Connect with us

ಕ್ರೀಡೆ

ಏಷ್ಯಾಡ್ ಬ್ಯಾಡ್ಮಿಂಟನ್ : ಸಿಂಧು ಫೈನಲ್ ಗೇರಿ ಇತಿಹಾಸ,  ಕಂಚಿಗೆ ತೃಪ್ತಿ ಪಟ್ಟ ಸೈನಾ..!

Published

on

ಸುದ್ದಿದಿನ, ಜಕಾರ್ತ : ಆಗಸ್ಟ್ 27: ಭಾರತದ ಸ್ಟಾರ್ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ ಸಿಂಧು ಇಂಡೋನೇಷ್ಯಾದ ಜಕಾರ್ತದಲ್ಲಿ ನಡೆಯುತ್ತಿರುವ 18ನೇ ಏಷ್ಯನ್ ಗೇಮ್ಸ್‌ ಬ್ಯಾಡ್ಮಿಂಟನ್ ಸ್ಪರ್ಧೆಯ ಮಹಿಳಾ ಸಿಂಗಲ್ಸ್‌ನಲ್ಲಿ ಫೈನಲ್ ಪ್ರವೇಶಿಸಿ ಇತಿಹಾಸ ನಿರ್ಮಿಸಿದ್ದಾರೆ. ಏಷ್ಯನ್ ಗೇಮ್ಸ್‌ನಲ್ಲಿ ಫೈನಲ್ ಪ್ರವೇಶಿಸಿದ ಭಾರತದ ಮೊದಲ ಬ್ಯಾಡ್ಮಿಂಟನ್ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಸಿಂಧು ಪಾತ್ರರಾಗಿದ್ದಾರೆ.

ಸೋಮವಾರ ನಡೆದ  ಸೆಮಿಫೈನಲ್ ಪಂದ್ಯದಲ್ಲಿ ವಿಶ್ವದ 3ನೇ ರ್ಯಾಂಕಿಂಗ್ ಶಟ್ಲರದ ಸಿಂಧು, ವಿಶ್ವದ ನಂ.2 ಆಟಗಾರ್ತಿ ಜಪಾನ್‌ನ ಅಕಾನೆ ಯಮಗುಚಿ ಅವರನ್ನು 21-17, 15-21, 21-10 ಗೇಮ್‌ಗಳಲ್ಲಿ ಸೋಲಿಸಿದರು.

ಫೈನಲ್‌ನಲ್ಲಿ ಸಿಂಧು, ವಿಶ್ವದ ನಂ.1 ಆಟಗಾರ್ತಿ ತೈವಾನ್‌ನ ತಾಯ್ ಜು ಯಿಂಗ್ ಅವರನ್ನು ಎದುರಿಸಲಿದ್ದಾರೆ. ಮತ್ತೊಂದು ಸೆಮಿಫೈನಲ್‌ನಲ್ಲಿ ತಾಯ್ ಜು ಯಿಂಗ್ ಭಾರತದ ಸೈನಾ ನೆಹ್ವಾಲ್ ರನ್ನು 21-17, 21-14ರ ನೇರ ಗೇಮ್‌ಗಳಲ್ಲಿ ಸೋಲಿಸಿದರು. ಉಪಾಂತ್ಯ ದಲ್ಲಿ ಸೋಲುಂಡ ಸೈನಾ ಕಂಚಿನ ಪದಕಕ್ಕೆ ತೃಪ್ತಿಪಟ್ಟರು.

ಸುದ್ದಿದಿನ.ಕಾಂ|ವಾಟ್ಸಾಪ್|9986715401

ಕ್ರೀಡೆ

ಕ್ರೀಡಾಪಟುಗಳಿಗೆ ಕೋವಿಡ್ ನಿರೋಧಕ ಲಸಿಕೆ

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲೆಯಲ್ಲಿರುವ 18 ರಿಂದ 44 ವರ್ಷದೊಳಗಿನ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರ ಮಟ್ಟದ ಕ್ರೀಡಾಪಟುಗಳಿಗೆ ಕೋವಿಡ್-19 ನಿರೋಧಕ ಲಸಿಕೆಯನ್ನು ಆದ್ಯತೆಯ ಮೇರೆಗೆ ಒದಗಿಸಲು ಆದೇಶಿಸಲಾಗಿದ್ದು, ಕ್ರೀಡಾಪಟುಗಳು ಅಗತ್ಯ ದಾಖಲಾತಿಗಳೊಂದಿಗೆ ಜೂ.18 ರೊಳಗಾಗಿ ತಮ್ಮ ಹೆಸರನ್ನು ನೋಂದಾವಣಿ ಮಾಡಿಕೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ.

ಕೋವಿಡ್-19 ನಿರೋಧಕ ಲಸಿಕೆ ಹಾಕಿಸಿಕೊಳ್ಳಬಯಸುವ ಕ್ರೀಡಾಪಟುಗಳು ತಮ್ಮ ಆಧಾರ್ ಕಾರ್ಡ್ ಪ್ರತಿ ಮತ್ತು ಕ್ರೀಡಾ ಸಾಧನೆಯ ಪ್ರಮಾಣ ಪತ್ರಗಳೊಂದಿಗೆ ಜೂ.18 ರೊಳಗಾಗಿ ಸಹಾಯಕ ನಿರ್ದೇಶಕರ ಕಛೇರಿ, ಜಿಲ್ಲಾ ಕ್ರೀಡಾಂಗಣ, ದಾವಣಗೆರೆ ಕಚೇರಿಗೆ ಹಾಜರಾಗಿ ತಮ್ಮ ಹೆಸರನ್ನು ನೋಂದಣಿ ಮಾಡಿಕೊಳ್ಳಬೇಕು. ಲಸಿಕೆ ನೀಡುವ ದಿನಾಂಕ ಮತ್ತು ಸ್ಥಳವನ್ನು ನಂತರ ತಿಳಿಸಲಾಗುವುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ಕ್ರೀಡಾ ವಿದ್ಯಾರ್ಥಿ ವೇತನ : ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು 2020-21ನೇ ಸಾಲಿನಲ್ಲಿ ಪ್ರತಿಭಾವಂತ ಮಾಧ್ಯಮಿಕ, ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಾರ್ಷಿಕ ರೂ. 10,000 ಗಳಂತೆ ಕ್ರೀಡಾ ವಿದ್ಯಾರ್ಥಿವೇತನ ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.

ರಾಜ್ಯ ಸರ್ಕಾರದ ಕ್ರೀಡಾ ವಿದ್ಯಾರ್ಥಿ ವೇತನ ಯೋಜನೆಯಡಿ ಪ್ರತಿಭಾವಂತ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಸಲುವಾಗಿ 2020-21ನೇ ಸಾಲಿನಲ್ಲಿ ಮಾಧ್ಯಮಿಕ, ಪ್ರೌಢಶಾಲಾ ವಿದ್ಯಾರ್ಥಿ ಕ್ರೀಡಾಪಟುಗಳಿಗೆ (6 ರಿಂದ 10ನೇ ತರಗತಿ) ವಾರ್ಷಿಕ ರೂ. 10,000 ಗಳಂತೆ ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿ ವೇತನವನ್ನು ನೀಡಲು ಅರ್ಹ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಕ್ರೀಡಾ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಇಚ್ಚಿಸುವ ಕ್ರೀಡಾಪಟುಗಳು ಕಛೇರಿಯ ಅಧಿಕೃತ ಜಾಲತಾಣ http://serviceonline.gov.in/karnataka ಮೂಲಕ ಆನ್‍ಲೈನ್‍ನಲ್ಲಿ ಮೇ 25 ರೊಳಗಾಗಿ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ವಿವರಗಳಿಗೆ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಡಿ.ಆರ್.ಎಂ. ವಿಜ್ಞಾನ ಕಾಲೇಜು ಎದುರು, ಜಿಲ್ಲಾ ಕ್ರೀಡಾಂಗಣ, ದಾವಣಗೆರೆ, ದೂರವಾಣಿ ಸಂಖ್ಯೆ: 08192-237480 ಕ್ಕೆ ಸಂಪರ್ಕಿಸಬಹುದೆಂದು ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ಭಾರತ ಮಹಿಳಾ ಕ್ರಿಕೆಟ್ ಟೀಂನ ಆಟಗಾರ್ತಿ ವೇದ ಕೃಷ್ಣಮೂರ್ತಿ ಅವರ ತಾಯಿ-ಸಹೋದರಿ ಕೊರೋನಾಗೆ ಬಲಿ

Published

on

ಸುದ್ದಿದಿನ,ಚಿಕ್ಕಮಗಳೂರು: ಭಾರತ ಮಹಿಳಾ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ್ತಿ ವೇದ ಕೃಷ್ಣಮೂರ್ತಿ ಅವರ ಸಹೋದರಿ ವಾತ್ಸಲ್ಯ ಕೃಷ್ಣಮೂರ್ತಿ ಅವರು ಕೊರೋನಾದಿಂದ ಚಿಕ್ಕಮಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ತಡರಾತ್ರಿ ಮೃತಪಟ್ಟಿದ್ದಾರೆ.

ಈ ಮೊದಲು ವೇದ ಕೃಷ್ಣಮೂರ್ತಿಯವರ ತಾಯಿ ಭಾನುವಾರ ಸೋಂಕಿನಿಂದ ಮೃತಪಟ್ಟಿದ್ದರು. ವೇದ ಅವರು ಒಂದು ವಾರದ ಅಂತರದಲ್ಲಿ ತಾಯಿ-ಸಹೋದರಿಯನ್ನು ಕಳೆದುಕೊಂಡಿದ್ದಾರೆ. ಮೃತ ಸಹೋದರಿಯನ್ನು ಗುರುವಾರ ಕಡೂರಿನಲ್ಲಿರುವ ಅವರ ಜಮೀನಿನಲ್ಲಿ ಅಂತ್ಯಕ್ರಿಯೆ ನಡೆಸಲಾಗುವುದೆಂದು ತಿಳಿದುಬಂದಿದೆ.

ಇದನ್ನೂ ಓದಿ | ದಾವಣಗೆರೆ | ಹೆಗಡೆ ಡಯಾಗ್ನಸ್ಟಿಕ್ ಸೆಂಟರ್ಗೆ ಜಿಲ್ಲಾಧಿಕಾರಿ ದಿಢೀರ್ ಭೇಟಿ

ವೇದ ಕೃಷ್ಣಮೂರ್ತಿ ಭಾರತೀಯ ಕ್ರಿಕೆಟ್ ನಲ್ಲಿ ತನ್ನ ಸ್ಫೋಟಕ ಬ್ಯಾಟಿಂಗ್ ಮೂಲಕ ಗುರುತಿಸಿಕೊಂಡಿದ್ದರು. ಇದಲ್ಲದೇ ರಾಜ್ಯ ಆರೋಗ್ಯಯ ಹೆಣ್ಣು ಭ್ರೂಣ ಹತ್ಯೆ ವಿರುದ್ಧ ಜಾಗೃತಿಯಲ್ಲಿಯೂ ಪಾಲ್ಗೊಂಡಿದ್ದರು. ಇಷ್ಟೆ ಅಲ್ಲದೆ ಕರ್ನಾಟಕ ಸರ್ಕಾರದಿಂದ ಏಕಲವ್ಯ ಪ್ರಶಸ್ತಿಯನ್ನು ಪಡೆದಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ನಿತ್ಯ ಭವಿಷ್ಯ2 hours ago

ಮದುವೆಗಾಗಿ ವಿಶೇಷ ಮಾಹಿತಿ

  ಗುರು ಬಲ ಬಂದಿರುವ ರಾಶಿಗಳು ಮೇಷ, ಮಿಥುನ, ಸಿಂಹ, ತುಲಾ ಮತ್ತು ಮಕರ ರಾಶಿಗೆ ಗುರು ಬಲ ಉತ್ತಮವಾಗಿದೆ. ಜನ್ಮ ಕುಂಡಲಿಯಲ್ಲಿ ( ಜಾತಕ )ಯಾವ...

ನಿತ್ಯ ಭವಿಷ್ಯ2 hours ago

ಈ ರಾಶಿಯವರು ತುಂಬ ಸಾಲ ನೀಡುವಂತರು! ಈ ರಾಶಿಯವರು ಸಾಲದಲ್ಲಿ ಜೀವನ ನಡೆಸುವರು! ಈ ರಾಶಿಯವರಿಗೆ ಕಂಕಣಬಲದ ಸೌಭಾಗ್ಯ ಕೂಡಿಬರಲಿದೆ! ಶುಕ್ರವಾರ ರಾಶಿ ಭವಿಷ್ಯ-ಸೆಪ್ಟೆಂಬರ್-17,2021

  ಪರಿವರ್ತಿನೀ ಏಕಾದಶಿ,ಕನ್ಯಾ ಸಂಕ್ರಾಂತಿ,ವಿಶ್ವಕರ್ಮ ಪೂಜಾ ಸೂರ್ಯೋದಯ: 06:07 AM, ಸೂರ್ಯಸ್ತ: 06:18 PM ಸ್ವಸ್ತಿ ಶ್ರೀ ಮನೃಪ ಶಾಲಿವಾಹನ ಶಕೆ1943, ಸಂವತ್2077, ಪ್ಲವ ನಾಮ ಸಂವತ್ಸರ...

ದಿನದ ಸುದ್ದಿ1 day ago

ದಾವಣಗೆರೆ | ಸೆ.30 ರಂದು ಬೃಹತ್ ಲೋಕ್‍ಅದಾಲತ್

ಸುದ್ದಿದಿನ,ದಾವಣಗೆರೆ : ರಾಷ್ಟ್ರೀಯ ಮತ್ತು ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ನಿರ್ದೇಶನದ ಮೇರೆಗೆ ದಾವಣಗೆರೆ, ಹರಿಹರ, ಚನ್ನಗಿರಿ, ಹೊನ್ನಾಳಿ ಹಾಗೂ ಜಗಳೂರು ನ್ಯಾಯಾಲಯಗಳ ಆವರಣದಲ್ಲಿ ಸೆಪ್ಟಂಬರ್ 30...

ದಿನದ ಸುದ್ದಿ1 day ago

ಭೋವಿ ಅಭಿವೃದ್ಧಿ ನಿಗಮ : ವಿವಿಧ ಯೋಜನೆಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ : ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ವತಿಯಿಂದ ವಿವಿಧ ಯೋಜನೆಯಡಿ ಸಾಲ ಮತ್ತು ಸಹಾಯಧನ ಸೌಲಭ್ಯ ಕಲ್ಪಿಸಲು ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಭೋವಿ ಅಭಿವೃದ್ಧಿ...

ನಿತ್ಯ ಭವಿಷ್ಯ1 day ago

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ರಾಜಯೋಗ ಪ್ರಾಪ್ತಿ ಅಥವಾ ಮಂತ್ರಿಸ್ಥಾನ ಪ್ರಾಪ್ತಿ ತಿಳಿಯೋಣ

  ನಿಮ್ಮ ಜನ್ಮಕುಂಡಲಿ ಪರೀಕ್ಷಿಸಿ. ಮೇಷ ಲಗ್ನದಲ್ಲಿ ರವಿ ಇರಬೇಕು. ಗುರು ಮತ್ತು ಶುಕ್ರ ಮೀನ ರಾಶಿಯಲ್ಲಿರಬೇಕು. ಶನಿ ಉಚ್ಚರಾಶಿಲ್ಲಿ ಇರಬೇಕು. ಉಚ್ಚ ಪೂರ್ಣಚಂದ್ರನನ್ನು ಮಂಗಳ ನೋಡಬೇಕು....

ನಿತ್ಯ ಭವಿಷ್ಯ1 day ago

ಈ ರಾಶಿಯವರಿಗೆ ಆಸ್ತಿ ವಿಚಾರದಲ್ಲಿ ಮೋಸ ಸಂಭವ! ಸಿಂಹ, ಕನ್ಯಾ ರಾಶಿಯವರಿಗೆ ಶುಭವಾರ್ತೆ ಪಡೆಯುವಿರಿ! ‘ಗುರುವಾರ ರಾಶಿ ಭವಿಷ್ಯ-ಸೆಪ್ಟೆಂಬರ್-16,2021’

ಸೂರ್ಯೋದಯ: 06:07 AM, ಸೂರ್ಯಸ್ತ: 06:19 PM ಸ್ವಸ್ತಿ ಶ್ರೀ ಮನೃಪ ಶಾಲಿವಾಹನ ಶಕೆ1943, ಸಂವತ್2077, ಪ್ಲವ ನಾಮ ಸಂವತ್ಸರ ಭಾದ್ರಪದ ಮಾಸ, ದಕ್ಷಿಣಾಯಣ, ಗ್ರೀಷ್ಮ ಋತು,...

ನಿತ್ಯ ಭವಿಷ್ಯ2 days ago

ಈ ರಾಶಿಯವರಿಗೆ ಲಗ್ನ ಸ್ಥಾನದಲ್ಲಿ ಗುರು ಮತ್ತು ಪಂಚಮ ಸ್ಥಾನದಲ್ಲಿ ಗುರುಬಲ ಇದ್ದರೆ ಸಂತತಿ ಭಾಗ್ಯ ಲಭಿಸುತ್ತದೆ! ಲಗ್ನದಲ್ಲಿ ಮಂಗಳ ಇದ್ದರೆ ಮದುವೆ ತಡವಾಗಿ ಆಗುತ್ತದೆ! ‘ಬುಧವಾರ ರಾಶಿ ಭವಿಷ್ಯ-ಸೆಪ್ಟೆಂಬರ್-15,2021’

ಸೂರ್ಯೋದಯ: 06:07 AM, ಸೂರ್ಯಸ್ತ: 06:19 PM ಸ್ವಸ್ತಿ ಶ್ರೀ ಮನೃಪ ಶಾಲಿವಾಹನ ಶಕೆ1943, ಸಂವತ್2077, ಪ್ಲವ ನಾಮ ಸಂವತ್ಸರ ಭಾದ್ರಪದ ಮಾಸ, ಗ್ರೀಷ್ಮ ಋತು, ದಕ್ಷಿಣಾಯಣ,...

ದಿನದ ಸುದ್ದಿ3 days ago

ದಾವಣಗೆರೆ | ಸೆ.17 ಕ್ಕೆ ಬೃಹತ್ ಲಸಿಕಾ ಮೇಳ, 1 ಲಕ್ಷ ಡೋಸ್ ಗುರಿ : ಜಿಲ್ಲಾಧಿಕಾರಿ ಮಹಾತೇಶ ಬೀಳಗಿ

ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ಸೆಪ್ಟೆಂಬರ್ 17 ರಂದು ಬೃಹತ್ ಲಸಿಕಾ ಮೇಳ ನಡೆಯಲಿದ್ದು 1 ಲಕ್ಷ ಜನರಿಗೆ ಕೊರೊನ ವ್ಯಾಕ್ಸಿನ್ ನೀಡಲು ಕಾರ್ಯಕ್ರಮ ರೂಪಿಸಲಾಗಿದೆ ಎಂದು ಜಿಲ್ಲಾಧಿಕಾರಿ...

ದಿನದ ಸುದ್ದಿ3 days ago

ಹಿಂದಿ ದಿವಸಕ್ಕೆ ಕ.ರ.ವೇ ಸಂಘದಿಂದ ತೀವ್ರ ಆಕ್ಷೇಪ

  ದಿವ್ಯಶ್ರೀ. ವಿ,ಬೆಂಗಳೂರು 1949ಸೆಪ್ಟೆಂಬರ್ 14 ರಂದು ಭಾರತದ ಕೇಂದ್ರ ಸರ್ಕಾರವು ನಮ್ಮ ದೇಶದ 22 ಭಾಷೆಗಳಲ್ಲಿ ಹಿಂದಿ ಭಾಷೆಯನ್ನು ಭಾರತದ ಅಧಿಕೃತ ಭಾಷೆಯನ್ನಾಗಿ ಪ್ರಸ್ತಾಪಿಸಿತು. ಬೆಹಾರ್...

ನಿತ್ಯ ಭವಿಷ್ಯ3 days ago

ಜ್ಯೋತಿಷ್ಯಶಾಸ್ತ್ರ ಅಥವಾ ನಿಮ್ಮ ಜನ್ಮಕುಂಡಲಿ ಪ್ರಕಾರ ಎಂಥಾ ಗುಣವುಳ್ಳ ವ್ಯಕ್ತಿ ಜೊತೆ ಮದುವೆ ಕಾರ್ಯ ಆಗುವುದು? ಕಂಕಣಬಲ ಕೂಡಿ ಬರಲು ಏನು ಮಾಡಬೇಕು?

  ತಮ್ಮ ಜಾತಕ ನೋಡಿ (ಒಂದು ವೇಳೆ ಜಾತಕ ಇಲ್ಲದೆ ಹೋದರೆ ಹುಟ್ಟಿದ ದಿನಾಂಕ ಹಾಗೂ ಸಮಯ ತಿಳಿಸಿದರೆ ಜಾತಕ ಬರೆದು ಕಳುಹಿಸಲಾಗುವುದು) ಜಾತಕ ಆಧಾರ ಮೇಲೆ_...

Trending