Connect with us

ದಿನದ ಸುದ್ದಿ

ಹರಿಹರ ನಗರದಲ್ಲಿ ತಂಬಾಕು ದಾಳಿ : ಕಾಯ್ದೆ ಉಲ್ಲಂಘನೆಗೆ ದಂಡ

Published

on

ಸುದ್ದಿದಿನ,ದಾವಣಗೆರೆ : ಹರಿಹರ ತಾಲ್ಲೂಕಿನಲ್ಲಿ ತಂಬಾಕು ನಿಯಂತ್ರಣ ತನಿಖಾ ದಳವು ಮಂಗಳವಾರದಂದು ಹರಿಹರದ ಶಿವಮೊಗ್ಗ ರಸ್ತೆ ಬಳಿ ಇರುವ ಅಂಗಡಿ, ಪಾನ್‍ಶಾಪ್, ಹೋಟೆಲ್‍ಗಳ ಮೇಲೆ ದಾಳಿ ನಡೆಸಿ ಕೋಟ್ಪಾ ಕಾಯ್ದೆ ಉಲ್ಲಂಘನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿ ದಂಡ ವಿಧಿಸಿದೆ.

ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಬಾಲ ಕಾರ್ಮಿಕರ ಯೋಜನೆ, ಪಟ್ಟಣ ಪಂಚಾಯ್ತಿ, ಶಿಕ್ಷಣ ಇಲಾಖೆ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ, ಹಾಗೂ ಪೊಲೀಸ್ ಇಲಾಖೆ ಇವರ ಸಹಯೋಗದೊಂದಿಗೆ ಕಾರ್ಯಾಚರಣೆ ಹಮ್ಮಿಕೊಳ್ಳಲಾಗಿತ್ತು.

ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ ಇವರ ನೇತೃತ್ವದಲ್ಲಿ ತಂಡ ರಚಿಸಿಕೊಂಡು ಸಿಗರೇಟು ಮತ್ತು ಇತರ ತಂಬಾಕು ಉತ್ಪನ್ನಗಳ ಅಧಿನಿಯಮ-2003 ಸೆಕ್ಷನ್ 4 ರಡಿ 16, ಸೆಕ್ಷನ್ 6ಎ ಅಡಿಯಲ್ಲಿ 02, ಸೆಕ್ಷನ್ 6ಬಿ ರಡಿ 02 ಸೇರಿದಂತೆ ಒಟ್ಟು 20 ಪ್ರಕರಣಗಳನ್ನು ದಾಖಲಿಸಿ, ರೂ.2000/- ಗಳನ್ನು ದಂಡದ ರೂಪದಲ್ಲಿ ಸಂಗ್ರಹಿಸಲಾಯಿತು.

ತಂಡವು ಹರಿಹರದ ಶಿವಮೊಗ್ಗ ರಸ್ತೆಯ ಹೊಟೇಲ್, ಬಾರ್, ಪಾನ್‍ಶಾಪ್, ಬಸ್ ನಿಲ್ದಾಣ ಇತ್ಯಾದಿ ಪ್ರಮುಖ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳನ್ನು ಮಾರುವವರು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳನ್ನು ಸೇವಿಸುವವರಿಗೆ ಸ್ಥಳದಲ್ಲಿಯೇ ದಂಡ ಹಾಕುವ ಮೂಲಕ ಜಾಗೃತಿ ಮೂಡಿಸಿದರು. ಹಾಗೂ ಸಾರ್ವಜನಿಕ ಸ್ಥಳದಲ್ಲಿರುವ ಅಂಗಡಿ ಮಾಲೀಕರುಗಳು ಧೂಮಪಾನ ನಿಷೇಧÀದ ಬಗ್ಗೆ ಪ್ರದರ್ಶಿಸಬೇಕಾದ ಫಲಕಗಳನ್ನು ಕಟ್ಟುನಿಟ್ಟಾಗಿ ಅಳವಡಿಸಲು ತಾಕೀತು ಮಾಡಿದರು.

ಕೋಟ್ಪಾ ಕಾಯಿದೆಯ ಸೆಕ್ಷನ್ 6ಎ ಪ್ರಕಾರ 18 ವರ್ಷದೊಳಗಿನ ಮಕ್ಕಳಿಗೆ ತಂಬಾಕು ಉತ್ಪನ್ನಗಳನ್ನು ಮಾರುವುದು ಹಾಗೂ ಮಕ್ಕಳಿಂದ ತಂಬಾಕು ಉತ್ಪನ್ನಗಳ ಮಾರಾಟ ಮಾಡಿಸುವುದನ್ನು ನಿಷೇಧಿಸಿರುವುದರ ಬಗ್ಗೆ, ಹಾಗೂ ಶಾಲಾ ಕಾಲೇಜು, ಶಿಕ್ಷಣ ಸಂಸ್ಥೆಗಳ 100 ಯಾರ್ಡ್ ಅಂತರದಲ್ಲಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡದಿರುವುದು, ಸೆಕ್ಷನ್ 4 ಸಾರ್ವಜನಿಕ ಪ್ರದೇಶದಲ್ಲಿ ಧೂಮಪಾನ ನಿಷೇಧ ಮತ್ತು ತಂಬಾಕು ಉತ್ಪನ್ನಗಳ ಪ್ಯಾಕ್‍ಗಳ ಮೇಲೆ ಎಚ್ಚರಿಕೆ ಚಿಹ್ನೆ ಇಲ್ಲದೆ ಮಾರಾಟ ಮಾಡುವುದನ್ನು ನಿಷೇಧ ಇರುವ ಬಗ್ಗೆ ತಂಡದ ಸದಸ್ಯರು ಮಾಹಿತಿ ನೀಡಿದರು.

ತಹಶೀಲ್ದಾರರಾದ ಕೆ.ಬಿ ರಾಮಚಂದ್ರಪ್ಪ, ನಗರಸಭೆಯ ಪೌರಾಯುಕ್ತರಾದ ಲಕ್ಷ್ಮೀ, ಟಿಹೆಚ್‍ಓ ಡಾ.ಚಂದ್ರಮೋಹನವೃತ್ತ ಪೊಲೀಸ್ ನಿರೀಕ್ಷಕರಾದ ಸತೀಶಕುಮಾರ.ಯು, ಜಿಲ್ಲಾ ಆರೋಗ್ಯ ಮೇಲ್ವಿಚಾರಕ ಹೊರಕೇರಿ ಎಂ.ವಿ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಹೆಚ್ ಪಾಟೀಲ್, ಶಿಕ್ಷಣ ಸಂಯೋಜಕರಾದ ಅಶೋಕ, ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಜಿಲ್ಲಾ ಸಲಹೆಗಾರ ಸತೀಶ ಕಲಹಾಳ, ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಸಮಾಜ ಕಾರ್ಯಕರ್ತ ದೇವರಾಜ್ ಕೆ.ಪಿ, ನಗರಸಭೆಯ ಆರೋಗ್ಯ ನಿರೀಕ್ಷಕರು ಹಾಗೂ ಪೊಲೀಸ್ ಸಿಬ್ಬಂದಿ ಇತರರು ಹಾಜರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಚಿತ್ರದುರ್ಗ | ಜಿಲ್ಲೆಯಲ್ಲಿ 640 ಜನರಿಗೆ ಕೊರೋನಾ ಪಾಸಿಟಿವ್ : 141 ಮಂದಿ ಬಿಡುಗಡೆ

Published

on

ಸುದ್ದಿದಿನ,ಚಿತ್ರದುರ್ಗ : ಚಿತ್ರದುರ್ಗ ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ಗೆ ಸಂಬಂಧಿಸಿದಂತೆ ಭಾನುವಾರದ ವರದಿಯಲ್ಲಿ 640 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 20,730 ಕ್ಕೆ ಏರಿಕೆಯಾಗಿದೆ.

ಚಿತ್ರದುರ್ಗ ತಾಲ್ಲೂಕಿನಲ್ಲಿ 263, ಚಳ್ಳಕೆರೆ 35, ಹಿರಿಯೂರು 85, ಹೊಳಲ್ಕೆರೆ 55, ಹೊಸದುರ್ಗ 96, ಮೊಳಕಾಲ್ಮುರು ತಾಲ್ಲೂಕಿನಲ್ಲಿ 79 ಪ್ರಕರಣ ಸೇರಿದಂತೆ ಒಟ್ಟು 640 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.

ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಭಾನುವಾರ 141 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಭಾನುವಾರ ಒಟ್ಟು 2410 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ.  ವರದಿಯಲ್ಲಿ 640 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 20,730ಕ್ಕೆ ಏರಿಕೆಯಾಗಿದೆ. ಕೋವಿಡ್‍ನಿಂದ ಇಂದು 4 ಮಂದಿ ಮೃತರಾಗಿದ್ದು ಇದುವರೆಗೆ ಒಟ್ಟು 112 ಜನ ಮೃತಪಟ್ಟಿದ್ದಾರೆ.

ಇದನ್ನೂ ಓದಿ | ಶಿವಮೊಗ್ಗ ಜಿಲ್ಲೆ – ನಮ್ಮ ಹೆಮ್ಮೆ : ಮೈಸೂರು ಕಾಗದ ಕಾರ್ಖಾನೆ ನಿಯಮಿತ (ಎಂ.ಪಿ.ಎಂ)

ಸೋಂಕಿತರ ಪೈಕಿ ಈಗಾಗಲೆ 17,704 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 2,914 ಸಕ್ರಿಯ ಪ್ರಕರಣಗಳು ಇವೆ. ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 1,67,835 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.

ಈವರೆಗೆ 4,50,077 ಜನರ ಮಾದರಿ ಸಂಗ್ರಹಿಸಲಾಗಿದ್ದು, 4,27,384 ಜನರ ವರದಿ ನೆಗೆಟೀವ್ ಬಂದಿದೆ, ಉಳಿದ 1210 ಜನರ ವರದಿ ಬರುವುದು ಬಾಕಿ ಇದೆ. 753 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕøತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ರಂಗನಾಥ್ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕೊರೋನಾ ಎಫೆಕ್ಟ್ | ಯುವಕನಿಗೆ ಬ್ಲಾಕ್ ಫಂಗಸ್ ; ಚಿಕಿತ್ಸೆಗೆ ಸರ್ಕಾರದ ಸಹಾಯ ಬೇಡಿದ ಕುಟುಂಬಸ್ಥರು

Published

on

ಸುದ್ದಿದಿನ,ಬೆಳಗಾವಿ: ಕೊರೋನಾ ರೋಗದ ಪರಿಣಾಮ ಬೆಳಗಾವಿಯಲ್ಲಿ ಬ್ಲ್ಯಾಕ್ ಫಂಗಸ್ ಭೀತಿ ಎದುರಾಗಿದ್ದು, ಬ್ಲ್ಯಾಕ್ ಫಂಗಸ್‌ನಿಂದ 30 ವರ್ಷದ ಯುವಕನೊಬ್ಬ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾನೆ.

ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಖೇಮಲಾಪುರ ಗ್ರಾಮದ ಆನಂದ ಕುಲಾಲಿ ಎಂಬ ಯುವಕ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾನೆ.ಯುವಕ ಆನಂದ ಕುಲಾಲಿ
ಅಥಣಿ ತಾಲೂಕು ಪಂಚಾಯ್ತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಮೇ 5ರಂದು ಕೊರೋನ ಟೆಸ್ಟ್ ಮಾಡಿಸಿದ್ದು, ಮೇ 7ರಂದು ಕೊರೊನಾ ಪಾಸಿಟಿವ್ ಎಂದು ರಿಪೋರ್ಟ್ ಬಂದಿತ್ತು.

ಕೊರೋನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿಯೇ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ಯುವಕ ಆನಂದ ಕುಲಾಲಿಯನ್ನು ಹುಕ್ಕೇರಿ ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಯಿತು. ನಂತರ ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ವೈದ್ಯರು ಅಡ್ಮಿಟ್ ಆಗುವಂತೆ ಹೇಳಿದ್ದರು. ಈ ಹಿನ್ನೆಲೆಯಲ್ಲಿ ಮೇ 10ರಂದು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಯುವಕ ಆನಂದ ಕುಲಾಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾನೆ.

ಇದನ್ನೂ ಓದಿ | ದಾವಣಗೆರೆ | ಪೆಟ್ರೋಲ್-ಡಿಸೇಲ್ ಬೆಲೆ ಏರಿಕೆ ; ಇಂದಿನ ಬೆಲೆ ಎಷ್ಟು ಗೊತ್ತಾ..?

ಬಳಿಕ ಯುವಕ ಆನಂದ ಕುಲಾಲಿಯ ಮುಖವು ಬಾವು ಬರುತ್ತಿದ್ದು ಇಎನ್‌ಟಿ ಸ್ಪೆಷಲಿಸ್ಟ್ ಬಳಿ ತೆರಳಿ ಚೆಕಪ್ ಮಾಡಿಸಿ ಸಲಹೆಯನ್ನು ನೀಡಲಾಗಿತ್ತು. ಬಳಿಕ ಮಹಾರಾಷ್ಟ್ರದ ಮೀರಜ್ ಖಾಸಗಿ ಆಸ್ಪತ್ರೆಗೆ ಯುವಕ ಆನಂದ ಕುಲಾಲಿ
ಅಡ್ಮಿಟ್ ಆದನು. ಆಗ ಖಾಸಗಿ ಆಸ್ಪತ್ರೆಯ ವೈದ್ಯರು ಯುವಕನಿಗೆ ಬ್ಲ್ಯಾಕ್ ಫಂಗಸ್ ಆಗಿದೆ ಎಂದು ತಿಳಿಸಿದ್ದಾರೆ.

ಬ್ಲಾಕ್ ಫಂಗಸ್

ಯುವಕ ಆನಂದ ಕುಲಾಲಿ ಕೊರೋನಾದಿಂದ ಗುಣಮುಖ ಆದ ಬಳಿಕ ಸರ್ಜರಿ ಮಾಡಬೇಕು ಎಂದು ವೈದ್ಯರು ಹೇಳಿದ್ದಾರೆ. ಹೀಗಾಗಿ ಯುವಕನ ಕುಟುಂಬಸ್ಥರು ರಾಜ್ಯ ಸರ್ಕಾರವು ತಮ್ಮ ನೆರವಿಗೆ ಬರುವಂತೆ ಮನವಿ ಮಾಡಿಕೊಂಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಪೆಟ್ರೋಲ್-ಡಿಸೇಲ್ ಬೆಲೆ ಏರಿಕೆ ; ಇಂದಿನ ಬೆಲೆ ಎಷ್ಟು ಗೊತ್ತಾ..?

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ, ದಾವಣಗೆರೆ : ದಾವಣಗೆರೆಯಲ್ಲಿ ಪೆಟ್ರೋಲ್ ಬೆಲೆ ರೂ. ಪ್ರತಿ ಲೀಟರ್‌ಗೆ 97.35 ರೂ. ಆಗಿದೆ. ಭಾನುವಾರ ಮೇ 16 ರಂದು ಮತ್ತು 25 ಪೈಸೆಯನ್ನು ಹೆಚ್ಚಿಸಲಾಗಿದೆ. ಪೆಟ್ರೋಲ್ ಬೆಲೆ ಕರ್ನಾಟಕ ರಾಜ್ಯ ತೆರಿಗೆಯನ್ನು ಒಳಗೊಂಡಿದೆ.

ಡೀಸೆಲ್‌ ಬೆಲೆ

ದಾವಣಗೆರೆ (ಕರ್ನಾಟಕ) ದಲ್ಲಿ ಇಂದು ಡೀಸೆಲ್ ಬೆಲೆ ರೂ. ಲೀಟರ್‌ಗೆ 89.99 ರೂ. ಆಗಿದೆ. ಶನಿವಾರ ಮೇ 15 ರಂದು 63 ಪೈಸೆ ಹೆಚ್ಚಾಗಿದೆ. ಕಳೆದ 10 ದಿನಗಳಲ್ಲಿ ದಾವಷಗೆರೆಯಲ್ಲಿ ಡೀಸೆಲ್ ಬೆಲೆ 88.06 ರಿಂದ 89.99 ರೂಗಳ ನಡುವೆ ಏರಿಳಿತವಾಗಿದೆ. ನೀವು ಇಂದು ಕರ್ನಾಟಕದ ಇತರ ನಗರಗಳಲ್ಲಿ ಡೀಸೆಲ್ ದರ ಮತ್ತು ಹಿಂದಿನ ದಿನಕ್ಕೆ ಹೋಲಿಸಿದರೆ ಬೆಲೆಗಳಲ್ಲಿನ ಬದಲಾವಣೆಯನ್ನು ಸಹ ಪರಿಶೀಲಿಸಬಹುದು. ಡೀಸೆಲ್ ಬೆಲೆ ಕರ್ನಾಟಕ ರಾಜ್ಯ ತೆರಿಗೆಯನ್ನು ಒಳಗೊಂಡಿದೆ.

ಇದನ್ನೂ ಓದಿ |ಕೊರೋನಾ | ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಆಹಾರಗಳು

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending