Connect with us

ದಿನದ ಸುದ್ದಿ

ದಾವಣಗೆರೆ | ನಿಜಲಿಂಗಪ್ಪ ಬಡಾವಣೆ 100 ಮೀ. ಪರಿಧಿ ನಿಯಂತ್ರಿತ ವಲಯವೆಂದು ಘೋಷಣೆ

Published

on

ಸುದ್ದಿದಿನ,ದಾವಣಗೆರೆ : ಮಾರ್ಚ್ 26ರಂದು ಪಾಸಿಟಿವ್ ಕೇಸ್ ವರದಿಯಾದ ರೋಗಿ-63ರ ವಾಸಸ್ಥಳ ಅಂದರೆ ಇವರ ಮನೆ (ನಿಜಲಿಂಗಪ್ಪ ಬಡಾವಣೆಯ) ಇರುವ ರಸ್ತೆಯನ್ನು ಒಳಗೊಂಡ ಭೌತಿಕ 100 ಮೀ. ಪರಿಧಿಯ ಇಡೀ ಪ್ರದೇಶವನ್ನು ನಿಯಂತ್ರಿತ ವಲಯವೆಂದು ಹಾಗೂ ಸದರಿ ನಿಯಂತ್ರಿತ ವಲಯದ ಸುತ್ತ ಇರುವ ಪ್ರದೇಶ 5 ಕಿ.ಮೀ. ವ್ಯಾಪ್ತಿ ಪ್ರದೇಶವನ್ನು ಬಫರ್ ಜೋನ್ ಎಂದು ಘೋಷಿಸಲಾಗಿದೆ.

ನಿಯಂತ್ರಿತ ವಲಯ (ನಿಜಲಿಂಗಪ್ಪ ಬಡಾವಣೆಯ) ಚೆಕ್ಕುಬಂಧಿ: ಪೂರ್ವ- 2ನೇ ಕ್ರಾಸ್, 1ನೇ ಮೇನ್ ರಿಂದ 2ನೇ ಮೇನ್‍ವರೆಗೆ, ಪಶ್ಚಿಮ- 6ನೇ ಕ್ರಾಸ್, 1ನೇ ಮೇನ್ ರಿಂದ 2ನೇ ಮೇನ್‍ವರೆಗೆ, ಉತ್ತರ- ಅಮೃತಾ ವಿದ್ಯಾಲಯ ಶಾಲೆ 1ನೇ ಮುಖ್ಯ ರಸ್ತೆ, ದಕ್ಷಿಣ- 2ನೇ ಮುಖ್ಯ ರಸ್ತೆವರೆಗೆ ಕಾರ್ಯ ವಿಧಾನದ ಅನುಸಾರ ಕಾರ್ಯ ನಿರ್ವಹಿಸಲಾಗುವುದು.

ಕೋವಿಡ್-19 ವೈರಸ್ ನಿಯಂತ್ರಣ ಕಾರ್ಯತಂತ್ರಗಳ ಸುಲಭ ಅನುಷ್ಠಾನಕ್ಕಾಗಿ ನಿಯಂತ್ರಿತ ವಲಯ, ಬಫರ್ ವಲಯಗಳನ್ನಾಗಿ ವಿಭಾಗಿಸಿ ಅವುಗಳ ನಿರ್ವಹಣೆಗಾಗಿ ಕಾರ್ಯತಂತ್ರ ರೂಪಿಸಲು ಸರ್ಕಾರ ಕ್ರಮ ಕೈಗೊಂಡಿದೆ. ಈ ಮೇರೆಗೆ ಏ.17ರಂದು ನಿಗಧಿಪಡಿಸಿ ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಿದ ಮೇರೆಗೆ ನಿಯಂತ್ರಿತ ವಲಯ (ನೋವೆಲ್ ಕೊರೊನಾ ವೈಸರ್-ಪಾಸಿಟಿವ್ ವ್ಯಕ್ತಿಯ ನಿವಾಸ ಇರುವ ಸುತ್ತಮುತ್ತಲಿನ ಪ್ರದೇಶ) ಪ್ರದೇಶದಲ್ಲಿ ವೈರಸ್ ಸೋಂಕು ಹರಡದಂತೆ ತೀವ್ರ ತರಹದ ಕ್ರಮಗಳನ್ನು ಅನುಷ್ಠಾನಕ್ಕೆ ತರಬೇಕಾದ ಅಗತ್ಯವಿದೆ.

ಈ ಪ್ರದೇಶದಲ್ಲಿ ಹಿಂದಿನ ಬಾರಿ ಪಾಸಿಟಿವ್ ಪ್ರಕರಣ ವರದಿಯಾದ 28 ದಿನಗಳ ಅವಧಿಯಲ್ಲಿ ಯಾವುದೇ ಹೊಸ ಕೋವಿಡ್-19 ಪ್ರಕರಣ ಆ ಪ್ರದೇಶದಲ್ಲಿ ವರದಿಯಾಗಿರಬಾರದು ಅಥವಾ ನಿಯಂತ್ರಿತ ವಲಯದಲ್ಲಿ ಹತ್ತಕ್ಕಿಂತ ಕಡಿಮೆ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕ ಹೊಂದಿರುವ ವ್ಯಕ್ತಿಗಳು ಸಕ್ರಿಯ ಗೃಹ ದಿಗ್ಭಂಧನಲ್ಲಿ ಇಡಬೇಕಾಗಿದ್ದು, ಈ ಹಿನ್ನೆಲೆಯಲ್ಲಿ ಘೋಷಣೆ ಮಾಡಲಾಗಿದೆ.

ಘಟನಾ ಕಮಾಂಡರ್ ನೇಮಕ: ಪ್ರತಿಯೊಂದು ನಿಯಂತ್ರಿತ ವಲಯಕ್ಕೆ ಒಬ್ಬ ಎಕ್ಸಿಕ್ಯೂಟಿವ್ ಮ್ಯಾಜಿಸ್ಟ್ರೇಟ್ ಅಥವಾ ಒಂದನೇ ದರ್ಜೆಯ ಅಧಿಕಾರಿಗೆ ದಂಡಾಧಿಕಾರಿಯ ಅಧಿಕಾರಿಗಳನ್ನು ನೀಡಿ ಅವರನ್ನು ಘಟನಾ ನಿಯಂತ್ರಕನನ್ನಾಗಿ ನೇಮಿಸಬೇಕಾದ ಹಿನ್ನೆಲೆಯಲ್ಲಿ ಘಟನಾ ಕಮಾಂಡರ್ ಆಗಿ ದಾವಣಗೆರೆ ಉಪವಿಭಾಗಾಧಿಕಾರಿ ಮಮತಾ ಹೊಸಗೌಡರ್ ಅವರನ್ನು ನೇಮಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಬಿಎಸ್​​ವೈ ರಾಜೀನಾಮೆ ಘೋಷಣೆ..!

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ, ಬೆಂಗಳೂರು : ಸರ್ಕಾರದ ಎರಡು ವರ್ಷಗಳ ಸಾಧನಾ ಕಾರ್ಯಕ್ರಮದ ಭಾಷಣದಲ್ಲಿ ಭಾವುಕರಾಗಿ ಸಿಎಂ ಬಿಎಸ್​​ವೈ ಕಣ್ಣೀರು ಹಾಕಿದರು.

ಸಂಘದ ಕಾರ್ಯಕರ್ತನಾಗಿ ನಂತರ ಆರೆಸ್ಸೆಸ್ ಪ್ರಚಾರಕನಾಗಿ ಬಳಿಕ ರಾಜಕೀಯ ಜೀವನ ಪ್ರವೇಶಿಸಿ ಸಂದರ್ಭದಿಂದ ಹಿಡಿದು ತಮ್ಮ ಈಗಿನ ರಾಜಕೀಯದವರೆಗೂ ತಮ್ಮ ಹೋರಾಟಗಳನ್ನ ಅವರು ಮೆಲುಕು ಹಾಕಿದರು. ಭಾಷಣದ ಮಧ್ಯೆ ಅವರು ಗದ್ಗದಿತರಾಗಿ ಕಣ್ಣೀರು ಹಾಕಿದರು. ಕೊನೆಯಲ್ಲಿ ಗದ್ಗದಿತರಾಗಿ ಊಟದ ನಂತರ ರಾಜಭವನಕ್ಕೆ ತೆರಳಿ ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ ಎಂದು ಕಣ್ಣೀರು ಹಾಕಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಹಿರಿಯ ನಟಿ ಜಯಂತಿ ಇನ್ನಿಲ್ಲ

Published

on

ಸುದ್ದಿದಿನ, ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟಿ, ಅಭಿನಯ ಶಾರದೆ ಜಯಂತಿ (76) ಇಂದು ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಅವರು, ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಕನ್ನಡ, ತಮಿಳು, ಮಲಯಾಳಂ, ಹಿಂದಿ ಸೇರಿದಂತೆ 6 ಭಾಷೆಗಳಲ್ಲಿ ನಟಿಸಿದ್ದಾರೆ. 500ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದ ಅವರು, ಬಹುಭಾಷಾ ನಟಿಯಾಗಿ ಗುರುತಿಸಿಕೊಂಡಿದ್ದರು. ಜಯಂತಿ ಅವರ ನಿಧನಕ್ಕೆ ಚಿತ್ರರಂಗ ಕಂಬನಿ ಮಿಡಿದಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮೊಟ್ಟೆ ಖರೀದಿಯಲ್ಲಿ ಅವ್ಯವಹಾರ ; ಕಾಣದ ಕೈಗಳು ಕೆಲಸ ಮಾಡುತ್ತಿವೆ : ಸಚಿವೆ ಶಶಿಕಲಾ ಜೊಲ್ಲೆ

Published

on

ಸುದ್ದಿದಿನ, ಬೆಂಗಳೂರು : ಮಹಿಳಾ ಮತ್ತು ಮಕ್ಕಳ ಇಲಾಖೆಯಲ್ಲಿ ಮೊಟ್ಟೆ ಖರೀದಿಯಲ್ಲಿ ಅವ್ಯವಹಾರವಾಗಿದೆ ಎಂಬ ಸುದ್ದಿ ಸತ್ಯಕ್ಕೆ ದೂರವಾದದ್ದು, ಇದರ ಹಿಂದೆ ರಾಜಕೀಯ ಷಡ್ಯಂತ್ರ ಅಡಗಿದ್ದು, ವಯಕ್ತಿಕವಾಗಿ ನನ್ನ ತೇಜೊವಧೆ ಮಾಡುವ ಪ್ರಯತ್ನ ನಡೆಸಲಾಗುತ್ತಿದೆ ಎಂದು ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದರು.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮೊಟ್ಟೆ ಖರೀದಿಗೆ ಇದುವರೆಗೂ ಯಾವದೇ ಟೆಂಡರ್ ಕರೆದಿಲ್ಲ. ಅಲ್ಲದೇ ಟೆಂಡರ್ ನೀಡಲು ನಾನು ವಯಕ್ತಿಕವಾಗಿ ಯಾವುದೇ ವ್ಯಕ್ತಿ ಅಥವಾ ಸಂಸ್ಥೆಯಿಂದ ಹಣಕ್ಕಾಗಿ ಬೇಡಿಕೆ ಇಟ್ಟಿಲ್ಲ.

ನಮ್ಮ ಬಿಜೆಪಿ ಪಕ್ಷದ ಶಾಸಕರಾದ ಪರಣ್ಣ ಮುನವಳ್ಳಿಯವರು ತಮ್ಮ ಸಂಬಂಧಿಕರು ಎಂದು ಕರೆದುಕೊಂಡು ಬಂದಾಗ ಕಾನೂನು ಪ್ರಕಾರ ಟೆಂಡರ್ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಂತೆ ಸೂಚಿಸಿದ್ದೇನೆ. ಇದರಲ್ಲಿ ಯಾವುದೇ ಹಣಕಾಸಿನ ವ್ಯವಹಾರದ ಕುರಿತು ನಾನು ಮಾತನಾಡಿಲ್ಲ.

ಆದರೆ, ಒಬ್ಬ ಮಹಿಳೆಯಾಗಿ ಪ್ರಾಮಾಣಿಕವಾಗಿ ಕೆಲಸ ಮಾಡಿಕೊಂಡು ರಾಜಕೀಯದಲ್ಲಿ ನನ್ನದೇ ಆದ ತತ್ವ ಸಿದ್ದಾಂತ ನಂಬಿಕೊಂಡು ಕೆಲಸ ಮಾಡುತ್ತಿರುವ ನನ್ನ ಏಳಿಗೆಯನ್ನು ಸಹಿಸದವರು, ನನ್ನ ವಿರುದ್ಧ ವ್ಯವಸ್ಥಿತ ಷಡ್ಯಂತ್ರ ನಡೆಸುತ್ತಿದ್ದಾರೆ. ಇದರ ಹಿಂದೆ ಕಾಣದ ಕೈಗಳು ಕೆಲಸ ಮಾಡುತ್ತಿವೆ ಎಂದು ಅನುಮಾನ
ವ್ಯಕ್ತಪಡಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending