Connect with us

ದಿನದ ಸುದ್ದಿ

ಕೇಂದ್ರ ಅಲೆಮಾರಿ ಆಯೋಗಕ್ಕೆ ‘ಅಲೆಮಾರಿ ಬುಡಕಟ್ಟು ಮಹಾಸಭಾ’ದಿಂದ ಹಲವು ಬೇಡಿಕೆಗಳ ಮನವಿ ಸಲ್ಲಿಕೆ

Published

on

ಸುದ್ದಿದಿನ, ಬೆಂಗಳೂರು : ಕೇಂದ್ರ ಸರ್ಕಾರದ ವತಿಯಿಂದ ಬಿಕೋ ರಾಮಜಿ ಇದಾತೆ ಅವರ ಅಧ್ಯಕ್ಷತೆಯಲ್ಲಿ ಕೇಂದ್ರ ಸರ್ಕಾರದಲ್ಲಿ ಆಯೋಗವನ್ನು ರಚನೆ ಮಾಡಿದ್ದಾರೆ. ಇದಕ್ಕೆ ಪೂರಕವಾಗಿ ಬೆಂಗಳೂರು ನಗರದಲ್ಲಿ ರಾಜ್ಯದ ಅಲೆಮಾರಿಗಳ ಪ್ರಸ್ತುತ ಸ್ಥಿತಿಗತಿಗಳ ಬಗ್ಗೆ ಚರ್ಚೆ ಮಾಡಲು ಮತ್ತು ಇತ್ತೀಚಿಗೆ ಸರ್ಕಾರ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳ ಕುರಿತಾದ ಬೆಳವಣಿಗೆಗಳ ಬಗ್ಗೆ ಪರಿಶೀಲನೆ ಮಾಡಲು ಆಗಮಿಸಿದ್ದಾರೆ.

ಇದರ ಅಂಗವಾಗಿ ಅಲೆಮಾರಿ ಬುಡಕಟ್ಟು ಮಹಾಸಭಾದ ವತಿಯಿಂದ ಆಯೋಗದ ಅಧ್ಯಕ್ಷರಾದ ಬಿಕೂ ರಾಮಜಿ ಇದಾತೆ ಅವರನ್ನು ಶುಕ್ರವಾರ ಬೆಂಗಳೂರಿನ ಕುಮಾರಕೃಪಾ ವಸತಿಗೃಹದಲ್ಲಿ ಅವರಿಗೆ ಹಲವು ಬೇಡಿಕೆಗಳ ಹಕ್ಕೊತ್ತಾಯದ ಮನವಿ ಪತ್ರವನ್ನು ಸಲ್ಲಿಸಲಾಯಿತು.

ಬೇಡಿಕೆಗಳು

  1. ಅಲೆಮಾರಿ ಸಮುದಾಯಗಳ ಸಂಶೋಧನಾ ಸಂಸ್ಥೆ ಮತ್ತು ಅಧ್ಯಯನ ಕೇಂದ್ರ ಕರ್ನಾಟಕದಲ್ಲಿ ನಿರ್ಮಿಸುವುದು.
  2. ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗದ ಅಲೆಮಾರಿ ಅಭಿವೃದ್ಧಿ ಕೋಶವನ್ನು ನಿಗಮ ಮಂಡಳಿ ಯನ್ನಾಗಿ ಪರಿವರ್ತಿಸುವುದು
  3. ಎಸ್ಸಿಪಿ ಮತ್ತು ಟಿಎಸ್ಪಿ ಅನುದಾನದಲ್ಲಿ ಅಲೆಮಾರಿಗಳಿಗಾಗಿ ಪ್ರತ್ಯೇಕವಾದ 2000 ಕೋಟಿ ಹಣವನ್ನು ಮೀಸಲಾಗಿ ಇಡುವುದು
  4. ಆಯೋಗದಲ್ಲಿ ಪ್ರತಿ ಸಮುದಾಯದ ಒಬ್ಬ ಪ್ರತಿನಿಧಿಯನ್ನು ಆಯೋಗದ ಸದಸ್ಯರನ್ನಾಗಿ ನೇಮಕ ಮಾಡಿಕೊಳ್ಳವುದು.
  5. ಅಲೆಮಾರಿ ಸಮುದಾಯದ ಪರವಾಗಿ ಯಾರನ್ನಾದರೂ ಒಬ್ಬರನ್ನು ಶಾಸಕಾಂಗ ಅಥವಾ ಪರಿಷತ್ ಸದಸ್ಯರನ್ನಾಗಿ ನೇಮಕ ಮಾಡುವುದು.
  6. ಅಲೆಮಾರಿಗಳ ಕೂಲಂಕುಷವಾದ ವೈಜ್ಞಾನಿಕ ಜನಗಣತಿ ಮಾಡುವುದು.

ಈ ಸಂದರ್ಭದಲ್ಲಿ ಅಲೆಮಾರಿ ಬುಡಕಟ್ಟು ಮಹಾಸಭಾದ ಪದಾಧಿಕಾರಿಗಳಾದ ಲೋಹಿತಾಕ್ಷ ರಾಜ್ಯಾಧ್ಯಕ್ಷರು ,ಅನಂದ್ ಕುಮಾರ್ ಏಕಲವ್ಯ, ಉಪಾಧ್ಯಕ್ಷರು ,ಬಿಎಚ್ ಮಂಜುನಾಥ್ಉಪಾಧ್ಯಕ್ಷರು ,ವೆಂಕಟರಮಣಯ್ಯ ಕಾರ್ಯಾಧ್ಯಕ್ಷರು ,ಕಿರಣ್ ಕುಮಾರ್ ಕೊತ್ತಗೆರೆ ಪ್ರಧಾನ ಕಾರ್ಯದರ್ಶಿ ,ಬಿಟಿ ದಾಸರ್ ಉಪಾಧ್ಯಕ್ಷರು ,ಚೈತ್ರಶ್ರೀ ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷರು ತರೀಕೆರೆ,
ರವಿಕುಮಾರ್ ಸಂಘಟನಾ ಕಾರ್ಯದರ್ಶಿಗಳು ಇವರುಗಳ ಉಪಸ್ಥಿತಿಯಲ್ಲಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಬಿಎಸ್​​ವೈ ರಾಜೀನಾಮೆ ಘೋಷಣೆ..!

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ, ಬೆಂಗಳೂರು : ಸರ್ಕಾರದ ಎರಡು ವರ್ಷಗಳ ಸಾಧನಾ ಕಾರ್ಯಕ್ರಮದ ಭಾಷಣದಲ್ಲಿ ಭಾವುಕರಾಗಿ ಸಿಎಂ ಬಿಎಸ್​​ವೈ ಕಣ್ಣೀರು ಹಾಕಿದರು.

ಸಂಘದ ಕಾರ್ಯಕರ್ತನಾಗಿ ನಂತರ ಆರೆಸ್ಸೆಸ್ ಪ್ರಚಾರಕನಾಗಿ ಬಳಿಕ ರಾಜಕೀಯ ಜೀವನ ಪ್ರವೇಶಿಸಿ ಸಂದರ್ಭದಿಂದ ಹಿಡಿದು ತಮ್ಮ ಈಗಿನ ರಾಜಕೀಯದವರೆಗೂ ತಮ್ಮ ಹೋರಾಟಗಳನ್ನ ಅವರು ಮೆಲುಕು ಹಾಕಿದರು. ಭಾಷಣದ ಮಧ್ಯೆ ಅವರು ಗದ್ಗದಿತರಾಗಿ ಕಣ್ಣೀರು ಹಾಕಿದರು. ಕೊನೆಯಲ್ಲಿ ಗದ್ಗದಿತರಾಗಿ ಊಟದ ನಂತರ ರಾಜಭವನಕ್ಕೆ ತೆರಳಿ ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ ಎಂದು ಕಣ್ಣೀರು ಹಾಕಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಹಿರಿಯ ನಟಿ ಜಯಂತಿ ಇನ್ನಿಲ್ಲ

Published

on

ಸುದ್ದಿದಿನ, ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟಿ, ಅಭಿನಯ ಶಾರದೆ ಜಯಂತಿ (76) ಇಂದು ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಅವರು, ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಕನ್ನಡ, ತಮಿಳು, ಮಲಯಾಳಂ, ಹಿಂದಿ ಸೇರಿದಂತೆ 6 ಭಾಷೆಗಳಲ್ಲಿ ನಟಿಸಿದ್ದಾರೆ. 500ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದ ಅವರು, ಬಹುಭಾಷಾ ನಟಿಯಾಗಿ ಗುರುತಿಸಿಕೊಂಡಿದ್ದರು. ಜಯಂತಿ ಅವರ ನಿಧನಕ್ಕೆ ಚಿತ್ರರಂಗ ಕಂಬನಿ ಮಿಡಿದಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮೊಟ್ಟೆ ಖರೀದಿಯಲ್ಲಿ ಅವ್ಯವಹಾರ ; ಕಾಣದ ಕೈಗಳು ಕೆಲಸ ಮಾಡುತ್ತಿವೆ : ಸಚಿವೆ ಶಶಿಕಲಾ ಜೊಲ್ಲೆ

Published

on

ಸುದ್ದಿದಿನ, ಬೆಂಗಳೂರು : ಮಹಿಳಾ ಮತ್ತು ಮಕ್ಕಳ ಇಲಾಖೆಯಲ್ಲಿ ಮೊಟ್ಟೆ ಖರೀದಿಯಲ್ಲಿ ಅವ್ಯವಹಾರವಾಗಿದೆ ಎಂಬ ಸುದ್ದಿ ಸತ್ಯಕ್ಕೆ ದೂರವಾದದ್ದು, ಇದರ ಹಿಂದೆ ರಾಜಕೀಯ ಷಡ್ಯಂತ್ರ ಅಡಗಿದ್ದು, ವಯಕ್ತಿಕವಾಗಿ ನನ್ನ ತೇಜೊವಧೆ ಮಾಡುವ ಪ್ರಯತ್ನ ನಡೆಸಲಾಗುತ್ತಿದೆ ಎಂದು ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದರು.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮೊಟ್ಟೆ ಖರೀದಿಗೆ ಇದುವರೆಗೂ ಯಾವದೇ ಟೆಂಡರ್ ಕರೆದಿಲ್ಲ. ಅಲ್ಲದೇ ಟೆಂಡರ್ ನೀಡಲು ನಾನು ವಯಕ್ತಿಕವಾಗಿ ಯಾವುದೇ ವ್ಯಕ್ತಿ ಅಥವಾ ಸಂಸ್ಥೆಯಿಂದ ಹಣಕ್ಕಾಗಿ ಬೇಡಿಕೆ ಇಟ್ಟಿಲ್ಲ.

ನಮ್ಮ ಬಿಜೆಪಿ ಪಕ್ಷದ ಶಾಸಕರಾದ ಪರಣ್ಣ ಮುನವಳ್ಳಿಯವರು ತಮ್ಮ ಸಂಬಂಧಿಕರು ಎಂದು ಕರೆದುಕೊಂಡು ಬಂದಾಗ ಕಾನೂನು ಪ್ರಕಾರ ಟೆಂಡರ್ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಂತೆ ಸೂಚಿಸಿದ್ದೇನೆ. ಇದರಲ್ಲಿ ಯಾವುದೇ ಹಣಕಾಸಿನ ವ್ಯವಹಾರದ ಕುರಿತು ನಾನು ಮಾತನಾಡಿಲ್ಲ.

ಆದರೆ, ಒಬ್ಬ ಮಹಿಳೆಯಾಗಿ ಪ್ರಾಮಾಣಿಕವಾಗಿ ಕೆಲಸ ಮಾಡಿಕೊಂಡು ರಾಜಕೀಯದಲ್ಲಿ ನನ್ನದೇ ಆದ ತತ್ವ ಸಿದ್ದಾಂತ ನಂಬಿಕೊಂಡು ಕೆಲಸ ಮಾಡುತ್ತಿರುವ ನನ್ನ ಏಳಿಗೆಯನ್ನು ಸಹಿಸದವರು, ನನ್ನ ವಿರುದ್ಧ ವ್ಯವಸ್ಥಿತ ಷಡ್ಯಂತ್ರ ನಡೆಸುತ್ತಿದ್ದಾರೆ. ಇದರ ಹಿಂದೆ ಕಾಣದ ಕೈಗಳು ಕೆಲಸ ಮಾಡುತ್ತಿವೆ ಎಂದು ಅನುಮಾನ
ವ್ಯಕ್ತಪಡಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending