Connect with us

ದಿನದ ಸುದ್ದಿ

ಗಣರಾಜ್ಯೋತ್ಸವ ಆಹ್ವಾನ ತಿರಸ್ಕರಿದ ಡೊನಾಲ್ಡ್‌ ಟ್ರಂಪ್..!

Published

on

ಸುದ್ದಿದಿನ ಡೆಸ್ಕ್ : ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ರವರು ಜನವರಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ನೀಡಿದ್ದ ಆಹ್ವಾನವನ್ನು ತಿರಸ್ಕರಿಸಿದ್ದಾರೆ.ಇತ್ತೀಚೆಗೆ ವೈಟ್ ಹೌಸ್ ನ ಮಾಧ್ಯಮ ಕಾರ್ಯದರ್ಶಿಯಾದ ಸರಸಂಡರ್ಸರವರು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.

ಈ ಕುರಿತು ಭಾರತದಲ್ಲಿರುವ ಅಮೇರಿಕಾ ರಾಯಭಾರಿ ಕಾರ್ಯಾಲಯ ಈ ಕುರಿತು ಯಾವುದೇ ಸ್ಪಷ್ಟೀಕರಣ ನೀಡಿಲ್ಲ.ಸಾಮಾನ್ಯವಾಗಿ ಇಂತಹ ದೇಶದ ಪ್ರತಿಷ್ಠಿತ ಕಾರ್ಯಗಳನ್ನು ಅಯೋಜಿಸುವಾಗ ಆಹ್ವಾನವನ್ನು ಖಚಿತಪಡಿಸಿಕೊಂಡ ನಂತರವೇ ಅಧಿಕೃತವಾಗಿ ಪ್ರಕಟಿಸಲಾಗುತ್ತದೆ. ಆದರೆ ಕಳೆದ ತಿಂಗಳಲ್ಲಿ ನಡೆದ ಕೆಲವು ಭೌಗೋಳಿಕ ಕಾರಣದಿಂದಾಗಿ ಅಮೇರಿಕಾದ ಅಧ್ಯಕ್ಷ ಭಾರತದ ಆಹ್ವಾನವನ್ನು ತಿರಸ್ಕರಿಸಿದ್ದಾರೆ ಎನ್ನಲಾಗಿದೆ.

ಇತ್ತೀಚಿಗೆ ಭಾರತ ರಷ್ಯಾದ S – 400 ಮಿಸೈಲ್ ಯುದ್ಧ ವಿಮಾನ ಖರೀದಿ ಮತ್ತು ಇರಾನ್ ಜೊತೆ ತೈಲ ಒಪ್ಪಂದವನ್ನು ಮಾಡಿಕೊಂಡಿತ್ತು. ಈ ಕಾರಣದಿಂದಾಗಿ ಟ್ರಂಪ್ ತಮ್ಮ ನಿಲುವನ್ನು ಬದಲಿಸಿ ಭಾರತದೊಂದಿಗೆ ಅಂತರ ಕಾಯ್ದುಕೊಂಡು ಭಾರತದ ಆಹ್ವಾನವನ್ನು ತಿರಸ್ಕರಿಸಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ

ದಾವಣಗೆರೆ | ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆ ಕಾಮಗಾರಿಗಳಿಗೆ ಮುಖ್ಯಮಂತ್ರಿಗಳಿಂದ ಚಾಲನೆ

Published

on

ಸುದ್ದಿದಿನ,ದಾವಣಗೆರೆ:ದಾವಣಗೆರೆ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆಯಡಿ 125 ಕೋಟಿ ರೂ. ವೆಚ್ಚದಲ್ಲಿ ಒಟ್ಟು 49 ಕಾಮಗಾರಿಗಳನ್ನು ಕೈಗೆತ್ತಿಕೊಂಡಿದ್ದು, ದಾವಣಗೆರೆ ನಗರ ಸಮಗ್ರ ಅಭಿವೃದ್ಧಿ ಹೊಂದಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಭಾನುವಾರ ನಗರದ ಪಿಜಿ ಬಡಾವಣೆಯ ಡಾ.ಎಂ.ಸಿ.ಮೋದಿ ರಸ್ತೆಯಲ್ಲಿ ಮಹಾನಗರಪಾಲಿಕೆಯ ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ಹಾಗೂ ಶಿಲನ್ಯಾಸ ನೆರವೇರಿಸುವ ಮೂಲಕ ಚಾಲನೆ ನೀಡಿ, ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ನಂತರ ಪತ್ರಕರ್ತರೊಂದಿಗೆ ಅವರು ಮಾತನಾಡಿದರು.

ಮಹಾತ್ಮಗಾಂಧಿ ನಗರ ವಿಕಾಸ ಯೋಜನೆಯಡಿ 1500 ಕೋಟಿ ರೂ. ವೆಚ್ಚದಲ್ಲಿ ರಾಜ್ಯದ 10 ನಗರಪಾಲಿಕೆಗಳಲ್ಲಿ ಕಾಮಗಾರಿ ನಡೆಸಲಾಗುತ್ತಿದ್ದು, ಯಡಿಯೂರಪ್ಪ ನಾಯಕತ್ವದಲ್ಲಿ ಈಗಾಗಲೇ ಹಲವು ಯೋಜನೆ ನೆರವೇರಿದೆ.

ಕೇಂದ್ರ ಸರ್ಕಾರವು ರಾಜ್ಯದ ಹಲವು ಯೋಜನೆಗಳಿಗೆ ಹೆಚ್ಚಾಗಿ ಪ್ರೋತ್ಸಾಹ ನೀಡುವ ಉದ್ದೇಶ ಹೊಂದಿದ್ದು, ಈ ಕುರಿತು ವಾಣಿಜ್ಯ ಮತ್ತು ಕೈಗಾರಿಕ ಸಚಿವರಾದ ಪಿಯೂಷ್ ಗೋಯಲ್ ಜೊತೆ ಮಾತನಾಡಿದ್ದೇನೆ ಎಂದ ಅವರು,
ಉದ್ಯೋಗ ಸೃಷ್ಟಿಸುವ ಉದ್ಯಮಗಳಿಗೆ ಪ್ರೋತ್ಸಾಹ ನೀಡುವ ದೃಷ್ಟಿಯಿಂದ 8 ರಿಂದ 10 ಜಿಲ್ಲೆಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಮೆಗಾ ಟೆಕ್ಸ್‍ಟೈಲ್ ಪಾರ್ಕ್‍ಗಳನ್ನು ಮಾಡಬೇಕು.

ಹಾಗೂ ರಾಜ್ಯಕ್ಕೆ 3 ಮೆಗಾ ಟೆಕ್ಸ್‍ಟೆಲ್ ಆಗಬೇಕು. ಆಟೋ ಮೊಬೈಲ್ ಕ್ಷೇತ್ರಗಳಲ್ಲಿ ಕ್ಲಸ್ಟರ್ ಹೆಚ್ಚಿಗೆ ಮಾಡಬೇಕು ಎನ್ನುವ ಉದ್ದೇಶದಿಂದ ಈಗಾಗಲೇ ಪ್ರಸ್ತಾವನೆ ಸಲ್ಲಿಸಿದ್ದು, ಹಂತ ಹಂತವಾಗಿ ಇವುಗಳನ್ನು ಸಾಕಾರ ಮಾಡುವ ಭರವಸೆ ಹೊಂದಿದ್ದೇನೆ ಎಂದು ಹೇಳಿದರು.

ಅಮೃತ ಗ್ರಾಮಗಳ ಯೋಜನೆಯಡಿ ಹಲವು ಹಣಕಾಸಿನ ಯೋಜನೆಗಳನ್ನು ರೂಪಿಸಿ ಕೆಲಸ ಮಾಡಿದಾಗ ಹೆಚ್ಚುವರಿಯಾಗಿ ಪ್ರತೀ ಗ್ರಾಮ ಪಂಚಾಯಿತಿಗೆ ರೂ.25 ಲಕ್ಷ ಅನುದಾನ ಸಿಗಲಿದೆ. ಮಧ್ಯ ಕರ್ನಾಟಕ ಹಾಗೂ ಉತ್ತರ ಕರ್ನಾಟಕದಲ್ಲಿ ಇತ್ತೀಚಿನ ದಿನಗಳಲ್ಲಿ ಸಾಕಷ್ಟು ರೈತರು ರೇಷ್ಮೆ ಕೃಷಿಯನ್ನು ಅಭಿವೃದ್ಧಿ ಪಡಿಸಿದ್ದು, ಶ್ರೇಷ್ಠ ಗುಣಮಟ್ಟದ ರೇಷ್ಮೆ ಬೆಳೆಯುತ್ತಿದ್ದು, ವಿದೇಶದಿಂದ ಆಮದಾಗುವ ರೇಷ್ಮೆಗೆ ಸರಿಸಮಾನವಾಗಿದ್ದರಿಂದ ಹೆಚ್ಚಿನ ಬೇಡಿಕೆಯಿದೆ ಎಂದು ತಿಳಿಸಿದರು.

ಸ್ಮಾರ್ಟ್ ಸಿಟಿಯೊಂದಿಗೆ ಹಲವಾರು ಕಾಮಗಾರಿಗಳನ್ನು ಒಂದೆ ಕಡೆ ಮಾಡಿದ್ದು, ದಾವಣಗೆರೆಯ ಸಮಗ್ರ ಅಭಿವೃದ್ಧಿಗೆ ಸಹಕಾರಿಯಾಗಲಿದೆ. ಎಸ್.ಸಿ.ಎಸ್.ಪಿ (ಪರಿಶಿಷ್ಟ ಜಾತಿ)ಯಡಿ ಪೌರಕಾರ್ಮಿಕರ ಗೃಹ ಭಾಗ್ಯ ಯೋಜನೆಗೆ 360 ಲಕ್ಷ ರೂ., ಕಾಮಗಾರಿಗಳಿಗೆ 1440 ಲಕ್ಷ ರೂ., ಹಾಗೂ ಟಿಎಸ್‍ಪಿ (ಪರಿಶಿಷ್ಟ ಪಂಗಡ) ದಡಿ ಪೌರಕಾರ್ಮಿಕರಿಕರ ಗೃಹ ಭಾಗ್ಯ ಯೋಜನೆಗೆ 146.10 ಲಕ್ಷ ರೂ., ಕಾಮಗಾರಿಗಳಿಗೆ 584.40 ಲಕ್ಷ ರೂ. ಅನುದಾನ ಬಿಡುಗಡೆಯಾಗಿದೆ. ಇನ್ನೂ ಸಾಮಾನ್ಯ ಕಾಮಗಾರಿಗಳಿಗೆ 5469.50 ಲಕ್ಷ ರೂ. ಮೀಸಲಿಡಲಾಗಿದೆ ಎಂದರು.

ಮಹಾನಗರ ಪಾಲಿಕೆಯ ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆಯಡಿ 10 ಉದ್ಯಾನವನಗಳು, 2 ಕಾಲೇಜುಗಳಿಗೆ ಪರಿಕರ ಒದಗಿಸುವುದು, 74.995 ಕಿ.ಮೀ ಸಿ.ಸಿ. ಚರಂಡಿ ನಿರ್ಮಾಣ, 03.750 ಕಿ.ಮೀ ಒಳಚರಂಡಿ ನಿರ್ಮಾಣ, 18.551 ಕಿ.ಮೀ ಡಾಂಬಾರ್ ರಸ್ತೆ, 17.932 ಕಿ.ಮೀ ಕಾಂಕ್ರಿಟ್ ರಸ್ತೆ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಉದ್ದೇಶಿಸಲಾಗಿದೆ ಎಂದು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ.ಬಸವರಾಜ, ಸಂಸದ ಜಿ.ಎಂ.ಸಿದ್ದೇಶ್ವರ, ಶಾಸಕ ಎಸ್.ಎ.ರವೀಂದ್ರನಾಥ್, ವಿಧಾನ ಪರಿಷತ್ ಮಾಜಿ ಮುಖ್ಯ ಸಚೇತಕ ಎ.ಶಿವಯೋಗಿ ಸ್ವಾಮಿ, ಮಹಾನಗರಪಾಲಿಕೆ ಮಹಾಪೌರರಾದ ಎಸ್.ಟಿ.ವೀರೇಶ್, ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಬಿ.ರಿಷ್ಯಂತ್, ಮಹಾನಗರಪಾಲಿಕೆ ಉಪಮೇಯರ್ ಸೌಮ್ಯ ನರೇಂದ್ರಕುಮಾರ್, ನಗರಪಾಲಿಕೆ ಆಯುಕ್ತ ವಿಶ್ವನಾಥ್ ಮುದಜ್ಜಿ, ಪಾಲಿಕೆ ಸದಸ್ಯರಾದ ಪ್ರಸನ್ನ ಕುಮಾರ್, ಕೆ.ಟಿ.ವೀರೇಶ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಜಿಲ್ಲೆಯ 582 ಕೇಂದ್ರಗಳಲ್ಲಿ ಬೃಹತ್ ಲಸಿಕಾ ಮೇಳ ; ನಗರದಲ್ಲಿ ವ್ಯಾಕ್ಸಿನೇಷನ್ ವೀಕ್ಷಿಸಿದ ಸಂಸದರು

Published

on

ಸುದ್ದಿದಿನ,ದಾವಣಗೆರೆ : ಕೋವಿಡ್-19 ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರದ ಸೂಚನೆಯಂತೆ ದಾವಣಗೆರೆ ನಗರದಲ್ಲಿ ಶುಕ್ರವಾರ ವಿದ್ಯಾನಗರದ ಶಿವ ಪಾರ್ವತಿ ದೇವಸ್ಥಾನದಲ್ಲಿ ಏರ್ಪಡಿಸಿದ ಬೃಹತ್ ಲಸಿಕಾ ಮೇಳದ ಅಂಗವಾಗಿ ನಡೆದ ಲಸಿಕಾಕರಣ ಕಾರ್ಯಕ್ರಮದಲ್ಲಿ ಸಂಸದ ಜಿ.ಎಂ.ಸಿದ್ದೇಶ್ವರ ಅವರು ಭಾಗವಹಿಸಿ, ಫಲಾನುಭವಿಗಳ ಯೋಗಕ್ಷೇಮ ವಿಚಾರಿಸಿದರು.

ಜಿಲ್ಲೆಯಾದ್ಯಂತ ಶುಕ್ರವಾರದಂದು ಬೃಹತ್ ಲಸಿಕಾ ಮೇಳ ಹಮ್ಮಿಕೊಳ್ಳಲಾಗಿದ್ದು, ನಗರದ ಮೋತಿವೀರಪ್ಪ ಕಾಲೇಜು ಹಾಗೂ ಸೂಪರ್ ಮಾರ್ಕೆಟ್ ಕೇಂದ್ರಗಳಲ್ಲಿ ಸಂಸದರೊಂದಿಗೆ, ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್ ಮುಂತಾದ ಅಧಿಕಾರಿಗಳು ಭೇಟಿ ನೀಡಿ ಲಸಿಕೆ ಮೇಳದಲ್ಲಿ ಪಾಲ್ಗೊಂಡು, ಲಸಿಕೆ ಕಾರ್ಯಕ್ರಮ ವೀಕ್ಷಿಸಿದರು.

ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಸಂಸದ ಜಿ.ಎಂ. ಸಿದ್ದೇಶ್ವರ್ ಅವರು ಪ್ರಪಂಚದಲ್ಲೇ ಅತೀ ದೊಡ್ಡ ವ್ಯಾಕ್ಸಿನೇಷನ್ ಮೇಳ ಇದಾಗಿದ್ದು, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ನಮ್ಮ ಸರ್ಕಾರ ಜನರ ಹಿತಕ್ಕೆ ಬದ್ಧವಾಗಿದೆ ಎಂದರು.

ಜಿಲ್ಲೆಯ 195 ಗ್ರಾಮ ಪಂಚಾಯಿತಿಗಳಲ್ಲಿ ಹಾಗೂ ಪಟ್ಟಣ ಪಂಚಾಯಿತಿ, ನಗರ ಸಭೆ, ವ್ಯಾಪ್ತಿಯಲ್ಲಿ 5 ರಿಂದ 6 ಕಡೆ ಕೋವಿಡ್ ನಿರೋಧಕ ಲಸಿಕೆ ಹಾಕಲಾಗುತ್ತಿದ್ದು, ದಾವಣಗೆರೆ ನಗರದ ಒಟ್ಟು 57 ಕೇಂದ್ರಗಳಲ್ಲಿ ಲಸಿಕೆ ನೀಡಲಾಗುತ್ತಿದೆ. ನಗರದ 45 ವಾರ್ಡ್ ಹಾಗೂ ಸಿ.ಜಿ. ಆಸ್ಪತ್ರೆಯಲ್ಲಿ ವ್ಯಾಕ್ಸಿನೇಷನ್ ನೀಡುತ್ತಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿ ಕನಿಷ್ಠ 200 ರಿಂದ 500 ಜನರಿಗೆ ಲಸಿಕೆ ನೀಡಲು ವ್ಯವಸ್ಥೆ ಮಾಡಲಾಗಿದ್ದು, ಶುಕ್ರವಾರ ಒಂದೇ ದಿನ ಒಟ್ಟು 01 ಲಕ್ಷ ಲಸಿಕೆ ನೀಡುವ ಗುರಿ ಹೊಂದಿದ್ದೇವೆ. ಈಗಾಗಲೇ 10 ಲಕ್ಷದ 52 ಸಾವಿರ ಜನರಿಗೆ ಲಸಿಕೆ ನೀಡಲಾಗಿದ್ದು, 11.5 ಲಕ್ಷದ ಗುರಿ ಸಾಧಿಸಲು ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆ ಶ್ರಮಿಸುತ್ತಿದೆ ಎಂದರು.

ನಗರದ ದೊಗ್ಗಳ್ಳಿ ಕಾಂಪೌಡ್‍ಗೆ ಭೇಟಿ

ನಗರದ ದೊಗ್ಗಳ್ಳಿ ಕಾಂಪೌಡ್‍ಗೆ ಭೇಟಿ ನೀಡಿ, ಅಲ್ಲಿಯ ಕೊಳಚೆ ಪ್ರದೇಶವನ್ನು ವೀಕ್ಷಿಸಿದ ಸಂಸದರು, ಅಲ್ಲಿಯ ಜನರಿಗೆ ಕೊಳಚೆ ಪ್ರದೇಶದಲ್ಲಿ ಓಡಾಡಲು ಅವ್ಯವಸ್ಥೆಯಾಗುತ್ತಿದೆ. ಮಳೆಗಾಲದಲ್ಲಿ ನೀರು ಶೇಖರಣೆಯಾಗಿ ಸುತ್ತ-ಮುತ್ತಲಿನ ಪ್ರದೇಶ ಮಲಿನಗೊಂಡಿದ್ದು, ಜನ-ಜೀವನ ಜೀವಿಸಲು ಕಷ್ಟಕರವಾಗಿದೆ. ಕೂಡಲೇ ಈ ಸ್ಥಳವನ್ನು ಸ್ವಚ್ಛಗೊಳಿಸಿ ಸಾರ್ವಜನಿಕರಿಗೆ ಸುವ್ಯವಸ್ಥಿತ ರಸ್ತೆ ಹಾಗೂ ಯುಜಿಡಿ ವ್ಯವಸ್ಥೆ ಕಲ್ಪಿಸಬೇಕು ಎಂದು ಮಹಾನಗರ ಪಾಲಿಕೆಯ ಆಯುಕ್ತರಿಗೆ ಸೂಚನೆ ನೀಡಿದರು.

ಈ ವೇಳೆ ಮಹಾನಗರ ಪಾಲಿಕೆಯ ಮಹಾಪೌರ ಎಸ್.ಟಿ.ವೀರೇಶ್, ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್, ಪಾಲಿಕೆ ಆಯುಕ್ತ ವಿಶ್ವನಾಥ್ ಮುದ್ದಜ್ಜಿ, ಡಿಹೆಚ್‍ಒ ಡಾ.ನಾಗರಾಜ್, ಆರ್‍ಸಿಹೆಚ್ ಅಧಿಕಾರಿ ಡಾ.ಮೀನಾಕ್ಷಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಸೆ.30 ರಂದು ಬೃಹತ್ ಲೋಕ್‍ಅದಾಲತ್

Published

on

ಸುದ್ದಿದಿನ,ದಾವಣಗೆರೆ : ರಾಷ್ಟ್ರೀಯ ಮತ್ತು ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ನಿರ್ದೇಶನದ ಮೇರೆಗೆ ದಾವಣಗೆರೆ, ಹರಿಹರ, ಚನ್ನಗಿರಿ, ಹೊನ್ನಾಳಿ ಹಾಗೂ ಜಗಳೂರು ನ್ಯಾಯಾಲಯಗಳ ಆವರಣದಲ್ಲಿ ಸೆಪ್ಟಂಬರ್ 30 ರಂದು ಮೆಗಾ ಲೋಕ್ ಅದಾಲತ್ ಆಯೋಜಿಸಲಾಗಿದೆ.

ಕರ್ನಾಟಕ ರಾಜ್ಯ ಉಚ್ಚ ನ್ಯಾಯಾಲಯದ ಹಂಗಾಮಿ ಮುಖ್ಯ ನ್ಯಾಯಮೂರ್ತಿಗಳಾದ ಸತೀಶ್ ಚಂದ್ರ ಶರ್ಮ ಹಾಗೂ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷರು ಹಾಗೂ ನ್ಯಾಯಮೂರ್ತಿಗಳಾದ ಅರವಿಂದ್ ಕುಮಾರ್‍ರವರು ಲೋಕ್ ಅದಾಲತ್ ಮೂಲಕ ಅತೀ ಹೆಚ್ಚು ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಗೊಳಿಸಲು ಬಯಸಿದ್ದು, ಈಗ ಮತ್ತೊಮ್ಮೆ ಪ್ರಾಧಿಕಾರವು ಸೆ.30 ರಂದು ಮೆಗಾ ಲೋಕ್ ಅದಾಲತ್ ಮೂಲಕ ಅತೀ ಹೆಚ್ಚು ಪ್ರಕರಣಗಳನ್ನು ವಿಲೇವಾರಿ ಮಾಡಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಲು ಉದ್ದೇಶಿಸಲಾಗಿದೆ. ಹೀಗಾಗಿ ಜಿಲ್ಲೆಗಳಲ್ಲಿರುವ ಎಲ್ಲಾ ನ್ಯಾಯಾಲಯಗಳ ವ್ಯಾಪ್ತಿಯಲ್ಲಿ ಮೆಗಾ ಲೋಕ್ ಅದಾಲತ್‍ನ್ನು ಸೆ. 30 ರಂದು ಆಯೋಜಿಸಲಾಗಿದೆ.

ಮೆಗಾ ಲೋಕ್ ಅದಾಲತ್‍ನಲ್ಲಿ ನ್ಯಾಯಾಲಯದಲ್ಲಿ ಚಾಲ್ತಿಯಲ್ಲಿರುವ ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಕಡಿಮೆ ಖರ್ಚಿನಲ್ಲಿ ಶೀಘ್ರವಾಗಿ ಪರಿಹರಿಸಿಕೊಳ್ಳಲು ಸಾರ್ವಜನಿಕರಿಗೆ ಮೆಗಾ ಲೋಕ್ ಅದಾಲತ್‍ನಲ್ಲಿ ಅವಕಾಶ ಕಲ್ಪಿಸಲಾಗಿದೆ. ರಾಜಿಯಾಗಬಲ್ಲ ಎಲ್ಲಾ ಸಿವಿಲ್ ಹಾಗೂ ಕ್ರಿಮಿನಲ್ ಪ್ರಕರಣಗಳು, ಮೋಟರ್ ವಾಹನ ಅಪಘಾತ ಪರಿಹಾರ ಪ್ರಕರಣಗಳು, ಚೆಕ್ ಅಮಾನ್ಯ ಪ್ರಕರಣಗಳು, ಭೂಸ್ವಾಧೀನ ಪರಿಹಾರ ಪ್ರಕರಣಗಳು, ಬ್ಯಾಂಕ್ ಸಾಲ ವಸೂಲಾತಿ ಪ್ರಕರಣಗಳು, ಎಂ.ಎಂ.ಡಿ.ಆರ್ ಕಾಯ್ದೆಯಡಿಯ ಪ್ರಕರಣಗಳನ್ನು ಮೆಗಾ ಲೋಕ್ ಅದಾಲತ್ ನಲ್ಲಿ ಪರಿಹರಿಸಿಕೊಳ್ಳಬಹುದು.

ವೈವಾಹಿಕ ಕುಟುಂಬ ನ್ಯಾಯಾಲಯದ ಪ್ರಕರಣಗಳು (ವಿಚ್ಚೇದನ ಹೊರತುಪಡಿಸಿ), ಪಿಂಚಣಿ ಪ್ರಕರಣಗಳು, ವೇತನ ಭತ್ಯೆ ಸಂಬಂಧಿಸಿದ ಪ್ರಕರಣಗಳು, ವಿದ್ಯುತ್ ಹಾಗೂ ನೀರಿನ ಶುಲ್ಕ, ಕೈಗಾರಿಕೆ ಕಾರ್ಮಿಕರ ವೇತನ, ಕಾರ್ಮಿಕ ವಿವಾದ ಇತ್ಯಾದಿ ಪ್ರಕರಣಗಳನ್ನು ಪರಸ್ಪರ ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳಬಹುದು.

ಕೋವಿಡ್-19 ಸೋಂಕಿನಿಂದ ಸಾರ್ವಜನಿಕರು ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದು, ರಾಜೀ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡಲ್ಲಿ ಆರ್ಥಿಕ ಸಂಕಷ್ಟದಿಂದ ಹೊರಬರಲು ಅವಕಾಶವಿದೆ. ನ್ಯಾಯಾಲಯದ ಸಂಪೂರ್ಣ ಶುಲ್ಕವನ್ನು ಮರುಪಾವತಿ ಮಾಡಲಾಗುವುದು. ಕಕ್ಷಿಗಾರರು ಭೌತಿಕವಾಗಿ ಅಥವಾ ವಿಡಿಯೋ ಕಾನ್ಫರೆನ್ಸ್ ಮುಖಾಂತರ ನ್ಯಾಯಾಲಯಕ್ಕೆ ಹಾಜರಾಗಿ ತಮ್ಮ ಪ್ರಕರಣಗಳನ್ನು ಲೋಕ್ ಅದಾಲತ್ ಮೂಲಕ ಇತ್ಯರ್ಥಪಡಿಸಿಕೊಳ್ಳಬಹುದು.

ಕಳೆದ ಆ.14 ರಂದು ಜರುಗಿದ ಮೆಗಾ ಲೋಕ್ ಅದಾಲತ್‍ನಲ್ಲಿ ಜಿಲ್ಲೆಯಲ್ಲಿ 8050 ಪ್ರಕರಣಗಳು ಇತ್ಯರ್ಥಗೊಂಡು 13.88 ಕೋಟಿ ರೂ. ಗಳ ಪರಿಹಾರ ಒದಗಿಸಲಾಗಿದೆ. ಅಭಿಯೋಜನಾ ಇಲಾಖೆ, ಪೊಲೀಸ್ ಇಲಾಖೆ, ಜೀವ ವಿಮಾ ನಿಗಮ ಅಧಿಕರಿಗಳು, ವಕೀಲರು, ಎಂ.ವಿ.ಸಿ ಪ್ರಕರಣದ ಅರ್ಜಿದಾರ ವಕೀಲರುಗಳು, ಭೂ ವಿಜ್ಞಾನ ಇಲಾಖೆ, ಬ್ಯಾಂಕ್ ಅಧಿಕಾರಿಗಳು, ಶಿಕ್ಷಣ ಇಲಾಖೆ ಸೇರಿದಂತೆ ಲೋಕ್ ಅದಾಲತ್ ಯಶಸ್ವಿಗೆ ಸಹಕರಿಸಿದ ಎಲ್ಲರಿಗೂ ಧನ್ಯವಾದಗಳನ್ನು ಸಲ್ಲಿಸುತ್ತೇವೆ.

ಸಾರ್ವಜನಿಕರು ಮೆಗಾ ಲೋಕ್ ಅದಾಲತ್ ನ ಸಂಪೂರ್ಣ ಸದುಪಯೋಗ ಪಡೆದುಕೊಳ್ಳಬೇಕು ಹಾಗೂ ಹೆಚ್ಚಿನ ಮಾಹಿತಿಗಾಗಿ ದಾವಣಗೆರೆ ಹಳೆಯ ನ್ಯಾಯಾಲಯ ಸಂಕಿರ್ಣದಲ್ಲಿರುವ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ದಾವಣಗೆರೆ ಇವರನ್ನು ದೂ.ಸ:08192-296364, ತಾಲ್ಲೂಕು ಕಾನೂನು ಸೇವಾ ಸಮಿತಿಗಳಾದ ಹರಿಹರ 08192-296885, ಹೊನ್ನಾಳಿ 08188-251732, ಚನ್ನಗಿರಿ 08189-229195 ಮತ್ತು ಜಗಳೂರು 08196-227600 ಇವರನ್ನು ಸಂಪರ್ಕಿಸಬಹುದೆಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರಾಜೇಶ್ವರಿ ಎನ್. ಹೆಗಡೆ ಹಾಗೂ ಹಿರಿಯ ಸಿವಿಲ್ ನ್ಯಾಯಾದೀಶರಾದ ಪ್ರವೀಣ ನಾಯಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ನಿತ್ಯ ಭವಿಷ್ಯ18 hours ago

ಈ ರಾಶಿಯವರಿಗೆ ಉದ್ಯೋಗ ಬದಲಾಯಿಸುವ ಸಾಧ್ಯತೆ! ಈ ರಾಶಿಯವರು ಮಕ್ಕಳ ಭವಿಷ್ಯದ ಬಗ್ಗೆ ಸದಾ ಚಿಂತನೆ ಮಾಡುವವರು!ಬುಧವಾರ ರಾಶಿ ಭವಿಷ್ಯ-ಸೆಪ್ಟೆಂಬರ್-22,2021

  ಸೂರ್ಯೋದಯ: 06:07 AM, ಸೂರ್ಯಸ್ತ: 06:14 PM ಸ್ವಸ್ತಿ ಶ್ರೀ ಮನೃಪ ಶಾಲಿವಾಹನ ಶಕೆ1943, ಸಂವತ್2077, ಪ್ಲವ ನಾಮ ಸಂವತ್ಸರ ಭಾದ್ರಪದ ಮಾಸ, ಗ್ರೀಷ್ಮ ಋತು...

ನಿತ್ಯ ಭವಿಷ್ಯ2 days ago

ಜ್ಯೋತಿಷ್ಯಶಾಸ್ತ್ರದ ಪ್ರಕಾರ ಅದೃಷ್ಟವಂತರು ( ಕುಬೇರರು) ಲಕ್ಷ್ಮಿ ಯೋಗ ಹೇಗೆ ಉಂಟಾಗುತ್ತದೆ?

  ಜನನ ದಿನಾಂಕ ಮತ್ತು ಸಮಯದ ಆಧಾರ ಮೇಲೆ ನಿಮ್ಮ ಜನ್ಮಜಾತಕ ಬರೆದು ಅದನ್ನು ಸರಿಯಾಗಿ ಪರೀಕ್ಷಿಸಿ ಈ ಕೆಳಕಂಡ ಮಾಹಿತಿಗಳು ಇದ್ದರೆ”ಲಕ್ಷ್ಮಿ ಯೋಗ” ಉಂಟಾಗುತ್ತದೆ. ರಾಶಿಚಕ್ರದ...

ನಿತ್ಯ ಭವಿಷ್ಯ2 days ago

ಈ ರಾಶಿಯವರಿಗೆ ನಂಬಿದ ಜನರಿಂದ ಧನಸಹಾಯ ಸಿಗುವುದು! ವೈವಾಹಿಕ ಜೀವನದಲ್ಲಿ ಸಮಸ್ಯೆಗಳು ಪರಿಹಾರ! ಮಂಗಳವಾರ ರಾಶಿ ಭವಿಷ್ಯ-ಸೆಪ್ಟೆಂಬರ್-21,2021 (ಪಿತೃಪಕ್ಷ ಆರಂಭ)

  ಸೂರ್ಯೋದಯ: 06:07 AM, ಸೂರ್ಯಸ್ತ: 06:15 PM ಪ್ಲವ ನಾಮ ಸಂವತ್ಸರ ಭಾದ್ರಪದ ಮಾಸ, ಗ್ರೀಷ್ಮ ಋತು, ದಕ್ಷಿಣಾಯಣ, ಕೃಷ್ಣ ಪಕ್ಷ, ತಿಥಿ: ಪಾಡ್ಯ (...

ನಿತ್ಯ ಭವಿಷ್ಯ3 days ago

ಈ ರಾಶಿಯವರು ನಿವೇಶನ ಖರೀದಿಸುವಿರಿ! ಗುಪ್ತಶತ್ರುಗಳ ಬಗ್ಗೆ ಜಾಗೃತಿ ವಹಿಸಿ! ಸಂಗಾತಿ ಜೊತೆಗಿನ ಬೇಸರದ ದಿನ! ಸೋಮವಾರ ರಾಶಿ ಭವಿಷ್ಯ-ಸೆಪ್ಟೆಂಬರ್-20,2021

  ಸೂರ್ಯೋದಯ: 06:07 AM, ಸೂರ್ಯಸ್ತ: 06:16 PM ಸ್ವಸ್ತಿ ಶ್ರೀ ಮನೃಪ ಶಾಲಿವಾಹನ ಶಕೆ1943, ಸಂವತ್2077, ಪ್ಲವ ನಾಮ ಸಂವತ್ಸರ ಭಾದ್ರಪದ ಮಾಸ, ಗ್ರೀಷ್ಮ ಋತು,...

ದಿನದ ಸುದ್ದಿ3 days ago

ದಾವಣಗೆರೆ | ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆ ಕಾಮಗಾರಿಗಳಿಗೆ ಮುಖ್ಯಮಂತ್ರಿಗಳಿಂದ ಚಾಲನೆ

ಸುದ್ದಿದಿನ,ದಾವಣಗೆರೆ:ದಾವಣಗೆರೆ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆಯಡಿ 125 ಕೋಟಿ ರೂ. ವೆಚ್ಚದಲ್ಲಿ ಒಟ್ಟು 49 ಕಾಮಗಾರಿಗಳನ್ನು ಕೈಗೆತ್ತಿಕೊಂಡಿದ್ದು, ದಾವಣಗೆರೆ ನಗರ ಸಮಗ್ರ ಅಭಿವೃದ್ಧಿ...

ನಿತ್ಯ ಭವಿಷ್ಯ4 days ago

ಮದುವೆಯಾಗಲು ಯಾವ ಗ್ರಹಗಳು ಚೆನ್ನಾಗಿರಬೇಕು? ಎಂಬುದರ ಎಂಬುವುದರ ಬಗ್ಗೆ ಮಾಹಿತಿ..

ಸೋಮಶೇಖರ್B.Sc ಜಾತಕ ಬರೆಯುವುದು, ಜಾತಕ ವಿಶ್ಲೇಷಣೆಗಾರರು, ರಾಶಿ ಹರಳು ತಿಳಿಸುವುದು. ವಂಶಪಾರಂಪರಿಕ ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ, ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು. Mob.9353488403 ಸಾಮಾನ್ಯವಾಗಿ ವಿವಾಹದ ಮೊದಲು ಜಾತಕ ಪರೀಕ್ಷಿಸಲು...

ನಿತ್ಯ ಭವಿಷ್ಯ4 days ago

ಈ ರಾಶಿಯವರಿಗೆ ಇಂದಿಗೆ ನಿಮ್ಮ ಕಷ್ಟಕಾರ್ಪಣ್ಯಗಳು ದೂರವಾಗುವವು! ದಾಂಪತ್ಯದಲ್ಲಿ ಉಲ್ಲಾಸದ ಜೀವನ! ವ್ಯಾಪಾರದಲ್ಲಿ ಚೇತರಿಕೆ! ಕಂಕಣ ಬಲದ ಸಿಹಿಸುದ್ದಿ! ಭಾನುವಾರ ರಾಶಿ ಭವಿಷ್ಯ-ಸೆಪ್ಟೆಂಬರ್-19,2021

  ಅನಂತ ಚತುರ್ದಶಿ,ಗಣೇಶ ವಿಸರ್ಜನ ಸೂರ್ಯೋದಯ: 06:07 AM, ಸೂರ್ಯಸ್ತ: 06:16 PM ಸ್ವಸ್ತಿ ಶ್ರೀ ಮನೃಪ ಶಾಲಿವಾಹನ ಶಕೆ1943, ಸಂವತ್2077, ಪ್ಲವ ನಾಮ ಸಂವತ್ಸರ ಭಾದ್ರಪದ...

ನಿತ್ಯ ಭವಿಷ್ಯ5 days ago

ಈ ರಾಶಿಯವರಿಗೆ ದಾಂಪತ್ಯದಲ್ಲಿ ಭಿನ್ನಾಭಿಪ್ರಾಯ ಏಕೆ?ಎಂಬ ಚಿಂತಾಕ್ರಾಂತರಾಗಿರುವಿರಿ! ಈ ರಾಶಿಯವರಿಗೆ ಆರ್ಥಿಕ ಸಂಕಷ್ಟದ ಚಿಂತನೆ! ಶನಿವಾರ ರಾಶಿ ಭವಿಷ್ಯ-ಸೆಪ್ಟೆಂಬರ್-18,2021

  ಸೂರ್ಯೋದಯ: 06:07 AM, ಸೂರ್ಯಸ್ತ: 06:17 PM ಸ್ವಸ್ತಿ ಶ್ರೀ ಮನೃಪ ಶಾಲಿವಾಹನ ಶಕೆ1943, ಸಂವತ್2077, ಪ್ಲವ ನಾಮ ಸಂವತ್ಸರ ಭಾದ್ರಪದ ಮಾಸ, ದಕ್ಷಿಣಾಯಣ, ಗ್ರೀಷ್ಮ...

ದಿನದ ಸುದ್ದಿ5 days ago

ದಾವಣಗೆರೆ | ಜಿಲ್ಲೆಯ 582 ಕೇಂದ್ರಗಳಲ್ಲಿ ಬೃಹತ್ ಲಸಿಕಾ ಮೇಳ ; ನಗರದಲ್ಲಿ ವ್ಯಾಕ್ಸಿನೇಷನ್ ವೀಕ್ಷಿಸಿದ ಸಂಸದರು

ಸುದ್ದಿದಿನ,ದಾವಣಗೆರೆ : ಕೋವಿಡ್-19 ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರದ ಸೂಚನೆಯಂತೆ ದಾವಣಗೆರೆ ನಗರದಲ್ಲಿ ಶುಕ್ರವಾರ ವಿದ್ಯಾನಗರದ ಶಿವ ಪಾರ್ವತಿ ದೇವಸ್ಥಾನದಲ್ಲಿ ಏರ್ಪಡಿಸಿದ ಬೃಹತ್ ಲಸಿಕಾ ಮೇಳದ ಅಂಗವಾಗಿ...

ನಿತ್ಯ ಭವಿಷ್ಯ6 days ago

ಮದುವೆಗಾಗಿ ವಿಶೇಷ ಮಾಹಿತಿ

  ಗುರು ಬಲ ಬಂದಿರುವ ರಾಶಿಗಳು ಮೇಷ, ಮಿಥುನ, ಸಿಂಹ, ತುಲಾ ಮತ್ತು ಮಕರ ರಾಶಿಗೆ ಗುರು ಬಲ ಉತ್ತಮವಾಗಿದೆ. ಜನ್ಮ ಕುಂಡಲಿಯಲ್ಲಿ ( ಜಾತಕ )ಯಾವ...

Trending