Connect with us

ದಿನದ ಸುದ್ದಿ

ಮಾರ್ಚ್- 29ರಂದು ಪ್ರಾಥಮಿಕ ಶಾಲಾ ಶಿಕ್ಷಕರ ಅರ್ಹತಾ ಪರೀಕ್ಷೆ (TET)

Published

on

ಸುದ್ದಿದಿನ,ಶಿವಮೊಗ್ಗ : ಬೆಂಗಳೂರಿನ ಕೇಂದ್ರೀಯ ದಾಖಲಾತಿ ಘಟಕವು ಮಾರ್ಚ್ 29ರಂದು ಪ್ರಸಕ್ತ ಸಾಲಿನ ಪ್ರಾಥಮಿಕ ಶಾಲಾ ಶಿಕ್ಷಕರ ಅರ್ಹತಾ ಪರೀಕ್ಷೆಯನ್ನು ನಗರದ ಸುಮಾರು 20ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲು ಉದ್ದೇಶಿಸಿದ್ದು, ಅದಕ್ಕೆ ಸಂಬಂಧಿಸಿದಂತೆ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಹೇಳಿದರು.

ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಪ್ರಾಥಮಿಕ ಶಾಲಾ ಶಿಕ್ಷಕರ ಅರ್ಹತಾ ಪರೀಕ್ಷೆಯ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಅಂದು ಬೆಳಿಗ್ಗೆ 9.30ರಿಂದ 12ಗಂಟೆಯವರೆಗೆ ನಡೆಯಲಿರುವ ಮೊದಲ ಅಧಿವೇಶನದಲ್ಲಿ 08ಪರೀಕ್ಷಾ ಕೇಂದ್ರಗಳಲ್ಲಿ ಸುಮಾರು 2065ಅಭ್ಯರ್ಥಿಗಳು ಹಾಗೂ ಮಧ್ಯಾಹ್ನ 2ರಿಂದ ಸಂಜೆ 4.30ರವರೆಗೆ ನಡೆಯಲಿರುವ ಎರಡನೇ ಅಧಿವೇಶನದಲ್ಲಿ 20ಪರೀಕ್ಷಾ ಕೇಂದ್ರಗಳಲ್ಲಿ 5385ಅಭ್ಯರ್ಥಿಗಳು ಸೇರಿದಂತೆ ಒಟ್ಟು 5500ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ ಎಂದರು.

ನಡೆಯುವ ಪರೀಕ್ಷೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ರಕ್ಷಣಾ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಅಂತೆಯೇ 20ಕೇಂದ್ರಗಳಿಗೆ ಕೇಂದ್ರ ಸ್ಥಾನಿಕ ಜಾಗೃತದಳದ ಅಧಿಕಾರಿಗಳನ್ನು ನೇಮಿಸಲಾಗಿದೆ. ಇವರೊಂದಿಗೆ ರಾಜ್ಯ ಕಚೇರಿಯಿಂದ ವೀಕ್ಷಕರನ್ನು ನೇಮಿಸಲಾಗಿದೆ. ಅಲ್ಲದೇ ಪ್ರಶ್ನೆ ಮತ್ತು ಉತ್ತರ ಪತ್ರಿಕೆಗಳನ್ನು ಸಕಾಲದಲ್ಲಿ ಪರೀಕ್ಷಾ ಕೇಂದ್ರಗಳಿಗೆ ತಲುಪಿಸಿ, ಉತ್ತರ ಪತ್ರಿಕೆಗಳನ್ನು ಖಜಾನೆಗೆ ತಲುಪಿಸಲು ಮಾರ್ಗಾಧಿಕಾರಿಗಳನ್ನು ನಿಯೋಜಿಸಲಾಗಿದೆ ಎಂದವರು ತಿಳಿಸಿದರು.

ಪರೀಕ್ಷಾ ಕೇಂದ್ರಗಳಿಗೆ ಮೇಲ್ವಿಚಾರಕರಾಗಿ ನಿಯೋಜಿಸುವ ಅಧಿಕಾರಿ-ಸಿಬ್ಬಂಧಿಗಳಿಗೆ ಅಲ್ಪಾವಧಿಯ ತರಬೇತಿ ನೀಡಿ, ಕೇಂದ್ರದಲ್ಲಿ ಅನುಸರಿಸಬೇಕಾದ ಕ್ರಮಗಳ ಕುರಿತು ಮಾಹಿತಿ ನೀಡುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ಸೂಚಿಸಿದ ಅವರು, ಪರೀಕ್ಷಾ ಕೇಂದ್ರಗಳ ಸುತ್ತಲಿನ 200ಮೀ. ಪ್ರದೇಶದ ವ್ಯಾಪ್ತಿಯಲ್ಲಿ ಸಾರ್ವಜನಿಕರ ಪ್ರವೇಶವನ್ನು ಕಡ್ಡಾಯವಾಗಿ ನಿಷೇಧಿಸಿದೆ. ಅಲ್ಲದೇ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಝೆರಾಕ್ಸ್ ಮತ್ತು ಸೈಬರ್ ಅಂಗಡಿಗಳನ್ನು ಮುಚ್ಚುವಂತೆ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿರುವುದಾಗಿ ಅವರು ಹೇಳಿದರು.

ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ರಕ್ಷಣಾಧಿಕಾರಿ ಶೇಖರಪ್ಪ ತೆಕ್ಕಣ್ಣನವರ್, ಜಯಕುಮಾರ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎನ್.ಎಂ.ರಮೇಶ್ ಸೇರಿದಂತೆ ಜಿಲ್ಲೆಯ ಎಲ್ಲಾ ತಾಲೂಕುಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು, ಪರೀಕ್ಷಾ ಕಾರ್ಯಕ್ಕೆ ನಿಯೋಜಿತ ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Advertisement

ದಿನದ ಸುದ್ದಿ

ಬಿಎಸ್​​ವೈ ರಾಜೀನಾಮೆ ಘೋಷಣೆ..!

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ, ಬೆಂಗಳೂರು : ಸರ್ಕಾರದ ಎರಡು ವರ್ಷಗಳ ಸಾಧನಾ ಕಾರ್ಯಕ್ರಮದ ಭಾಷಣದಲ್ಲಿ ಭಾವುಕರಾಗಿ ಸಿಎಂ ಬಿಎಸ್​​ವೈ ಕಣ್ಣೀರು ಹಾಕಿದರು.

ಸಂಘದ ಕಾರ್ಯಕರ್ತನಾಗಿ ನಂತರ ಆರೆಸ್ಸೆಸ್ ಪ್ರಚಾರಕನಾಗಿ ಬಳಿಕ ರಾಜಕೀಯ ಜೀವನ ಪ್ರವೇಶಿಸಿ ಸಂದರ್ಭದಿಂದ ಹಿಡಿದು ತಮ್ಮ ಈಗಿನ ರಾಜಕೀಯದವರೆಗೂ ತಮ್ಮ ಹೋರಾಟಗಳನ್ನ ಅವರು ಮೆಲುಕು ಹಾಕಿದರು. ಭಾಷಣದ ಮಧ್ಯೆ ಅವರು ಗದ್ಗದಿತರಾಗಿ ಕಣ್ಣೀರು ಹಾಕಿದರು. ಕೊನೆಯಲ್ಲಿ ಗದ್ಗದಿತರಾಗಿ ಊಟದ ನಂತರ ರಾಜಭವನಕ್ಕೆ ತೆರಳಿ ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ ಎಂದು ಕಣ್ಣೀರು ಹಾಕಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಹಿರಿಯ ನಟಿ ಜಯಂತಿ ಇನ್ನಿಲ್ಲ

Published

on

ಸುದ್ದಿದಿನ, ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟಿ, ಅಭಿನಯ ಶಾರದೆ ಜಯಂತಿ (76) ಇಂದು ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಅವರು, ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಕನ್ನಡ, ತಮಿಳು, ಮಲಯಾಳಂ, ಹಿಂದಿ ಸೇರಿದಂತೆ 6 ಭಾಷೆಗಳಲ್ಲಿ ನಟಿಸಿದ್ದಾರೆ. 500ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದ ಅವರು, ಬಹುಭಾಷಾ ನಟಿಯಾಗಿ ಗುರುತಿಸಿಕೊಂಡಿದ್ದರು. ಜಯಂತಿ ಅವರ ನಿಧನಕ್ಕೆ ಚಿತ್ರರಂಗ ಕಂಬನಿ ಮಿಡಿದಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮೊಟ್ಟೆ ಖರೀದಿಯಲ್ಲಿ ಅವ್ಯವಹಾರ ; ಕಾಣದ ಕೈಗಳು ಕೆಲಸ ಮಾಡುತ್ತಿವೆ : ಸಚಿವೆ ಶಶಿಕಲಾ ಜೊಲ್ಲೆ

Published

on

ಸುದ್ದಿದಿನ, ಬೆಂಗಳೂರು : ಮಹಿಳಾ ಮತ್ತು ಮಕ್ಕಳ ಇಲಾಖೆಯಲ್ಲಿ ಮೊಟ್ಟೆ ಖರೀದಿಯಲ್ಲಿ ಅವ್ಯವಹಾರವಾಗಿದೆ ಎಂಬ ಸುದ್ದಿ ಸತ್ಯಕ್ಕೆ ದೂರವಾದದ್ದು, ಇದರ ಹಿಂದೆ ರಾಜಕೀಯ ಷಡ್ಯಂತ್ರ ಅಡಗಿದ್ದು, ವಯಕ್ತಿಕವಾಗಿ ನನ್ನ ತೇಜೊವಧೆ ಮಾಡುವ ಪ್ರಯತ್ನ ನಡೆಸಲಾಗುತ್ತಿದೆ ಎಂದು ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದರು.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮೊಟ್ಟೆ ಖರೀದಿಗೆ ಇದುವರೆಗೂ ಯಾವದೇ ಟೆಂಡರ್ ಕರೆದಿಲ್ಲ. ಅಲ್ಲದೇ ಟೆಂಡರ್ ನೀಡಲು ನಾನು ವಯಕ್ತಿಕವಾಗಿ ಯಾವುದೇ ವ್ಯಕ್ತಿ ಅಥವಾ ಸಂಸ್ಥೆಯಿಂದ ಹಣಕ್ಕಾಗಿ ಬೇಡಿಕೆ ಇಟ್ಟಿಲ್ಲ.

ನಮ್ಮ ಬಿಜೆಪಿ ಪಕ್ಷದ ಶಾಸಕರಾದ ಪರಣ್ಣ ಮುನವಳ್ಳಿಯವರು ತಮ್ಮ ಸಂಬಂಧಿಕರು ಎಂದು ಕರೆದುಕೊಂಡು ಬಂದಾಗ ಕಾನೂನು ಪ್ರಕಾರ ಟೆಂಡರ್ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಂತೆ ಸೂಚಿಸಿದ್ದೇನೆ. ಇದರಲ್ಲಿ ಯಾವುದೇ ಹಣಕಾಸಿನ ವ್ಯವಹಾರದ ಕುರಿತು ನಾನು ಮಾತನಾಡಿಲ್ಲ.

ಆದರೆ, ಒಬ್ಬ ಮಹಿಳೆಯಾಗಿ ಪ್ರಾಮಾಣಿಕವಾಗಿ ಕೆಲಸ ಮಾಡಿಕೊಂಡು ರಾಜಕೀಯದಲ್ಲಿ ನನ್ನದೇ ಆದ ತತ್ವ ಸಿದ್ದಾಂತ ನಂಬಿಕೊಂಡು ಕೆಲಸ ಮಾಡುತ್ತಿರುವ ನನ್ನ ಏಳಿಗೆಯನ್ನು ಸಹಿಸದವರು, ನನ್ನ ವಿರುದ್ಧ ವ್ಯವಸ್ಥಿತ ಷಡ್ಯಂತ್ರ ನಡೆಸುತ್ತಿದ್ದಾರೆ. ಇದರ ಹಿಂದೆ ಕಾಣದ ಕೈಗಳು ಕೆಲಸ ಮಾಡುತ್ತಿವೆ ಎಂದು ಅನುಮಾನ
ವ್ಯಕ್ತಪಡಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending