ರಾಜಕೀಯ
ಯಡಿಯೂರಪ್ಪ ಮೇಲೆ RSS ಉಪಾಸ್ತ್ರ ಪ್ರಯೋಗ

ಸುದ್ದಿದಿನ, ಬೆಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ವಿಧಾನಸಭೆ ವಿಪಕ್ಷ ನಾಯಕ ಯಡಿಯೂರಪ್ಪ ಮೇಲೆ ಆರ್ ಎಸ್ ಎಸ್ ಉಪಾಸ್ತ್ರ ಪ್ರಯೋಗ ಮಾಡಿದೆ.
ವಿಧಾನಸಭೆ ಸಾರ್ವತ್ರಿಕ ಚುನಾವಣೆ ಬಳಿಕ ನಡೆದ ಎರಡೂ ಉಪಚುನಾವಣೆಯಲ್ಲಿ ಬಿಜೆಪಿಯ ಸೋಲಿನ ಹೊಣೆಯನ್ನ ಯಡಿಯೂರಪ್ಪ ಅವರಿಗೆ ಆರ್ ಎಸ್ ಎಸ್ ನ ಪ್ರಮುಖರು ಹೊರೆಸಿದ್ದಾರೆ.ಕಳೆದ ಮೂರು ದಿನಗಳ ಹಿಂದೆ ಆರ್ ಎಸ್ ಎಸ್ ಕಚೇರಿ ಕೇಶವಕೃಪಾದಲ್ಲಿ ನಡೆದಿದ್ದ ಸುದೀರ್ಘ ಸಭೆಯಲ್ಲಿ, ಬಿಜೆಪಿ ಆಂತರಿಕ ಸಂವಿಧಾನದಂತೆ ಒಂದೆ ಹುದ್ದೆ ನಿಭಾಯಿಸಲು ಬಿ ಎಸ್ ವೈಗೆ ಆರ್ ಎಸ್ ಎಸ್ ಪ್ರಮುಖರು ಸಲಹೆ ನೀಡಿದ್ದಾರೆ.
ಆದರೆ ಲೋಕಸಭಾ ಚುನಾವಣೆ ನೆಪ ಹೇಳಿದ ಯಡಿಯೂರಪ್ಪ ಅವರಿಗೆ, ಲೋಕಸಭಾ ಚುನಾವಣೆಯಲ್ಲಿ ಒಕ್ಕಲಿಗ ಸಮುದಾಯದ ಬೆಂಬಲ ಅಗತ್ಯ, ಒಕ್ಕಲಿಗ ಸಮುದಾಯಕ್ಕೆ ಪ್ರಬಲ ಹುದ್ದೆ ಕೊಡುವಂತೆ ಸಲಹೆ ಕೊಟ್ಟಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401
ರಾಜಕೀಯ
ದೇವರಮನೆ ಶಿವಕುಮಾರ್ ಬಿಜೆಪಿ ಸೇರ್ಪಡೆ | ನಾವು ಯಾರಿಗೂ ಆಮಿಷ ಒಡ್ಡಿಲ್ಲ : ಸಂಸದ ಜಿಎಂ ಸಿದ್ದೇಶ್ವರ್

ಸುದ್ದಿದಿನ, ದಾವಣಗೆರೆ : ದಾವಣಗೆರೆ ಮಹಾನಗರ ಪಾಲಿಕೆ ಗದ್ದುಕೆ ಹಿಡಿದಿದ್ದಕ್ಕೆ ಸಂಸದ ಜಿಎಂ ಸಿದ್ದೇಶ್ವರ ಹರ್ಷ ವ್ಯಕ್ತಪಡಿಸಿದ್ದು, ವರಿಷ್ಠರ ನಿರ್ಧಾರದಂತೆ ಎಸ್ ಟಿ ವೀರೇಶ್ ಅವರನ್ನ ಮೇಯರ್ ಆಗಿ ಆಯ್ಕೆ ಮಾಡಲಾಗಿದೆ ಎಂದರು.
ಇದನ್ನೂ ಓದಿ | ಶಾಸಕ ಶಾಮನೂರು ಶಿವಶಂಕರಪ್ಪ ಸೇರಿದಂತೆ ಮೂವರು ಎಂ ಎಲ್ ಸಿ ಗಳು ಗೈರು : ಬಿಜೆಪಿಗೆ ಸುಲಭ ಗೆಲುವು
ಬುಧವಾರ ಮಹಾನಗರ ಪಾಲಿಕೆ ಮೇಯರ್ – ಉಪಮೇಯರ್ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇವರಮನೆ ಶಿವಕುಮಾರ್ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದು ಅವರ ವೈಯಕ್ತಿ ವಿಚಾರವಾಗಿದೆ. ನಾವು ಯಾರಿಗೂ ಯಾವ ಆಮಿಷ ಒಡ್ಡಿಲ್ಲ. ಸ್ವತ: ಅವರೆ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರ್ತಿನಿ ಅಂತ ಬಂದಿದ್ದರು, ಹಾಗಾಗಿ ಅವರನ್ನ ಬಿಜೆಪಿಗೆ ಸೇರಿಸಿಕೊಂಡಿದ್ದೇವೆ. ಇನ್ನು ಯಾರಾದರೂ ಬಿಜೆಪಿ ಸೇರ್ತಾರ ಎಂಬ ವರದಿಗಾರರ ಪ್ರಶ್ನೆಗೆ ಸಿದ್ದೇಶ್ವರ್ ಅವರು ‘ವೇಟ್ ಆ್ಯಂಡ್ ಸೀ ಎಂದು ಅಚ್ಚರಿ ಮೂಡಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ರಾಜಕೀಯ
ದಾವಣಗೆರೆ ಮಹಾನಗರ ಪಾಲಿಕೆ ಬಿಜೆಪಿ ತೆಕ್ಕೆಗೆ : ಮೇಯರ್ ಆಗಿ ಎಸ್.ಟಿ.ವೀರೇಶ್, ಉಪಮೇಯರ್ ಆಗಿ ಶಿಲ್ಪಾ ಜಯಪ್ರಕಾಶ್

ಸುದ್ದಿದಿನ,ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆ ಮೇಯರ್ – ಉಪಮೇಯರ್ ಚುನಾವಣೆಯತಲ್ಲಿ ಬಿಜೆಪಿಯು ಭರ್ಜರಿ ಗೆಲುವು ಪಡೆಯಿತು. ಮೇಯರ್ ಆಗಿ ಬಿಜೆಪಿಯ ಎಸ್.ಟಿ. ವೀರೇಶ್ ಹಾಗೂ ಉಪ ಮೇಯರ್ ಆಗಿ ಶಿಲ್ಪಾ ಜಯಪ್ರಕಾಶ್ ಆಯ್ಕೆಯಾದರು.
29 ಮತಗಳನ್ನು ಪಡೆಯುವ ಮೂಲಕ ಬಿಜೆಪಿಯು ದಾವಣಗೆರೆ ಪಾಲಿಕೆ ಅಧಿಕಾರ ಹಿಡಿದಿದ್ದು, ಕಾಂಗ್ರೆಸ್ 22 ಮತಗಳನ್ನು ಮಾತ್ರ ಪಡೆಯುವಲ್ಲಿ ಯಶಸ್ವಿಯಾಯಿತು.
ಇದನ್ನೂ ಓದಿ | ಶಾಸಕ ಶಾಮನೂರು ಶಿವಶಂಕರಪ್ಪ ಸೇರಿದಂತೆ ಮೂವರು ಎಂ ಎಲ್ ಸಿ ಗಳು ಗೈರು : ಬಿಜೆಪಿಗೆ ಸುಲಭ ಗೆಲುವು
ಸುದ್ದಿದಿನ.ಕಾಂ|ವಾಟ್ಸಾಪ್|9980346243
ರಾಜಕೀಯ
ಶಾಸಕ ಶಾಮನೂರು ಶಿವಶಂಕರಪ್ಪ ಸೇರಿದಂತೆ ಮೂವರು ಎಂ ಎಲ್ ಸಿ ಗಳು ಗೈರು : ಬಿಜೆಪಿಗೆ ಸುಲಭ ಗೆಲುವು

ಸುದ್ದಿದಿನ, ದಾವಣಗೆರೆ : ಕಾಂಗ್ರೆಸ್ ನ ಹಿರಿಯ ಮುಖಂಡ ಶಾಸಕ ಶಾಮನೂರು ಶಿವಶಂಕರಪ್ಪ ಗೈರು ಹಾಜರಿಯಲ್ಲಿ ದಾವಣಗೆರೆ ಮಹಾನಗರ ಪಾಲಿಕರ ಮೇಯರ್ ಉಪಮೇಯರ್ ಚುನಾವಣೆಯಲ್ಲಿ ಮತದಾನ ನಡೆಯಿತು.
ದಾವಣಗೆರೆ ಮಹಾನಗರ ಪಾಲಿಕೆ ಮೇಯರ್ ಸ್ಥಾನಕ್ಕೆ ಬಿಜೆಪಿಯಿಂದ ಎಸ್. ಟಿ. ವೀರೇಶ್, ಕಾಂಗ್ರೆಸ್ ನಿಂದ ಗಡಿಗುಡಾಳ್ ಮಂಜುನಾಥ್ ಅವರು ನಾಮಪತ್ರ ಸಲ್ಲಿಸಿದ್ದರು. ಬಿಜೆಪಿಯಿಂದ ಉಪಮೇಯರ್ ಸ್ಥಾನಕ್ಕೆ ಬಿಜೆಪಿಯಿಂದ ಶಿಲ್ಪ ಜಯಪ್ರಕಾಶ್ ನಾಮಪತ್ರ ಸಲ್ಲಿಸಿದ್ದರು.
ಬಿಜೆಪಿಯಿಂದ ಸಂಸದ ಜಿ ಎಂ ಸಿದ್ದೇಶ್ವರ್ , ಸಚಿವ ಆರ್ ಶಂಕರ್, ಚಿದಾನಂದಗೌಡ ಸೇರಿದಂತೆ ಬಿಜೆಪಿ ಪಕ್ಷದ 29 ಸದಸ್ಯರು ಇದ್ದರು. ಕಾಂಗ್ರೆಸ್ ನ ಶಾಸಕ ಶಾಮನೂರು ಶಿವಶಂಕರಪ್ಪ ಹಾಗೂ ಮೂವರು ಎಂ ಎಲ್ ಸಿ ಗಳಾದ ಕೆಸಿ ಕೊಂಡಯ್ಯ, ರಘು ಆಚಾರ್ , ಯುಬಿ ವೆಂಕಟೇಶ್ ಗೈರಾಗಿದ್ದರು. ವಿಧಾನ ಪರಿಷತ್ ಸದಸ್ಯ ಮೋಹನ್ ಕೊಂಡಜ್ಜಿ ಸೇರಿದಂತೆ ಮಹಾನಗರ ಪಾಲಿಕೆ 22 ಸದಸ್ಯರು ಹಾಜರಿದ್ದರು.
ಶಾಸಕ ಶಾಮನೂರು ಶಿವಶಂಕರಪ್ಪ ಆಪ್ತರಾಗಿದ್ದ ಶಿವಕುಮಾರ್ ದೇವರಮನಿ ಮಂಗಳವಾರ (ಫೆ.23) ಕಾಂಗ್ರೆಸ್ ಗೆ ರಾಜೀನಾಮೆ ಸಲ್ಲಿಸಿ ಬಿಜೆಪಿಗೆ ಸೇರ್ಪಡೆಯಾಗಿದ್ದರು.
ಈ ಎಲ್ಲಾ ಬೆಳವಣಿಗೆಯ ಹಿನ್ನೆಲೆಯಲ್ಲಿ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲುವುದು ಖಚಿತವಾಗಿತ್ತು. ಇದರ ನಡುವೆ ಬೆಳಗ್ಗೆ ಕಾಂಗ್ರೆಸ್ ಹಿರಿಯ ಮುಖಂಡರ ಅನುಪಸ್ಥಿತಿಯಲ್ಲಿ ಚುನಾವಣೆ ನೆಡೆದಿದ್ದರಿಂದ ಬಿಜೆಪಿಗೆ ಗೆಲುವು ಸುಲಭವಾಯಿತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ಅಂತರಂಗ5 days ago
‘ಪ್ರೀತಿಯಲ್ಲಿ ಗೆದ್ದವ ಚುನಾವಣೆಯಲ್ಲಿ ಗೆದ್ದು ಗದ್ದುಗೆಯೇರಿದ’..!
-
ಭಾವ ಭೈರಾಗಿ6 days ago
ಕರುಣಾಳು ಅವನು, ಅವನು ನನ್ನವನು..!
-
ದಿನದ ಸುದ್ದಿ5 days ago
ದಿಶಾ ಕೇಸ್ | ನನ್ನ ಆತ್ಮಸಾಕ್ಷಿಯನ್ನು ದಾಖಲೆ ಸಹಿತ ಒಪ್ಪಿಸಿ..! ಮೂರು ಪ್ರಶ್ನೆಗಳಿಗೆ ಉತ್ತರ ಕೊಡಿ ಎಂದ ನ್ಯಾಯಾಧೀಶರು..!
-
ದಿನದ ಸುದ್ದಿ5 days ago
ಬಡವರನ್ನು ಸಬಲೀಕರಣಗೊಳಿಸಲು ಉಚಿತ ಅನಿಲ ಸಂಪರ್ಕ ನೀಡಿದ್ದೇವೆ : ಪ್ರಧಾನಿ ಮೋದಿ
-
ಲೈಫ್ ಸ್ಟೈಲ್5 days ago
ಮೂತ್ರದಲ್ಲಿನ ಸಕ್ಕರೆ ಅಂಶ ನಿಯಂತ್ರಣದಲ್ಲಿಡುತ್ತೆ ಈ ಸೀಮೆ ಬದನೆಕಾಯಿ..!
-
ಕ್ರೀಡೆ5 days ago
ಭಾರತ ಟಿ20ಐ ಪಂದ್ಯಾವಳಿಗೆ ತಂಡ ಪ್ರಕಟಿಸಿದ ಬಿಸಿಸಿಐ
-
ಲೈಫ್ ಸ್ಟೈಲ್5 days ago
ರೆಸಿಪಿ | ಮನೇಲೇ ಮಾಡಿ ಜಿಲೇಬಿ
-
ಭಾವ ಭೈರಾಗಿ5 days ago
ಕವಿತೆ | ಅವಳು