ರಾಜಕೀಯ
ಮೀಡಿಯಾಗಳು ಮೋದಿ ಪರವಾಗಿಲ್ಲ; ಪರವಾಗಿ ಇರಲೇಬೇಕಿದೆ’: ಎಬಿಪಿ ನ್ಯೂಸ್ ವೃತ್ತಾಂತದ ಸುತ್ತ…

ಸುದ್ದಿದಿನ ಡೆಸ್ಕ್ | ಎಬಿಪಿ ನ್ಯೂಸ್ ನೆಟ್‌ವರ್ಕ್‌ನ ಮ್ಯಾನೇಜಿಂಗ್ ಎಡಿಟರ್ ಮಿಲಿಂದ್ ಖಂಡೇಕರ್ ಆಗಸ್ಟ್ 1ರಂದು ರಾಜೀನಾಮೆ ನೀಡಿ ಸಂಸ್ಥೆಯಿಂದ ಹೊರ ನಡೆದಿದ್ದಾರೆ. ಬೆನ್ನಿಗೆ ಹಲವು ಹಿರಿತಲೆಗಳೂ ಚಾನಲ್ ತೊರೆದಿದ್ದಾರೆ.
ಕೆಲವು ತಿಂಗಳ ಕೆಳಗೆ ಸಂದರ್ಶನವೊಂದರಲ್ಲಿ ಮಾತನಾಡಿದ್ದ ಹಿರಿಯ ಕಾಂಗ್ರೆಸ್ ನಾಯಕ ಪಿ. ಚಿದಂಬರಂ ‘ದೇಶದ ಮಾಧ್ಯಮ ವಲಯದಲ್ಲಿ ಭಯ ಸೃಷ್ಟಿಯಾಗಿದೆ. ಪತ್ರಕರ್ತರು, ಮಾಧ್ಯಮ ಸಂಸ್ಥೆಗಳು ಒತ್ತಡದಲ್ಲಿವೆ’ ಎಂಬರ್ಥದ ಹೇಳಿಕೆ ನೀಡಿದ್ದರು.
ಈ ಆರೋಪಗಳ ನಡುವೆ ಎಬಿಪಿ ನ್ಯೂಸ್ ನೆಟ್‌ವರ್ಕ್‌ನ ಮ್ಯಾನೇಜಿಂಗ್ ಎಡಿಟರ್ ಮಿಲಿಂದ್ ಖಂಡೇಕರ್ ಆಗಸ್ಟ್ 1ರಂದು ರಾಜೀನಾಮೆ ನೀಡಿ ಸಂಸ್ಥೆಯಿಂದ ಹೊರ ನಡೆದಿದ್ದಾರೆ. ಬೆನ್ನಿಗೆ ಹಲವು ಹಿರಿತಲೆಗಳೂ ಚಾನಲ್ ತೊರೆದಿದ್ದಾರೆ. ವಾಹಿನಿಯಲ್ಲಿ ಪ್ರೈಮ್‌ಟೈಮ್ ಕಾರ್ಯಕ್ರಮ ಮಾಸ್ಟರ್‌ಸ್ಟ್ರೋಕ್ ನಡೆಸಿಕೊಡುತ್ತಿದ್ದ ಹಿರಿಯ ಪತ್ರಕರ್ತ ಪುನ್ಯ ಪ್ರಸೂನ್ ಬಾಜಪೇಯಿ ಗುರುವಾರ ಚಾನಲ್ ತೊರೆದಿದ್ದರೆ, ಅಭಿಸಾರ್ ಶರ್ಮಾ ರಜೆಯ ಮೇಲೆ ಕಚೇರಿಯಿಂದ ಹೊರ ಹೋಗಿದ್ದಾರೆ.
ಸಾಮಾನ್ಯವಾಗಿ ಪತ್ರಕರ್ತರು ಮಾಧ್ಯಮ ಸಂಸ್ಥೆಯೊಂದನ್ನು ತೊರೆದಾಗ ಮಾಧ್ಯಮ ವಲಯದಿಂದಾಚೆ ಚರ್ಚೆಗಳಾಗುವುದು ಅಪರೂಪ. ಆದರೆ ಬಾಜಪೇಯಿ ಮತ್ತು ಖಂಡೇಕರ್ ನಿರ್ಗಮನ ಪತ್ರಕರ್ತರ ವರ್ತುಲ ದಾಟಿ ಸುದ್ದಿಯಾಗಿದೆ.
ಈ ಕುರಿತು ಟ್ಟೀಟ್ ಮಾಡಿರುವ ಕಾಂಗ್ರೆಸ್ ವಕ್ತಾರ ರಣದೀಪ್ ಸಿಂಗ್ ಸುರ್ಜೇವಾಲ, ‘ಅಧಿಕಾರದಲ್ಲಿರುವವರ ಬಗೆಗಿನ ಸತ್ಯದ ಧ್ವನಿಯನ್ನು ನಿಗ್ರಹಿಸುವ ಯತ್ನ ಇದು’ ಎಂದು ಕಿಡಿಕಾರಿದ್ದಾರೆ. ಇನ್ನೊಂದು ಕಡೆ ಸಂಸತ್‌ನಲ್ಲಿ ಮಾತನಾಡಿರುವ ಟಿಎಂಸಿ ಸಂಸದ ಡೆರೇಕ್ ಓಬ್ರಿಯಾನ್, ಪತ್ರಕರ್ತರ ಮೇಲೆ ಒತ್ತಡಗಳಿವೆ ಎಂದು ಹೇಳಿದ್ದಾರೆ.
ಆಗಿದ್ದೇನು?
ಅಷ್ಟಕ್ಕೂ ಈ ಪತ್ರಕರ್ತರ ನಿರ್ಗಮನಕ್ಕೆ ಕಾರಣವಾಗಿದ್ದು ಏನು ಎಂದು ಹುಡುಕುತ್ತಾ ಹೊರಟರೆ ಅಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯಕ್ರಮ ಮತ್ತು ಅದರ ಸುತ್ತಾ ನಡೆದ ಘಟನಾವಳಿಗಳು ಕಾಣಿಸಿಕೊಳ್ಳುತ್ತವೆ.
ತಮ್ಮ ಅವಧಿ ಮುಗಿಯುತ್ತಾ ಬಂದಿರುವಾಗ ಪ್ರಧಾನಿ ನರೇಂದ್ರ ಮೋದಿ ದೇಶದ ವಿವಿಧ ಸಮುದಾಯಗಳ ಜತೆ ಸಂವಾದ ನಡೆಸುತ್ತಿದ್ದಾರೆ. ಹೀಗೆ ಛತ್ತೀಸ್‌ಗಢದ ಚಂದ್ರಮನಿ ಕೌಶಿಕ್ ಎಂಬ ಮಹಿಳೆ ಜತೆ ಅವರು ಮಾತುಕತೆ ನಡೆಸುತ್ತಿದ್ದಾಗ, ಆಕೆ ‘ನಾನು ಭತ್ತ ಬೆಳೆಯುವ ಬದಲು ಸೀತಾಪಲ ಬೆಳೆಯಲು ಆರಂಭಿಸಿ ದುಪ್ಪಟ್ಟು ಲಾಭ ಗಳಿಸುತ್ತಿದ್ದೇನೆ’ ಎಂದು ಹೇಳಿದ್ದರು.
ಈ ಬಗ್ಗೆ ‘ಮಾಸ್ಟರ್‌ಸ್ಟ್ರೋಕ್’ ಕಾರ್ಯಕ್ರಮದಲ್ಲಿ ಪ್ರಸ್ತಾಪಿಸಿದ್ದ ಬಾಜಪೇಯಿ, ಮಹಿಳೆಗೆ ಸುಳ್ಳು ಹೇಳಲು ತರಬೇತಿ ನೀಡಲಾಗಿದೆ ಎಂದು ಆರೋಪಿಸಿದ್ದರು. ದೆಹಲಿಯಿಂದ ಕಂಕೇರ್ ಜಿಲ್ಲೆಗೆ ತೆರಳಿದ್ದ ಅಧಿಕಾರಿಯೊಬ್ಬರು ಈ ರೀತಿ ತಪ್ಪು ಮಾಹಿತಿ ಹೇಳುವಂತೆ ಮಹಿಳೆಗೆ ಸೂಚಿಸಿದ್ದರು ಎಂದು ವರದಿಯಲ್ಲಿ ಹೇಳಲಾಗಿತ್ತು. ಈ ವಿಡಿಯೋ ಕ್ಲಿಪ್‌ನ್ನು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಟ್ಟೀಟ್ ಮಾಡುವ ಮೂಲಕ ಇದು ಎಬಿಪಿಯ ಸಾಂಪ್ರದಾಯಿಕ ವೀಕ್ಷಕರನ್ನು ದಾಟಿ ಜನರನ್ನು ತಲುಪಿತ್ತು.
ಮುಗಿಬಿದ್ದ ಬಿಜೆಪಿ
ಇಷ್ಟಾಗಿದ್ದೇ ತಡ ಬಿಜೆಪಿಗರು ಎಬಿಪಿ ನ್ಯೂಸ್ ವಿರುದ್ಧ ಮುಗಿಬಿದ್ದಿದ್ದರು. ಕೇಂದ್ರ ಸಚಿವ ರಾಜ್ಯವರ್ಧನ್ ಸಿಂಗ್ ರಾಥೋಡ್ ನರೇಂದ್ರ ಮೋದಿಯನ್ನು ವಿರೋಧಿಸುವ ಅಜೆಂಡಾವನ್ನು ಎಬಿಪಿ ಪತ್ರಕರ್ತರು ಇಟ್ಟುಕೊಂಡಿದ್ದಾರೆ ಎಂದು ಆರೋಪಿಸಿದರು. ವಾಹಿನಿಯ ವರದಿ ಸುಳ್ಳು ಎಂದು ಅವರು ಕಿಡಿಕಾರಿದರು. ರಕ್ಷಣಾ ಸಚಿವೆ, ಮಾಜಿ ಪತ್ರಕರ್ತೆ ನಿರ್ಮಲಾ ಸೀತರಾಮನ್ ಬಾಯಿಯಿಂದಲೂ ಇದೇ ಮಾತು ಹೊರ ಬಂತು.
ಈ ಆರೋಪಕ್ಕೆ ಪ್ರತಿಕ್ರಿಯೆ ನೀಡಲು ನಿರ್ಧರಿಸಿದ ‘ಎಬಿಪಿ ನ್ಯೂಸ್’ ತನ್ನ ವರದಿಗಾರನನ್ನು ಮಹಿಳೆಯಿದ್ದ ಗ್ರಾಮಕ್ಕೆ ಕಳುಹಿಸಿ ವಾಸ್ತವ ವರದಿಯನ್ನು ಬಿತ್ತರಿಸಿತು. ಮತ್ತು ಇದು ನಿಮ್ಮ ‘ಫೇಕ್ ನ್ಯೂಸ್’ ಆರೋಪಕ್ಕೆ ಪ್ರತಿಕ್ರಿಯೆ ಎಂಬುದಾಗಿ ನಿರ್ಮಾಲಾ ಸೀತಾರಾಮನ್ ಮತ್ತು ರಾಜ್ಯವರ್ಧನ್ ಸಿಂಗ್ ರಾಥೋಡ್‌ರನ್ನು ಟ್ಯಾಗ್ ಮಾಡಿ ಟ್ಟೀಟ್ ಮಾಡಿತು.
ಈ ಬೆಳವಣಿಗೆಯಿಂದ ಉರಿದು ಹೋದ ಬಿಜೆಪಿ ನಾಯಕರು ಚಾನಲ್‌ಗೆ ಬಹಿಷ್ಕಾರ ಹಾಕಲು ನಿರ್ಧರಿಸಿದ್ದರು ಎಂದು ಚಾನಲ್ ಮೂಲಗಳು ಹೇಳಿದ್ದಾಗಿ ‘ಸ್ಕ್ರಾಲ್’ ವರದಿ ಮಾಡಿದೆ.
ಹೀಗೊಂದು ಹೊಸ ಒತ್ತಡ ತಂತ್ರ
ಈ ಎಲ್ಲಾ ಬೆಳವಣಿಗೆಗಳ ಮಧ್ಯೆ ವಾಹಿನಿಗೆ ಹೊಸತೊಂದು ತಲೆನೋವು ಆರಂಭವಾಯಿತು. ‘ಮಾಸ್ಟರ್‌ಸ್ಟ್ರೋಕ್’ ಕಾರ್ಯಕ್ರಮ ಪ್ರಸಾರವಾಗುತ್ತಿದ್ದ ಪ್ರೈಮ್‌ಟೈಮ್ ಅವಧಿಯಲ್ಲೇ ವಾಹಿನಿಯ ಸಿಗ್ನಲ್‌ನಲ್ಲಿ ತೊಂದರೆ ಕಾಣಿಸಿಕೊಳ್ಳಲು ಆರಂಭವಾಯಿತು. ಜುಲೈ 13ರಿಂದ ತಾಂತ್ರಿಕ ಸಮಸ್ಯೆಯೊಂದು ತೆರೆದುಕೊಂಡಿತು.
ಇವೆಲ್ಲಾ ವಾಹಿನಿಯ ಗಮನಕ್ಕೂ ಬಂದಿತ್ತು. ಇದನ್ನು ಉದ್ದೇಶಿಸಿಯೇ ‘ಎಲ್ಲಾ ಅಡ್ಡಿ ಆತಂಕಗಳ ನಡುವೆಯೂ ವಾಹಿನಿ ಸತ್ಯವನ್ನೇ ಹೇಳುತ್ತಾ ಬಂದಿದೆ’ ಎಂದು ಬಾಜಪೇಯಿ ಕಾರವಾಗಿ ಟ್ಟೀಟ್ ಮಾಡಿದ್ದರು. ತಮ್ಮ ಮಾಸ್ಟ್ರರ್‌ಸ್ಟ್ರೋಕ್ ಪ್ರೋಗ್ರಾಂಗೆ ಆಗುತ್ತಿರುವ ಈ ಸಿಗ್ನಲ್ ಸಮಸ್ಯೆಯಿಂದ ಬೇಸತ್ತಿದ್ದ ಬಾಜಪೇಯಿ, ಹಸಿವಿನಿಂದ ಸಾಯುತ್ತಿರುವರುವವರು, ನಿರುದ್ಯೋಗ, ರೈತರ ಆತ್ಮಹತ್ಯೆ, ಶುದ್ಧಗಾಳಿ, ನೀರು ಇದ್ಯಾವುದರ ಕಡೆಯಗೂ ಗಮನ ನೀಡಲಾಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದರು. ಇದಾದ ನಂತರ ಅವರು ತಮ್ಮ ಶೋನ ವಿಡಿಯೋಗಳನ್ನು ಅನಿವಾರ್ಯವಾಗಿ ಟ್ಟೀಟ್ ಮಾಡಲು ಆರಂಭಿಸಿದ್ದರು.
ಅಂದ ಹಾಗೆ ಟಿವಿ ವಾಹಿನಿಗಳ ಪ್ರಸಾರಕ್ಕೆ ಬೇಕಾದ ಈ ಸಿಗ್ನಲ್‌ಗಳು ಕೇಂದ್ರ ಸರಕಾರದ ಸುಪರ್ದಿಯಲ್ಲಿವೆ. ಮತ್ತು ಹೀಗೆ ಇದ್ದಕ್ಕಿದ್ದ ಹಾಗೆ ವಾಹಿನಿಯೊಂದು ತಾಂತ್ರಿಕ ಸಮಸ್ಯೆಗೆ ಒಳಗಾಗಿದ್ದರ ಹಿಂದೆ ಏನು ನಡೆದಿರಬಹುದು ಎಂದು ಊಹಿಸುವುದು ಕಷ್ಟವೇನಲ್ಲ.
ಈ ಎಲ್ಲಾ ಬೆಳವಣಿಗೆಗಳ ನಂತರ ಬುಧವಾರ ಖಂಡೇಕರ್, ಗುರುವಾರ ಬಾಜೊಪೇಯಿ ರಾಜೀನಾಮೆ ನೀಡಿ ವಾಹಿನಿಯಿಂದ ಹೊರ ನಡೆದಿದ್ದಾರೆ. ಇನ್ನೋರ್ವ ಪತ್ರಕರ್ತ ಅಭಿಸಾರ್ ಶರ್ಮಾ ರಜೆಯ ಮೇಲೆ ತೆರಳಿದ್ದಾರೆ. ಬಹುಶಃ ‘ದೆಹಲಿ ದರ್ಬಾರ್’ನಲ್ಲಿ ಕುಳಿತವರೀಗ ಅಟ್ಟಹಾಸದ ನಗು ಬೀರುತ್ತಿರಬಹುದು. ನೀವು ನಮ್ಮ ಪರವಾಗಿರಿ ಇಲ್ಲವಾದಲ್ಲಿ ವೃತ್ತಿ ತೊರೆಯಲು ಸಿದ್ಧರಾಗಿ ಎಂಬ ಸಂದೇಶವೊಂದು ಮತ್ತೊಮ್ಮೆ ಎದುರಾಗಿದೆ. ಯಾಕೆ ದೇಶದ ಬಹುತೇಕ ಸುದ್ದಿವಾಹಿನಿಗಳು ಕೇಂದ್ರ ಸರಕಾರ ತುತ್ತೂರಿಗಳಾಗಿವೆ ಮತ್ತು ಪತ್ರಕರ್ತರು ಯಾಕೆ ಸ್ವಂತಿಕೆ ಕಳೆದುಕೊಂಡು ಬೆತ್ತಲಾಗಿದ್ದಾರೆ ಎಂಬುದಕ್ಕೆ ಉತ್ತರ ಈ ವೃತ್ತಾಂತದಲ್ಲಿ ಸಿಗುತ್ತಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401
ರಾಜಕೀಯ
ದೇವರಮನೆ ಶಿವಕುಮಾರ್ ಬಿಜೆಪಿ ಸೇರ್ಪಡೆ | ನಾವು ಯಾರಿಗೂ ಆಮಿಷ ಒಡ್ಡಿಲ್ಲ : ಸಂಸದ ಜಿಎಂ ಸಿದ್ದೇಶ್ವರ್

ಸುದ್ದಿದಿನ, ದಾವಣಗೆರೆ : ದಾವಣಗೆರೆ ಮಹಾನಗರ ಪಾಲಿಕೆ ಗದ್ದುಕೆ ಹಿಡಿದಿದ್ದಕ್ಕೆ ಸಂಸದ ಜಿಎಂ ಸಿದ್ದೇಶ್ವರ ಹರ್ಷ ವ್ಯಕ್ತಪಡಿಸಿದ್ದು, ವರಿಷ್ಠರ ನಿರ್ಧಾರದಂತೆ ಎಸ್ ಟಿ ವೀರೇಶ್ ಅವರನ್ನ ಮೇಯರ್ ಆಗಿ ಆಯ್ಕೆ ಮಾಡಲಾಗಿದೆ ಎಂದರು.
ಇದನ್ನೂ ಓದಿ | ಶಾಸಕ ಶಾಮನೂರು ಶಿವಶಂಕರಪ್ಪ ಸೇರಿದಂತೆ ಮೂವರು ಎಂ ಎಲ್ ಸಿ ಗಳು ಗೈರು : ಬಿಜೆಪಿಗೆ ಸುಲಭ ಗೆಲುವು
ಬುಧವಾರ ಮಹಾನಗರ ಪಾಲಿಕೆ ಮೇಯರ್ – ಉಪಮೇಯರ್ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇವರಮನೆ ಶಿವಕುಮಾರ್ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದು ಅವರ ವೈಯಕ್ತಿ ವಿಚಾರವಾಗಿದೆ. ನಾವು ಯಾರಿಗೂ ಯಾವ ಆಮಿಷ ಒಡ್ಡಿಲ್ಲ. ಸ್ವತ: ಅವರೆ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರ್ತಿನಿ ಅಂತ ಬಂದಿದ್ದರು, ಹಾಗಾಗಿ ಅವರನ್ನ ಬಿಜೆಪಿಗೆ ಸೇರಿಸಿಕೊಂಡಿದ್ದೇವೆ. ಇನ್ನು ಯಾರಾದರೂ ಬಿಜೆಪಿ ಸೇರ್ತಾರ ಎಂಬ ವರದಿಗಾರರ ಪ್ರಶ್ನೆಗೆ ಸಿದ್ದೇಶ್ವರ್ ಅವರು ‘ವೇಟ್ ಆ್ಯಂಡ್ ಸೀ ಎಂದು ಅಚ್ಚರಿ ಮೂಡಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ರಾಜಕೀಯ
ದಾವಣಗೆರೆ ಮಹಾನಗರ ಪಾಲಿಕೆ ಬಿಜೆಪಿ ತೆಕ್ಕೆಗೆ : ಮೇಯರ್ ಆಗಿ ಎಸ್.ಟಿ.ವೀರೇಶ್, ಉಪಮೇಯರ್ ಆಗಿ ಶಿಲ್ಪಾ ಜಯಪ್ರಕಾಶ್

ಸುದ್ದಿದಿನ,ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆ ಮೇಯರ್ – ಉಪಮೇಯರ್ ಚುನಾವಣೆಯತಲ್ಲಿ ಬಿಜೆಪಿಯು ಭರ್ಜರಿ ಗೆಲುವು ಪಡೆಯಿತು. ಮೇಯರ್ ಆಗಿ ಬಿಜೆಪಿಯ ಎಸ್.ಟಿ. ವೀರೇಶ್ ಹಾಗೂ ಉಪ ಮೇಯರ್ ಆಗಿ ಶಿಲ್ಪಾ ಜಯಪ್ರಕಾಶ್ ಆಯ್ಕೆಯಾದರು.
29 ಮತಗಳನ್ನು ಪಡೆಯುವ ಮೂಲಕ ಬಿಜೆಪಿಯು ದಾವಣಗೆರೆ ಪಾಲಿಕೆ ಅಧಿಕಾರ ಹಿಡಿದಿದ್ದು, ಕಾಂಗ್ರೆಸ್ 22 ಮತಗಳನ್ನು ಮಾತ್ರ ಪಡೆಯುವಲ್ಲಿ ಯಶಸ್ವಿಯಾಯಿತು.
ಇದನ್ನೂ ಓದಿ | ಶಾಸಕ ಶಾಮನೂರು ಶಿವಶಂಕರಪ್ಪ ಸೇರಿದಂತೆ ಮೂವರು ಎಂ ಎಲ್ ಸಿ ಗಳು ಗೈರು : ಬಿಜೆಪಿಗೆ ಸುಲಭ ಗೆಲುವು
ಸುದ್ದಿದಿನ.ಕಾಂ|ವಾಟ್ಸಾಪ್|9980346243
ರಾಜಕೀಯ
ಶಾಸಕ ಶಾಮನೂರು ಶಿವಶಂಕರಪ್ಪ ಸೇರಿದಂತೆ ಮೂವರು ಎಂ ಎಲ್ ಸಿ ಗಳು ಗೈರು : ಬಿಜೆಪಿಗೆ ಸುಲಭ ಗೆಲುವು

ಸುದ್ದಿದಿನ, ದಾವಣಗೆರೆ : ಕಾಂಗ್ರೆಸ್ ನ ಹಿರಿಯ ಮುಖಂಡ ಶಾಸಕ ಶಾಮನೂರು ಶಿವಶಂಕರಪ್ಪ ಗೈರು ಹಾಜರಿಯಲ್ಲಿ ದಾವಣಗೆರೆ ಮಹಾನಗರ ಪಾಲಿಕರ ಮೇಯರ್ ಉಪಮೇಯರ್ ಚುನಾವಣೆಯಲ್ಲಿ ಮತದಾನ ನಡೆಯಿತು.
ದಾವಣಗೆರೆ ಮಹಾನಗರ ಪಾಲಿಕೆ ಮೇಯರ್ ಸ್ಥಾನಕ್ಕೆ ಬಿಜೆಪಿಯಿಂದ ಎಸ್. ಟಿ. ವೀರೇಶ್, ಕಾಂಗ್ರೆಸ್ ನಿಂದ ಗಡಿಗುಡಾಳ್ ಮಂಜುನಾಥ್ ಅವರು ನಾಮಪತ್ರ ಸಲ್ಲಿಸಿದ್ದರು. ಬಿಜೆಪಿಯಿಂದ ಉಪಮೇಯರ್ ಸ್ಥಾನಕ್ಕೆ ಬಿಜೆಪಿಯಿಂದ ಶಿಲ್ಪ ಜಯಪ್ರಕಾಶ್ ನಾಮಪತ್ರ ಸಲ್ಲಿಸಿದ್ದರು.
ಬಿಜೆಪಿಯಿಂದ ಸಂಸದ ಜಿ ಎಂ ಸಿದ್ದೇಶ್ವರ್ , ಸಚಿವ ಆರ್ ಶಂಕರ್, ಚಿದಾನಂದಗೌಡ ಸೇರಿದಂತೆ ಬಿಜೆಪಿ ಪಕ್ಷದ 29 ಸದಸ್ಯರು ಇದ್ದರು. ಕಾಂಗ್ರೆಸ್ ನ ಶಾಸಕ ಶಾಮನೂರು ಶಿವಶಂಕರಪ್ಪ ಹಾಗೂ ಮೂವರು ಎಂ ಎಲ್ ಸಿ ಗಳಾದ ಕೆಸಿ ಕೊಂಡಯ್ಯ, ರಘು ಆಚಾರ್ , ಯುಬಿ ವೆಂಕಟೇಶ್ ಗೈರಾಗಿದ್ದರು. ವಿಧಾನ ಪರಿಷತ್ ಸದಸ್ಯ ಮೋಹನ್ ಕೊಂಡಜ್ಜಿ ಸೇರಿದಂತೆ ಮಹಾನಗರ ಪಾಲಿಕೆ 22 ಸದಸ್ಯರು ಹಾಜರಿದ್ದರು.
ಶಾಸಕ ಶಾಮನೂರು ಶಿವಶಂಕರಪ್ಪ ಆಪ್ತರಾಗಿದ್ದ ಶಿವಕುಮಾರ್ ದೇವರಮನಿ ಮಂಗಳವಾರ (ಫೆ.23) ಕಾಂಗ್ರೆಸ್ ಗೆ ರಾಜೀನಾಮೆ ಸಲ್ಲಿಸಿ ಬಿಜೆಪಿಗೆ ಸೇರ್ಪಡೆಯಾಗಿದ್ದರು.
ಈ ಎಲ್ಲಾ ಬೆಳವಣಿಗೆಯ ಹಿನ್ನೆಲೆಯಲ್ಲಿ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲುವುದು ಖಚಿತವಾಗಿತ್ತು. ಇದರ ನಡುವೆ ಬೆಳಗ್ಗೆ ಕಾಂಗ್ರೆಸ್ ಹಿರಿಯ ಮುಖಂಡರ ಅನುಪಸ್ಥಿತಿಯಲ್ಲಿ ಚುನಾವಣೆ ನೆಡೆದಿದ್ದರಿಂದ ಬಿಜೆಪಿಗೆ ಗೆಲುವು ಸುಲಭವಾಯಿತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ಅಂತರಂಗ5 days ago
‘ಪ್ರೀತಿಯಲ್ಲಿ ಗೆದ್ದವ ಚುನಾವಣೆಯಲ್ಲಿ ಗೆದ್ದು ಗದ್ದುಗೆಯೇರಿದ’..!
-
ಭಾವ ಭೈರಾಗಿ6 days ago
ಕರುಣಾಳು ಅವನು, ಅವನು ನನ್ನವನು..!
-
ದಿನದ ಸುದ್ದಿ5 days ago
ದಿಶಾ ಕೇಸ್ | ನನ್ನ ಆತ್ಮಸಾಕ್ಷಿಯನ್ನು ದಾಖಲೆ ಸಹಿತ ಒಪ್ಪಿಸಿ..! ಮೂರು ಪ್ರಶ್ನೆಗಳಿಗೆ ಉತ್ತರ ಕೊಡಿ ಎಂದ ನ್ಯಾಯಾಧೀಶರು..!
-
ದಿನದ ಸುದ್ದಿ6 days ago
ಬಡವರನ್ನು ಸಬಲೀಕರಣಗೊಳಿಸಲು ಉಚಿತ ಅನಿಲ ಸಂಪರ್ಕ ನೀಡಿದ್ದೇವೆ : ಪ್ರಧಾನಿ ಮೋದಿ
-
ಲೈಫ್ ಸ್ಟೈಲ್5 days ago
ಮೂತ್ರದಲ್ಲಿನ ಸಕ್ಕರೆ ಅಂಶ ನಿಯಂತ್ರಣದಲ್ಲಿಡುತ್ತೆ ಈ ಸೀಮೆ ಬದನೆಕಾಯಿ..!
-
ಕ್ರೀಡೆ5 days ago
ಭಾರತ ಟಿ20ಐ ಪಂದ್ಯಾವಳಿಗೆ ತಂಡ ಪ್ರಕಟಿಸಿದ ಬಿಸಿಸಿಐ
-
ಲೈಫ್ ಸ್ಟೈಲ್5 days ago
ರೆಸಿಪಿ | ಮನೇಲೇ ಮಾಡಿ ಜಿಲೇಬಿ
-
ಭಾವ ಭೈರಾಗಿ5 days ago
ಕವಿತೆ | ಅವಳು