Connect with us

ದಿನದ ಸುದ್ದಿ

ಉತ್ತರ ಕರ್ನಾಟಕವನ್ನೇ ಕೇಂದ್ರೀಕರಿಸಿ ಎಚ್.ಡಿ.ಕೆ ಭಾಷಣ

Published

on

ಸುದ್ದಿದಿನ ಡೆಸ್ಕ್ | ಭಾರತ ಜನನಿಯ ತನುಜಾತೆ ಎಂದು ಹೇಳುವ ಮೂಲಕ ಭಾಷಣ ಆರಂಭಿಸಿದ ಸಿಎಂ ಕುಮಾರಸ್ವಾಮಿ ಅವರು ನಾಡಿನ ಜನತೆಗೆ ಸ್ವಾತಂತ್ರ್ಯೋತ್ಸದ ಶುಭಾಷಯ ಕೋರಿದರು.

ಆಧುನಿಕ ಪ್ರಪಂಚ ಕಂಡ ಅತ್ಯಂತ ಪ್ರಭಾವಶಾಲಿ ಆಯುಧ ಅಂಹಿಸೆ. ಅಂಹಿಸಾ ಅಸ್ತ್ರದಿಂದ ಸ್ವತಂತ್ರ ಗೆದ್ದುಗೊಂಡ ವೀರ ಪರಂಪರೆಯವರು ನಾವು.ಸ್ವಾತಂತ್ರ್ಯ ಸತ್ಯಾಗ್ರಹ ಮತ್ತು ಹೋರಾಟದಲ್ಲಿ ಪಾಲ್ಗೊಂಡವರಲ್ಲಿ ಉತ್ತರ ಕರ್ನಾಟಕದ ಸಂಖ್ಯೆ ಗಣನೀಯವಾಗಿದೆ. ಕ್ರಾಂತಿ ವೀರ ಸಂಗೊಳ್ಳಿರಾಯಣ್ಣ, ಕಿತ್ತೂರು ರಾಣಿ ಚೆನ್ನಮ್ಮ ಸೇರಿದಂತೆ ಹಲವು ಮಹನೀಯರು ಸ್ವತಂತ್ರ ಸಂಗ್ರಾಮದಲ್ಲಿ ಪಾಲ್ಗೊಂಡಿದ್ದರು ಎಂದರು.

ಗಾಂಧಿ ಅವರ 150 ನೇ ಜಯಂತಿ ಸಂಭ್ರಮದಲ್ಲಿ ರಾಜ್ಯಾದ್ಯಂತ ಗಾಂಧಿ 150 ಒಂದು ರಂಗ ಪಯಣ ಶೀರ್ಷಿಕೆ ಅಡಿ 1 ಸಾವಿರ ರಂಗ ಪ್ರದರ್ಶನ ಮಾಡಲಾಗಿತ್ತದೆ. ಗಾಂಧಿ ಅವರು ಭಾಗಿಯಾಗಿದ್ದ ಏಕೈಕ ಕಾಂಗ್ರೆಸ್ ಅಧಿವೇಶನ ಬೆಳಗಾವಿಯಲ್ಲಿ ನಡೆಯಿತು.
ಇದು ಕರ್ನಾಟಕ ಸ್ವಾತಂತ್ರ್ಯ ಸಂಗ್ರಾಮಕ್ಕೆ ಹಿಡಿದ ಕೈಗನ್ನಡಿಯಾಗಿದೆ.ನೂರಾರು ವರ್ಷ ಆಳಿದ ರಾಷ್ಟ್ರಕೂಟ, ಗಂಗ, ಕದಂಬ ಚಾಲುಕ್ಯ ಹೊಯ್ಸಳ ವಿಜಯನಗರ ಸಾಮ್ರಾಜ್ಯದ ಹಿರಿಮೆ ಸಾಗರದಾಚೆಗೂ ಹಬ್ಬಿದೆ.ಇದು ಕನ್ನಡ ನೆಲದ ಸಾತ್ವಿಕ ಶಕ್ತಿ. ಉತ್ತರ ಕರ್ನಾಟಕವನ್ನೇ ಕೇಂದ್ರೀಕರಿಸಿ ಭಾಷಣ ಮಾಡಿದರು ಸಿಎಂ ಕುಮಾರಸ್ವಾಮಿ.

ಜ್ಞಾನದ ಬಲದಿಂದ ಅಜ್ಞಾನದ ಕೇಡು ನೋಡಯ್ಯಾ
ಜ್ಯೋತಿ ಬಲದಿಂದ ತಮಂಧದ ಕೇಡು ನೋಡಯ್ಯ
ಸತ್ಯದ ಬಲದಿಂದ ಅಸತ್ಯದ ಕೇಡು ನೋಡಯ್ಯ

ಎಂಬ ಬಸವಣ್ಣನವರ ವಚನ ಪ್ರಸ್ತಾಪಿಸಿದ ಅವರು, ಈ ವಚನವೇ ನಮ್ಮ ಆದರ್ಶ
ಅರಿವಿನ ಕೊರತೆ ನಿವಾರಿಸಿ, ಬೆಳಕಿನ ಹೊನಲು ಹರಿಸಿ, ಪ್ರಾಮಾಣಿಕವಾದೊಂದು, ಪ್ರಭುದ್ವವಾದೊಂದು ನಾಡು ಕಟ್ಟುವುದೇ ನಮ್ಮ ಗುರಿ ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ

ಎಸ್.ಎಸ್.ಎಲ್.ಸಿ, ಐಟಿಐ, ಡಿಪ್ಲೋಮ, ಬಿ.ಇ ಪಾಸಾದವರಿಗೆ ಉಚಿತ ತರಬೇತಿಗೆ ಅರ್ಜಿ ಆಹ್ವಾನ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ದಾವಣಗೆರೆ: ಹರಿಹರ ತಾಲ್ಲೂಕಿನ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ 2020-21ನೇ ಸಾಲಿನ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿ ಮುಖ್ಯಮಂತ್ರಿಗಳ ಕೌಶಲ್ಯ ಕರ್ನಾಟಕ ಯೋಜನೆ, ವಿಶೇಷ ಘಟಕಯೋಜನೆ ಮತ್ತು ಗಿರಿಜನ ಉಪಯೋಜನೆ (ಎಸ್.ಸಿ.ಪಿ-ಟಿ.ಎಸ್.ಪಿ) ಮೂಲಕ 18 ರಿಂದ 35 ವರ್ಷದೊಳಗಿನ ನಿರುದ್ಯೋಗಿ ಯುವಕ-ಯುವತಿಯರಿಗೆ ಉದ್ಯೋಗಾವಕಾಶ ಕಲ್ಪಿಸಲು ಉಚಿತ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಎಸ್.ಎಸ್.ಎಲ್.ಸಿ, ಐಟಿಐ, ಡಿಪ್ಲೋಮ, ಬಿ.ಇ ಯಲ್ಲಿ ಪಾಸಾಗಿರುವ ಅಭ್ಯರ್ಥಿಗಳಿಗೆ 2 ತಿಂಗಳು ಅವಧಿಯ ತರಬೇತಿಗಳನ್ನು ಉಚಿತವಾಗಿ ನೀಡಿ ಉದ್ಯೋಗಾವಕಾಶವನ್ನು ಕಲ್ಪಿಸಲಾಗುವುದು. ತರಬೇತಿ ಅವಧಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಶಿಷ್ಯವೇತನ ನೀಡಲಾಗುವುದು.

ಶಿಬಿರದಲ್ಲಿ ಎಸ್.ಎಸ್.ಎಲ್.ಸಿ ಪಾಸಾದ ವಿದ್ಯಾರ್ಥಿಗಳಿಗೆ ಡೊಮೆಸ್ಟಿಕ್ ಡಾಟಾ ಎಂಟ್ರಿ ಆಪರೇಟರ್, ಸಿ.ಎನ್.ಸಿ. ಆಪರೇಟರ್ ಟರ್ನಿಂಗ್, ಸಿ.ಎನ್.ಸಿ. ಪ್ರೋಗ್ರಾಮರ್ ಹಾಗೂ ಕನ್‍ವೆನ್‍ಷನಲ್ ಟರ್ನಿಂಗ್ ಮಷಿನ್ ಆಪರೇಟರ್, ಮಿಲ್ಲಿಂಗ್ ಮಷಿನ್ ಆಪರೇಟರ್, ಸರ್ಫೇಸ್‍ಗ್ರೈಂಡಿಂಗ್ ಮಷಿನ್ ಆಪರೇಟರ್ ಕೋರ್ಸ್‍ಗಳನ್ನು ಮತ್ತು ಡಿಪ್ಲೋಮಾ ಅಥವಾ ಬಿ.ಇ ಯಲ್ಲಿ ಪಾಸಾದ ಅಭ್ಯರ್ಥಿಗಳಿಗೆ ಡಿಸೈನರ್-ಮೆಕ್ಯಾನಿಕಲ್, ಪ್ರೊಡಕ್ಷನ್ ಇಂಜಿನಿಯರ್ ತರಬೇತಿಗಳನ್ನುನೀಡಲಾಗುವುದು.

ತರಬೇತಿ ಮುಗಿದ ನಂತರ ಉದ್ಯೋಗಾವಕಾಶಕ್ಕೆ ಮಾರ್ಗದರ್ಶನ ನೀಡಲಾಗುವುದು. ಅರ್ಜಿ ಸಲ್ಲಿಸಲು ಮಾ.20 ಕೊನೆಯ ದಿನಾಂಕವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರು, ಜಿ.ಟಿ.ಟಿ.ಸಿ., 22 ಸಿ&ಡಿ, ಕೆಐಎಡಿಬಿ, ಇಂಡಸ್ಟ್ರೀಯಲ್ ಏರಿಯಾ ಹರ್ಲಾಪುರ, ಕೆ.ಎಸ್.ಆರ್.ಟಿ.ಸಿ. ಡಿಪೋ ಹತ್ತಿರ, ಹರಿಹರ ಹಾಗೂ ದೂರವಾಣಿ ಸಂಖ್ಯೆ 08192-24937, 9916908111, 8884488202, 8711913947ಕ್ಕೆ ಸಂಪರ್ಕಿಸಿ ಎಂದು ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದ ಪ್ರಾಂಶುಪಾಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ವಿದ್ಯಾರ್ಥಿ ವೇತನ | ಆನ್‍ಲೈನ್ ಅರ್ಜಿ ಅವಧಿ ವಿಸ್ತರಣೆ

Published

on

ಸುದ್ದಿದಿನ,ದಾವಣಗೆರೆ : ಮೆಟ್ರಿಕ್ ನಂತರ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ಅರೆಅಲೆಮಾರಿ ವಿದ್ಯಾರ್ಥಿಗಳಿಂದ 2020-21ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್ ನಂತರ ವಿದ್ಯಾರ್ಥಿವೇತನ ಶುಲ್ಕವಿನಾಯಿತಿ ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಮತ್ತು ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಸೌಲಭ್ಯ ನೀಡಲು ಆಹ್ವಾನಿಸಲಾಗಿದ್ದ ಆನ್‍ಲೈನ್ ಅರ್ಜಿ ಅವಧಿಯನ್ನು ವಿಸ್ತರಿಸಲಾಗಿದೆ.

ಅರ್ಜಿ ಸಲ್ಲಿಸಲು ಮಾ 05 ನಿಗದಿಪಡಿಸಲಾಗಿತ್ತು. ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಿಸುವಂತೆ ಪೋಷಕರು/ವಿದ್ಯಾರ್ಥಿಗಳು/ಶಿಕ್ಷಣ ಸಂಸ್ಥೆಗಳು ಮನವಿ ಸಲ್ಲಿಸಿದ್ದು, ಪ್ರಯುಕ್ತ ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಅರ್ಜಿ ಸಲ್ಲಿಸುವ ಕೊನೆಯ ಮಾ.20 ರವರೆಗೆ ವಿಸ್ತರಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ವೆಬ್ ಸೈಟ್ : www.ssp.postmatric.karnataka.gov.in
ದೂ.ಸಂ: 8050770005/8050770004 ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ: 080-35254757 ಇಮೇಲ್- [email protected] ನ್ನು ಸಂಪರ್ಕಿಸಬಹುದೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಅಡಿಕೆಯಲ್ಲಿ ಅರಳು ಉದುರುವ, ಹಿಂಗಾರು ಒಣಗುವ ಮತ್ತು ಹಿಂಗಾರ ತಿನ್ನುವ ಸಮಸ್ಯೆ : ರೈತರು ತೆಗೆದುಕೊಳ್ಳಬೇಕಾದ ಕ್ರಮಗಳು

Published

on

ಸುದ್ದಿದಿನ,ದಾವಣಗೆರೆ : ಅಡಿಕೆಯಲ್ಲಿ ಹಿಂಗಾರ (ಹೊಂಬಾಳೆ) ತಿನ್ನುವ ಹುಳುಗಳು, ಹರಳು ಉದುರುವುದು, ಹಿಂಗಾರು ಕೊಳೆ ರೋಗ ಕಾಣಿಸಿಕೊಂಡಿದ್ದು ಅದನ್ನು ತಡೆಗಟ್ಟಲು ರೈತರು ಅಗತ್ಯ ಸಂರಕ್ಷಣಾ ಕ್ರಮಗಳನ್ನು ಕೈಗೊಳ್ಳಬೇಕೆಂದು ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರಾದ ಗಿರಿನಾಯ್ಕ್ ಪ್ರಕಟಣೆಯ ಮೂಲಕ ಸಲಹೆ ನೀಡಿದ್ದಾರೆ.

ಅಡಿಕೆ ಬೆಳೆಗೆ ಬೇಸಿಗೆಯಲ್ಲಿ ಪ್ರಮುಖವಾಗಿ ಕಾಣಿಸಿಕೊಳ್ಳುವ ಸಮಸ್ಯೆ ಹರಳು ಉದುರುವುದು ಮತ್ತು ಹಿಂಗಾರ ಕೊಳೆ ರೋಗ. ಅಡಿಕೆಯಲ್ಲಿ ಹಿಂಗಾರ ಬಿಚ್ಚಿ ಕಾಳು ಕಟ್ಟುವ ಮೊದಲೇ ಕೀಟಗಳು ಆಕ್ರಮಿಸಿಕೊಳ್ಳುವುದರಿಂದ ಹಿಂಗಾರ ಸಂಪೂರ್ಣವಾಗಿ ನಾಶವಾಗುತ್ತಿದೆ.

ಹಿಂಗಾರಿಗೆ ಕೊಲೆ ಟ್ರೊಟ್ರೈಕಮ್ಗ್ಲೀಯೋಸ್ಪೊರಿಯ್ಡಿಸ್ ಎಂಬ ಶಿಲೀಂದ್ರದ ಸೋಂಕಿಗೆ ಒಳಗಾದಾಗ ಹಿಂಗಾರ ಒಣಗುವ ಮತ್ತು ಅನುಚಿತ ನೀರಿನ ನಿರ್ವಹಣೆ ಹಾಗೂ ಲಘು ಪೋಷಕಾಂಶಗಳ ಕೊರತೆಯಿಂದ ಅರಳು ಉದುರುವ ಸಮಸ್ಯೆ ಕಂಡು ಬರುತ್ತಿದೆ.

ಉತ್ತಮ ಗಿಡಗಳ ಸಂರಕ್ಷಣೆಗಾಗಿ ರೋಗ ಪೀಡಿತ ಒಣಗಿದ ಹಿಂಗಾರನ್ನು ತೋಟದಿಂದ ತೆಗೆದು ನಾಶಪಡಿಸಬೇಕು ಅಥವಾ ಕಿತ್ತು ಸುಡಬೇಕು ಮತ್ತು ಹೊಸದಾಗಿ ಬಂದ ಹಿಂಗಾರಿನಲ್ಲಿ ಈ ಸಮಸ್ಯೆ ಕಂಡು ಬಂದಲ್ಲಿ ಕಾರ್ಬನ್ಡೈಜಿಮ್ + ಮ್ಯಾಂಕೊಜೆಬ್ 2 ಗ್ರಾಂ. ಪ್ರತಿ ಲೀಟರ್ ನೀರಿಗೆ ಬೆರೆಸಿ ಸಿಂಪಡಿಸಬೇಕು.

ಇದನ್ನೂ ಓದಿ | ಗಾಳಿಪಟ ವೇಗದ ರಾಜಕುಮಾರ ‘ಬೀರ್ ಚಿಲಾರಾಯ್’..!

ಇದರ ಜೊತೆಗೆ ರಸ ಹೀರುವ ಕೀಟಗಳ (ಶಲ್ಕಗಳು ಮತ್ತು ಅಫಿಡ್) ನಿಯಂತ್ರಣಕ್ಕೆ ಅಂತವ್ರ್ಯಾಪಿ ಕೀಟನಾಶಕ ಪ್ಯೂಪ್ರನಿಲ್ 1 ರಿಂದ 1.5 ಮಿ.ಲೀ ಪ್ರತಿ ಲೀಟರ್ ನೀರಿಗೆ ಅಥವಾ ಇಮಿಡಾಕ್ಲೋಪ್ರಿಡ್+ ಅಸಿಫೇಟ್ ಮಿಶ್ರಣದ ಕೀಟನಾಶಕವನ್ನು 2 ಗ್ರಾಂ ಪ್ರತಿ ಲೀಟರ್ ನೀರಿಗೆ ಬೆರೆಸಿ ಸಿಂಪಡಿಸಬೇಕು.

ಅಡಿಕೆಯಲ್ಲಿ ಪ್ರಮುಖವಾಗಿ ಹರಳು ಉದುರುವ ಸಮಸ್ಯೆ ಕಂಡು ಬರುತ್ತಿದ್ದು ಇದರ ನಿರ್ವಹಣೆಗೆ ಕೀಟ ನಾಶಕಗಳ ಸಿಂಪಡಿಸುವ ಸಂದರ್ಭದಲ್ಲಿ ಲಘು ಪೋಷಕಾಂಶಗಳ ಮಿಶ್ರಣವನ್ನು 5 ಮಿ.ಲೀ. ನೀರಿಗೆ ಬೆರೆಸಿ ಸಿಂಪಡಿಸುವುದರಿಂದ ಮತ್ತು ಉತ್ತಮ ನೀರಿನ ನಿರ್ವಹಣೆಯಿಂದ ಹರಳು ಉದುರುವ ಸಮಸ್ಯೆಯನ್ನು ಕಡಿಮೆ ಮಾಡಬಹುದು. ಮತ್ತು ಮಣ್ಣು ನೀರು ಪರೀಕ್ಷೆ ಮಾಡಿಸುವುದರಿಂದ ರೋಗ ಬಾಧೆಗಳನ್ನು ತಡೆಗಟ್ಟಬಹುದು.

ಹೆಚ್ಚಿನ ಮಾಹಿತಿಗಾಗಿ ಆಯಾ ಹೋಬಳಿಯ ತೋಟಗಾರಿಕೆ ಅಧಿಕಾರಿಗಳು ಅಥವಾ ತೋಟಗಾರಿಕೆ ಮಾಹಿತಿ ಮತ್ತು ಸಲಹಾ ಕೇಂದ್ರ ಇವರನ್ನು ಸಂಪರ್ಕಿಸಬಹುದು ಎಂದು ತೋಟಗಾರಿಕೆ ಉಪನಿರ್ದೇಶಕರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ5 hours ago

ಎಸ್.ಎಸ್.ಎಲ್.ಸಿ, ಐಟಿಐ, ಡಿಪ್ಲೋಮ, ಬಿ.ಇ ಪಾಸಾದವರಿಗೆ ಉಚಿತ ತರಬೇತಿಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ: ಹರಿಹರ ತಾಲ್ಲೂಕಿನ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ 2020-21ನೇ ಸಾಲಿನ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿ ಮುಖ್ಯಮಂತ್ರಿಗಳ ಕೌಶಲ್ಯ ಕರ್ನಾಟಕ ಯೋಜನೆ, ವಿಶೇಷ...

ದಿನದ ಸುದ್ದಿ5 hours ago

ವಿದ್ಯಾರ್ಥಿ ವೇತನ | ಆನ್‍ಲೈನ್ ಅರ್ಜಿ ಅವಧಿ ವಿಸ್ತರಣೆ

ಸುದ್ದಿದಿನ,ದಾವಣಗೆರೆ : ಮೆಟ್ರಿಕ್ ನಂತರ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ಅರೆಅಲೆಮಾರಿ ವಿದ್ಯಾರ್ಥಿಗಳಿಂದ 2020-21ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ...

ದಿನದ ಸುದ್ದಿ5 hours ago

ಅಡಿಕೆಯಲ್ಲಿ ಅರಳು ಉದುರುವ, ಹಿಂಗಾರು ಒಣಗುವ ಮತ್ತು ಹಿಂಗಾರ ತಿನ್ನುವ ಸಮಸ್ಯೆ : ರೈತರು ತೆಗೆದುಕೊಳ್ಳಬೇಕಾದ ಕ್ರಮಗಳು

ಸುದ್ದಿದಿನ,ದಾವಣಗೆರೆ : ಅಡಿಕೆಯಲ್ಲಿ ಹಿಂಗಾರ (ಹೊಂಬಾಳೆ) ತಿನ್ನುವ ಹುಳುಗಳು, ಹರಳು ಉದುರುವುದು, ಹಿಂಗಾರು ಕೊಳೆ ರೋಗ ಕಾಣಿಸಿಕೊಂಡಿದ್ದು ಅದನ್ನು ತಡೆಗಟ್ಟಲು ರೈತರು ಅಗತ್ಯ ಸಂರಕ್ಷಣಾ ಕ್ರಮಗಳನ್ನು ಕೈಗೊಳ್ಳಬೇಕೆಂದು...

ಬಹಿರಂಗ5 hours ago

ಗಾಳಿಪಟ ವೇಗದ ರಾಜಕುಮಾರ ‘ಬೀರ್ ಚಿಲಾರಾಯ್’..!

ಡಾ. ಗಿರೀಶ್ ಮೂಗ್ತಿಹಳ್ಳಿ, ಸಂಶೋಧಕರು, ಚಿಕ್ಕಮಗಳೂರು ಮಾರ್ಚ್- 27-2021 ರಂದು ಮಾನ್ಯ ಪ್ರಧಾನ ಮಂತ್ರಿ ಅವರು, “ಬೀರ್ ಚಿಲಾರಾಯ್ ಅವರು ಅಪ್ರತಿಮ ಶೌರ್ಯ ಮತ್ತು ದೇಶಭಕ್ತಿಗೆ ಸಮಾನಾರ್ಥಕವಾಗಿದ್ದರು....

ದಿನದ ಸುದ್ದಿ6 hours ago

24 ಕೆರೆ ತುಂಬಿಸುವ ಯೋಜನೆಗೆ ರೂ.48 ಕೋಟಿಗಳ ಅನುದಾನ ಮಂಜೂರು : ಎಂ.ಪಿ ರೇಣುಕಾಚಾರ್ಯ

ಸುದ್ದಿದಿನ,ದಾವಣಗೆರೆ : ಹೊನ್ನಾಳಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಹೊಸೂರು ಮತ್ತು ಬೆನಕನಹಳ್ಳಿ ಹತ್ತಿರ ತುಂಗಭದ್ರಾ ನದಿಯಿಂದ ಏತನೀರಾವರಿ ಯೋಜನೆ ಮೂಲಕ ಕ್ಷೇತ್ರದ ವ್ಯಾಪ್ತಿಯ 24 ಕೆರೆಗಳ...

ದಿನದ ಸುದ್ದಿ15 hours ago

ಮಾಧ್ಯಮ ಉದ್ಯಮವಾಗಿರುವ ಈ ಕಾಲಘಟ್ಟದಲ್ಲಿ ಜನರೇ ಜನಾಭಿಪ್ರಾಯ ರೂಪಿಸುವ ಹೊಣೆ ಹೊರಬೇಕು : ಹಿರಿಯ ಪತ್ರಕರ್ತ ಬಸವರಾಜ್ ದೊಡ್ಮನಿ

ಸುದ್ದಿದಿನ,ಹರಪನಹಳ್ಳಿ: ಮಾಧ್ಯಮರಂಗ ಕಾವಲು ನಾಯಿಯಾಗಿ ಕೆಲಸ ಮಾಡುವಂತಹ ಕಾಲವಿತ್ತು, ಆದ್ರೆ ಈಗ ಯಾರ ಮನೆಯ ನಾಯಿ ಎಂದು ಜನರೇ ಕೇಳುವ ಮಟ್ಟಕ್ಕೆ ಮಾಧ್ಯಮರಂಗ ತನ್ನ ನೈತಿಕ ಅಂಧ...

ನಿತ್ಯ ಭವಿಷ್ಯ18 hours ago

ಜಾತಕದಲ್ಲಿ ಬರುವ ದೋಷಗಳ ಮಾಹಿತಿ ಅದರ ಸಮಸ್ಯೆ ಮತ್ತು ಪರಿಹಾರ ಇಲ್ಲಿದೆ..!

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ,...

ನಿತ್ಯ ಭವಿಷ್ಯ18 hours ago

ಗುರುವಾರ ರಾಶಿ ಭವಿಷ್ಯ

ಸೂರ್ಯೋದಯ: 06:32 AM,ಸೂರ್ಯಸ್ತ: 06:27 PM ಶಾರ್ವರೀ ನಾಮ ಸಂವತ್ಸರ ಮಾಘ ಮಾಸ, ಉತ್ತರಾಯಣ ಶಿಶಿರ ಋತು, ಕೃಷ್ಣ ಪಕ್ಷ, ತಿಥಿ: ಷಷ್ಠೀ ( 21:59 )...

ದಿನದ ಸುದ್ದಿ1 day ago

ಕೊರೋನ ಲಸಿಕೆ ಪಡೆದ ಸಂಸದ ಜಿ.ಎಂ.ಸಿದ್ದೇಶ್ವರ್

ಸುದ್ದಿದಿನ,ದಾವಣಗೆರೆ: ಕೋವಿಡ್ ನಿಯಂತ್ರಣಕ್ಕೆ ಜಿಲ್ಲೆಯಲ್ಲಿ ಹಮ್ಮಿಕೊಂಡಿರುವ ಮೂರನೇ ಹಂತದ ಕೋವಿಡ್-19 ಲಸಿಕೆ ನೀಡುವ ಅಭಿಯಾನವನ್ನು ಜಿಲ್ಲಾಡಳಿತ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ...

ದಿನದ ಸುದ್ದಿ1 day ago

ಎ ಸಿ ಬಿ ಬಲೆಗೆ ಬಿದ್ದ ಕೊಪ್ಪಳದ ಬಿ ಇ ಓ ಮತ್ತು ಎಫ್ ಡಿ ಎ

ಸುದ್ದಿದಿನ,ಕೊಪ್ಪಳ : ಬಂದ್ ಆಗಿರುವ ಶಾಲೆಯ ಡಿಪಾಸಿಟ್ ಅನ್ನು ವಾಪಾಸ್ ಪಡೆಯಲು ಮೂರುವರೆ (3.500ರೂ) ಲಂಚ ಕೇಳಿದ್ದ ಬಿ ಇ ಓ ಮತ್ತು ಎಫ್ ಡಿ ಎ...

Trending