Connect with us

ದಿನದ ಸುದ್ದಿ

ದಾವಣಗೆರೆ | ಕಸಿ-ಸಸಿಗಳ ಸಸ್ಯಾಭಿವೃದ್ದಿ : ಸರ್ಕಾರಿ ದರದಲ್ಲಿ ಮಾರಾಟಕ್ಕೆ ಲಭ್ಯ

Published

on

ಸುದ್ದಿದಿನ,ದಾವಣಗೆರೆ: ಜಿಲ್ಲೆಯ ತೋಟಗಾರಿಕೆ ಕ್ಷೇತ್ರಗಳಲ್ಲಿ ಕಸಿ/ಸಸಿಗಳನ್ನು ಸಸ್ಯಾಭಿವೃದ್ದಿ ಮಾಡಿ ಸರ್ಕಾರಿ ಮಾರಾಟ ದರದಲ್ಲಿ ಮಾರಾಟ ಮಾಡಲಾಗುತ್ತಿದ್ದು, ಆಸಕ್ತ ರೈತರು ಈ ಕೆಳಗಿನ ತೋಟಗಾರಿಕೆ ಕ್ಷೇತ್ರಗಳಲ್ಲಿ ಮಾರಾಟಕ್ಕೆ ಲಭ್ಯವಿರುವ ಕಸಿ/ ಸಸಿಗಳ ಸುದುಪಯೋಗ ಪಡೆದುಕೋಳ್ಳಬಹುದಾಗಿದೆ.

  1. ಆವರಗೊಳ್ಳ ತೋಟಗಾರಿಕ ಕ್ಷೇತ್ರದಲ್ಲಿ ನುಗ್ಗೆ, ತೆಂಗು, ಅಡಿಕೆ, ಅಲಂಕಾರಿಕ ಗಿಡಗಳು ಲಭ್ಯವಿದ್ದು ಕ್ಷೇತ್ರದ ಅಧಿಕಾರಿ ದೂರವಾಣಿ ಸಂಖ್ಯೆ: 7975479338, 9844966636 ಇವರನ್ನು ಸಂರ್ಪಕಿಸಬಹುದಾಗಿದೆ.
  2. ವ್ಯಾಸಗೊಂಡನಹಳ್ಳಿ ತೋಟಗಾರಿಕೆ ಕೇತ್ರದಲ್ಲಿ ತೆಂಗು, ಕರಿಬೇವು, ನಿಂಬೆ ಸಸಿಗಳು ಲಭ್ಯವಿದ್ದು ಕ್ಷೇತ್ರದ ಅಧಿಕಾರಿಗಳ ದೂರವಾಣಿ ಸಂಖ್ಯೆ: 9164408129 ಇವರನ್ನು ಸಂರ್ಪಕಿಸಬಹುದಾಗಿದೆ.
  3. ಬೇಲಿಮಲ್ಲೂರು ತೋಟಗಾರಿಕೆ ಕ್ಷೇತ್ರದಲ್ಲಿ ಕರಿಬೇವು, ನಿಂಬೆ, ಕಾಳುಮೆಣಸು, ಅಡಿಕೆ ಸಸಿಗಳು ಲಭ್ಯವಿದ್ದು ಕ್ಷೇತ್ರದ ಅಧಿಕಾರಿಗಳ ದೂರವಾಣಿ ಸಂಖ್ಯೆ:9731709133 ಇವರನ್ನು ಸಂರ್ಪಕಿಸಬಹುದಾಗಿದೆ.
  4. ಕಚೇರಿ ನರ್ಸರಿ ದಾವಣಗೆರೆ ಇಲ್ಲಿ ಅಡಿಕೆ, ಅಲಂಕಾರಿಕ ಸಸಿಗಳು , ಕರಿಬೇವು ಸಸಿಗಳು ಲಭ್ಯವಿದ್ದು ಕ್ಷೇತ್ರದ ಅಧಿಕಾರಿಗಳ ದೂರವಾಣಿ ಸಂಖ್ಯೆ: 9964065115 ಇವರನ್ನು ಸಂರ್ಪಕಿಸಬಹುದಾಗಿದೆ.
  5. ಗರಗ ತೋಟಗಾರಿಕೆ ಕ್ಷೇತ್ರ ಚನ್ನಗಿರಿ ಕ್ಷೇತ್ರದಲ್ಲಿ ತೆಂಗು, ಮಾವು, ನುಗ್ಗೆ, ನಿಂಬೆ, ಅಡಿಕೆ ಸಸಿಗಳು ಲಭ್ಯವಿದೆ ಕ್ಷೇತ್ರದ ಅಧಿಕಾರಿಗಳ ದೂರವಾಣಿ ಸಂಖ್ಯೆ: 9686375020 ಇವರನ್ನು ಸಂರ್ಪಕಿಸಬಹುದಾಗಿದೆ.
  6. ಬುಳ್ಳಾಪುರ ತೋಟಗಾರಿಕೆ ಕ್ಷೇತ್ರ ಹರಿಹರ ಇಲ್ಲಿ ತೆಂಗು ಖಿಘಿಆ, ತೆಂಗು ಸಸಿಗಳು ಲಭ್ಯವಿದ್ದು ಕ್ಷೇತ್ರದ ಅಧಿಕಾರಿಗಳ ದೂರವಾಣಿ ಸಂಖ್ಯೆ: 9008900370 ಇವರನ್ನು ಸಂರ್ಪಕಿಸಬಹುದಾಗಿದೆ.

ಈ ಎಲ್ಲಾ ಸಸಿಗಳು ತೋಟಗಾರಿಕೆ ಕ್ಷೇತ್ರದಲ್ಲಿ ಮಾರಾಟಕ್ಕೆ ಲಭ್ಯವಿದ್ದು ರೈತರು ಸದುಪಯೋಗ ಪಡೆದುಕೋಳ್ಳಬೇಕೆಂದು ದಾವಣಗೆರೆ ಹಿರಿಯ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ | ನಾಳೆ ಎಂ.ಪಿ.ರೇಣುಕಾಚಾರ್ಯರ ಜಿಲ್ಲಾ ಪ್ರವಾಸ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ದಾವಣಗೆರೆ : ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಎಂ.ಪಿ.ರೇಣುಕಾಚಾರ್ಯರವರು ಮೇ 16 ರಂದು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.

ಅಂದು ಬೆಳಿಗ್ಗೆ 10 ರಿಂದ ಸಂಜೆ 7 ಗಂಟೆಯವರೆಗೆ ಹೊನ್ನಾಳಿ ಮತ್ತು ನ್ಯಾಮತಿ ಅವಳಿ ತಾಲ್ಲೂಕುಗಳ ವ್ಯಾಪ್ತಿಯ ಸಾರ್ವಜನಿಕ ಆಸ್ಪತ್ರೆಗಳು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ಕೋವಿಡ್-19 ಸೋಂಕಿತರ ಚಿಕಿತ್ಸೆಗೆ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ವೀಕ್ಷಣೆ ಮಾಡಲಿದ್ದಾರೆ.

ಇದನ್ನೂ ಓದಿ | ಭದ್ರಾ ನಾಲೆಗಳ ಮೂಲಕ ಹರಿಸುತ್ತಿರುವ ನೀರು, ಮೇ.20 ರವರೆಗೆ ಮುಂದೂಡಿಕೆ 

ಹಾಗೂ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನಯಡಿ ಅನುಷ್ಠಾನಗೊಳ್ಳುತ್ತಿರುವ ಕಾಮಗಾರಿಗಳ ವೀಕ್ಷಣೆ ಕೋವಿಡ್-19 ಹರಡುವಿಕೆ ತಡೆಗಟ್ಟುವ ಕುರಿತು ತೆಗೆದುಕೊಳ್ಳಬೇಕಾಗಿರುವ ಮುಂಜಾಗ್ರತಾ ಕ್ರಮಗಳ ಬಗ್ಗೆ/ಲಸಿಕೆಯ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವರು, ನಂತರ ಹೊನ್ನಾಳಿಗೆ ಪ್ರಯಾಣ ಬೆಳೆಸುವರೆಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳ ವಿಶೇಷ ಕರ್ತವ್ಯಾಧಿಕಾರಿ ಕೆ.ರುದ್ರೇಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಭದ್ರಾ ನಾಲೆಗಳ ಮೂಲಕ ಹರಿಸುತ್ತಿರುವ ನೀರು, ಮೇ.20 ರವರೆಗೆ ಮುಂದೂಡಿಕೆ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ದಾವಣಗೆರೆ : ಭದ್ರಾ ಜಲಾಶಯದಿಂದ ನೀರು ಸ್ಥಗಿತಗೊಳಿಸುವ ನಿರ್ಧಾರವನ್ನು ಕಾಡಾ ಮುಂದೂಡಿ, ಮೇ.20 ರವರೆಗೆ ನೀರು ಹರಿಸಲು ನಿರ್ಧರಿಸಿದೆ ಎಂದು ಭದ್ರಾ ಕಾಡಾ ಸಮಿತಿ ಅಧ್ಯಕ್ಷರಾದ ಪವಿತ್ರರಾಮಯ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಭದ್ರಾ ಎಡದಂಡೆ ಮತ್ತು ಬಲದಂಡೆ ನಾಲೆಗಳ ಮೂಲಕ ಹರಿಸುತ್ತಿರುವ ನೀರನ್ನು ಜ.12 ರಿಂದ 120 ದಿನಗಳ ಕಾಲ ಅಂದರೆ ಮೇ.12 ಕ್ಕೆ ನಿಲ್ಲಿಸಲು ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ (ಕಾಡಾ) 2020 ರ ಡಿ.12 ರಂದು ಹರಿಹರ ತಾಲ್ಲೂಕು ಮಲೆಬೆನ್ನೂರಿನ ಕರ್ನಾಟಕ ನೀರಾವರಿ ನಿಗಮದಲ್ಲಿ ನಡೆದ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ನಿರ್ಧರಿಸಿತ್ತು.

ಕೊರೊನ ಸಂಕಷ್ಟದ ಸಮಯದಲ್ಲಿ ಭದ್ರಾ ಅಚ್ಚುಕಟ್ಟು ಭಾಗದ ರೈತರು ಒತ್ತಾಯಿಸಿದ ಪರಿಣಾಮ ಮೇ.20 ರ ಮಧ್ಯ ರಾತ್ರಿ ನಾಲೆಗಳಿಗೆ ಹರಿಸುತ್ತಿರುವ ನೀರನ್ನು ನಿಲ್ಲಿಸುವಂತೆ ಅಧಿಸೂಚನೆ ಹೊರಡಿಸಲಾಗಿದೆ.

2021ನೇ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯ ಶಿವಮೊಗ್ಗ ತಾಲ್ಲೂಕಿನಲ್ಲಿ 4,295 ಹೆಕ್ಟರ್ ಹಾಗೂ ಭದ್ರಾವತಿ ತಾಲ್ಲೂಕಿನಲ್ಲಿ 5635 ಹೆಕ್ಟರ್ ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 9,930 ಹೆಕ್ಟರ್‍ನಲ್ಲಿ ಭತ್ತ ಬೆಳೆಯಲಾಗಿದೆ.

ಇದನ್ನೂ ಓದಿ | ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ : ಶಿಷ್ಯವೇತನಕ್ಕೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ದಾವಣಗೆರೆ ಜಿಲ್ಲೆಯ ದಾವಣಗೆರೆ ತಾಲ್ಲೂಕಿನಲ್ಲಿ 18,820 ಹೆಕ್ಟರ್, ಹರಿಹರ ತಾಲ್ಲೂಕಿನಲ್ಲಿ 18,325 ಹೆಕ್ಟರ್, ಚನ್ನಗಿರಿ ತಾಲ್ಲೂಕಿನಲ್ಲಿ 6,955 ಹೆಕ್ಟರ್, ಹೊನ್ನಾಳಿ ತಾಲ್ಲೂಕಿನಲ್ಲಿ 5,100 ಹೆಕ್ಟರ್, ಮತ್ತು ನ್ಯಾಮತಿ ತಾಲ್ಲೂಕಿನಲ್ಲಿ 1210 ಹೆಕ್ಟರ್‍ನಲ್ಲಿ ಭತ್ತ ಬೆಳೆಯಲಾಗಿದ್ದು ದಾವಣಗೆರೆ ಜಿಲ್ಲೆಯಲ್ಲಿ ಒಟ್ಟು 50410 ಹೆಕ್ಟರ್‍ನಲ್ಲಿ ಭತ್ತ ಬೆಳೆಯಲಾಗಿದೆ. ಇತರೆ ತಾಲ್ಲೂಕುಗಳಾದ ಹರಪನಹಳ್ಳಿ ಮತ್ತು ತರೀಕೆರೆ ತಾಲ್ಲೂಕುಗಳಲ್ಲಿ ಕ್ರಮವಾಗಿ 2720, 1850 ಹೆಕ್ಟರ್‍ಗಳಲ್ಲಿ ಬೇಸಿಗೆ ಹಂಗಾಮಿನಲ್ಲಿ ಅಚ್ಚುಕಟ್ಟು ವ್ಯಾಪ್ತಿಯಲ್ಲಿ ಭತ್ತ ಬೆಳೆಯಲಾಗಿದೆ.

ಪ್ರತಿ ವರ್ಷವು ಅಚ್ಚುಕಟ್ಟು ವ್ಯಾಪ್ತಿಯ ರೈತರು ಒಂದಾದ ನಾಲೆಗಳ ಮೂಲಕ ಹರಿಸುವ ನೀರನ್ನು ಪಡೆಯಲು ಹೋರಾಟ ಮಾಡುವ ಪರಿಸ್ಥಿತಿ ನಿರ್ಮಾಣವಾಗುತ್ತಿತ್ತು. ಜೊತೆಗೆ ಕೊನೆಯ ಭಾಗದ ರೈತರು ಕಳೆದ 20 ವರ್ಷಗಳಿಂದ ನೀರನ್ನು ಕಾಣದೆ ಪರಿತಪಿಸುವಂತಾಗಿತ್ತು. ಆದರೆ ಈ ವರ್ಷ ಯಾವುದೇ ರೀತಿಯ ಗದ್ದಲ ಗಲಾಟೆ ಹೋರಾಟ ಇಲ್ಲದೆ ಅಚ್ಚುಕಟ್ಟು ಭಾಗದಲ್ಲಿ ನೀರು ಹರಿದಿರುವುದಲ್ಲದೆ, ಕೊನೆಯ ಭಾಗಕ್ಕೆ ಸರಾಗವಾಗಿ ನೀರು ಕೊಟ್ಟಿರುವುದು ಹೆಮ್ಮೆಯ ಸಂಗತಿಯಾಗಿದೆ.

ಕೇಂದ್ರ ಸರ್ಕಾರದ ಯೋಜನೆಯಾದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು ಪ್ರಪ್ರಥಮವಾಗಿ ಭದ್ರಾ ಕಾಡಾ ಪ್ರಾಧಿಕಾರವು ನಾಲೆಗಳಲ್ಲಿ ತುಂಬಿಕೊಂಡಿದ್ದ ಹೂಳು ಹಾಗೂ ಜಂಗಲ್ ಸ್ವಚ್ಚಗೊಳಿಸಲು ಬಳಸಿಕೊಂಡಿರುವುದು ಒಂದು ವಿಶೇಷ ದಾಖಲೆಯಾಗಿದೆ.

ಈ ಯೋಜನೆಯ ಮೂಲಕ ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆಯ ವ್ಯಾಪ್ತಿಯಲ್ಲಿ ಸುಮಾರು 150 ಕಿ.ಮೀ ಮುಖ್ಯ ಮತ್ತು ಉಪ ನಾಲೆಗಳನ್ನು ಸ್ವಚ್ಚಗೊಳಿಸಿದೆ. ಸುಮಾರು 1,70,000 ಅಧಿಕ ಮಾನವ ದಿನಗಳನ್ನು ಬಳಸಿಕೊಳ್ಳಲಾಗಿದೆ. ಸುಮಾರು ರೂ 7 ಕೋಟಿಗೂ ಅಧಿಕ ಅನುದಾನ ಉಪಯೋಗಿಸಿಕೊಂಡಿದೆ.

ಪ್ರತಿ ಬಾರಿಯು ನೀರಾವರಿ ಸಲಹಾ ಸಮಿತಿ ಸಭೆಯು ಶಿವಮೊಗ್ಗದ ಕೇಂದ್ರ ಕಚೇರಿಯಲ್ಲಿ ನಡೆಸುವುದು ವಾಡಿಕೆಯಾಗಿತ್ತು. ಆದರೆ ಭದ್ರಾ ಕಾಡಾ ಅಧ್ಯಕ್ಷರಾದ ನಂತರ ಅಚ್ಚುಕಟ್ಟಿನ ಕೊನೆಯ ಭಾಗಕ್ಕೆ ಸೇರುವ ಹರಿಹರ ತಾಲ್ಲೂಕು ಮಲೆಬೆನ್ನೂರಿನಲ್ಲಿ ಪ್ರವಾಸ ಕೈಗೊಂಡಾಗ ರೈತರು ಈ ಬಾರಿಯ ಸಭೆಯನ್ನು ಇಲ್ಲಿಯೇ ನಡೆಸಲು ಒತ್ತಾಯಿಸಿದಾಗ ಅದನ್ನು ಸಮ್ಮತಿಸಿ ಮಲೆಬೆನ್ನೂರಿನಲ್ಲಿ ಸಭೆ ನಡೆಸಿದ್ದು, ವಲಯವಾರು ಡಿಸ್ಟ್ರಿಬ್ಯೂಟರ್‍ಗಳಲ್ಲಿ ಎದುರಾಗುತ್ತಿದ್ದ ನೀರಿನ ಸಮಸ್ಯೆಗನ್ನು ನಮೂದಿಸಲು ರೈತರಿಗಾಗಿ ಸಾಯವಾಣಿ ಪ್ರಾರಂಭ ಮಾಡಿದ್ದೇವೆ.

ದಾವಣಗೆರೆ ಭಾಗದಲ್ಲಿ ನೂರಾರು ರೈತರು ನೀರಿನ ತೊಂದರೆಯ ಪರಿಣಾಮ ಪ್ರತಿ ಬಾರಿ ಜೋಳ ಬೆಳೆಯುತ್ತಿದ್ದರು. ಆದರೆ ಅದೇ ರೈತರು ಈ ಬಾರಿ ನೀರು ಸರಾಗವಾಗಿ ಸಿಕ್ಕ ಹಿನ್ನೆಲೆಯಲ್ಲಿ ಜೋಳ ಅಳಿಸಿ ಭತ್ತ ನಾಟಿ ಮಾಡಿ ಆರ್ಥಿಕ ಸಬಲರಾಗುವತ್ತ ದಾಪುಗಾಲು ಹಾಕಿದ್ದಾರೆ ಜೊತೆಗೆ ತಮ್ಮ ತಮ್ಮ ಜಮೀನುಗಳಿಗೆ ನೀರನ್ನು ಹಾಯಿಸಿಕೊಳ್ಳಲು ರಾತ್ರಿ ನಿದ್ರೆ ಬಿಡುವ ಪ್ರಸಂಗ ತಪ್ಪಿರುವುದು ಒಂದು ಸಂತಸದ ನಡೆಯಾಗಿದೆ. ಹೀಗೆ ಭದ್ರಾ ಕಾಡಾ ಪ್ರಾಧಿಕಾರ ವ್ಯಾಪ್ತಿಯಲ್ಲಿ ಹಲವಾರು ನೂತನ ವಿದ್ಯಾಮಾನಗಳನ್ನು ನಿರ್ಮಾಣ ಮಾಡುವ ಮೂಲಕ ಅಚ್ಚುಕಟ್ಟು ರೈತರು ಸಂತೃಪ್ತ ಜೀವನ ನಡೆಸಲು ಅನುವು ಮಾಡಿಕೊಡಲಾಗಿದೆ.

ಸಂಕಷ್ಟದ ಸಂದರ್ಭದಲ್ಲಿ ಯಾವುದೇ ಸಮಸ್ಯೆಯಾಗದಂತೆ ನಾಲಾ ನೀರು ಅಚ್ಚುಕಟ್ಟು ರೈತರಿಗೆ ತಲುಪಿಸಲು ಶ್ರಮವಹಿಸಿದ ಎಲ್ಲಾ ಅಧಿಕಾರಿ ವೃಂದದವರಿಗೆ, ನೀರು ಗಂಟಿಗಳಿಗೆ ಪ್ರಕಟಣೆಯ ಮೂಲಕ ಭದ್ರಾ ಅಚ್ಚುಕಟ್ಟು ಪ್ರದಾಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷೆ ಪವಿತ್ರ ರಾಮಯ್ಯ.ಕೆ.ಬಿ ಕೃತಜ್ಞತೆ ಸಲ್ಲಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ : ಶಿಷ್ಯವೇತನಕ್ಕೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

Published

on

ಸುದ್ದಿದಿನ,ದಾವಣಗೆರೆ: ಮೆಟ್ರಿಕ್ ನಂತರ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ಅರೆಅಲೆಮಾರಿ ವಿದ್ಯಾರ್ಥಿಗಳಿಂದ, 2020-21ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್ ನಂತರ ವಿದ್ಯಾರ್ಥಿವೇತನ, ಶುಲ್ಕವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ, ಮತ್ತು ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಆಹ್ವಾನಿಸಲಾಗಿದ್ದ ಅರ್ಜಿ ಅವಧಿಯನ್ನು ವಿಸ್ತರಿಸಲಾಗಿದೆ.

ಅರ್ಜಿ ಸಲ್ಲಿಸಲು ಮೇ ಅಂತಿಮ ದಿನಾಂಕವನ್ನು ನಿಗದಿಪಡಿಸಲಾಗಿದ್ದು, ಕೆಲವೊಂದು ವಿಶ್ವವಿದ್ಯಾಲಯಗಳು ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ನೊಂದಾಣಿ ಸಂಖ್ಯೆಯನ್ನು ಒದಗಿಸಿರದ ಕಾರಣ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಸಾಧ್ಯವಾಗಿರುವುದಿಲ್ಲ.

ಇದನ್ನೂ ಓದಿ | ಪಾಲಿಕೆ ವತಿಯಿಂದ 60 ಆಕ್ಸಿಜನ್ ಕಾನ್ಸಂಟ್ರೇಟರ್ ಸಿಗಲಿವೆ, ಆಕ್ಸಿಜನ್ ಪರ್ಯಾಯ ವ್ಯವಸ್ಥೆಗೆ ಕೊಡುಗೈ ದಾನಿಗಳು ಮುಂದಾಗಿ : ಡಿಸಿ ಮಹಾಂತೇಶ್ ಬೀಳಗಿ ಮನವಿ

ಹಾಗೂ ಕೋವಿಡ್-19 ಹಿನ್ನೇಲೆಯಲ್ಲಿ ಮೇ.24 ರವರೆಗೆ ರಾಜ್ಯದಂತ ಲಾಕ್‍ಡೌನ್ ಘೋಷಣೆಯಾಗಿರುವ ಕಾರಣ ಶಾಲಾ ಕಾಲೇಜುಗಳಿಗೆ ರಜೆಯನ್ನು ಘೋಷಿಸಿರುವುದರಿಂದ ವಿದ್ಯಾರ್ಥಿಗಳು ಇ-ಅಟೆಷ್ಟೆಷನ್ ಮಾಡಿಸುವುದು ಕಷ್ಟ ಸಾಧ್ಯವಾಗಿರುತ್ತದೆ. ಅದ್ದರಿಂದ ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಅರ್ಜಿ ಸಲ್ಲಿಸುವ ಕೊನೆಯ ಮೇ.31 ರವರೆಗೆ ವಿಸ್ತರಿಸಲಾಗಿದೆ.

ಕಾರ್ಯಕ್ರಮಗಳ ವಿವರ, ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿವೇತನಕ್ಕೆ ಸಂಬಂಧಿಸಿದ ಸರ್ಕಾರಿ ಆದೇಶಗಳ ವೆಬ್ ಸೈಟ್ www.ssp.postmatric.karnataka.gov.in | https://bcwd.karnataka.gov.in | ಅಥವಾ ಇಮೇಲ್ [email protected] | ಇಲಾಖಾ ಸಹಾಯವಾಣಿಯ ದೂ.ಸಂ8050770005/8050770004 ನ್ನು ಸಂಪರ್ಕಿಸಬಹುದೆಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending