Connect with us

ರಾಜಕೀಯ

ಕೆಪಿಸಿಸಿ ಸಾರಥ್ಯಕ್ಕೆ ನಾನು ಸಿದ್ಧ : ಡಿಕೆಶಿ

Published

on

ಸುದ್ದಿದಿನ, ಬೆಂಗಳೂರು : ಕಾಂಗ್ರೆಸ್ ನ ಮಾಸ್ಟರ್ ಮೈಂಡ್ ಡಿ.ಕೆ.ಶಿವಕುಮಾರ್ ನನ್ನನ್ನು ಕೆಪಿಸಿಸಿ ಸಾರಥ್ಯಕ್ಕೆ ಆಯ್ಕೆ ಮಾಡಿದರೆ ಅದನ್ನು ನಿಭಾಯಿಸಲು ನಾನು ಸಿದ್ಧನಿದ್ದೇನೆ ಎಂದು ಹೇಳಿದ್ದಾರೆ.

ಬೆಂಳೂರಿನಲ್ಲಿ ಸೋಮವಾರ ಮಾತನಾಡಿದ ಅವರು, ನಾನು ಪಕ್ಷದ‌ ತೀರ್ಮಾನಕ್ಕೆ ಬದ್ಧನಾಗಿರುತ್ತೇನೆ. ಪಕ್ಷದ ಸಂಘಟನೆಗೆ ಹೈಕಮಾಂಡ್ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಿದರೆ ನಾನದನ್ನು‌ ನಿಭಾಯಿಸಲು ತಯಾರಿದ್ದೇನೆ ಎಂದು ತಿಳಿಸಿದ್ದಾರೆ.

ಡಿಕೆಶಿಗೆ ಒಲಿಯಲಿದೆಯೇ ಕೆಪಿಸಿಸಿ ಅಧ್ಯಕ್ಷ ಗಾದಿ?

ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಬರಲು‌ ಡಿ.ಕೆ.ಶಿ ಅವರೇ ಪ್ರಮುಖ ಕಾರಣರಾಗಿದ್ದಾರೆ. ಆದರೆ ಅವರಿಗೆ ಸಚಿವ ಸ್ಥಾನ ಸಿಗುವುದೇ? ಇಲ್ಲವೇ? ಎಂಬುದಿನ್ನೂ ತೀರ್ಮಾನವಾಗಿಲ್ಲ.

ಡಾ.ಜಿ.ಪರಮೇಶ್ವರ ಅವರು ಉಪಮುಖ್ಯಮಂತ್ರಿಯಾದ ಹಿನ್ನೆಲೆ, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆದ್ದರಿಂದ ಡಿ.ಕೆ.ಶಿ ಈ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಬಹುದು ಎಂಬ ಸುದ್ದಿ ಹರಿದಾಡುತ್ತಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9985715401

ದಿನದ ಸುದ್ದಿ

ನೈತಿಕತೆ ಜಾರುತ್ತಿದೆ ಅಂತ ತೋರಿಸಿತು ಜಾರಕಿಹೊಳಿ ಎಪಿಸೋಡು

Published

on

  • ಆರ್.ಟಿ.ವಿಠ್ಠಲಮೂರ್ತಿ

ರ್ನಾಟಕದ ಜಲಸಂಪನ್ಮೂಲ ಸಚಿವ ರಮೇಶ್‌ ಜಾರಕಿಹೊಳಿ ಲೈಂಗಿಕ ಹಗರಣದ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಿದ್ದಾರೆ.
ಇದರ ಬೆನ್ನಲ್ಲೇ ಹಲ ಸಚಿವರು ಕೂಡಾ ತಮ್ಮ ಸುತ್ತ ಇಂತಹ ವಿವಾದಗಳು ಸುತ್ತಿಕೊಳ್ಳಬಹುದು ಎಂಬ ಆತಂಕದಿಂದ ನ್ಯಾಯಾಲಯದ ಕಟಕಟೆ ಏರಿದ್ದಾರೆ.

ಜಾರಕಿಹೊಳಿ ಅವರ ಪ್ರಕರಣದ ಬಗ್ಗೆ ಹಲವು ರೀತಿಯ ಚರ್ಚೆಗಳಾಗುತ್ತಿವೆ.ಇದು ಬ್ಲಾಕ್‌ ಮೇಲ್‌ ಎಂಬುದರಿಂದ ಹಿಡಿದು ಮಹಿಳೆಯ ಜತೆಗಿನ ಸಂಬಂಧ ಪರಸ್ಪರ ಸಮ್ಮತಿಯದೇ ಹೊರತು ಕಿರುಕುಳ ಅಲ್ಲ ಎಂಬಲ್ಲಿಯವರೆಗೆ ಚರ್ಚೆ ಸಾಗಿದೆ. ಆದರೆ ಪ್ರಶ್ನೆ ಇರುವುದು ನೈತಿಕತೆಯದು.

ಯಾಕೆಂದರೆ ಅವರಿಗೆ ಧರ್ಮಪತ್ನಿ ಇದ್ದಾರೆ.ಧರ್ಮಪತ್ನಿ ಇರುವಾಗ ಈ ರೀತಿಯ ಸಂಬಂಧ ಸಾಧಿತವಾಗುವುದು ಸರಿಯೇ?ಎಂಬುದರಲ್ಲಿ. ಅದೇನೇ ಇರಲಿ,ಇವತ್ತು ರಮೇಶ್‌ ಜಾರಕಿಹೊಳಿ ಪ್ರಕರಣದ ಹಿನ್ನೆಲೆಯಲ್ಲಿ ನಡೆಯುತ್ತಿರುವ ಚರ್ಚೆಗಳು ಒಂದು ವಿಷಯವನ್ನು ಸ್ಪಷ್ಟವಾಗಿ ಎತ್ತಿ ತೋರಿಸಿವೆ.ಅದೆಂದರೆ ನೈತಿಕತೆಯ ಚೌಕಟ್ಟನ್ನು ವ್ಯವಸ್ಥೆಯೇ ಸಡಿಲಿಸುತ್ತಾ ಬಂದಿರುವುದು.

ವಾಸ್ತವವಾಗಿ,ಇಂತಹದೊಂದು ಪ್ರಕರಣ ನಡೆದಿದೆ ಎಂಬುದು ಗೊತ್ತಾದ ಕೂಡಲೇ ನಮ್ಮ ವ್ಯವಸ್ಥೆ ರಮೇಶ್‌ ಜಾರಕಿಹೊಳಿ ಮಾಡಿದ್ದು ತಪ್ಪು ಎಂದು ಸ್ಪಷ್ಟವಾಗಿ ಹೇಳಬೇಕಿತ್ತು.
ಆದರೆ ರಮೇಶ್‌ ಜಾರಕಿಹೊಳಿ ಅವರು ಮಾಡಿದ್ದು ತಪ್ಪು ಎನ್ನುವ ಕೂಗು ಎದ್ದಾಗಲೇ,ಇದು ಕೆಲವರ ಷಡ್ಯಂತ್ರ ಎಂಬ ಅಪಸ್ವರ ಕೇಳಿ ಬಂತು.ಹಾಗೆಯೇ ಇದು ಪರಸ್ಪರ ಸಮ್ಮತಿಯ ಸಂಬಂಧ ಎಂಬ ಕೂಗು ತೇಲಿ ಬಂತು.

ಅದು ನಿಜವೂ ಇರಬಹುದು.ಆದರೆ ಪ್ರಶ್ನೆ ಇದ್ದುದು ಅಲ್ಲಲ್ಲ,ಜವಾಬ್ದಾರಿಯುತ ಸ್ಥಾನದಲ್ಲಿದ್ದ ರಮೇಶ್‌ ಜಾರಕಿಹೊಳಿ ಮಾಡಿದ್ದು ಸರಿಯೇ?ಎಂಬಲ್ಲಿ. ಈ ಪ್ರಶ್ನೆಯನ್ನು ಮುಂದಿಟ್ಟುಕೊಂಡರೆ ಸಮಾಜದ ನೈತಿಕತೆಯ ಬೇರುಗಳು ಹೇಗೆ ಸಡಿಲವಾಗುತ್ತಾ ನಡೆದಿವೆ?ಎಂಬುದು ಸ್ಪಷ್ಟವಾಗುತ್ತದೆ.
ಕೆಂಗಲ್‌ ಹನುಮಂತಯ್ಯ ಅವರು ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿ ಟಿ.ಸಿದ್ಧಲಿಂಗಯ್ಯ ಮಂತ್ರಿಯಾಗಿದ್ದರು.ಒಂದು ಸಂದರ್ಭದಲ್ಲಿ ಅವರ ಸಹೋದರನಿಗೆ ವಿದ್ಯುತ್‌ ಇಲಾಖೆಯ ಗುತ್ತಿಗೆಯೊಂದು ಸಿಕ್ಕಿತು.

ಇದನ್ನೂ ಓದಿ | ರಾಜ್ಯ ಬಜೆಟ್ | 60 ಸಾವಿರ ಮಹಿಳೆಯರಿಗೆ ಉದ್ಯೋಗ : ಸಿಎಂ ಯಡಿಯೂರಪ್ಪ

ಇದು ಗೊತ್ತಾಗುತ್ತಿದ್ದಂತೆಯೇ ಸಿದ್ಧಲಿಂಗಯ್ಯ ಅವರು ಕೆಂಗಲ್‌ ಹನುಮಂತಯ್ಯ ಅವರನ್ನು ನೋಡಲು ಹೋದರು.ಅವರನ್ನು ನೋಡುತ್ತಲೇ ಕೆಂಗಲ್‌ ಹನುಮಂತಯ್ಯ ಅವರು:ನೀವು ಬಂದೇ ಬರುತ್ತೀರಿ ಎಂದು ನನಗೆ ಗೊತ್ತಿತ್ತು ಎಂದರು. ಸಿದ್ಧಲಿಂಗಯ್ಯ ಅವರು ಮರುಮಾತನಾಡದೆ ತಮ್ಮ ರಾಜೀನಾಮೆ ಪತ್ರವನ್ನು ಅವರಿಗೆ ಸಲ್ಲಿಸಿದರು.ವಸ್ತುಸ್ಥಿತಿ ಎಂದರೆ ತಮ್ಮ ಸಹೋದರನಿಗೆ ಇಂತಹ ಕಾಂಟ್ರಾಕ್ಟು ಕೊಡಿ ಎಂದು ಸಿದ್ಧಲಿಂಗಯ್ಯನವರು ಹೇಳಿರಲೇ ಇಲ್ಲ.

ಹಾಗಂತ ಹೇಳಿ ಕೆಂಗಲ್‌ ಹನುಮಂತಯ್ಯನವರು:ನಿಮ್ಮ ರಾಜೀನಾಮೆಯ ಅಗತ್ಯವಿಲ್ಲ ಎಂದರಾದರೂ ಸಿದ್ದಲಿಂಗಯ್ಯನವರು ಒಪ್ಪಲಿಲ್ಲ.ಬದಲಿಗೆ:ನಿಮಗೆ ಇದು ಗೊತ್ತಿದೆ.ಆದರೆ ಜನರಿಗೆ ಗೊತ್ತಾಗುವುದು ಹೇಗೆ?ಇದರ ನೈತಿಕ ಹೊಣೆ ಹೊರದೆ ಬೇರೆ ದಾರಿಯೇ ಇಲ್ಲ ಎಂದು ಹೇಳಿ ಬಂದರು.
ನಿಜಲಿಂಗಪ್ಪ ಅವರು ಮೊದಲು 1956 ರಲ್ಲಿ ಮುಖ್ಯಮಂತ್ರಿಯಾದರಲ್ಲ?ಆ ಸಂದರ್ಭದಲ್ಲಿ ತಮ್ಮ ಸಚಿವ ಸಂಪುಟಕ್ಕೆ ಸೇರುವಂತೆ ಅವರು ಶ್ರೀಮತಿ ಯಶೋದರಮ್ಮ ತುಳಸೀದಾಸಪ್ಪ ಅವರನ್ನು ಕೋರಿದ್ದರು.ಆಗವರು:ನೀವು ಪಾನ ನಿಷೇಧ ಮಾಡಲು ಒಪ್ಪಿಕೊಂಡರೆ ನಿಮ್ಮ ಸಂಪುಟ ಸೇರುತ್ತೇನೆ ಎಂದರು.

ಪಾನ ನಿಷೇಧ ಮಾಡುವ ವಿಷಯದಲ್ಲಿ ನಿಜಲಿಂಗಪ್ಪನವರಿಗೂ ಒಲವಿತ್ತು.ಹಾಗಂತಲೇ:ಖಂಡಿತ ಮಾಡೋಣ.ನೀವು ಮಂತ್ರಿ ಮಂಡಲಕ್ಕೆ ಸೇರಿ ಎಂದರು.ಆದರೆ ಮುಂದೆ ಪಾನ ನಿಷೇಧದ ಮಾತು ಬಂದಾಗ ನಿಜಲಿಂಗಪ್ಪ ಸಂಪುಟದ ಬಹುತೇಕ ಸಚಿವರು ಅಪಸ್ವರ ತೆಗೆದರು.

ಸರ್ಕಾರದ ಪ್ರಮುಖ ಆದಾಯ ಮೂಲ ಅದು.ಹೀಗಿರುವಾಗಿ ಪಾನನಿಷೇಧ ಮಾಡಿ ಸರ್ಕಾರವನ್ನು ಹೇಗೆ ನಡೆಸುತ್ತೀರಿ?ಏಂದು ಪ್ರಶ್ನಿಸಿದರು.ಆಗ ನಿಜಲಿಂಗಪ್ಪ ಅಸಹಾಯಕರಾಗಬೇಕಾಯಿತು.
ಆದರೆ ಇದನ್ನು ಒಪ್ಪದ ಶ್ರೀಮತಿ ಯಶೋದರಮ್ಮ ದಾಸಪ್ಪ ಅವರು ಮಂತ್ರಿ ಪದವಿಗೆ ರಾಜೀನಾಮೆ ನೀಡಿ ಹೊರಬಂದರು.
ಇದೇ ರೀತಿ ಮುಂದೆ ನಿಜಲಿಂಗಪ್ಪ ಅವರ ಸಚಿವ ಸಂಪುಟದಲ್ಲಿ ಎಂ.ವಿ.ರಾಮರಾವ್‌ ಅವರು ಗೃಹ ಸಚಿವರಾಗಿದ್ದಾಗ ಒಂದು ಘಟನೆ ನಡೆಯಿತು.

ಅವತ್ತು ಪೋಲೀಸ್‌ ಠಾಣೆಯೊಂದರಲ್ಲಿ ಮಹಿಳೆಯ ಮೇಲೆ ದೌರ್ಜನ್ಯ ನಡೆದು ಆಕೆ ಅನಾಹುತ ಮಾಡಿಕೊಂಡಿದ್ದಳು.ಈ ವಿಷಯ ವಿಧಾನಸಭೆಯಲ್ಲಿ ಪ್ರಸ್ತಾಪವಾಯಿತು.
ಪ್ರತಿಪಕ್ಷದ ನಾಯಕರೊಬ್ಬರು:ಗೃಹ ಸಚಿವರೇ ಈ ವಿಷಯದ ಬಗ್ಗೆ ಹೆಚ್ಚು ಚರ್ಚೆ ಮಾಡುವುದು ಬೇಡ.ಆ ನೊಂದ ಹೆಣ್ಣು ಮಗಳ ಜಾಗದಲ್ಲಿ ನಿಮ್ಮ ಮಗಳು ಇದ್ದಿದ್ದರೆ ನೀವೇನು ಮಾಡುತ್ತಿದ್ದಿರಿ?ಎಂದು ಪ್ರಶ್ನಿಸಿದರು.

ಅವರ ಪ್ರಶ್ನೆ ಕೇಳಿ ಅರೆಕ್ಷಣ ಸ್ತಂಭೀಭೂತರಾದ ರಾಮರಾವ್‌ ಅವರು:ನೀವು ಹೇಳಿದ್ದು ನನ್ನ ಮನಸ್ಸು ಮುಟ್ಟಿದೆ ಎಂದು ಹೇಳಿದವರೇ ಮುಖ್ಯಮಂತ್ರಿಗಳಿಗೆ ತಮ್ಮ ರಾಜೀನಾಮೆ ಸಲ್ಲಿಸಿದರು. ಇದೇ ರೀತಿ ನಿಜಲಿಂಗಪ್ಪ ಅವರ ಕಾಲದಲ್ಲಿ ಗ್ರಾಮೀಣಾಭಿವೃದ್ದಿ ಸಚಿವರಾಗಿದ್ದ ರಾಮಕೃಷ್ಣ ಹೆಗಡೆ ಅವರು ಪಂಚಾಯ್ತ್‌ ಮಸೂದೆಯೊಂದನ್ನು ತಂದರು.ಅದನ್ನು ವಿಧಾನಮಂಡಲದಲ್ಲಿಟ್ಟು ಅಂಗೀಕಾರ ಪಡೆಯುವ ಮುನ್ನ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಂಡಿಸಿದರು.

ಆಗೆಲ್ಲ ಒಂದು ಕಾಯ್ದೆಯನ್ನು ತರುವ ಮುನ್ನ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಂಡಿಸಿ ಒಪ್ಪಿಗೆ ಪಡೆಯುವ ಸಂಪ್ರದಾಯವಿತ್ತು.ಅದರನುಸಾರ ಹೆಗಡೆ ಕೂಡಾ ಆ ಮಸೂದೆಯನ್ನು ಪಕ್ಷದ ಶಾಸಕಾಂಗ ಸಭೆಯಲ್ಲಿ ಮಂಡಿಸಿದ್ದರು.
ಆದರೆ ಒಂದೇ ಮತದ ಅಂತರದಲ್ಲಿ ಹೆಗಡೆ ಅವರು ಶಾಸಕಾಂಗ ಸಭೆಯಲ್ಲಿ ಮಂಡಿಸಿದ ಮಸೂದೆಗೆ ಸೋಲಾಯಿತು.

ಇದರಿಂದ ನೊಂದ ಹೆಗಡೆ:ಇನ್ನು ಗ್ರಾಮೀಣಾಭಿವೃದ್ಧಿ ಸಚಿವನಾಗಿ ಮುಂದುವರಿಯುವುದು ನೈತಿಕತೆಯಲ್ಲ ಎಂದವರೇ ಮುಖ್ಯಮಂತ್ರಿಗಳಿಗೆ ತಮ್ಮ ರಾಜೀನಾಮೆ ಸಲ್ಲಿಸಿದರು.
ಇದೇ ರೀತಿ ದೇವರಾಜ ಅರಸರ ಕಾಲದಲ್ಲಿ ಸಚಿವರಾಗಿದ್ದ ಆರ್.ಡಿ.ಕಿತ್ತೂರು ಅವರ ಮನೆಯಲ್ಲಿ ಕೆಲಸಕ್ಕಿದ್ದ ಮಹಿಳೆಯೊಬ್ಬರು ನಾಪತ್ತೆಯಾದರು.ವಿಷಯ ಭಾರೀ ಕೋಲಾಹಲಕ್ಕೆ ಕಾರಣವಾಯಿತು.

ಆ ಸಂದರ್ಭದಲ್ಲಿ ಹಲವು ರೀತಿಯ ಮಾತುಗಳು ಕೇಳಿ ಬಂದವು.ಪರಿಣಾಮ?ಆರ್.ಡಿ.ಕಿತ್ತೂರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು. ಆ ಸಂದರ್ಭದಲ್ಲಿ ಪ್ರತಿಪಕ್ಷಗಳ ನಾಯಕರೇ:ಬಾಳೇ ಹಣ್ಣು ತಿಂದವರು ಯಾರೋ?ಆದರೆ ಸಿಪ್ಪೆ ಹಿಡಿದುಕೊಂಡಿದ್ದ ಕಾರಣಕ್ಕಾಗಿ ಅರ್.ಡಿ.ಕಿತ್ತೂರ್‌ ರಾಜೀನಾಮೆ ಕೊಡಬೇಕಾಯಿತು ಎಂದು ಮಾತನಾಡಿಕೊಂಡರು.
ಮುಂದೆ ತಾವೇ ಮುಖ್ಯಮಂತ್ರಿಯಾದ ಕಾಲದಲ್ಲಿ ಬಾಟ್ಲಿಂಗ್‌ ಹಗರಣ ಮತ್ತು ಟೆಲಿಫೋನ್‌ ಟ್ಯಾಪಿಂಗ್‌ ಹಗರಣ ನಡೆದಾಗ ಹೆಗಡೆ ರಾಜೀನಾಮೆ ನೀಡಿದರು.

ದೇವೇಗೌಡರು ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿ ಅಂಬೇಡ್ಕರ್‌ ಪ್ರತಿಮೆಗೆ ತಮ್ಮ ಪುತ್ರ ಮಧ್ಯಾಭಿಷೇಕ ಮಾಡಿದ ಆರೋಪ ಕೇಳಿ ಬಂದಾಗ ಸಚಿವರಾಗಿದ್ದ ಬಿ.ಟಿ.ಲಲಿತಾನಾಯಕ್‌ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದರು. ಆದರೆ ಇಂತಹ ಸತ್ಸಂಪ್ರದಾಯಗಳು ಕ್ರಮೇಣ ಮರೆಯಾಗುತ್ತಾ ಹೋಗಿ ಈಗ ಯಾವ ಪರಿಸ್ಥಿತಿ ಸೃಷ್ಟಿಯಾಗಿದೆ ಎಂದರೆ ತಪ್ಪು ಮಾಡಿದವರನ್ನೂ ಸಮರ್ಥನೆ ಮಾಡುವ ದೊಡ್ಡ ಜನಸಮೂಹ ಬೆಳೆದುನಿಂತಿದೆ.

ವಿಪರ್ಯಾಸವೆಂದರೆ ಮಾಡಿದ ತಪ್ಪು ಕಣ್ಣೆದುರಿಗಿದ್ದರೂ ತಪ್ಪು ಮಾಡಿದವರೇ ಸ್ವಾತಂತ್ರ್ಯ ಹೋರಾಟಗಾರರ ಫೋಜು ಕೊಡುತ್ತಾ ತಮ್ಮ ಕೈನ ಎರಡೂ ಬೆರಳುಗಳನ್ನು ಎತ್ತಿ ತೋರಿಸುತ್ತಾ,ವಿಜಯೋತ್ಸವ ಆಚರಿಸುತ್ತಾರೆ.
ಅಂದ ಹಾಗೆ ಆರೋಪಗಳಿಗೆ ನಾನಾ ಮುಖಗಳಿರಬಹುದು.

ಯಾರದೋ ಷಡ್ಯಂತ್ರವೂ ಇದಕ್ಕೆ ಕಾರಣವಾಗಿರಬಹುದು,ಆದರೆ ನಡೆದಿದ್ದು ತಪ್ಪು ಎಂಬುದು ಸ್ಪಷ್ಟವಾದಾಗ ಶಿಕ್ಷೆಯನ್ನು ಸ್ವೀಕರಿಸುವ ಮತ್ತು ತನಿಖೆಯನ್ನು ಎದುರಿಸುವ ಗುಣ ಇರಬೇಕು.ಇಂತಹ ವಾತಾವರಣ ಸೃಷ್ಟಿಗೆ ವ್ಯವಸ್ಥೆಯೂ ಬಲ ನೀಡಬೇಕು. ಆದರೆ ರಮೇಶ್‌ ಜಾರಕಿಹೊಳಿ ಪ್ರಕರಣ ಅಂತಹ ವಾತಾವರಣ ಸೃಷ್ಟಿಸಲು ವ್ಯವಸ್ಥೆಯೇ ತಯಾರಿಲ್ಲ ಎಂಬುದನ್ನು ಸಾಬೀತುಪಡಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ರಾಜ್ಯ ಬಜೆಟ್ | 60 ಸಾವಿರ ಮಹಿಳೆಯರಿಗೆ ಉದ್ಯೋಗ : ಸಿಎಂ ಯಡಿಯೂರಪ್ಪ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ, ಬೆಂಗಳೂರು : ಇಂದು ರಾಜ್ಯ ಬಜೆಟ್ ಮಂಡಿಸುತ್ತಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಜಿಲ್ಲಾ ಕೇಂದ್ರಗಳಲ್ಲಿ ತಲಾ 2 ಶಿಶುಪಾಲನಾ ಕೇಂದ್ರಗಳ ಸ್ಥಾಪನೆ ಮಾಡುವುದಾಗಿ ಘೋಷಿದಿದರು.

ನಂತರ ಬಜೆಟ್ ಮಂಡಿಸುತ್ತಾ ಅವರು 60,000 ಮಹಿಳೆಯರಿಗೆ ಉದ್ಯೋಗ ನೀಡುವುದು. ಮಹಿಳಾ ಉದ್ಯಮಿಗಳಿಗೆ ಶೇ.4ರಷ್ಟು ಬಡ್ಡಿ ದರದಲ್ಲಿ 2 ಕೋಟಿ ರೂ.ವರೆಗೆ ಸಾಲ ಕೊಡುವುದು.
ನಿರ್ಭಯಾ ಯೋಜನೆಯಡಿ ಮಹಿಳೆಯರ ಸುರಕ್ಷತೆಗಾಗಿ ಬೆಂಗಳೂರಿನೆಲ್ಲೆಡೆ 7,500 ಸಿಸಿ ಕ್ಯಾಮರಾ ಅಳವಡಿಕೆ ಮಾಡಿಸುವುದಾಗಿ ಹೇಳಿದರು.

ಇದನ್ನೂ ಓದಿ | ನವಿಲೇಹಾಳು | ‘ಸ್ನೇಹ ಬಳಗ’ ದಿಂದ ಕೊರೊನಾ ವಾರಿಯರ್ಸ್; ಗ್ರಾ‌.ಪಂ ನೂತನ ಸದಸ್ಯರು ಹಾಗೂ ಯುವಕವಿಗೆ ಸನ್ಮಾನ

ಹಪ್ಪಳ, ಉಪ್ಪಿನ ಕಾಯಿ ತಯಾರಿಸುವವರಿಗೂ ಆನ್ ಲೈನ್ ಮಾರುಕಟ್ಟೆ ಒದಗಿಸಿ, ವನಿತಾ ಸಂಗಾತಿ ಹೆಸರಿನಲ್ಲಿ ಮಹಿಳೆಯರಿಗೆ ರಿಯಾಯಿತಿಯ ಬಿಎಂಟಿಸಿ ಪಾಸ್ ವಿತರಣೆ ಮಾಡಲಾಗುವುದು ಎಂದು ಮಹಿಳೆಯರಿಗೆ ಸಿಎಂ ಬಿ ಎಸ್ ಯಡಿಯೂರಪ್ಪ ವಿಶೇಷ ಕೊಡುಗೆಯನ್ನು ಮಾರ್ಚ್ 8 ವಿಶ್ವ ಮಹಿಳಾ ದಿನಾಚರಣೆಯ ಗಿಫ್ಟ್ ಆಗಿ ನೀಡಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ರಾಜಕೀಯ

ಟಿಎಂಸಿ ಮಣ್ಣಿನ ಪಶ್ಚಿಮ ಬಂಗಾಳದಲ್ಲಿ ಕಮಲ ಅರಳಲಿದೆ: ಪಿಎಂ ಮೋದಿ ಅಭಿಮತ

Published

on

ಸುದ್ದಿದಿನ, ಕೋಲ್ಕತಾ : ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥರು “ಒಂದೇ ಭತಿಜಾ” ಹಿತದೃಷ್ಟಿಯಿಂದ ಮತ್ತು ಬಂಗಾಳದ ಯುವಜನರಿಗಾಗಿ ಕೆಲಸ ಮಾಡಿದ್ದಾರೆ. ಮಮತಾ ಬ್ಯಾನರ್ಜಿ ಅವರು “ಕಾಂಗ್ರೆಸ್ಸಿನಂತೆ” ವಂಶದ ರಾಜಕೀಯವನ್ನು ಮಾಡುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಭಾನುವಾರ ವಾಗ್ದಾಳಿ ನಡೆಸಿದರು.

ಕೋಲ್ಕತ್ತಾದ ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ನಡೆದ ಬಿಜೆಪಿಯ ಮೆಗಾ ರ್ಯಾಲಿಯಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಬಂಗಾಳದಲ್ಲಿ ಬಿಜೆಪಿ ಬಲಿಷ್ಠವಾಗಲು ಕಾರಣ “ಮಮತಾ ಅವರ ಪಕ್ಷದ ಭ್ರಷ್ಟಾಚಾರ ಮತ್ತು ಅವರ ಕೆಟ್ಟ ರಾಜಕೀಯ” ಎಂದು ಪ್ರಧಾನಿ ಹೇಳಿದರು.

“ಬಂಗಾಳದ ಜನರು ತಮ್ಮನ್ನು ದೀದಿ ಎಂಬ ನಿಮ್ಮ ಮೇಲಿನ ನಂಬಿಕೆಯಿಂದಾಗಿ ಅವರು ನಿಮ್ಮನ್ನು ಅಧಿಕಾರಕ್ಕೆ ಮತ ಹಾಕಿದ್ದಾರೆ. ಆದರೆ ಒಂದೇ ಭತಿಜಾ (ಸೋದರಳಿಯ) ಅವರ ‘ಬುವಾ’ (ಚಿಕ್ಕಮ್ಮ) ಪಾತ್ರಕ್ಕೆ ನೀವು ಯಾಕೆ ಸೀಮಿತರಾಗಿದ್ದೀರಿ? ಬಂಗಾಳದಲ್ಲಿ ಲಕ್ಷಾಂತರ ‘ಭತಿಜಾ’ಗಳ ಕನಸುಗಳನ್ನು ಈಡೇರಿಸುವ ಬದಲು, ನೀವು ಒಬ್ಬ‘ ಭತಿಜಾ ’ದುರಾಶೆಯನ್ನು ತೃಪ್ತಿಪಡಿಸುವತ್ತ ಮುಳುಗಿದ್ದೀರಿ,” ಎಂದು ಮೋದಿ ಹೇಳಿದರು.

ಮಮತಾ ಕಾಂಗ್ರೆಸ್ನ ‘ಬುವಾ-ಭತಿಜಾವಾಡ್’ ಸಂಪ್ರದಾಯದಿಂದ ಹೊರಬರಲು ಸಾಧ್ಯವಿಲ್ಲ.ಟಿಎಂಸಿ ಮುಖ್ಯಸ್ಥರು ಬಂಗಾಳದಲ್ಲಿ ಕೇಂದ್ರ ಯೋಜನೆಗಳನ್ನು ನಿರ್ಬಂಧಿಸಿದ್ದಾರೆ ಎಂದು ಆರೋಪಿಸಿದ ಪ್ರಧಾನಿ, “ದೀದಿ ಜನರಿಗಾಗಿ ಕೆಲಸ ಮಾಡದಿರಲು ನಿರ್ಧರಿಸಿದ್ದಾರೆ ಮತ್ತು ಬೇರೆ ಯಾರಿಗೂ ಕೆಲಸ ಮಾಡಲು ಅವಕಾಶ ನೀಡುವುದಿಲ್ಲ” ಎಂದು ಹೇಳಿದರು.

ಭಬಾನಿಪುರದ ತನ್ನ ಪ್ರಸ್ತುತ ಕ್ಷೇತ್ರದ ಬದಲು ನಂದಿಗ್ರಾಮ್ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಮಮತಾ ಅವರ ನಿರ್ಧಾರವನ್ನು ಅಗೆದು ತೆಗೆದುಕೊಂಡ ಪ್ರಧಾನಿ, ಭಬಾನಿಪುರಕ್ಕೆ ತೆರಳುವ ಬದಲು, ಅವರ “ಸ್ಕೂಟಿ ಇದ್ದಕ್ಕಿದ್ದಂತೆ ನಂದಿಗ್ರಾಮ್ ಕಡೆಗೆ ತಿರುಗಿತು” ಎಂದು ಹೇಳಿದರು.

ಇದನ್ನೂ ಓದಿ | ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ | ದೂರು ವಾಪಾಸ್ ಪಡೆದ ದಿನೇಶ್ ಕಲ್ಲಳ್ಳಿ

“’ ಭಬಾನಿಪುರಕ್ಕೆ ಹೋಗುವ ಬದಲು, ನಿಮ್ಮ ಸ್ಕೂಟಿ ಇದ್ದಕ್ಕಿದ್ದಂತೆ ನಂದಿಗ್ರಾಮ್ ಕಡೆಗೆ ತಿರುಗಿತು. ಯಾರಿಗೂ ತೊಂದರೆ ಆಗುವುದನ್ನು ನಾನು ಬಯಸುವುದಿಲ್ಲ. ಆದರೆ ನಂದಿಗ್ರಾಮ್‌ನಲ್ಲಿ ಸ್ಕೂಟಿ ಉರುಳುತ್ತದೆ ಎಂದು ನಿರ್ಧರಿಸಲಾಗಿರುವುದರಿಂದ ನಾನು ಏನು ಮಾಡಬಹುದು? ”ಎಂದು ಮೋದಿ ಹೇಳಿದರು.

ಎಲೆಕ್ಟ್ರಿಕ್ ಸ್ಕೂಟರ್‌ನಲ್ಲಿ ಪಿಲಿಯನ್ ಸವಾರಿ ಮಾಡುವ ರಾಜ್ಯ ಸಚಿವಾಲಯಕ್ಕೆ ಹೋಗುವ ಮೂಲಕ ಇಂಧನ ಬೆಲೆ ಏರಿಕೆಯನ್ನು ವಿರೋಧಿಸುವ ಮಮತಾ ಅವರ ಇತ್ತೀಚಿನ ಕ್ರಮವನ್ನು ಅವರು ವಿರೋಧಿಸುತ್ತಿದ್ದರು.

“ಎಟೊ ರಾಗ್ ಕೆನೊ ದೀದಿ? (ನೀವು ಯಾಕೆ ಕೋಪಗೊಂಡಿದ್ದೀರಿ ದಿದಿ?) ಬಂಗಾಳದಲ್ಲಿ ಕಮಲ ಅರಳುತ್ತಿದ್ದರೆ ಅದು ನಿಮ್ಮ ಪಕ್ಷದ ಅತಿರೇಕದ ಭ್ರಷ್ಟಾಚಾರದಿಂದ ಸೃಷ್ಟಿಯಾದ ಮಣ್ಣಿನಿಂದಾಗಿ ”ಎಂದು ಮೋದಿ ಹೇಳಿದರು.

ಟಿಎಂಸಿ ನಾಯಕರು ಅನೇಕ ಹಗರಣಗಳನ್ನು ಆಶ್ರಯಿಸಿದ್ದಾರೆ ಮತ್ತು ಅವರ ಮೇಲೆ “ಭ್ರಷ್ಟಾಚಾರ ಒಲಿಂಪಿಕ್” ನಡೆಯಬಹುದು ಎಂದು ಅವರು ಹೇಳಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ33 mins ago

ನೈತಿಕತೆ ಜಾರುತ್ತಿದೆ ಅಂತ ತೋರಿಸಿತು ಜಾರಕಿಹೊಳಿ ಎಪಿಸೋಡು

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ಜಲಸಂಪನ್ಮೂಲ ಸಚಿವ ರಮೇಶ್‌ ಜಾರಕಿಹೊಳಿ ಲೈಂಗಿಕ ಹಗರಣದ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಿದ್ದಾರೆ. ಇದರ ಬೆನ್ನಲ್ಲೇ ಹಲ ಸಚಿವರು ಕೂಡಾ ತಮ್ಮ ಸುತ್ತ ಇಂತಹ ವಿವಾದಗಳು...

ದಿನದ ಸುದ್ದಿ2 hours ago

ರಾಜ್ಯ ಬಜೆಟ್ | 60 ಸಾವಿರ ಮಹಿಳೆಯರಿಗೆ ಉದ್ಯೋಗ : ಸಿಎಂ ಯಡಿಯೂರಪ್ಪ

ಸುದ್ದಿದಿನ, ಬೆಂಗಳೂರು : ಇಂದು ರಾಜ್ಯ ಬಜೆಟ್ ಮಂಡಿಸುತ್ತಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಜಿಲ್ಲಾ ಕೇಂದ್ರಗಳಲ್ಲಿ ತಲಾ 2 ಶಿಶುಪಾಲನಾ ಕೇಂದ್ರಗಳ ಸ್ಥಾಪನೆ ಮಾಡುವುದಾಗಿ ಘೋಷಿದಿದರು. ನಂತರ...

ದಿನದ ಸುದ್ದಿ2 hours ago

ಮಾಜಿ ಶಾಸಕರ ಮೊಮ್ಮಕ್ಕಳು ಶವವಾಗಿ ಪತ್ತೆ

ಸುದ್ದಿದಿನ,ರಾಯಚೂರು: ಜಿಲ್ಲೆಯ ಮಾನ್ವಿ ಕ್ಷೇತ್ರದ ಮಾಜಿ ಶಾಸಕ ಹಂಪಯ್ಯ ನಾಯಕ್ ಅವರ ಇಬ್ಬರು ಮೊಮ್ಮಕ್ಕಳು ಭಾನುವಾರ ಮಧ್ಯಾಹ್ನದಿಂದ ಕಾಣೆಯಾಗಿದ್ದರು, ಆದರೆ ಸೋಮವಾರ ಶವವಾಗಿ ಪತ್ತೆಯಾಗಿದ್ದಾರೆ. ಪೊಲೀಸರು ಹಾಗೂ...

ದಿನದ ಸುದ್ದಿ3 hours ago

ನವಿಲೇಹಾಳು | ‘ಸ್ನೇಹ ಬಳಗ’ ದಿಂದ ಕೊರೊನಾ ವಾರಿಯರ್ಸ್; ಗ್ರಾ‌.ಪಂ ನೂತನ ಸದಸ್ಯರು ಹಾಗೂ ಯುವಕವಿಗೆ ಸನ್ಮಾನ

ಸುದ್ದಿದಿನ, ದಾವಣಗೆರೆ-ಚನ್ನಗಿರಿ: ನವಿಲೇಹಾಳ್ ಗ್ರಾಮದಲ್ಲಿ ಮಾ. 07ರ ಭಾನುವಾರ ಮೊಟ್ಟಮೊದಲ ಬಾರಿಗೆ ಗ್ರಾಮ ಪಂಚಾಯಿತಿಯ ನೂತನ ಸದಸ್ಯರಿಗೆ ಸನ್ಮಾನ ಸಮಾರಂಭದ ಜೊತೆಗೆ ಕರೋನಾ ವಾರಿಯರ್ಸ್ ಮತ್ತು ‘ಮೋಹದ...

ದಿನದ ಸುದ್ದಿ4 hours ago

ಪ್ರಜಾ ಪರಿವರ್ತನಾ ವೇದಿಕೆಯಿಂದ ಮಾ.14 ರಂದು ‘ಮೀಸಲಾತಿ ವಿವಾದ: ವಾಸ್ತವ ಸ್ಥಿತಿಗತಿಗಳು’ ಕುರಿತು ಬೆಂಗಳೂರಿನಲ್ಲಿ ರಾಜ್ಯ ಮಟ್ಟದ ಸಮಾವೇಶ

ಸುದ್ದಿದಿನ,ಬೆಂಗಳೂರು : ನಗರದ ವಸಂತ ನಗರದಲ್ಲಿನ ಅಂಬೇಡ್ಕರ್‌ ಭವನದಲ್ಲಿ ಮಾರ್ಚ್ 14 ರಂದು ಭಾನುವಾರ ‘ಮೀಸಲಾತಿ ವಿವಾದ: ವಾಸ್ತವ ಸ್ಥಿತಿಗತಿಗಳು’ ವಿಷಯಕ್ಕೆ ಕುರಿತಂತೆ ರಾಜ್ಯಮಟ್ಟದ ಸಮಾವೇಶವನ್ನು ಪ್ರಜಾ...

ದಿನದ ಸುದ್ದಿ4 hours ago

ಆತ್ಮನಿರ್ಭರ ಭಾರತದ ಆತ್ಮವಂಚಕ ಮುಖಗಳು..!

ನಾ ದಿವಾಕರ ಒಂದು ಪ್ರಜಾಸತ್ತಾತ್ಮಕ ಗಣತಂತ್ರದ ಸಂಸದೀಯ ಪ್ರಜಾಸತ್ತೆಯ ಚೌಕಟ್ಟಿನಲ್ಲಿ , ಪ್ರಜೆಗಳಿಂದಲೇ ಚುನಾಯಿತವಾದ ಸರ್ಕಾರ ಆಡಳಿತ ನಡೆಸುತ್ತಿರುವ ದೇಶದಲ್ಲಿ, ಸಾರ್ವಭೌಮ ಪ್ರಜೆಗಳ ಒಂದು ವರ್ಗ ತನ್ನ...

ನಿತ್ಯ ಭವಿಷ್ಯ9 hours ago

ಸೋಮವಾರ ರಾಶಿ ಭವಿಷ್ಯ | ಈ ರಾಶಿಯವರಿಗೆ ಹಿತಶತ್ರುಗಳಿಂದ ಕಾದಿದೆ ಗಂಡಾಂತರ..!

ಸೂರ್ಯೋದಯ: 06:30 AM, ಸೂರ್ಯಸ್ತ: 06:28 PM ಶಾರ್ವರೀ ನಾಮ ಸಂವತ್ಸರ ಮಾಘ ಮಾಸ ಶಿಶಿರ ಋತು, ಉತ್ತರಾಯಣ,, ಕೃಷ್ಣ ಪಕ್ಷ, ತಿಥಿ: ದಶಮೀ ( 15:44...

ನಿತ್ಯ ಭವಿಷ್ಯ9 hours ago

ಜನ್ಮ ಕುಂಡಲಿಯಲ್ಲಿ ( ಜಾತಕ )ಯಾವ ಮನೆಯಲ್ಲಿ ಶನಿ ಸ್ವಾಮಿಇದ್ದರೆ ವಿವಾಹ ವಿಳಂಬಕ್ಕೆ ಕಾರಣ ವಾಗುತ್ತದೆ..?

  ಸೋಮಶೇಖರ್B.Sc ಜಾತಕ ಬರೆಯುವುದು, ಜಾತಕವಿಶ್ಲೇಷಣೆಗಾರರು ರಾಶಿಹರಳು ತಿಳಿಸುವುದು. ವಂಶಪಾರಂಪರಿಕ ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು. Mob.9353488403 ಜನ್ಮ ಜಾತಕ ಅಥವಾ ಕುಂಡಲಿ ಲಗ್ನದಿಂದ ಅಂದರೆ...

ದಿನದ ಸುದ್ದಿ17 hours ago

ಅಪರ ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಗೆ ಅರ್ಜಿ ಆಹ್ವಾನ

ಸುದ್ದಿದಿನ,ಧಾರವಾಡ : ಕಾನೂನು ಇಲಾಖೆ ನಿರ್ದೇಶನದ ಮೇರೆಗೆ ಧಾರವಾಡ ಜಿಲ್ಲೆಯ 1ನೇ ಅಪರ ಜಿಲ್ಲಾ ಸರಕಾರಿ ವಕೀಲರ ಹುದ್ದೆಗೆ ಹಾಗೂ ಹುಬ್ಬಳ್ಳಿ ತಾಲೂಕಿನ ಹಿರಿಯ ಶ್ರೇಣಿ ನ್ಯಾಯಾಲಯದ...

ಕ್ರೀಡೆ17 hours ago

ಹಲವು ನಾಯಕರ ದಾಖಲೆ ಮುರಿದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ..!

ಸುದ್ದಿದಿನ,ಅಹಮದಾಬಾದ್: ಭಾರತ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯವನ್ನು 3-1 ಅಂತರದಲ್ಲಿ ಗೆದ್ದ ಸಂಭ್ರಮದಲ್ಲಿರುವಂತೆಯೇ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ನಾಯಕನಾಗಿ ದಿಗ್ಗಜ ನಾಯಕರ ದಾಖಲೆಯನ್ನು ಮುರಿದಿದ್ದಾರೆ....

Trending