ದಿನದ ಸುದ್ದಿ
‘ಏರ್ ಸ್ಟ್ರೈಕ್’ ನಲ್ಲಿ ನಿಜಕ್ಕೂ ಉಗ್ರರು ಸತ್ತಿದ್ದಾರ? : ಸಾಕ್ಷಿ ಕೇಳಿದ ವಿಪಕ್ಷ ನಾಯಕರು

ಸುದ್ದಿದಿನ ಡೆಸ್ಕ್ : ಭಾರತೀಯ ವಾಯುಪಡೆಯ ಏರ್ ಸ್ಟ್ರೈಕ್ ಬಗ್ಗೆ ಅನುಮಾನ ಮೂಡಿದ್ದು, 300 ಉಗ್ರರು ಸತ್ತಿದ್ದಾರೆ ಎಂದು ಹೇಳಿದವರಾರು? ಎಂದು ಕೇಂದ್ರ ಸರ್ಕಾರಕ್ಕೆ ಕಾಂಗ್ರೆಸ್ ಹಿರಿಯ ನಾಯಕ ಪಿ. ಚಿದಂಬರಂ ಪ್ರಶ್ನಿಸಿದ್ದಾರೆ.
ಏರ್ ಚೀಫ್ ಮಾರ್ಷಲ್ ಸಾವಿನ ಸಂಖ್ಯೆ ಹೇಳಲು ನಿರಾಕರಿಸಿದ್ದಾರೆ. ಯಾವುದೇ ಹಾನಿ ಉಂಟಾಗಿಲ್ಲ ಎಂದು ವಿದೇಶಾಂಗ ಸಚಿವಾಲಯ ಹೇಳಿದೆ.ಹೀಗಿರುವಾಗ 300-350 ಜನ ಸತ್ತಿದ್ದಾರೆ ಎನ್ನುವ ಲೆಕ್ಕ ಹೇಳಿದವರಾರು? ಎಂದು ಗುಡುಗಿದ್ದಾರೆ.
ದಿಗ್ವಿಜಯ್ ಸಿಂಗ್
ಏರ್ ಸ್ಟ್ರೈಕ್ ಪುರಾವೆ ಎಲ್ಲಿ? ಉಗ್ರರ ಮೇಲಿನ ದಾಳಿಯ ಬಗ್ಗೆ ಪ್ರತಿಪಕ್ಷಗಳು ಪುರಾವೆ ಕೇಳ್ತಿವೆ ಎಂದು ಕೇಂದ್ರ ಸರ್ಕಾರಕ್ಕೆ ‘ಏರ್ ಸ್ಟ್ರೈಕ್’ ಸಾಕ್ಷಿ ಕೇಳಿದ್ದಾರೆ ದಿಗ್ವಿಜಯ್ ಸಿಂಗ್. ಬಿನ್ ಲಾಡೆನ್ ಹತ್ಯೆಗೈದ ಅಮೆರಿಕಾ ಜಗತ್ತಿನ ಮುಂದೆ ಸಾಕ್ಷಿ ಇಟ್ಟಿತ್ತು,ನಾವು ಕೂಡಾ ದಾಳಿಯ ಬಗ್ಗೆ ಜಗತ್ತಿಗೆ ಸಾಕ್ಷಿ ತೋರಿಸಬೇಕು ಎಂದಿದ್ದಾರೆ.
ನವಜೋತ್ ಸಿಂಗ್ ಸಿದ್ದು
ನೆಲಸಮ ಮಾಡಿದ್ದು ಉಗ್ರರನ್ನೋ? ಮರಗಳನ್ನೋ? ನೀವು ನೆಲಸಮ ಮಾಡಿರುವುದು ಉಗ್ರರನ್ನೋ ಅಥವಾ ಮರಗಳನ್ನೋ? ದಾಳಿಯಲ್ಲಿ ಮೃತಪಟ್ಟಿರುವವರ ಸಂಖ್ಯೆ ಎಷ್ಟು? ಕೇಂದ್ರ ಸರ್ಕಾರದ ವಿರುದ್ಧ ನವಜೋತ್ ಸಿಂಗ್ ಟ್ವೀಟ್ ಮಾಡಿದ್ದಾರೆ.
ಇದರ ಉದ್ದೇಶವೇನು? ಇದು ಚುನಾವಣಾ ಗಿಮಿಕ್ ಅಲ್ಲವೇ? ಶತ್ರುಗಳ ವಿರುದ್ಧ ಹೋರಾಡುವಲ್ಲಿ ನಮ್ಮ ನಾಡಿಗೆ ಮೋಸವಾಗಿದೆ. ಸೈನ್ಯವನ್ನು ರಾಜಕೀಯಕ್ಕೆ ಒಳಪಡಿಸುವುದನ್ನು ನಿಲ್ಲಿಸಿ.ಸಿದ್ದು ಟ್ವೀಟ್ ನಲ್ಲಿ ಯಡಿಯೂರಪ್ಪ, ಅಹ್ಲುವಾಲಿಯಾ ಹೇಳಿಕೆ ಪ್ರಸ್ತಾಪಿಸಿದ್ದಾರೆ.
300 terrorist dead, Yes or No?
What was the purpose then? Were you uprooting terrorist or trees? Was it an election gimmick?
Deceit possesses our land in guise of fighting a foreign enemy.
Stop politicising the army, it is as sacred as the state.
ऊंची दुकान फीका पकवान| pic.twitter.com/HiPILADIuW
— Navjot Singh Sidhu (@sherryontopp) March 4, 2019
ಕಪಿಲ್ ಸಿಬಲ್
ವೆಬ್ ಸೈಟ್ ಗಳು ಸುಳ್ಳು ಹೇಳ್ತಾವಾ?
ಉಗ್ರಗಾಮಿ ಸತ್ತಿಲ್ಲ ಎಂದು ಕೆಲ ವೆಬ್ ಸೈಟ್ ಗಳು ವರದಿ ಮಾಡಿದ್ದು,ಉಗ್ರರು ಸತ್ತಿರುವ ಯಾವುದೇ ಪುರಾವೆ ಇಲ್ಲವೆಂದು ಹೇಳಿವೆ.
ಅಂತರಾಷ್ಟ್ರೀಯ ವೆಬ್ ಸೈಟ್ ಸುಳ್ಳು ಹೇಳುತ್ತವೆಯೆ? ಎಂದು ಸಾಕ್ಷಿ ಕೇಳಿದ್ದಾರೆ ಕಾಂಗ್ರೆಸ್ ಹಿರಿಯ ಮುಖಂಡ ಕಪಿಲ್ ಸಿಬಲ್.
ನೀವು ಭಯೋತ್ಪಾದನೆಯನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿದ್ದೀರಿ. ಉಗ್ರರ ಸಾವಿನ ಪುರಾವೆ ನೀಡುವಂತೆ ಕಪಿಲ್ ಸಿಬಲ್ ಟ್ವೀಟ್ ಮಾಡಿದ್ದಾರೆ.
Modiji :
Is international media :
1) New York Times
2) London based Jane's Information Group
3) Washinton Post
4) Daily Telegraph
5) The Guardian
6) Reutersreporting no proof of militant losses at Balakot pro-Pakistan ?
You are guilty of politicising terror ?
— Kapil Sibal (@KapilSibal) March 4, 2019
ಮನೋಜ್ ತಿವಾರಿ
ಅಮಿತ್ ಶಾಗೆ ಮಾಹಿತಿ ಎಲ್ಲಿಂದ ಸಿಕ್ತು ?
ಏರ್ ಚೀಫ್ ಮಾರ್ಷಲ್ ಸಾವಿನ ಸಂಖ್ಯೆ ಗೊತ್ತಿಲ್ಲ ಎಂದಿದ್ದಾರೆ. ಆದರೆ ಅಮಿತ್ ಶಾ ಸಾವಿನ ಸಂಖ್ಯೆ 250 ಅಂತಾ ಹೇಳಿದ್ದಾರೆ.ಅಮಿತ್ ಶಾಗೆ ಮಾಹಿತಿ ಎಲ್ಲಿಂದ ಸಿಕ್ತು ?ಕಾಂಗ್ರೆಸ್ ಮುಖಂಡ ಮನೋಜ್ ತಿವಾರಿ ಪ್ರಶ್ನೆ
ಬಿಜೆಪಿ ರಾಷ್ಟ್ರಧ್ಯಕ್ಷರು ಈ ಬಗ್ಗೆ ಉತ್ತರಿಸಬೇಕು ಎಂದು ಟ್ವೀಟ್ ಮಾಡಿದ್ದಾರೆ.
ಮಮತಾ ಬ್ಯಾನರ್ಜಿ
ಎಲ್ಲಿ,ಎಷ್ಟು ಬಾಂಬ್ಗಳನ್ನು ಹಾಕಲಾಗಿದೆ?
ಏರ್ಸ್ಟ್ರೈಕ್ ಬಗ್ಗೆ ನಮಗೆ ಸಂಪೂರ್ಣ ಮಾಹಿತಿ ಕೊಡುವಂತೆ ಮಮತಾ ಬ್ಯಾನರ್ಜಿ ಆಗ್ರಹಿಸಿದ್ದಾರೆ. ಯಾವ ಪ್ರದೇಶದ ಮೇಲೆ ದಾಳಿ ನಡೆಸಲಾಗಿದೆ? ಎಷ್ಟು ಬಾಂಬ್ಗಳನ್ನು ಉಗ್ರರ ಮೇಲೆ ಹಾಕಲಾಗಿದೆ? ಏರ್ ಸ್ಟ್ರೈಕ್ ನಲ್ಲಿ ಎಷ್ಟು ಉಗ್ರರು ಸಾವನ್ನಪ್ಪಿದ್ದಾರೆ? ವಿದೇಶಿ ಮಾಧ್ಯಮಗಳಲ್ಲಿ ಯಾರು ಮೃತಪಟ್ಟಿಲ್ಲ ಎಂದು ವರದಿಯಾಗಿದೆ. ಈ ಬಗ್ಗೆ ಮಾಹಿತಿ ನೀಡಿ ಎಂದಿದ್ದಾರೆ ಮಮತಾ ಬ್ಯಾನರ್ಜಿ.
ಮೆಹಬೂಬ
ಮಾಹಿತಿ ತಿಳಿದುಕೊಳ್ಳುವುದು ನಮ್ಮ ಹಕ್ಕು
ಏರ್ಸ್ಟ್ರೈಕ್ ಬಗ್ಗೆ ನಮಗೆ ಸಂಪೂರ್ಣವಾದ ಮಾಹಿತಿ ಕೊಡಿ. ಮಾಹಿತಿ ತಿಳಿದುಕೊಳ್ಳುವುದು ನಮ್ಮ ಹಕ್ಕು. ಏರ್ಸ್ಟ್ರೈಕ್ ಮಾಹಿತಿ ನೀಡಿ ಎಂದಿದ್ದಾರೆ ಮುಫ್ತಿ ,ಜಮ್ಮು ಕಾಶ್ಮೀರ ಮಾಜಿ ಸಿಎಂ ಮೆಹಬೂಬಾ.
ಗುಂಡೂರಾವ್
ಸೂಕ್ಷ್ಮತಾ ವಿಚಾರಗಳನ್ನು ಬಿಟ್ಟು ಉಳಿದ ವಿಷಯ ಬಹಿರಂಗಪಡಿಸಲಿ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆಗ್ರಹಿಸಿದ್ದಾರೆ.
ನಮ್ಮ ಸೈನಿಕರ ಕಾರ್ಯ ವೈಖರಿ ಬಗ್ಗೆ ಹೆಮ್ಮೆಯಿದೆ,ಗೌರವವಿದೆ.ಏರ್ ಸ್ಟ್ರೈಕ್ ಕುರಿತು ಮಾಧ್ಯಮಗಳಲ್ಲಿ ಹಲವು ಪ್ರಶ್ನೆಗಳು ಎದ್ದಿವೆ.
ಉಗ್ರರ ಮೇಲಿನ ದಾಳಿ ಬಗ್ಗೆ ಪ್ರಶ್ನೆ ಕೇಳುವುದರಲ್ಲಿ ತಪ್ಪಿಲ್ಲ.ಕುತೂಹಲದಿಂದ ಈ ಪ್ರಶ್ನೆ ಕೇಳಲಾಗುತ್ತಿದೆ ಎಂದಿದ್ದಾರೆ.
ಈ ಎಲ್ಲ ವಿದ್ಯಾಮಾನಗಳ ಹಿನ್ನೆಲೆಯಲ್ಲಿ, ನಾವು ನಮ್ಮ ಗುರಿ ತಲುಪಿದ್ದೀವಿ.ನಿಗದಿ ಪಡಿಸಿದ್ದ ಗುರಿಗಳ ಮೇಲೆ ನಾವು ನಿಖರವಾಗಿ ದಾಳಿ ಮಾಡಿದ್ದೇವೆ ಎಂದು
ವಾಯುಸೇನೆ ಮುಖ್ಯಸ್ಥ ಬಿಎಸ್ ಧನೋವಾ ಸ್ಪಷ್ಟನೆ ನೀಡಿದೆ.
ಸಾವು-ನೋವುಗಳ ಲೆಕ್ಕಾಚಾರ ನಮ್ಮ ಕೆಲಸವಲ್ಲ. ಸಾವು-ನೋವುಗಳ ಲೆಕ್ಕಾಚಾರ ಕೇಂದ್ರ ಸರ್ಕಾರ ನೀಡುತ್ತದೆ. ಅರಣ್ಯದ ಖಾಲಿ ಜಾಗದಲ್ಲಿ ಬಾಂಬ್ ಹಾಕಿಲ್ಲ. ಖಾಲಿ ಜಾಗದಲ್ಲಿ ಬಾಂಬ್ ಹಾಕಿದ್ದರೆ ಅವರೇಕೆ ಇಷ್ಟು ಗಂಭೀರವಾಗುತ್ತಿದ್ರು.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ-ಇತರೆ ಸೌಲಭ್ಯ ಅರ್ಜಿ ಅವಧಿ ವಿಸ್ತರಣೆ

ಸುದ್ದಿದಿನ,ದಾವಣಗೆರೆ :2020-21 ನೇ ಸಾಲಿಗೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಮತ್ತು ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ, ಸೌಲಭ್ಯಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಏಪ್ರಿಲ್ 30 ರವರೆಗೆ ವಿಸ್ತರಿಸಲಾಗಿದೆ.
ಈ ಹಿಂದೆ ಅರ್ಜಿ ಸಲ್ಲಿಸಲು ಏ.20 ಕಡೆಯ ದಿನವೆಂದು ನಿಗದಿಪಡಿಸಲಾಗಿತ್ತು. ಇದೀಗ ಈ ಅವಧಿಯನ್ನು ಏ.30 ರವರಗೆ ವಿಸ್ತರಿಸಲಾಗಿದ್ದು, ಆಸಕ್ತರು ಅರ್ಜಿ ಸಲ್ಲಿಸಲು ವೆಬ್ಸೈಟ್ www.ssp.postmatric.karnataka.gov.in ,ಕಾರ್ಯಕ್ರಮದ ವಿವರ, ಹಾಗೂ ಹೆಚ್ಚಿನ ವಿವರಗಳಿಗೆ https://bcwd.karnataka.gov.in : [email protected] ತಂತ್ರಾಂಶ ದೋಷಗಳು ಮತ್ತು ಇತರೆ ಮಾಹಿತಿಗೆ[email protected]
ದೂರವಾಣಿ ಸಂಖ್ಯೆ 8050770005/8050770004/ 080-35254757 ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಎಸ್.ಆರ್.ಗಂಗಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ| ವಾಟ್ಸಾಪ್ | 9980346243

ದಿನದ ಸುದ್ದಿ
ಹಳೇ ಕುಂದುವಾಡ ಮನಾ ಯುವ ಬ್ರಿಗೇಡ್, ಜರವೇ ನಾಲ್ಕನೇ ವಾರ್ಷಿಕೋತ್ಸವ | ಯುವಕರ ಸಮಾಜ ಮುಖಿ ಕೆಲಸಗಳು ಉತ್ತಮ ನಾಯಕತ್ವಕ್ಕೆ ಬುನಾದಿ : ಮೇಯರ್ ಎಸ್.ಟಿ.ವೀರೇಶ್

ಸುದ್ದಿದಿನ,ದಾವಣಗೆರೆ : ಯುವಕರು ಸಮಾಜ ಮುಖಿ ಕೆಲಸದಲ್ಲಿ ತೊಡಗಿಸಿಕೊಂಡರೆ ಉತ್ತಮ ನಾಯಕರು ಆಗಲು ಅದು ಬುನಾದಿ ಆಗುತ್ತದೆ ಎಂದು ಮೇಯರ್ ಎಸ್ ಟಿ ವೀರೇಶ್ ತಿಳಿಸಿದರು.
ನಗರದ ಹಳೇ ಕುಂದುವಾಡದಲ್ಲಿ ಮನಾ ಯುವ ಬ್ರಿಗೇಡ್, ಜರವೇ ನಾಲ್ಕನೇ ವಾರ್ಷಿಕೋತ್ಸವ ಅಂಗವಾಗಿ ಹಮ್ಮಿಕೊಂಡಿದ್ದ ಸಾಧಕರಿಗೆ ಸನ್ಮಾನ, ಕುಂದುವಾಡ ಯುವ ರತ್ನ ಪ್ರಶಸ್ತಿ, ಕೆಎಪಿಎಲ್ ಬಹುಮಾನ ವಿತರಣಾ ಸಮಾರಂಭದಲ್ಲಿ ಮಾತನಾಡಿದ ಅವರು, ಇಂದಿನ ಸಮಯದಲ್ಲಿ ಯುವಕರು ಬೇರೆ ಬೇರೆ ದಾರಿ ಕಡೇ, ದುಶ್ಚಟಗಳಿಗೆ ಬಲಿಯಾಗುತ್ತಿದ್ದಾರೆ, ಸಾಮಾಜಿಕ ಸೇವೆಗಳು, ಸಹಾಯ ಹಸ್ತ ಚಾಚುವಂತ ಯುವ ಮನಸ್ಸುಗಳು ಸಿಗುವುದೇ ವಿರಳವಾಗಿದೆ.
ಇಂತಹ ಕಾಲದಲ್ಲಿ ಮನಾ ಯುವ ಬ್ರಿಗೇಡ್ ಯುವಕರು, 44 ನೇ ವಾರ್ಡಿನಲ್ಲಿ ಅತ್ಯುತ್ತಮ ಸಾಮಾಜಿಕ ಸೇವೆ ಮಾಡುವ ಮೂಲಕ ಜವಾಬ್ದಾರಿ ಹೆಚ್ಚಿಸಿಕೊಂಡಿದ್ದಾರೆ.. ಯಾವುದೇ ಸಮಾಜ ಸೇವೆಗಳು ಮಾಡಬೇಕೆಂದರು ಸವಾಲುಗಳು ಜಾಸ್ತಿ, ಎಲ್ಲಾ ಸವಾಲು ಮೆಟ್ಟಿನಿಂತು ಯುವಕರು ಸಮಾಜ ಸೇವೆಗಳಲ್ಲಿ ತೊಡಗಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಕಾರ್ಮಿಕ ಮುಖಂಡ ದಿ. ಜೆಎಂ ಹನುಮಂತಪ್ಪ ಅವರಿಗೆ ಮರಣೋತ್ತರ ಕುಂದುವಾಡ ರತ್ನ ಪ್ರಶಸ್ತಿ ಹಾಗೂ ಸಿಆರ್ ಪಿಎಫ್ ಯೋಧ ಆನಂದ್ ಎಸ್ ಎಚ್, ಎಸ್ ಎಸ್ ಬಿ ಯೋಧ ಭರ್ಮಪ್ಪ, ಸಮಾಜ ಸೇವಕ ರಾಜು ಕರೂರು ಅವರಿಗೆ ಕುಂದುವಾಡ ಯುವ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಜೊತೆಗೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಮಾಜ ಸೇವಕರಿಗೆ ಸನ್ಮಾನಿಸಿ ಗೌರವಿಸಲಾಯಿತು, ಕೆಪಿಎಲ್ ಚಾಂಪಿಯನ್ ಪವರ್ ಫೈಟರ್ಸ್ ತಂಡಕ್ಕೆ ಟ್ರೋಫಿ ವಿತರಿಸಲಾಯಿತು..
ಈ ಸಂದರ್ಭದಲ್ಲಿ ವರ್ತಕರಾದ ರಾಘವೇಂದ್ರ ಎನ್ ದಿವಾಕರ್, ಪಾಲಿಕೆ ಮಾಜಿ ಸದಸ್ಯ ಹೆಚ್ ತಿಪ್ಪಣ್ಣ, ಮುಖಂಡರಾದ ಬಾಡದ ಆನಂದರಾಜ್, ನಾಗಭೂಷಣ್ ವಾಣಿ, ಮಿಟ್ಲಕಟ್ಟೆ ಚಂದ್ರಪ್ಪ, ಶಿವಪ್ಪ, ಜೆಸಿ ದೇವರಾಜ್, ಎನ್ ಟಿ ನಾಗರಾಜ್, ಸಣ್ಣಿಂಗಪ್ಪ, ಮಂಜಪ್ಪ, ಗಿರೀಶ್ ದೇವರಮನೆ, ಪತ್ರಕರ್ತ ಮಧುನಾಗರಾಜ್ ಕುಂದುವಾಡ ಸೇರಿದಂತೆ ಮತ್ತಿತರರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಿಘಂಟು ತಜ್ಞ ಫ್ರೊ.ಜಿ.ವೆಂಕಟಸುಬ್ಬಯ್ಯ ನಿಧನ

ಸುದ್ದಿದಿನ, ಬೆಂಗಳೂರು : ನಾಡಿನ ಖ್ಯಾತ ಸಂಶೋದಕ, ನಿಘಂಟು ತಜ್ಞ ಫ್ರೊ.ಜಿ.ವೆಂಕಟಸುಬ್ಬಯ್ಯ ಅವರು ಸೋಮವಾರ ರಾತ್ರಿ 1.15 ರ ವೇಳೆಗೆ ತಮ್ಮ ವಯೋ ಸಹಜ ಕಾರಣಗಳಿಂದ 108 ನೇ ವಯಸ್ಸಿನಲ್ಲಿ ನಿಧನರಾದರು.
ನಾಡೋಜ ಪ್ರೊ. ಜಿ. ವೆಂಕಟಸುಬ್ಬಯ್ಯ ಅವರು ಖ್ಯಾತ ವಿದ್ವಾಂಸರು ಹಾಗೂ ಜನಪ್ರಿಯ ಪ್ರಾಧ್ಯಾಪಕರು. ಪ್ರೊ. ಜಿ. ವೆಂಕಟಸುಬ್ಬಯ್ಯ ಅವರು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಸುವರ್ಣ ಪದಕದೊಡನೆ ಎಂ.ಎ. ಪದವಿ, ನಂತರ ಬಿ.ಟಿ. ಪದವಿ ಗಳಿಕೆ. ಮಹಾರಾಜ ಕಾಲೇಜಿನಲ್ಲಿ ಉಪನ್ಯಾಸಕರಾಗಿ ವೃತ್ತಿಯನ್ನು ಆರಂಭಿಸಿ, ನಂತರ ಬೆಂಗಳೂರಿನ ವಿಜಯಾ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ, ಪ್ರಿನ್ಸಿಪಾಲರಾಗಿ, ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದರು.
ಕನ್ನಡ ಸಾಹಿತ್ಯ ಪರಿಷತ್ತಿನ ಕನ್ನಡ-ಕನ್ನಡ ನಿಘಂಟುವಿನ ಪ್ರಧಾನ ಸಂಪಾದಕರಾಗಿ ಸೇವೆ ಸಲ್ಲಿಕೆ. ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ, ಕನ್ನಡ ಸಾಹಿತ್ಯ ಪರಿಷತ್ತಿಗೆ ಅಖಿಲ ಕರ್ನಾಟಕ ವ್ಯಾಪ್ತಿಯನ್ನು ತಂದುಕೊಟ್ಟ ಹಿರಿಮೆ ಶ್ರೀಯುತರದು.
ನಡೆದಾಡುವ ನಿಘಂಟು, ಶಬ್ಧ ಬ್ರಹ್ಮ ಎಂದು ಜನಜನಿತರಾಗಿರುವ ಶ್ರೀಯುತರು ಸಾಹಿತ್ಯ ವಿಮರ್ಶೆ, ಸಂಶೋಧನೆ, ಅನುವಾದ, ನಿಘಂಟು ರಚನೆ ಕ್ಷೇತ್ರಗಳಲ್ಲಿ ಅಪಾರ ಸೇವೆ ಸಲ್ಲಿಕೆ. 50ಪುಸ್ತಕಗಳನ್ನು, 14 ನಿಘಂಟುಗಳನ್ನು ಪ್ರಕಟಗೊಳಿಸಿರುವುದಲ್ಲದೆ ‘ಇಗೋ ಕನ್ನಡ’ ಎಂಬ ಅಂಕಣದಿಂದ ನಾಡಿನಲ್ಲಿ ಮನೆಮಾತಾಗಿದ್ದಾರೆ.
ನಿಘಂಟು ಪರಿವಾರ, ಅಕ್ರೂರ ಚರಿತ್ರೆ (ಸಂಪಾದನೆ), ಇಗೋ ಕನ್ನಡ (ಸಾಮಾಜಿಕ ನಿಘಂಟು), ಗತಿ ಪ್ರಜ್ಞೆ, ಕನ್ನಡವನ್ನು ಉಳಿಸಿ ಬೆಳೆಸಿದವರು, ಅನುಕಲ್ಪನೆ, ಕರ್ಣ ಕರ್ಣಾಮೃತ ಮುಂತಾದವು ಪ್ರಮುಖ ಕೃತಿಗಳು. ಹಲವಾರು ಶಿಕ್ಷಕ ತರಬೇತಿ ಕಾಲೇಜುಗಳಲ್ಲಿ ಆಹ್ವಾನಿತ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿರುವ ಶ್ರೀಯುತರ ಪಾಂಡಿತ್ಯಕ್ಕೆ ಸಂದ ಪ್ರಶಸ್ತಿ ಪುರಸ್ಕಾರಗಳು ಹಲವಾರು.
ಅವುಗಳಲ್ಲಿ ವಿದ್ಯಾಲಂಕಾರ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ, ಶಂಬಾ ಪ್ರಶಸ್ತಿ, ಸೇಡಿಯಾಪು ಪ್ರಶಸ್ತಿ, ಕಾಯಕ ಪ್ರಶಸ್ತಿ, ಪತ್ರಿಕಾ ಅಕಾಡೆಮಿ ವಿಶೇಷ ಪ್ರಶಸ್ತಿ, ಮಾಸ್ತಿ ಪ್ರಶಸ್ತಿ, ಹಂಪಿ ವಿಶ್ವವಿದ್ಯಾನಿಲಯದ ನಾಡೋಜ ಪ್ರಶಸ್ತಿ, ಅಂತರಾಷ್ಟ್ರೀಯ ನಿಘಂಟು ಸಮ್ಮೇಳನಗಳಿಗೆ ಆಹ್ವಾನ ಮುಂತಾದವು ಮುಖ್ಯವಾದವು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಬಹಿರಂಗ7 days ago
ಸಂವಿಧಾನ ನಿತ್ಯದ ಪಾಠವಾಗಲಿ..!
-
ಅಂತರಂಗ7 days ago
ಮಹಾ ಮಾನವತಾವಾದಿ ಅಂಬೇಡ್ಕರ್ ನೆನಪಿನಲ್ಲಿ..!
-
ಭಾವ ಭೈರಾಗಿ6 days ago
ಕವಿತೆ | ಯುಗಾದಿ ಪುರುಷ
-
ಲೈಫ್ ಸ್ಟೈಲ್5 days ago
ತರಕಾರಿ ಸಿಪ್ಪೆಯಿಂದ ಪೇಪರ್ ತಯಾರಿಸಿದ ಹತ್ತರ ಬಾಲೆ ಮಾನ್ಯ ಹರ್ಷ..!
-
ನಿತ್ಯ ಭವಿಷ್ಯ7 days ago
ಈ ರಾಶಿಯವರಿಗೆ ಶುಭಕಾರ್ಯ ನೆರವೇರಲಿದೆ..! ಬುಧವಾರ- ರಾಶಿ ಭವಿಷ್ಯ ಏಪ್ರಿಲ್-14,2021
-
ನಿತ್ಯ ಭವಿಷ್ಯ7 days ago
ಜನ್ಮ ಕುಂಡಲಿಯಲ್ಲಿ ಈ ಗ್ರಹಗಳು ಇದ್ದರೆ ಆಗರ್ಭ ಶ್ರೀಮಂತರು ; ಧನ ಯೋಗ ಪ್ರಾಪ್ತಿ
-
ನಿತ್ಯ ಭವಿಷ್ಯ6 days ago
ಈ ರಾಶಿಯವರು ಹೊಸ ಮನೆ ನಿರ್ಮಾಣ ಮಾಡಿ,ಮದುವೆ ಕಾರ್ಯ ಮಾಡುವಿರಿ..! ಗುರುವಾರ- ರಾಶಿ ಭವಿಷ್ಯ ಏಪ್ರಿಲ್-15,2021
-
ನಿತ್ಯ ಭವಿಷ್ಯ5 days ago
ಈ ರಾಶಿಯವರು ಕುಟುಂಬ ಸದಸ್ಯರೊಂದಿಗೆ “ಸಂತಾನದ” ಸಿಹಿಸುದ್ದಿ ಕೇಳಿ ಸಂತಸ ಹಂಚಿಕೊಳ್ಳುವಿರಿ! ಶುಕ್ರವಾರ-ಏಪ್ರಿಲ್-16,2021