Connect with us

ದಿನದ ಸುದ್ದಿ

ದಾವಣಗೆರೆ | ಮೇ 26 ರಂದು ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ

Published

on

ಸುದ್ದಿದಿನ,ದಾವಣಗೆರೆ : ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ.ಬಸವರಾಜ ಇವರು ಮೇ. 26 ರಂದು ದಾವಣಗೆರೆ ಜಿಲ್ಲೆ ಪ್ರವಾಸ ಕೈಗೊಳ್ಳಲಿದ್ದಾರೆ.

ಅಂದು ಬೆಳಿಗ್ಗೆ 6 ಗಂಟೆಗೆ ಬೆಂಗಳೂರಿನಿಂದ ಹೊರಟು 9.45 ಕ್ಕೆ ದಾವಣಗೆರೆಯ ಪ್ರವಾಸಿ ಮಂದಿರಕ್ಕೆ (ಸಕ್ರ್ಯೂಟ್ ಹೌಸ್) ಆಗಮಿಸುವರು. ಬೆಳಿಗ್ಗೆ 10 ಗಂಟೆಯಿಂದ 11 ರವರೆಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲೆಯಲ್ಲಿ ಕೋವಿಡ್-19 ವೈರಾಣು ಹರಡುವುದನ್ನು ತಡೆಗಟ್ಟುವ ಸಂಬಂಧ ಕೈಗೊಳ್ಳಲಾಗಿರುವ ಕ್ರಮಗಳ ಕುರಿತು ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸುವರು.

ಬೆಳಿಗ್ಗೆ 11 ರಿಂದ ಮಧ್ಯಾಹ್ನ 12 ರವರೆಗೆ ಮಹಾನಗರಪಾಲಿಕೆ ಸಭಾಂಗಣದಲ್ಲಿ ಮಹಾನಗರಪಾಲಿಕೆ ವ್ಯಾಪ್ತಿಯ ಅಭಿವೃದ್ಧಿ ಕಾರ್ಯಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಳ್ಳುವರು. ಬಳಿಕ ಮಧ್ಯಾಹ್ನ 12 ರಿಂದ 1 ರವರೆಗೆ ದಾವಣಗೆರೆ ಸ್ಮಾರ್ಟ್ ಸಿಟಿ ಯೋಜನೆಯ ಅಭಿವೃದ್ಧಿ ಕಾರ್ಯಗಳ ಪ್ರಗತಿ ಪರಿಶೀಲನಾ ಸಭೆ ನಡೆಸುವರು.

ಮಧ್ಯಾಹ್ನ 1 ಗಂಟೆಯಿಂದ 2 ರವರೆಗೆ ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಸಭಾಂಗಣದಲ್ಲಿ ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಅಭಿವೃದ್ಧಿ ಕಾರ್ಯಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಚಿತ್ರದುರ್ಗ | ಜಿಲ್ಲೆಯಲ್ಲಿ 640 ಜನರಿಗೆ ಕೊರೋನಾ ಪಾಸಿಟಿವ್ : 141 ಮಂದಿ ಬಿಡುಗಡೆ

Published

on

ಸುದ್ದಿದಿನ,ಚಿತ್ರದುರ್ಗ : ಚಿತ್ರದುರ್ಗ ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ಗೆ ಸಂಬಂಧಿಸಿದಂತೆ ಭಾನುವಾರದ ವರದಿಯಲ್ಲಿ 640 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 20,730 ಕ್ಕೆ ಏರಿಕೆಯಾಗಿದೆ.

ಚಿತ್ರದುರ್ಗ ತಾಲ್ಲೂಕಿನಲ್ಲಿ 263, ಚಳ್ಳಕೆರೆ 35, ಹಿರಿಯೂರು 85, ಹೊಳಲ್ಕೆರೆ 55, ಹೊಸದುರ್ಗ 96, ಮೊಳಕಾಲ್ಮುರು ತಾಲ್ಲೂಕಿನಲ್ಲಿ 79 ಪ್ರಕರಣ ಸೇರಿದಂತೆ ಒಟ್ಟು 640 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.

ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಭಾನುವಾರ 141 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಭಾನುವಾರ ಒಟ್ಟು 2410 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ.  ವರದಿಯಲ್ಲಿ 640 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 20,730ಕ್ಕೆ ಏರಿಕೆಯಾಗಿದೆ. ಕೋವಿಡ್‍ನಿಂದ ಇಂದು 4 ಮಂದಿ ಮೃತರಾಗಿದ್ದು ಇದುವರೆಗೆ ಒಟ್ಟು 112 ಜನ ಮೃತಪಟ್ಟಿದ್ದಾರೆ.

ಇದನ್ನೂ ಓದಿ | ಶಿವಮೊಗ್ಗ ಜಿಲ್ಲೆ – ನಮ್ಮ ಹೆಮ್ಮೆ : ಮೈಸೂರು ಕಾಗದ ಕಾರ್ಖಾನೆ ನಿಯಮಿತ (ಎಂ.ಪಿ.ಎಂ)

ಸೋಂಕಿತರ ಪೈಕಿ ಈಗಾಗಲೆ 17,704 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 2,914 ಸಕ್ರಿಯ ಪ್ರಕರಣಗಳು ಇವೆ. ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 1,67,835 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.

ಈವರೆಗೆ 4,50,077 ಜನರ ಮಾದರಿ ಸಂಗ್ರಹಿಸಲಾಗಿದ್ದು, 4,27,384 ಜನರ ವರದಿ ನೆಗೆಟೀವ್ ಬಂದಿದೆ, ಉಳಿದ 1210 ಜನರ ವರದಿ ಬರುವುದು ಬಾಕಿ ಇದೆ. 753 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕøತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ರಂಗನಾಥ್ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕೊರೋನಾ ಎಫೆಕ್ಟ್ | ಯುವಕನಿಗೆ ಬ್ಲಾಕ್ ಫಂಗಸ್ ; ಚಿಕಿತ್ಸೆಗೆ ಸರ್ಕಾರದ ಸಹಾಯ ಬೇಡಿದ ಕುಟುಂಬಸ್ಥರು

Published

on

ಸುದ್ದಿದಿನ,ಬೆಳಗಾವಿ: ಕೊರೋನಾ ರೋಗದ ಪರಿಣಾಮ ಬೆಳಗಾವಿಯಲ್ಲಿ ಬ್ಲ್ಯಾಕ್ ಫಂಗಸ್ ಭೀತಿ ಎದುರಾಗಿದ್ದು, ಬ್ಲ್ಯಾಕ್ ಫಂಗಸ್‌ನಿಂದ 30 ವರ್ಷದ ಯುವಕನೊಬ್ಬ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾನೆ.

ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಖೇಮಲಾಪುರ ಗ್ರಾಮದ ಆನಂದ ಕುಲಾಲಿ ಎಂಬ ಯುವಕ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾನೆ.ಯುವಕ ಆನಂದ ಕುಲಾಲಿ
ಅಥಣಿ ತಾಲೂಕು ಪಂಚಾಯ್ತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಮೇ 5ರಂದು ಕೊರೋನ ಟೆಸ್ಟ್ ಮಾಡಿಸಿದ್ದು, ಮೇ 7ರಂದು ಕೊರೊನಾ ಪಾಸಿಟಿವ್ ಎಂದು ರಿಪೋರ್ಟ್ ಬಂದಿತ್ತು.

ಕೊರೋನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿಯೇ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ಯುವಕ ಆನಂದ ಕುಲಾಲಿಯನ್ನು ಹುಕ್ಕೇರಿ ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಯಿತು. ನಂತರ ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ವೈದ್ಯರು ಅಡ್ಮಿಟ್ ಆಗುವಂತೆ ಹೇಳಿದ್ದರು. ಈ ಹಿನ್ನೆಲೆಯಲ್ಲಿ ಮೇ 10ರಂದು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಯುವಕ ಆನಂದ ಕುಲಾಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾನೆ.

ಇದನ್ನೂ ಓದಿ | ದಾವಣಗೆರೆ | ಪೆಟ್ರೋಲ್-ಡಿಸೇಲ್ ಬೆಲೆ ಏರಿಕೆ ; ಇಂದಿನ ಬೆಲೆ ಎಷ್ಟು ಗೊತ್ತಾ..?

ಬಳಿಕ ಯುವಕ ಆನಂದ ಕುಲಾಲಿಯ ಮುಖವು ಬಾವು ಬರುತ್ತಿದ್ದು ಇಎನ್‌ಟಿ ಸ್ಪೆಷಲಿಸ್ಟ್ ಬಳಿ ತೆರಳಿ ಚೆಕಪ್ ಮಾಡಿಸಿ ಸಲಹೆಯನ್ನು ನೀಡಲಾಗಿತ್ತು. ಬಳಿಕ ಮಹಾರಾಷ್ಟ್ರದ ಮೀರಜ್ ಖಾಸಗಿ ಆಸ್ಪತ್ರೆಗೆ ಯುವಕ ಆನಂದ ಕುಲಾಲಿ
ಅಡ್ಮಿಟ್ ಆದನು. ಆಗ ಖಾಸಗಿ ಆಸ್ಪತ್ರೆಯ ವೈದ್ಯರು ಯುವಕನಿಗೆ ಬ್ಲ್ಯಾಕ್ ಫಂಗಸ್ ಆಗಿದೆ ಎಂದು ತಿಳಿಸಿದ್ದಾರೆ.

ಬ್ಲಾಕ್ ಫಂಗಸ್

ಯುವಕ ಆನಂದ ಕುಲಾಲಿ ಕೊರೋನಾದಿಂದ ಗುಣಮುಖ ಆದ ಬಳಿಕ ಸರ್ಜರಿ ಮಾಡಬೇಕು ಎಂದು ವೈದ್ಯರು ಹೇಳಿದ್ದಾರೆ. ಹೀಗಾಗಿ ಯುವಕನ ಕುಟುಂಬಸ್ಥರು ರಾಜ್ಯ ಸರ್ಕಾರವು ತಮ್ಮ ನೆರವಿಗೆ ಬರುವಂತೆ ಮನವಿ ಮಾಡಿಕೊಂಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಪೆಟ್ರೋಲ್-ಡಿಸೇಲ್ ಬೆಲೆ ಏರಿಕೆ ; ಇಂದಿನ ಬೆಲೆ ಎಷ್ಟು ಗೊತ್ತಾ..?

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ, ದಾವಣಗೆರೆ : ದಾವಣಗೆರೆಯಲ್ಲಿ ಪೆಟ್ರೋಲ್ ಬೆಲೆ ರೂ. ಪ್ರತಿ ಲೀಟರ್‌ಗೆ 97.35 ರೂ. ಆಗಿದೆ. ಭಾನುವಾರ ಮೇ 16 ರಂದು ಮತ್ತು 25 ಪೈಸೆಯನ್ನು ಹೆಚ್ಚಿಸಲಾಗಿದೆ. ಪೆಟ್ರೋಲ್ ಬೆಲೆ ಕರ್ನಾಟಕ ರಾಜ್ಯ ತೆರಿಗೆಯನ್ನು ಒಳಗೊಂಡಿದೆ.

ಡೀಸೆಲ್‌ ಬೆಲೆ

ದಾವಣಗೆರೆ (ಕರ್ನಾಟಕ) ದಲ್ಲಿ ಇಂದು ಡೀಸೆಲ್ ಬೆಲೆ ರೂ. ಲೀಟರ್‌ಗೆ 89.99 ರೂ. ಆಗಿದೆ. ಶನಿವಾರ ಮೇ 15 ರಂದು 63 ಪೈಸೆ ಹೆಚ್ಚಾಗಿದೆ. ಕಳೆದ 10 ದಿನಗಳಲ್ಲಿ ದಾವಷಗೆರೆಯಲ್ಲಿ ಡೀಸೆಲ್ ಬೆಲೆ 88.06 ರಿಂದ 89.99 ರೂಗಳ ನಡುವೆ ಏರಿಳಿತವಾಗಿದೆ. ನೀವು ಇಂದು ಕರ್ನಾಟಕದ ಇತರ ನಗರಗಳಲ್ಲಿ ಡೀಸೆಲ್ ದರ ಮತ್ತು ಹಿಂದಿನ ದಿನಕ್ಕೆ ಹೋಲಿಸಿದರೆ ಬೆಲೆಗಳಲ್ಲಿನ ಬದಲಾವಣೆಯನ್ನು ಸಹ ಪರಿಶೀಲಿಸಬಹುದು. ಡೀಸೆಲ್ ಬೆಲೆ ಕರ್ನಾಟಕ ರಾಜ್ಯ ತೆರಿಗೆಯನ್ನು ಒಳಗೊಂಡಿದೆ.

ಇದನ್ನೂ ಓದಿ |ಕೊರೋನಾ | ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಆಹಾರಗಳು

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending