ರಾಜಕೀಯ
ಸಾಮಾಜಿಕ ಜಾಲತಾಣ ಅಭಿಯಾನ | ‘ನನ್ನ ಸಿಎಂ ಸತೀಶ ಜಾರಕಿಹೊಳಿ’

ಸುದ್ದಿದಿನ, ದಾವಣಗೆರೆ : ಮಾಜಿ ಸಿಎಂ ಸಿದ್ದರಾಮಯ್ಯ ಪರ ಅವರ ಬೆಂಬಲಿಗರು ಕಾಂಗ್ರೆಸ್ ಶಾಸಕರು ಸಚಿವರು ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂಬ ಹೇಳಿಕೆಗಳ ಬೆನ್ನಲ್ಲೇ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಕೆಲವರು ನಮ್ಮ ಸಿಎಂ ಸಿದ್ದರಾಮಯ್ಯ ಎಂದು ಬರೆದು ಹರಿಬಿಡುತ್ತಿದ್ದಾರೆ.
ಅದೇರೀತಿ ಈಗ ರಾಜ್ಯದ ಮತ್ತೋರ್ವ ಪ್ರಭಾವಿ ಸಚಿವ ಹಾಗೂ ಅಹಿಂದ ನಾಯಕರಾದ ಸತೀಶ್ಜಾರಕಿಹೊಳಿ ಅಭಿಮಾನಿಗಳು ನಮ್ಮ ಸಿಎಂ ಸತೀಶ್ಜಾರಕಿಹೊಳಿ ಎಂದು ಫೇಸ್ಬುಕ್ ಪುಟಗಳಲ್ಲಿ ಬರೆದುಕೊಂಡು ಹರಿಬಿಟ್ಟು, ಜಾರಕಿಹೊಳಿ ಅಭಿಮಾನಿಗಳು ಸಹ ಮುಖ್ಯಮಂತ್ರಿ ಅಭ್ಯರ್ಥಿಗಳಿದ್ದೇವೆ ಎಂಬ ಸಂದೇಹ ರವಾನಿಸಿದ್ದಾರೆ.
ಪ್ರಸ್ತುತ ಜೆಡಿಎಸ್ ಕಾಂಗ್ರೆಸ್ ದೋಸ್ತಿ ಸರ್ಕಾರದಲ್ಲಿ ಪ್ರಬಲ ನಾಯಕರಾಗಿರುವ ಮಾಜಿ ಸಿಎಂ ಸಿದ್ದರಾಮಯ್ಯ ಪರ ಅವರ ಬೆಂಬಲಿಗರು ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಬಹಿರಂಗವಾಗಿ ಸಾರುತ್ತಿದ್ದು, ಪರೋಕ್ಷವಾಗಿ ಹೆಚ್.ಡಿ. ಕುಮಾರಸ್ವಾಮಿ ವಿರುದ್ದ ಸಮರ ಸಾರುತ್ತಿದ್ದಾರೆ.
https://m.facebook.com/story.php?story_fbid=424351171636910&id=100021860916158
ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಹೊಗಳಿದರೆ ತಪ್ಪೇನು? ಎಂಬ ವಾದವನ್ನು ಕಾಂಗ್ರೆಸ್ ನಾಯಕರು ಮಾಡುತ್ತಿದ್ದಾರೆ. ಇದು ದಕ್ಷಿಣ ಕರ್ನಾಟಕದ ರಾಜಕೀಯ ನಾಯಕರ ಕಿತ್ತಾಟವಾದರೆ, ಉತ್ತರ ಕರ್ನಾಟಕದ ಜನತೆಯ ಸಂದೇಶವೇ ಭಿನ್ನವಾಗಿದೆ.
ಮಾಜಿ ಸಿಎಂ ಸಿದ್ದರಾಮಯ್ಯ ಅವರ ಆಪ್ತ ರಕ್ಷಕ ಎಂದೇ ಕರೆಸಿಕೊಳ್ಳುವ ಬೆಳಗಾವಿ ಸಾಹುಕಾರ್, ಸದ್ಯ ದೋಸ್ತಿ ಸರ್ಕಾರದ ಅರಣ್ಯ ಸಚಿವ ಸತೀಶ್ಜಾರಕಿಹೊಳಿ ಬೆಂಬಲಿಗರು ಸತೀಶ್ ಜಾರಕಿಹೊಳಿ ನನ್ನ ಸಿಎಂ ಎಂದು ಫೆಸ್ಬುಕ್ನಲ್ಲಿ ಬರೆದುಕೊಳ್ಳುತ್ತಿದ್ದಾರೆ.
https://m.facebook.com/story.php?story_fbid=105148150612593&id=100033522243207
ಈ ಮೂಲಕ ಉತ್ತರ ಕರ್ನಾಟಕದವರು ಮುಖ್ಯಮಂತ್ರಿ ಅಭ್ಯರ್ಥಿಗಳಿದ್ದಾರೆ ಎಂಬ ಖಡಕ್ ಸಂದೇಶವನ್ನು ಸಾಮಾಜಿಕ ಜಾಲತಾಣಗಳಲ್ಲಿ ರವಾನಿಸಿದ್ದಾರೆ.
ಸಚಿವ ಸತೀಶ್ಜಾರಕಿಹೊಳಿ ಮುಖ್ಯಮಂತ್ರಿ ಅಭ್ಯರ್ಥಿ ಎಂಬ ವಿಷಯದ ಮೇಲೆ ಕೆಲ ದಿನಗಳ ಹಿಂದೆ ಚರ್ಚೆ ನಡೆದಾಗ ನಾನಿನ್ನು 10 ವರ್ಷಗಳ ನಂತರ ಮುಖ್ಯಮಂತ್ರಿ ಅಭ್ಯರ್ಥಿ ಆಕಾಂಕ್ಷಿ ಎಂದು ಸ್ವತಃ ಸಚಿವರೇ ಸ್ಪಷ್ಟಪಡಿಸಿದ್ದರು.
ಇತ್ತೀಚಿಗಷ್ಟೇ ಮಾಜಿ ಸಿಎಂ ಸಿದ್ದರಾಮಯ್ಯ ಕೂಡಾ ಸಮಾರಂಭವೊಂದರಲ್ಲಿ ಅಧಿಕಾರ ಎಲ್ಲರಿಗೂ ಸಿಗಬೇಕು, ಸತೀಶ್ ಕೂಡಾ ಸಿಎಂ ಆಗಬೇಕು ಎಂದು ಹೇಳಿದ್ದರು. ಈ ಹಿಂದೆ ನನ್ನ ಸಹೋದರ ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿ ಆಗುವವರೆಗೂ ವಿರಮಿಸುವುದಿಲ್ಲ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿಕೆ ನೀಡುವ ಮೂಲಕ ಸುದ್ದಿಯಾಗಿದ್ದರು.
https://m.facebook.com/story.php?story_fbid=1912640958861486&id=100003468012703
ಅಧಿಕಾರಕ್ಕೆ ಬಂದ ಎಲ್ಲ ಸರ್ಕಾರಗಳು ಉತ್ತರ ಕರ್ನಾಟಕಕ್ಕೆ ಮಲತಾಯಿ ಧೋರಣೆ ಅನುಸರಿಸುತ್ತಿವೆ ಎಂಬ ಆರೋಪವಿದೆ. ಆದ್ದರಿಂದ ಪ್ರತ್ಯೇಕ ರಾಜ್ಯದ ಕೂಗು ಕೂಡಾ ಕೇಳಿ ಬರುತ್ತಿದೆ. ದಕ್ಷಿಣ ಕರ್ನಾಟಕದ ರಾಜಕೀಯ ನಾಯಕರ ಕಿತ್ತಾಟಕ್ಕೆ ಉತ್ತರ ಕರ್ನಾಟಕದವರು ನನ್ನ ಸಿಎಂ ಸತೀಶ್ ಜಾರಕಿಹೊಳಿ ಎಂದು ಹೇಳುವ ಮೂಲಕ ನಮಗೂ ಒಂದು ಅವಕಾಶ ನೀಡಬೇಕೆಂಬ ಸಂದೇಶ ರವಾನಿಸಿದ್ದಾರೆ.
ನಾನು ಮುಖ್ಯಮಂತ್ರಿ ಆಗೋದಿಕ್ಕೆ ನಮ್ಮ ಪಕ್ಷ ಬೆಂಬಲವಿದೆ#ನಮ್ಮ ಸಿ.ಎಂ ಸತೀಶ್ ಜಾರಕಿಹೊಳಿನಮ್ಮ ಸಿ, ಎಂ "ಸತೀಶ್ ಜಾರಕಿಹೊಳಿ"…
Posted by ಕರ್ನಾಟಕ ಸತೀಶ್ ಜಾರಕಿಹೊಳಿ ಯುವ ಸೈನ್ಯ on Sunday, 3 February 2019
ಪೊಲಿಟಿಕಲ್ ಕಿಂಗ್ ಮೇಕರ್ ಹಾಗೂ ಮಾಸ್ಟರ್ ಮೈಂಡ್ ಎಂದೇ ತಮ್ಮ ನಡೆಯಿಂದ ಕರೆಸಿಕೊಳ್ಳುವ ಸತೀಶ್ ಜಾರಕಿಹೊಳಿ ಇಡೀ ರಾಜ್ಯದ ತುಂಬಾ ತಮ್ಮ ಬೆಂಬಲಿಗರನ್ನು ಹೊಂದಿದ್ದಾರೆ. ರಾಜ್ಯದ ಸಾಕಷ್ಟು ಮತಕ್ಷೇತ್ರಗಳಲ್ಲಿ ಇವರೇ ನಿರ್ಣಯಕ. ಎಲ್ಲಾ ಸಮುದಾಯಗಳ ಪರ ನಿಲ್ಲುವ ಅದರಲ್ಲಿಯೂ ವಾಲ್ಮೀಕಿ ನಾಯಕ ಸಮುದಾಯದ ಪ್ರಶ್ನಾತೀತ ನಾಯಕ ಎಂದರೆ ತಪ್ಪಾಗಲಾರದು. ರಾಜ್ಯದ ಪ್ರತಿ ಜಿಲ್ಲೆಯಲ್ಲೂ ಸಚಿವರ ಅಭಿಮಾನಿಗಳಿದ್ದು, ನಮ್ಮ ಸಿಎಂ ಸತೀಶ್ಜಾರಕಿಹೊಳಿ ಎಂಬ ಅಭಿಯಾನದ ಕೂಗು ಹೆಚ್ಚಾಗಿ ತೀವ್ರ ಸ್ವರೂಪ ಪಡೆದುಕೊಂಡರು ಅಚ್ಚರಿಪಡಬೇಕಿಲ್ಲ.
https://m.facebook.com/story.php?story_fbid=2249690161910902&id=100006098199391
“ಸತೀಶ್ ಜಾರಕಿಹೊಳಿ ಸ್ಥಾಪಿಸಿರುವ ಮಾನವ ಬಂಧುತ್ವ ವೇದಿಕೆಯ ಕಾರ್ಯಕರ್ತರು ರಾಜ್ಯಾದ್ಯಂತ ಇದ್ದೇವೆ. ಮಾಜಿ ಸಿಎಂ ಸಿದ್ದರಾಮಯ್ಯ ಅವರಂತೆ ಸಚಿವರು ಸಹ ಅಹಿಂದ ನಾಯಕರಿದ್ದಾರೆ. ಅಲ್ಲದೆ ಸಾಮಾಜಿಕ ನ್ಯಾಯದ ಪರಿಕಲ್ಪನೆಯಲ್ಲಿ ಎಲ್ಲಾ ವರ್ಗದವರು ಮುಖ್ಯಮಂತ್ರಿ ಸ್ಥಾನಕ್ಕೇರಿದ್ದಾರೆ. ಅದರಂತೆ ಸಚಿವ ಸತೀಶ್ ಜಾರಕಿಹೊಳಿ ಅವರಿಗೂ ಮುಖ್ಯಮಂತ್ರಿ ಪಟ್ಟಾ ಸಿಗಬೇಕಿದೆ ಎಂಬುದು ಅವರೆಲ್ಲ ಅಭಿಮಾನಿಗಳ ಬಯಕೆ. ಪ್ರತಿಬಾರಿ ಅಸಮಾಧಾನಗೊಂಡಾಗಲೆಲ್ಲ ಮೂಗಿಗೆ ತುಪ್ಪ ಸವರುವ ಕೆಲಸ ಆಗುತ್ತಿದೆ. ತಕ್ಷಣಕ್ಕೆ ಮುಖ್ಯಮಂತ್ರಿ ಬದಲಾವಣೆ ಆಗಬೇಕೆಂಬುದು ನಮ್ಮ ಅಭಿಪ್ರಾಯವಲ್ಲ. ಮುಂದಿನ ದಿನಗಳಲ್ಲಿ ಸತೀಶ್ ಜಾರಕಿಹೊಳಿ ಅವರಿಗೆ ಮೊದಲ ಆದ್ಯತೆ ನೀಡಬೇಕಿದೆ”.
|ರಾಘುದೊಡ್ಮನಿ,ಸಂಚಾಲಕರು, ಮಾನವ ಬಂಧುತ್ವ ವೇದಿಕೆ, ದಾವಣಗೆರೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ರಾಜಕೀಯ
ಮಸ್ಕಿ ಬಿಜೆಪಿ ಅಭ್ಯರ್ಥಿ ಪರ ಇಂದು ಸಿಂಗರ್ ಮಂಗ್ಲಿ ಪ್ರಚಾರ

ಸುದ್ದಿದಿನ,ರಾಯಚೂರು: ರಾಬರ್ಟ್ ಸಿನೆಮಾ ‘ಕಣ್ಣೆ ಅದಿರಿಂದಿ’ ಹಾಡಿನ ಮೂಲಕ ಭಾರೀ ಸದ್ದು ಮಾಡಿದ ಗಾಯಕಿ ಮಂಗ್ಲಿ ಮಸ್ಕಿ ಉಪ ಚುನಾವಣಾ ಅಖಾಡದಲ್ಲಿ ಮಂಗಳವಾರ ಬಿಜೆಪಿ ಪರವಾಗಿ ಪ್ರಚಾರ ಮಾಡಲಿದ್ದಾರೆ.
ಬಿಜೆಪಿಯು ಗಾಯಕಿ ಮಂಗ್ಲಿ ಅವರನ್ನ ಪ್ರಚಾರಕ್ಕೆ ಆಹ್ವಾನಿಸಿದ್ದು, ಇಂದು ಮಸ್ಕಿ ಕೆಲ ಭಾಗಗಳಲ್ಲಿ ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ ಪರವಾಗಿ ಮತಯಾಚಿಸಲಿದ್ದಾರೆ. ಆದರೆ ಚುನಾವಣಾ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲರಿಗೆ ಕೊರೊನಾ ಪಾಸಿಟಿವ್ ಇರುವುದು ದೃಢವಾಗಿದೆ.
ಇದೇ 17 ರಂದು ಬೆಳಗಾವಿ ಲೋಕಸಭೆ, ಮಸ್ಕಿ, ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಮೂರು ರಾಜಕೀಯ ಪಕ್ಷಗಳು ತಮ್ಮ ಅಭ್ಯರ್ಥಿಗಳ ಗೆಲುವಿಗೆ ಭರ್ಜರಿ ರಣತಂತ್ರವನ್ನು ಹೂಡಿದ್ದಾರೆ.
ಇದನ್ನೂ ಓದಿ | ಕವಿತೆ | ಅವಳು ಮಸಣ ಕಾಯುವ ಪಾರ್ವತಿ..! -ಪದ್ಮಶ್ರೀ ಗೋವಿಂದರಾಜು,ಭದ್ರಾವತಿ
ಮಸ್ಕಿಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಮತಯಾಚಿಸಿದ ಸಿಎಂ ಯಡಿಯೂರಪ್ಪ ಅವರು, ಕಾಂಗ್ರೆಸ್ ನೆಲಸವಾಗುವುದು ನಿಶ್ಚಿತ. 3 ಕ್ಷೇತ್ರಗಳಲ್ಲೂ ದೊಡ್ಡ ಮತಗಳ ಅಂತರದಲ್ಲಿ ನಾವೇ ಗೆಲ್ಲುತ್ತೇವೆ ಎಂಬ ಭರವಸೆಯನ್ನು ವ್ಯಕ್ತಪಡಿಸಿದರು. ಇತ್ತ ಮೂರು ಪಕ್ಷಗಳ ಮತಯಾಚನೆಯ ಕಾವು ಏರುತ್ತಲೇ ಇದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಬಿ.ಜೆ.ಪಿ ಎಂ.ಪಿಗಳ ಗುಲಾಮಿ ಮನಸ್ಥಿತಿ ಕರ್ನಾಟಕವನ್ನು ಸರ್ವನಾಶ ಮಾಡಲಿದೆ : ಸಿದ್ದರಾಮಯ್ಯ ಆಕ್ರೋಶ

ಸುದ್ದಿದಿನ, ಬೆಳಗಾವಿ: ಕೃಷಿ ವಿರೋಧಿ ಕಾಯ್ದೆಗಳ ಮೂಲಕ ರೈತರ ಬದುಕನ್ನು ಶಾಶ್ವತವಾಗಿ ಘಾಸಿಮಾಡಿರುವ ಕೇಂದ್ರದ ಬಿಜೆಪಿ ಸರ್ಕಾರ ಇದೀಗ ರಸಗೊಬ್ಬರದ ಬೆಲೆ ಏರಿಸಿ ಅವರ ಗಾಯದ ಮೇಲೆ ಬರೆ ಎಳೆದಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಬೆಳಗಾವಿ ಲೋಕಸಭೆ ಕ್ಷೇತ್ರದ ಸವದತ್ತಿಯಲ್ಲಿ ಆಯೋಜಿಸಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಅವರ ಪರ ಮತಪ್ರಚಾರ ನಡೆಸಿದ ಅವರು ಮಾತನಾಡಿದರು.
ಕೇಂದ್ರದ ರೈತ ಶತ್ರು ನರೇಂದ್ರ ಮೋದಿ ಸರ್ಕಾರ ರಸಗೊಬ್ಬರದ ಬೆಲೆಗಳನ್ನು ಶೇ. 60 ರಷ್ಟು ಹೆಚ್ಚಿಸಿದೆ. ಡಿ.ಎ.ಪಿ ಗೊಬ್ಬರ ಏಪ್ರಿಲ್ 1 ರಿಂದ ಒಂದು ಕ್ವಿಂಟಾಲಿಗೆ 1400 ಗಳಷ್ಟು ಬೆಲೆ ಜಾಸ್ತಿಯಾಗುತ್ತಿದೆ. ಇದುವರೆಗೆ 2400 ರೂಪಾಯಿಗಳಿದ್ದ ಬೆಲೆ ಈಗ 3800 ರೂ ಗಳಾಗುತ್ತಿದೆ ಎಂದರು.
ಸಾರಜನಕ, ರಂಜಕ ಮತ್ತು ಪೊಟ್ಯಾಷ್ಗಳ ಮೇಲಿನ ಬೆಲೆ ಕ್ವಿಂಟಾಲ್ ಗೆ ರೂ.1250 ಹೆಚ್ಚಿಸಿದ್ದಾರೆ. ರೂ.2350 ಗೆ ಸಿಗುತ್ತಿದ್ದ ಗೊಬ್ಬರ ಈಗ ರೂ.3600ರಷ್ಟಾಗಿದ್ದು ರೈತರು ನಿಸ್ಸಂಶಯವಾಗಿ ದಿವಾಳಿಯಾಗಲಿದ್ದಾರೆ.
ಅಂತರರಾಷ್ಟ್ರೀಯ ಮಟ್ಟದಲ್ಲಿ ಬೆಲೆ ಜಾಸ್ತಿಯಾಗಿದೆ, ಅದಕ್ಕೆ ಬೆಲೆ ಜಾಸ್ತಿ ಮಾಡಿದ್ದೇವೆ ಎಂಬ ಕೇಂದ್ರ ಸರ್ಕಾರದ ಸಬೂಬು ಶುದ್ಧ ಸುಳ್ಳು. ಕಳೆದ ವರ್ಷ ರೂ.1,33,947 ಕೋಟಿ ರಸಗೊಬ್ಬರಕ್ಕಾಗಿ ಸಬ್ಸಿಡಿ ನೀಡಲಾಗಿತ್ತು. ಈಗ ಅದು ರೂ.79,530 ಕೋಟಿಗೆ ಇಳಿಸಿದ್ದಾರೆ. ಆದ್ದರಿಂದಲೇ ಏಪ್ರಿಲ್ 1 ರಿಂದ ಬೆಲೆ ಹೆಚ್ಚಾಗಿದೆ.
ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿಯನ್ನು ಪ್ರಶ್ನಿಸದ ರಾಜ್ಯ ಸರ್ಕಾರ ಮತ್ತು ರಾಜ್ಯವನ್ನು ಪ್ರತಿನಿಧಿಸುವ ಬಿ.ಜೆ.ಪಿ ಎಂ.ಪಿಗಳ ಗುಲಾಮಿ ಮನಸ್ಥಿತಿ ಕರ್ನಾಟಕವನ್ನು ಸರ್ವನಾಶ ಮಾಡಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿಯನ್ನು ಪ್ರಶ್ನಿಸದ ರಾಜ್ಯ @BJP4Karnataka ಸರ್ಕಾರ ಮತ್ತು ರಾಜ್ಯವನ್ನು ಪ್ರತಿನಿಧಿಸುವ @BJP4India ಎಂ.ಪಿಗಳ ಗುಲಾಮಿ ಮನಸ್ಥಿತಿ ಕರ್ನಾಟಕವನ್ನು ಸರ್ವನಾಶ ಮಾಡಲಿದೆ.
5/5 #ಬೆಲೆಯೇರಿಕೆ— Siddaramaiah (@siddaramaiah) April 9, 2021
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
6ನೇ ವೇತನ ಆಯೋಗದ ಶಿಫಾರಸ್ಸಿನಂತೆ ಸಾರಿಗೆ ನೌಕರರಿಗೆ ವೇತನ ಭತ್ಯೆ ನೀಡಲು ಸಾಧ್ಯವಿಲ್ಲ : ಮುಖ್ಯಮಂತ್ರಿ ಯಡಿಯೂರಪ್ಪ

ಸುದ್ದಿದಿನ, ಬೆಂಗಳೂರು : ’ರಾಜ್ಯದ ಒಟ್ಟು ಆದಾಯದ ಶೇ. 85 ರಷ್ಟು, ವೇತನ, ಭತ್ಯೆ, ಪಿಂಚಣಿ ಮತ್ತಿತರ ಯೋಜನೇತರ ವೆಚ್ಚಗಳಿಗೆ ವ್ಯಯವಾಗುತ್ತಿದ್ದು, ಅಭಿವೃದ್ಧಿ ಕಾರ್ಯಗಳಿಗೆ ಅಲ್ಪ ಆದಾಯ ಲಭ್ಯವಿರುತ್ತದೆ ಎಂದು ಮುಖ್ಯ ಮಂತ್ರಿ ಯಡಿಯೂರಪ್ಪ ಅವರು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.
ಲಿಂಕ್ ಮೇಲೆ ಕ್ಲಿಕ್ ಮಾಡಿ : ಸಾರಿಗೆ ನೌಕರರು ಮುಷ್ಕರ ಕೈಬಿಟ್ಟು ಕರ್ತವ್ಯಕ್ಕೆ ಹಾಜರಾಗಬೇಕು ಎಂದು ವಿನಂತಿಸುತ್ತೇನೆ : ಯಡಿಯೂರಪ್ಪ ಫೇಸ್ ಬುಕ್ ಪೋಸ್ಟ್
ಬಜೆಟ್ ಅಧಿವೇಶನದಲ್ಲಿ ವಿಪಕ್ಷ ನಾಯಕರು ಪ್ರಸ್ತಾಪಿಸಿದ್ದಂತೆ, ಯೋಜನೇತರ ವೆಚ್ಚ ಈಗಾಗಲೇ ಅಧಿಕವಾಗಿದೆ. ಪ್ರಸಕ್ತ ಸಂದರ್ಭಗಳಲ್ಲಿ ಮತ್ತಷ್ಟು ಹೆಚ್ಚು ಅನುದಾನವನ್ನು ಯೋಜನೇತರ ವೆಚ್ಚಗಳಿಗೆ ಒದಗಿಸಲು ಸಾಧ್ಯವಾಗುತ್ತಿಲ್ಲ ಎಂದಿದ್ದಾರೆ.
ಜೊತೆಗೆ ಲಾಕ್ ಡೌನ್ ಸಂದರ್ಭದಲ್ಲಿಯೂ ಸಹ ಸಾರಿಗೆ ನೌಕರರ ಹಿತರಕ್ಷಣೆ ದೃಷ್ಟಿಯಿಂದ ಅವರಿಗೆ ವೇತನ ನೀಡಲು, ಸರ್ಕಾರ 2,300 ಕೋಟಿ ರೂ. ಗಳ ಅನುದಾನ ನೀಡಿದೆ. ಸವಾಲಿನ ಸಂದರ್ಭಗಳಲ್ಲಿಯೂ ಸಹ ಸಾರಿಗೆ ಸಂಸ್ಥೆಗಳ ನೌಕರರ 9 ಬೇಡಿಕೆಗಳಲ್ಲಿ 8 ಬೇಡಿಕೆಗಳನ್ನು ಸರ್ಕಾರ ಈಗಾಗಲೇ ಈಡೇರಿಸಿದ್ದು, 6ನೇ ವೇತನ ಆಯೋಗದ ಶಿಫಾರಸ್ಸಿನಂತೆ ವೇತನ ಭತ್ಯೆ ನೀಡಲು ಸಾಧ್ಯವಿರುವುದಿಲ್ಲ. ಆದ್ದರಿಂದ ಸಾರಿಗೆ ನೌಕರರು ಮುಷ್ಕರ ಕೈಬಿಟ್ಟು ಕರ್ತವ್ಯಕ್ಕೆ ಹಾಜರಾಗಬೇಕು ಎಂದು ವಿನಂತಿಸುತ್ತೇನೆ’. ಎಂದು ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ನಿತ್ಯ ಭವಿಷ್ಯ7 days ago
ಜ್ಯೋತಿಷ್ಯಶಾಸ್ತ್ರ ಅಥವಾ ನಿಮ್ಮ ಜನ್ಮಕುಂಡಲಿ ಪ್ರಕಾರ ಎಂಥಾ ಗುಣವುಳ್ಳ ವ್ಯಕ್ತಿ ಜೊತೆ ಮದುವೆ ಕಾರ್ಯ ಆಗುವುದು?ಕಂಕಣಬಲ ಕೂಡಿ ಬರಲು ಏನು ಮಾಡಬೇಕು?
-
ಬಹಿರಂಗ7 days ago
ಜ್ಯೋತಿಬಾ ಎಂಬ ದೀವಿಗೆ ತೋರಿದ ದಾರಿ ನಮ್ಮದಾಗಲಿ
-
ದಿನದ ಸುದ್ದಿ6 days ago
ಸಾರಿಗೆ ಮುಷ್ಕರ –ಕಾರ್ಮಿಕರ ಬದುಕು ಘನತೆಯ ಪ್ರಶ್ನೆ
-
ಬಹಿರಂಗ5 days ago
ಸಂವಿಧಾನ ನಿತ್ಯದ ಪಾಠವಾಗಲಿ..!
-
ನಿತ್ಯ ಭವಿಷ್ಯ7 days ago
ಈ ರಾಶಿಯವರಿಗೆ ಇನ್ಮುಂದೆ ಕಹಿ ಗಿಂತ ಸಿಹಿಯೇ ಹೆಚ್ಚಾಗಲಿದೆ..! ಮಂಗಳವಾರ-ಏಪ್ರಿಲ್-13,2021
-
ಅಂತರಂಗ5 days ago
ಮಹಾ ಮಾನವತಾವಾದಿ ಅಂಬೇಡ್ಕರ್ ನೆನಪಿನಲ್ಲಿ..!
-
ಲೈಫ್ ಸ್ಟೈಲ್3 days ago
ತರಕಾರಿ ಸಿಪ್ಪೆಯಿಂದ ಪೇಪರ್ ತಯಾರಿಸಿದ ಹತ್ತರ ಬಾಲೆ ಮಾನ್ಯ ಹರ್ಷ..!
-
ನಿತ್ಯ ಭವಿಷ್ಯ6 days ago
ಈ ರಾಶಿಯವರಿಗೆ ಶುಭಕಾರ್ಯ ನೆರವೇರಲಿದೆ..! ಬುಧವಾರ- ರಾಶಿ ಭವಿಷ್ಯ ಏಪ್ರಿಲ್-14,2021