Connect with us

ದಿನದ ಸುದ್ದಿ

ದಾವಣಗೆರೆ | ಡಿ. 22 ರಂದು ‘ಹಾದಿಯ ಹಂಗು’ ಕೃತಿ ಲೋಕಾರ್ಪಣೆ

Published

on

ಸುದ್ದಿದಿನ,ದಾವಣಗೆರೆ : ನಿಟ್ಟೂರು ಬಜ್ಜಿ ಹನುಮಂತಪ್ಪ ಚಾರಿಟಬಲ್ ಟ್ರಸ್ಟ್, ದಾವಣಗೆರೆ ವತಿಯಿಂದ ಡಿ. 22 ರ ಸಂಜೆ 6 ಗಂಟೆಗೆ ನಗರದ ಜಯದೇವ ವೃತ್ತದಲ್ಲಿರುವ ಶ್ರೀ ಶಿವಯೋಗಿ ಮಂದಿರದಲ್ಲಿ ಕವಿ ಮಹಾಂತೇಶ್ ಬಿ ನಿಟ್ಟೂರ್ ಅವರ ಹಾದಿಯ ಹಂಗು ಚುಟುಕು ( ಮುಕ್ತಕ ) ಕವನ ಸಂಕಲನ ಲೋಕಾರ್ಪಣೆ ನಡೆಯಲಿದೆ.

ನಿವೃತ್ತ ಪ್ರಾಧ್ಯಾಪಕರಾದ ಹರಪನಹಳ್ಳಿ ಪ್ರೊ. ತಿಮ್ಮಪ್ಪನವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮವನ್ನು ಕ.ಸಾ.ಪ. ದಾವಣಗೆರೆ ಜಿಲ್ಲಾಧ್ಯಕ್ಷರಾದ ಡಾ. ಹೆಚ್.ಎಸ್ ಮಂಜುನಾಥ್ ಕುರ್ಕಿ ಉದ್ಘಾಟಿಸುವರು.

ಖ್ಯಾತ ಸಾಹಿತಿ ಹಾಗೂ ವಿಮರ್ಶಕರಾದ ಡಾ. ಲೋಕೇಶ್ ಅಗಸನಕಟ್ಟೆ ಕೃತಿ ಲೋಕಾರ್ಪಣೆ ಮಾಡುವರು. ರಾಣೆಬೆನ್ನೂರು ಜಿ.ಎಫ್.ಜಿ.ಸಿ ಕಾಲೇಜಿನ ಉಪನ್ಯಾಸಕರಾದ ಡಾ. ಹೊನ್ನಪ್ಪ ಹೊನ್ನಪ್ಪನವರ ಕೃತಿ ಅವಲೋಕನ ಮಾಡುವರು.

ಮುಖ್ಯ ಅತಿಥಿಗಳಾಗಿ ದಾವಣಗೆರೆ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಜಿ.ಸಿ ನಿರಂಜನ್‌ರವರು, ಜನಮಿಡಿತ ದಿನಪತ್ರಿಕೆಯ ಸಂಪಾದಕರಾದ ಜಿ.ಎಂ.ಆರ್ ಆರಾಧ್ಯ ಹಾಗೂ ಸಾಹಿತಿ ಹರಪನಹಳ್ಳಿಯ ಇಸ್ಮಾಯಿಲ್ ಎಲಿಗಾರ್ ಭಾಗವಹಿಸುವರು. ಕೃತಿ ಕರ್ತೃ ಹಿರೇಕೋಗಲೂರು ಎಸ್.ಟಿ.ಜೆ ಸರ್ಕಾರಿ ಪ. ಪೂ. ಕಾಲೇಜಿನ ಉಪನ್ಯಾಸಕರಾದ ಮಹಾಂತೇಶ್ ಬಿ ನಿಟ್ಟೂರ್, ಕವಿನುಡಿಯಾಡುವರು.

ಕಾವ್ಯ ಗಾಯನ : ಕವಿ ಮಹಾಂತೇಶ್ ಬಿ ನಿಟ್ಟೂರ್ ಅವರ ಕವನಗಳಿಗೆ ರಾಗ ಸಂಯೋಜನೆ ಮಾಡಿರುವ
ದಾವಣಗೆರೆ ವಾಯ್ಸ್ ಪುರಸ್ಕೃತ ಶ್ರೀಮತಿ ಸಂಗೀತ ರಾಘವೇಂದ್ರ , ಇಪ್ಟಾ ಕಲಾವಿದ ಐರಣಿ ಚಂದ್ರು , ಶ್ರೀಮತಿ ಉಮಾದೇವಿ ಹಾಗೂ ಯುವ ಗಾಯಕ ಆರ್ ಪ್ರಶಾಂತ್ ಅವರು ವೇದಿಕೆ ಕಾರ್ಯಕ್ರಮಕ್ಕೂ ಮೊದಲು ಹಾಗೂ ನಂತರ ಕಾವ್ಯ ಗಾಯನ ಮಾಡಲಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಬಿಎಸ್​​ವೈ ರಾಜೀನಾಮೆ ಘೋಷಣೆ..!

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ, ಬೆಂಗಳೂರು : ಸರ್ಕಾರದ ಎರಡು ವರ್ಷಗಳ ಸಾಧನಾ ಕಾರ್ಯಕ್ರಮದ ಭಾಷಣದಲ್ಲಿ ಭಾವುಕರಾಗಿ ಸಿಎಂ ಬಿಎಸ್​​ವೈ ಕಣ್ಣೀರು ಹಾಕಿದರು.

ಸಂಘದ ಕಾರ್ಯಕರ್ತನಾಗಿ ನಂತರ ಆರೆಸ್ಸೆಸ್ ಪ್ರಚಾರಕನಾಗಿ ಬಳಿಕ ರಾಜಕೀಯ ಜೀವನ ಪ್ರವೇಶಿಸಿ ಸಂದರ್ಭದಿಂದ ಹಿಡಿದು ತಮ್ಮ ಈಗಿನ ರಾಜಕೀಯದವರೆಗೂ ತಮ್ಮ ಹೋರಾಟಗಳನ್ನ ಅವರು ಮೆಲುಕು ಹಾಕಿದರು. ಭಾಷಣದ ಮಧ್ಯೆ ಅವರು ಗದ್ಗದಿತರಾಗಿ ಕಣ್ಣೀರು ಹಾಕಿದರು. ಕೊನೆಯಲ್ಲಿ ಗದ್ಗದಿತರಾಗಿ ಊಟದ ನಂತರ ರಾಜಭವನಕ್ಕೆ ತೆರಳಿ ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ ಎಂದು ಕಣ್ಣೀರು ಹಾಕಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಹಿರಿಯ ನಟಿ ಜಯಂತಿ ಇನ್ನಿಲ್ಲ

Published

on

ಸುದ್ದಿದಿನ, ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟಿ, ಅಭಿನಯ ಶಾರದೆ ಜಯಂತಿ (76) ಇಂದು ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಅವರು, ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಕನ್ನಡ, ತಮಿಳು, ಮಲಯಾಳಂ, ಹಿಂದಿ ಸೇರಿದಂತೆ 6 ಭಾಷೆಗಳಲ್ಲಿ ನಟಿಸಿದ್ದಾರೆ. 500ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದ ಅವರು, ಬಹುಭಾಷಾ ನಟಿಯಾಗಿ ಗುರುತಿಸಿಕೊಂಡಿದ್ದರು. ಜಯಂತಿ ಅವರ ನಿಧನಕ್ಕೆ ಚಿತ್ರರಂಗ ಕಂಬನಿ ಮಿಡಿದಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮೊಟ್ಟೆ ಖರೀದಿಯಲ್ಲಿ ಅವ್ಯವಹಾರ ; ಕಾಣದ ಕೈಗಳು ಕೆಲಸ ಮಾಡುತ್ತಿವೆ : ಸಚಿವೆ ಶಶಿಕಲಾ ಜೊಲ್ಲೆ

Published

on

ಸುದ್ದಿದಿನ, ಬೆಂಗಳೂರು : ಮಹಿಳಾ ಮತ್ತು ಮಕ್ಕಳ ಇಲಾಖೆಯಲ್ಲಿ ಮೊಟ್ಟೆ ಖರೀದಿಯಲ್ಲಿ ಅವ್ಯವಹಾರವಾಗಿದೆ ಎಂಬ ಸುದ್ದಿ ಸತ್ಯಕ್ಕೆ ದೂರವಾದದ್ದು, ಇದರ ಹಿಂದೆ ರಾಜಕೀಯ ಷಡ್ಯಂತ್ರ ಅಡಗಿದ್ದು, ವಯಕ್ತಿಕವಾಗಿ ನನ್ನ ತೇಜೊವಧೆ ಮಾಡುವ ಪ್ರಯತ್ನ ನಡೆಸಲಾಗುತ್ತಿದೆ ಎಂದು ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದರು.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮೊಟ್ಟೆ ಖರೀದಿಗೆ ಇದುವರೆಗೂ ಯಾವದೇ ಟೆಂಡರ್ ಕರೆದಿಲ್ಲ. ಅಲ್ಲದೇ ಟೆಂಡರ್ ನೀಡಲು ನಾನು ವಯಕ್ತಿಕವಾಗಿ ಯಾವುದೇ ವ್ಯಕ್ತಿ ಅಥವಾ ಸಂಸ್ಥೆಯಿಂದ ಹಣಕ್ಕಾಗಿ ಬೇಡಿಕೆ ಇಟ್ಟಿಲ್ಲ.

ನಮ್ಮ ಬಿಜೆಪಿ ಪಕ್ಷದ ಶಾಸಕರಾದ ಪರಣ್ಣ ಮುನವಳ್ಳಿಯವರು ತಮ್ಮ ಸಂಬಂಧಿಕರು ಎಂದು ಕರೆದುಕೊಂಡು ಬಂದಾಗ ಕಾನೂನು ಪ್ರಕಾರ ಟೆಂಡರ್ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಂತೆ ಸೂಚಿಸಿದ್ದೇನೆ. ಇದರಲ್ಲಿ ಯಾವುದೇ ಹಣಕಾಸಿನ ವ್ಯವಹಾರದ ಕುರಿತು ನಾನು ಮಾತನಾಡಿಲ್ಲ.

ಆದರೆ, ಒಬ್ಬ ಮಹಿಳೆಯಾಗಿ ಪ್ರಾಮಾಣಿಕವಾಗಿ ಕೆಲಸ ಮಾಡಿಕೊಂಡು ರಾಜಕೀಯದಲ್ಲಿ ನನ್ನದೇ ಆದ ತತ್ವ ಸಿದ್ದಾಂತ ನಂಬಿಕೊಂಡು ಕೆಲಸ ಮಾಡುತ್ತಿರುವ ನನ್ನ ಏಳಿಗೆಯನ್ನು ಸಹಿಸದವರು, ನನ್ನ ವಿರುದ್ಧ ವ್ಯವಸ್ಥಿತ ಷಡ್ಯಂತ್ರ ನಡೆಸುತ್ತಿದ್ದಾರೆ. ಇದರ ಹಿಂದೆ ಕಾಣದ ಕೈಗಳು ಕೆಲಸ ಮಾಡುತ್ತಿವೆ ಎಂದು ಅನುಮಾನ
ವ್ಯಕ್ತಪಡಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending