನೆನೇ ತಗೊಳ್ದೆ ಕೂಡ ಮಾಡಿದೀನಿ. ಇನ್ನು ವಿಪರ್ಯಾಸ ಅಂದ್ರೆ ಸಂಭಾವನೆ ಸಿಗದೇ ಮೋಸ ಕೂಡ ಹೋಗಿದೀನಿ. ಇವೆಲ್ಲಾ ನಂಗೆ ಒಳ್ಳೆ ಅನುಭವಗಳನ್ನ ಕೊಟ್ಟಿದೆ. (ಕೊಡ್ತಾ ಇದೆ)

ಆದ್ರೆ ಒಂದು ಬೇಡಿಕೆ. ಕಡಿಮೆ ಸಂಭಾವನೆಗೆ ಬರೋ ಕನ್ನಡದವರನ್ನೇ ಬೆಳೆಸಿ. ಅವಕಾಶಗಳನ್ನ ಕೊಡಿ. ಬಾಂಬೆ,ಅಲ್ಲಿ- ಇಲ್ಲಿ ಇರೋ ಹುಡುಗಿಯರನ್ನೇ ನೀವಾಳಿಸಿ ಬಿಸಾಕೋ ಅಂಥ ಅದ್ಭುತ ಪ್ರತಿಭೆಗಳು ನಮ್ಮ ಕನ್ನಡದಲ್ಲಿದ್ದಾರೆ. ಒಂದು ಚಿಕ್ಕ ಅವಕಾಶ ಬಹುಷಃ ಅವರ ಜೀವನವನ್ನೇ ಬದಲಾಯಿಸಬಹುದು. ಅನ್ಯಾಯ ಮಾಡಬೇಡಿ ಅಷ್ಟೇ. ನನಗೂ ಕೂಡ.

ಕೃತ್ತಿಕಾ ರವೀಂದ್ರ

https://m.facebook.com/story.php?story_fbid=4255085074519185&id=100000532021557

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ

ಲೋಕಸಭಾ ಚುನಾವಣೆ ; ಬಿಜೆಪಿ ಅಭ್ಯರ್ಥಿಗಳ ಆಯ್ಕೆಗೆ ಸಭೆ : ಇತರೆ ಪ್ರಮುಖ ಸುದ್ದಿಗಳು

Published

on

ಮದ್ಯಾಹ್ನದ ಸುದ್ದಿಮುಖ್ಯಾಂಶಗಳು

  1. ಮಹಿಳೆಯರ ಅಭ್ಯುದಯಕ್ಕಾಗಿ ಕೇಂದ್ರ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದ್ದು, ನಾರಿಶಕ್ತಿಯ ಸಬಲೀಕರಣದಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.
  2. ಪ್ರಧಾನಮಂತ್ರಿ ನರೇಂದ್ರ ಮೋದಿ, ಇಂದು ನವದೆಹಲಿಯಲ್ಲಿ ’ಸಶಕ್ತ ನಾರಿ ವಿಕಸಿತ ಭಾರತ’ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಇದೇ ಸಂದರ್ಭದಲ್ಲಿ ಅವರು ’ನಮೋ ಡ್ರೋನ್ ದೀದಿ’ ಯೋಜನೆಯಲ್ಲಿ ಏರ್ಪಡಿಸಿರುವ ಕೃಷಿಗೆ ಸಂಬಂಧಿಸಿದ ಡ್ರೋನ್ ಪ್ರದರ್ಶನ ವೀಕ್ಷಿಸಿದರು.
  3. ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಹರಿಯಾಣದ ಗುರುಗ್ರಾಮಕ್ಕೆ ಭೇಟಿ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಅವರು ವಿವಿಧ ರಾಜ್ಯಗಳಿಗೆ ಸುಮಾರು ಒಂದು ಲಕ್ಷ ಕೋಟಿ ರೂಪಾಯಿ ಮೌಲ್ಯದ 112 ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
  4. ಮುಂಬರುವ ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆಗೆ ದೆಹಲಿಯಲ್ಲಿಂದು ಸಂಜೆ ರಾಷ್ಟ್ರೀಯಾಧ್ಯಕ್ಷ ಜೆ.ಪಿ. ನಡ್ಡಾ, ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ರಾಜ್ಯದ 18 ರಿಂದ 20 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ಸಾಧ್ಯತೆಯಿದೆ.
  5. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕ್ಯಾಬ್ ಚಾಲಕರು, ಕಾರ್ಮಿಕರು ಹಾಗೂ ಪ್ರಯಾಣಿಕರ ಅನುಕೂಲಕ್ಕಾಗಿ ಇಂದಿರಾ ಕ್ಯಾಂಟೀನ್ ಅನ್ನು ಇಂದಿನಿಂದ ಆರಂಭಿಸಲಾಗಿದೆ.
  6. ಕ್ಯಾಲಿಫೋರ್ನಿಯಾದ ಲಾಸ್ ಏಂಜಲೀಸ್‌ನಲ್ಲಿರುವ ಡಾಲ್ಬಿ ಥಿಯೇಟರ್‌ನಲ್ಲಿ ಹಾಲಿವುಡ್‌ನ ಪ್ರಮುಖ ತಾರೆಯರು 96 ನೇ ಆಸ್ಕರ್ ಪ್ರಶಸ್ತಿ ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ’ಯೊರ್ಗೊಸ್ ಲ್ಯಾಂಥಿಮೋಸ್ ಪೂರ್ ಥಿಂಗ್ಸ್’ ಚಿತ್ರದ ’ಬೆಲ್ಲಾ ಬ್ಯಾಕ್ಸ್ಟರ್’ ಪಾತ್ರದ ಅಭಿನಯಕ್ಕಾಗಿ ’ಎಮ್ಮಾ ಸ್ಟೋನ್’ ಅತ್ಯುತ್ತಮ ನಟಿ ಪ್ರಶಸ್ತಿ ಪಡೆದಿದ್ದಾರೆ.
  7. ಐಸಿಸಿ ವಿಶ್ವ ಟೆಸ್ಟ್ ರ್‍ಯಾಂಕಿಂಗ್‌ನಲ್ಲಿ ಭಾರತ ಅಗ್ರಸ್ಥಾನಕ್ಕೆ ಮರಳಿದೆ. ಆಸ್ಟ್ರೇಲಿಯಾ 2ನೇ ಸ್ಥಾನದಲ್ಲಿದ್ದು, ಇಂಗ್ಲೆಂಡ್ 3ನೇ ಸ್ಥಾನದಲ್ಲಿದೆ. ಇದರೊಂದಿಗೆ ಕ್ರಿಕೆಟ್‌ನ ಎಲ್ಲಾ ಮೂರೂ ಮಾದರಿಯಲ್ಲೂ ಭಾರತ ತಂಡ ನಂ. 1ಸ್ಥಾನ ಪಡೆದಿದೆ.
  8. ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಮಹಿಳೆಯರ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯದಲ್ಲಿಂದು ಗುಜರಾತ್ ಜಯಂಟ್ಸ್ ಮತ್ತು ಯುಪಿ ವಾರಿಯರ್ಸ್ ತಂಡಗಳು ಮುಖಾಮುಖಿಯಾಗಲಿವೆ. ಪಂದ್ಯ ರಾತ್ರಿ 7.30ಕ್ಕೆ ಆರಂಭವಾಗಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

‘ಸಪ್ತ ಸಾಗರದಾಚೆ ಎಲ್ಲೋ – ಸೈಡ್‍ ಬಿ’ ಚಿತ್ರದ ಟಿಕೆಟ್‍ ಮೇಲೆ ಶೆ.20ರಷ್ಟು ಕಡಿತ

Published

on

ಸುದ್ದಿದಿನ ಡೆಸ್ಕ್ : ರಕ್ಷಿತ್‍ ಶೆಟ್ಟಿ ಮತ್ತು ರುಕ್ಷಿಣಿ ವಸಂತ್‍ ಅಭಿನಯದ ‘ಸಪ್ತ ಸಾಗರದಾಚೆ ಎಲ್ಲೋ – ಸೈಡ್‍ ಬಿ’ ಚಿತ್ರವು ಕಳೆದ ಶುಕ್ರವಾರ ಬಿಡುಗಡೆಯಾಗಿ, ಯಶಸ್ವಿಯಾಗಿ ಪ್ರದರ್ಶನವಾಗುತ್ತಿದೆ.

ಈ ಮಧ್ಯೆ, ಇನ್ನಷ್ಟು ಹೆಚ್ಚು ಜನರನ್ನು ಚಿತ್ರಮಂದಿರಗಳಿಗೆ ಕರೆತರುವ ನಿಟ್ಟಿನಲ್ಲಿ ಚಿತ್ರತಂಡ ಇಂದಿನಿಂದ ಪ್ರತಿ ಟಿಕೆಟ್‍ ಶೇ. 20ರಷ್ಟು ರಿಯಾಯ್ತಿಯನ್ನು ಚಿತ್ರತಂಡ ಘೋಷಿಸಿದೆ. ಈ ಚಿತ್ರವನ್ನು ಹೇಮಂತ್‍ ರಾವ್ ನಿರ್ದೇಶಿಸಿದ್ದು, ಗೋಪಾಲಕೃಷ್ಣ ದೇಶಪಾಂಡೆ, ಚೈತ್ರಾ ಆಚಾರ್‍, ಅಚ್ಯುತ್‍ ಕುಮಾರ್‍, ರಮೇಶ್‍ ಅರವಿಂದ್‍ ಮುಂತಾದವರು ನಟಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

‘ಬ್ಯಾಡ್ ಮ್ಯಾನರ್ಸ್’ ಸಿನಿಮಾ ನೋಡಿದ ಮೊದಲ‌ ಪ್ರೇಕ್ಷಕ ದರ್ಶನ್

Published

on

ಸುದ್ದಿದಿನ ಡೆಸ್ಕ್ : ಸೂರಿ ನಿರ್ದೇಶನದಲ್ಲಿ ಅಭಿಷೇಕ್‍ ಅಂಬರೀಶ್‍ ಅಭಿನಯಿಸಿರುವ ‘ಬ್ಯಾಡ್‍ ಮ್ಯಾನರ್ಸ್’ ಚಿತ್ರವು ಇದೇ ನ.24ಕ್ಕೆ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

ಈ ಮಧ್ಯೆ, ಇತ್ತೀಚೆಗೆ ಚಿತ್ರತಂಡ ಆಯೋಜಿಸಿದ್ದ ವಿಶೇಷ ಪ್ರದರ್ಶನದಲ್ಲಿ ದರ್ಶನ್‍ ಮತ್ತು ಸುಮಲತಾ ಅಂಬರೀಷ್‍ ಅವರು ಚಿತ್ರವನ್ನು ನೋಡಿದ್ದಾರೆ. ಚಿತ್ರದ ಬಗ್ಗೆ ಖುಷಿಯಿಂದ ಮಾತನಾಡಿರುವ ದರ್ಶನ್‍, ಅಭಿ ಬೆನ್ನಿಗೆ ‘ನಿಮ್ಮ‌ಪ್ರೀತಿಯ ದಾಸ’ ಎಂದು ಬರೆದು 5ಕ್ಕೆ 5 ಸ್ಟಾರ್ ಗಳನ್ನ ಕೊಟ್ಟಿದ್ದಾರೆ.

“ಈ ಸಿನಿಮಾದಲ್ಲಿ ನೀವು ರಿಯಲ್ ರೆಬೆಲ್ ಸ್ಟಾರ್‍ನ ನೋಡ್ತೀರಿ. ಹೆಮ್ಮೆಯಾಗ್ತಿದೆ ಎರಡನೇ ಸಿನಿಮಾದಲ್ಲಿ ಈ ಲೆವ್ವೆಲ್ಲಿಗೆ ಅಭಿ ಮಾಗಿರೋದು. ಸಿನಿಮಾ ಬೇರೆ ಲೆವ್ವಲ್ ಇದೆ. ದೊಡ್ಡ ಯಶಸ್ಸು ಇದಕ್ಕೆ ಖಂಡಿತ ಧಕ್ಕಲಿದೆ’ ಎಂದು ಬರೆಯುವ ಮೂಲಕ ದರ್ಶನ್‍ ಚಿತ್ರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending