Connect with us

ದಿನದ ಸುದ್ದಿ

“ಕರ್ನಾಟಕದ ಉದ್ಯೋಗಗಳು ಕನ್ನಡಿಗರಿಗೇ ಸಿಗಲಿ” : ಬೆಂಗಳೂರಲ್ಲಿ ಆಗಸ್ಟ್ 14-15 ರಂದು ಧರಣಿ

Published

on

ರ್ನಾಟಕದ ಉದ್ಯೋಗಗಳು ಕನ್ನಡಿಗರಿಗೇ ಸಿಗಲಿ” ಎಂದು ಒತ್ತಾಯಿಸಿ  ಅಗಸ್ಟ್ 14 ಮತ್ತು 15 ರಂದು ಬೆಂಗಳೂರಿನ ಆನಂದರಾವ್ ವೃತ್ತದ ಬಳಿಯಿರುವ ಗಾಂಧಿ ಪ್ರತಿಮೆ ಬಳಿ ಉಪವಾಸ ಸತ್ಯಾಗ್ರಹ ಮತ್ತು ಅಹೋರಾತ್ರಿ ಧರಣಿಯ ಬಗ್ಗೆ ನಡೆಯಲಿದೆ.

ಕರ್ನಾಟಕದ ಯುವಜನತೆ ಎದುರಿಸುತ್ತಿರುವ ಸಮಸ್ಯೆಗಳಲ್ಲಿ ನಿರುದ್ಯೋಗ ಸಮಸ್ಯೆ ಪ್ರಮುಖವಾದುದು. ಸಾಕಷ್ಟು ಉದ್ಯೋಗ ಸೃಷ್ಟಿಯಾಗದೇ ಇರುವುದು ಒಂದೆಡೆಯಾದರೆ ಇನ್ನೊಂದೆಡೆ ಇಲ್ಲಿ ಸೃಷ್ಟಿಯಾದ ಉದ್ಯೋಗಗಳನ್ನು ಪರಭಾಷಿಕರು ಬಂದು ಕಬಳಿಸಿಕೊಳ್ಳುತ್ತಿದ್ದಾರೆ. ಹಾಗಾಗಿ ನಮ್ಮ ನೆಲದಲ್ಲಿನ ಉದ್ಯೋಗ ನಮ್ಮವರಿಗೆ ಸಿಗದಂತಾಗಿದೆ.

ರಾಜ್ಯದ ಸಂಪನ್ಮೂಲಗಳನ್ನು ಬಳಸಿಕೊಂಡು ಇಲ್ಲಿಯೇ ಬೀಡುಬಿಟ್ಟಿದ್ದರೂ ಇಲ್ಲಿನ ಬಹುರಾಷ್ತ್ರೀಯ ಕಂಪನಿಗಳು, ಬ್ಯಾಂಕುಗಳು ಮತ್ತು ಇತರ ಉದ್ಯಮಗಳು ಕನ್ನಡಿಗರಿಗೆ ಕೆಲಸ ಕೊಡಲು ಮೀನಮೇಷ ಎಣಿಸುತ್ತಿವೆ. ಹಾಗಾಗಿ ನಮ್ಮ ಕನ್ನಡಿಗರ ಅನ್ನಕ್ಕೆ ಇನ್ನಷ್ಟು ಕುತ್ತು ಬರುವುದನ್ನು ಹೇಗಾದರೂ ಮಾಡಿ ತಡೆಯಲೇಬೇಕೆಂದು ನಿರ್ಧರಿಸಿ ಈ ಹೋರಾಟ ಹಮ್ಮಿಕೊಂಡಿದ್ದೇವೆ ಎನ್ನುತ್ತಾರೆ ಕರ್ನಾಟಕ ರಣಧೀರ ಪಡೆಯ ರಾಜ್ಯಾಧ್ಯಕ್ಷರಾದ ಬಿ.ಹರೀಶ್ ಕುಮಾರ್.

