Connect with us

ದಿನದ ಸುದ್ದಿ

ದಾವಣಗೆರೆ |ಕರ್ನಾಟಕ ರಾಜ್ಯ ಕ್ರೈಸ್ ವಸತಿ ಶಾಲೆಗಳ ಅತಿಥಿ ಶಿಕ್ಷಕರ ಸಂಘದಿಂದ ಅನಿರ್ಧಿಷ್ಟಾವಧಿ ಪ್ರತಿಭಟನೆ

Published

on

ಸಾಂದರ್ಭಿಕ ಚಿತ್ರ

ರ್ನಾಟಕ ರಾಜ್ಯ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ಶಾಲೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಶಿಕ್ಷಕರ ಈ ಕೆಳಕಂಡ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ದಿನಾಂಕ : 26-08-2019 ಸೋಮವಾರದಿಂದ ದಾವಣಗೆರೆ ನಗರದ ಉಪವಿಭಾಗಾಧಿಕಾರಿ (ಎ.ಸಿ) ಕಛೇರಿ ಮುಂದೆ ಅನಿರ್ಧಿಷ್ಟಾವಧಿಯ ಕಾಲ ಬೇಡಿಕೆ ಈಡೇರುವವರೆಗೂ ಮುಷ್ಕರ ಹಮ್ಮಿಕೊಳ್ಳಲಾಗಿದೆ.

1) ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆ, (ಪ.ಜಾ)-836, ಅಣಜಿ, ದಾವಣಗೆರೆ ತಾ., ಜಿಲ್ಲೆ. ಇಲ್ಲಿ 10-06-2017ರಿಂದ ಸದರಿ ದಿನಾಂಕದವರೆಗೆ ಅತಿಥಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಕನ್ನಡ ಅತಿಥಿ ಶಿಕ್ಷಕರಾದ ನಿಂಗಪ್ಪ ಬಿ., ಆಂಗ್ಲ ಭಾಷಾ ಶಿಕ್ಷಕರಾದ ದೊಡ್ಡಪ್ಪ ಆರ್., ಹಿಂದಿ ಭಾಷಾ ಶಿಕ್ಷಕರಾದ ಗಂಗಾಧರ ಬಿ.ಎಲ್. ಹಾಗೂ ಗಣಿತ ಶಿಕ್ಷಕರಾದ ವೀರೇಂದ್ರ ಪಟೇಲ್ ಜಿ. ಇವರು ತಮ್ಮನ್ನು ಖಾಯಂಗೊಳಿಸಲು ಕರ್ನಾಟಕ ರಾಜ್ಯ ಉಚ್ಚನ್ಯಾಯಾಲಯ ಬೆಂಗಳೂರು ಇವರ ಮೊರೆ ಹೋಗಿದ್ದು, ಇವರ ಉಚ್ಛ ನ್ಯಾಯಾಲಯದ ಆದೇಶ ಸಂಖ್ಯೆ : ಅಪೀಲು ಸಂಖ್ಯೆ I : wp/12562-12564/2018,(S-DIS) II : wp/45714-45716/2018, (S-RES) ಆಗಿದೆ. ಇವರಿಗೆ ಕರ್ನಾಟಕ ರಾಜ್ಯ ಉಚ್ಚನ್ಯಾಯಾಲಯವು ಮಧ್ಯಂತರ ತಡೆಯಾಜ್ಞೆ ನೀಡಿರುತ್ತದೆ. ಈ ತಡೆಯಾಜ್ಞೆಯು ಪ್ರಸ್ತುತ ಜಾರಿಯಲ್ಲಿರುತ್ತದೆ.

ಇದರ ಅನ್ವಯ ಅಂತಿಮ ತೀರ್ಪು ಹೊರ ಬೀಳುವವರೆಗೂ ಸದರಿ ಶಿಕ್ಷಕರುಗಳು ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆ, (ಪ.ಜಾ)-836, ಅಣಜಿ, ದಾವಣಗೆರೆ ತಾ., ಜಿಲ್ಲೆ. ಇಲ್ಲಿ ಸೇವೆಯಲ್ಲಿ ಮುಂದುವರೆಯುವ ಹಕ್ಕನ್ನು ಹೊಂದಿದ್ದಾರೆ. ಆದರೆ ಸದರಿ ವಸತಿ ಶಾಲೆಯ ಪ್ರಬಾರಿ ಪ್ರಾಂಶುಪಾಲರಾದ ಶ್ರೀ ವಿ.ಸಿ. ಅಂಜಿನಪ್ಪ ಹಾಗೂ ದಾವಣಗೆರೆ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಶ್ರೀ ಶಿವಾನಂದ ಕುಂಬಾರ ಇವರು ಯಾವುದೇ ನೋಟಿಸ್ ಅಥವಾ ಕರ್ತವ್ಯದಿಂದ ಬಿಡುಗಡೆಗೊಳಿಸುವ ಪತ್ರವನ್ನು ನೀಡದೆ ಏಕಾಏಕಿ ಮೇಲ್ಕಂಡ ವಿಷಯಗಳ ಅತಿಥಿ ಶಿಕ್ಷಕರ ಜಾಗಕ್ಕೆ ವರ್ಗಾವಣೆಗೊಂಡ ಖಾಯಂ ಶಿಕ್ಷಕರನ್ನು ಕರ್ತವ್ಯಕ್ಕೆ ಹಾಜರುಪಡಿಸಿಕೊಂಡು ಮೌಖಿಕವಾಗಿ ಹೊರಹೋಗುವಂತೆ ಸೂಚಿಸಿದ್ದಾರೆ. ಯಾವುದೇ ಕಾರಣಕ್ಕೂ ಕರ್ತವ್ಯಕ್ಕೆ ಹಾಜರಾಗದಂತೆ ಒತ್ತಡ ಹೇರಿ ಮಾನಸಿಕ ಹಿಂಸೆ ನೀಡಿರುತ್ತಾರೆ. ಅಲ್ಲದೆ ಕರ್ನಾಟಕ ರಾಜ್ಯ ಉಚ್ಚನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿ ಸದರಿ ಅತಿಥಿ ಶಿಕ್ಷಕರುಗಳಿಗೆ ಅನ್ಯಾಯವೆಸಗಿದ್ದಾರೆ.

ಇದರಿಂದಾಗಿ ಇದೇ ವೃತ್ತಿಯನ್ನು ಅವಲಂಬಿಸಿರುವ ಅತಿಥಿ ಶಿಕ್ಷಕರುಗಳ ಮಾನವ ಸಂಪನ್ಮೂಲವನ್ನುದುರುಪಯೋಗಪಡಿಸಿಕೊಂಡಂತಾಗಿದೆ. ಆದ್ದರಿಂದ ಘನ ಉಚ್ಚನ್ಯಾಯಾಲಯದ ಮಧ್ಯಂತರ ತಡೆಯಾಜ್ಞೆಯನ್ನು ಗೌರವಿಸಿ ಈ ಕೂಡಲೇ ರಾಜ್ಯ ಉಚ್ಚನ್ಯಾಯಾಲಯದ ಅಂತಿಮ ತೀರ್ಪು ಹೊರ ಬೀಳುವವರೆಗೂ ಸದರಿ ವಸತಿ ಶಾಲೆಯಲ್ಲಿಯೇ ಮುಂದುವರೆಸಬೇಕು.
ಈ ಸಂಬಂಧ ಕರ್ನಾಟಕ ರಾಜ್ಯ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಉಪಾಧ್ಯಕ್ಷರು ಮತ್ತು ರಾಜ್ಯ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯ ಅಧೀನ ಕಾರ್ಯದರ್ಶಿಯವರು, ಕರ್ನಾಟಕ ರಾಜ್ಯ ವಸತಿ ಶಿಕ್ಷಣ ಸಂಸ್ಥೆಗಳ ಸಂಘ (ರಿ.) ಬೆಂಗಳೂರು ಇದರ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ದಾವಣಗೆರೆ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಅತಿಥಿ ಶಿಕ್ಷಕರುಗಳ ಹೆಸರಿನಲ್ಲಿ ಆದೇಶ ನೀಡಬೇಕಾಗಿ ಆಗ್ರಹ.

2) ಅದೇ ರೀತಿ wp/45714-45716/2018,(S-RES))ರ ಅನ್ವಯ ರಾಜ್ಯ ಉಚ್ಚನ್ಯಾಯಾಲಯದ ಮಧ್ಯಂತರ ತಡೆಯಾಜ್ಞೆಯಲ್ಲಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆ, (ಪ.ಜಾ)-836, ಅಣಜಿ, ದಾವಣಗೆರೆ ತಾ., ಜಿಲ್ಲೆ. ಇಲ್ಲಿ ಅತಿಥಿ ಶಿಕ್ಷಕರುಗಳಾಗಿ ಸೇವೆ ಸಲ್ಲಿಸುತ್ತಿರುವ ದೈಹಿಕ ಶಿಕ್ಷಣ ಶಿಕ್ಷಕರಾದ ತಿಮ್ಮಪ್ಪ ಕೆ.ಜೆ., ವಿಜ್ಞಾನ ಶಿಕ್ಷಕಿಯಾದ ಮಧುಮತಿ ಎಂ., ಹಾಗೂ ಹರಪನಹಳ್ಳಿ ತಾ. ಬಳ್ಳಾರಿ ಜಿಲ್ಲೆ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆ, (ಪ.ಜಾ)-509, ಇಲ್ಲಿ ಆಂಗ್ಲಭಾಷಾ ಅತಿಥಿ ಶಿಕ್ಷಕರಾದ ಕೃಷ್ಣಮೂರ್ತಿ ಬಿ. ಇವರ ಜಾಗಕ್ಕೂ ಸಹ ಖಾಯಂ ಶಿಕ್ಷಕರ ವರ್ಗಾವಣೆ ಆಗಲಿದೆ ಎಂದು ಆಯಾ ಶಾಲೆಗಳ ಪ್ರಾಂಶುಪಾಲರುಗಳು ಹೇಳಿರುವುದಾಗಿ ತಿಳಿದುಬಂದಿದೆ. ಆದ್ದರಿಂದ ಇವರಿಗೆ ಯಾವುದೇ ತೊಂದರೆ ಮಾಡದಂತೆ ಸದರಿ ಸ್ಥಳದಲ್ಲಿಯೇ ಮುಂದುವರೆಸಬೇಕಾಗಿ ಕೋರಿಕೆ.

3) ಇದೇ ರೀತಿ ರಾಜ್ಯಾದ್ಯಂತ ಉಚ್ಚನ್ಯಾಯಾಲಯದ ಮಧ್ಯಂತರ ತಡೆಯಾಜ್ಞೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರುಗಳಿಗೆ ಆಯಾ ಸ್ಥಳದಲ್ಲಿಯೇ ಮುಂದುವರೆಸಬೇಕಾಗಿ ವಿನಂತಿ.

4) ಈಗಾಗಲೇ ಸಂದರ್ಶನ ಪ್ರಕ್ರಿಯೆಯಲ್ಲಿ ಅರ್ಹತೆ ಹಾಗೂ ಪ್ರತಿಭೆಯ ಮಾನದಂಡದ ಆಧಾರದ ಮೇಲೆಯೇ ಆಯ್ಕೆಯಾಗಿ ಅತ್ಯಂತ ಕಡಿಮೆ ವೇತನದಲ್ಲಿ ಸೇವೆ ಸಲ್ಲಿಸುತ್ತಾ ಸರ್ಕಾರದ ಆರ್ಥಿಕ ಉಳಿತಾಯಕ್ಕೂ ಕಾರಣರಾಗಿರುವ ಮತ್ತು ಸೇವಾ ನಿಷ್ಠೆಯಿಂದ ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿಗಾಗಿ ತಮ್ಮ ಮಾನವ ಸಂಪನ್ಮೂಲದ ಸದ್ಬಳಕೆ ಮಾಡುತ್ತಿರುವ ರಾಜ್ಯದ ಎಲ್ಲಾ ಕ್ರೈಸ್ ವಸತಿ ಶಾಲೆಗಳ ಅತಿಥಿ ಶಿಕ್ಷಕರನ್ನು ನೇರವಾಗಿ ಖಾಯಂಗೊಳಿಸಬೇಕಾಗಿ ಆಗ್ರಹ. ಇದರಲ್ಲಿ ವಯೋಮಿತಿ ಮೀರಿರುವ ಅನೇಕ ಅತಿಥಿ ಶಿಕ್ಷಕರಿದ್ದಾರೆ. ಅಲ್ಲದೆ ಬಹುಪಾಲು ಶಿಕ್ಷಕರು ಆರ್ಥಿಕವಾಗಿ ಹಿಂದುಳಿದವರಾಗಿದ್ದಾರೆ. ಆದ್ದರಿಂದ ಪ್ರಸ್ತುತ ಕರ್ತವ್ಯ ನಿರ್ವಹಿಸುತ್ತಿರುವ ರಾಜ್ಯದ ಎಲ್ಲಾ ಅತಿಥಿ ಶಿಕ್ಷಕರುಗಳ ಸೇವೆಯನ್ನು ಪರಿಗಣಿಸಿ ಖಾಯಂಗೊಳಿಸಬೇಕಾಗಿ ಸಂಘದ ವತಿಯಿಂದ ಕಳಕಳಿಯ ಮನವಿ.

5) ದಸರಾ ರಜೆ ಮತ್ತು ಬೇಸಿಗೆಯ ರಜೆ ಅವಧಿಯಲ್ಲಿಯೂ ಅತಿಥಿ ಶಿಕ್ಷಕರುಗಳಿಗೆ ಪೂರ್ಣವೇತನ ನೀಡಬೇಕು.

6) ಅತಿಥಿ ಶಿಕ್ಷಕರನ್ನು ಖಾಯಂಗೊಳಿಸುವವರೆಗೂ ಕೇಂದ್ರ ಸರ್ಕಾರದ ಆದೇಶದಂತೆ ಕನಿಷ್ಠ ಮೂಲ ವೇತನ ಸೌಲಭ್ಯ, ಪಿ.ಎಫ್, ಇ.ಎಸ್.ಐ., ಇನ್ನಿತರೆ ಸೌಲಭ್ಯಗಳನ್ನು ನೀಡಬೇಕು.

ಈ ಮೇಲ್ಕಂಡ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ನಮ್ಮ ಸದರಿ ಸಂಘದ ವತಿಯಿಂದ ಬೇಡಿಕೆ ಈಡೇರುವವರೆಗೂ ಅನಿರ್ಧಿಷ್ಟಾವಧಿ ಕಾಲ ಹಮ್ಮಿಕೊಂಡಿರುವ ಈ ಮುಷ್ಕರಕ್ಕೆ ದಾವಣಗೆರೆ ಜಿಲ್ಲೆಯ ಹಾಗೂ ಒಟ್ಟಾರೆ ರಾಜ್ಯದ ಯಾವುದೇ ಸಂಘ ಸಂಸ್ಥೆಗಳು ಬೆಂಬಲ ನೀಡಿ ನೊಂದ ಅತಿಥಿ ಶಿಕ್ಷಕರುಗಳಿಗೆ ನ್ಯಾಯ ಸಿಗಲು ಸಹಕರಿಸಬೇಕಾಗಿಯೂ ಕೋರುತ್ತೇವೆ.

ವಂದನೆಗಳೊಂದಿಗೆ
ತಮ್ಮ ವಿಶ್ವಾಸಿಗಳು
ಕರ್ನಾಟಕ ರಾಜ್ಯ ಕ್ರೈಸ್ ವಸತಿ ಶಾಲೆಗಳ ಅತಿಥಿ ಶಿಕ್ಷಕರ ಸಂಘ (ರಿ.) ರಾಜ್ಯ ಘಟಕ,

ದಿನದ ಸುದ್ದಿ

ದಾವಣಗೆರೆ | ಜೋಗ ಜಲಪಾತ ವೀಕ್ಷಣೆಗೆ ವಿಶೇಷ ಸಾರಿಗೆ ಬಸ್

Published

on

ಸುದ್ದಿದಿನ,ದಾವಣಗೆರೆ : ವಿಶ್ವವಿಖ್ಯಾತ ಜೋಗ ಜಲಪಾತದ ವೈಭವವನ್ನು ಸಾರ್ವಜನಿಕರು ವೀಕ್ಷಿಸುವಂತಾಗಲು ದಾವಣಗೆರೆ ವಿಭಾಗದ ದಾವಣಗೆರೆ ಮತ್ತು ಹರಿಹರದಿಂದ ಜೋಗ್‍ಫಾಲ್ಸ್‍ಗೆ ರಾಜಹಂಸ ಸಾರಿಗೆ ವಿಶೇಷ ಪ್ಯಾಕೇಜ್ ಸೇವೆ ಆ. 01 ರಿಂದ ವಾರದ ಎಲ್ಲಾ ದಿನಗಳಂದು ಇರುತ್ತದೆ.

ಭಾನುವರದಂದು ಮಾತ್ರ ಈ ಸೇವೆ ಪ್ರಾರಂಭಿಸಲಾಗಿತ್ತು. ಆಧರೆ ಈ ಪ್ಯಾಕೇಜ್ ಪ್ರಯಾಣಕ್ಕೆ ಸಾರ್ವಜನಿಕ ಪ್ರಯಾಣಿಕರಿಂದ ಉತ್ತಮ ಸ್ಪಂದನೆ ಬಂದ ಕಾರಣ ಆ.01 ರಿಂದ ವಾರದ ಎಲ್ಲಾ ದಿನಗಳಂದು ಬಸ್ ಕಾರ್ಯಚರಣೆ ನಡೆಸಲು ಉದ್ದೇಶಿಸಲಾಗಿದೆ.

ದಾವಣಗೆರೆಯಿಂದ ಬೆಳಿಗ್ಗೆ 07 ಕ್ಕೆ ಹೊರಟು, ಹರಿಹರ 7-30, ಶಿರಸಿ- ಬೆ. 10.30 ಕ್ಕೆ ತಲುಪುತ್ತದೆ. 12 ಕ್ಕೆ ಶಿರಸಿಯಿಂದ ಹೊರಟು ಮಧ್ಯಾಹ್ನ 1.30 ಕ್ಕೆ ಜೋಗವನ್ನು ತಲುಪುತ್ತದೆ. ಸಂಜೆ 4.30 ಕ್ಕೆ ಜೋಗದಿಂದ ಹೊರಟು ರಾತ್ರಿ 8 ಗಂಟೆಗೆ ದಾವಣಗೆರೆಯನ್ನು ತಲುಪುತ್ತದೆ. ಪ್ರಯಾಣ ದರ ರೂ 500 (ಹೋಗಿ ಬರುವ 2 ಬದಿ ಸೇರಿ) ಮಕ್ಕಳಿಗೆ ರೂ.375 (2 ಬದಿಯಿಂದ) ಹರಿಹರದಿಂದ ಹೊರಡುವ ಪ್ರಯಾಣಿಕರಿಗೆ ದರ ರೂ. 475 (2 ಬದಿ) ಮಕ್ಕಳಿಗೆ ರೂ 350 ಆಗಿರುತ್ತದೆ.

ಮುಂಗಡ ಬುಕ್ಕಿಂಗ್ ಕೌಂಟರ್‍ಗಳಲ್ಲಿ ಬುಕ್ಕಿಂಗ್ www.ksrtc.in ಮಾಡಲು ಸೌಕರ್ಯ ಕಲ್ಪಿಸಲಾಗಿದೆ ಎಂದು ದಾವಣಗೆರೆ ಕ.ರಾ.ರ.ಸಾ. ನಿಗಮ. ದಾವಣಗೆರೆ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ರಾಜ್ಯದಲ್ಲಿ ಮತ್ತೆ ಏರಿದ ಕೊರೋನಾ ಪ್ರಕರಣಗಳು

Published

on

ಸುದ್ದಿದಿನ, ಬೆಂಗಳೂರು : ರಾಜ್ಯದಲ್ಲಿ ಸೋಮವಾರ 1,606 ಹೊಸ ಕೊರೋನಾ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, 31 ಜನ ಸೋಂಕಿಗೆ ಬಲಿಯಾಗಿದ್ದಾರೆ.

ಈ ಪೈಕಿ ಬೆಂಗಳೂರಿನಲ್ಲಿ 467 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಮೂವರು ಸೋಂಕಿಗೆ ಬಲಿಯಾಗಿದ್ದಾರೆಂದು ರಾಜ್ಯ ಆರೋಗ್ಯ ಇಲಾಖೆ ಇಂದು ಮಾಹಿತಿ ನೀಡಿದೆ. ಈವರೆಗೆ 28,36.678 ಮಂದಿ ಚೇತರಿಸಿಕೊಂಡಿದ್ದು, 23,057 ಮಂದಿ ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಕರಣದಲ್ಲಿ 36,405 ಮಂದಿ ಕೊರೋನಾಗೆ ಬಲಿಯಾಗಿದ್ದಾರೆ ಎಂದು ಇಲಾಖೆ ಸ್ಪಷ್ಟಪಡಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಬಿಎಸ್​​ವೈ ರಾಜೀನಾಮೆ ಘೋಷಣೆ..!

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ, ಬೆಂಗಳೂರು : ಸರ್ಕಾರದ ಎರಡು ವರ್ಷಗಳ ಸಾಧನಾ ಕಾರ್ಯಕ್ರಮದ ಭಾಷಣದಲ್ಲಿ ಭಾವುಕರಾಗಿ ಸಿಎಂ ಬಿಎಸ್​​ವೈ ಕಣ್ಣೀರು ಹಾಕಿದರು.

ಸಂಘದ ಕಾರ್ಯಕರ್ತನಾಗಿ ನಂತರ ಆರೆಸ್ಸೆಸ್ ಪ್ರಚಾರಕನಾಗಿ ಬಳಿಕ ರಾಜಕೀಯ ಜೀವನ ಪ್ರವೇಶಿಸಿ ಸಂದರ್ಭದಿಂದ ಹಿಡಿದು ತಮ್ಮ ಈಗಿನ ರಾಜಕೀಯದವರೆಗೂ ತಮ್ಮ ಹೋರಾಟಗಳನ್ನ ಅವರು ಮೆಲುಕು ಹಾಕಿದರು. ಭಾಷಣದ ಮಧ್ಯೆ ಅವರು ಗದ್ಗದಿತರಾಗಿ ಕಣ್ಣೀರು ಹಾಕಿದರು. ಕೊನೆಯಲ್ಲಿ ಗದ್ಗದಿತರಾಗಿ ಊಟದ ನಂತರ ರಾಜಭವನಕ್ಕೆ ತೆರಳಿ ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ ಎಂದು ಕಣ್ಣೀರು ಹಾಕಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending