ಸಿನಿ ಸುದ್ದಿ
ಗಾಯಕ ಚಂದನ್ ಶೆಟ್ಟಿ ಗೆ ವಾರ್ನಿಂಗ್ ನೀಡಿದ ಪೊಲೀಸ್ !
ಸುದ್ದಿದಿನ ಡೆಸ್ಕ್: ಬಿಗ್ ಬಾಸ್ ವಿನ್ನರ್, ಗಾಯಕ ಚಂದನ್ ಶೆಟ್ಟಿ ಹೆಸರು ಸದ್ಯ ಎಲ್ಲೆಡೆ ಹರಿದಾಡುತ್ತಿದೆ. ಗಾಂಜಾ ಕುರಿತು ಗಾಯಕ ಚಂದನ್ ಶೆಟ್ಟಿ ಹಾಡೊಂದನ್ನು ಹೇಳಿದ್ದು, ಇದು ಸಮಾಜಕ್ಕೆ ಕೆಟ್ಟ ಸಂದೇಶ ಸಾರುತ್ತಿದೆ ಎಂದು ಸಿಸಿಬಿ ಪೊಲೀಸರಿಗೆ ದೂರು ಸಲ್ಲಿಸಲಾಗಿತ್ತು.
ಪ್ರಕರಣ ಗಂಭೀರವಾಗಿ ತೆಗೆದುಕೊಂಡ ಸಿಸಿಬಿ ಪೊಲೀಸರು ಗಾಯಕ ಚಂದನ್ ಶೆಟ್ಟಿ ಗೆ ನೋಟಿಸ್ ಜಾರಿ ಮಾಡಿದ್ದರು. ಈ ವಿಷಯ ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ಸದ್ದು ಮಾಡಿತ್ತು. ನಂತರ ಚಂದನ್ ಶೆಟ್ಟಿ ಪ್ರಭಾವಿಯೊಬ್ಬರ ಮೂಲಕ ಸಿಸಿಬಿ ಪೊಲೀಸರಿಗೆ ಕಾಲಾವಕಾಶ ನೀಡುವಂತೆ ಒತ್ತಡ ತರುವ ಪ್ರಯತ್ನ ಮಾಡಿದ್ದರು. ಆದರೆ ಪೊಲೀಸರು ಬಂಧನ ಮಾಡುವ ಎಚ್ಚರಿಕೆ ನೀಡಿದ್ದಾಗ ಗಾಯಕ ಚಂದನ್ ಶೆಟ್ಟಿ ವಿಚಾರ ಖುದ್ದು ಹಾಜರಾಗಿದ್ದಾರೆ ಎನ್ನಲಾಗಿದೆ.
ಚಂದನ್ ಶೆಟ್ಟಿ ಗೆ ವಾರ್ನಿಂಗ್ ನೀಡಿದ ಪೊಲೀಸ್ !
ಮೂರು ವರ್ಷಗಳ ಹಿಂದೆ ನಿರ್ಮಾಣವಾದ ‘ಅಂತ್ಯ’ ಸಿನಿಮಾ ದಲ್ಲಿ ಗಾಯಕ ಚಂದನ್ ಶೆಟ್ಟಿ ಗಾಂಜಾ ಕ್ಕೆ ಸಂಬಂಧಿಸಿದ ಹಾಡು ಹೇಳಿದ್ದರು. ಇದರಲ್ಲಿ ಕೆಲವು ಸಾಲುಗಳು ಗಾಂಜಾ ಸೇವನೆಗೆ ಪ್ರಚೋದನೆ ನೀಡುವಂತೆ ಇವೆ ಎಂದು ದೂರಲಾಗಿತ್ತು.
ನಂತರ ಗಾಯಕ ಚಂದನ್ ಶೆಟ್ಟಿ ಸಿಸಿಬಿ ಪೊಲೀಸರ ಎದುರು ವಿಚಾರಣೆಗೆ ಹಾಜರಾಗಿದ್ದರು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಾಡಿನಲ್ಲಿರುವ ದೃಶ್ಯಗಳ ಸಂಬಂಧ ಪ್ರಶ್ನಿಸಿದರು. ಇದ್ದ ವಿಷಯವನ್ನು ನೇರವಾಗಿ ಒಪ್ಪಿಕೊಂಡು ಮುಂದೆ ಹಾಗೆ ಮಾಡುವುದಿಲ್ಲ ಎಂದು ತಪ್ಪೊಪ್ಪಿಕೊಂಡೆ. ಇದು ಮೊದಲ ಸಲವಾದ್ದರಿಂದ ವಾರ್ನಿಂಗ್ ನೀಡಿ ಕಳುಹಿಸಿದ್ದಾರೆ ಎಂದು ತಿಳಿಸಿದ್ದಾರೆ.

ಸಿನಿ ಸುದ್ದಿ
ಇಂದು ಕನ್ನಡ ಬಿಗ್ ಬಾಸ್ ಸೀಸನ್ 8 ಗ್ರ್ಯಾಂಡ್ ಓಪನಿಂಗ್ | ಒಂಟಿ ಮನೆಯಲ್ಲಿ ಯಾರೆಲ್ಲಾ ಇರಲಿದ್ದಾರೆ ಗೊತ್ತಾ..?

ಸುದ್ದಿದಿನ,ಬೆಂಗಳೂರು: ಕನ್ನಡದ ಬಿಗ್ ಬಾಸ್ ಸೀಸನ್ 8 ಕ್ಕೆ ಇಂದು ಗ್ರ್ಯಾಂಡ್ ಒಪನಿಂಗ್ ನಡೆಯಲಿದ್ದು, ಬಿಗ್ ಬಾಸ್ ಮನೆಗೆ ಬರುವ ಸ್ಪರ್ಧಿಗಳು ಫೈನಲ್ ಆಗಿದ್ದಾರೆ.
ಸ್ಯಾಂಡಲ್ವುಡ್ ನ ಸ್ಟಾರ್ ನಟ-ನಟಿಯರು ಹಾಗೂ ಇತರೆ ಕ್ಷೇತ್ರಗಳಲ್ಲಿ ಗುರುತಿಸಿಕೊಂಡ ಹಲವರ ಹೆಸರು ಕೇಳಿಬರುತ್ತಿತ್ತು. ಆದರೆ ಇಂದು ಕೇಳಿ ಬಂದಿರುವ ಹೆಸರುಗಳು ಬಿಗ್ ಬಾಸ್ ಮನೆಯಲ್ಲಿ ಆಟ ಆಡಲು ಬರುತ್ತಿದ್ದು ಬಹುತೇಕ ಖಚಿತ ಎನ್ನಲಾಗುತ್ತಿದೆ.
ಬಿಗ್ ಬಾಸ್ ಸ್ಪರ್ಧಿಗಳು
ನಟಿ ನಿಧಿ ಸುಬ್ಬಯ್ಯ, ಹಿರಿಯ ನಟ ಶಂಕರ್ ಅಶ್ವಥ್, ಅಗ್ನಿಸಾಕ್ಷಿ ಧಾರಾವಾಹಿ ಖ್ಯಾತಿಯ ವೈಷ್ಣವಿ, ಬ್ರಹ್ಮಗಂಟು ಧಾರವಾಹಿಯ ನಟಿ ಗೀತಾ ಭಾರತಿ ಭಟ್, ಹಾಸ್ಯ ಕಲಾವಿದ ಮಂಜುಪಾವಗಡ, ಪಟ್ಟಗೌರಿ ಖ್ಯಾತಿಯ ಚಂದ್ರಕಲಾ ಮೋಹನ್, ಹಾಡು ಕರ್ನಾಟಕ ಫೇಮ್ ವಿಶ್ವನಾಥ್ ಹಾವೇರಿ, ನಾಯಕ ಸುನಿಲ್ ರಾವ್ ಮತ್ತು ಓರ್ವ ಬೈಕ್ ರೈಡರ್ ಸೇರಿದಂತೆ ಹಲವು ಕಿರುತೆರೆಯ ನಟನಟಿಯರು ಹಾಗೂ ಸ್ಯಾಂಡಲ್ವುಡ್ ಸೆಲೆಬ್ರಿಟಿಗಳು ದೊಡ್ಡ ಬಿಗ್ ಬಾಸ್ ಮನೆಯಲ್ಲಿ ಲಾಕ್ ಆಗಲಿದ್ದಾರೆ.
ಇಂದು ಸಂಜೆ 6ಕ್ಕೆ
ಬಿಗ್ ಬಾಸ್ ಸೀಸನ್ 8 | ಪ್ರತಿ ರಾತ್ರಿ 9.30#BBK8 #ColorsKannada #ಬಣ್ಣಹೊಸದಾಗಿದೆ #ಬಂಧಬಿಗಿಯಾಗಿದೆ pic.twitter.com/3B8kujM5HO
— Colors Kannada (@ColorsKannada) February 28, 2021
ಹಾಡುವ ಕೋಗಿಲೆಗಳು, ನಟಿಸುವ ಗೊಂಬೆಗಳು, ನಕ್ಕುನಗಿಸುವ ಹಾಸ್ಯ ಕಲಾವಿದರು, ಹಿರಿಯ ಕಲಾವಿದರು ಹೀಗೆ ಹಲವರು ಬಿಗ್ ಬಾಸ್ ಮನೆಗೆ ಎಂಟ್ರಿಕೊಟಲಿದ್ದಾರೆ ಎನ್ನುವ ಸುದ್ದಿ ವೈರಲ್ ಆಗಿದೆ
100 ದಿನಗಳ ಆಟ ಇಂದಿನಿಂದ ಪ್ರಾರಂಭಾವಾಗಲಿದೆ.ಸಂಜೆ 6 ಗಂಟೆಯಿಂದ ರಾತ್ರಿ 11 ಗಂಟೆಯವರೆಗೆ ಬಿಗ್ಬಾಸ್ ಕಾರ್ಯಕ್ರಮದ ಗ್ರ್ಯಾಂಡ್ ಒಪನಿಂಗ್ ನಡೆಯಲಿದ್ದು, ಕಂಟೆಸ್ಟೆಂಟ್ಗಳು ವೇದಿಕೆಗೆ ಏರುವುದರ ಜೊತೆಗೆ ಸಾಕಷ್ಟು ಮನರಂಜನಾ ಕಾರ್ಯಕ್ರಮಗಳು ಇರುತ್ತವೆ.
#BigBoss Season 8,, from Tmrw. pic.twitter.com/TVW7KSFONR
— Kichcha Sudeepa (@KicchaSudeep) February 26, 2021
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಸಿನಿ ಸುದ್ದಿ
ಪೊಗರು ವಿವಾದ ಅಂತ್ಯ | ಸೀನ್ ಕಟ್ ; ಶುಭಹಾರೈಸಿದ ಬ್ರಾಹ್ಮಣ ಸಮುದಾಯ

ಸುದ್ದಿದಿನ, ಬೆಂಗಳೂರು : ಕೊನೆಗೂ ‘ಪೊಗರು’ ಸಿನಿಮಾದ ಕಾಂಟ್ರವರ್ಸಿ ಸುಖಾಂತ್ಯ ಕಂಡಿದ್ದು, ಸಿನಿಮಾ ನೋಡಿ ಬ್ರಾಹ್ಮಣ ಸಭಾದ ಸದಸ್ಯರು ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ.
ನಂದ ಕಿಶೋರ್ ನಿರ್ದೇಶಸಿ, ಧ್ರುವ ಸರ್ಜಾ ನಟಿಸಿರುವ ‘ಪೊಗರು’ ಸಿನಿಮಾ ಕಳೆದ ಶುಕ್ರವಾರ ತೆರೆ ಕಂಡಿತ್ತು. ಬ್ರಾಹ್ಮಣರನ್ನು ಅವಹೇಳನ ಮಾಡುವ ಸಂಭಾಷಣೆ ಮತ್ತು ದೃಶ್ಯಗಳನ್ನ ಸಿನಿಮಾದಲ್ಲಿ ಕೆಟ್ಟದಾಗಿ ತೋರಿಸಲಾಗಿದೆ ಎಂದು ಕ ಬ್ರಾಹ್ಮಣ ಸಮುದಾಯು ‘ಪೊಗರು’ ಸಿನಿಮಾ ತಂಡದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.
ಮಂಗಳವಾರ ಬ್ರಾಹ್ಮಣ ಸಭಾದ ಸದಸ್ಯರು ಫಿಲ್ಮ್ ಚೇಂಬರ್ ಗೆ ಹೋಗಿ ‘ಪೊಗರು’ ಸಿನಿಮಾದಲ್ಲಿ ಬ್ರಾಹ್ಮಣರಿಗೆ ಅವಮಾನ ಮಾಡಿರುವ ದೃಶ್ಯಗಳನ್ನ ತೆಗೆಯುವಂತೆ ಆಗ್ರಹಿಸಿದ್ದರು. ಸಿನಿಮಾದ ನಿರ್ಮಾಪಕ ಬಿ.ಕೆ ಗಂಗಾಧರ್ ಹಾಗೂ ನಿರ್ದೇಶಕ ನಂದ ಕಿಶೋರ್ ಅವರು ಬ್ರಾಹ್ಮಣ ಸಮುದಾಯದ ಜೊತೆ ಚರ್ಚಿಸಿ ಅವಹೇಳನದಂತೆ ಕಾಣುವ ದೃಶ್ಯಗಳನ್ನು ಎಡಿಟ್ ಮಾಡುವಂತೆ ತಿಳಿಸಿದ್ದರು.
ಬುಧವಾರ ಬ್ರಾಹ್ಮಣ ಸಮುದಾಯದ ಸದಸ್ಯರು ಎಡಿಟ್ ಮಾಡಿದ ‘ಪೊಗರು’ ಸಿನಿಮಾ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬ್ರಾಹ್ಮಣ ಸಮುದಾಯದ ಸದಸ್ಯರು ಹೇಳಿದ ದೃಶ್ಯಗಳಿಗೆ ‘ಪೊಗರು’ ಚಿತ್ರತಂಡ ಕತ್ತರಿ ಹಾಕಿದ್ದು, ಬ್ರಾಹ್ಮಣ ಸಮುದಾಯದ ಸದಸ್ಯರು ‘ಪೊಗರು’ ತಂಡಕ್ಕೆ ಶುಭ ಹಾರೈಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಸಿನಿ ಸುದ್ದಿ
ವಿಡಿಯೋ | ನೇತ್ರಾಣಿ ದ್ವೀಪದಲ್ಲಿ ಅಪ್ಪು ‘ಬ್ಯಾಕ್ಫ್ಲಿಪ್’; ಅಭಿಮಾನಿಗಳು ಫಿದಾ..! ನೀವೂ ಒಮ್ಮೆ ನೋಡಿ ಬಿಡಿ

ಸುದ್ದಿದಿನ ಡೆಸ್ಕ್ : ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ತಮ್ಮ ಫಿಟ್ನೆಸ್ ಗಾಗಿ ಮಾಡದ ವರ್ಕೌಟ್ ಇಲ್ಲ. ಜಿಮ್, ಯೋಗ, ಸೈಕ್ಲಿಂಗ್, ಡಾನ್ಸ್ ಹೀಗೆ ಹಲವು ದೈಹಿಕ ಚಟುವಟಿಕೆಗಳನ್ನು ಉತ್ಸಾಹದಿಂದ ಮಾಡುತ್ತಾರೆ.
ಪುನೀತ್ ಬ್ಯಾಕ್ ಫ್ಲಿಪ್ ಮಾಡುವುದರಲ್ಲೂ ಸಿದ್ದಹಸ್ತರು. ಮುರುಡೇಶ್ವರದ ಹತ್ತಿರ ವಿರುವ ನೇತ್ರಾಣಿ ದ್ವೀಪದಲ್ಲಿ ಬ್ಯಾಕ್ ಫ್ಲಿಪ್ ಮಾಡಿದ್ದು, ಅದ ವಿಡಿಯೋವನ್ನು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ವಿಡಿಯೋ ಲಿಂಕ್
https://www.facebook.com/watch/?v=1547766108948138
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಲೈಫ್ ಸ್ಟೈಲ್6 days ago
ವೀರ್ಯಾಣು ಬಲವೃದ್ಧಿಗೆ ಇಲ್ಲಿವೆ ಉಪಾಯಗಳು..!
-
ಅಂತರಂಗ6 days ago
ಅನಾಥರನ್ನಾಗಿಸದ ಅಂತಿಮ ಸಂಗಾತಿ
-
ದಿನದ ಸುದ್ದಿ6 days ago
ಸಿದ್ದರಾಮಯ್ಯ ರಾಮನ ವಿರೋಧಿ ಅಂತಾರೆ, ನನ್ನ ಹೆಸರಿನಲ್ಲೇ ರಾಮನಿದ್ದಾನೆ : ಸಿದ್ದರಾಮಯ್ಯ
-
ರಾಜಕೀಯ6 days ago
ಜನರನ್ನು ಕಷ್ಟಕ್ಕೆ ದೂಡಿ ಮೋದಿ ಸರ್ಕಾರ ಲಾಭಗಳಿಸುತ್ತಿದೆ : ಸೋನಿಯಾ ಗಾಂಧಿ ಕಿಡಿ
-
ಲೈಫ್ ಸ್ಟೈಲ್6 days ago
ಜಾನುವಾರುಗಳ ಲೋಹ ಕಾಯಿಲೆ
-
ದಿನದ ಸುದ್ದಿ5 days ago
ಗೋಮಾಂಸವನ್ನು ವಿದೇಶಕ್ಕೆ ರಫ್ತು ಮಾಡಬಹುದು ; ವಿದೇಶದಿಂದ ಬರುವ ಗೋಮಾಂಸವನ್ನು ತಿನ್ನಬಹುದು, ಬಿಜೆಪಿಯ ಈ ಎಡಬಿಡಂಗಿ ನಿಲುವಿನ ಹಿಂದಿನ ಮರ್ಮ ಏನು..? ಮಾಜಿ ಸಿಎಂ ಸಿದ್ದರಾಮಯ್ಯ
-
ರಾಜಕೀಯ7 days ago
ಮೋದಿಯವರ ನಿಜ ಬಣ್ಣ ಕಾಂಗ್ರೆಸ್ ಪಕ್ಷ ಬಯಲಿಗೆಳೆಯಲಿದೆ : ಸಿದ್ದರಾಮಯ್ಯ
-
ಲೈಫ್ ಸ್ಟೈಲ್5 days ago
ಏನಿದು ? ಗಡಿಮಾರಿ..!