ಈ ಹೋರಾಟದ ಮತ್ತೊಬ್ಬ ಪ್ರಮುಖರಾದ ರಮಾನಂದ ಅಂಕೋಲಾರವರು ಮಾತನಾಡಿ, ರಾಜ್ಯದಲ್ಲಿ ಜನಜಾಗೃತಿ ಮೂಡಿಸುವ ಜೊತೆಗೆ ನಮ್ಮನ್ನಾಳುವ ಸರ್ಕಾರಗಳ ಗಮನ ಸೆಳೆಯಲು ಮೇ ತಿಂಗಳ ೩ನೇ ತಾರೀಖಿನಂದು ನಾವು #KarnatakaJobsForKannadigas ಎಂಬ ಅಡಿಬರಹದ ಟ್ವಿಟರ್ ಅಭಿಯಾನವನ್ನು ಹಮ್ಮಿಕೊಂಡಿದ್ದೆವು. ಇಡಿ ದೇಶವೇ ನಮ್ಮತ್ತ ತಿರುಗಿ ನೋಡುವಂತೆ ನಾಡಾಭಿಮಾನಿಗಳ ಸಹಕಾರದಿಂದ ನಡೆದ ಈ ಅಭಿಯಾನಕ್ಕೆ ಬೆಂಬಲ‌ಸೂಚಿಸುತ್ತಾ ಆಗಿನ ಮುಖ್ಯಮಂತ್ರಿಗಳಾದ  ಶ್ರೀಯುತ ಕುಮಾರ ಸ್ವಾಮಿಯವರು “ಕನ್ನಡಿಗರ ಹಕ್ಕೊತ್ತಾಯ ಪರಿಗಣಿಸಿ ಕಾನೂನಿನ ಚೌಕಟ್ಟಿನಲ್ಲಿ ಹೇಗೆ ಕಾರ್ಯರೂಪಕ್ಕೆ ತರಬಹುದು ಎಂದು ಸಲಹೆ ಪಡೆಯಲಾಗುವುದು” ಎಂದು ಹೇಳಿದ್ದರು. ನಂತರ ಮೇ 18ರಂದು ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ಬೃಹತ್ ಮಾನವ ಸರಪಳಿ ರಚಿಸಿ ಮತ್ತೊಮ್ಮೆ ನಮ್ಮ ಹಕ್ಕೊತ್ತಾಯವನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ್ದೇವೆ. ನಂತರ ಕರ್ನಾಟಕದ ೧೫ಕ್ಕೂ ಹೆಚ್ಚು ಜಿಲ್ಲೆಗಳ ೫೦೦ಕ್ಕೂ ಹೆಚ್ಚು ಬ್ಯಾಂಕ್ ಶಾಖೆಗಳಿಗೆ ನಮ್ಮ ಕಾರ್ಯಕರ್ತರು ಖುದ್ದಾಗಿ ತೆರಳಿ ಕನ್ನಡಿಗರಿಗೇ ಉದ್ಯೋಗ ಕೊಡುವಂತೆ ಮನವಿ ಮಾಡಿದ್ದೇವೆ ಎನ್ನುತ್ತಾರೆ.

ಅಭಿಯಾನದ ಯಶಸ್ಸು ಎನ್ನುವಂತೆ ಈ  ಅಭಿಯಾನ ಶುರುವಾದ ಮೇಲೆಯೇ ಕರ್ನಾಟಕದ ಕೆಲವು ಲೋಕಸಭಾ ಸದಸ್ಯರು ನಮ್ಮ ಬೇಡಿಕೆಗಳಲ್ಲೊಂದಾಗಿದ್ದ ಐಬಿಪಿಎಸ್ ಪರೀಕ್ಷೆಯನ್ನು ಕನ್ನಡದಲ್ಲಿ ಬರೆಯಲು ಅವಕಾಶಕೊಡುವ ಕುರಿತು ಸಂಸತ್ತಿನಲ್ಲಿ ಧ್ವನಿ ಎತ್ತಿದ್ದರಿಂದ ನಮ್ಮ ತಾಯ್ನೆಲದ ಭಾಷೆಯಾದ ಕನ್ನಡದಲ್ಲೇ ಪರೀಕ್ಷೆ ಬರೆಯಲು ಅವಕಾಶ ಸಿಕ್ಕಿದೆ. ಕಳೆದ ವಾರವಷ್ಟೇ ಕರ್ನಾಟಕದ ಉದ್ಯೋಗಗಳು ಕನ್ನಡಿಗರಿಗೇ ಮೀಸಲಾಗಬೇಕು ಎಂದು ಒತ್ತಾಯಿಸಿ ರಾಜ್ಯದ ನಾಲ್ಕು ಸಂಸದರು ರಾಜ್ಯಸಭೆಯಲ್ಲಿ ಧ್ವನಿ ಎತ್ತಿದ್ದಾರೆ. ನಂತರ ಮೊನ್ನೆ  ಅಂದರೆ ಅಗಸ್ಟ್ 10 ರಂದು ಮತ್ತೊಮ್ಮೆ ಟ್ವಿಟರ್ ಅಭಿಯಾನ ನಡೆಸಿ ನಮ್ಮ ಹಕ್ಕೊತ್ತಾಯವನ್ನು ಮಂಡಿಸಿದಾಗ ಬೇಡಿಕೆಯನ್ನು ಈಡೇರಿಸುವ ಭರವಸೆಯನ್ನು  ಈಗಿನ ಮುಖ್ಯಮಂತ್ರಿಗಳಾದ ಶ್ರೀಯುತ ಯಡಿಯೂರಪ್ಪನವರು ನೀಡಿದ್ದಾರೆ.

ಹಿಂದಿನ ಮುಖ್ಯಮಂತ್ರಿಗಳು ನೀಡಿದ ಭರವಸೆಯಂತೆ ಇದೂ ಸಹ ಕೇವಲ ಟ್ವಿಟರಿನಲ್ಲಿ ನೀಡಿದ ಭರವಸೆಯಾಗಿ ಉಳಿದುಕೊಳ್ಳುವ ಸಾಧ್ಯತೆ ಇದೆ. ಕಳೆದ ತಿಂಗಳಷ್ಟೇ ನಮ್ಮ ಪಕ್ಕದ ರಾಜ್ಯವಾದ ಆಂಧ್ರಪ್ರದೇಶ ಸರ್ಕಾರ ಸ್ಥಳಿಯರಿಗೆ ತನ್ನ ಉದ್ಯೋಗದಲ್ಲಿ ಶೇಕಡ 75 ಮೀಸಲಾತಿ ನೀಡಲು ಶಾಸನ ಜಾರಿ ಮಾಡುವತ್ತ ಹೆಜ್ಜೆ ಇಟ್ಟಿದೆ.ನಮ್ಮ ರಾಜ್ಯದಲ್ಲೂ ಸಹ ಇಂತಹ ಒಂದು ಕಾಯ್ದೆಯನ್ನು ಮಾಡಿ ಎಂದು ನಾವು ನಮ್ಮ ಮುಖ್ಯಮಂತ್ರಿಯನ್ನು ಈ ಸಂದರ್ಭದಲ್ಲಿ ಬಲವಾಗಿ ಒತ್ತಾಯಿಸುತ್ತೇವೆ ಎಂದಿದ್ದಾರೆ.

ಅಗಸ್ಟ್ 14 ಮತ್ತು 15 ರಂದು ನಡೆಯುವ ಉಪವಾಸ ಸತ್ಯಾಗ್ರಹ ಮತ್ತು ಅಹೋರಾತ್ರಿ ಧರಣಿಯಲ್ಲಿ ಹೋರಾಟಗಾರರಾದ ವಾಟಾಳ್ ನಾಗರಾಜ್, ಕರವೇ ನಾರಾಯಣ ಗೌಡ, ಕರವೇ ಪ್ರವೀಣ್ ಕುಮಾರ್ ಶೆಟ್ಟಿ,  ಚಿತ್ರನಟ ಉಪೇಂದ್ರ, ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್, ಕನ್ನಡ ಅಭಿವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಎಸ್ ಜಿ ಸಿದ್ದರಾಮಯ್ಯ ಸೇರಿದಂತೆ ನಾಡಿನ ಹಿರಿಯ ಸಾಹಿತಿಗಳು, ಬರಹಗಾರರು, ಖ್ಯಾತ ಚಿತ್ರನಟರು, ಹೋರಾಟಗಾರರು, ರಾಜಕಾರಣಿಗಳು ಮತ್ತು ದೊಡ್ಡ ಪ್ರಮಾಣದ ಯುವಜನತೆ ಭಾಗವಹಿಸಲಿದ್ದಾರೆ. ಈ ಧರಣಿ ಅಗಸ್ಟ್ 14 ರಂದು ಬೆಳಿಗ್ಗೆ 10 ಗಂಟೆಗೆ ಶುರುವಾಗಿ ಅಗಸ್ಟ್ 15 ರ ಬೆಳಿಗ್ಗೆ 10 ಗಂಟೆಗೆ ಮುಕ್ತಾಯವಾಗಲಿದೆ ಎಂದು ಫೇಸ್ ಬುಕ್ ಸುದ್ದಿಗೋಷ್ಟಿಯಲ್ಲಿ ತಿಳಿಸಿದ್ದಾರೆ.

ಹಕ್ಕೊತ್ತಾಯಗಳು

  1. ಎಲ್ಲಾ ಖಾಸಗಿ ವಲಯದ ಉದ್ಯಮಗಳಿಗೆ ರಾಜ್ಯ ಸರ್ಕಾರ ಹಲವು ಮೂಲಭೂತ(ನೆಲ,ಜಲ,ವಿದ್ಯುತ್, ರಸ್ತೆ ಮುಂತಾದ) ಸವಲತ್ತುಗಳನ್ನು ನೀಡುತ್ತಿರುವುದರಿಂದ ಕಟ್ಟುನಿಟ್ಟಾಗಿ ಉದ್ಯೋಗಗಳು ಸ್ಥಳಿಯರಿಗೆ(ಕನ್ನಡಿಗರಿಗೆ) ಮೀಸಲಿಡಲು ಕರಾರು ಪತ್ರದಲ್ಲೇ ಪೂರ್ವಷರತ್ತು ಹಾಕಬೇಕು. ರಾಜ್ಯದ ಸರ್ಕಾರಿ ವಲಯದ ಉದ್ಯಮಗಳಲ್ಲಿ ಎಲ್ಲ ಹುದ್ದೆಗಳಿಗೂ ಕನ್ನಡಿಗರನ್ನೇ ಆಯ್ಕೆ ಮಾಡಬೇಕು. ಅನಿವಾರ್ಯ ಸಂದರ್ಭದಲ್ಲಿ ಹೊರ ರಾಜ್ಯದವರನ್ನು ಆಯ್ಕೆ ಮಾಡಿಕೊಳ್ಳಬೇಕಾದರೆ ರಾಜ್ಯ ಸರ್ಕಾರದ ಪೂರ್ವಾನುಮತಿ ಪಡೆದು ನೇಮಕ ಮಾಡಿಕೊಳ್ಳಬೇಕು. ಇಲ್ಲಿನ ಐಟಿ ಉದ್ಯಮಗಳಿಗೆ ರಾಜ್ಯದ ಇಂಜಿನಿಯರಿಂಗ್/ಮ್ಯಾನೇಜ್ಮೆಂಟ್ ಕಾಲೇಜುಗಳಿಂದಲೇ ಕ್ಯಾಂಪಸ್ ನೇಮಕಾತಿ ಮಾಡಿಕೊಳ್ಳಲು ಸೂಚಿಸಬೇಕು.
  2. ಮಹಾರಾಷ್ಟ್ರದಲ್ಲಿ ಇರುವಂತೆ ರಾಜ್ಯ ಸರ್ಕಾರ ಸ್ಥಳೀಯರಿಗೆ ನಿಗದಿಪಡಿಸಿದ ಪ್ರಮಾಣದಲ್ಲಿ ಉದ್ಯೋಗಾವಕಾಶಗಳನ್ನು ಒದಗಿಸುವ ಬಗ್ಗೆ ರಾಜ್ಯದ ಖಾಸಗಿ ಉದ್ದಿಮೆಗಳಿಂದ ಪ್ರತಿವರ್ಷ ಘೋಷಣೆ ಪತ್ರ ಪಡೆಯಬೇಕು. ಅಭ್ಯರ್ಥಿಗಳನ್ನು ಸ್ಥಳೀಯರು ಎಂದು ಪರಿಗಣಿಸಲು 15 ವರ್ಷಗಳ ಕಾಲ ಅವರು ರಾಜ್ಯದಲ್ಲಿ ವಾಸವಾಗಿದ್ದಲ್ಲದೇ ರಾಜ್ಯಭಾಷೆಯಾದ ಕನ್ನಡದಲ್ಲಿ ಮಾತನಾಡಲು,ಓದಲು ಮತ್ತು ಬರೆಯಲು ಬರಬೇಕು.
  3. ರಾಜ್ಯದಲ್ಲಿ ವ್ಯವಹರಿಸುವ ಎಲ್ಲಾ ಬ್ಯಾಂಕುಗಳು ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳುವಾಗ ರಾಜ್ಯದ ಅಧಿಕೃತ ಭಾಷೆಯಾದ ಕನ್ನಡ ಭಾಷಾಜ್ಞಾನವನ್ನು ಕಡ್ಡಾಯಗೊಳಿಸಬೇಕು.ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ (IBPS) ಸಂಸ್ಥೆಯು ಬ್ಯಾಂಕಿಂಗ್ ನೇಮಕಾತಿಗೆ ನಡೆಸುವ  ಪೂರ್ವಭಾವಿ ಮತ್ತು ಮುಖ್ಯಪರೀಕ್ಷೆಯನ್ನು  ಕನ್ನಡದಲ್ಲೂ ಬರೆಯುವ ಅವಕಾಶವಿರಬೇಕು.
  4. ರಾಜ್ಯ/ಕೇಂದ್ರ ಸರ್ಕಾರಿ ಉದ್ಯಮಗಳು ಹಾಗೂ ಇಲಾಖೆಗಳಲ್ಲಿ ದಿನಗೂಲಿ ಕೆಲಸಗಳಿಗೆ ಕಾರ್ಮಿಕರನ್ನು/ನೌಕರರನ್ನು ಗುತ್ತಿಗೆ ಆಧಾರದ ಮೇಲೆ ತೆಗೆದುಕೊಳ್ಳುವ ಸಂದರ್ಭದಲ್ಲಿ ಕನ್ನಡಿಗರನ್ನೇ ನೇಮಿಸಿಕೊಳ್ಳಬೇಕು. ಹೊರಗುತ್ತಿಗೆ ಸಂಸ್ಥೆಗಳಿಗೂ ಈ ಷರತ್ತು ವಿಧಿಸಬೇಕು.
  5. ಕೇಂದ್ರ/ರಾಜ್ಯ ಸರ್ಕಾರದ ಹುದ್ದೆಗಳ ನೇಮಕಾತಿಗಾಗಿ ನಡೆಯುವ ಯಾವುದೇ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳು ಕಡ್ಡಾಯವಾಗಿ ಕನ್ನಡದಲ್ಲಿಯೂ ಇರಬೇಕು.

ಈ ಹೋರಾಟವು ಯಾವುದೇ ಬ್ಯಾನರಿನಡಿಯಲ್ಲಿ ನಡೆಯುತ್ತಿಲ್ಲ. ಹೋರಾಟದ ನೇತೃತ್ವವನ್ನು ಯಾವುದೇ ಸಂಘಟನೆ ಅಥವಾ ವ್ಯಕ್ತಿ ವಹಿಸಿಲ್ಲ. ಇದು ಸಮಗ್ರ ಕನ್ನಡಿಗರೆಲ್ಲಾರ ಹೋರಾಟ. ಎಲ್ಲರ ಭಾಗವಹಿಸುವಿಕೆ ಇರಲಿ ಎಂದು ಕರ್ನಾಟಕ ರಣಧೀರ ಪಡೆಯ ಪ್ರಮುಖರಾದ ದಾವಣಗೆರೆಯ ರಾಘು ದೊಡ್ಡಮನಿ, ಯವರು ಕೋರಿದ್ದಾರೆ.

ಸಂಪರ್ಕಕ್ಕಾಗಿ:  9844363474

ದಿನದ ಸುದ್ದಿ

ಇಂದಿನಿಂದ ಏ.3 ರವರೆಗೆ ಸೂಳೆಕೆರೆಗೆ ನೀರು ಬಿಡುಗಡೆ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ದಾವಣಗೆರೆ: ಭದ್ರಾ ಜಲಾಶಯ ಯೋಜನೆ ವ್ಯಾಪ್ತಿಗೆ ಬರುವ ದೇವರಬೆಳಕೆರೆ ಪಿಕ್‍ಅಪ್ ಅಣೆಕಟ್ಟಿನ ಸ್ಕವರಿಂಗ್ ಸ್ಪೂಯೀಸ್ ಗೇಟ್ ಮುಖಾಂತರ ಜಲಾಶಯದ ಡೆಡ್ ಸ್ಟೋರೇಜ್ ನೀರನ್ನು ಸೂಳೆಕೆರೆ ಹಳ್ಳಕ್ಕೆ ಮಾರ್ಚ್ 28 ರಿಂದ ಏಪ್ರಿಲ್ 3 ರವರೆಗೆ ಪ್ರತಿದಿನ 20 ಕ್ಯೂಸೆಕ್ಸ್‍ಗಳಲ್ಲಿ ಜನ-ಜಾನುವಾರು ಪಕ್ಷಿಗಳಿಗೆ ಕುಡಿಯುವ ನೀರು ಒದಗಿಸಲು ಹಾಗೂ ಅಕ್ಕಪಕ್ಕದ ಗ್ರಾಮಗಳ ಕುಡಿಯುವ ನೀರಿನ ಉದ್ದೇಶಕ್ಕೆ ಬಿಡಲಾಗುತ್ತಿದೆ.

ಈ ವೇಳೆ ಹಳ್ಳಕ್ಕೆ ದನ ಕರಗಳನ್ನು ಇಳಿಸುವುದಾಗಲಿ, ಪಂಪ್‍ಸೆಟ್‍ಗಳಿಂದ ನೀರೆತ್ತುವುದುನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಕನೀನಿನಿ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

ದಿನದ ಸುದ್ದಿ

ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನ

Published

on

ಸುದ್ದಿದಿನ ಡೆಸ್ಕ್ : ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ.

ನಾಳೆ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಇದೇ 30 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಇದೇ ವೇಳೆ ಬಿಹಾರದಲ್ಲಿ ನಾಮಪತ್ರ ಸಲ್ಲಿಕೆಗೆ ನಾಳೆ ಕಡೆ ದಿನವಾಗಿದ್ದು, ಈ ತಿಂಗಳ 30 ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಏಪ್ರಿಲ್ 2ರಂದು ನಾಮತ್ರ ಹಿಂಪಡೆಯುವಿಕೆಗೆ ಕೊನೆಯ ದಿನವಾಗಿರುತ್ತದೆ.

ಏಪ್ರಿಲ್ 19 ರಂದು 17 ರಾಜ್ಯಗಳು ಮತ್ತು ನಾಲ್ಕು ಕೇಂದ್ರಾಡಳಿತ ಪ್ರದೇಶಗಳಲ್ಲಿನ 102ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ. ಅದರಂತೆ ತಮಿಳುನಾಡಿನಲ್ಲಿ 39, ರಾಜಸ್ಥಾನದಲ್ಲಿ 12, ಉತ್ತರ ಪ್ರದೇಶದಲ್ಲಿ 8, ಮಧ್ಯಪ್ರದೇಶದಲ್ಲಿ 6, ಉತ್ತರಾಖಂಡ, ಅಸ್ಸಾಂ ಮತ್ತು ಮಹಾರಾಷ್ಟ್ರದಲ್ಲಿ ತಲಾ 5 , ಬಿಹಾರದಲ್ಲಿ 4, ಪಶ್ಚಿಮ ಬಂಗಾಳದಲ್ಲಿ 3, ಅರುಣಾಚಲ ಪ್ರದೇಶ, ಮಣಿಪುರ, ಮೆಘಾಲಯದಲ್ಲಿ ತಲಾ 2 ಮತ್ತು ಛತ್ತೀಸ್‌ಗಢ, ಮಿಜೋರಾಂ, ನಾಗಾಲ್ಯಾಂಡ್, ಸಿಕ್ಕಿಂ, ತ್ರಿಪುರ, ಅಂಡಮಾನ್-ನಿಕೋಬಾರ್ ದ್ವೀಪಗಳು, ಜಮ್ಮು-ಕಾಶ್ಮೀರ, ಲಕ್ಷದ್ವೀಪ ಮತ್ತು ಪುದುಚೇರಿಯಲ್ಲಿ ತಲಾ ಒಂದು ಕ್ಷೇತ್ರದಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ.

ಎರಡನೇ ಹಂತದಲ್ಲಿ 89 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗ ನಾಳೆ ಅಧಿಸೂಚನೆ ಹೊರಡಿಸಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಚುನಾವಣಾ ಅಕ್ರಮ ; ಸಾರ್ವಜನಿಕರು ದೂರು ಸಲ್ಲಿಸಲು ಆಯೋಗದಿಂದ ಸಿ-ವಿಜಿಲ್ ಆಪ್ ಅಭಿವೃದ್ಧಿ

Published

on

ಸುದ್ದಿದಿನ ಡೆಸ್ಕ್ : 18ನೇ ಲೋಕಸಭೆಗೆ ಸದಸ್ಯರನ್ನು ಆಯ್ಕೆ ಮಾಡಲು ನಡೆಯಲಿರುವ ಸಾರ್ವತ್ರಿಕ ಚುನಾವಣೆಗೆ ಭಾರತ ಚುನಾವಣಾ ಆಯೋಗ, ಸಕಲ ಸಿದ್ಧತೆಯೊಂದಿಗೆ ಸಜ್ಜಾಗಿದೆ.

ದೇಶದಲ್ಲಿ ಚುನಾವಣೆಗಳನ್ನು ಪಾರದರ್ಶಕವಾಗಿ ಹಾಗೂ ಅತ್ಯಂತ ವಿಶ್ವಾಸಾರ್ಹ ರೀತಿಯಲ್ಲಿ ನಡೆಸುವ ಸಂಕಲ್ಪದೊಂದಿಗೆ ಚುನಾವಣಾ ಆಯೋಗ, ಸಮಸ್ತ ಚುನಾವಣಾ ಪ್ರಕ್ರಿಯೆಗಳನ್ನು ಸುಗಮಗೊಳಿಸಲು ತಂತ್ರಜ್ಞಾನದ ನೆರವನ್ನು ಬಳಸಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಮತದಾರರು, ಚುನಾವಣಾ ಸಿಬ್ಬಂದಿ ಹಾಗೂ ಆಯೋಗಕ್ಕೆ ನೆರವಾಗುವ ಹಲವು ಆಪ್‌ಗಳನ್ನು ಚುನಾವಣಾ ಆಯೋಗ ಅಭಿವೃದ್ಧಿಪಡಿಸಿದೆ.

ಈ ಪೈಕಿ ಇಂದು ಸಿ-ವಿಜಿಲ್ ಆಪ್ ಬಗ್ಗೆ ಮಾಹಿತಿ.
ದೇಶದಲ್ಲಿ ಚುನಾವಣೆಗಳ ವೇಳೆ ನಡೆಯುವ ಅಕ್ರಮಗಳು, ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಪ್ರಕರಣಗಳ ಮೇಲೆ ಕಣ್ಣಿಡುವುದು ಕೇವಲ ಚುನಾವಣಾ ಸಿಬ್ಬಂದಿಯ ಕೆಲಸವಲ್ಲ. ಇದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವೂ ಹೌದು. ಹಾಗಾಗಿ ಚುನಾವಣಾ ಅಕ್ರಮಗಳ ಬಗ್ಗೆ ಸಾರ್ವಜನಿಕರು ಆಯೋಗಕ್ಕೆ ದೂರು ತಲುಪಿಸಲು ಭಾರತ ಚುನಾವಣಾ ಆಯೋಗ ಸಿ-ವಿಜಿಲ್ ಆಪ್ ಅನ್ನು ಅಭಿವೃದ್ಧಿ ಪಡಿಸಿದೆ.

ದೂರುಗಳನ್ನು ಆನ್‌ಲೈನ್ ಮೂಲಕ ಆಯೋಗಕ್ಕೆ ರವಾನಿಸಲು ಈ ಆಪ್ ನೆರವಾಗುವುದು. ಯಾವುದೇ ಚುನಾವಣಾ ಅಕ್ರಮಗಳ ಬಗ್ಗೆ ಧ್ವನಿಮುದ್ರಣ, ವಿಡಿಯೋ ಚಿತ್ರದ ತುಣುಕುಗಳು ಮತ್ತು ಫೋಟೊ ಮೊದಲಾದ ದಾಖಲೆಗಳನ್ನು ಸಾರ್ವಜನಿಕರು ಇದರ ಮೂಲಕ ಕಳುಹಿಸಬಹುದು.

ಚುನಾವಣೆಗಳಲ್ಲಿ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಮಾಡುವ ಖರ್ಚು-ವೆಚ್ಚ, ಮತದಾರರ ಮನವೊಲಿಕೆಗೆ ಆಮಿಷಗಳ ಬಳಕೆ ಮೊದಲಾದ ಅಕ್ರಮಗಳ ಬಗ್ಗೆ ದೂರು ನೀಡಲು ಇದನ್ನು ಬಳಸಬಹುದು. ಒಂದುನೂರು ನಿಮಿಷಗಳಲ್ಲಿ ಚುನಾವಣಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುತ್ತಾರೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.

ದೇಶದ ಯಾವ ಮೂಲೆಯಲ್ಲೇ ಆಗಲಿ ನಡೆಯುವ ಚುನಾವಣಾ ಅಕ್ರಮ ಅಥವಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳ ಬಗ್ಗೆ ತಾವು ನೀಡಿದ ದೂರುಗಳನ್ನು ಆಯೋಗ ಪರಿಗಣಿಸಿದೆಯೇ ಎನ್ನುವ ವಿವರಗಳನ್ನು ಸಹ ಸಾರ್ವಜನಿಕರು ಸಿ-ವಿಜಿಲ್-ಆಪ್ ಮೂಲಕ ವೀಕ್ಷಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ1 day ago

ಇಂದಿನಿಂದ ಏ.3 ರವರೆಗೆ ಸೂಳೆಕೆರೆಗೆ ನೀರು ಬಿಡುಗಡೆ

ಸುದ್ದಿದಿನ,ದಾವಣಗೆರೆ: ಭದ್ರಾ ಜಲಾಶಯ ಯೋಜನೆ ವ್ಯಾಪ್ತಿಗೆ ಬರುವ ದೇವರಬೆಳಕೆರೆ ಪಿಕ್‍ಅಪ್ ಅಣೆಕಟ್ಟಿನ ಸ್ಕವರಿಂಗ್ ಸ್ಪೂಯೀಸ್ ಗೇಟ್ ಮುಖಾಂತರ ಜಲಾಶಯದ ಡೆಡ್ ಸ್ಟೋರೇಜ್ ನೀರನ್ನು ಸೂಳೆಕೆರೆ ಹಳ್ಳಕ್ಕೆ ಮಾರ್ಚ್...

ದಿನದ ಸುದ್ದಿ2 days ago

ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನ

ಸುದ್ದಿದಿನ ಡೆಸ್ಕ್ : ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ. ನಾಳೆ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಇದೇ 30 ನಾಮಪತ್ರ ಹಿಂಪಡೆಯಲು...

ದಿನದ ಸುದ್ದಿ3 days ago

ಚುನಾವಣಾ ಅಕ್ರಮ ; ಸಾರ್ವಜನಿಕರು ದೂರು ಸಲ್ಲಿಸಲು ಆಯೋಗದಿಂದ ಸಿ-ವಿಜಿಲ್ ಆಪ್ ಅಭಿವೃದ್ಧಿ

ಸುದ್ದಿದಿನ ಡೆಸ್ಕ್ : 18ನೇ ಲೋಕಸಭೆಗೆ ಸದಸ್ಯರನ್ನು ಆಯ್ಕೆ ಮಾಡಲು ನಡೆಯಲಿರುವ ಸಾರ್ವತ್ರಿಕ ಚುನಾವಣೆಗೆ ಭಾರತ ಚುನಾವಣಾ ಆಯೋಗ, ಸಕಲ ಸಿದ್ಧತೆಯೊಂದಿಗೆ ಸಜ್ಜಾಗಿದೆ. ದೇಶದಲ್ಲಿ ಚುನಾವಣೆಗಳನ್ನು ಪಾರದರ್ಶಕವಾಗಿ...

ದಿನದ ಸುದ್ದಿ5 days ago

ಕವಿತೆ | ನೆನಪು

ರುದ್ರಪ್ಪ ಹನಗವಾಡಿ ಅಪ್ಪನನ್ನು ಒಪ್ಪ ಮಾಡಿ ವರ್ಷಗಳೇ ಕಳೆದವು ಮುವ್ವತ್ತೇಳು ಇಂದಿರಾಗಾಂಧಿಯ ತುರ್ತು ಪರಿಸ್ಥಿತಿ ಅರಸರ ಮೀಸಲಾತಿ ಬಸವಲಿಂಗಪ್ಪನವರ ಬೂಸಾ ಖ್ಯಾತಿ ಮಲ ಹೊತ್ತು ಮಲಗಿದ್ದ ಕಾಲಕ್ಕೆ...

ದಿನದ ಸುದ್ದಿ5 days ago

ಲೋಕಸಭಾ ಚುನಾವಣೆ | ಹೊಸ ಮತದಾರರೆಷ್ಟು ಗೊತ್ತಾ..?

ಸುದ್ದಿದಿನ ಡೆಸ್ಕ್ : 2024ರ ಲೋಕಸಭಾ ಚುನಾವಣೆಯಲ್ಲಿ ಅಂದಾಜು ಒಂದು ಕೋಟಿ 80 ಲಕ್ಷ ಹೊಸ ಮತದಾರರು ತಮ್ಮ ಅಮೂಲ್ಯ ಹಕ್ಕನ್ನು ಮೊದಲ ಬಾರಿಗೆ ಚಲಾಯಿಸಲಿದ್ದಾರೆ. ಇವರೆಲ್ಲ...

ದಿನದ ಸುದ್ದಿ6 days ago

ಬೆಂಗಳೂರಿನಲ್ಲಿ ಬಿಜೆಪಿ ನೂತನ ಮಾಧ್ಯಮಕೇಂದ್ರ ಆರಂಭ

ಸುದ್ದಿದಿನ,ಬೆಂಗಳೂರು : ದಕ್ಷಿಣ ಭಾರತದಲ್ಲಿ ಭಾರತೀಯ ಜನತಾಪಕ್ಷಕ್ಕೆ, ಕರ್ನಾಟಕ ಹೆಬ್ಬಾಗಿಲಿನಂತಿದ್ದು, ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಪಕ್ಷ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ...

ದಿನದ ಸುದ್ದಿ6 days ago

ವಿಜಯಪುರ ಜಿಲ್ಲಾ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಗೆ ಮೈಬೂಬಸಾಹೇಬ.ವೈ.ಜೆ ಆಯ್ಕೆ

ಮೂಲತಃ ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಯರಗಲ ಗ್ರಾಮದವರಾದ ಮೈಬೂಬಸಾಹೇಬ, ಪ್ರಾಥಮಿಕ ಮತ್ತು ಮಾಧ್ಯಮಿಕ ಶಿಕ್ಷಣ ಹುಟ್ಟೂರಲ್ಲಿ ಪಡೆದುಕೊಂಡು ಉನ್ನತ ಶಿಕ್ಷಣವನ್ನು ವಿದ್ಯಾಕಾಶಿ ಧಾರವಾಡದಲ್ಲಿ ಮುಗಿಸಿ, ಪ್ರಸ್ತುತ...

ದಿನದ ಸುದ್ದಿ6 days ago

ಲೋಕಸಭಾ ಚುನಾವಣೆ : ಚುನಾವಣಾ ಚಟುವಟಿಕೆಗಳ ಕುರಿತ ಜಿಲ್ಲಾವಾರು ಮಾಹಿತಿ

ರಾಜ್ಯದ 28ಲೋಕಸಭಾ ಮತಕ್ಷೇತ್ರಗಳನ್ನು ಒಳಗೊಂಡ ಜಿಲ್ಲೆಗಳಲ್ಲಿ ನಡೆದಿರುವ ಚುನಾವಣಾ ಚಟುವಟಿಕೆಗಳ ಬಗ್ಗೆ ಮಾಹಿತಿ ಸುದ್ದಿದಿನ ಡೆಸ್ಕ್ : ದಾವಣಗೆರೆಯಲ್ಲಿ ಚುನಾವಣಾ ಕಾರ್ಯಗಳ ವೀಕ್ಷಣೆ ಮತ್ತು ನಿಯಂತ್ರಣಕ್ಕಾಗಿ ಜಿಲ್ಲಾಧಿಕಾರಿ...

ದಿನದ ಸುದ್ದಿ1 week ago

ನಾಯಕನ ಹಟ್ಟಿ | ಶ್ರೀಗುರು ತಿಪ್ಪೇರುದ್ರಸ್ವಾಮಿ ರಥೋತ್ಸವಕ್ಕೆ ವಿಶೇಷ ಬಸ್ ಸೌಲಭ್ಯ

ಸುದ್ದಿದಿನ,ದಾವಣಗೆರೆ : ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಶ್ರೀಕ್ಷೇತ್ರ ನಾಯಕನಹಟ್ಟಿಯಲ್ಲಿ ಮಾರ್ಚ್ 26 ರಂದು ಜರುಗಲಿರುವ ಶ್ರೀಗುರು ತಿಪ್ಪೇರುದ್ರಸ್ವಾಮಿ ರಥೋತ್ಸವಕ್ಕೆ ರಾಜ್ಯ ರಸ್ತೆ ಸಾರಿಗೆ ನಿಗಮ ವಿಭಾಗದ...

mallikarjun kharge_suddidina mallikarjun kharge_suddidina
ದಿನದ ಸುದ್ದಿ1 week ago

ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಗಳು ಸ್ಥಗಿತ ; ಬಿಜೆಪಿ ಅಧಿಕಾರ ದುರುಪಯೋಗ : ಖರ್ಗೆ ಕಿಡಿ

ಸುದ್ದಿದಿನ, ದೆಹಲಿ : ಲೋಕಸಭೆ ಚುನಾವಣೆ ವೇಳೆ ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿರುವುದರಿಂದ ಚುನಾವಣಾ ಖರ್ಚುವೆಚ್ಚ ನಿರ್ವಹಣೆಯಲ್ಲಿ ಪಕ್ಷಕ್ಕೆ ಹಿನ್ನಡೆಯಾಗುತ್ತಿದೆ. ಆಡಳಿತ ಪಕ್ಷ ಬಿಜೆಪಿಗೆ ಅನುಕೂಲವಾಗುವಂತೆ...

Trending