Connect with us

ದಿನದ ಸುದ್ದಿ

ಕೋವಿಡ್ 19 | ಶಿವಮೊಗ್ಗದಲ್ಲಿ 2 ಹೊಸ ಕೇಸ್ ಪತ್ತೆ : ಒಟ್ಟು 14 ಕೊರೋನಾ ಕೇಸ್

Published

on

ಸುದ್ದಿದಿನ,ಶಿವಮೊಗ್ಗ: ಮಲೆನಾಡು ಗ್ರೀನ್ ಝೋನ್ ನಲ್ಲಿ ಇರುವಾಗಲೇ, ಭಾನುವಾರ ಮತ್ತೆ ಇಬ್ಬರಲ್ಲಿ ಕೊರೊನಾ ಸೋಂಕು ಕಂಡು ಬಂದಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಒಟ್ಟು 14 ಕ್ಕೇರಿದೆ. ಇದು ಮಲೆನಾಡಿಗರಲ್ಲಿ ಆತಂಕಕ್ಕೆ ಕಾರಣವಾಗಿದ್ದು, ಅದರಲ್ಲೂ ಸಂಪೂರ್ಣ ಮಲೆನಾಡು ಪಟ್ಟಣಗಳಾಗಿರುವ ಹೊಸನಗರ ಮತ್ತು ತೀರ್ಥಹಳ್ಳಿಯಲ್ಲಿಯೇ ಈ ಪ್ರಕರಣಗಳು ಕಂಡು ಬಂದಿರುವುದು ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ.

ಸೋಂಕಿತರೆಲ್ಲರೂ ಮುಂಬೈನಿಂದ ಬಂದವರಾಗಿರುವುದು ಸ್ಥಳೀಯರಲ್ಲಿ ಯಾವುದೇ ಲಕ್ಷಣಗಳು ಪತ್ತೆಯಾಗದೇ ಇರುವುದು ಸಮಾಧಾನಕರ ಸಂಗತಿಯಾಗಿದೆ. ಶನಿವಾರ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆಯಲ್ಲಿ ಗರ್ಭಿಣಿ ಮತ್ತು ನಾಲ್ಕು ವರ್ಷದ ಹೆಣ್ಣು ಮಗು ಸೇರಿದಂತೆ ಮೂವರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು.

ಸೋಂಕು ಧೃಡ

ಇದೀಗ ಮತ್ತೆ ತೀರ್ಥಹಳ್ಳಿ ಮತ್ತು ಹೊಸನಗರದ ತಲಾ ಒಬ್ಬರಿಗೆ ವರದಿಯಲ್ಲಿ ಪಾಸಿಟಿವ್ ಬಂದಿರುವುದು ಮತ್ತೊಮ್ಮೆ ಮಲೆನಾಡಿಗರನ್ನು ಬೆಚ್ಚಿ ಬೀಳಿಸುವಂತೆ ಮಾಡಿದೆ. ಈ ಇಬ್ಬರು ಕೂಡ ಕಳೆದೆರಡು ದಿನಗಳ ಹಿಂದೆಯಷ್ಟೇ ಖಾಸಗಿ ವಾಹನದಲ್ಲಿ ಶಿವಮೊಗ್ಗಕ್ಕೆ ಆಗಮಿಸಿದ್ದು, ತಕ್ಷಣವೇ ಇವರನ್ನು ಹಾಸ್ಟೆಲ್ ನಲ್ಲಿ ಕ್ವಾರಂಟೈನ್ ಗೆ ಒಳಪಡಿಸಲಾಗಿತ್ತು. ಶನಿವಾರ ರಾತ್ರಿ ಈ ಇಬ್ಬರಿಗೆ ಕೊರೊನಾ ಸೋಂಕು ತಗುಲಿರೋದು ದೃಢಪಟ್ಟಿದ್ದು, ಇಂದು ಆರೋಗ್ಯ ಇಲಾಖೆಯ ವರದಿಯಲ್ಲಿ ಬಹಿರಂಗವಾಗಿದೆ.

ಸುಳ್ಳು ಸುದ್ದಿ ನಂಬಬೇಡಿ

ಸೋಂಕಿತರಿಬ್ಬರನ್ನು ಮೆಗ್ಗಾನ್ ಕೋವಿಡ್-19 ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಕೊರೊನಾ ಪ್ರಕರಣಗಳು ಪತ್ತೆಯಾಗಿರುವ ಬಗ್ಗೆ ಜಿಲ್ಲೆಯ ಜನರು ಗಾಬರಿಪಡುವ ಅಗತ್ಯವಿಲ್ಲ. ಆದರೆ ಜನರು ಸುರಕ್ಷತೆಯಿಂದ ಇರಬೇಕು ಎಂದು ಜಿಲ್ಲಾಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ಅದರಲ್ಲೂ ಸಾಮಾಜಿಕ ಜಾಲತಾಣಗಳಲ್ಲಿ ಕೆಲವೊಂದು ಸುಳ್ಳು ಸುದ್ದಿಗಳು ಹರಿದಾಡುತ್ತಿವೆ. ಜನರು ಸುಳ್ಳು ಸುದ್ದಿ ನಂಬಬೇಡಿ ಎಂದು ಮನವಿ ಮಾಡಿದ್ದಾರೆ. ಜಿಲ್ಲಾಧಿಕಾರಿ ಶಿವಕುಮಾರ್ ಅವರು ಪೊಲೀಸರು ಮತ್ತು ವೈದ್ಯಕೀಯ ಸಿಬ್ಬಂದಿ ಮತ್ತು ಸರ್ಕಾರಿ ನೌಕರರಿಗೆ ಬೇರೆ ಜಿಲ್ಲೆ ಮತ್ತು ರಾಜ್ಯಗಳಿಂದ ಬಂದವರನ್ನು ಕ್ವಾರಂಟೈನ್ ಮಾಡುವಾಗ ಎಚ್ಚರಿಕೆ ವಹಿಸಲು ಸೂಚಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ | 197 ಹೊಸ ಕೊರೋನಾ ಪ್ರಕರಣಗಳು ಪತ್ತೆ, ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳು ಎಷ್ಟಿವೆ ಗೊತ್ತಾ..?

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲೆಯಲ್ಲಿಂದು 197 ಹೊಸ ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಮೂರು ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ.

ದಾವಣಗೆರೆ ನಗರ ಸೇರಿದಂತೆ ತಾಲೂಕುಗಳಲ್ಲಿ ಪತ್ತೆಯಾದ ಕೊರೋನಾ ಪ್ರಕರಣಗಳ ಸಂಖ್ಯೆ ಹೀಗಿದೆ. ದಾವಣಗೆರೆ 142, ಹರಿಹರ 20, ಜಗಳೂರು 2, ಚನ್ನಗಿರಿ 13, ಹೊನ್ನಾಳಿ 11, ಹೊರ ಜಿಲ್ಲೆಯಿಂದ 09 ಮಂದಿ ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. ಈ ಮೂಲಕ ಸೋಂಕಿತರ ಸಂಖ್ಯೆ 29,905ಕ್ಕೆ ಏರಿಕೆಯಾಗಿದೆ.

ಇದನ್ನೂ ಓದಿ : ದಾವಣಗೆರೆ : ಆಸ್ತಿ ತೆರಿಗೆ ರಿಯಾಯಿತಿ ಸೌಲಭ್ಯ ಅವಧಿ ವಿಸ್ತರಣೆ

ಸೋಮವಾರ 301 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವೆಗೆ ಒಟ್ಟು 26,495 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೆ 304 ಮಂದಿ ಸಾವನ್ನಪ್ಪಿದ್ದಾರೆ. ಜಿಲ್ಲೆಯಲ್ಲಿ ಇನ್ನು 3,106 ಸಕ್ರಿಯ ಕೇಸ್ ಗಳಿವೆ. 68 ವರ್ಷದ ಗೋಪನಾಳ ವೃದ್ಧ, ಹರಿಹರದ 25 ವರ್ಷದ ಯುವಕ, ದಾವಣಗೆರೆಯ 28 ವರ್ಷದ ಯುವಕ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಇಲಾಖೆಯ ಬುಲೆಟಿನ್ ನಲ್ಲಿ ತಿಳಿಸಲಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ : ಆಸ್ತಿ ತೆರಿಗೆ ರಿಯಾಯಿತಿ ಸೌಲಭ್ಯ ಅವಧಿ ವಿಸ್ತರಣೆ

