Connect with us

ದಿನದ ಸುದ್ದಿ

ಸತ್ತವರಲ್ಲಿ ನಮ್ಮವರು ಯಾರು ?

Published

on

ಎಲ್ಲಿ ನೋಡಿದರಲ್ಲಿ ಚಿಂದಿಯಾದ ಶವಗಳು. ಕಾಲಿಟ್ಟಲೆಲ್ಲ ರಕ್ತವೋ ರಕ್ತ. ಲೆಕ್ಕವಿಲ್ಲದಷ್ಟು ಮೃತದೇಹಗಳ ಅವಶೇಷಗಳು. ಮುಂಡವಿಲ್ಲದ ರುಂಡಗಳು, ರುಂಡವಿಲ್ಲದ ಮುಂಡಗಳು. ಕೈ ಕಾಲುಗಳಿಲ್ಲದ ದೇಹಗಳು. ಗಾಯಗೊಂಡು ಒದ್ದಾಡುತ್ತಿದ್ದ ಹಲವರ ದೇಹಗಳಲ್ಲಿ ಚೂಪಾದ ಗಾಜಿನ ಚೂರುಗಳು ಹೊಕ್ಕಿದ್ದವು. ತಮ್ಮವರ ಪತ್ತೆಗಾಗಿ ಸಾವಿರಾರು ಮಂದಿ ಅಲ್ಲಿ ಸೇರಿದ್ದರು. ಶವಗಳನ್ನು ಗುರುತಿಸಲಾಗದೆ ಅವರು ರೋಧಿಸುತ್ತಿದ್ದರು. ಅವರ ಆಕ್ರಂದನ ಮುಗಿಲು ಮುಟ್ಟಿತ್ತು.” ಇದು ಈಸ್ಟರ್ ಭಾನುವಾರ ದ್ವೀಪರಾಷ್ಟ್ರ ಶ್ರೀಲಂಕಾದ ಕೊಲೊಂಬೋ ನಗರದಲ್ಲಿನ 3 ಚರ್ಚ್ಗಳಲ್ಲಿ ಮತ್ತು 3 ಪಂಚತಾರಾ ಹೊಟೇಲುಗಳಲ್ಲಿ ಸಂಭವಿಸಿದ ಭೀಕರ ಸರಣಿ ಬಾಂಬ್ ಸ್ಟೋಟದ ನಂತರ ಕಂಡುಬಂದ ಮನಕಲಕುವ ದೃಶ್ಯ.

ಚರ್ಚ್ಗಳಲ್ಲಿ ಪ್ರಾರ್ಥನೆಯಲ್ಲಿ ನಿರತರಾಗಿದ್ದವರ ಮೇಲೆ ಮತ್ತು ವಿಲಾಸಿ ಹೊಟೇಲುಗಳಲ್ಲಿ ತಂಗಿದ್ದ ವಿದೇಶಿ ಪ್ರವಾಶಿಗರನ್ನು ಗುರಿಯಾಗಿಸಿಕೊಂಡು ನಡೆದ ಎರಡು ಆತ್ಮಹತ್ಯಾ ದಾಳಿ ಮತ್ತು ಬಾಂಬ್ ಸ್ಪೋಟಗಳಿಂದಾಗಿ 300 ಕ್ಕೂ ಅಧಿಕ ಮಂದಿ ಅಮಾಯಕರು ಅಸುನೀಗಿ, 500 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಭಾರತ, ಪಾಕಿಸ್ತಾನ, ಅಮೇರಿಕ, ಡೆನ್ಮಾರ್ಕ್, ಬ್ರಿಟನ್, ಟರ್ಕಿ, ಪೋರ್ಚುಗಲ್, ಚೀನಾ ಮೊದಲಾದ ದೇಶಗಳ 35 ಪ್ರಜೆಗಳು ಮೃತಪಟ್ಟಿದ್ದಾರೆ. ಶ್ರೀಲಂಕಾದ ಇತಿಹಾಸದಲ್ಲೇ ಅತ್ಯಂತ ಬೀಭತ್ಸವಾದ ಈ ದಾಳಿಯನ್ನು ಭಾರತವೂ ಸೇರಿದಂತೆ ವಿಶ್ವದ ಅನೇಕ ದೇಶಗಳ ಗಣ್ಯರು ಬಲವಾಗಿ ಖಂಡಿಸಿದ್ದಾರೆ.

ಅಲ್ಲಿ ಮಕ್ಕಳನ್ನು ಕಳೆದುಕೊಂಡ ಹೆತ್ತವರು, ಅಪ್ಪ-ಅಮ್ಮನನ್ನು ಕಳೆದುಕೊಂಡ ಮಕ್ಕಳು, ಪತಿಯನ್ನು ಕಳೆದುಕೊಂಡ ಮಹಿಳೆಯರು, ಪತ್ನಿಯನ್ನು ಕಳೆದುಕೊಂಡ ಪುರುಷರು ತಮ್ಮವರನ್ನು ಹುಡುಕುತ್ತಿದ್ದರು. ಛಿಧ್ರ, ಛಿಧ್ರವಾದ ಮಾನವ ದೇಹದ ತುಂಡುಗಳಲ್ಲಿ ತಮ್ಮವರನ್ನು ಗುರುತಿಸುವುದು ಹೇಗೆ? ಸತ್ತವರಲ್ಲಿ ನಮ್ಮವರು ಯಾರು?

ಅದೇ ರಕ್ತ! ಅದೇ ಅಂಗಾಂಗಗಳು! ಇವರು ನಮ್ಮವರಾ? ಅವರು ನಮ್ಮವರಾ? ಒಂದರ ಮೇಲೊಂದು ಎಂಬಂತೆ ಬಿದ್ದಿರುವ ಮೃತದೇಹಗಳಲ್ಲಿ ನಮ್ಮವರು ಯಾರು ಎಂದು ಗುರುತಿಸುವುದು ಹೇಗೆ? ಇಂತಹ ಪ್ರಕರಣಗಳಲ್ಲಿ ಮೃತದೇಹಗಳನ್ನು ಗುರುತಿಸಲಾಗದೆ. ತಮಗೆ ಸಂಬಂಧವಿಲ್ಲದ ಮೃತ ದೇಹವನ್ನು ಹಸ್ತಾಂತರಿಸಿಕೊಂಡು ಅಂತ್ಯಸಂಸ್ಕಾರ ಮಾಡಿದ ಉದಾರಣೆಗಳಿವೆ. ಶ್ರೀಲಂಕಾ ಸ್ಪೋಟದಲ್ಲಿ ಮಡಿದ 7 ಜನ ಕನ್ನಡಿಗರು ಸೇರಿದಂತೆ 10 ಜನ ಭಾರತೀಯರು ನಮ್ಮವರೇ. ಮೃತಪಟ್ಟ ಇನ್ನುಳಿದವರೆಲ್ಲರೂ ನಮ್ಮವರೇ. “ಇವ ನಮ್ಮವ, ಇವ ನಮ್ಮವ” ಎನ್ನುವವನಿಗೆ ತಮ್ಮವರು ಸಿಗುತ್ತಾರೆ.ಆತನಿಗೆ ಎಲ್ಲರೂ ತನ್ನವರೇ ಆಗಿರುತ್ತಾರೆ. ಆತ ಮಾನವ ರಕ್ತದಲ್ಲಿ ಬೇಧ ಕಾಣುವುದಿಲ್ಲ.

ಹುಟ್ಟಿನಿಂದಲೇ ಕೆಲವರು ಕೀಳು ಜಾತಿಯವರಾಗಿರುತ್ತಾರೆ ಎಂಬುವುದನ್ನು ಆತ ಒಪ್ಪುವುದಿಲ್ಲ. ಮತ ಧರ್ಮಗಳ ಖಾಸಗಿ ನಂಬಿಕೆಗಳನ್ನು ಆತ ವಿವಾದಾಸ್ಪದಗೊಳಿಸುವುದಿಲ್ಲ. ಪುಲ್ವಾಮಾ ದಾಳಿಯಲ್ಲಿ ಸಾವನ್ನಪ್ಪಿದ ಯೋಧರನ್ನು ಆತ ‘ತನ್ನವರು’ ಎಂದು ದುಃಖಿಸುತ್ತಾನೆ. ಕಳೆದ ಮಾರ್ಚ್ 15 ರಂದು ನ್ಯೂಜಿಲ್ಯಾಂಡ್ನ ಮಸೀದಿಯಲ್ಲಿ ನಡೆದ ಶೂಟೌಟ್ಗೆ ಬಲಿಯಾದ 50 ಮಂದಿ ಪ್ರಾರ್ಥನಾ ನಿರತರನ್ನು ಆತ ‘ತನ್ನವರು’ ಎಂದು ಗುರುತಿಸುತ್ತಾನೆ. ಈಗ ಶ್ರೀಲಂಕಾದ ಚರ್ಚುಗಳಲ್ಲಿ ಬಾಂಬ್ ಸ್ಪೋಟಿಸಿ ಸಾಯಿಸಿದ ನೂರಾರು ಮಂದಿ ಭಕ್ತರನ್ನು ಆತ ‘ತನ್ನವರು’ ಎಂದು ಕಣ್ಣೀರು ಹಾಕುತ್ತಾನೆ. ಆತನಿಗೆ ‘ತನ್ನವರು’ ಸಿಕ್ಕೇ ಸಿಗುತ್ತಾರೆ.

‘ತನ್ನವರು’ ಚೆನ್ನಾಗಿರಬೇಕು. ತನ್ನವರು ನೆಮ್ಮದಿಯಿಂದ ಇರಬೇಕು. ಅವರಿಗೆ ಕಷ್ಟಗಳು ಬರಬಾರದು. ಹೀಗೆ ‘ಇವ ನಮ್ಮವ ಇವ ನಮ್ಮವ’ ಎನ್ನುವವನಿಗೆ ಎಲ್ಲರೂ ಚೆನ್ನಾಗಿರಬೇಕೆಂಬ ಮಹದಾಸೆ! ಆತನಿಗೆ ಯುದ್ಧ ಬೇಡ, ಶಾಂತಿ ಬೇಕು. ಆತನಿಗೆ ಪ್ರೀತಿ ಬೇಕು, ಹಿಂಸೆ ಬೇಡ, ಆತ ಹಂಚಿಕೊಂಡು ಬದುಕು ಬಯಸುತ್ತಾನೆ. ಎಲ್ಲರನ್ನೂ ಒಳಗೊಳ್ಳಲು ಶ್ರಮಿಸುತ್ತಾನೆ. ಆತ ವೈವಿಧ್ಯತೆಯಲ್ಲಿ ಏಕತೆ ಕಾಣುತ್ತಾನೆ. ಆತ ಗಡಿಗಳಿಲ್ಲದ, ಗಡಿ ಘರ್ಷಣೆಗಳಿಲ್ಲದ ವಿಶ್ವದ ಕನಸು ಕಾಣುತ್ತಾನೆ. ಆತ ವಿಶ್ವಮಾನವ. ಸರ್ವಜನಾಂಗ ಪ್ರೇಮಿ, ವಿಶ್ವದ ಕರಿಯರಲ್ಲಿ, ಬಿಳಿಯರಲ್ಲಿ ಆತ ಭೇಧ ಕಾಣುವುದಿಲ್ಲ. ಆಫ್ರಿಕಾದವರು, ಅಮೆರಿಕದವರು ಆತನಿಗೆ ಬೇರೆ ಬೇರೆ ಅಲ್ಲ. ಅವರ ಭಾಷೆ ಯಾವುದೇ ಇರಲಿ. ಅವರ ಆಹಾರ ವಿಹಾರ ಹೇಗೂ ಇರಲಿ, ಆತನಿಗೆ ಅವರೆಲ್ಲರೂ ‘ತನ್ನವರು’.

ಎಲ್ಲಾದರೂ ಸರಿಯೇ, ಭೂಕಂಪದಂತಹ, ಪ್ರವಾಹದಂತಹ, ಬರಗಾಲದಂತಹ ನೈಸರ್ಗಿಕ ವಿಕೋಪ ಸಂಭವಿಸಿ ಸಾವು ನೋವುಗಳಾದಾಗ ಆತ ಮರಗುತ್ತಾನೆ. ತನ್ನ ಕೈಲಾದಷ್ಟು ನೆರವು ನೀಡುತ್ತಾನೆ. ಆತನಿಗೆ ಪಾಕಿಸ್ತಾನ, ಹಿಂದುಸ್ಥಾನ ಎಂಬ ಭೇದವಿಲ್ಲ. ಹಿಂದು-ಮುಸ್ಲಿಂ ಎಂಬ ದ್ವೇಷವಿಲ್ಲ. ಅವನು ಚರ್ಚ್ಗಳನ್ನು ಧ್ವಂಸ ಮಾಡುವುದಿಲ್ಲ. ಮಸೀದಿಯನ್ನು ಕೆಡವಿ ಹೆಮ್ಮೆ ಪಟ್ಟುಕೊಳ್ಳುವುದಿಲ್ಲ. ಆತ ತನ್ನ ನಂಬಿಕೆಗಳನ್ನು ಇತರರ ಮೇಲೆ ಹೇರುವುದಿಲ್ಲ. ದಲಿತರನ್ನು ಆತ ನಿಂದಿಸುವುದಿಲ್ಲ.

ಮಹಿಳೆಯರ ದೇವಸ್ಥಾನ ಪ್ರವೇಶವನ್ನು ಆತ ವಿರೋಧಿಸುವುದಿಲ್ಲ. ಎಲ್ಲರ ಸ್ವಾತಂತ್ರ್ಯವನ್ನು ಆತ ಗೌರವಿಸುತ್ತಾನೆ. ಎಲ್ಲೆಲ್ಲ್ಲೂ ತನ್ನವರಿದ್ದಾರೆ. ಎಲ್ಲಾ ದೇಶಗಳಲ್ಲಿದ್ದಾರೆ. ಎಲ್ಲಾ ಭಾಷೆಗಳನ್ನಾಡುವವರಲ್ಲಿದ್ದಾರೆ. ಎಲ್ಲಾ ಮತಧರ್ಮಗಳ ಅನುಯಾಯಿಗಳಲ್ಲಿದ್ದಾರೆ. ಯಾವುದೇ ಮತವನ್ನು ಪ್ರತಿಪಾದಿಸದಿರುವವರ ನಡುವೆಯೂ ಇದ್ದಾರೆ. ಎಲ್ಲಾ ತರಹದ ಆಹಾರ ಸೇವಿಸುವವರ, ವಿಭಿನ್ನ ಉಡುಪುಗಳನ್ನು ತೊಡುವವರ, ಎಲ್ಲರ ನಡುವೆಯೂ ಆ ವಿಶ್ವ ಮಾನವನಿಗೆ ‘ತನ್ನವರು’ ಇದ್ದಾರೆ.

( ಜನಶಕ್ತಿ ವಾರಪತ್ರಿಕೆಯಲ್ಲಿ ಪ್ರಕಟವಾದ ಲೇಖನ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ-ಇತರೆ ಸೌಲಭ್ಯ ಅರ್ಜಿ ಅವಧಿ ವಿಸ್ತರಣೆ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ದಾವಣಗೆರೆ :2020-21 ನೇ ಸಾಲಿಗೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಮತ್ತು ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ, ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಏಪ್ರಿಲ್ 30 ರವರೆಗೆ ವಿಸ್ತರಿಸಲಾಗಿದೆ.

ಈ ಹಿಂದೆ ಅರ್ಜಿ ಸಲ್ಲಿಸಲು ಏ.20 ಕಡೆಯ ದಿನವೆಂದು ನಿಗದಿಪಡಿಸಲಾಗಿತ್ತು. ಇದೀಗ ಈ ಅವಧಿಯನ್ನು ಏ.30 ರವರಗೆ ವಿಸ್ತರಿಸಲಾಗಿದ್ದು, ಆಸಕ್ತರು ಅರ್ಜಿ ಸಲ್ಲಿಸಲು ವೆಬ್‍ಸೈಟ್ www.ssp.postmatric.karnataka.gov.in ,ಕಾರ್ಯಕ್ರಮದ ವಿವರ, ಹಾಗೂ ಹೆಚ್ಚಿನ ವಿವರಗಳಿಗೆ  https://bcwd.karnataka.gov.in : [email protected]    ತಂತ್ರಾಂಶ ದೋಷಗಳು ಮತ್ತು ಇತರೆ ಮಾಹಿತಿಗೆ[email protected]

ದೂರವಾಣಿ ಸಂಖ್ಯೆ 8050770005/8050770004/ 080-35254757 ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಎಸ್.ಆರ್.ಗಂಗಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ| ವಾಟ್ಸಾಪ್ | 9980346243

Continue Reading

ದಿನದ ಸುದ್ದಿ

ಹಳೇ‌ ಕುಂದುವಾಡ ಮನಾ ಯುವ ಬ್ರಿಗೇಡ್, ಜರವೇ ನಾಲ್ಕನೇ ವಾರ್ಷಿಕೋತ್ಸವ | ಯುವಕರ ಸಮಾಜ ಮುಖಿ‌ ಕೆಲಸಗಳು ಉತ್ತಮ‌ ನಾಯಕತ್ವಕ್ಕೆ ಬುನಾದಿ : ಮೇಯರ್ ಎಸ್.ಟಿ.ವೀರೇಶ್

Published

on

ಸುದ್ದಿದಿನ,ದಾವಣಗೆರೆ : ಯುವಕರು ಸಮಾಜ ಮುಖಿ‌ ಕೆಲಸದಲ್ಲಿ ತೊಡಗಿಸಿಕೊಂಡರೆ ಉತ್ತಮ‌ ನಾಯಕರು ಆಗಲು ಅದು ಬುನಾದಿ ಆಗುತ್ತದೆ ಎಂದು ಮೇಯರ್ ಎಸ್ ಟಿ ವೀರೇಶ್ ತಿಳಿಸಿದರು.

ನಗರದ ಹಳೇ‌ ಕುಂದುವಾಡದಲ್ಲಿ ಮನಾ ಯುವ ಬ್ರಿಗೇಡ್, ಜರವೇ ನಾಲ್ಕನೇ ವಾರ್ಷಿಕೋತ್ಸವ ಅಂಗವಾಗಿ ಹಮ್ಮಿಕೊಂಡಿದ್ದ ಸಾಧಕರಿಗೆ ಸನ್ಮಾನ, ಕುಂದುವಾಡ ಯುವ ರತ್ನ ಪ್ರಶಸ್ತಿ, ಕೆಎಪಿಎಲ್ ಬಹುಮಾನ ವಿತರಣಾ ಸಮಾರಂಭದಲ್ಲಿ ಮಾತನಾಡಿದ ಅವರು, ಇಂದಿನ ಸಮಯದಲ್ಲಿ ಯುವಕರು ಬೇರೆ ಬೇರೆ ದಾರಿ ಕಡೇ, ದುಶ್ಚಟಗಳಿಗೆ ಬಲಿಯಾಗುತ್ತಿದ್ದಾರೆ, ಸಾಮಾಜಿಕ ಸೇವೆಗಳು, ಸಹಾಯ ಹಸ್ತ ಚಾಚುವಂತ ಯುವ ಮನಸ್ಸುಗಳು ಸಿಗುವುದೇ ವಿರಳವಾಗಿದೆ.

ಇಂತಹ ಕಾಲದಲ್ಲಿ ಮನಾ ಯುವ ಬ್ರಿಗೇಡ್ ಯುವಕರು, 44 ನೇ ವಾರ್ಡಿನಲ್ಲಿ ಅತ್ಯುತ್ತಮ‌ ಸಾಮಾಜಿಕ ಸೇವೆ ಮಾಡುವ ಮೂಲಕ ಜವಾಬ್ದಾರಿ ಹೆಚ್ಚಿಸಿಕೊಂಡಿದ್ದಾರೆ.. ಯಾವುದೇ ಸಮಾಜ ಸೇವೆಗಳು ಮಾಡಬೇಕೆಂದರು ಸವಾಲುಗಳು ಜಾಸ್ತಿ, ಎಲ್ಲಾ ಸವಾಲು ಮೆಟ್ಟಿನಿಂತು ಯುವಕರು ಸಮಾಜ ಸೇವೆಗಳಲ್ಲಿ ತೊಡಗಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಕಾರ್ಮಿಕ ಮುಖಂಡ ದಿ. ಜೆಎಂ ಹನುಮಂತಪ್ಪ ಅವರಿಗೆ ಮರಣೋತ್ತರ ಕುಂದುವಾಡ ರತ್ನ ಪ್ರಶಸ್ತಿ ಹಾಗೂ ಸಿಆರ್ ಪಿಎಫ್ ಯೋಧ ಆನಂದ್ ಎಸ್ ಎಚ್, ಎಸ್ ಎಸ್ ಬಿ ಯೋಧ ಭರ್ಮಪ್ಪ, ಸಮಾಜ ಸೇವಕ ರಾಜು ಕರೂರು ಅವರಿಗೆ ಕುಂದುವಾಡ ಯುವ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಜೊತೆಗೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಮಾಜ ಸೇವಕರಿಗೆ ಸನ್ಮಾನಿಸಿ ಗೌರವಿಸಲಾಯಿತು, ಕೆಪಿಎಲ್ ಚಾಂಪಿಯನ್ ಪವರ್ ಫೈಟರ್ಸ್ ತಂಡಕ್ಕೆ ಟ್ರೋಫಿ ವಿತರಿಸಲಾಯಿತು..

ಈ ಸಂದರ್ಭದಲ್ಲಿ ವರ್ತಕರಾದ ರಾಘವೇಂದ್ರ ಎನ್ ದಿವಾಕರ್, ಪಾಲಿಕೆ ಮಾಜಿ ಸದಸ್ಯ ಹೆಚ್ ತಿಪ್ಪಣ್ಣ, ಮುಖಂಡರಾದ ಬಾಡದ ಆನಂದರಾಜ್, ನಾಗಭೂಷಣ್ ವಾಣಿ, ಮಿಟ್ಲಕಟ್ಟೆ ಚಂದ್ರಪ್ಪ, ಶಿವಪ್ಪ, ಜೆಸಿ ದೇವರಾಜ್, ಎನ್ ಟಿ ನಾಗರಾಜ್, ಸಣ್ಣಿಂಗಪ್ಪ, ಮಂಜಪ್ಪ, ಗಿರೀಶ್ ದೇವರಮನೆ, ಪತ್ರಕರ್ತ ಮಧುನಾಗರಾಜ್ ಕುಂದುವಾಡ ಸೇರಿದಂತೆ ಮತ್ತಿತರರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಿಘಂಟು ತಜ್ಞ ಫ್ರೊ.ಜಿ.ವೆಂಕಟಸುಬ್ಬಯ್ಯ ನಿಧನ

Published

on

ಸುದ್ದಿದಿನ, ಬೆಂಗಳೂರು : ನಾಡಿನ ಖ್ಯಾತ ಸಂಶೋದಕ, ನಿಘಂಟು ತಜ್ಞ ಫ್ರೊ.ಜಿ.ವೆಂಕಟಸುಬ್ಬಯ್ಯ ಅವರು ಸೋಮವಾರ ರಾತ್ರಿ 1.15 ರ ವೇಳೆಗೆ ತಮ್ಮ ವಯೋ ಸಹಜ ಕಾರಣಗಳಿಂದ 108 ನೇ ವಯಸ್ಸಿನಲ್ಲಿ ನಿಧನರಾದರು.

ನಾಡೋಜ ಪ್ರೊ. ಜಿ. ವೆಂಕಟಸುಬ್ಬಯ್ಯ ಅವರು ಖ್ಯಾತ ವಿದ್ವಾಂಸರು ಹಾಗೂ ಜನಪ್ರಿಯ ಪ್ರಾಧ್ಯಾಪಕರು. ಪ್ರೊ. ಜಿ. ವೆಂಕಟಸುಬ್ಬಯ್ಯ ಅವರು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಸುವರ್ಣ ಪದಕದೊಡನೆ ಎಂ.ಎ. ಪದವಿ, ನಂತರ ಬಿ.ಟಿ. ಪದವಿ ಗಳಿಕೆ. ಮಹಾರಾಜ ಕಾಲೇಜಿನಲ್ಲಿ ಉಪನ್ಯಾಸಕರಾಗಿ ವೃತ್ತಿಯನ್ನು ಆರಂಭಿಸಿ, ನಂತರ ಬೆಂಗಳೂರಿನ ವಿಜಯಾ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ, ಪ್ರಿನ್ಸಿಪಾಲರಾಗಿ, ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದರು.

ಕನ್ನಡ ಸಾಹಿತ್ಯ ಪರಿಷತ್ತಿನ ಕನ್ನಡ-ಕನ್ನಡ ನಿಘಂಟುವಿನ ಪ್ರಧಾನ ಸಂಪಾದಕರಾಗಿ ಸೇವೆ ಸಲ್ಲಿಕೆ. ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ, ಕನ್ನಡ ಸಾಹಿತ್ಯ ಪರಿಷತ್ತಿಗೆ ಅಖಿಲ ಕರ್ನಾಟಕ ವ್ಯಾಪ್ತಿಯನ್ನು ತಂದುಕೊಟ್ಟ ಹಿರಿಮೆ ಶ್ರೀಯುತರದು.

ನಡೆದಾಡುವ ನಿಘಂಟು, ಶಬ್ಧ ಬ್ರಹ್ಮ ಎಂದು ಜನಜನಿತರಾಗಿರುವ ಶ್ರೀಯುತರು ಸಾಹಿತ್ಯ ವಿಮರ್ಶೆ, ಸಂಶೋಧನೆ, ಅನುವಾದ, ನಿಘಂಟು ರಚನೆ ಕ್ಷೇತ್ರಗಳಲ್ಲಿ ಅಪಾರ ಸೇವೆ ಸಲ್ಲಿಕೆ. 50ಪುಸ್ತಕಗಳನ್ನು, 14 ನಿಘಂಟುಗಳನ್ನು ಪ್ರಕಟಗೊಳಿಸಿರುವುದಲ್ಲದೆ ‘ಇಗೋ ಕನ್ನಡ’ ಎಂಬ ಅಂಕಣದಿಂದ ನಾಡಿನಲ್ಲಿ ಮನೆಮಾತಾಗಿದ್ದಾರೆ.

ನಿಘಂಟು ಪರಿವಾರ, ಅಕ್ರೂರ ಚರಿತ್ರೆ (ಸಂಪಾದನೆ), ಇಗೋ ಕನ್ನಡ (ಸಾಮಾಜಿಕ ನಿಘಂಟು), ಗತಿ ಪ್ರಜ್ಞೆ, ಕನ್ನಡವನ್ನು ಉಳಿಸಿ ಬೆಳೆಸಿದವರು, ಅನುಕಲ್ಪನೆ, ಕರ್ಣ ಕರ್ಣಾಮೃತ ಮುಂತಾದವು ಪ್ರಮುಖ ಕೃತಿಗಳು. ಹಲವಾರು ಶಿಕ್ಷಕ ತರಬೇತಿ ಕಾಲೇಜುಗಳಲ್ಲಿ ಆಹ್ವಾನಿತ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿರುವ ಶ್ರೀಯುತರ ಪಾಂಡಿತ್ಯಕ್ಕೆ ಸಂದ ಪ್ರಶಸ್ತಿ ಪುರಸ್ಕಾರಗಳು ಹಲವಾರು.

ಅವುಗಳಲ್ಲಿ ವಿದ್ಯಾಲಂಕಾರ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ, ಶಂಬಾ ಪ್ರಶಸ್ತಿ, ಸೇಡಿಯಾಪು ಪ್ರಶಸ್ತಿ, ಕಾಯಕ ಪ್ರಶಸ್ತಿ, ಪತ್ರಿಕಾ ಅಕಾಡೆಮಿ ವಿಶೇಷ ಪ್ರಶಸ್ತಿ, ಮಾಸ್ತಿ ಪ್ರಶಸ್ತಿ, ಹಂಪಿ ವಿಶ್ವವಿದ್ಯಾನಿಲಯದ ನಾಡೋಜ ಪ್ರಶಸ್ತಿ, ಅಂತರಾಷ್ಟ್ರೀಯ ನಿಘಂಟು ಸಮ್ಮೇಳನಗಳಿಗೆ ಆಹ್ವಾನ ಮುಂತಾದವು ಮುಖ್ಯವಾದವು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ3 hours ago

ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ-ಇತರೆ ಸೌಲಭ್ಯ ಅರ್ಜಿ ಅವಧಿ ವಿಸ್ತರಣೆ

ಸುದ್ದಿದಿನ,ದಾವಣಗೆರೆ :2020-21 ನೇ ಸಾಲಿಗೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ...

ದಿನದ ಸುದ್ದಿ5 hours ago

ಹಳೇ‌ ಕುಂದುವಾಡ ಮನಾ ಯುವ ಬ್ರಿಗೇಡ್, ಜರವೇ ನಾಲ್ಕನೇ ವಾರ್ಷಿಕೋತ್ಸವ | ಯುವಕರ ಸಮಾಜ ಮುಖಿ‌ ಕೆಲಸಗಳು ಉತ್ತಮ‌ ನಾಯಕತ್ವಕ್ಕೆ ಬುನಾದಿ : ಮೇಯರ್ ಎಸ್.ಟಿ.ವೀರೇಶ್

ಸುದ್ದಿದಿನ,ದಾವಣಗೆರೆ : ಯುವಕರು ಸಮಾಜ ಮುಖಿ‌ ಕೆಲಸದಲ್ಲಿ ತೊಡಗಿಸಿಕೊಂಡರೆ ಉತ್ತಮ‌ ನಾಯಕರು ಆಗಲು ಅದು ಬುನಾದಿ ಆಗುತ್ತದೆ ಎಂದು ಮೇಯರ್ ಎಸ್ ಟಿ ವೀರೇಶ್ ತಿಳಿಸಿದರು. ನಗರದ...

ನಿತ್ಯ ಭವಿಷ್ಯ6 hours ago

ಮದುವೆಯಾಗಲು ಯಾವ ಗ್ರಹಗಳು ಚೆನ್ನಾಗಿರಬೇಕು? ಎಂಬುದರ ಎಂಬುವುದರ ಬಗ್ಗೆ ಮಾಹಿತಿ

  ಸೋಮಶೇಖರ್B.Sc ಜಾತಕ ಬರೆಯುವುದು, ಜಾತಕ ವಿಶ್ಲೇಷಣೆಗಾರರು, ರಾಶಿ ಹರಳು ತಿಳಿಸುವುದು. ವಂಶಪಾರಂಪರಿಕ ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ, ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು. Mob.9353488403 ಸಾಮಾನ್ಯವಾಗಿ ವಿವಾಹದ ಮೊದಲು ಜಾತಕ...

ನಿತ್ಯ ಭವಿಷ್ಯ6 hours ago

ಈ ರಾಶಿಯವರಿಗೆ ವಿದೇಶಕ್ಕೆ ಹೋಗುವ ಕನಸು ಮತ್ತು ಕಂಕಣಬಲ ಕನಸು ನನಸಾಗಲಿದೆ..! ಮಂಗಳವಾರ ರಾಶಿ ಭವಿಷ್ಯ-ಏಪ್ರಿಲ್-20,2021

ಸೂರ್ಯೋದಯ: 06:03 AM, ಸೂರ್ಯಸ್ತ: 06:31 PM ಸ್ವಸ್ತಿ ಶ್ರೀ ಮನೃಪ ಶಾಲಿವಾಹನ ಶಕೆ1943, ಸಂವತ್2077, ಪ್ಲವ ನಾಮ ಸಂವತ್ಸರ ಚೈತ್ರ ಮಾಸ, ಉತ್ತರಾಯಣ, ವಸಂತಋತು, ಶುಕ್ಲ...

ದಿನದ ಸುದ್ದಿ1 day ago

ನಿಘಂಟು ತಜ್ಞ ಫ್ರೊ.ಜಿ.ವೆಂಕಟಸುಬ್ಬಯ್ಯ ನಿಧನ

ಸುದ್ದಿದಿನ, ಬೆಂಗಳೂರು : ನಾಡಿನ ಖ್ಯಾತ ಸಂಶೋದಕ, ನಿಘಂಟು ತಜ್ಞ ಫ್ರೊ.ಜಿ.ವೆಂಕಟಸುಬ್ಬಯ್ಯ ಅವರು ಸೋಮವಾರ ರಾತ್ರಿ 1.15 ರ ವೇಳೆಗೆ ತಮ್ಮ ವಯೋ ಸಹಜ ಕಾರಣಗಳಿಂದ 108...

ದಿನದ ಸುದ್ದಿ2 days ago

ಮತ್ತೆ ಬಂದರೂ ಅದೇ ಕೊರೋನ, ನಾವು ಹೆದರದಿರೋಣ

ಡಾ॥ ಶ್ರೀನಿವಾಸ ಕಕ್ಕಿಲ್ಲಾಯ,ಡಾ॥ ಬಾಲಸರಸ್ವತಿ, ಮಂಗಳೂರು ನಮ್ಮ ರಾಜ್ಯದ ಕೆಲವು ಭಾಗಗಳೂ ಸೇರಿದಂತೆ ದೇಶದ ಹಲವೆಡೆ ಕೊರೋನ ಸೋಂಕು ಮತ್ತೆ ಹರಡುತ್ತಿದೆ. ಅದಕ್ಕೆ ಸಂಭಾವ್ಯ ಕಾರಣಗಳು, ಪರಿಹಾರಗಳು...

ದಿನದ ಸುದ್ದಿ2 days ago

ಡೀಲರ್ಶಿಪ್‍ಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ : ದಾವಣಗೆರೆ ಜಿಲ್ಲೆಯಲ್ಲಿ ಮಂಗಳೂರು ರೆಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ಆಯಿಲ್ ಅಂಡ್ ನ್ಯಾಚುರಲ್ ಗ್ಯಾಸ್ ಕಾರ್ಪೊರೇಷನ್ ಲಿಮಿಟೆಡ್ ಭಾರತ ಸರ್ಕಾರಿ ಸ್ವಾಮ್ಯದ ಕಂಪನಿಯಾಗಿದ್ದು, ರಿಟೇಲ್...

ದಿನದ ಸುದ್ದಿ2 days ago

ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಉಚಿತ ತರಬೇತಿಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ : ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಜಿಲ್ಲಾ ಕಚೇರಿ ವತಿಯಿಂದ 2019-20ನೇ ಸಾಲಿನ ವಿಶೇಷ ಕೇಂದ್ರಿಯ ನೆರವಿನಡಿ (ಎಸ್‍ಸಿಎ ಯಿಂದ ಎಸ್‍ಸಿಎಸ್‍ಪಿ) ಜಿಲ್ಲೆಯ ಪರಿಶಿಷ್ಟ ಜಾತಿಯ ನಿರುದ್ಯೋಗ...

ದಿನದ ಸುದ್ದಿ2 days ago

ಸಾಮಾಜಿಕ ಸಂವರ್ಧನೆಗೆ ಸಾಹಿತ್ಯಿಕ ಚರ್ಚೆ ಅವಶ್ಯ : ಹಿರಿಯ ಸಾಹಿತಿ ಡಾ. ಎಂ. ಜಿ. ಈಶ್ವರಪ್ಪ

ಸುದ್ದಿದಿನ,ದಾವಣಗೆರೆ : ಸಮಾಜದ ಸ್ವಾಸ್ಥ್ಯ ಕಾಪಾಡುವ ನಿಟ್ಟಿನಲ್ಲಿ ಸಾಹಿತ್ಯದ ಕೊಡುಗೆ ಅಪಾರ. ಹಾಗಾಗಿ ಹೊಸತನದ ಹುಟ್ಟಿಗೆ ಮತ್ತು ಸಾಮಾಜಿಕ ಸಂವರ್ಧನೆಗೆ ಆಗಾಗ್ಗೆ ಆರೋಗ್ಯಕರ ಸಾಹಿತ್ಯಿಕ ಚರ್ಚೆ ನಡೆಯುತ್ತಿರಬೇಕು...

ನಿತ್ಯ ಭವಿಷ್ಯ2 days ago

ಈ ರಾಶಿಯವರಿಗೆ ಸಂಜೆಯೊಳಗೆ ಒಂದು ಖುಷಿ ಸಂದೇಶ! ಭಾನುವಾರ- ರಾಶಿ ಭವಿಷ್ಯ ಏಪ್ರಿಲ್-18,2021

ಸೂರ್ಯೋದಯ: 06:04 AM, ಸೂರ್ಯಸ್ತ: 06:31 PM ಸ್ವಸ್ಥ ಶ್ರೀ ಮನೃಪ ಶಾಲಿವಾನ ಶಕೆ1943, ಸಂವತ್ 2077 ಪ್ಲವ ನಾಮ ಸಂವತ್ಸರ ಚೈತ್ರ ಮಾಸ, ವಸಂತಋತು, ಉತ್ತರಾಯಣ,...

Trending