Connect with us

ನೆಲದನಿ

ರಂಗ ದಾಸೋಹಿ ಪ್ರಭು ಗುರಪ್ಪನವರ : ಬದುಕು ಮತ್ತು ಹೋರಾಟದ ನಡುವೆ

Published

on

ಮಾನವನ ಉಗಮದೊಂದಿಗೆ ರಂಗಭೂಮಿಯ ನಂಟು ನಿರಂತರವಾಗಿ ನಡೆದುಕೊಂಡು ಬಂದಿದೆ. ಮಾನವನ ವಿಕಾಸವಾದಂತೆ ರಂಗಭೂಮಿಯೂ ಆಯಾ ಕಾಲಕ್ಕೆ ತಕ್ಕಂತೆ ತನ್ನ ಗುಣ ಮತ್ತು ಸ್ವರೂಪಗಳಲ್ಲಿ ಬದಲಾವಣೆಯನ್ನು ಪಡೆದುಕೊಂಡು ಸಾಗಿದೆ. ನಮಗೆ ರಂಗಭೂಮಿ ಎಂದ ತಕ್ಷಣ ನಾಟಕ, ಅಭಿನಯ ಮುಂತಾದ ಸನ್ನಿವೇಶಗಳು ಎದುರಾಗುತ್ತವೆ. ಆದರೆ ತೆರೆಮರೆಯಲ್ಲಿ ನಿಂತು ರಂಗಭೂಮಿಯನ್ನು ಕಟ್ಟಿ ಬೆಳೆಸಿದ ಬಹುತೇಕ ಸಾಧಕರು ಎಲೆ ಮರೆಯಂತಾಗುತ್ತಾರೆ. ಇಂತಹ ರಂಗಭೂಮಿ ತಪಸ್ವಿ ಹಾಗೂ ಹೋರಾಟಗಾರರಲ್ಲಿ ಶೇಷಗಿರಿಯ ಪ್ರಭು ಗುರಪ್ಪನವರು ಒಬ್ಬರಾಗಿದ್ದಾರೆ.

ಹಾವೇರಿ ಜಿಲ್ಲೆ. ಹಾನಗಲ್ ತಾಲ್ಲೂಕಿನ ಶೇಷಗಿರಿ ಎಂಬ ಪುಟ್ಟ ಗ್ರಾಮದಲ್ಲಿ ಶ್ರೀ ಸಿದ್ಧಪ್ಪ ಗುರಪ್ಪನವರ ಹಾಗೂ ಶ್ರೀಮತಿ ಅನಸಮ್ಮ ಗುರಪ್ಪನವರ ಪುತ್ರನಾಗಿ ಜನಿಸಿದ ಪ್ರಭು ಗುರಪ್ಪನವರ ಅವರು ಪಿ.ಯು.ಸಿ ವರೆಗೆ ಶಿಕ್ಷಣವನ್ನು ಪಡೆದು, ನಂತರದ ದಿನಗಳಲ್ಲಿ ಸ್ವಗ್ರಾಮದಲಿ ಪೋಸ್ಟ್ ಮಾಸ್ತರ್ ವೃತ್ತಿಯನ್ನು ಕೈಗೊಂಡರು. ಈ ವೃತ್ತಿಯ ಜೊತೆ ಜೊತೆಯಲ್ಲಿಯೇ ಸಾಮಾಜಿಕ ಜಾಗೃತಿ, ಹೋರಾಟ ಹಾಗೂ ರಂಗಭೂಮಿಯಲ್ಲಿ ತಮ್ಮನ್ನು ತೊಡಗಿಸಿಕೊಂಡು ಬಂದರು. ಇವರಿಗೆ ರಂಗಭೂಮಿಯ ನಂಟು ಬಾಲ್ಯದ ದಿನಗಳಿಂದಲೂ ಪ್ರಭಾವ ಬೀರಿತ್ತು. ಪ್ರಾಥಮಿಕ ಹಾಗೂ ಪ್ರೌಢಶಾಲಾ ಹಂತದಲ್ಲಿಯೇ ಕೆಲವು ನಾಟಕಗಳಲ್ಲಿ ಅಭಿನಯಿಸುವ ಮೂಲಕವಾಗಿ ಅಭಿನಯ ಕಲೆಯನ್ನು ಕರಗತ ಮಾಡಿಕೊಂಡಿದ್ದರು. ಹೀಗಾಗಿ ಇದು ಮುಂದಿನ ದಿನಗಳಲ್ಲಿ ಇವರನ್ನು ರಂಗಭೂಮಿಯತ್ತ ಮುನ್ನಡೆಸಲು ಪ್ರಚೋದಕ ಶಕ್ತಿಯಾಗಿ ಕಾರ್ಯನಿರ್ವಹಿಸಿತು. ಸಾಮಾಜಿಕ ಅರಿವು ಮೂಡಿಸುವಂತಹ ಬೀದಿ ನಾಟಕಗಳು ಹಾಗೂ ಸಾಮಾಜಿಕ ನಾಟಕಗಳು ಇವರ ಮೇಲೆ ಸಾಕಷ್ಟು ಪ್ರಭಾವ ಬೀರಿದ್ದವು. ಇದರ ಪರಿಣಾಮವಾಗಿ ವೀರಭದ್ರಪ್ಪ ಬಡಿಗೇರ್ ಎಂಬ ನಾಟಕ ಮಾಸ್ತರರ ಒತ್ತಾಸೆಯಿಂದ ಪ್ರಥಮ ಬಾರಿಗೆ ‘ದೀಪಾವಳಿ’ ಎಂಬ ನಾಟಕದಲ್ಲಿ ಪ್ರದರ್ಶನ ನೀಡಿ ಜನ ಮೆಚ್ಚುಗೆಯನ್ನು ಗಳಿಸಿದರು. ಹೀಗೆ ಪ್ರಾರಂಭವಾದ ಇವರ ನಾಟಕ ಯಾತ್ರೆಯು ಹಲವಾರು ನಾಟಕ ಪ್ರಕಾರಗಳಲ್ಲಿ ಇವರನ್ನು ತಲ್ಲಿನಗೊಳಿಸಿತು.

ಶ್ರೀಯುತ ಪ್ರಭು ಗುರಪ್ಪನವರು ನಾಟಕ ಪ್ರಕಾರವನ್ನು ಕೇವಲ ಹವ್ಯಾಸ ಹಾಗೂ ಮನರಂಜನೆಯ ಮಾಧ್ಯಮವಾಗಿ ಸ್ವೀಕರಿಸಲಿಲ್ಲ. ಆ ಮೂಲಕ ಸಾಮಾಜಿಕ ಜಾಗೃತಿ ಹಾಗೂ ಸಾಮಾನ್ಯ ಜನತೆಗೆ ಅರಿವು ಮೂಡಿಸುವ ಮಾಧ್ಯಮವಾಗಿ ಗುರುತಿಸಿಕೊಂಡರು. ತಮ್ಮ ವಿದ್ಯಾಭ್ಯಾಸ ಮುಗಿಸಿ ಸ್ವಗ್ರಾಮಕ್ಕೆ ಮರಳಿದ ತರುವಾಯ 1983 ರಲ್ಲಿ ಪೋಸ್ಟ್ ಮಾಸ್ತರ್ ಹುದ್ಧೆಗೆ ಸೇರಿಕೊಂಡರು. ಇಲ್ಲಿಂದ ಆರಂಭವಾದ ಇವರ ಸೇವೆಯು, ಸಾಮಾಜಿಕ ಸೇವೆಯ ಜೊತೆ ಜೊತೆಯಲ್ಲಿಯೇ ನಾಟಕದ ಯಾತ್ರೆಯು ಆರಂಭವಾಯಿತು. ತಮ್ಮ ಗ್ರಾಮದ ಕೆಲವರ ಹಿತಾಸಕ್ತಿಗೆ ಬಲಿಯಾಗಿ ಸಾಮಾನ್ಯ ಜನತೆಯು ಹಲವಾರು ಶೋಷಣೆಗೆ ಒಳಗಾಗಿದ್ದರು. ಹಾಗೆಯೇ ಇಲ್ಲಿನ ಬಸವೇಶ್ವರ ದೇವಾಲಯದ ಜಾತ್ರೆಯು ಸ್ಥಗಿತಗೊಂಡಿತ್ತು. ಪ್ರಥಮ ಭಾರಿಗೆ ಈ ಗ್ರಾಮದ ಯುವಜನತೆಯನ್ನು ಒಟ್ಟುಗೂಡಿಸಿ ಜಾತ್ರೆಗೆ ಚಾಲನೆ ನೀಡಿದರು. ಆ ಮೂಲಕವಾಗಿ ಗ್ರಾಮದ ಜನತೆಯಲ್ಲಿ ಐಕ್ಯತೆ ಹಾಗೂ ಹೋರಾಟದ ಕೆಚ್ಚು ಮೂಡಿಸಿದರು. ತಮ್ಮ ಗ್ರಾಮದಲ್ಲಿ ಮೊದಲ ಭಾರಿಗೆ ಗಣೇಶ ಚೌತಿಯನ್ನು ಕೂರಿಸುವ ಮೂಲಕ ಯುವಜನತೆಯ ಸಹಕಾರದಿಂದ ಗ್ರಾಮದ ರಸ್ತೆ ನಿರ್ಮಾಣ, ಗಿಡ ನೆಡುವುದು ಇತ್ಯಾದಿ ಜನಪರ ಯೋಜನೆಗಳನ್ನು ಕೈಗೊಂಡರು. ನಂತರ 1986 ರಲ್ಲಿ ‘ಗಜಾನನ ಯುವಕ ಮಂಡಳ’ವನ್ನು ಸ್ಥಾಪಿಸುವ ಮೂಲಕವಾಗಿ ಮತ್ತಷ್ಟು ಜನಪರ ಯೋಜನೆಗಳನ್ನು ಕೈಗೊಂಡು ಜನತೆಯ ಮೂಲಭೂತ ಸೌಕರ್ಯಗಳಿಗೆ ಅಗತ್ಯವಾದ ಶಾಲೆ, ದವಾಖಾನೆ, ಬ್ಯಾಂಕ್‍ಗಳನ್ನು ತೆರೆಯುವತ್ತ ತಮ್ಮ ಹೋರಾಟವನ್ನು ಮುಂದುವರೆಸಿ ಯಶಸ್ವಿಯಾದರು. ಇದರ ಜೊತೆಯಲ್ಲಿ ಬಡ ಜನತೆಗೆ ಅಗತ್ಯವಾದ ಸಾಲ ಸೌಲಭ್ಯ, ನಿರಾವರಿ ಯೋಜನೆಗಳನ್ನು ಅನುಷ್ಟಾನಗೊಳಿಸುವಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದರು. ಹೀಗೆ ಸಾಮಾಜಿಕ ಹೋರಾಟಗಳ ಜೊತೆಯಲ್ಲಿ ತಮ್ಮ ಕನಸಿನ ಕೂಸಾದ ರಂಗಭೂಮಿಗೆ ಶಾಶ್ವತವಾದ ವೇದಿಕೆಯನ್ನು ನಿರ್ಮಿಸುವಲ್ಲಿ ಮಹತ್ತರ ಪಾತ್ರವನ್ನು ನಿರ್ವಹಿಸಿದ ಕೀರ್ತಿ ಶ್ರೀಯುತರಿಗೆ ಸಲ್ಲುತ್ತದೆ.

ಗಜಾನನ ಯುವಕ ಮಂಡಳದ ಅಡಿಯಲ್ಲಿ ಹಲವಾರು ಯುವಜನ ಸಾಂಸ್ಕøತಿಕ ಕಾರ್ಯಕ್ರಮಗಳಲ್ಲಿ ಸ್ಪರ್ಧಿಸಿ ಹಲವಾರು ಭಾರಿ ಚಾಂಪಿಯನ್ ಪಟ್ಟವನ್ನು ತಮ್ಮದಾಗಿಸಿಕೊಂಡಿದ್ದಾರೆ. ಹಾಗೆಯೇ ಈ ಮಂಡಳದ ಸಹಕಾರದಲ್ಲಿ ಶಾಲಾ ಮಕ್ಕಳಿಗೆ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಏರ್ಪಡಿಸುವ ಮೂಲಕವಾಗಿ ಮಕ್ಕಳಲ್ಲಿ ಅಂತರ್ಗತವಾಗಿರುವ ಕಲೆಯನ್ನು ಗುರುತಿಸುವಂತಹ ಹಲವಾರು ಕಾರ್ಯಕ್ರಮಗಳನ್ನು ನೆರವೇರಿಸಿಕೊಂಡು ಬಂದಿದ್ದಾರೆ. 1990 ರಿಂದ ಹೆಸರಾಂತ ಸಾಹಿತಿಗಳು, ಚಿಂತಕರು ಆದ ಸತೀಶ್ ಕುಲಕರ್ಣಿಯವರ ಸಹಕಾರ ಪಡೆದು ಹಲವಾರು ವಿಶಿಷ್ಟ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬಂದಿರುತ್ತಾರೆ. ಶ್ರೀಯುತ ಪ್ರಭು ಗುರಪ್ಪನವರು ತಮ್ಮ ರಂಗಭೂಮಿಯ ವ್ಯಾಮೋಹದ ಫಲವಾಗಿ 1992 ರಲ್ಲಿ ‘ನಿನಾಸಂ’ ರಂಗ ಶಿಬಿರದಲ್ಲಿ ಪಾಲ್ಗೊಂಡು, ಅಲ್ಲಿ ಪ್ರದರ್ಶನಗೊಂಡ ‘ತಲೆದಂಡ’ ಮತ್ತು ‘ಸಂಗ್ಯಾಬಾಳ್ಯಾ’ ನಾಟಕಗಳಿಂದ ಪ್ರಭಾವಿತರಾಗಿ ನಾವು ಕೂಡ ಇದೆ ತರಹದ ನಾಟಕಗಳನ್ನು ಪ್ರದರ್ಶಿಸಬೇಕು ಎಂಬ ಹಠವೊತ್ತು ಬಂದರು. ಹಾಗೆಯೇ ಇದಕ್ಕೆ ಪೂರಕವಾದ ಕಲಾಕ್ಷೇತ್ರವನ್ನು ನಿರ್ಮಿಸಬೇಕೆಂಬ ಮಹಾದಾಸೆಯನ್ನು ಹೊತ್ತು ಬಂದರು. ಇವರಲ್ಲಿ ಒಡಮೂಡಿದ ಈ ಕನಸಿಗೆ ಹಲವಾರು ಗ್ರಾಮಸ್ಥರು ಹಾಗೂ ಕೆಲವು ರಾಜಕಾರಣಿಗಳು ಯಾವುದೇ ಫಲಾಪೇಕ್ಷೆ ಇಲ್ಲದೆ ಸಹಕಾರ ನೀಡಿದರು. ಈ ಎಲ್ಲರನ್ನು ಒಟ್ಟುಗೂಡಿಸುವ ಮೂಲಕವಾಗಿ, ಡಾ. ಶ್ರೀಪಾದಭಟ್ಟ್ ಅವರ ಸಹಕಾರ ಮತ್ತು ನಿರ್ದೇಶನದಲ್ಲಿ ಹಲವಾರು ಸಾಮಾಜಿಕ ಹಾಗೂ ಪೌರಾಣಿಕ ನಾಟಕಗಳನ್ನು ಪ್ರದರ್ಶನ ನೀಡುತ್ತ ಬಂದಿದ್ದಾರೆ. ಹಾಗೆಯೇ ಸುಸಜ್ಜಿತ ರಂಗಭೂಮಿಗೆ ಅಗತ್ಯವಾದ ಜಮೀನು ಖರೀದಿಸಿ ಕೋಟ್ಯಾಂತರ ರೂಪಾಯಿ ವೆಚ್ಚದಲ್ಲಿ 2010 ರಲ್ಲಿ ‘ಸಿ.ಎಂ ಉದಾಸಿ ಕಲಾಕ್ಷೇತ’್ರವನ್ನು ನಿರ್ಮಿಸುವ ಮೂಲಕವಾಗಿ ದೇಶ ಮಾತ್ರವಲ್ಲದೆ, ವಿದೇಶಿ ರಂಗಾಸಕ್ತರನ್ನು ಕೂಡ ತಮ್ಮ ಗ್ರಾಮದತ್ತ ಸೆಳೆದ ಕೀರ್ತಿಯು ಪ್ರಭು ಗುರಪ್ಪನವರದಾಗಿದೆ. ಈ ಕಲಾಕ್ಷೇತ್ರದಲ್ಲಿ ದೂರದಿಂದ ಬರುವ ಕಲಾವಿದರಿಗೆ ತಂಗಲು ಬೇಕಾದ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವಲ್ಲಿ ಶ್ರೀಯುತ ಪಾತ್ರ ಮಹತ್ತರವಾದುದಾಗಿದೆ. ಇಲ್ಲಿಗೆ ಬರುವ ಕಲಾವಿದರು ಹಾಗೂ ರಂಗಾಸಕ್ತರಿಗೆ ಉಚಿತ ಊಟ ಮತ್ತು ವಸತಿ ನೀಡುವ ಮೂಲಕವಾಗಿ ತಮ್ಮ ಸೇವೆಯನ್ನು ಮುಂದುವರೆಸಿಕೊಂಡು ಬಂದಿದ್ದಾರೆ. ಶ್ರೀಯುತ ಗಜಾನನ ಯುವಜನ ಮಂಡಳದ ಅಡಿಯಲ್ಲಿ ಪ್ರದರ್ಶನಗೊಂಡ ನಾಟಕಗಳು ಹಲವಾರು ಪ್ರತಿಷ್ಠಿತ ಪ್ರಶಸ್ತಿಯನ್ನು ತಮ್ಮ ಮುಡಿಗೇರಿಸಿಕೊಂಡಿವೆ. ಸಮುದಾಯದ ಅಡಿಯಲ್ಲಿ ಪ್ರದರ್ಶನಗೊಂಡ ‘ನ್ಯಾಯದ ಬಾಗಿಲು’ ನಾಟಕಕ್ಕೆ ರಾಜ್ಯ ಪ್ರಶಸ್ತಿಯು ಲಭಿಸಿರುತ್ತದೆ. 

ಶ್ರೀಯುತ ಪ್ರಭು ಗುರಪ್ಪನವರದು ಬಹುಮುಖಿ ವ್ಯಕ್ತಿತ್ವದ ಪ್ರತಿಭೆ. ಇವರು ವೃತ್ತಿಯಲ್ಲಿ ಪೋಸ್ಟ್ ಮಾಸ್ತರರಾದರೂ ಸಾಮಾಜಿಕ ಹೋರಾಟಗಳಲ್ಲಿ ನಿಸ್ವಾರ್ಥ ನೆಲೆಯಲ್ಲಿ ತಮ್ಮನ್ನು ಅರ್ಪಿಸಿಕೊಂಡವರು. ಹಾಗೆಯೇ ನಾಟಕ ಕಲಾವಿದರು, ನಾಟಕ ರಚನಕಾರರು, ನಿರ್ದೇಶಕರಾಗಿ ಮಾತ್ರವಲ್ಲದೆ ರಂಗಾಸಕ್ತರಾಗಿಯು ಈ ಕ್ಷೇತ್ರದಲ್ಲಿ ಕೃಷಿಗೈದಿದ್ದಾರೆ. ಇವರು ಹಲವಾರು ನಾಟಕಗಳಲ್ಲಿ ನಟರಾಗಿ, ನಿರ್ದೇಶಕರಾಗಿ ತಮ್ಮ ಸೇವೆಯನ್ನು ಸಲ್ಲಿಸಿದ್ದಾರೆ. ಇವರ ಈ ಸೇವೆಗೆ ಕರ್ನಾಟಕ ನಾಟಕ ಅಕಾಡೆಮಿಯಿಂದ 2005-06ನೇ ಸಾಲಿನ ‘ನಾಟಕ ಅಕಾಡೆಮಿ ಪ್ರಶಸ್ತಿ’ ಲಭಿಸಿದೆ. ಅತ್ಯಂತ ಕಡಿಮೆ ವಯಸ್ಸಿಗೆ ನಾಟಕ ಅಕಾಡೆಮಿ ಪ್ರಶಸ್ತಿ ಪಡೆದ ಕೀರ್ತಿಯು ಶ್ರೀಯುತರದಾಗಿರುತ್ತದೆ. ಶ್ರೀಯುತರು ಸ್ಥಾಪನೆ ಮಾಡಿದ ಗಜಾನನ ಮಂಡಳದಲ್ಲಿ ಪ್ರಸ್ತುತದಲ್ಲಿ ನಾಲ್ಕು ತಲೆಮಾರುಗಳು ನಿರ್ಮಾಣವಾಗಿವೆ. ಈ ಎಲ್ಲರನ್ನು ಆಯಾ ಕಾಲಕ್ಕೆ ತಕ್ಕಂತೆ ಸಿದ್ಧಗೊಳಿಸಿ ಮುನ್ನಡೆಸಿದ ಕೀರ್ತಿ ಶ್ರೀಯುತರಿಗೆ ಸಲ್ಲುತ್ತದೆ.

ಶ್ರೀಯುತ ಈ ರಂಗ ಯಾತ್ರೆಗೆ ಹಲವಾರು ಮಹನೀಯರು ಬೆನ್ನೆಲುಬಾಗಿ ನಿಂತಿದ್ದಾರೆ. ಈ ಊರಿನ ಗ್ರಾಮಸ್ಥರು, ಯುವಜನತೆ, ಶ್ರೀಪಾದಭಟ್ಟರು, ಪ್ರಾಚಾರ್ಯರಾಗಿಯೂ ತಮ್ಮ ಬಿಡುವಿನ ವೇಳೆಯನ್ನು ರಂಗಕ್ಷೇತ್ರಕ್ಕೆ ಮುಡುಪಾಗಿಟ್ಟಿರುವ ನಾಗರಾಜ್ ಧಾರೇಶ್ವರ್ ಹಾಗೂ ಸಿದ್ಧಪ್ಪ ರೊಟ್ಟಿಯಂತವರ ಸಹಕಾರವು ಇವರನ್ನು ಈ ಕ್ಷೇತ್ರದಲ್ಲಿ ಮತ್ತಷ್ಟು ಕ್ರಿಯಾಶೀಲಗೊಳಿಸಲು ಪ್ರಚೋದನೆಯನ್ನು ನೀಡುತ್ತಿದೆ. ಶ್ರೀಯುತ ಪ್ರಭು ಗುರಪ್ಪನವರು ಇನ್ನು ಹಲವಾರು ಕನಸುಗಳನ್ನೊತ್ತು ಈ ಗ್ರಾಮ ಹಾಗೂ ರಂಗಕ್ಷೇತ್ರಕ್ಕೆ ದುಡಿಯುತ್ತಿದ್ದಾರೆ. ತಮ್ಮ ನೌಕರಿಯಲ್ಲಿ ಮುಂಬಡ್ತಿಯು ಲಭಿಸಿದರು ಅದನ್ನು ನಯವಾಗಿಯೇ ತಿರಸ್ಕರಿಸಿ, ಪೋಸ್ಟ್ ಮಾಸ್ತರರಾಗಿಯೇ ಸರಳ ಜೀವನ ನಡೆಸುತ್ತಿದ್ದಾರೆ. ನಿನಾಸಂ ಮಾದರಿಯಲ್ಲಿಯೇ ರಂಗಭೂಮಿ ಹಾಗೂ ರಂಗಶಿಕ್ಷಣವನ್ನು ನೀಡುವ ಕನಸ್ಸೊತ್ತು ಮುನ್ನಡೆಯುತ್ತಿದ್ದಾರೆ. ಈ ನೆಲದ ಮಣ್ಣಿನ ದನಿಯಾಗಿ ರಂಗಭೂಮಿ ಕ್ಷೇತ್ರಕ್ಕೆ ದುಡಿಯುತ್ತಿರುವ ಇವರ ಕನಸ್ಸೆಲ್ಲ ನನಸಾಗಲಿ. ಇವರಿಗೆ ದೇವರು ರಂಗಸೇವೆಯನ್ನು ಸಲ್ಲಿಸುವುದಕ್ಕೆ ಮತ್ತಷ್ಟು ಆರೋಗ್ಯವನ್ನು ನೀಡಲಿ ಎಂಬುದು ನಮ್ಮೆಲ್ಲರ ಹಾರೈಕೆ.

ಸುದ್ದಿದಿನ.ಕಾಂ|ವಾಟ್ಸಾಪ್|9986715401

ನೆಲದನಿ

ನಮ್ಮ ಶಿವಮೊಗ್ಗ – ನಮ್ಮ ಹೆಮ್ಮೆ: ಕುವೆಂಪು

Published

on

ಕುವೆಂಪು ಅವರು 20ನೇ ಶತಮಾನ ಕಂಡ ದೈತ್ಯ ಪ್ರತಿಭೆ. ವರಕವಿ ಬೇಂದ್ರೆಯವರಿಂದ “ಯುಗದ ಕವಿ; ಜಗದ ಕವಿ” ಎಂದೆನಿಸಿಕೊಂಡವರು. ಕನ್ನಡದ ಎರಡನೇ ರಾಷ್ಟ್ರಕವಿಯಾಗಿ ನಾಡಿಗೆ ಕೀರ್ತಿ ತಂದವರು. ಜ್ಞಾನಪೀಠ ಪ್ರಶಸ್ತಿ ಹಾಗೂ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದ ಮೊದಲ ಕನ್ನಡಿಗ. ಕನ್ನಡದ ಈ ಮೇರು ಕವಿ ನಮ್ಮ ಶಿವಮೊಗ್ಗದವರು ಎಂಬುದೇ ನಮ್ಮ ಹೆಮ್ಮೆ.

ಶಿವಮೊಗ್ಗ ಜಿಲ್ಲೆ ಸಾಹಿತ್ಯದ ತವರು. ಸಾಕಷ್ಟು ಕವಿಗಳು, ಲೇಖಕರ ಜೊತೆಗೆ ರಾಜಕಾರಣಿಗಳನ್ನು ಸಮಾಜಕ್ಕೆ ಕೊಡುಗೆ ನೀಡಿದ ಹೆಗ್ಗಳಿಗೆ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗ ಜಿಲ್ಲೆಯದು. ಅಂತಹ ಅತ್ಯುತ್ತಮ ಕೊಡುಗೆಗಳಲ್ಲಿ ಒಬ್ಬರು ರಾಷ್ಟ್ರಕವಿ ಕುವೆಂಪು.

ಚಿಕ್ಕಮಗಳೂರು ಜಿಲ್ಲೆಯ ಪುಟ್ಟ ಗ್ರಾಮವೊಂದರಲ್ಲಿ 1904ರಲ್ಲಿ ಸೀತಮ್ಮ ಮತ್ತು ವೆಂಕಟಪ್ಪ ಅವರ ಮಗನಾಗಿ ಜನಿಸಿದ ಕುವೆಂಪುರವರು ತಮ್ಮ ಬಾಲ್ಯವನ್ನೆಲ್ಲಾ ಶಿವಮೊಗ್ಗದ ಕುಪ್ಪಳ್ಳಿಯಲ್ಲಿ ಕಳೆದರು. ಕನ್ನಡದಲ್ಲಿ ಎಂ.ಎ. ಪದವೀರರಾಗಿದ್ದ ಇವರು ಮೈಸೂರಿನ ಮಹರಾಜ ಕಾಲೇಜಿನಲ್ಲಿ ಪ್ರಾಧ್ಯಾಪಕರೂ, ಪ್ರಾಂಶುಪಾಲರೂ ಆಗಿ ನಂತರ ಉಪಕುಲಪತಿಗಳಾದರು.

ಹೇಮಾವತಿ ಅವರನ್ನು ವಿವಾಹವಾದ ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ ಅವರಿಗೆ ಪೂರ್ಣಚಂದ್ರ ತೇಜಸ್ವಿ, ಕೋಕಿಲೋದಯ ಚೈತ್ರ, ಇಂದುಕಲಾ ಮತ್ತು ತಾರಿಣಿ ಎಂಬ ನಾಲ್ಕು ಮಕ್ಕಳು. 1994ರಲ್ಲಿ ನಿಧನರಾದ ಕುವೆಂಪುರವರನ್ನು ಕುಪ್ಪಳ್ಳಿಯಿಂದ ಅನತಿ ದೂರದಲ್ಲಿರುವ ಸ್ಥಳದಲ್ಲಿ ಅಂತ್ಯಸಂಸ್ಕಾರ ಮಾಡಲಾಯಿತು. ಇಂದು ಆ ಸ್ಥಳ ಕವಿಶೈಲ ಎಂದು ಪ್ರಸಿದ್ಧಿ ಪಡೆದಿದೆ.

ಕುವೆಂಪುರವರ ಶ್ರೀ ರಾಮಾಯಣ ದರ್ಶನಂ ಕೃತಿಗೆ 1966ರಲ್ಲಿ ಜ್ಞಾನಪೀಠ ಹಾಗೂ 1955ರಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ದೊರೆತಿದೆ. ಈ ಮೂಲಕ ಕನ್ನಡವನ್ನು ರಾಷ್ಟ್ರಮಟ್ಟಕ್ಕೆ ಕೊಂಡೊಯ್ದ ಹೆಗ್ಗಳಿಕೆ ಕುವೆಂಪುರವರದು.

1964ರಲ್ಲಿ ರಾಷ್ಟ್ರಕವಿ ಎಂಬ ಪುರಸ್ಕಾರ ಪಡೆದು ಪ್ರತಿಯೊಬ್ಬ ಕನ್ನಡಿಗನೂ ಹೆಮ್ಮೆ ಪಡುವಂತೆ ಮಾಡಿದ ಕುವೆಂಪು ಅವರನ್ನು . ಪದ್ಮಭೂಷಣ, ಪಂಪ ಪ್ರಶಸ್ತಿ, ಪದ್ಮವಿಭೂಷಣ, ಕರ್ನಾಟಕ ರತ್ನ ಹೀಗೆ ಅನೇಕ ಪ್ರಶಸ್ತಿ ಪುರಸ್ಕಾರಗಳು ಅರಸಿ ಬಂದವು.

ಮನುಜಮತ, ವಿಶ್ವಪಥ, ಸರ್ವೋದಯ, ಸಮನ್ವಯ ಮತ್ತು ಪೂರ್ಣದೃಷ್ಟಿ ಎಂಬ ಪಂಚಮಂತ್ರವನ್ನು ಜಗತ್ತಿಗೆ ಸಾರಿದ ಕುವೆಂಪುರವರ ಜನ್ಮದಿನವಾದ ಡಿಸೆಂಬರ್ 29ನ್ನು ಕರ್ನಾಟಕ ಸರ್ಕಾರವು 2015ರಿಂದ ‘ವಿಶ್ವ ಮಾನವ ದಿನ’ವನ್ನಾಗಿ ಆಚರಿಸುವಂತೆ ಆದೇಶವನ್ನು ಹೊರಡಿಸಿ ಮಹಾನ್ ಕವಿಗೆ ಗೌರವ ಸಮರ್ಪಿಸಿದೆ.

ಬಾಲ್ಯದಿಂದಲೇ ಸಾಹಿತ್ಯದಲ್ಲಿ ಹೆಚ್ಚಿನ ಆಸಕ್ತಿ ಹೊಂದಿದ್ದ ಕುವೆಂಪು ಅವರು ಇಂಗ್ಲೀಷ್ ನವೋದಯ ಕಾಲದ ರಮ್ಯ ಕವಿಗಳ ಪ್ರಭಾವಕ್ಕೊಳಗಾಗಿ ‘ಬಿಗಿನರ್ಸ್ ಮ್ಯೂಸ್’ ಎಂಬ ಆರು ಇಂಗ್ಲೀಷ್ ಕವನಗಳ ಕವನಸಂಕಲನವನ್ನು 1922ರಲ್ಲಿ ರಚಿಸಿದ್ದರು. ನಂತರ ಗುರುಗಳಾದ ಜೇಮ್ಸ್ ಕಸಿನ್ ಅವರ ಸಲಹೆಯಂತೆ ಕನ್ನಡದಲ್ಲಿಯೇ ಬರೆಯಲಾರಂಭಿಸಿದರು.

ಶ್ರೀ ರಾಮಾಯಣ ದರ್ಶನಂ, ಮಲೆಗಳಲಿ ಮದುಮಗಳು, ಕಾನೂರು ಹೆಗ್ಗಡತಿ, ಸ್ಮಶಾನ ಕುರುಕ್ಷೇತ್ರ, ಜಲಗಾರ, ಶೂದ್ರತಪಸ್ವಿ, ವಿಚಾರಕ್ರಾಂತಿಗೆ ಆಹ್ವಾನ ಮುಂತಾದ ಬರಹಗಳು ಇಂದಿಗೂ ಜನರ ಮನದಲ್ಲಿ ಅಚ್ಚಳಿಯದೇ ಉಳಿದಿವೆ. ಇವರ ಮಂತ್ರಮಾಂಗಲ್ಯದ ಪರಿಕಲ್ಪನೆ ಯುವಜನರನ್ನು ಆಕರ್ಷಿಸಿತು.
ಕುವೆಂಪುರವರು ಕಾವ್ಯ, ಕವನ, ಕಥೆ, ಕಾದಂಬರಿ, ವಿಮರ್ಷೆ, ಅನುವಾದ, ನಾಟಕ ಹೀಗೆ ಎಲ್ಲಾ ಬಗೆಯ ಸಾಹಿತ್ಯ ರೂಪಗಳಲ್ಲಿಯೂ ತಮ್ಮ ಛಾಪನ್ನು ಮೂಡಿಸಿದ್ದಾರೆ.

ಕುಪ್ಪಳ್ಳಿ ಎನ್ನುವ ಸಣ್ಣ ಗ್ರಾಮದಿಂದ ರಾಷ್ಟ್ರಕವಿಯಾಗುವವರೆಗಿನ ಕುವೆಂಪುರವರ ಸಾಹಿತ್ಯ ಪಯಣ ನಿಜಕ್ಕೂ ಸ್ಪೂರ್ತಿದಾಯಕ. ರಾಷ್ಟ್ರಮಟ್ಟದಲ್ಲಿ ಜಿಲ್ಲೆಗೆ ಮನ್ನಣೆ ತಂದು ಕೊಟ್ಟ ಕುವೆಂಪುರವರಿಗೆ ಜಿಲ್ಲೆಯ ಜನರು ಎಂದಿಗೂ ಋಣಿ.

ಕೃಪೆ : ಡಿ ಐ ಪಿ ಆರ್ ಶಿವಮೊಗ್ಗ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ನೆಲದನಿ

ಶಿವಮೊಗ್ಗ ಜಿಲ್ಲೆ – ನಮ್ಮ ಹೆಮ್ಮೆ ‘ಅಲ್ಲಮಪ್ರಭು’

Published

on

ಕಲ್ಪನೆಯ ಚಿತ್ರ

ಅಲ್ಲಮಪ್ರಭು 12ನೆಯ ಶತಮಾನದ ವಚನಕಾರರಲ್ಲಿ ಪ್ರಸಿದ್ಧರಾದವರು. ಅನೇಕ ಶಿವಶರಣ, ಶಿವಶರಣೆಯರಿಗೆ ಭಕ್ತಿ-ವೈರಾಗ್ಯವನ್ನು ಬೋಧಿಸಿದರು. ತನ್ನ ವಚನಗಳ ಮೂಲಕ ಅಂತರಂಗ, ಬಹಿರಂಗಗಳನ್ನು ಶೋಧಿಸಲೆತ್ನಿಸಿದವರು.

ಅಲ್ಲಮಪ್ರಭು ಮಲೆನಾಡ ಹೆಬ್ಬಾಗಿಲು ಶಿವಮೊಗ್ಗೆ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಬಳ್ಳಿಗಾವೆಯಲ್ಲಿ ಸುಮಾರು 12ನೇ ಶತಮಾನದಲ್ಲಿ ಜನಿಸಿದರು ಎಂದು ದಾಖಲೆಗಳು ಹೇಳುತ್ತವೆ.

12ನೆಯ ಶತಮಾನದ ಶಿವಶರಣರಲ್ಲಿ ಅಲ್ಲಮಪ್ರಭು ಉಚ್ಚಸ್ಥಾನದಲ್ಲಿದ್ದವರು. ಅರಸು ಮನೆತನದಲ್ಲಿಯೆ ಹುಟ್ಟಿ ಬೆಳೆದವರಾದರೂ, ಮನೆ ಬಿಟ್ಟು ತೆರಳಿ ಆಧ್ಯಾತ್ಮಸಾಧಕನಾದರೆಂದು ಹೇಳಲಾಗುತ್ತಿದೆ. ಬಸವಣ್ಣನ ಕಲ್ಯಾಣಕ್ಕೆ ಬಂದ ಅಲ್ಲಮಪ್ರಭು ಅಲ್ಲಿ ಅನುಭವಮಂಟಪದ ಶೂನ್ಯಸಿಂಹಾಸನದ ಅಧ್ಯಕ್ಷರಾಗುತ್ತಾರೆ.

ಅಲ್ಲಮನ ವಚನಚಂದ್ರಿಕೆಯಲ್ಲಿ 1294 ವಚನಗಳು ಲಭ್ಯವಾಗಿವೆ. ಅಲ್ಲಮಪ್ರಭು ತನ್ನ ಕೊನೆಯ ದಿನಗಳಲ್ಲಿ ಶ್ರೀಶೈಲಕ್ಕೆ ಹೋಗಿ ಅಲ್ಲಿಯ ವನದಲ್ಲಿ ಶಿವೈಕ್ಯರಾದರೆಂಬುದು ಪ್ರತೀತಿ. ಬಸವಣ್ಣನವರ ಸಮಕಾಲೀನರಾದ ಅಲ್ಲಮಪ್ರಭುವಿನ ವಚನಗಳ ಅಂಕಿತ ‘ಗುಹೇಶ್ವರ’ ಅಥವಾ ‘ಗೊಹೇಶ್ವರ’. ಇವರ ವಚನಗಳಲ್ಲಿ ಗಹನವಾದ ಆಧ್ಯಾತ್ಮ ಹಾಗೂ ತಾತ್ವಿಕ ವಿಚಾರಗಳಿವೆ.

ಅಲ್ಲಮನ ಆಧ್ಯಾತ್ಮಿಕ ಅನುಭವಗಳ ಅಸಾಮಾನ್ಯತೆಯಿಂದ ಇವರ ವಚನಗಳನ್ನು ಅರ್ಥಮಾಡಿಕೊಳ್ಳುವುದು ಕಷ್ಟ. ಇವರದು ಬಹುಮಟ್ಟಿಗೆ ರೂಪಕ ಭಾಷೆ. ಈ ಭಾಷೆ ಇವರ ವೈಶಿಷ್ಟ್ಯವೂ ಹೌದು. ಚಾಮರಸನು ತನ್ನ ಪ್ರಭುಲಿಂಗಲೀಲೆ ಎನ್ನುವ ಕಾವ್ಯದಲ್ಲಿ ಅಲ್ಲಮಪ್ರಭುವಿನ ಐತಿಹ್ಯವನ್ನು ವರ್ಣಿಸಿದ್ದಾನೆ.

ಅಲ್ಲಮನ ಜೀವನ ಚರಿತ್ರೆಯನ್ನು ನಿಖರವಾಗಿ ನಿರೂಪಿಸಲು ಸಾಧ್ಯವಾಗಲಾರದಷ್ಟು ಐತಿಹ್ಯಗಳು ಆ ವ್ಯಕ್ತಿತ್ವವನ್ನು ಸುತ್ತುವರಿದಿವೆ. ಅಲ್ಲಮನ ಬಗ್ಗೆ ಹದಿಮೂರನೇ ಶತಮಾನದ ಹರಿಹರ ಮಹಾಕವಿಯು, ಪ್ರಭುದೇವರ ರಗಳೆಯಲ್ಲಿ ಸಾಕಷ್ಟು ವಿವರಣೆಗಳನ್ನು ನೀಡಿರುವನಾದರೂ, ಅಲ್ಲಮನ ಪ್ರಭಾವಲಯದಿಂದ ಪೂರ್ಣವಾಗಿ ಹೊರ ಬಂದು, ಒಂದು ಸಹಜ ಚಿತ್ರಣವನ್ನು ಕೊಡುವಲ್ಲಿ ಹರಿಹರನಂತಹ ವಾಸ್ತವವಾದಿ ಕವಿ ಸಹ ಸೋಲುತ್ತಾನೆ.

ಇನ್ನು ಚಾಮರಸರು ಅಲ್ಲಮಪ್ರಭುದೇವನನ್ನು ಈ ಲೋಕದ ಮಾನವ ಚೇತನವೆಂದು ಒಪ್ಪಿಕೊಳ್ಳುವುದೇ ಇಲ್ಲ. ಅವನು ‘ಕೈಲಾಸದಿಂದ ಬಂದ ಶಿವನ ಚಿತ್ಕಳೆ’ ಎಂದೇ ಚಿತ್ರಿಸುತ್ತಾನೆ. ಇವರಿಬ್ಬರಲ್ಲದೆ ಎಳಂದೂರು ಹರಿಹರೇಶ್ವರನೆಂಬ ಮತ್ತೊಬ್ಬ ಕವಿಯೂ ಅಲ್ಲಮಪ್ರಭುವಿನ ಬಗ್ಗೆ ಕಾವ್ಯ ರಚನೆ ಮಾಡಿದ್ದಾನೆ. ಇನ್ನು ಚಾಮರಸನು ರಚಿಸಿರುವ ಪ್ರಭುಲಿಂಗಲೀಲೆಯು ತಮಿಳು, ಮರಾಠಿ ಮುಂತಾದ ಭಾಷೆಗಳಿಗೆ ಬಲು ಹಿಂದೆಯೇ ಅನುವಾದಗೊಂಡು ಪ್ರಖ್ಯಾತಿ ಪಡೆದಿತ್ತು.

ಈ ಮಹಾಕವಿಗಳಲ್ಲದೆ, ಅಲ್ಲಮಪ್ರಭುವಿನ ಬಗ್ಗೆ ಪ್ರಾಸಂಗಿಕವಾಗಿ ಬರೆಯದ ವೀರಶೈವ ಸಾಹಿತ್ಯವೇ ಇಲ್ಲವೆನ್ನಬಹುದು. ಇಡಿಯ ವಚನ ಸಾಹಿತ್ಯದಲ್ಲಿಯೇ, ಸಾಹಿತ್ಯದ ಪರಿಭಾಷೆಯನ್ನು ಸರಿಯಾದ ಮಾರ್ಗದಲ್ಲಿ ದುಡಿಸಿಕೊಂಡವರಲ್ಲಿ ಅಕ್ಕಮಹಾದೇವಿ ಮತ್ತು ಅಲ್ಲಮಪ್ರಭು ಇಬ್ಬರೂ ಅಪ್ರತಿಮರು. ಅಲ್ಲಮಪ್ರಭು ಎಂಬ ಅಪ್ರತಿಮ ಚೇತನ ನಮ್ಮ ಶಿವಮೊಗ್ಗದವರು ಎಂಬುದು ಶಿವಮೊಗ್ಗದ ಪ್ರತಿಯೊಬ್ಬ ನಾಗರಿಕನ ಹೆಮ್ಮೆ.

ಹೆಚ್ಚಿನ ಮಾಹಿತಿಗಾಗಿ ಲಿಂಕ್ ಮೇಲೆ ಕ್ಲಿಕ್ ಮಾಡಿ

ಅಲ್ಲಮಪ್ರಭುವಿನ ವಚನಗಳು

ಅಲ್ಲಮಪ್ರಭು ದೇವರ ವಚನಗಳು

ಪರಾಮರ್ಶನ

ಅಲ್ಲಮಪ್ರಭು

www.scribd.com

https://www.scribd.com

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ನೆಲದನಿ

ಶಿವಮೊಗ್ಗ ಜಿಲ್ಲೆ – ನಮ್ಮ ಹೆಮ್ಮೆ : ನಾ. ಡಿಸೋಜ

Published

on

ನಾ. ಡಿಸೋಜ ಪರಿಸರ ಕಾಳಜಿಯುಳ್ಳ ಮಹತ್ವದ ಕಥೆಗಾರರೆನಿಸಿದ್ದು ಕನ್ನಡ ಸಾಹಿತ್ಯ ಲೋಕದಲ್ಲಿ ಮಕ್ಕಳ ಸಾಹಿತ್ಯವನ್ನು ಒಳಗೊಂಡಂತೆ ಅಪಾರವಾದ ಕೃಷಿ ನಡೆಸಿದ್ದಾರೆ. ತಮ್ಮೆಲ್ಲ ಕಥೆ, ಕಾದಂಬರಿಗಳ ಮೂಲಕ ಪರಿಸರ ಸಂರಕ್ಷಣೆಯ ಬಗ್ಗೆ ಎಚ್ಚರಿಸುತ್ತ ಬಂದಿದ್ದು, ಪರಿಸರ ನಾಶವೇ ಮಾನವ ಜನಾಂಗದ ವಿನಾಶದ ಮೂಲ, ಪರಿಸರವನ್ನುಳಿಸಿಕೊಂಡು ಬಾಳಿದರೆ ಮಾನವನ ಬಾಳೂ ಸಂತುಷ್ಟ ಎಂಬುದನ್ನು ಮತ್ತೆ ಮತ್ತೆ ಪ್ರಸ್ತಾಪಿಸುತ್ತಾರೆ.

ಸುಮಾರು ಐದು ದಶಕಗಳಿಂದಲೂ ಕನ್ನಡ ಸಾಹಿತ್ಯದ ಎಲ್ಲ ಪ್ರಕಾರಗಳಲ್ಲಿಯೂ ಕೃತಿ ರಚಿಸುತ್ತ ಬಂದಿರುವ ನಾರ್ಬರ್ಟ್ ಡಿಸೋಜ ಅವರು ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ 1937ರ ಜೂನ್ 06 ರಂದು ಜನಿಸಿದರು. ತಂದೆ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರಾಗಿದ್ದ ಎಫ್.ಪಿ. ಡಿಸೋಜ, ತಾಯಿ ರೂಪೀನಾ ಡಿಸೋಜ.

ತಂದೆ ಶಾಲಾ ಮಕ್ಕಳಿಗೆ ಕಲಿಸಲು ಬರೆದುಕೊಂಡಿದ್ದ ಪುಸ್ತಕಗಳಲ್ಲಿನ ಪದ್ಯಗಳನ್ನು ಕಲಿಯುವುದರ ಮೂಲಕ ಡಿಸೋಜ ಅವರ ಸಾಹಿತ್ಯಾಸಕ್ತಿ ಮೊಳಕೆಯೊಡೆಯತೊಡಗಿತ್ತು. ಜೊತೆಗೆ ತಾಯಿ ಹೇಳುತ್ತಿದ್ದ ಜನಪದ ಗೀತೆಗಳು, ಕಥೆಗಳು ಡಿಸೋಜರ ಮನಸ್ಸಿನ ಮೇಲೆ ಮೋಡಿ ಮಾಡತೊಡಗಿದ್ದವು. ಹೈಸ್ಕೂಲಿನಲ್ಲಿದ್ದಾಗಲೇ ಇವರ ಸಾಹಿತ್ಯಾಸಕ್ತಿಯನ್ನು ಗಮನಿಸಿ, ಬೆಳೆಸಿದವರು ಗೊರೂರು ನರಸಿಂಹಾಚಾರ್ಯರರು.

ಶಿವಮೊಗ್ಗದಲ್ಲಿ ಇಂಟರ್ಮೀಡಿಯೇಟ್ ಕಾಲೇಜು (ಈಗಿನ ಸಹ್ಯಾದ್ರಿ ಕಾಲೇಜು) ಸೇರಿದ ಇವರು ಪ್ರತಿಭೆ ತೋರಿಸಿದ್ದು ಕನ್ನಡ ವಿಷಯದಲ್ಲಿ ಉತ್ತಮ ಅಂಕಗಳನ್ನು ಪಡೆಯುವುದರಲ್ಲಿ. ಮೈಸೂರಿಗೆ ಹೋಗಿ ಕಾಲಕಳೆದದ್ದೆಲ್ಲಾ ಸಾರ್ವಜನಿಕ ಪುಸ್ತಕ ಭಂಡಾರಗಳಲ್ಲಿ. ಮಾಸ್ತಿ, ಕುವೆಂಪು, ಅ.ನ.ಕೃ., ಕಾರಂತರು, ಗೋಕಾಕ್, ಗೊರೂರು ಇವರುಗಳಲ್ಲದೆ ಪರ್ಲ್ಬಕ್, ಸಾಮರ್ ಸೆಟ್ ಮಾಮ್, ಡಿಕನ್ಸ್ ಮುಂತಾದವರ ಕೃತಿಗಳನ್ನು ವ್ಯಾಪಕವಾಗಿ ಅಧ್ಯಯನ ಮಾಡಿದರು.

ಡಿಸೋಜ ಅವರು ಬೆರಳಚ್ಚು ಮತ್ತು ಶೀಘ್ರಲಿಪಿ ಪರೀಕ್ಷೆಗಳಲ್ಲಿ ಯಶಸ್ವಿಯಾಗಿದ್ದು ಅವರ ವೃತ್ತಿ ಬದುಕಿಗೊಂದು ಆಸರೆಯಾಯಿತು. ನಾ. ಡಿಸೋಜರವರು ಉದ್ಯೋಗಕ್ಕೆ ಸೇರಿದ್ದು ಲೋಕೋಪಯೋಗಿ ಇಲಾಖೆಯಲ್ಲಿ ಟೈಪಿಸ್ಟ್ ಮತ್ತು ದ್ವಿತೀಯ ದರ್ಜೆ ಗುಮಾಸ್ತನಾಗಿ. ನಂತರ ಪ್ರಥಮ ದರ್ಜೆ ಗುಮಾಸ್ತರಾಗಿ ಶರಾವತಿ ಯೋಜನೆ ಕಾರ್ಗಲ್, ಮಾಸ್ತಿಕಟ್ಟೆ, ತೀರ್ಥಹಳ್ಳಿ ಮುಂತಾದೆಡೆಗಳಲ್ಲಿ ಕಾರ್ಯನಿರ್ವಹಿಸಿ 1995ರಲ್ಲಿ ನಿವೃತ್ತಿಹೊಂದಿದರು.

ನಾ. ಡಿಸೋಜ ಮೊದಲಿಗೆ ‘ಪ್ರಪಂಚ’ ಪತ್ರಿಕೆಗೆ ಕಥೆಗಳನ್ನು ಬರೆಯತೊಡಗಿದರು. ನಂತರ ಎಲ್ಲ ಪ್ರಮುಖ ಪತ್ರಿಕೆಗಳಲ್ಲೂ ಇವರ ಕಥೆಗಳು ಪ್ರಕಟವಾಗತೊಡಗಿದವು. ಡಿಸೋಜರ ಮೊದಲ ಕಾದಂಬರಿ ‘ಬಂಜೆ ಬೆಂಕಿ’ ಪ್ರಕಟವಾದದ್ದು 1964ರಲ್ಲಿ. ನಂತರ ಮಂಜಿನ ಕಾನು, ಈ ನೆಲ ಈ ಜಲ, ಕೆಂಪು ತ್ರಿಕೋನ, ನೆಲೆ, ಮಾನವ – ಹೀಗೆ ಇವರು ಸುಮಾರು 40ಕ್ಕೂ ಹೆಚ್ಚಿನ ಕಾದಂಬರಿಗಳನ್ನು ಬರೆದಿದ್ದಾರೆ. ಪರಿಸರ ನಾಶ, ಕ್ರೈಸ್ತ ಜನಾಂಗದ ಹಿನ್ನೆಲೆ, ಭ್ರಷ್ಟಾಚಾರದ ವಸ್ತು, ಹಿಂದುಳಿದ ಬುಡಕಟ್ಟು ಜನಾಂಗದ ಚಿತ್ರಣ ಹೀಗೆ ಹತ್ತು ಹಲವು ವಿಷಯಗಳನ್ನೊಳಗೊಂಡ ಅವರ ಕಾದಂಬರಿಗಳು ಓದುಗರ ಮನಸೂರೆಗೊಂಡಿವೆ.

ಇವರು ಪತ್ರಿಕೆಗಳಿಗೆ ಬರೆದ ಸಣ್ಣ ಕಥೆಗಳು 09 ಸಂಕಲನಗಳಲ್ಲಿ ಸಂಕಲಿತಗೊಂಡಿದ್ದು, ಸಮಗ್ರ ಕಥೆಗಳು 02 ಸಂಪುಟಗಳಲ್ಲಿ ಪ್ರಕಟವಾಗಿವೆ.

ನಾಡಿಗೆ ಬೆಳಕನ್ನು ನೀಡಲು ಪ್ರಾರಂಭಿಸಿದ ವಿದ್ಯುಚ್ಛಕ್ತಿ ಯೋಜನೆಯ ಅಡಿಯಲ್ಲಿ ಬಹಳಷ್ಟು ಜನರ ಬದುಕುಗಳು ಕತ್ತಲೆಯಲ್ಲಿ ಕರಗಿ ಹೋಗುವ ವಸ್ತುವನ್ನಾಗಿ ಉಳ್ಳ ‘ಮುಳುಗಡೆ’ ಕಾದಂಬರಿಯು ಸುಧಾ ಯುಗಾದಿ ಕಾದಂಬರಿ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದಿದೆ, ಸುರೇಶ್ ಹೆಬ್ಲೀಕರ್ರವರ ನಿರ್ದೇಶನದಲ್ಲಿ ‘ಕಾಡಿನ ಬೆಂಕಿ’, ಗಿರೀಶ್ ಕಾಸರವಳ್ಳಿಯವರ ನಿರ್ದೇಶನದಲ್ಲಿ ‘ದ್ವೀಪ ’, ಸಿರಿಗಂಧ ಶ್ರೀನಿವಾಸಮೂರ್ತಿಯವರ ನಿರ್ದೇಶನದಲ್ಲಿ ‘ಬಳುವಳಿ’, ಕೋಡ್ಲು ರಾಮಕೃಷ್ಣರವರ ನಿರ್ದೇಶನದಲ್ಲಿ ‘ಬೆಟ್ಟದಪುರದ ದಿಟ್ಟ ಮಕ್ಕಳು’ ಮತ್ತು ಮನುರವರ ನಿರ್ದೇಶನದಲ್ಲಿ ‘ಆಂತರ್ಯ’ ಕಾದಂಬರಿಗಳು ಚಲನಚಿತ್ರಗಳಾಗಿಯೂ ಜನಪ್ರಿಯತೆಯನ್ನು ಪಡೆದಿವೆ.

ಇವುಗಳಲ್ಲಿ ‘ಕಾಡಿನ ಬೆಂಕಿ’ ಚಿತ್ರ ರಜತ ಕಮಲ ಪ್ರಶಸ್ತಿಯನ್ನೂ , ‘ದ್ವೀಪ’ ಚಿತ್ರ ‘ಸ್ವರ್ಣ ಕಮಲ’ ಪ್ರಶಸ್ತಿಯನ್ನೂ ಗಳಿಸಿ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದ ಹಿರಿಮೆ ಗಳಿಸಿವೆ. ದೂರದರ್ಶನ ಮಾಧ್ಯಮದಲ್ಲಿ ಸಹ ಮಕ್ಕಳ ಧಾರವಾಹಿ, ಕಥೆಗಳು, ಹಲವಾರು ಕಾದಂಬರಿಗಳು ನಾಟಕಕ್ಕೆ ರೂಪಾಂತರವಾಗಿ ಪ್ರದರ್ಶಿತವಾಗಿವೆ.

‘ಮುಳುಗಡೆ’, ‘ಕೊಳಗ’, ‘ಒಳಿತನ್ನು ಮಾಡಲು ಬಂದವರು’, ‘ಬಣ್ಣ’, ‘ಇಬ್ಬರು ಮಾಜಿಗಳು’ ಮುಂತಾದ ಕಾದಂಬರಿಗಳು ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯದಲ್ಲಿ ಬಿ.ಎಸ್ಸಿ., ಬಿ.ಕಾಂ., ತರಗತಿಗಳಿಗೆ, ಬೆಂಗಳೂರು ವಿಶ್ವವಿದ್ಯಾಲಯದ ಬಿ.ಎ. ತರಗತಿಗಳಿಗೆ, ಮಂಗಳೂರು ವಿಶ್ವವಿದ್ಯಾನಿಲಯದ ಬಿ.ಕಾಂ. ತರಗತಿಗಳಿಗೆ ಮತ್ತು ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯವೂ ಸೇರಿದಂತೆ ಮುಂತಾದೆಡೆಗಳಲ್ಲಿ ಪಠ್ಯಪುಸ್ತಕಗಳಾಗಿಯೂ ಆಯ್ಕೆಯಾಗಿದೆ.

ವಿಶೇಷವಾಗಿ ಮಕ್ಕಳ ಸಾಹಿತ್ಯದಲ್ಲಿ ಕೃಷಿ ಮಾಡಿರುವ ನಾ.ಡಿಸೋಜ ಮಕ್ಕಳ ಸಾಹಿತ್ಯದ ವಿವಿಧ ಪ್ರಕಾರದಲ್ಲಿ 12 ಕೃತಿಗಳನ್ನು ಪ್ರಕಟಿಸಿದ್ದಾರೆ.

ಡಿಸೋಜ ಅವರ ಹಲವಾರು ಸಣ್ಣ ಕಥೆಗಳು ಕೊಂಕಣಿ, ಮಲಯಾಳಂ, ತೆಲುಗು, ಸಂಸ್ಕೃತ, ಹಿಂದಿ, ಇಂಗ್ಲಿಷ್ ಭಾಷೆಗೂ ಅನುವಾದಗೊಂಡಿವೆ. ತುಂಜಾಲು ಕಾದಂಬರಿಯು ತೆಲುಗು ಭಾಷೆಗೆ, ಪ್ರೀತಿಯೊಂದೇ ಸಾಲದೆ, ಜಲಪಾತದ ಸುತ್ತ, ಇಗರ್ಜಿ, ಸುತ್ತಲಿನ ಹತ್ತು ಮನೆಗಳು, ಕಾಡಿನ ಬೆಂಕಿ, ತಿರುವು ಮುಂತಾದ ಕಾದಂಬರಿಗಳು ಕೊಂಕಣಿಗೆ, ಇಗರ್ಜಿ ಕಾದಂಬರಿ, ದ್ವೀಪ, ಬಾಲಗಂಧರ್ವ ಮತ್ತು ಏಸುಕ್ರಿಸ್ತ ಕೃತಿಗಳು ಇಂಗ್ಲಿಷ್ಗೂ, ನೇತ್ರಾಣಿ ಗುಡ್ಡಕ್ಕೆ ಯಾತ್ರೆ ಕೃತಿಯು ಹಿಂದಿ ಭಾಷೆಗೂ ಅನುವಾದಗೊಂಡಿದೆ.

ನಾ.ಡಿಸೋಜರವರ ಸಾಹಿತ್ಯ ಕುರಿತು ಮದರಾಸು ವಿಶ್ವವಿದ್ಯಾಲಯದ ಶ್ರೀ ಪ್ರಕಾಶ್ ಸೈಮನ್ರವರು ‘ನಾ. ಡಿಸೋಜರವರ 25 ಕಥೆಗಳು ಒಂದು ಅಧ್ಯಯನ’ ಕುರಿತು ಎಂ.ಫಿಲ್. ಪದವಿ (1995), ಮಧುರೆ ಕಾಮರಾಜ ವಿಶ್ವವಿದ್ಯಾಲಯದ ಎಂ.ಎಂ. ಮಂಜುನಾಥರವರು ‘ನಾ. ಡಿಸೋಜರವರ ಕಾದಂಬರಿಗಳಲ್ಲಿ ಮುಳುಗಡೆ ಸಮಸ್ಯೆ – ಒಂದು ಅಧ್ಯಯನ’ ಮಹಾಪ್ರಬಂಧಕ್ಕೆ ಎಂ.ಫಿಲ್. ಪದವಿ (1998), ಕುವೆಂಪು ವಿಶ್ವವಿದ್ಯಾಯದ ಟಿ.ಎಸ್. ಶೈಲಾರವರು ‘ನಾ. ಡಿಸೋಜರವರ ಕಾದಂಬರಿಗಳಲ್ಲಿ ಸಾಂಸ್ಕೃತಿಕ ಸ್ಥಿತ್ಯಂತರಗಳು’ ಮಹಾ ಪ್ರಬಂಧಕ್ಕೆ ಎಂ.ಫಿಲ್ ಪದವಿ (2001) ಮತ್ತು ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಗಂಗಾ ಮೂಲಿಮನಿಯವರು ‘ನಾ. ಡಿಸೋಜ ಒಂದು ಸಾಂಸ್ಕೃತಿಕ ಅಧ್ಯಯನ’ ಮಹಾ ಪ್ರಬಂಧಕ್ಕೆ ಡಾಕ್ಟರೇಟ್ ಪದವಿ (2001) ಪಡೆದಿದ್ದಾರೆ.

ನಾ. ಡಿಸೋಜ ಅವರು ಕರ್ನಾಟಕ ಸಾಹಿತ್ಯ ಅಕಾಡಮಿ, ಕೊಂಕಣಿ ಸಾಹಿತ್ಯ ಅಕಾಡಮಿ, ಪುಸ್ತಕ ಪ್ರಾಧಿಕಾರ, ಕುವೆಂಪು ವಿಶ್ವವಿದ್ಯಾಲಯದ ಸೆನೆಟ್, ಹಂಪಿ ಕನ್ನಡ ವಿಶ್ವವಿದ್ಯಾಲಯದ ಸೆನೆಟ್, ಶಿವಮೊಗ್ಗ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಆಡಳಿತ ಪರಿಷತ್, ಕುವೆಂಪು ರಂಗ ಮಂದಿರ, ಕನ್ನಡ ಅಭಿವೃದ್ಧಿ ಪ್ರಾಧಿಕಾರ ಮುಂತಾದ ಸಂಸ್ಥೆಗಳಲ್ಲಿ ಸದಸ್ಯರಾಗಿ ತಮ್ಮ ಅಮೂಲ್ಯ ಸಲಹೆಗಳನ್ನು ನೀಡಿದ್ದಾರೆ.

ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಗುಲ್ವಾಡಿ ವೆಂಕಟರಾವ ಪ್ರಶಸ್ತಿ, ಅಖಿಲ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಕುವೆಂಪು ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್, ಮಾಸ್ತಿ ಪ್ರಶಸ್ತಿ ಮುಂತಾದ ಪ್ರಶಸ್ತಿಗಳು ಇವರ ಮುಡಿಗೇರಿವೆ. ಕೊಡಗಿನಲ್ಲಿ ನಡೆದ 80ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.

ಹೆಚ್ಚಿನ ಮಾಹಿತಿಗಾಗಿ

ನಾ. ಡಿಸೋಜಾ ಅವರ ಕಾದಂಬರಿಯಾಧಾರಿತ
ಬೆಟ್ಟದ ಪುರದ ದಿಟ್ಟ ಮಕ್ಕಳು ಸಿನಿಮಾ: https://www.youtube.com/watch?v=fvTMpbWMVXA
ದ್ವೀಪ ಸಿನಿಮಾ: https://www.youtube.com/watch?v=EY-qzjFtda8

ಪರಾಮರ್ಶನ
https://kn.wikipedia.org
https://sites.google.com

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ನಿತ್ಯ ಭವಿಷ್ಯ6 hours ago

ಜ್ಯೋತಿಷ್ಯಶಾಸ್ತ್ರ ಅಥವಾ ನಿಮ್ಮ ಜನ್ಮಕುಂಡಲಿ ಪ್ರಕಾರ ಎಂಥಾ ಗುಣವುಳ್ಳ ವ್ಯಕ್ತಿ ಜೊತೆ ಮದುವೆ ಕಾರ್ಯ ಆಗುವುದು?ಕಂಕಣಬಲ ಕೂಡಿ ಬರಲು ಏನು ಮಾಡಬೇಕು?

ತಮ್ಮ ಜಾತಕ ನೋಡಿ (ಒಂದು ವೇಳೆ ಜಾತಕ ಇಲ್ಲದೆ ಹೋದರೆ ಹುಟ್ಟಿದ ದಿನಾಂಕ ಹಾಗೂ ಸಮಯ ತಿಳಿಸಿದರೆ ಜಾತಕ ಬರೆದು ಕಳುಹಿಸಲಾಗುವುದು) ಜಾತಕ ಆಧಾರ ಮೇಲೆ_ ರಾಶಿ...

ನಿತ್ಯ ಭವಿಷ್ಯ6 hours ago

ಈ ರಾಶಿಯವರಿಗೆ ಗಾಳಿ ಮಾತಿನಿಂದ ಗಂಡ-ಹೆಂಡತಿ ಮಧ್ಯೆ ಭಿನ್ನಾಭಿಪ್ರಾಯ! ಆಸ್ತಿ ಮಾರಾಟ ಅಥವಾ ಆಸ್ತಿ ಖರೀದಿಸುವ ಸಾಧ್ಯತೆ!ಮಂಗಳವಾ ರಾಶಿ ಭವಿಷ್ಯ ರ-ಮೇ-11,2021

ಸೂರ್ಯೋದಯ: 05:54 AM, ಸೂರ್ಯಸ್ತ: 06:35 PM ಸ್ವಸ್ತಿ ಶ್ರೀ ಮನೃಪ ಶಾಲಿವಾಹನ ಶಕೆ1943, ಸಂವತ್2077, ಪ್ಲವ ನಾಮ ಸಂವತ್ಸರ ಚೈತ್ರ ಮಾಸ, ವಸಂತ ಋತು, ಉತ್ತರಾಯಣ,...

ದಿನದ ಸುದ್ದಿ16 hours ago

ದಾವಣಗೆರೆ | 197 ಹೊಸ ಕೊರೋನಾ ಪ್ರಕರಣಗಳು ಪತ್ತೆ, ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳು ಎಷ್ಟಿವೆ ಗೊತ್ತಾ..?

ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲೆಯಲ್ಲಿಂದು 197 ಹೊಸ ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಮೂರು ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ದಾವಣಗೆರೆ ನಗರ ಸೇರಿದಂತೆ ತಾಲೂಕುಗಳಲ್ಲಿ ಪತ್ತೆಯಾದ ಕೊರೋನಾ ಪ್ರಕರಣಗಳ...

ದಿನದ ಸುದ್ದಿ16 hours ago

ದಾವಣಗೆರೆ : ಆಸ್ತಿ ತೆರಿಗೆ ರಿಯಾಯಿತಿ ಸೌಲಭ್ಯ ಅವಧಿ ವಿಸ್ತರಣೆ

ಸುದ್ದಿದಿನ,ದಾವಣಗೆರೆ : ಆಸ್ತಿ ತೆರಿಗೆ ಮೇಲೆ ಶೇ.5 ರಷ್ಟು ರಿಯಾಯಿತಿ ಸೌಲಭ್ಯವನ್ನು 2021 ರ ಏ.30 ರವರೆಗೆ ನೀಡಲಾಗಿತ್ತು. ಕೋವಿಡ್ 19 ಸೋಂಕು ನಿಯಂತ್ರಣಕ್ಕಾಗಿ ಲಾಕ್‍ಡೌನ್ ಇರುವ...

ದಿನದ ಸುದ್ದಿ16 hours ago

ಕೋವಿಡ್ 19 ಪರೀಕ್ಷೆ ಮತ್ತು ಲಸಿಕೆ ಹಾಕಿಸಿಕೊಳ್ಳಲು ಮನವಿ

ಸುದ್ದಿದಿನ,ದಾವಣಗೆರೆ : ಕೋವಿಡ್ 19 ಸಾಂಕ್ರಾಮಿಕ ರೋಗ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಸಿಎಸ್‍ಆರ್ ಪಾರ್ಟನರ್ಸ್ ಇವರ ಸಹಯೋಗದೊಂದಿಗೆ ಅಲ್ಪಸಂಖ್ಯಾತ ಜನಾಂಗದವರು...

ಲೈಫ್ ಸ್ಟೈಲ್1 day ago

ಕಣ್ಣುಗಳ ಸುತ್ತ ಸುಂದರ ತ್ವಚೆಗಾಗಿ ಮನೆ ಮದ್ದು

  ಡಾ.ದೀಪಾ ಕೆ., ಡಿ.ಡಿ.ವಿ.ಎಲ್. ಡಾ. ದೀಪಾ ಕೆ, ಡಿಡಿವಿಎಲ್, ಡಿಎನ್‌ಬಿ (ಕಾಸ್ಮೆಟಾಲಜಿ), ಅಪೊಲೊ ಕ್ಲೀನಿಕ್ಸ್. ಬೆಂಗಳೂರು “ಕಣ್ಣುಗಳು ದೇಹಕ್ಕೆ ದೀಪ” ಸುಂದರ ಕಣ್ಣುಗಳನ್ನು, ಕಣ್ಣುಗಳ ಸುತ್ತ...

ಲೈಫ್ ಸ್ಟೈಲ್1 day ago

ಇತ್ತೀಚಿನ ದಿನಗಳಲ್ಲಿ ಗಂಡ-ಹೆಂಡತಿ ಮಧ್ಯೆ ಸದಾ ಕಿರಿಕಿರಿ,ವಿರಸ, ಜಿಗುಪ್ಸೆ, ಕೊನೆ ಘಳಿಗೆ ವಿಚ್ಛೇದನ ಹೆಚ್ಚಾಗುತ್ತಿದೆ ಏಕೆ?

ನಿಮ್ಮ ದಾಂಪತ್ಯ ಜೀವನದಲ್ಲಿ ಸಂತೋಷವಾಗಿ ಬಾಳಬೇಕಾದರೆ ಅವರ ಜನ್ಮ ಕುಂಡಲಿಯಲ್ಲಿ ಇರುವ ಗ್ರಹಗಳೇ ಕಾರಣ. ನಿಮ್ಮ ಜನ್ಮ ಕುಂಡಲಿಯಲ್ಲಿ 2 ನೇ ಮನೆ, 7ನೇ ಮನೆ ಮತ್ತು...

ನಿತ್ಯ ಭವಿಷ್ಯ1 day ago

ಈ ರಾಶಿಯವರು ಕೃಷಿ ಚಟುವಟಿಕೆ ಅಳವಡಿಸಿಕೊಂಡರೆ ಲಾಭದಾಯಕ ! ಕಂಕಣಬಲ ವಿಳಂಬ ಸಾಧ್ಯತೆ ! ಸೋಮವಾರ ರಾಶಿ ಭವಿಷ್ಯ-ಮೇ-10,2021

ಸೂರ್ಯೋದಯ: 05:54 AM, ಸೂರ್ಯಸ್ತ: 06:35 PM ಸ್ವಸ್ತಿ ಶ್ರೀ ಮನೃಪ ಶಾಲಿವಾಹನ ಶಕೆ1943, ಸಂವತ್2077, ಪ್ಲವ ನಾಮ ಸಂವತ್ಸರ ಚೈತ್ರ ಮಾಸ, ವಸಂತ ಋತು, ಉತ್ತರಾಯಣ,...

ಭಾವ ಭೈರಾಗಿ2 days ago

ಕವಿತೆ | ಅನುಭವ

ಸಿದ್ಧಲಿಂಗಪಟ್ಟಣಶೆಟ್ಟಿ ಮಲಗಿತ್ತು ನೋವಿನ ಕೂಸು ಹೂವ ಹಾಸಿಗೆಯಲ್ಲಿ ರಮ್ಯ ಕಾವ್ಯದ ಎಲ್ಲ ಲಕ್ಷಣಗಳುಳ್ಳ ಮುಖ ನವ್ಯತೆಯ ರೋಮಾಂಚ ಅಧರಪುಟ. ನಗೆಯಲ್ಲಿ ಬಂಡಾಯ ಚಂಡಿಕೆ ಬಿಟ್ಟು ಮಂತ್ರ ಸೂಸುವ...

ಲೈಫ್ ಸ್ಟೈಲ್2 days ago

ಶ್ವಾಸಕೋಶದ ಕಾಯಿಲೆ (ಸಿಒಪಿಡಿ) ಯೊಂದಿಗೆ ನೀವು ಹೇಗೆ ಚೆನ್ನಾಗಿ ಬದುಕಬಹುದು? ಅದನ್ನು ನಿಭಾಯಿಸಲು ಇಲ್ಲಿವೆ ಕೆಲವು ಸಲಹೆಗಳು

  ಡಾ. ಸಂಚಯನ್ ರಾಯ್ ಎಂಬಿಬಿಎಸ್,ಡಿಎನ್‌ಬಿ, ಹಿರಿಯ ಸಲಹೆಗಾರರು – ಆಂತರಿಕ ಔಷಧ ಅಪೊಲೊ ಕ್ರೆಡೆಲ್,ಬೆಂಗಳೂರು ಸಿಒಪಿಡಿ, COPD, ಅಥವಾ Chronic obstructive pulmonary disease ದೀರ್ಘಕಾಲದ...

Trending