ರಾಜಕೀಯ
ಆಲಮಟ್ಟಿ ಡ್ಯಾಂಗೆ ಸಿಎಂ ಬಾಗೀನ ಇಂದು

ಸುದ್ದಿದಿನ ಡೆಸ್ಕ್: ಸಿಎಂ ಹೆಚ್. ಡಿ. ಕುಮಾರಸ್ವಾಮಿ ಇಂದು ವಿಜಯಪುರಕ್ಕೆ ಭೇಟಿ ನೀಡಲಿದ್ದು, ಆಲಮಟ್ಟಿಯ ಡ್ಯಾಂಗೆ ಬಾಗಿನ ಅರ್ಪಿಸಲಿದ್ದಾರೆ.ಮುಖ್ಯಮಂತ್ರಿಯಾದ ಬಳಿಕ ವಿಜಯಪುರ ಜಿಲ್ಲೆಗೆ ಅವರ ಮೊದಲ ಬಾರಿಗೆ ಹೆಚ್. ಡಿ. ಕುಮಾರಸ್ವಾಮಿ ಭೇಟಿ ನೀಡಲಿದ್ದಾರೆ.
ಆಲಮಟ್ಟಿಯ ಡ್ಯಾಂ ತುಂಬಿರುವ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನ ಸಿಎಂ ಗಂಗಾಪೂಜೆ ನೆರವೇರಿಸಿ ಬಾಗಿನ ಅರ್ಪಿಸಲಿದ್ದಾರೆ. ಸಿಎಂ ಜತಗೆ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್, ಸಚಿವರಾದ ಶಿವಾನಂದ ಪಾಟೀಲ್, ಕೇಂದ್ರ ಸಚಿವ ರಮೇಶ ಜಿಗಜಿಣಗಿ, ಸ್ಥಳೀಯ ರಾಜಕೀಯ ಮುಖಂಡರು ಪಾಲ್ಗೊಳ್ಳಲಿದ್ದಾರೆ.

ರಾಜಕೀಯ
ದೇವರಮನೆ ಶಿವಕುಮಾರ್ ಬಿಜೆಪಿ ಸೇರ್ಪಡೆ | ನಾವು ಯಾರಿಗೂ ಆಮಿಷ ಒಡ್ಡಿಲ್ಲ : ಸಂಸದ ಜಿಎಂ ಸಿದ್ದೇಶ್ವರ್

ಸುದ್ದಿದಿನ, ದಾವಣಗೆರೆ : ದಾವಣಗೆರೆ ಮಹಾನಗರ ಪಾಲಿಕೆ ಗದ್ದುಕೆ ಹಿಡಿದಿದ್ದಕ್ಕೆ ಸಂಸದ ಜಿಎಂ ಸಿದ್ದೇಶ್ವರ ಹರ್ಷ ವ್ಯಕ್ತಪಡಿಸಿದ್ದು, ವರಿಷ್ಠರ ನಿರ್ಧಾರದಂತೆ ಎಸ್ ಟಿ ವೀರೇಶ್ ಅವರನ್ನ ಮೇಯರ್ ಆಗಿ ಆಯ್ಕೆ ಮಾಡಲಾಗಿದೆ ಎಂದರು.
ಇದನ್ನೂ ಓದಿ | ಶಾಸಕ ಶಾಮನೂರು ಶಿವಶಂಕರಪ್ಪ ಸೇರಿದಂತೆ ಮೂವರು ಎಂ ಎಲ್ ಸಿ ಗಳು ಗೈರು : ಬಿಜೆಪಿಗೆ ಸುಲಭ ಗೆಲುವು
ಬುಧವಾರ ಮಹಾನಗರ ಪಾಲಿಕೆ ಮೇಯರ್ – ಉಪಮೇಯರ್ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇವರಮನೆ ಶಿವಕುಮಾರ್ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದು ಅವರ ವೈಯಕ್ತಿ ವಿಚಾರವಾಗಿದೆ. ನಾವು ಯಾರಿಗೂ ಯಾವ ಆಮಿಷ ಒಡ್ಡಿಲ್ಲ. ಸ್ವತ: ಅವರೆ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರ್ತಿನಿ ಅಂತ ಬಂದಿದ್ದರು, ಹಾಗಾಗಿ ಅವರನ್ನ ಬಿಜೆಪಿಗೆ ಸೇರಿಸಿಕೊಂಡಿದ್ದೇವೆ. ಇನ್ನು ಯಾರಾದರೂ ಬಿಜೆಪಿ ಸೇರ್ತಾರ ಎಂಬ ವರದಿಗಾರರ ಪ್ರಶ್ನೆಗೆ ಸಿದ್ದೇಶ್ವರ್ ಅವರು ‘ವೇಟ್ ಆ್ಯಂಡ್ ಸೀ ಎಂದು ಅಚ್ಚರಿ ಮೂಡಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ರಾಜಕೀಯ
ದಾವಣಗೆರೆ ಮಹಾನಗರ ಪಾಲಿಕೆ ಬಿಜೆಪಿ ತೆಕ್ಕೆಗೆ : ಮೇಯರ್ ಆಗಿ ಎಸ್.ಟಿ.ವೀರೇಶ್, ಉಪಮೇಯರ್ ಆಗಿ ಶಿಲ್ಪಾ ಜಯಪ್ರಕಾಶ್

ಸುದ್ದಿದಿನ,ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆ ಮೇಯರ್ – ಉಪಮೇಯರ್ ಚುನಾವಣೆಯತಲ್ಲಿ ಬಿಜೆಪಿಯು ಭರ್ಜರಿ ಗೆಲುವು ಪಡೆಯಿತು. ಮೇಯರ್ ಆಗಿ ಬಿಜೆಪಿಯ ಎಸ್.ಟಿ. ವೀರೇಶ್ ಹಾಗೂ ಉಪ ಮೇಯರ್ ಆಗಿ ಶಿಲ್ಪಾ ಜಯಪ್ರಕಾಶ್ ಆಯ್ಕೆಯಾದರು.
29 ಮತಗಳನ್ನು ಪಡೆಯುವ ಮೂಲಕ ಬಿಜೆಪಿಯು ದಾವಣಗೆರೆ ಪಾಲಿಕೆ ಅಧಿಕಾರ ಹಿಡಿದಿದ್ದು, ಕಾಂಗ್ರೆಸ್ 22 ಮತಗಳನ್ನು ಮಾತ್ರ ಪಡೆಯುವಲ್ಲಿ ಯಶಸ್ವಿಯಾಯಿತು.
ಇದನ್ನೂ ಓದಿ | ಶಾಸಕ ಶಾಮನೂರು ಶಿವಶಂಕರಪ್ಪ ಸೇರಿದಂತೆ ಮೂವರು ಎಂ ಎಲ್ ಸಿ ಗಳು ಗೈರು : ಬಿಜೆಪಿಗೆ ಸುಲಭ ಗೆಲುವು
ಸುದ್ದಿದಿನ.ಕಾಂ|ವಾಟ್ಸಾಪ್|9980346243

ರಾಜಕೀಯ
ಶಾಸಕ ಶಾಮನೂರು ಶಿವಶಂಕರಪ್ಪ ಸೇರಿದಂತೆ ಮೂವರು ಎಂ ಎಲ್ ಸಿ ಗಳು ಗೈರು : ಬಿಜೆಪಿಗೆ ಸುಲಭ ಗೆಲುವು

ಸುದ್ದಿದಿನ, ದಾವಣಗೆರೆ : ಕಾಂಗ್ರೆಸ್ ನ ಹಿರಿಯ ಮುಖಂಡ ಶಾಸಕ ಶಾಮನೂರು ಶಿವಶಂಕರಪ್ಪ ಗೈರು ಹಾಜರಿಯಲ್ಲಿ ದಾವಣಗೆರೆ ಮಹಾನಗರ ಪಾಲಿಕರ ಮೇಯರ್ ಉಪಮೇಯರ್ ಚುನಾವಣೆಯಲ್ಲಿ ಮತದಾನ ನಡೆಯಿತು.
ದಾವಣಗೆರೆ ಮಹಾನಗರ ಪಾಲಿಕೆ ಮೇಯರ್ ಸ್ಥಾನಕ್ಕೆ ಬಿಜೆಪಿಯಿಂದ ಎಸ್. ಟಿ. ವೀರೇಶ್, ಕಾಂಗ್ರೆಸ್ ನಿಂದ ಗಡಿಗುಡಾಳ್ ಮಂಜುನಾಥ್ ಅವರು ನಾಮಪತ್ರ ಸಲ್ಲಿಸಿದ್ದರು. ಬಿಜೆಪಿಯಿಂದ ಉಪಮೇಯರ್ ಸ್ಥಾನಕ್ಕೆ ಬಿಜೆಪಿಯಿಂದ ಶಿಲ್ಪ ಜಯಪ್ರಕಾಶ್ ನಾಮಪತ್ರ ಸಲ್ಲಿಸಿದ್ದರು.
ಬಿಜೆಪಿಯಿಂದ ಸಂಸದ ಜಿ ಎಂ ಸಿದ್ದೇಶ್ವರ್ , ಸಚಿವ ಆರ್ ಶಂಕರ್, ಚಿದಾನಂದಗೌಡ ಸೇರಿದಂತೆ ಬಿಜೆಪಿ ಪಕ್ಷದ 29 ಸದಸ್ಯರು ಇದ್ದರು. ಕಾಂಗ್ರೆಸ್ ನ ಶಾಸಕ ಶಾಮನೂರು ಶಿವಶಂಕರಪ್ಪ ಹಾಗೂ ಮೂವರು ಎಂ ಎಲ್ ಸಿ ಗಳಾದ ಕೆಸಿ ಕೊಂಡಯ್ಯ, ರಘು ಆಚಾರ್ , ಯುಬಿ ವೆಂಕಟೇಶ್ ಗೈರಾಗಿದ್ದರು. ವಿಧಾನ ಪರಿಷತ್ ಸದಸ್ಯ ಮೋಹನ್ ಕೊಂಡಜ್ಜಿ ಸೇರಿದಂತೆ ಮಹಾನಗರ ಪಾಲಿಕೆ 22 ಸದಸ್ಯರು ಹಾಜರಿದ್ದರು.
ಶಾಸಕ ಶಾಮನೂರು ಶಿವಶಂಕರಪ್ಪ ಆಪ್ತರಾಗಿದ್ದ ಶಿವಕುಮಾರ್ ದೇವರಮನಿ ಮಂಗಳವಾರ (ಫೆ.23) ಕಾಂಗ್ರೆಸ್ ಗೆ ರಾಜೀನಾಮೆ ಸಲ್ಲಿಸಿ ಬಿಜೆಪಿಗೆ ಸೇರ್ಪಡೆಯಾಗಿದ್ದರು.
ಈ ಎಲ್ಲಾ ಬೆಳವಣಿಗೆಯ ಹಿನ್ನೆಲೆಯಲ್ಲಿ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲುವುದು ಖಚಿತವಾಗಿತ್ತು. ಇದರ ನಡುವೆ ಬೆಳಗ್ಗೆ ಕಾಂಗ್ರೆಸ್ ಹಿರಿಯ ಮುಖಂಡರ ಅನುಪಸ್ಥಿತಿಯಲ್ಲಿ ಚುನಾವಣೆ ನೆಡೆದಿದ್ದರಿಂದ ಬಿಜೆಪಿಗೆ ಗೆಲುವು ಸುಲಭವಾಯಿತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಲೈಫ್ ಸ್ಟೈಲ್6 days ago
ಏನಿದು ? ಗಡಿಮಾರಿ..!
-
ದಿನದ ಸುದ್ದಿ7 days ago
ಗೋಮಾಂಸವನ್ನು ವಿದೇಶಕ್ಕೆ ರಫ್ತು ಮಾಡಬಹುದು ; ವಿದೇಶದಿಂದ ಬರುವ ಗೋಮಾಂಸವನ್ನು ತಿನ್ನಬಹುದು, ಬಿಜೆಪಿಯ ಈ ಎಡಬಿಡಂಗಿ ನಿಲುವಿನ ಹಿಂದಿನ ಮರ್ಮ ಏನು..? ಮಾಜಿ ಸಿಎಂ ಸಿದ್ದರಾಮಯ್ಯ
-
ರಾಜಕೀಯ5 days ago
ಶಾಸಕ ಶಾಮನೂರು ಶಿವಶಂಕರಪ್ಪ ಸೇರಿದಂತೆ ಮೂವರು ಎಂ ಎಲ್ ಸಿ ಗಳು ಗೈರು : ಬಿಜೆಪಿಗೆ ಸುಲಭ ಗೆಲುವು
-
ಬಹಿರಂಗ6 days ago
ಕ್ರಾಂತಿಕಾರಿ ರೈತ ಹೋರಾಟದ ಸ್ಫೂರ್ತಿಯ ಚಿಲುಮೆ `ಅಜಿತ್ ಸಿಂಗ್’
-
ನೆಲದನಿ6 days ago
ರೈತ ಹೋರಾಟಗಾರ `ಸಹಜಾನಂದ ಸರಸ್ವತಿ’
-
ರಾಜಕೀಯ5 days ago
ದೇವರಮನೆ ಶಿವಕುಮಾರ್ ಬಿಜೆಪಿ ಸೇರ್ಪಡೆ | ನಾವು ಯಾರಿಗೂ ಆಮಿಷ ಒಡ್ಡಿಲ್ಲ : ಸಂಸದ ಜಿಎಂ ಸಿದ್ದೇಶ್ವರ್
-
ರಾಜಕೀಯ6 days ago
ಗುಜರಾತ್ | ಪಾಲಿಕೆ ಚುನಾವಣೆಯಲ್ಲಿ ಬಿಜೆಪಿಗೆ ಭರ್ಜರಿ ಗೆಲುವು
-
ಬಹಿರಂಗ7 days ago
ಪಾಂಡವರಿಗೂ ಭಾವ, ಕೌರವರಿಗೂ ಭಾವ..!