ಕ್ರೀಡೆ
ಏಷ್ಯನ್ ಗೇಮ್ಸ್ | ಭಾರತ ಮಹಿಳಾ ಹಾಕಿ ತಂಡಕ್ಕೆ ಭರ್ಜರಿ ಜಯ

ಸುದ್ದಿದಿನ, ಜಕಾರ್ತ: ಇಲ್ಲಿ ನಡೆಯುತ್ತಿರುವ 18 ನೇ ಏಷ್ಯನ್ ಗೇಮ್ಸ್ ನಲ್ಲಿ ಭಾರತ ಮಹಿಳಾ ಹಾಕಿ ತಂಡ 21-0 ಗೋಲುಗಳಿಂದ ಕಜಕಸ್ತಾನ ವಿರುದ್ಧ ಭರ್ಜರಿ ಗೆಲುವು ದಾಖಲಿಸಿದೆ. ಇದರೊಂದಿಗೆ ಭಾರತ ವನಿತೆಯರು ಏಷ್ಯನ್ ಗೇಮ್ಸ್ ನಲ್ಲಿ ಸತತ 2 ನೇ ಜಯ ದಾಖಲಿಸಿದ್ದಾರೆ.
ಬಿ ಗುಂಪಿನಲ್ಲಿ ಮಂಗಳವಾರ ಗೆಲೊರಾ ಬಂಗ್ ಕರ್ನೊ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಭಾರತದ ಗುರ್ಜಿತ್ ಕೌರ್ 4 ಗೋಲುಗಳಿಸಿದರು. ಲಾಲ್ರೆಮ್ಸಿಯಾಮಿ, ವಂದನಾ ಕಟಾರಿಯಾ ಮತ್ತು ನವನೀತ್ ಕೌರ್ ಹ್ಯಾಟ್ರಿಕ್ ಗೋಲು ಗಳಿಸಿ ಭಾರತದ ಜಯದಲ್ಲಿ ಮಹತ್ವದ ಪಾತ್ರ ವಹಿಸಿದರು.
ಪಂದ್ಯದ ಆರಂಭದಿಂದಲೇ ಪ್ರಭಾವಿ ಆಟಕ್ಕಿಳಿದ ಭಾರತ ತಂಡ, ಕಜಕಸ್ತಾನ ವನಿತೆಯರ ಮೇಲೆ ಸವಾರಿ ಮಾಡಿತು. ಮೊದಲ ಕ್ವಾರ್ಟರ್ ನ 7 ನೇ ನಿಮಿಷದಲ್ಲಿ ಗುರ್ಜಿತ್ ಕೌರ್ ಗೋಲಿನ ಖಾತೆ ತೆರೆದರು. ಮೊದಲ ಕ್ವಾರ್ಟರ್ ಮುಕ್ತಾಯಕ್ಕೆ 5-0 ಮುನ್ನಡೆಯಲ್ಲಿ ಭಾರತ ಇತ್ತು.
2 ನೇ ಕ್ವಾರ್ಟರ್ ನಲ್ಲಿ ಆಕ್ರಮಣಕಾರಿ ಆಟಕ್ಕೆ ಮುಂದಾದ ಭಾರತದ ವನಿತೆಯರ ತಂಡ, ಬರೋಬ್ಬರಿ 4 ಗೋಲು ದಾಖಲಿಸಿತು. ಇದರ ಪರಿಣಾಮವಾಗಿ ಮೊದಲಾರ್ಧದ ಮುಕ್ತಾಯಕ್ಕೆ ಭಾರತ 9-0 ಮುನ್ನಡೆ ಪಡೆಯಿತು.
3 ಮತ್ತು 4 ನೇ ಕ್ವಾರ್ಟರ್ ನಲ್ಲಿ ಭಾರತದ ಆಟಗಾರ್ತಿಯರು ಪಾರಮ್ಯ ಮೆರೆದರು. ಪೂರ್ಣಾವಧಿ ಆಟದಲ್ಲಿ ಕಜಕಸ್ತಾನ ತಂಡ, ಭಾರತದ ಗೋಲ್ ಕೀಪರ್ ಭದ್ರಕೋಟೆಯನ್ನು ದಾಟುವ ದುಸ್ಸಾಹಸಕ್ಕೆ ಕೈ ಹಾಕಲಿಲ್ಲ.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ಕ್ರೀಡೆ
ರಾಜ್ಯದ ಕ್ರೀಡಾ ವಿಜ್ಞಾನ ಸಂಸ್ಥೆಯಿಂದ ಪ್ರತಿಭಾನ್ವಿತ ಕ್ರೀಡಾಪಟುಗಳ ಆಯ್ಕೆ

ಸುದ್ದಿದಿನ,ದಾವಣಗೆರೆ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ರಾಜ್ಯದಾದ್ಯಂತ ಮಾರ್ಚ್ 2021ನೇ ಮಾಹೆಯಲ್ಲಿ ರಾಜ್ಯದ ಕ್ರೀಡಾ ವಿಜ್ಞಾನ ಸಂಸ್ಥೆಯಿಂದ (Sports Science) 8 ರಿಂದ 13 ವರ್ಷ ವಯೋಮಾನದೊಳಗಿನ ವಯೋಮಿತಿಯ ಬಾಲಕ/ಬಾಲಕಿಯರಿಗೆ ವೈಜ್ಞಾನಿಕವಾಗಿ ಆಯ್ಕೆ ಪ್ರಕ್ರಿಯೆಯನ್ನು ನಡೆಸಿ ಪ್ರತಿಭಾನ್ವಿತ ಕ್ರೀಡಾಪಟುಗಳನ್ನು ಗುರುತಿಸಲಿದ್ದಾರೆ.
ಜಿಲ್ಲೆಯಲ್ಲಿ ಮಾ.05 ರಂದು ಬೆಳಿಗ್ಗೆ 8.30 ರಿಂದ ಸಂಜೆ 5.30 ರವರೆಗೆ ಆಯ್ಕೆ ಪ್ರಕ್ರಿಯೆಯನ್ನು ಜಿಲ್ಲಾ ಕ್ರೀಡಾಂಗಣದಲ್ಲಿ ಸಂಘಟಿಸಲಾಗುವುದು. 08 ರಿಂದ 13 ವರ್ಷ ವಯೋಮಾನದೊಳಗಿನ ವಯೋಮಿತಿಯ ಬಾಲಕ/ಬಾಲಕಿಯರು ತಮ್ಮ ಜನ್ಮ ದಿನಾಂಕ, ಆಧಾರ್ ಕಾರ್ಡ್ ದಾಖಲೆ ಸಲ್ಲಿಸಬೇಕು. ಪ.ಜಾತಿ/ಪ.ಪಂ ಕ್ಕೆ ಸೇರಿದ ಕ್ರೀಡಾಪಟುಗಳು ಕಡ್ಡಾಯವಾಗಿ ಜಾತಿ ಪ್ರಮಾಣ ಪತ್ರ ಸಲ್ಲಿಸಬೇಕು. ಮಾ.03 ರೊಳಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ ಕಚೇರಿ ಅವಧಿಯಲ್ಲಿ ದಾಖಲೆಗಳನ್ನು ಸಲ್ಲಿಸಬೇಕು.
ಇದನ್ನೂ ಓದಿ | ಅತಿ ಕಡಿಮೆ ಪಂದ್ಯ ; 400 ವಿಕೆಟ್ : ದಾಖಲೆ ಬರೆದ ಸ್ಪಿನ್ನರ್ ಆರ್ ಅಶ್ವಿನ್
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ, ದಾವಣಗೆರೆ ದೂ.ಸಂ: 08192-237480, ಮೊ.ಸಂ: 9480796263, 7019565606ನ್ನು ಸಂಪರ್ಕಿಸಬಹುದೆಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಬಿ.ಶ್ರೀನಿವಾಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ಅತಿ ಕಡಿಮೆ ಪಂದ್ಯ ; 400 ವಿಕೆಟ್ : ದಾಖಲೆ ಬರೆದ ಸ್ಪಿನ್ನರ್ ಆರ್ ಅಶ್ವಿನ್

ಸುದ್ದಿದಿನ,ಅಹಮದಾಬಾದ್: ಟೀಂ ಇಂಡಿಯಾದ ಸ್ಪಿನ್ನರ್ ಆರ್ ಅಶ್ವಿನ್ ಅವರು ಅತಿ ಕಡಿಮೆ ಪಂದ್ಯಗಳಲ್ಲಿ 400 ವಿಕೆಟ್ಗಳನ್ನು ಪಡೆದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದು, ಭಾರತದ ಪರ ಹೊಸ ದಾಖಲೆಯನ್ನು ಬರೆದಿದ್ದಾರೆ.
ಅಶ್ವಿನ್ 77ನೇ ಪಂದ್ಯವನ್ನು ಆಡುತ್ತಿದ್ದು ಇಂಗ್ಲೆಂಡಿನ ಎರಡನೇ ಇನ್ನಿಂಗ್ಸ್ನಲ್ಲಿ ಬೆನ್ ಸ್ಟೋಕ್ಸ್ ವಿಕೆಟ್ ಪಡೆಯುವ ಮೂಲಕ ಈ ಸಾಧನೆ ಮಾಡಿದ್ದು, ವಿಶ್ವದಲ್ಲಿ ಈ ಸಾಧನೆಯನ್ನು ಮಾಡಿದ ಆಟಗಾರರ ಪಟ್ಟಿಯಲ್ಲಿ ಅಶ್ವಿನ್ ಅವರು ಎರಡನೇ ಸ್ಥಾನದಲ್ಲಿದ್ದಾರೆ. ಶ್ರೀಲಂಕಾದ ಸ್ಪಿನ್ನರ್ ಮುತ್ತಯ್ಯ ಮುರುಳೀಧರನ್(72ಪಂದ್ಯ) ಮೊದಲ ಸ್ಥಾನದಲ್ಲಿದ್ದಾರೆ.
400 ವಿಕೆಟ್ ಗಡಿ ದಾಟಿದ ಭಾರತದ 4ನೇ ಬೌಲರ್ ಅಶ್ವಿನ್ ಆಗಿದ್ದು, ಲೆಗ್ ಸ್ಪಿನ್ನರ್ ಅನಿಲ್ ಕುಂಬ್ಳೆ 619ವಿಕೆಟ್, ಕಪಿಲ್ ದೇವ್ 434ವಿಕೆಟ್, ಹರ್ಭಜನ್ ಸಿಂಗ್ 417 ವಿಕೆಟ್ಗಳನ್ನು ಪಡೆದಿದ್ದಾರೆ.
ಮೊದಲ ಇನ್ನಿಂಗ್ಸ್ನಲ್ಲಿ 3 ವಿಕೆಟ್, ಎರಡನೇ ಇನ್ನಿಂಗ್ಸ್ನಲ್ಲಿ ಅಶ್ವಿನ್ 4 ವಿಕೆಟ್ ಪಡೆದಿದ್ದಾರೆ. ಈ ಪಂದ್ಯಕ್ಕೂ ಮೊದಲು 76 ಪಂದ್ಯಗಳ 142 ಇನ್ನಿಂಗ್ಸ್ನಲ್ಲಿ ಬೌಲಿಂಗ್ ಮಾಡಿ 394 ವಿಕೆಟ್ಗಳನ್ನು ಪಡೆದಿದ್ದರು.
"PHENOMENAL" says one legend about the "modern day" legend 🔝👌🏻@anilkumble1074 showers praise on off-spinner @ashwinravi99 😃#TeamIndia #INDvENG #PinkBallTest @Paytm pic.twitter.com/PMAe3jTBtD
— BCCI (@BCCI) February 25, 2021
💬 This body is ageing, but I won't be surprised if I surpass myself in the future: @ashwinravi99 👌🏻
Confidence 💯 percent from the champion spinner 🔝#TeamIndia #INDvENG #PinkBallTest @Paytm pic.twitter.com/vTcdoUGTj7
— BCCI (@BCCI) February 25, 2021
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ಭಾರತ ಟಿ20ಐ ಪಂದ್ಯಾವಳಿಗೆ ತಂಡ ಪ್ರಕಟಿಸಿದ ಬಿಸಿಸಿಐ

ಸುದ್ದಿದಿನ, ನವದೆಹಲಿ : ಟಿ20ಐ ಟೂರ್ನಿಯಲ್ಲಿ ಕಿಶನ್, ಯಾದವ್ ಮತ್ತು ತಿವಾಟಿಯಾ ಎಂಬ ಹೊಸ ಮುಖಗಳನ್ನು ಪರಿಚಯಿಸುತ್ತಿದ್ದು, ಮಾರ್ಚ್ 12 ರಂದು ಅಹಮದಾಬಾದ್ನಲ್ಲಿ ಪ್ರಾರಂಭವಾಗುವ ಸರಣಿಗೆ ಆಯ್ಕೆದಾರರು 19 ಮಂದಿಯ ತಂಡವನ್ನು ಹೆಸರಿಸಿದ್ದಾರೆ.
ವಿಕೆಟ್ ಕೀಪರ್ ಬ್ಯಾಟ್ಸ್ಮನ್ ರಿಷಭ್ ಪಂತ್, ಆಲ್ರೌಂಡರ್ ಆಕ್ಸಾರ್ ಪಟೇಲ್ ಮತ್ತು ವೇಗಿ ಭುವನೇಶ್ವರ್ ಕುಮಾರ್ ಕೂಡ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಕಿಶನ್ ಕೂಡ ಐಪಿಎಲ್ ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದರು. ಮತ್ತು ವೈಟ್-ಬಾಲ್ ಕ್ರಿಕೆಟ್ನಲ್ಲಿ ರೆಡ್ ಹಾಟ್ ಫಾರ್ಮ್ನಲ್ಲಿದ್ದಾರೆ. ವಿಜಯ್ ಹಜಾರೆ ಟ್ರೋಫಿಯಲ್ಲಿ ಜಾರ್ಖಂಡ್ ಪರ 93 ಎಸೆತಗಳಲ್ಲಿ 173 ರನ್ ಗಳಿಸಿದ ಒಂದು ದಿನ ಅವರು ಕಾಲ್ ಅಪ್ ಪಡೆದಿದ್ದಾರೆ.
ರಾಜಸ್ಥಾನ್ ರಾಯಲ್ಸ್ ಮತ್ತು ಹರಿಯಾಣ ಪರ ಆಡುವ ತೆವಾಟಿಯಾ, ಕಳೆದ ವರ್ಷ ಐಪಿಎಲ್ನಲ್ಲಿ ನಡೆದ ಓವರ್ನಲ್ಲಿ ವೆಸ್ಟ್ ಇಂಡಿಯನ್ ಶೆಲ್ಡನ್ ಕಾಟ್ರೆಲ್ರನ್ನು ಐದು ಸಿಕ್ಸರ್ಗಳನ್ನು . ಬಾರಿಸಿ ತಮ್ಮ ತಂಡಕ್ಕೆ ಅದ್ಭುತ ಗೆಲುವು ತಂದುಕೊಟ್ಟಿದ್ದರು.
ಎಡಗೈ ಸ್ಪಿನ್ನರ್ ಕುಲದೀಪ್ ಯಾದವ್, ಸಂಜು ಸ್ಯಾಮ್ಸನ್ ಮತ್ತು ಮನೀಶ್ ಪಾಂಡೆ ಅವರನ್ನು ಕೈಬಿಡಲಾಗಿದ್ದು, ವೇಗಿ ಜಸ್ಪ್ರೀತ್ ಬುಮ್ರಾ ಅವರಿಗೆ ವಿಶ್ರಾಂತಿ ನೀಡಲಾಗಿದೆ.
ಮೊಹಮ್ಮದ್ ಶಮಿ ಮತ್ತು ರವೀಂದ್ರ ಜಡೇಜಾ ಅವರನ್ನು ಆಸ್ಟ್ರೇಲಿಯಾ ಪ್ರವಾಸದಲ್ಲಿ ಅನುಭವಿಸಿದ ಗಾಯಗಳಿಂದ ಇನ್ನೂ ಚೇತರಿಸಿಕೊಳ್ಳುತ್ತಿದ್ದಾರೆ.
ಕೊನೆಯದಾಗಿ 2018 ರ ಫೆಬ್ರವರಿಯಲ್ಲಿ ಟಿ 20 ಆಡಿದ ಪಟೇಲ್ ಕೂಡ ಐಪಿಎಲ್ನಲ್ಲಿ ಸತತ ಪ್ರದರ್ಶನ ನೀಡಿದ್ದಾರೆ. ಅವರು ತಮ್ಮ ಚೊಚ್ಚಲ ಟೆಸ್ಟ್ನಲ್ಲಿ ಐದು ವಿಕೆಟ್ಗಳನ್ನು ಕಬಳಿಸಿದ ನಂತರ ಜಡೇಜಾಗೆ ಬದಲಿ ಆಟಗಾರರಾಗಿದ್ದಾರೆ.
ಗಾಯದಿಂದಾಗಿ ಆಸ್ಟ್ರೇಲಿಯಾ ಸರಣಿಯನ್ನು ತಪ್ಪಿಸಿಕೊಂಡ ಮಿಸ್ಟರಿ ಸ್ಪಿನ್ನರ್ ವರುಣ್ ಚಕ್ರವರ್ತಿ ಕೂಡ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಎಡಗೈ ವೇಗಿ ಟಿ ನಟರಾಜನ್ ಆಸ್ಟ್ರೇಲಿಯಾದಲ್ಲಿ ನಡೆದ ಚೊಚ್ಚಲ ಸರಣಿಯ ನಂತರ ತಮ್ಮ ಸ್ಥಾನವನ್ನು ಉಳಿಸಿಕೊಂಡಿದ್ದಾರೆ.
ಕಿಶನ್ ಮತ್ತು ಪಂತ್ ಇಬ್ಬರನ್ನೂ ವಿಕೆಟ್ ಕೀಪರ್ ಎಂದು ಹೆಸರಿಸಲಾಗಿದೆ, ಆದ್ದರಿಂದ ಕೆ ಎಲ್ ರಾಹುಲ್ ವಿಕೆಟ್ ಮುಂದುವರಿಸುತ್ತಾರೆಯೇ ಎಂದು ನೋಡಬೇಕಾಗಿದೆ. ಎಲ್ಲಾ ಐದು ಪಂದ್ಯಗಳು ಅಹಮದಾಬಾದ್ನಲ್ಲಿ ನಡೆಯಲಿದೆ.
ಭಾರತದ ಟಿ 20 ಐ ತಂಡ
ವಿರಾಟ್ ಕೊಹ್ಲಿ (ಕ್ಯಾಪ್ಟನ್), ರೋಹಿತ್ ಶರ್ಮಾ (ಉಪನಾಯಕ), ಕೆ.ಎಲ್. ರಾಹುಲ್, ಶಿಖರ್ ಧವನ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ರಿಷಭ್ ಪಂತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್) ಚಹಲ್, ವರುಣ್ ಚಕ್ರವರ್ತಿ, ಆಕ್ಸಾರ್ ಪಟೇಲ್, ವಾಷಿಂಗ್ಟನ್ ಸುಂದರ್, ರಾಹುಲ್ ತಿವಾಟಿಯಾ, ಟಿ ನಟರಾಜನ್, ಭುವನೇಶ್ವರ್ ಕುಮಾರ್, ದೀಪಕ್ ಚಹರ್, ನವದೀಪ್ ಸೈನಿ ಮತ್ತು ಶಾರ್ದುಲ್ ಠಾಕೂರ್
Virat Kohli (Capt), Rohit Sharma (vc), KL Rahul, Shikhar Dhawan, Shreyas Iyer, Suryakumar Yadav, Hardik, Rishabh Pant (wk), Ishan Kishan (wk), Y Chahal, Varun Chakravarthy, Axar Patel, W Sundar, R Tewatia, T Natarajan, Bhuvneshwar Kumar, Deepak Chahar, Navdeep, Shardul Thakur. https://t.co/KkunRWtwE6
— BCCI (@BCCI) February 20, 2021
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಲೈಫ್ ಸ್ಟೈಲ್7 days ago
ವೀರ್ಯಾಣು ಬಲವೃದ್ಧಿಗೆ ಇಲ್ಲಿವೆ ಉಪಾಯಗಳು..!
-
ದಿನದ ಸುದ್ದಿ7 days ago
ಸಿದ್ದರಾಮಯ್ಯ ರಾಮನ ವಿರೋಧಿ ಅಂತಾರೆ, ನನ್ನ ಹೆಸರಿನಲ್ಲೇ ರಾಮನಿದ್ದಾನೆ : ಸಿದ್ದರಾಮಯ್ಯ
-
ರಾಜಕೀಯ7 days ago
ಜನರನ್ನು ಕಷ್ಟಕ್ಕೆ ದೂಡಿ ಮೋದಿ ಸರ್ಕಾರ ಲಾಭಗಳಿಸುತ್ತಿದೆ : ಸೋನಿಯಾ ಗಾಂಧಿ ಕಿಡಿ
-
ಲೈಫ್ ಸ್ಟೈಲ್7 days ago
ಜಾನುವಾರುಗಳ ಲೋಹ ಕಾಯಿಲೆ
-
ದಿನದ ಸುದ್ದಿ6 days ago
ಗೋಮಾಂಸವನ್ನು ವಿದೇಶಕ್ಕೆ ರಫ್ತು ಮಾಡಬಹುದು ; ವಿದೇಶದಿಂದ ಬರುವ ಗೋಮಾಂಸವನ್ನು ತಿನ್ನಬಹುದು, ಬಿಜೆಪಿಯ ಈ ಎಡಬಿಡಂಗಿ ನಿಲುವಿನ ಹಿಂದಿನ ಮರ್ಮ ಏನು..? ಮಾಜಿ ಸಿಎಂ ಸಿದ್ದರಾಮಯ್ಯ
-
ಲೈಫ್ ಸ್ಟೈಲ್5 days ago
ಏನಿದು ? ಗಡಿಮಾರಿ..!
-
ರಾಜಕೀಯ4 days ago
ಶಾಸಕ ಶಾಮನೂರು ಶಿವಶಂಕರಪ್ಪ ಸೇರಿದಂತೆ ಮೂವರು ಎಂ ಎಲ್ ಸಿ ಗಳು ಗೈರು : ಬಿಜೆಪಿಗೆ ಸುಲಭ ಗೆಲುವು
-
ದಿನದ ಸುದ್ದಿ6 days ago
ಚನ್ನಗಿರಿ | ಲಂಚ ಸ್ವೀಕರಿಸಿದ್ದ ಗ್ರಾಮ ಲೆಕ್ಕಾಧಿಕಾರಿಗೆ 2 ವರ್ಷ ಜೈಲು