Connect with us

ದಿನದ ಸುದ್ದಿ

ವಾಲ್ಮೀಕಿ ಗುರುಪೀಠ ಅಭಿವೃದ್ದಿಗೆ ರೂ. 10.8 ಕೋಟಿ ಅನುದಾನ ಮಂಜೂರು : ಮುಖ್ಯಮಂತ್ರಿ ಯಡಿಯೂರಪ್ಪ

Published

on

ಸುದ್ದಿದಿನ,ದಾವಣಗೆರೆ : ವಾಲ್ಮೀಕಿ ಸಮುದಾಯದ ಆರ್ಥಿಕ ಸ್ವಾವಲಂಬನೆಗೆ ಬದ್ಧವಾಗಿರುವ ರಾಜ್ಯ ಸರ್ಕಾರ ವಾಲ್ಮೀಕಿ ಗುರುಪೀಠದ ಅಭಿವೃದ್ಧಿಗೆ ಪ್ರಸಕ್ತ ಸಾಲಿನಲ್ಲಿ ರೂ. 10.8 ಕೋಟಿ ಅನುದಾನ ಮಂಜೂರು ಮಾಡಿದ್ದು, ಜಿಲ್ಲಾಧಿಕಾರಿ ಖಾತೆಗೆ ಈಗಾಗಲೇ ರೂ. 5.4 ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ಮಾನ್ಯ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.

ಹರಿಹರ ತಾಲ್ಲೂಕಿನ ರಾಜನಹಳ್ಳಿ ಮಹರ್ಷಿ ವಾಲ್ಮೀಕಿ ಗುರುಪೀಠದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಮಹರ್ಷಿ ವಾಲ್ಮೀಕಿ ಜಾತ್ರಾ ಮಹೋತ್ಸವದ ಬೃಹತ್ ಜನಜಾಗೃತಿ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಾಲ್ಮೀಕಿ ಸಮುದಾಯದವರು ಶೈಕ್ಷಣಿಕವಾಗಿ, ಆರ್ಥಿಕವಾಗಿ, ಸಾಮಾಜಿಕವಾಗಿ ಮುಂದುವರೆಯಲು ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಲಾಗಿದೆ ಎಂದರು.

ಮಹರ್ಷಿ ವಾಲ್ಮೀಕಿ ಅವರು ಪ್ರಪಂಚದ ಚರಿತ್ರೆಯ ಧೃವತಾರೆ. ಭಾರತೀಯ ಸಂಸ್ಕøತಿಯಲ್ಲಿ ಅವರ ಕೊಡುಗೆ ಅಪಾರವಾದದ್ದು. ವಾಲ್ಮೀಕಿ ಗುರುಪೀಠ ಸಮುದಾಯದ ಸರ್ವಾಂಗೀಣ ಅಭಿವೃದ್ಧಿಗೆ ಸರ್ಕಾರದಿಂದ ಅನೇಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಯುವಜನರ ಅಭಿವೃದ್ಧಿಗಾಗಿ ಆರ್ಥಿಕ ನೆರವು ನೀಡಲಾಗುತ್ತಿದೆ ಎಂದರು.

ಆಧ್ಯಾತ್ಮಿಕ ಚಿಂತಕ, ಶಿಕ್ಷಣ ತಜ್ಞ, ರಾಜನೀತಿ ತಜ್ಞ, ತತ್ವಜ್ಞಾನಿಯಾದ ವಾಲ್ಮೀಕಿ ಜನಮಾನಸದಲ್ಲಿ ಇಂದಿಗೂ ಇದ್ದಾರೆ. ಜಗತ್ತಿಗೆ ರಾಮಾಯಣ ಕೊಟ್ಟ ಶ್ರೇಷ್ಠ ದಾರ್ಶನಿಕ. ಮಮತೆ, ಸಮತೆ, ಭ್ರಾತೃತ್ವ, ತ್ಯಾಗ, ದೇಶಪ್ರೇಮ, ಸಾಮಾಜಿಕ ಮೌಲ್ಯಗಳನ್ನು ರಾಮಾಯಣದಲ್ಲಿ ಪ್ರತಿಪಾದಿಸುವ ಮೂಲಕ ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಎನ್ನುತ್ತಾ ಸಮಾನ ಅವಕಾಶಗಳನ್ನು ಸಮಾಜಕ್ಕೆ ತಿಳಿಸಿಕೊಟ್ಟಿದ್ದಾರೆ.

ವಾಲ್ಮೀಕಿ ಸಮುದಾಯದವರ ಬಹುದಿನದ ಬೇಡಿಕೆಯಾದ ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದಂತೆ ನಾಗಮೋಹನ್‍ದಾಸ್ ಸಮಿತಿ ರಚಿಸಿದ್ದು, ಸಮಿತಿಯ ವರದಿಯನ್ನು ಈಗಾಗಲೇ ಪರಿಶೀಲನೆ ನಡೆಸಲಾಗುತ್ತಿದೆ. ಮೀಸಲಾತಿ ಬೇಡಿಕೆಯನ್ನು ಅತೀ ಶೀಘ್ರವಾಗಿ ಈಡೇರಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಎಂದು ಭರವಸೆ ನೀಡಿದರು.

ಕೊರೋನದಿಂದ ರಾಜ್ಯದ ಆರ್ಥಿಕ ಮಟ್ಟ ಕುಸಿದಿದ್ದು ಹಣಕಾಸಿನ ಇತಿಮಿತಿಯಲ್ಲಿಯೇ ಮಾರ್ಚ್ ಮೊದಲ ವಾರದಲ್ಲಿ ಬಜೆಟ್ ಮಂಡನೆ ಮಾಡಲಿದ್ದೇವೆ. ಕಳೆದ ಮೂರು ದಿನದಿಂದ ಬಜೆಟ್ ತಯಾರಿ ಬಗ್ಗೆ ಅಧಿಕಾರಿಗಳೊಂದಿಗೆ ಸಭೆ ನಡೆಸುತ್ತಿದ್ದು, ಪೂರ್ವಭಾವಿಯಾಗಿ ತೆರಿಗೆ ಸಂಗ್ರಹಣೆಯಾಗುತ್ತಿದೆ ಎಂದು ಹೆಲಿಪ್ಯಾಡ್ ಬಳಿ ಮಾಧ್ಯಮದವರಿಗೆ ತಿಳಿಸಿದರು.

ಕಾರ್ಯಕ್ರಮದಲ್ಲಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ಆಶೀರ್ವಚನ ನೀಡಿದರು. ಜಲಸಂಪನ್ಮೂಲ ಸಚಿವ ಮತ್ತು ಮಹರ್ಷಿ ವಾಲ್ಮೀಕಿ ಜಾತ್ರಾ ಸಮಿತಿ ಅಧ್ಯಕ್ಷರಾದ ರಮೇಶ್ ಲ.ಜಾರಕಿಹೊಳಿ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಶಾಸಕರಾದ ಎಂ.ಪಿ. ರೇಣುಕಾಚಾರ್ಯ, ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ. ಬಸವರಾಜ, ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು, ಪ್ರವಾಸೋದ್ಯಮ ಸಚಿವ ಆನಂದಸಿಂಗ್, ಸಂಸದರಾದ ಜಿ.ಎಂ.ಸಿದ್ದೇಶ್ವರ, ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರು ಮತ್ತು ಶಾಸಕರಾದ ಎಸ್.ವಿ.ರಾಮಚಂದ್ರ, ಶಾಸಕರಾದ ಸತೀಶ ಲ.ಜಾರಕಿಹೊಳಿ, ಶಾಮನೂರು ಶಿವಶಂಕರಪ್ಪ, ಡಾ.ಯತೀಂದ್ರ, ಚಿಕ್ಕಮಾದು, ರಾಜವೆಂಕಟಪ್ಪ ನಾಯಕ, ಡಿ.ಕೆ.ಶಿವಕುಮಾರ್, ನರಸಿಂಹನಾಯಕ ಉಪಸ್ಥಿತರಿದ್ದರು. ವಾಲ್ಮೀಕಿ ವಿಜಯ ಸ್ಮರಣ ಸಂಪುಟ ಸಂಪಾದಕ ಡಾ.ಎ.ಬಿ.ರಾಮಚಂದ್ರಪ್ಪ ಪ್ರಾಸ್ತಾವಿಕ ನುಡಿಗಳನ್ನಾಡಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ

Published

on

ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮಡಿಕೇರಿಯಲ್ಲಿ ನಡೆದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು ಎಂದು ಕರೆ ನೀಡಿದರು.

ಬಳಿಕ ತುಮಕೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಬಿಜೆಪಿ ಸಂಸದರು ವಿಫಲರಾಗಿದ್ದಾರೆ ಎಂದು ಮುಖ್ಯಮಂತ್ರಿ ಆರೋಪಿಸಿದರು.

ಮಹಿಳೆಯರ ಅಭ್ಯುದಯಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ನುಡಿದಂತೆ ಜಾರಿಗೆ ತಂದಿದ್ದೇವೆ. ಇದರಿಂದಾಗಿ ಮಹಿಳೆಯರ ಜೀವನದಲ್ಲಿ ಸುಧಾರಣೆ ಕಂಡಿದೆ, ಈ ಯೋಜನೆಯ ಫಲಾನುಭವಿಗಳ ಬಗ್ಗೆ ಟೀಕಿಸುವುದು ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ

Published

on

ಸುದ್ದಿದಿನ,ದಾವಣಗೆರೆ : 2024 ರ ಮಾರ್ಚ್‍ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದ್ದು ಶೇ 74.27 ಗಂಡು, ಶೇ 82.01 ರಷ್ಟು ಹೆಣ್ಣು ಮಕ್ಕಳು ಉತ್ತೀರ್ಣರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.

ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾ ಸಂಬಂಧ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಏಪ್ರಿಲ್ 10 ರಂದು ಫಲಿತಾಂಶ ಪ್ರಕಟವಾಗಿದ್ದು ಹೆಚ್ಚಿನ ವಿವರಗಳು ಬರಬೇಕಾಗಿದೆ. ಈ ವರ್ಷ ಜಿಲ್ಲೆಯಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆಯನ್ನು 19644 ರೆಗ್ಯುಲರ್, 422 ಖಾಸಗಿ ಸೇರಿ 20066 ವಿದ್ಯಾರ್ಥಿಗಳು ತೆಗೆದುಕೊಂಡಿದ್ದರು. ಇದರಲ್ಲಿ 15904 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ 80.96 ರಷ್ಟು ಫಲಿತಾಂಶ ಪಡೆದಿದ್ದಾರೆ.

ಕಳೆದ ವರ್ಷ ಶೇ 75.72 ರಷ್ಟು ಫಲಿತಾಂಶ ಬಂದಿತ್ತು, ಈ ವರ್ಷ ಶೇ 5.24 ರಷ್ಟು ಫಲಿತಾಂಶ ಹೆಚ್ಚಳವಾಗಿದೆ. ಜಿಲ್ಲೆಗೆ ಟಾಪ್ ಬಂದವರಲ್ಲಿ ಕಲಾ ವಿಭಾಗದಲ್ಲಿ ಹರಿಹರದ ಶ್ರೀಮತಿ ಗಿರಿಯಮ್ಮ ಕಾಂತಪ್ಪ ಮಹಿಳಾ ಪದವಿ ಪೂರ್ವ ಕಾಲೇಜಿನ ಹೀನಬಾನು ಪಿ.ಕೆ. 591 ಅಂಕ ಪಡೆದು ಶೇ 98.5, ವಾಣಿಜ್ಯ; ದಾವಣಗೆರೆ ತಾ; ಗೋಪನಾಳು ಸರ್ಕಾರಿ ಪದವಿ ಪೂರ್ವ ಕಾಲೇಜಿನ ರೇಷ್ಮಾ ಬಾನು 589 ಅಂಕ ಪಡೆದು ಶೇ 98.16 ರಷ್ಟು ಫಲಿತಾಂಶ ಪಡೆದು ಜಿಲ್ಲೆಗೆ ಮೊದಲಿಗರಾಗಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಲೋಕಿಕೆರೆ ರಸ್ತೆಯಲ್ಲಿನ ಸರ್‍ಎಂವಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಮೊಹಮ್ಮದ್ ಸುಹೇಲ್, ಅಮೃತ ದೊಡ್ಡ ಬಸಪ್ಪನವರ್, ಅನನ್ಯ ಹೆಚ್.ಎಸ್, ಆಕಾಶ್ ಸಿ.ಪಾಟೀಲ್ ಇವರು 593 ಅಂಕ ಶೇ 98.83 ರಷ್ಟು ಸಮನಾದ ಫಲಿತಾಂಶ ಹಂಚಿಕೊಂಡಿದ್ದಾರೆ ಎಂದರು.

ವಿಭಾಗವಾರು ಫಲಿತಾಂಶ; ಕಲಾ ವಿಭಾಗದಲ್ಲಿ ಶೇ 57.83 ರಷ್ಟು ಫಲಿತಾಂಶ ಬಂದಿದ್ದು ಇದರಲ್ಲಿ ಗಂಡು ಶೇ 45, ಹೆಣ್ಣು ಶೇ 66.46 ರಷ್ಟು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇ 76.22 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 65.5, ಹೆಣ್ಣು ಶೇ 80.8, ವಿಜ್ಞಾನ ವಿಭಾಗದಲ್ಲಿ ಶೇ 91.13 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 91.39 ಹಾಗೂ ಹೆಣ್ಣು ಶೇ 88.69 ರಷ್ಟು ಫಲಿತಾಂಶ ಬಂದಿದೆ.

ನಗರಕ್ಕಿಂತ ಗ್ರಾಮೀಣರ ಮೇಲುಗೈ; ಫಲಿತಾಂಶದಲ್ಲಿ ನಗರ ಪ್ರದೇಶಕ್ಕಿಂತ ಗ್ರಾಮೀಣ ವಿದ್ಯಾರ್ಥಿಗಳು ಶೇ 1.1 ರಷ್ಟು ಮೇಲುಗೈ ಸಾಧಿಸಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಶೇ 73.65 ಗಂಡು, ಶೇ 84.6 ಹೆಣ್ಣು ಉತ್ತೀರ್ಣರಾದರೆ ನಗರ ಪ್ರದೇಶದ ಒಟ್ಟು ಫಲಿತಾಂಶ ಶೇ 80.75 ರಲ್ಲಿ ಗಂಡು ಶೇ 74.41, ಹೆಣ್ಣು ಶೇ 81.37 ರಷ್ಟು ಫಲಿತಾಂಶ ಪಡೆದಿದ್ದಾರೆ.

ಶೇ 100 ರಷ್ಟು ಫಲಿತಾಂಶ ಪಡೆದ ಶಾಲೆಗಳು; ದಾವಣಗೆರೆ ಅಂಜುಂ ಪದವಿ ಪೂರ್ವ ಕಾಲೇಜು, ಲೇಬರ್ ಕಾಲೋನಿ, ಜೈನ್ ಟ್ರಿನಿಟಿ ಪದವಿ ಪೂರ್ವ ಕಾಲೇಜು, ಅನ್‍ಮೋಲ್ ಪದವಿ ಪೂರ್ವ ಕಾಲೇಜು, ಶ್ರೀ ಗೀತಂ ಪದವಿ ಪೂರ್ವ ಕಾಲೇಜು, ದಾವಣಗೆರೆ ಇವು ಶೇ 100 ರಷ್ಟು ಫಲಿತಾಂಶ ಪಡೆದ ಕಾಲೇಜುಗಳಾಗಿವೆ.

ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂರ್, ಶಾಲಾ ಶಿಕ್ಷಣ, ಪದವಿ ಪೂರ್ವ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್‍ಗೆ ರೂ.10 ಪಡೆದ ಶಾಪಿಂಗ್ ಮಾಲ್‍ಗೆ ದಂಡ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ ,ದಾವಣಗೆರೆ : ವಕೀಲ ವೃತ್ತಿಯಲ್ಲಿ ತೊಡಗಿಕೊಂಡಿರುವ ಆರ್. ಬಸವರಾಜ್ ಎಂಬುವವರು ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು ರೂ.1,499 ಪಾವತಿಸಿ, ಡೆನಿವಾ ಪ್ಯಾಂಟ್ ಖರೀದಿಸಿದರು. ಈ ವೇಳೆಯಲ್ಲಿ ಇಲ್ಲಿಯೇ ಲೈಫ್ ಸ್ಟೈಲ್ ಇಂಟರ್‍ನ್ಯಾಷನಲ್ ವಾಣಿಜ್ಯ ಸಂಸ್ಥೆ ಪ್ಯಾಂಟ್ ಮಾರಾಟದ ವೇಳೆ ಹೆಚ್ಚುವರಿಯಾಗಿ ರೂ.10/- ಪೇಪರ್ ಬ್ಯಾಗ್‍ಗೆ ಪಡೆಯಲಾಯಿತು.

ಗ್ರಾಹಕರಾದ ಆರ್. ಬಸವರಾಜ್ ಇವರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ದೂರನ್ನು ದಾಖಲಿಸಿ ವಾಣಿಜ್ಯ ಸಂಸ್ಥೆ ವಿರುದ್ದ ರೂ.50,000 ಮಾನಸಿಕ ಕಿರುಕುಳ ಹಾಗೂ ದೂರು ದಾಖಲಿಸಲು ಖರ್ಚು ಮಾಡಿದ ಮೊ ರೂ.10,000 ಗಳನ್ನು ಪಾವತಿಸುವಂತೆ ದೂರನ್ನು ದಾಖಲಿಸಿದರು.

ವಾಣಿಜ್ಯ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದ್ದು ಈ ಸಂಸ್ಥೆ ವಕೀಲರ ಮುಖಾಂತರ ಹಾಜರಾಗಿ ಬ್ಯಾಗ್‍ಗೆ ಹೆಚ್ಚುವರಿಯಾಗಿ ಪಡೆದ ಹಣಕ್ಕೆ ಸಮರ್ಥಿಸಿಕೊಂಡಿತ್ತು. ಆದರೆ ಗ್ರಾಹಕರ ಆಯೋಗ ಈ ಮೊದಲು ರಾಷ್ಟ್ರೀಯ ಗ್ರಾಹಕರ ಆಯೋಗ ಬಿಗ್ ಬಜಾರ್ ವಿರುದ್ಧ ಸಾಯಲ್ ದಾವ ಪ್ರಕರಣದ ನ್ಯಾಯ ನಿರ್ಣಯದ ತೀರ್ಪಿನ ಅನುಗುಣವಾಗಿ ವಾಣಿಜ್ಯ ಸಂಸ್ಥೆಗಳು ಕ್ಯಾರಿ ಬ್ಯಾಗ್‍ಗಳಿಗೆ ಹೆಚ್ಚಿನ ಹಣವನ್ನು ಪಡೆಯುವಂತಿಲ್ಲ ಎಂಬ ತೀರ್ಪನ್ನು ಉಲ್ಲೇಖಿಸಿ ಹೆಚ್ಚುವರಿಯಾಗಿ ರೂ.10 ಪಡೆದ ಸಂಸ್ಥೆಯ ಕ್ರಮವು ಗ್ರಾಹಕರ ಸಂರಕ್ಷಣಾ ಕಾಯ್ದೆಯ ಅಡಿಯಲ್ಲಿ ಅನುಚಿತ ವ್ಯಾಪಾರ ಪದ್ದತಿಯೆಂದು ಪರಿಗಣಿಸಿ ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಮಹಂತೇಶ ಈರಪ್ಪ ಶಿಗ್ಲಿ, ಸದಸ್ಯರಾದ ತ್ಯಾಗರಾಜನ್ ಮತ್ತು ಮಹಿಳಾ ಸದಸ್ಯರಾದ ಶ್ರೀಮತಿ ಬಿ.ಯು. ಗೀತಾ ಇವರು ವಾಣಿಜ್ಯ ಸಂಸ್ಥೆಗೆ ರೂ.7000 ದಂಡವಿದಿಸಿ ಆದೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending