Connect with us

ರಾಜಕೀಯ

ಬಿಜೆಪಿ ಅಭ್ಯರ್ಥಿಯಾಗಿ ಭಯೋತ್ಪಾದನಾ ಆರೋಪಿ-ಒಂದು ಕೇಡಿನ ಪ್ರತೀಕ

Published

on

  • ಚುನಾವಣಾ ಅಭ್ಯರ್ಥಿಯಾಗಿ ಪ್ರಜ್ಞಾ ಠಾಕುರ್ ಆಯ್ಕೆ ಮತದಾರರಲ್ಲಿ ಧ್ರುವೀಕರಣ ತರುವ ಉದ್ದೆಶದಿಂದ ಕೋಮುವಾದವೇ ಮುಖ್ಯ ಒತ್ತು ಹಾಕಿರುವ ಬಿಜೆಪಿಯ ಚುನಾವಣಾ ಪ್ರಚಾರದ ಹಿನ್ನೆಲೆಯಲ್ಲಿ ಬಂದಿದೆ. ಇಂತಹ ಒಂದು ವಿಭಜನಕಾರೀ ಪ್ರಚಾರದಲ್ಲಿ, ಒಬ್ಬ ಕಾವಿಧಾರಿ ಭಯೋತ್ಪಾದನಾ-ಆರೋಪಿ ಮತ್ತು ಮುಸ್ಲಿಂ-ದ್ವೇಷಿ ಬಿಜೆಪಿಯ ಚುನಾವಣಾ ಅಜೆಂಡಾದ ಒಂದು ಪ್ರತೀಕವಾಗಿದ್ದಾರೆ. ಇದು ಕೂಡ ಬಹಳ ಹೊಸದೇನಲ್ಲ. ಇನ್ನೊಬ್ಬ ಮುಸ್ಲಿಂರ ವಿರುದ್ಧ ದ್ವೇಷ ಕಾರುವ, ಕಾವಿಧಾರಿ, ಆದಿತ್ಯನಾಥರನ್ನು ಉತ್ತರಪ್ರದೇಶದ ಮುಖ್ಯಮಂತ್ರಿಯಾಗಿ ಮಾಡಲಾಗಿದೆ ತಾನೇ?

ಭೋಪಾಲ್ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಪ್ರಜ್ಞಾ ಸಿಂಗ್ ಠಾಕುರ್ ನಾಮಕರಣ 17ನೇ ಲೋಕಸಭಾ ಚುನಾವಣೆಗಳಲ್ಲಿ ಒಂದು ಮಹತ್ವದ, ಅಶುಭಕಾರೀ ಕ್ಷಣ. ಬಿಜೆಪಿಯ ಈ ನಿರ್ಧಾರ ಈ ಚುನಾವಣೆಯಲ್ಲಿ ಅದರ ನಿಜವಾದ ವೇದಿಕೆ ಏನೆಂಬುದರ ಒಂದು ಘೋಷಣೆಯಾಗಿದೆ. ಯಾವುದೇ ಮುಲಾಜಿಲ್ಲದ ಉಗ್ರ ಹಿಂದುತ್ವ, ಮತ್ತು ಅದರೊಂದಿಗೆ ಅದರ ಎಲ್ಲ ನಕಾರಾತ್ಮಕ ತೊಡಕುಗಳು-ಇದೇ ಆ ವೇದಿಕೆ.

ಪ್ರಜ್ಞಾ ಠಾಕುರ್ 2008ರ ಮಾಲೆಗಾಂವ್ ಸ್ಫೋಟದ ಒಬ್ಬ ಆರೋಪಿ. ಈ ಸ್ಫೊಟವನ್ನು ಸಂಘಟಿಸಿದ ಗುಂಪಿನ ಸೂತ್ರಧಾರಳು ಎಂಬ ಆಪಾದನೆ ಆಕೆಯ ಮೇಲಿದೆ. ಈ ಮೊಕದ್ದಮೆಯ ಆರೋಪ ಪತ್ರ ಆರು ಜನಗಳನ್ನು ಸಾಯಿಸಿದ ಈ ಸ್ಫೋಟವನ್ನು ಉಂಟು ಮಾಡುವಲ್ಲಿ ಬಳಸಿದ ಸ್ಫೋಟಕಗಳಿಂದ ತುಂಬಿದ್ದ ಮೋಟಾರ್ ಸೈಕಲ್ ಆಕೆಯದ್ದು ಎಂದು ಹೊರಗೆಡಹಿದೆ.

ಮೋದಿ ಸರಕಾರ ಅಧಿಕಾರಕ್ಕೆ ಬಂದ ನಂತರ, ಆಕೆಯ ವಿರುದ್ಧ ಇದ್ದ ಮೊಕದ್ದಮೆಯನ್ನು ವಿಫಲಗೊಳಿಸಲು ಸಕಲ ಪ್ರಯತ್ನಗಳೂ ನಡೆದವು. ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ಆಕೆಯ ವಿರುದ್ಧ ಸಾಕಷ್ಟು ಸಾಕ್ಷ್ಯಗಳಿಲ್ಲ ಎಂದು ನ್ಯಾಯಾಲಯಕ್ಕೆ ಹೇಳಿತು. ಆದರೆ ನ್ಯಾಯಾಲಯ ಅದನ್ನು ಒಪ್ಪದೆ ಆಕೆಯನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ(ಯುಎಪಿಎ) ಅಡಿಯಲ್ಲಿ ಆರೋಪಿಯಾಗಿಸಿದೆ. ಈಗ ಆಕೆ ವಿಚಾರಣೆಯ ನಡುವೆ ಜಾಮೀನಿನಲ್ಲಿ ಹೊರಗಿದ್ದಾರೆ.

ಇಂತಹ ಒಬ್ಬ ಭಯೋತ್ಪಾದನಾ ಆರೋಪಿಯನ್ನು ಭೋಪಾಲದಲ್ಲಿ ಬಿಜೆಪಿ ತನ್ನ ಅಭ್ಯರ್ಥಿಯಾಗಿ ಮಾಡಿದೆ. ಈ ಎಲ್ಲ ವರ್ಷಗಳಲ್ಲಿ ಆಕೆ ತನ್ನ ಉನ್ಮತ್ತ ಹಿಂದುತ್ವ ಮತ್ತು ಮುಸ್ಲಿಂ-ದ್ವೇಷಿ ಅಭಿಪ್ರಾಯಗಳನ್ನು ಎಂದೂ ಗುಟ್ಟಾಗಿ ಇಟ್ಟಿಲ್ಲ.

ನಾಮಪತ್ರ ಸಲ್ಲಿಸಿದ ಕೂಡಲೇ ಆಕೆ ಮಹಾರಾಷ್ಟ್ರ ಪೋಲೀಸ್ ಪಡೆಯ ಭಯೋತ್ಪಾದನಾ ನಿಗ್ರಹ ದಳ(ಎಟಿಎಸ್)ದ ಮುಖ್ಯಸ್ಥರಾಗಿದ್ದ ದಿವಂಗತ ಹೇಮಂತ ಕರ್ಕರೆ ಮೇಲೆ ಎರಗಿದರು. ಕರ್ಕರೆ ಮಾಲೆಗಾಂವ್ ಸ್ಫೋಟದ ತನಿಖೆ ಮಾಡಿದ್ದ, ಮತ್ತು ಪ್ರಜ್ಞಾ ಠಾಕುರ್ ಮತ್ತು ಆಕೆಯ ಸಹಯೋಗಿಗಳನ್ನು ಬಂಧಿಸಿದ್ದ ಪೋಲೀಸ್ ಅಧಿಕಾರಿ. ತಾನು ಕರ್ಕರೆಗೆ ಶಾಪ ಹಾಕಿದ್ದೆ, ಅದರಿಂದಾಗಿ ೪೫ ದಿನಗಳೊಳಗೆ ಆತ ಭಯೋತ್ಪಾದಕ ಗುಂಡಿಗೆ ಬಲಿಯಾಗಿ ಸತ್ತರು ಎಂದು ಆಕೆ ಹೇಳಿದಳು. ಹೇಮಂತ ಕರ್ಕರೆ ಒಬ್ಬ ಧೀರ ಪೋಲೀಸ್ ಅಧಿಕಾರಿಯಾಗಿದ್ದು, ನವಂಬರ್ 2008ರ ಮುಂಬೈ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದವರು. ಇಂತಹ ಒಂದು ಆಘಾತಕಾರಿ ಹೇಳಿಕೆಯ ನಂತರವೂ, ಬಿಜೆಪಿ ಅದನ್ನು ಖಂಡಿಸುವ ಆಶಯವನ್ನು ತೋರಲಿಲ್ಲ, ಅದು ಆಕೆಯ ವೈಯಕ್ತಿಕ ಅಭಿಪ್ರಾಯವಷ್ಟೇ, ಬಹುಶಃ ಪೋಲೀಸರಿಂದ ಆಕೆ ಅನುಭವಿಸಿದ ಚಿತ್ರಹಿಂಸೆಯಿಂದಾಗಿ ಇರಬಹುದು ಎಂದಷ್ಟೇ ಹೇಳಿತು.

ಈ ಬಗ್ಗೆ ಬಂದ ಟೀಕೆಯಿಂದ ವಿಚಲಿತಳಾಗದ ಪ್ರಜ್ಞಾ ಠಾಕುರ್ ಇನ್ನೂ ಮುಂದೆ ಹೋಗಿ ಬಾಬ್ರಿ ಮಸೀದಿಯ ಧ್ವಂಸ ನಡೆಯುತ್ತಿದ್ದಾಗ ತಾನು ಗುಮ್ಮಟದ ತುದಿಯಲ್ಲಿದ್ದೆ, ಆ ಸ್ಥಳದಲ್ಲಿ ರಾಮ ದೇವಸ್ಥಾನ ಕಟ್ಟುವಾಗಲೂ ಆ ಸ್ಥಳದಲ್ಲಿ ಇರುತ್ತೇನೆ ಎಂದರು.

ಪ್ರಜ್ಞಾ ಠಾಕುರ್‌ನ್ನು ಅಭ್ಯರ್ಥಿಯಾಗಿ ನಿಲ್ಲಿಸಿದ್ದು ಒಂದು ಬಹಳ ಯೋಚನೆ ಮಾಡಿ ನಿರ್ಧರಿಸಿದ್ದ ನಡೆ ಎಂಬುದು ನರೇಂದ್ರ ಮೋದಿ ಅದನ್ನು ಸಮರ್ಥಿಸಿಕೊಂಡ ರೀತಿಯಲ್ಲೇ ಕಾಣುತ್ತದೆ. ಆಕೆ ಅಭ್ಯರ್ಥಿಯಾಗಿರುವುದು ವಸುಧೈವ ಕುಟುಂಬಕಮ್ ನಲ್ಲಿ ನಂಬಿಕೆಯಿರುವ 5000 ವರ್ಷಗಳಷ್ಟು ಹಳೆಯ ನಾಗರಿಕತೆಯ ಹೆಸರುಗೆಡಿಸುವವರಿಗೆ, ಭಯೋತ್ಪಾದಕರು ಎಂದು ಕರೆದವರಿಗೆ ನೀಡಿರುವ ಒಂದು ಉತ್ತರ ಎಂದು ಅವರು ಹೇಳಿದ್ದಾರೆ. ಇದಕ್ಕೆ ಮೊದಲು ಎಪ್ರಿಲ್ 1 ರಂದು ವರ್ಧಾದಲ್ಲಿ ಮಾತಾಡುತ್ತ ಮೋದಿ, ಹಿಂದು ಭಯೋತ್ಪಾದನೆಯ ಮಾತಾಡುವವರು ಇಡೀ ಹಿಂದೂ ಸಮುದಾಯವನ್ನು ಅವಮಾನ ಮಾಡುತ್ತಾರೆ ಎಂದು ಹೇಳಿದ್ದರು.

ಸಾವಿರ ವರ್ಷಗಳ ಇತಿಹಾಸದಲ್ಲಿ ಹಿಂದೂ ಭಯೋತ್ಪಾದನೆಯ ಕೃತ್ಯವನ್ನು ತೋರಿಸುವ ಒಂದೇ ಒಂದು ಘಟನೆ ನಡೆದಿಲ್ಲ ಎಂದು ಅವರು ಸಾರಿದರು. ಇದು ಎಲ್ಲ ತರ್ಕಗಳನ್ನೂ ಹುಸಿಯಾಗಿಸಿರುವ ಅಸಂಬದ್ಧ ಹೇಳಿಕೆ. ನಾಥುರಾಂ ಗೋಡ್ಸೆಯಿಂದ ಹಿಡಿದು 2002ರ ಗುಜರಾತ್ ಹತ್ಯಾಕಾಂಡದ ವರೆಗೆ, ನಂತರ ದಭೋಲ್ಕರ್, ಪನ್ಸರೆ, ಕಲ್ಬುರ್ಗಿ, ಗೌರಿ ಹತ್ಯೆಗಳ ವರೆಗೆ ಹಿಂದುತ್ವ ಭಯೋತ್ಪಾದನೆಯ ಒಂದು ದೊಡ್ಡ ಸಾಲೇ ಇದೆ. ಈ ಎಲ್ಲ ಹೇಳಿಕೆಗಳ ಹಿಂದೆ ಇರುವ ತಿಳುವಳಿಕೆಯೆಂದರೆ, ಹಿಂದೂಗಳು ಭಯೋತ್ಪಾದಕರಾಗಲು ಸಾಧ್ಯವಿಲ್ಲ, ಕೇವಲ ಮುಸ್ಲಿಮರು ಮಾತ್ರವೇ ಹಾಗಾಗಲು ಸಾಧ್ಯ.

ಪ್ರಜ್ಞಾ ಠಾಕುರ್ ಒಬ್ಬ ಅಮಾಯಕ ಸಾಧ್ವಿ, ಆಕೆಯನ್ನು ಒಂದು ಸುಳ್ಳು ಕೇಸಿನಲ್ಲಿ ಸಿಗಿಸಲಾಗಿದೆ ಎಂಬುದು ಅಮಿತ್ ಷಾ ಮತ್ತು ಬಿಜೆಪಿಯ ನಿಲುವು. ಆದರೆ, ಅದೇ ವೇಳೆಗೆ, ಸಂಘ ಪಡೆಗಳು ಆಕೆ ಹಿಂದೂಗಳನ್ನು ಸಾಯಿಸಿದ್ದಕ್ಕೆ ಪ್ರತೀಕಾರ ತೀರಿಸಿರುವ ಧೀರೆ ಎಂದು ವೈಭವೀಕರಿಸುತ್ತಿವೆ.

ಚುನಾವಣಾ ಅಭ್ಯರ್ಥಿಯಾಗಿ ಪ್ರಜ್ಞಾ ಠಾಕುರ್ ಆಯ್ಕೆ ಮತದಾರರಲ್ಲಿ ಧ್ರುವೀಕರಣ ತರುವ ಉದ್ದೆಶದಿಂದ ಕೋಮುವಾದವೇ ಮುಖ್ಯ ಒತ್ತಾಗಿರುವ ಬಿಜೆಪಿಯ ಚುನಾವಣಾ ಪ್ರಚಾರದ ಹಿನ್ನೆಲೆಯಲ್ಲಿ ಬಂದಿದೆ. ನರೇಂದ್ರ ಮೋದಿ ಮತ್ತು ಅಮಿತ್ ಷಾ ರಿಂದ ಹಿಡಿದು ಎಲ್ಲ ಬಿಜೆಪಿ ಮುಖಂಡರುಗಳ ಭಾಷಣಗಳು ದಿನಗಳೆದಂತೆ ಹೆಚ್ಚೆಚ್ಚು ಕರ್ಕಶಗೊಳ್ಳುತ್ತಿವೆ. ಹಿಂದೂಗಳಿಗೆ ಹೊರಗಿನ ಮತ್ತು ಒಳಗಿನ ಶತ್ರುಗಳಿಂದ ತಮ್ಮನ್ನು ರಕ್ಷಿಸಿಕೊಳ್ಳಬೇಕೆಂಬ ಕರೆ ನೀಡಲಾಗುತ್ತಿದೆ; ಅಲ್ಪಸಂಖ್ಯಾತರು ಬುಡಮೇಲು ಪಾತ್ರ ವಹಿಸುತ್ತಿದ್ದಾರೆ ಎಂದು ಸಾಕಷ್ಟು ಬಹಿರಂಗವಾಗಿಯೇ ಬೆದರಿಕೆ ಹಾಕಲಾಗುತ್ತಿದೆ; ತಮ್ಮ ರಾಷ್ಟ್ರೋನ್ಮಾದದ ಅಪಪ್ರಚಾರಕ್ಕೆ ಸಶಸ್ತ್ರ ಪಡೆಗಳ ಹೆಸರನ್ನು ಬಳಸಲಾಗುತ್ತಿದೆ; ಮತ್ತು ನಾಗರಿಕತ್ವ(ತಿದ್ದುಪಡಿ) ಮಸೂದೆ ಹಾಗೂ ರಾಷ್ಟ್ರೀಯ ನಾಗರಿಕರ ದಾಖಲೆ(ಎನ್‌ಆರ್‌ಸಿ) ಹೊರಗಿನವರನ್ನು ಹೊರಹಾಕುವ ಸಾಧನಗಳು ಎಂದು ಬಿಂಬಿಸಲಾಗುತ್ತಿದೆ.

ಇಂತಹ ಒಂದು ವಿಭಜನಕಾರೀ ಪ್ರಚಾರದಲ್ಲಿ, ಒಬ್ಬ ಕಾವಿಧಾರಿ ಭಯೋತ್ಪಾದನಾ-ಆರೋಪಿ ಮತ್ತು ಮುಸ್ಲಿಂ-ದ್ವೇಷಿ ಬಿಜೆಪಿಯ ಚುನಾವಣಾ ಅಜೆಂಡಾದ ಒಂದು ಪ್ರತೀಕವಾಗಿದ್ದಾರೆ. ಇದು ಕೂಡ ಬಹಳ ಹೊಸದೇನಲ್ಲ. ಇನ್ನೊಬ್ಬ ಮುಸ್ಲಿಂರ ವಿರುದ್ಧ ದ್ವೇಷ ಕಾರುವ, ಕಾವಿಧಾರಿ, ಆದಿತ್ಯನಾಥರನ್ನು ಉತ್ತರಪ್ರದೇಶದ ಮುಖ್ಯಮಂತ್ರಿಯಾಗಿ ಮಾಡಲಾಗಿದೆ ತಾನೇ?
ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಘೋಷಣೆಯನ್ನು ನಿಜವಾಗಿಯೂ ಬಿಟ್ಟೇ ಬಿಡಲಾಗಿದೆ. ಅದರ ಜಾಗದಲ್ಲಿ ಒಂದು ಬಹಿರಂಗ ಹಿಂದುತ್ವ ಕೋಮುವಾದಿ-ಮಿಲಿಟರಿಶಾಹಿಮಾದರಿ-ಸಂಕುಚಿತವಾದೀ ಮನವಿ ಬಂದಿದೆ. ಇದು, ಮೋದಿ ವಿಕಾಸದ ಮಾತಾಡುವವರು ಎಂಬ ನಂಬಿಕೆಗೆ ಜೋತು ಬಿದ್ದಿರುವವರನ್ನೂ ಬೆಚ್ಚಿ ಬೀಳಿಸುವಂತದ್ದು. ಇಂತಹ ಭ್ರಮೆಗಳಿಗೆ ಈಗ ಯಾವ ಅವಕಾಶವೂ ಉಳಿದಿಲ್ಲ. ದೇಶವನ್ನು ಉಳಿಸುವ ಏಕೈಕ ದಾರಿಯೆಂದರೆ, ಬಿಜೆಪಿ ಮತ್ತು ಮೋದಿ ಸೋಲುವಂತೆ ಮಾಡುವುದು.

( ಈ ವಾರದ ಜನಶಕ್ತಿವಾರ ಪತ್ರಿಕೆಯಲ್ಲಿ ಪ್ರಕಟವಾದ ಲೇಖನ)

ಪ್ರಕಾಶ ಕಾರಟ್

ಸುದ್ದಿದಿನ.ಕಾಂ|ವಾಟ್ಸಾಪ್|9980346243

Advertisement

ರಾಜಕೀಯ

ಮಸ್ಕಿ ಬಿಜೆಪಿ ಅಭ್ಯರ್ಥಿ ಪರ ಇಂದು ಸಿಂಗರ್ ಮಂಗ್ಲಿ ಪ್ರಚಾರ

Published

on

ಸುದ್ದಿದಿನ,ರಾಯಚೂರು: ರಾಬರ್ಟ್ ಸಿನೆಮಾ ‘ಕಣ್ಣೆ ಅದಿರಿಂದಿ’ ಹಾಡಿನ ಮೂಲಕ ಭಾರೀ ಸದ್ದು ಮಾಡಿದ ಗಾಯಕಿ ಮಂಗ್ಲಿ ಮಸ್ಕಿ ಉಪ ಚುನಾವಣಾ ಅಖಾಡದಲ್ಲಿ ಮಂಗಳವಾರ ಬಿಜೆಪಿ ಪರವಾಗಿ ಪ್ರಚಾರ ಮಾಡಲಿದ್ದಾರೆ.

ಬಿಜೆಪಿಯು ಗಾಯಕಿ ಮಂಗ್ಲಿ ಅವರನ್ನ ಪ್ರಚಾರಕ್ಕೆ ಆಹ್ವಾನಿಸಿದ್ದು, ಇಂದು ಮಸ್ಕಿ ಕೆಲ ಭಾಗಗಳಲ್ಲಿ ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ ಪರವಾಗಿ ಮತಯಾಚಿಸಲಿದ್ದಾರೆ. ಆದರೆ ಚುನಾವಣಾ ಅಭ್ಯರ್ಥಿ ಪ್ರತಾಪ್‌ ಗೌಡ ಪಾಟೀಲರಿಗೆ ಕೊರೊನಾ ಪಾಸಿಟಿವ್ ಇರುವುದು ದೃಢವಾಗಿದೆ.

ಚುನಾವಣಾ ಅಭ್ಯರ್ಥಿ, ಪ್ರತಾಪ್‌ ಗೌಡ ಪಾಟೀಲ

ಇದೇ 17 ರಂದು ಬೆಳಗಾವಿ ಲೋಕಸಭೆ, ಮಸ್ಕಿ, ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಮೂರು ರಾಜಕೀಯ ಪಕ್ಷಗಳು ತಮ್ಮ ಅಭ್ಯರ್ಥಿಗಳ ಗೆಲುವಿಗೆ ಭರ್ಜರಿ ರಣತಂತ್ರವನ್ನು ಹೂಡಿದ್ದಾರೆ.

ಇದನ್ನೂ ಓದಿ | ಕವಿತೆ | ಅವಳು ಮಸಣ ಕಾಯುವ ಪಾರ್ವತಿ..! -ಪದ್ಮಶ್ರೀ ಗೋವಿಂದರಾಜು,ಭದ್ರಾವತಿ

ಮಸ್ಕಿಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಮತಯಾಚಿಸಿದ ಸಿಎಂ ಯಡಿಯೂರಪ್ಪ ಅವರು, ಕಾಂಗ್ರೆಸ್ ನೆಲಸವಾಗುವುದು ನಿಶ್ಚಿತ. 3 ಕ್ಷೇತ್ರಗಳಲ್ಲೂ ದೊಡ್ಡ ಮತಗಳ ಅಂತರದಲ್ಲಿ ನಾವೇ ಗೆಲ್ಲುತ್ತೇವೆ ಎಂಬ ಭರವಸೆಯನ್ನು ವ್ಯಕ್ತಪಡಿಸಿದರು. ಇತ್ತ ಮೂರು ಪಕ್ಷಗಳ ಮತಯಾಚನೆಯ ಕಾವು ಏರುತ್ತಲೇ ಇದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಬಿ.ಜೆ.ಪಿ ಎಂ.ಪಿಗಳ ಗುಲಾಮಿ ಮನಸ್ಥಿತಿ ಕರ್ನಾಟಕವನ್ನು ಸರ್ವನಾಶ‌ ಮಾಡಲಿದೆ : ಸಿದ್ದರಾಮಯ್ಯ ಆಕ್ರೋಶ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ, ಬೆಳಗಾವಿ: ಕೃಷಿ ವಿರೋಧಿ ಕಾಯ್ದೆಗಳ ಮೂಲಕ ರೈತರ ಬದುಕನ್ನು ಶಾಶ್ವತವಾಗಿ ಘಾಸಿ‌ಮಾಡಿರುವ ಕೇಂದ್ರದ ಬಿಜೆಪಿ ಸರ್ಕಾರ ಇದೀಗ ರಸಗೊಬ್ಬರದ ಬೆಲೆ ಏರಿಸಿ ಅವರ ಗಾಯದ ಮೇಲೆ ಬರೆ ಎಳೆದಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಬೆಳಗಾವಿ ಲೋಕಸಭೆ ಕ್ಷೇತ್ರದ ಸವದತ್ತಿಯಲ್ಲಿ ಆಯೋಜಿಸಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಅವರ ಪರ ಮತಪ್ರಚಾರ ನಡೆಸಿದ ಅವರು ಮಾತನಾಡಿದರು.

ಕೇಂದ್ರದ ರೈತ ಶತ್ರು ನರೇಂದ್ರ ಮೋದಿ ಸರ್ಕಾರ ರಸಗೊಬ್ಬರದ ಬೆಲೆಗಳನ್ನು ಶೇ. 60 ರಷ್ಟು ಹೆಚ್ಚಿಸಿದೆ. ಡಿ.ಎ.ಪಿ ಗೊಬ್ಬರ ಏಪ್ರಿಲ್ 1 ರಿಂದ ಒಂದು ಕ್ವಿಂಟಾಲಿಗೆ 1400 ಗಳಷ್ಟು ಬೆಲೆ ಜಾಸ್ತಿಯಾಗುತ್ತಿದೆ. ಇದುವರೆಗೆ 2400 ರೂಪಾಯಿಗಳಿದ್ದ ಬೆಲೆ ಈಗ 3800 ರೂ ಗಳಾಗುತ್ತಿದೆ ಎಂದರು.

ಸಾರಜನಕ, ರಂಜಕ ಮತ್ತು ಪೊಟ್ಯಾಷ್‌ಗಳ ಮೇಲಿನ ಬೆಲೆ ಕ್ವಿಂಟಾಲ್ ಗೆ ರೂ.1250 ಹೆಚ್ಚಿಸಿದ್ದಾರೆ. ರೂ.2350 ಗೆ ಸಿಗುತ್ತಿದ್ದ ಗೊಬ್ಬರ ಈಗ ರೂ.3600ರಷ್ಟಾಗಿದ್ದು ರೈತರು ನಿಸ್ಸಂಶಯವಾಗಿ ದಿವಾಳಿಯಾಗಲಿದ್ದಾರೆ.

ಅಂತರರಾಷ್ಟ್ರೀಯ ಮಟ್ಟದಲ್ಲಿ ಬೆಲೆ ಜಾಸ್ತಿಯಾಗಿದೆ, ಅದಕ್ಕೆ ಬೆಲೆ ಜಾಸ್ತಿ ಮಾಡಿದ್ದೇವೆ ಎಂಬ ಕೇಂದ್ರ ಸರ್ಕಾರದ ಸಬೂಬು ಶುದ್ಧ ಸುಳ್ಳು. ಕಳೆದ ವರ್ಷ ರೂ.1,33,947 ಕೋಟಿ ರಸಗೊಬ್ಬರಕ್ಕಾಗಿ ಸಬ್ಸಿಡಿ ನೀಡಲಾಗಿತ್ತು. ಈಗ ಅದು ರೂ.79,530 ಕೋಟಿಗೆ ಇಳಿಸಿದ್ದಾರೆ. ಆದ್ದರಿಂದಲೇ ಏಪ್ರಿಲ್ 1 ರಿಂದ ಬೆಲೆ ಹೆಚ್ಚಾಗಿದೆ.

ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿಯನ್ನು ಪ್ರಶ್ನಿಸದ ರಾಜ್ಯ ಸರ್ಕಾರ ಮತ್ತು ರಾಜ್ಯವನ್ನು ಪ್ರತಿನಿಧಿಸುವ ಬಿ.ಜೆ.ಪಿ ಎಂ.ಪಿಗಳ ಗುಲಾಮಿ ಮನಸ್ಥಿತಿ ಕರ್ನಾಟಕವನ್ನು ಸರ್ವನಾಶ‌ ಮಾಡಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

6ನೇ ವೇತನ ಆಯೋಗದ ಶಿಫಾರಸ್ಸಿನಂತೆ ಸಾರಿಗೆ ನೌಕರರಿಗೆ ವೇತನ ಭತ್ಯೆ ನೀಡಲು ಸಾಧ್ಯವಿಲ್ಲ : ಮುಖ್ಯಮಂತ್ರಿ ಯಡಿಯೂರಪ್ಪ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ, ಬೆಂಗಳೂರು : ’ರಾಜ್ಯದ ಒಟ್ಟು ಆದಾಯದ ಶೇ. 85 ರಷ್ಟು, ವೇತನ, ಭತ್ಯೆ, ಪಿಂಚಣಿ ಮತ್ತಿತರ ಯೋಜನೇತರ ವೆಚ್ಚಗಳಿಗೆ ವ್ಯಯವಾಗುತ್ತಿದ್ದು, ಅಭಿವೃದ್ಧಿ ಕಾರ್ಯಗಳಿಗೆ ಅಲ್ಪ ಆದಾಯ ಲಭ್ಯವಿರುತ್ತದೆ ಎಂದು ಮುಖ್ಯ ಮಂತ್ರಿ ಯಡಿಯೂರಪ್ಪ ಅವರು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ಲಿಂಕ್ ಮೇಲೆ ಕ್ಲಿಕ್ ಮಾಡಿ : ಸಾರಿಗೆ ನೌಕರರು ಮುಷ್ಕರ ಕೈಬಿಟ್ಟು ಕರ್ತವ್ಯಕ್ಕೆ ಹಾಜರಾಗಬೇಕು ಎಂದು ವಿನಂತಿಸುತ್ತೇನೆ : ಯಡಿಯೂರಪ್ಪ ಫೇಸ್ ಬುಕ್ ಪೋಸ್ಟ್

ಬಜೆಟ್ ಅಧಿವೇಶನದಲ್ಲಿ ವಿಪಕ್ಷ ನಾಯಕರು ಪ್ರಸ್ತಾಪಿಸಿದ್ದಂತೆ, ಯೋಜನೇತರ ವೆಚ್ಚ ಈಗಾಗಲೇ ಅಧಿಕವಾಗಿದೆ. ಪ್ರಸಕ್ತ ಸಂದರ್ಭಗಳಲ್ಲಿ ಮತ್ತಷ್ಟು ಹೆಚ್ಚು ಅನುದಾನವನ್ನು ಯೋಜನೇತರ ವೆಚ್ಚಗಳಿಗೆ ಒದಗಿಸಲು ಸಾಧ್ಯವಾಗುತ್ತಿಲ್ಲ ಎಂದಿದ್ದಾರೆ.

ಜೊತೆಗೆ ಲಾಕ್ ಡೌನ್ ಸಂದರ್ಭದಲ್ಲಿಯೂ ಸಹ ಸಾರಿಗೆ ನೌಕರರ ಹಿತರಕ್ಷಣೆ ದೃಷ್ಟಿಯಿಂದ ಅವರಿಗೆ ವೇತನ ನೀಡಲು, ಸರ್ಕಾರ 2,300 ಕೋಟಿ ರೂ. ಗಳ ಅನುದಾನ ನೀಡಿದೆ. ಸವಾಲಿನ ಸಂದರ್ಭಗಳಲ್ಲಿಯೂ ಸಹ ಸಾರಿಗೆ ಸಂಸ್ಥೆಗಳ ನೌಕರರ 9 ಬೇಡಿಕೆಗಳಲ್ಲಿ 8 ಬೇಡಿಕೆಗಳನ್ನು ಸರ್ಕಾರ ಈಗಾಗಲೇ ಈಡೇರಿಸಿದ್ದು, 6ನೇ ವೇತನ ಆಯೋಗದ ಶಿಫಾರಸ್ಸಿನಂತೆ ವೇತನ ಭತ್ಯೆ ನೀಡಲು ಸಾಧ್ಯವಿರುವುದಿಲ್ಲ. ಆದ್ದರಿಂದ ಸಾರಿಗೆ ನೌಕರರು ಮುಷ್ಕರ ಕೈಬಿಟ್ಟು ಕರ್ತವ್ಯಕ್ಕೆ ಹಾಜರಾಗಬೇಕು ಎಂದು ವಿನಂತಿಸುತ್ತೇನೆ’. ಎಂದು ಹೇಳಿದ್ದಾರೆ‌.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ2 hours ago

ಡೀಲರ್ಶಿಪ್‍ಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ : ದಾವಣಗೆರೆ ಜಿಲ್ಲೆಯಲ್ಲಿ ಮಂಗಳೂರು ರೆಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ಆಯಿಲ್ ಅಂಡ್ ನ್ಯಾಚುರಲ್ ಗ್ಯಾಸ್ ಕಾರ್ಪೊರೇಷನ್ ಲಿಮಿಟೆಡ್ ಭಾರತ ಸರ್ಕಾರಿ ಸ್ವಾಮ್ಯದ ಕಂಪನಿಯಾಗಿದ್ದು, ರಿಟೇಲ್...

ದಿನದ ಸುದ್ದಿ2 hours ago

ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಉಚಿತ ತರಬೇತಿಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ : ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಜಿಲ್ಲಾ ಕಚೇರಿ ವತಿಯಿಂದ 2019-20ನೇ ಸಾಲಿನ ವಿಶೇಷ ಕೇಂದ್ರಿಯ ನೆರವಿನಡಿ (ಎಸ್‍ಸಿಎ ಯಿಂದ ಎಸ್‍ಸಿಎಸ್‍ಪಿ) ಜಿಲ್ಲೆಯ ಪರಿಶಿಷ್ಟ ಜಾತಿಯ ನಿರುದ್ಯೋಗ...

ದಿನದ ಸುದ್ದಿ3 hours ago

ಸಾಮಾಜಿಕ ಸಂವರ್ಧನೆಗೆ ಸಾಹಿತ್ಯಿಕ ಚರ್ಚೆ ಅವಶ್ಯ : ಹಿರಿಯ ಸಾಹಿತಿ ಡಾ. ಎಂ. ಜಿ. ಈಶ್ವರಪ್ಪ

ಸುದ್ದಿದಿನ,ದಾವಣಗೆರೆ : ಸಮಾಜದ ಸ್ವಾಸ್ಥ್ಯ ಕಾಪಾಡುವ ನಿಟ್ಟಿನಲ್ಲಿ ಸಾಹಿತ್ಯದ ಕೊಡುಗೆ ಅಪಾರ. ಹಾಗಾಗಿ ಹೊಸತನದ ಹುಟ್ಟಿಗೆ ಮತ್ತು ಸಾಮಾಜಿಕ ಸಂವರ್ಧನೆಗೆ ಆಗಾಗ್ಗೆ ಆರೋಗ್ಯಕರ ಸಾಹಿತ್ಯಿಕ ಚರ್ಚೆ ನಡೆಯುತ್ತಿರಬೇಕು...

ನಿತ್ಯ ಭವಿಷ್ಯ10 hours ago

ಈ ರಾಶಿಯವರಿಗೆ ಸಂಜೆಯೊಳಗೆ ಒಂದು ಖುಷಿ ಸಂದೇಶ! ಭಾನುವಾರ- ರಾಶಿ ಭವಿಷ್ಯ ಏಪ್ರಿಲ್-18,2021

ಸೂರ್ಯೋದಯ: 06:04 AM, ಸೂರ್ಯಸ್ತ: 06:31 PM ಸ್ವಸ್ಥ ಶ್ರೀ ಮನೃಪ ಶಾಲಿವಾನ ಶಕೆ1943, ಸಂವತ್ 2077 ಪ್ಲವ ನಾಮ ಸಂವತ್ಸರ ಚೈತ್ರ ಮಾಸ, ವಸಂತಋತು, ಉತ್ತರಾಯಣ,...

ನಿತ್ಯ ಭವಿಷ್ಯ1 day ago

ಈ ರಾಶಿಯವರಿಗೆ ನಿಶ್ಚಿತಾರ್ಥ ಸಂಭವ! ಶನಿವಾರ- ರಾಶಿ ಭವಿಷ್ಯ ಏಪ್ರಿಲ್-17,2021

ಸೂರ್ಯೋದಯ: 06:05 AM, ಸೂರ್ಯಸ್ತ: 06:31 PM ಸ್ವಸ್ಥ ಶ್ರೀ ಮನೃಪ ಶಾಲಿವಾಹನ ಶಕ1943, ಸಂವತ್2077 ಪ್ಲವ ನಾಮ ಸಂವತ್ಸರ ಚೈತ್ರ ಮಾಸ, ವಸಂತ ಋತು, ಉತ್ತರಾಯಣ,...

ದಿನದ ಸುದ್ದಿ2 days ago

ಕೊರೊನಾತಂಕದ ನಡುವೆ ಎಸ್.ಎಸ್.ಎಲ್.ಸಿ ಮಕ್ಕಳಿಗಿರಲಿ ನಿರಾತಂಕ ; ಪಠ್ಯ ಕಡಿತದ ಲಾಭ – ಅಂಕಗಳಿಕೆ ಸರಾಗ

  ವಿ.ಕೆ ಕುಮಾರಸ್ವಾಮಿ ಪ್ರೌಢಶಾಲಾ ಮುಖ್ಯೋಪಾಧ್ಯಾಯರು, ವಿರುಪಾಪುರ, ರಾಮನಗರ ಜಿಲ್ಲೆ ಜಗತ್ತನ್ನು ಎಡಬಿಡದೆ ಕಾಡುತ್ತಿರುವ ಕೊರೋನಾ ವಿಷ ಪೀಡೆಯ ಬಾಧೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಮೊನ್ನೆ...

ದಿನದ ಸುದ್ದಿ2 days ago

ನಿಗದಿತ ದರಕ್ಕೆ ರಸಗೊಬ್ಬರ ಮಾರಾಟ ಮಾಡಲು ಸೂಚನೆ

ಸುದ್ದಿದಿನ,ದಾವಣಗೆರೆ : ರಂಜಕಯುಕ್ತ ರಸಗೊಬ್ಬರಗಳ ಬೆಲೆ ಹೆಚ್ಚಾಗುತ್ತಿದ್ದು, ಜಿಲ್ಲೆಯ ಎಲ್ಲಾ ಖಾಸಗಿ ಹಾಗೂ ಸಹಕಾರ ರಸಗೊಬ್ಬರ ಮಾರಾಟಗಾರರು ರಸಗೊಬ್ಬರವನ್ನು ನಿಗದಿತ ದರಕ್ಕೆ ಅನುಗುಣವಾಗಿಯೇ ಮಾರಾಟ ಮಾಡಬೇಕು ಎಂದು...

ಲೈಫ್ ಸ್ಟೈಲ್2 days ago

ತರಕಾರಿ ಸಿಪ್ಪೆಯಿಂದ ಪೇಪರ್ ತಯಾರಿಸಿದ ಹತ್ತರ ಬಾಲೆ ಮಾನ್ಯ ಹರ್ಷ..!

ಕಸದಿಂದ ರಸ ಅನ್ನೋ ಮಾತು ಕೇಳಿದ್ದೀವಿ. ಇಲ್ಲೊಬ್ಬ ಬಾಲೆ ಅದನ್ನು ಸಾಕಾರ ಗೊಳಿಸುವ ಕಾಲಕ್ಕೆ ಕೈ ಹಾಕಿದ್ದಾಳೆ. ಮನೆಯಲ್ಲಿ ದಿನ ನಿತ್ಯವೂ ಬೀಳುವ ಅಡುಮನೆಯ ಕಸದಿಂದ ಪೇಪರ್...

ನಿತ್ಯ ಭವಿಷ್ಯ2 days ago

ಮದುವೆಯಾಗಲು ಯಾವ ಗ್ರಹಗಳು ಚೆನ್ನಾಗಿರಬೇಕು? ಎಂಬುದರ ಎಂಬುವುದರ ಬಗ್ಗೆ ಮಾಹಿತಿ

  ಸೋಮಶೇಖರ್B.Sc ಜಾತಕ ಬರೆಯುವುದು, ಜಾತಕ ವಿಶ್ಲೇಷಣೆಗಾರರು, ರಾಶಿ ಹರಳು ತಿಳಿಸುವುದು. ವಂಶಪಾರಂಪರಿಕ ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ, ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು. Mob.9353488403 ಸಾಮಾನ್ಯವಾಗಿ ವಿವಾಹದ ಮೊದಲು ಜಾತಕ...

ನಿತ್ಯ ಭವಿಷ್ಯ2 days ago

ಈ ರಾಶಿಯವರು ಕುಟುಂಬ ಸದಸ್ಯರೊಂದಿಗೆ “ಸಂತಾನದ” ಸಿಹಿಸುದ್ದಿ ಕೇಳಿ ಸಂತಸ ಹಂಚಿಕೊಳ್ಳುವಿರಿ! ಶುಕ್ರವಾರ-ಏಪ್ರಿಲ್-16,2021

ಸೂರ್ಯೋದಯ: 06:05 AM, ಸೂರ್ಯಸ್ತ: 06:31 PM ಸ್ವಸ್ತ ಶ್ರೀ ಮನೃಪ ಶಾಲಿವಾಹನ ಶಕೆ1943, ಸಂವತ್2077 ಪ್ಲವ ನಾಮ ಸಂವತ್ಸರ ಚೈತ್ರ ಮಾಸ, ವಸಂತ ಋತು, ಉತ್ತರಾಯಣ...

Trending