Published

on

ಸುದ್ದಿದಿನ,ದಾವಣಗೆರೆ : ಆಸ್ತಿ ತೆರಿಗೆ ಮೇಲೆ ಶೇ.5 ರಷ್ಟು ರಿಯಾಯಿತಿ ಸೌಲಭ್ಯವನ್ನು 2021 ರ ಏ.30 ರವರೆಗೆ ನೀಡಲಾಗಿತ್ತು. ಕೋವಿಡ್ 19 ಸೋಂಕು ನಿಯಂತ್ರಣಕ್ಕಾಗಿ ಲಾಕ್‍ಡೌನ್ ಇರುವ ಪ್ರಯುಕ್ತ ಶೇ.5 ರಷ್ಟು ರಿಯಾಯಿತಿ ಸೌಲಭ್ಯವನ್ನು ಸರ್ಕಾರದ ಸುತ್ತೋಲೆಯನ್ವಯ ಪ್ರಸಕ್ತ ಸಾಲಿನ ಜೂನ್ 30 ರವರೆಗೆ ವಿಸ್ತರಿಸಲಾಗಿದ್ದು ನಿಗದಿತ ದಿನಾಂಕದೊಳಗಾಗಿ ಆಸ್ತಿ ತೆರಿಗೆಯನ್ನು ಪಾವತಿಸಿ ಈ ಸೌಲಭ್ಯವನ್ನು ಆಸ್ತಿ ಮಾಲೀಕರು ಸದುಪಯೋಗ ಪಡೆದುಕೊಳ್ಳಬೇಕೆಂದು ಹರಿಹರ ನಗರಸಭೆಯ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ | ಕೋವಿಡ್ 19 ಪರೀಕ್ಷೆ ಮತ್ತು ಲಸಿಕೆ ಹಾಕಿಸಿಕೊಳ್ಳಲು ಮನವಿ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕೋವಿಡ್ 19 ಪರೀಕ್ಷೆ ಮತ್ತು ಲಸಿಕೆ ಹಾಕಿಸಿಕೊಳ್ಳಲು ಮನವಿ

Published

on

ಸುದ್ದಿದಿನ,ದಾವಣಗೆರೆ : ಕೋವಿಡ್ 19 ಸಾಂಕ್ರಾಮಿಕ ರೋಗ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಸಿಎಸ್‍ಆರ್ ಪಾರ್ಟನರ್ಸ್ ಇವರ ಸಹಯೋಗದೊಂದಿಗೆ ಅಲ್ಪಸಂಖ್ಯಾತ ಜನಾಂಗದವರು ಹೆಚ್ಚಾಗಿ ವಾಸಿಸುವ ಪ್ರದೇಶಗಳನ್ನು ಗುರುತಿಸಿ ಕೋವಿಡ್ ಪರೀಕ್ಷೆ ಮತ್ತು ಲಸಿಕೆ ಮಾಡಿಸಲು ನಿರ್ದೇಶನ ನೀಡಿದ್ದು, ಜಿಲ್ಲೆಯ ಎಲ್ಲ ಅಲ್ಪಸಂಖ್ಯಾತರು ಲಕ್ಷಣಗಳಿದ್ದಲ್ಲಿ ಪರೀಕ್ಷೆ ಮಾಡಿಸಿಕೊಳ್ಳಬೇಕು ಮತ್ತು ಲಸಿಕೆ ಹಾಕಿಸಿಕೊಂಡು ಎಲ್ಲರೂ ಸರ್ಕಾರದ ನಿಯಮಗಳನ್ನು ಪಾಲಿಸುವಂತೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending