ದಿನದ ಸುದ್ದಿ
ಮತ ಎಣಿಕೆ ಕೇಂದ್ರದೊಳಗೆ ಮೊಬೈಲ್ ನಿಷೇಧ

ಸುದ್ದಿದಿನ,ಶಿವಮೊಗ್ಗ : ಕಳೆದ ಏಪ್ರಿಲ್ 23ರಂದು ನಡೆದ ಶಿವಮೊಗ್ಗ ಲೋಕಸಭಾ ಚುನಾವಣೆಯ ಮತ ಎಣಿಕೆ ಕಾರ್ಯವು ಮೇ 23ರಂದು ಬೆಳಿಗ್ಗೆ 8ಗಂಟೆಯಿಂದ ನಗರದ ಸಹ್ಯಾದ್ರಿ ಕಾಲೇಜಿನಲ್ಲಿ ನಡೆಯಲಿದ್ದು, ಮತಎಣಿಕೆ ಕಾರ್ಯವು ವ್ಯವಸ್ಥಿತವಾಗಿ ನಡೆಯಲು ಜಿಲ್ಲಾಡಳಿತ ಅಗತ್ಯ ಕ್ರಮಗಳನ್ನು ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಕೆ.ಎ.ದಯಾನಂದ್ ಅವರು ಹೇಳಿದರು.
ಅವರು ಇಂದು ತಮ್ಮ ಕಚೇರಿ ಕಾರ್ಯಾಲಯದಲ್ಲಿ ಏರ್ಪಡಿಸಲಾಗಿದ್ದ ರಾಜಕೀಯ ಪಕ್ಷಗಳ ಮುಖಂಡರ ಸಭೆಯಲ್ಲಿ ಮಾತನಾಡುತ್ತಿದ್ದರು. ರಾಜ್ಯದ ಕೆಲವು ಮತಕ್ಷೇತ್ರಗಳಲ್ಲಿ ಶಿವಮೊಗ್ಗ ಕ್ಷೇತ್ರವೂ ಕೂಡ ಸೂಕ್ಷ್ಮ ಪ್ರದೇಶವೆಂದು ಚುನಾವಣಾ ಆಯೋಗ ಗುರುತಿಸಿರುವ ಹಿನ್ನೆಲೆಯಲ್ಲಿ ಸುರಕ್ಷತಾ ಕ್ರಮವಾಗಿ ಹೆಚ್ಚುವರಿ ಪೊಲೀಸ್ ತುಕಡಿಯನ್ನು ನಿಯೋಜಿಸಲಾಗಿದೆ ಎಂದರು.
ಮತಎಣಿಕೆ ಕಾರ್ಯಕ್ಕೆ ನಿಯೋಜಿಸಲಾಗುವ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಜಿಲ್ಲಾ ಚುನಾವಣಾ ಶಾಖೆಯಿಂದ ಗುರುತಿನ ಪತ್ರ ನೀಡಲಾಗುವುದು. ಗುರುತಿನ ಚೀಟಿ ಹೊಂದಿರದ ಯಾವುದೇ ವ್ಯಕ್ತಿಗೆ ಪ್ರವೇಶವನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ ಎಂದವರು ತಿಳಿಸಿದರು.
ಮತಎಣಿಕೆ ಕಾರ್ಯಕ್ಕೆ ಆಗಮಿಸಲಿರುವ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಪಾವತಿಸಿ ಪಡೆಯಬಹುದಾದ ಉಪಹಾರ ಗೃಹ ವ್ಯವಸ್ಥೆ, ವಾಹನ ನಿಲುಗಡೆಗೆ ಕಲ್ಪಿಸಲಾಗಿದೆ. ಅಲ್ಲದೆ ಗುರುತಿನ ಚೀಟಿ ಹೊಂದಿದ ಯಾವುದೇ ರಾಜಕೀಯ ಪಕ್ಷಗಳ ಮುಖಂಡರು ಮೊಬೈಲ್ ತೆಗೆದುಕೊಂಡು ಹೋಗುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಮಾಧ್ಯಮ ಪ್ರತಿನಿಧಿಗಳು ತಮ್ಮ ಮಾಧ್ಯಮ ಕೇಂದ್ರದಲ್ಲಿದ್ದು ಮೊಬೈಲ್ ಬಳಸಲು ಯಾವುದೇ ಆಕ್ಷೇಪಣೆ ಇರುವುದಿಲ್ಲ ಎಂದವರು ನುಡಿದರು.
ಮತ ಎಣಿಕೆಗೆ ಮುನ್ನ ಅಂದು ಬೆಳಿಗ್ಗೆ 7ಗಂಟೆಯಿಂದ ಸ್ಟ್ರಾಂಗ್ ರೂಂಗಳ ಬಾಗಿಲುಗಳನ್ನು ತೆರೆಯಲಾಗುವುದು. ಎಂಟು ಗಂಟೆಗೆ ಸರಿಯಾಗಿ ಸರ್ವೀಸ್ ಓಟ್ಸ್ ಹಾಗೂ ಪೋಸ್ಟಲ್ ಓಟುಗಳನ್ನು ಹಾಗೂ ಮತಯಂತ್ರಗಳ ಎಣಿಕೆಯನ್ನು ಏಕಕಾಲಕ್ಕೆ ಆರಂಭಿಸಲಾಗುವುದು ಎಂದರು.
ಪ್ರತಿ ವಿಧಾನ ಸಭಾ ಕ್ಷೇತ್ರಕ್ಕೂ ಅನ್ವಯವಾಗುವಂತೆ ಚುನಾವಣಾ ಆಯೋಗದ ನಿರ್ದೇಶನದಂತೆ ಆಯ್ದ ಕೆಲವು ವಿವಿ ಪ್ಯಾಟ್ಗಳ ಮತಗಳನ್ನು ರಾeಕೀಯ ಪಕ್ಷಗಳ ನಿಯೋಜಿತ ಪ್ರತಿನಿಧಿಗಳ ಉಪಸ್ಥಿತಿಯಲ್ಲಿ ಚುನಾವಣಾಧಿಕಾರಿಗಳು ಎಣಿಸುವರು. ಪ್ರತಿ ಸುತ್ತಿನ ಮತಎಣಿಕೆ ಪೂರ್ಣಗೊಂಡಾಗ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಸಹಿ ಮಾಡಬೇಕಾಗುವುದು. ಆಕ್ಷೇಪಣೆಗಳಿದ್ದಲ್ಲಿ ತಕ್ಷಣ ಮತಎಣಿಕೆ ಸಿಬ್ಬಂಧಿಗಳಿಗೆ ತಮ್ಮ ಅಸಮ್ಮತಿ ಸೂಚಿಸಿ ಪುನರ್ ಎಣಿಕೆಗೆ ಬೇಡಿಕೆ ಸಲ್ಲಿಸಬಹುದಾಗಿದೆ. ಸಹಿ ಹಾಕಿದ ನಂತರ ಪುನರ್ ಎಣಿಕೆಗೆ ಅವಕಾಶವಿರುವುದಿಲ್ಲ ಎಂದವರು ತಿಳಿಸಿದರು.
ಮತಎಣಿಕೆಯ ಈ ಎಲ್ಲಾ ಪ್ರಕ್ರಿಯೆಗಳಲ್ಲಿ ರಾಜಕೀಯ ಪಕ್ಷಗಳ ನಿಯೋಜಿತ ಪ್ರತಿನಿಧಿಗಳು ಸಿಬ್ಬಂಧಿಗಳೊಂದಿಗೆ ಸಮಾಧಾನವಾಗಿ ವ್ಯವಹರಿಸಬೇಕು. ಮತ ಎಣಿಕೆ ಕಾರ್ಯ ಮುಕ್ತಾಯಗೊಳ್ಳುವವರೆಗೆ ಯಾವುದೇ ಒತ್ತಡಕ್ಕೆ ಒಳಗಾಗದೇ ಅಧಿಕಾರಿಗಳೊಂದಿಗೆ ಸಂಯಮದಿಂದ ಸಹಕರಿಸುವಂತೆ ಅವರು ಸೂಚಿಸಿದರು.
ಚುನಾವಣೆಗೆ ಸ್ಪರ್ಧಿಸಿರುವ ಪ್ರತಿ ಅಭ್ಯರ್ಥಿಯು ತಮ್ಮ ಚುನಾವಣಾ ವೆಚ್ಚದ ಲೆಖ್ಖಪತ್ರಗಳನ್ನು ಜೂನ್ 22ರೊಳಗಾಗಿ ಜಿಲ್ಲಾ ಚುನಾವಣೆ ಶಾಖೆಯ ಲೆಖ್ಖ ಪರಿವೀಕ್ಷಕರಿಗೆ ಒಪ್ಪಿಸುವಂತೆ ಅವರು ಇದೇ ಸಂದರ್ಭದಲ್ಲಿ ನುಡಿದರು. ಸಭೆಯಲ್ಲಿ ರಾಜಕೀಯ ಪಕ್ಷಗಳ ಮುಖಂಡರು, ಪ್ರತಿನಿಧಿಗಳು, ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ-ಇತರೆ ಸೌಲಭ್ಯ ಅರ್ಜಿ ಅವಧಿ ವಿಸ್ತರಣೆ

ಸುದ್ದಿದಿನ,ದಾವಣಗೆರೆ :2020-21 ನೇ ಸಾಲಿಗೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಮತ್ತು ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ, ಸೌಲಭ್ಯಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಏಪ್ರಿಲ್ 30 ರವರೆಗೆ ವಿಸ್ತರಿಸಲಾಗಿದೆ.
ಈ ಹಿಂದೆ ಅರ್ಜಿ ಸಲ್ಲಿಸಲು ಏ.20 ಕಡೆಯ ದಿನವೆಂದು ನಿಗದಿಪಡಿಸಲಾಗಿತ್ತು. ಇದೀಗ ಈ ಅವಧಿಯನ್ನು ಏ.30 ರವರಗೆ ವಿಸ್ತರಿಸಲಾಗಿದ್ದು, ಆಸಕ್ತರು ಅರ್ಜಿ ಸಲ್ಲಿಸಲು ವೆಬ್ಸೈಟ್ www.ssp.postmatric.karnataka.gov.in ,ಕಾರ್ಯಕ್ರಮದ ವಿವರ, ಹಾಗೂ ಹೆಚ್ಚಿನ ವಿವರಗಳಿಗೆ https://bcwd.karnataka.gov.in : [email protected] ತಂತ್ರಾಂಶ ದೋಷಗಳು ಮತ್ತು ಇತರೆ ಮಾಹಿತಿಗೆ[email protected]
ದೂರವಾಣಿ ಸಂಖ್ಯೆ 8050770005/8050770004/ 080-35254757 ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಎಸ್.ಆರ್.ಗಂಗಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ| ವಾಟ್ಸಾಪ್ | 9980346243

ದಿನದ ಸುದ್ದಿ
ಹಳೇ ಕುಂದುವಾಡ ಮನಾ ಯುವ ಬ್ರಿಗೇಡ್, ಜರವೇ ನಾಲ್ಕನೇ ವಾರ್ಷಿಕೋತ್ಸವ | ಯುವಕರ ಸಮಾಜ ಮುಖಿ ಕೆಲಸಗಳು ಉತ್ತಮ ನಾಯಕತ್ವಕ್ಕೆ ಬುನಾದಿ : ಮೇಯರ್ ಎಸ್.ಟಿ.ವೀರೇಶ್

ಸುದ್ದಿದಿನ,ದಾವಣಗೆರೆ : ಯುವಕರು ಸಮಾಜ ಮುಖಿ ಕೆಲಸದಲ್ಲಿ ತೊಡಗಿಸಿಕೊಂಡರೆ ಉತ್ತಮ ನಾಯಕರು ಆಗಲು ಅದು ಬುನಾದಿ ಆಗುತ್ತದೆ ಎಂದು ಮೇಯರ್ ಎಸ್ ಟಿ ವೀರೇಶ್ ತಿಳಿಸಿದರು.
ನಗರದ ಹಳೇ ಕುಂದುವಾಡದಲ್ಲಿ ಮನಾ ಯುವ ಬ್ರಿಗೇಡ್, ಜರವೇ ನಾಲ್ಕನೇ ವಾರ್ಷಿಕೋತ್ಸವ ಅಂಗವಾಗಿ ಹಮ್ಮಿಕೊಂಡಿದ್ದ ಸಾಧಕರಿಗೆ ಸನ್ಮಾನ, ಕುಂದುವಾಡ ಯುವ ರತ್ನ ಪ್ರಶಸ್ತಿ, ಕೆಎಪಿಎಲ್ ಬಹುಮಾನ ವಿತರಣಾ ಸಮಾರಂಭದಲ್ಲಿ ಮಾತನಾಡಿದ ಅವರು, ಇಂದಿನ ಸಮಯದಲ್ಲಿ ಯುವಕರು ಬೇರೆ ಬೇರೆ ದಾರಿ ಕಡೇ, ದುಶ್ಚಟಗಳಿಗೆ ಬಲಿಯಾಗುತ್ತಿದ್ದಾರೆ, ಸಾಮಾಜಿಕ ಸೇವೆಗಳು, ಸಹಾಯ ಹಸ್ತ ಚಾಚುವಂತ ಯುವ ಮನಸ್ಸುಗಳು ಸಿಗುವುದೇ ವಿರಳವಾಗಿದೆ.
ಇಂತಹ ಕಾಲದಲ್ಲಿ ಮನಾ ಯುವ ಬ್ರಿಗೇಡ್ ಯುವಕರು, 44 ನೇ ವಾರ್ಡಿನಲ್ಲಿ ಅತ್ಯುತ್ತಮ ಸಾಮಾಜಿಕ ಸೇವೆ ಮಾಡುವ ಮೂಲಕ ಜವಾಬ್ದಾರಿ ಹೆಚ್ಚಿಸಿಕೊಂಡಿದ್ದಾರೆ.. ಯಾವುದೇ ಸಮಾಜ ಸೇವೆಗಳು ಮಾಡಬೇಕೆಂದರು ಸವಾಲುಗಳು ಜಾಸ್ತಿ, ಎಲ್ಲಾ ಸವಾಲು ಮೆಟ್ಟಿನಿಂತು ಯುವಕರು ಸಮಾಜ ಸೇವೆಗಳಲ್ಲಿ ತೊಡಗಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಕಾರ್ಮಿಕ ಮುಖಂಡ ದಿ. ಜೆಎಂ ಹನುಮಂತಪ್ಪ ಅವರಿಗೆ ಮರಣೋತ್ತರ ಕುಂದುವಾಡ ರತ್ನ ಪ್ರಶಸ್ತಿ ಹಾಗೂ ಸಿಆರ್ ಪಿಎಫ್ ಯೋಧ ಆನಂದ್ ಎಸ್ ಎಚ್, ಎಸ್ ಎಸ್ ಬಿ ಯೋಧ ಭರ್ಮಪ್ಪ, ಸಮಾಜ ಸೇವಕ ರಾಜು ಕರೂರು ಅವರಿಗೆ ಕುಂದುವಾಡ ಯುವ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಜೊತೆಗೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಮಾಜ ಸೇವಕರಿಗೆ ಸನ್ಮಾನಿಸಿ ಗೌರವಿಸಲಾಯಿತು, ಕೆಪಿಎಲ್ ಚಾಂಪಿಯನ್ ಪವರ್ ಫೈಟರ್ಸ್ ತಂಡಕ್ಕೆ ಟ್ರೋಫಿ ವಿತರಿಸಲಾಯಿತು..
ಈ ಸಂದರ್ಭದಲ್ಲಿ ವರ್ತಕರಾದ ರಾಘವೇಂದ್ರ ಎನ್ ದಿವಾಕರ್, ಪಾಲಿಕೆ ಮಾಜಿ ಸದಸ್ಯ ಹೆಚ್ ತಿಪ್ಪಣ್ಣ, ಮುಖಂಡರಾದ ಬಾಡದ ಆನಂದರಾಜ್, ನಾಗಭೂಷಣ್ ವಾಣಿ, ಮಿಟ್ಲಕಟ್ಟೆ ಚಂದ್ರಪ್ಪ, ಶಿವಪ್ಪ, ಜೆಸಿ ದೇವರಾಜ್, ಎನ್ ಟಿ ನಾಗರಾಜ್, ಸಣ್ಣಿಂಗಪ್ಪ, ಮಂಜಪ್ಪ, ಗಿರೀಶ್ ದೇವರಮನೆ, ಪತ್ರಕರ್ತ ಮಧುನಾಗರಾಜ್ ಕುಂದುವಾಡ ಸೇರಿದಂತೆ ಮತ್ತಿತರರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಿಘಂಟು ತಜ್ಞ ಫ್ರೊ.ಜಿ.ವೆಂಕಟಸುಬ್ಬಯ್ಯ ನಿಧನ

ಸುದ್ದಿದಿನ, ಬೆಂಗಳೂರು : ನಾಡಿನ ಖ್ಯಾತ ಸಂಶೋದಕ, ನಿಘಂಟು ತಜ್ಞ ಫ್ರೊ.ಜಿ.ವೆಂಕಟಸುಬ್ಬಯ್ಯ ಅವರು ಸೋಮವಾರ ರಾತ್ರಿ 1.15 ರ ವೇಳೆಗೆ ತಮ್ಮ ವಯೋ ಸಹಜ ಕಾರಣಗಳಿಂದ 108 ನೇ ವಯಸ್ಸಿನಲ್ಲಿ ನಿಧನರಾದರು.
ನಾಡೋಜ ಪ್ರೊ. ಜಿ. ವೆಂಕಟಸುಬ್ಬಯ್ಯ ಅವರು ಖ್ಯಾತ ವಿದ್ವಾಂಸರು ಹಾಗೂ ಜನಪ್ರಿಯ ಪ್ರಾಧ್ಯಾಪಕರು. ಪ್ರೊ. ಜಿ. ವೆಂಕಟಸುಬ್ಬಯ್ಯ ಅವರು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಸುವರ್ಣ ಪದಕದೊಡನೆ ಎಂ.ಎ. ಪದವಿ, ನಂತರ ಬಿ.ಟಿ. ಪದವಿ ಗಳಿಕೆ. ಮಹಾರಾಜ ಕಾಲೇಜಿನಲ್ಲಿ ಉಪನ್ಯಾಸಕರಾಗಿ ವೃತ್ತಿಯನ್ನು ಆರಂಭಿಸಿ, ನಂತರ ಬೆಂಗಳೂರಿನ ವಿಜಯಾ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ, ಪ್ರಿನ್ಸಿಪಾಲರಾಗಿ, ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದರು.
ಕನ್ನಡ ಸಾಹಿತ್ಯ ಪರಿಷತ್ತಿನ ಕನ್ನಡ-ಕನ್ನಡ ನಿಘಂಟುವಿನ ಪ್ರಧಾನ ಸಂಪಾದಕರಾಗಿ ಸೇವೆ ಸಲ್ಲಿಕೆ. ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ, ಕನ್ನಡ ಸಾಹಿತ್ಯ ಪರಿಷತ್ತಿಗೆ ಅಖಿಲ ಕರ್ನಾಟಕ ವ್ಯಾಪ್ತಿಯನ್ನು ತಂದುಕೊಟ್ಟ ಹಿರಿಮೆ ಶ್ರೀಯುತರದು.
ನಡೆದಾಡುವ ನಿಘಂಟು, ಶಬ್ಧ ಬ್ರಹ್ಮ ಎಂದು ಜನಜನಿತರಾಗಿರುವ ಶ್ರೀಯುತರು ಸಾಹಿತ್ಯ ವಿಮರ್ಶೆ, ಸಂಶೋಧನೆ, ಅನುವಾದ, ನಿಘಂಟು ರಚನೆ ಕ್ಷೇತ್ರಗಳಲ್ಲಿ ಅಪಾರ ಸೇವೆ ಸಲ್ಲಿಕೆ. 50ಪುಸ್ತಕಗಳನ್ನು, 14 ನಿಘಂಟುಗಳನ್ನು ಪ್ರಕಟಗೊಳಿಸಿರುವುದಲ್ಲದೆ ‘ಇಗೋ ಕನ್ನಡ’ ಎಂಬ ಅಂಕಣದಿಂದ ನಾಡಿನಲ್ಲಿ ಮನೆಮಾತಾಗಿದ್ದಾರೆ.
ನಿಘಂಟು ಪರಿವಾರ, ಅಕ್ರೂರ ಚರಿತ್ರೆ (ಸಂಪಾದನೆ), ಇಗೋ ಕನ್ನಡ (ಸಾಮಾಜಿಕ ನಿಘಂಟು), ಗತಿ ಪ್ರಜ್ಞೆ, ಕನ್ನಡವನ್ನು ಉಳಿಸಿ ಬೆಳೆಸಿದವರು, ಅನುಕಲ್ಪನೆ, ಕರ್ಣ ಕರ್ಣಾಮೃತ ಮುಂತಾದವು ಪ್ರಮುಖ ಕೃತಿಗಳು. ಹಲವಾರು ಶಿಕ್ಷಕ ತರಬೇತಿ ಕಾಲೇಜುಗಳಲ್ಲಿ ಆಹ್ವಾನಿತ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿರುವ ಶ್ರೀಯುತರ ಪಾಂಡಿತ್ಯಕ್ಕೆ ಸಂದ ಪ್ರಶಸ್ತಿ ಪುರಸ್ಕಾರಗಳು ಹಲವಾರು.
ಅವುಗಳಲ್ಲಿ ವಿದ್ಯಾಲಂಕಾರ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ, ಶಂಬಾ ಪ್ರಶಸ್ತಿ, ಸೇಡಿಯಾಪು ಪ್ರಶಸ್ತಿ, ಕಾಯಕ ಪ್ರಶಸ್ತಿ, ಪತ್ರಿಕಾ ಅಕಾಡೆಮಿ ವಿಶೇಷ ಪ್ರಶಸ್ತಿ, ಮಾಸ್ತಿ ಪ್ರಶಸ್ತಿ, ಹಂಪಿ ವಿಶ್ವವಿದ್ಯಾನಿಲಯದ ನಾಡೋಜ ಪ್ರಶಸ್ತಿ, ಅಂತರಾಷ್ಟ್ರೀಯ ನಿಘಂಟು ಸಮ್ಮೇಳನಗಳಿಗೆ ಆಹ್ವಾನ ಮುಂತಾದವು ಮುಖ್ಯವಾದವು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಬಹಿರಂಗ6 days ago
ಸಂವಿಧಾನ ನಿತ್ಯದ ಪಾಠವಾಗಲಿ..!
-
ಅಂತರಂಗ6 days ago
ಮಹಾ ಮಾನವತಾವಾದಿ ಅಂಬೇಡ್ಕರ್ ನೆನಪಿನಲ್ಲಿ..!
-
ಭಾವ ಭೈರಾಗಿ6 days ago
ಕವಿತೆ | ಯುಗಾದಿ ಪುರುಷ
-
ಲೈಫ್ ಸ್ಟೈಲ್4 days ago
ತರಕಾರಿ ಸಿಪ್ಪೆಯಿಂದ ಪೇಪರ್ ತಯಾರಿಸಿದ ಹತ್ತರ ಬಾಲೆ ಮಾನ್ಯ ಹರ್ಷ..!
-
ನಿತ್ಯ ಭವಿಷ್ಯ6 days ago
ಜನ್ಮ ಕುಂಡಲಿಯಲ್ಲಿ ಈ ಗ್ರಹಗಳು ಇದ್ದರೆ ಆಗರ್ಭ ಶ್ರೀಮಂತರು ; ಧನ ಯೋಗ ಪ್ರಾಪ್ತಿ
-
ನಿತ್ಯ ಭವಿಷ್ಯ6 days ago
ಈ ರಾಶಿಯವರಿಗೆ ಶುಭಕಾರ್ಯ ನೆರವೇರಲಿದೆ..! ಬುಧವಾರ- ರಾಶಿ ಭವಿಷ್ಯ ಏಪ್ರಿಲ್-14,2021
-
ನಿತ್ಯ ಭವಿಷ್ಯ5 days ago
ಈ ರಾಶಿಯವರು ಹೊಸ ಮನೆ ನಿರ್ಮಾಣ ಮಾಡಿ,ಮದುವೆ ಕಾರ್ಯ ಮಾಡುವಿರಿ..! ಗುರುವಾರ- ರಾಶಿ ಭವಿಷ್ಯ ಏಪ್ರಿಲ್-15,2021
-
ನಿತ್ಯ ಭವಿಷ್ಯ4 days ago
ಈ ರಾಶಿಯವರು ಕುಟುಂಬ ಸದಸ್ಯರೊಂದಿಗೆ “ಸಂತಾನದ” ಸಿಹಿಸುದ್ದಿ ಕೇಳಿ ಸಂತಸ ಹಂಚಿಕೊಳ್ಳುವಿರಿ! ಶುಕ್ರವಾರ-ಏಪ್ರಿಲ್-16,2021