Connect with us

ನೆಲದನಿ

ಲೈಂಗಿಕ ಶಿಲ್ಪಗಳ ಹಿಂದಿನ ತತ್ವ ಏನು..?

Published

on

ಶಿವಮೊಗ್ಗ ಜಿಲ್ಲೆಯ ಉಳವಿಯ (ನಮ್ಮೂರಿನಿಂದ 25 ಕಿಲೋಮೀಟರ್ ದೂರದಲ್ಲಿರುವ) ಕೆರೆ ಏರಿಯೊಂದರ ಮೇಲೆ ಬೈಕಿನಲ್ಲಿ ಹೋಗುತ್ತಿರುವಾಗ ನನ್ನನ್ನು ಗಕ್ಕನೆ ನಿಲ್ಲಿಸುವಂತೆ ಮಾಡಿದ್ದು ಈ ಕಲ್ಲಿನ ಕೆತ್ತನೆಗಳು. ಇದನ್ನು ನೋಡಿ ಕೆಲವರು ನಾಚಿಕೆ ಪಟ್ಡುಕೊಳ್ಳಬಹುದು, ಲೇವಡಿ ಮಾಡಬಹುದು ಅಥವಾ ಇಂತಹ erotic ಲೈಂಗಿಕ ಶಿಲ್ಪಗಳ ಅರ್ಥ ಏನು ಎಂದೂ ತಲೆ ಕೆಡಿಸಿಕೊಳ್ಳಬಹುದು. ಗಂಭೀರವಾಗಿ ಅವಲೋಕಿಸಿದರೆ ಈ ದೇಶದ ಮೂಲ ಸಂಸ್ಕೃತಿ ಮತ್ತು ಮೂಲ ಧರ್ಮ ಇವುಗಳಲ್ಲಿದೆ.

ಪುರುಷ ತನ್ನ ಲಿಂಗವನ್ನು ಹಿಡಿದುಕೊಂಡಿರುವ ಮತ್ತು ಮಹಿಳೆ ಅದನ್ನು ಹೊತ್ತುಕೊಂಡಿರುವ ಒಂದು ಶಿಲ್ಪ, ಹಾಗೂ ಮಹಿಳೆ ತನ್ನ ಯೋನಿಯನ್ನು ಹಿಡಿದುಕೊಂಡಿರುವ ಮತ್ತೊಂದು ಶಿಲ್ಪ ಸೂಚಿಸುವುದು ದ್ರಾವಿಡ ಮತ್ತು ದ್ರಾವಿಡ ಪೂರ್ವ ಸಮುದಾಯಗಳ ಫಲವಂತಿಕೆಯ ಆಚರಣೆ (fertility cult) ಯನ್ನು ಜಗತ್ತಿನಲ್ಲಿ ಇಂದು ಇರುವ ವೈದಿಕ, ಇಸ್ಲಾಂ, ಪಾರ್ಸಿ, ಕ್ರೈಸ್ತ ಮೊದಲಾದ ಯಾವುದೇ ಮತಧರ್ಮ ಹುಟ್ಟುವುದಕ್ಕೆ ಮೊದಲು ವ್ಯಾಪಕವಾಗಿ ಇದ್ದ ಆಚರಣೆ ಇದು. ಭಾರತದ ಮಟ್ಟಿಗೆ ಆರ್ಯರು ಇಲ್ಲಿಗೆ ಕಾಲಿಡುವ ಮುನ್ನ ದ್ರಾವಿಡ ಸಮುದಾಯಗಳು ಎಲ್ಲೆಡೆ ಪಾಲಿಸುತ್ತಿದ್ದ “ಧರ್ಮ” ಇದು. ಇದೇ ಆಚರಣೆಗಳು ಮುಂದೆ ವ್ಯವಸ್ಥಿತ ರೂಪ ಪಡೆದು ತಾಂತ್ರಿಕ ಪಂಥದ ಏಳಿಗೆಗೆ ಅನುವು ಮಾಡಿಕೊಟ್ಟವು ಎಂದು ಮಾನವಶಾಸ್ತ್ರಜ್ಞರು, ಸಂಸ್ಕೃತಿ ಚಿಂತಕರು ಶೋಧಿಸಿದ್ದಾರೆ.

ಕರ್ನಾಟಕದಲ್ಲಿಯೇ ಅನೇಕ ಕಡೆಗಳಲ್ಲಿ ಲಜ್ಜಾ ಗೌರಿಯ ವಿಗ್ರಹಗಳು ದೊರೆತಿವೆ. ಲಜ್ಜಾಗೌರಿಯ ಮುಖವು ಅರಳಿದ ಕಮಲವನ್ನು ಹೊಂದಿದ್ದು ಯೋನಿ ಮೇಲ್ಮುಖವಾಗಿರುತ್ತದೆ. ಇದೂ ಸಹ ಫಲವಂತಿಕೆ ಪಂಥದ ಪೂಜಾ ಸಾಧನವೇ ಆಗಿದೆ. ಈ ಕೆತ್ತನೆಗಳಲ್ಲಿನ ಮೂಲ ತಿಳುವಳಿಕೆಯ ಸಾರ ಇಷ್ಟೇ. ಸಕಲ ಜೀವ ಜಂತುಗಳ ಸಂತಾನೋತ್ಪತ್ತಿಗೆ ಕಾರಣವಾಗುವ ಸ್ತ್ರೀ ಪುರುಷ ಜನನಾಂಗಗಳೇ ಪೂಜನೀಯವಾದವು. ಮುಂದೆ ಶೈವ ಪಂಥವು ಸ್ವೀಕರಿಸಿದ ಲಿಂಗವೂ ಸ್ತ್ರೀ-ಪುರುಷ ಸಮಾಗಮ ತತ್ವವನ್ನೇ ಸಾಂಕೇತಿಕಗೊಳಿಸಿಕೊಂಡದ್ದು. ಈ ಬಗ್ಗೆ ಸಂಸ್ಕೃತಿ ಚಿಂತಕರಾದ ಡಾ.ಲಕ್ಷ್ಮೀಪತಿ ಕೋಲಾರ ಅವರು, ಲಾಗಾಯ್ತಿನ ಲಿಂಗ ಪುರಾಣ ಲೇಖನದಲ್ಲಿ”ವೇದದಲ್ಲೆಲ್ಲೂ ‘ಶಿವ’ ಎಂಬ ಪದದ ಪ್ರಯೋಗವೂ ಆಗಿಲ್ಲ ಎಂಬುದನ್ನು ಶಂ.ಭಾ. ಜೋಶಿಯವರು ತಮ್ಮ ಶಿವ ರಹಸ್ಯ ದಲ್ಲಿ ದಾಖಲಿಸಿದ್ದಾರೆ. ವೈದಿಕ ಸಾಹಿತ್ಯದಲ್ಲಿ ಮೊದಲು ಶಿವ ಎಂಬ ನಾಮದ ಪ್ರಯೋಗವಾಗಿರುವುದು ಶ್ವೇತಾಶ್ವತೋಪನಿಷತ್ತಿನಲ್ಲೇ! ದ್ರಾವಿಡ ಭಾಷಾ ವಿಜ್ಞಾನಿಗಳು ಈಗಾಗಲೇ ದೃಢಪಡಿಸಿರುವಂತೆ ‘ಶಿವ’ ಮತ್ತು ‘ಲಿಂಗ’ ಶಬ್ದಗಳು ಸಂಸ್ಕೃತ ಭಾಷೆಯದ್ದಲ್ಲವೇ ಅಲ್ಲ…..” ಎನ್ನುತ್ತಾರೆ.

ಅಲ್ಲ ದ್ಚೈತ ಹಾಗೂ ಅದ್ವೈತ ಚಿಂತನೆಗಳ ಮೂಲವೂ ಸಹ ಈ ಸ್ತ್ರೀ ಪುರುಷ ಸಂಯೋಗದ ಫಲವಂತಿಕೆ ಪಂಥದಲ್ಲಿಯೇ ಇದ್ದವು ಎನ್ನಲಾಗುತ್ತದೆ. ಹೆಣ್ಣು ಗಂಡಿನ ಮಿಲನದ ಸರಳ ಸುಂದರ ಅದ್ವೈತ ತತ್ವವನ್ನು ಮುಂದೆ ಎಂಟನೇ ಶತಮಾನದಲ್ಲಿ ಜನವಿರೊಧಿ ಸಿದ್ಧಾಂತವಾಗಿಸಲಾಯಿತು ಎನ್ನಲಾಗುತ್ತದೆ. ಈ ಬಗ್ಗೆ ಲಕ್ಷ್ಮೀಪತಿ ಅವರು ಅದೇ ಲೇಖನದಲ್ಲಿ ಹೀಗ ಬರೆಯುತ್ತಾರೆ. “ಹೆಣ್ಣು- ಗಂಡುಗಳು ದ್ವೈತವಾಗಿದ್ದು, ಅವರ ಸಮಾಗಮದಿಂ ಸೃಷ್ಟಿಕ್ರಿಯೆ ನಡೆದು, ಅಲ್ಲಿ ಹುಟ್ಟುವ ಹೊಸ ಜೀವ ಅವರಿಂದ ಬೇರೆಯಲ್ಲವಾಗಿ ಅದು ಅದ್ವೈತ. ಇದು ಜೇನು ಕುರುಬರ ಅಣಪೆ ನೂರಾಳೊಡೆಯನ ಪರಿಕಲ್ಪನೆಯ ಹಿಂದಿರುವ ಆದಿಮವಾದ, ಸರಳ ಅದ್ವೈತ ತತ್ವ. ಜೇನು ಕುರುಬರಲ್ಲಿನ ಈ ಸೃಷ್ಟಿ ಕ್ರಿಯೆಯನ್ನಾಧರಿಸಿದ ಅದ್ವೈತ ತತ್ವವನ್ನೇ ವೈದಿಕ ಪೂರ್ವದ ಅಥವ ದ್ರಾವಿಡರ ತಂತ್ರ ಪಂಥವು ತಂತ್ರಾಕೃತಿಗಳ ಮೂಲಕವೇ ಹಿಡಿದಿಟ್ಟಿತು.

ಉದಾಹರಣೆಗೆ ಸರಳವಾಗಿ ಹೀಗೆ ವಿವರಿಸಬಹುದು

ಮೇಲ್ಮುಖವಾದ ತ್ರಿಕೋನವು ಪುರುಷ ಲಿಂಗದ ಸಂಕೇತವಾದರೆ ಕೆಳಮುಖವಾದ ತ್ರಿಕೋನವು ಸ್ತ್ರೀಲಿಂಗದ ಸಂಕೇತವೆಂದುಕೊಳ್ಳೋಣ. ಹೆಣ್ಣು ಗಂಡುಗಳು ಪ್ರತ್ಯೇಕವಾಗಿರುವವರೆಗೂ ಈ ತ್ರಿಕೋನಗಳು ಬೇರೆ ಬೇರೆಯೇ ಆಗಿ ದ್ವೈತವನ್ನು ಹೇಳುತ್ತವೆ. ಹೆಣ್ಣು- ಗಂಡುಗಳು ಸಮಾಗಮಗೊಂಡಾಗ ಎರಡು ತ್ರಿಕೋನಗಳೂ ಹೀಗ ಬೆಳೆದುಕೊಂಡು ಆರು ತ್ರಿಕೋನಗಳನ್ನು ಸೃಷ್ಟಿಸುತ್ತವೆ. ಈ ಹೊಸದಾದ ಆರು ತ್ರಿಕೋನಗಳೂ ಮೂಲದ ಹೆಣ್ಣು ಗಂಡುಗಳ ಎರಡು ತ್ರಿಕೋನಗಳಿಂದ ಹೊರತಾದುದಲ್ಲವಾದ್ದರಿಂದ ಅದು ಅದ್ವೈತವನ್ನು ಸಾರುತ್ತದೆ. ಮನುಷ್ಯ ಮೂರು ಸಂದರ್ಭಗಳಲ್ಲಿ ತುರಿಯಾವಸ್ಥೆಯನ್ನು (orgasm) ತಲುಪುತ್ತಾನೆಂದು ಶೈವ ತತ್ಬ ಹೇಳುತ್ತದೆ. ಅದು ಹೆಣ್ಣು ಗಂಡಿನ ಸಮಾಗಮ, ಸಂಗೀತ ಹಾಗೂ ನೃತ್ಯದ ತಲ್ಲೀನತೆಗಳಲ್ಲಿ. ಹಾಗಾಗಿ ಇದೇ ತಂತ್ರಾಕೃತಿಯನ್ನು
ಕೊಂಚ ಬದಲಿಸಿ ಢಮರುಗವನ್ನು ಸೃಷ್ಟಿಸಿ ಹೆಣ್ಣು ತ್ರಿಕೋನದಿಂದ ಶಕ್ತಿ ಮತ್ತು ಪುರುಷ ತ್ರಿಕೋನದಿಂದ ಶಿವನನ್ನು ಇರಿಸಿ ಶಿವ ಶಕ್ತಿಯರ ಸಮಾಗಮದಲ್ಲಿ ನಾದೋತ್ಪತ್ತಿಯ ತತ್ವವನ್ನು ವಿವರಿಸುತ್ತದೆ. ಇದು ದ್ರಾವಿಡ ಪೂರ್ವ ಬುಡಮಟ್ಟುಗಳ phallic cult ನಿಂದ ಎತ್ತಿ ವಿವರಿಸಿದ diagrammatic ಅದ್ವೈತವಾಗಿದೆ. ಈ ಮೂಲ ಅದ್ವೈತವನ್ನು ಸೃಷ್ಟಿಶೀಲ ನೆಲೆಯಿಂದ ಪಲ್ಲಟಗೊಳಿಸಿ ಪರ- ಬ್ರಹ್ಮ- ಆತ್ಮ- ಪರಮಾತ್ಮದ ವೈದಿಕೋಪನಿಷತ್ತಿನ ವಂಚ ಜಾಲದಲ್ಲಿ ಸಂಕೀರ್ಣಗೊಳಿಸಿ ಜನಸಾಮಾನ್ಯರಿಗೆ ಎಟುಕದಂತೆ ಜಟಿಲ ತತ್ವವನ್ನಾಗಿಸಿದ್ದೊಂದು ಪಿತೂರಿಯೂ ಆಗಿದೆ. ಈ ವಂಚಕ ಚರಿತ್ರೆಯ ವಿವರಣೆಯೂ ಮತ್ತೊಂದು ಅಧ್ಯಾಯವಾಗಬಲ್ಲದು” ಎನ್ನುತ್ತಾರೆ.

ಇಂದಿನ ಕಾಲದಲ್ಲಿ ಹಾಸ್ಯ ಎನಿಸುವ, ವಿಚಿತ್ರ ಎನಿಸುವ ಜನಪದರ ಎಷ್ಟೋ ಆಚರಣೆಗಳಲ್ಲಿ, ನಂಬಿಕೆಗಳಲ್ಲಿ ಇತಿಹಾಸದ ಸತ್ಯಗಳು ಹುದುಗಿ ಹೋಗಿರುತ್ತವೆ. ಅವುಗಳನ್ನು ಎತ್ತಿ ತೆಗೆದು ಜನರಿಗೆ ವಿವರಿಸುವ ಜರೂರು ಇಂದು ಎದುರಾಗಿದೆ.. ಬದುಕಿನ ಪ್ರತಿ ಕ್ಷಣವೂ ವೈದಿಕಗೊಳ್ಳುತ್ತಿರುವ ಕೇಡುಗಾಲದಲ್ಲಿರುವ ನಾವು ಸಂಸ್ಕೃತಿಯ ಮಹಾ ಮರೆವಿನಿಂದ ಹೊರಬರಲೇಬೇಕಾಗಿದೆ.

(ಲೇಖಕರು- ಹರ್ಷಕುಮಾರ್ ಕುಗ್ವೆ, ಪತ್ರಕರ್ತರು, ಉಡುಪಿ)

ನೆಲದನಿ

ಶಿವಮೊಗ್ಗ ಜಿಲ್ಲೆ – ನಮ್ಮ ಹೆಮ್ಮೆ : ಅಚ್ಚಕನ್ಯೆ ಜಲಪಾತ

Published

on

ತೀರ್ಥಹಳ್ಳಿ ಎಂದೊಡನೆ ನೆನಪಾಗುವುದು ಹಚ್ಚ ಹಸಿರ ಪ್ರಕೃತಿ. ಕಾಡಿನ ನಡುನಡುವೆ ಅಲ್ಲಲ್ಲಿ ತಲೆ ಎತ್ತಿ ನಿಂತಿರುವ ಅಡಕೆ ತೋಟಗಳು. ಮಾರಿಗೊಂದೊಂದು ಮನೆಗಳು. ಈ ಎಲ್ಲಾ ಸೌಂದರ್ಯಕ್ಕೆ ತನ್ನದೊಂದು ಕೊಡುಗೆಯಿರಲಿ ಎಂದು ನದಿ ಸೃಷ್ಟಿಸಿರುವ ಜಲಪಾತಗಳು. ಈ ಜಲಪಾತಗಳನ್ನು ನೋಡುವುದು, ಅವುಗಳಲ್ಲಿ ಆಟವಾಡುವುದು ಎಂದರೇ ಒಂದು ಆನಂದ. ಇಂತಹ ಜಲಪಾತಗಳಲ್ಲಿ ಒಂದು ತೀರ್ಥಹಳ್ಳಿ ತಾಲ್ಲೂಕಿನ ಅಚ್ಚಕನ್ಯೆ ಜಲಪಾತ.

ಪ್ರಥಮ ಬಾರಿಗೆ ಏಳು ಅಡಿ ಎತ್ತರದಿಂದ ಜಲಪಾತವಾಗಿ ಶರಾವತಿ ನದಿ ಧುಮುಕುತ್ತದೆ. ಇದೇ ಅಚ್ಚಕನ್ಯೆ ಜಲಪಾತ. ಶರಾವತಿ ಉದಯಿಸುವ ಅಂಬುತೀರ್ಥ ಅಚ್ಚಕನ್ನೆ ಜಲಪಾತದಿಂದ 05 ಕಿ.ಮೀ ದೂರದಲ್ಲಿದೆ.

ನೋಡಲು ನಯನ ಮನೋಹರವಾಗಿರುವ ಈ ಜಲಪಾತ, ಶಿವಮೊಗ್ಗ ಜಿಲ್ಲಾ ಕೇಂದ್ರದಿಂದ 82 ಕಿ.ಮೀ ಮತ್ತು ತೀರ್ಥಹಳ್ಳಿ ತಾಲ್ಲೂಕು ಕೇಂದ್ರದಿಂದ 21 ಕಿ.ಮೀ ದೂರದಲ್ಲಿದೆ. ತೀರ್ಥಹಳ್ಳಿಯಿಂದ ಹೊಸನಗರಕ್ಕೆ ಹೋಗುವ ಮಾರ್ಗದಲ್ಲಿ ಈ ಸ್ಥಳ ಸಿಗುತ್ತದೆ. ಸೆಪ್ಟೆಂಬರ್ ನಿಂದ ಡಿಸೆಂಬರ್ ವರೆಗಿನ ಅವಧಿ ಜಲಪಾತವನ್ನು ನೋಡಲು ಸೂಕ್ತ ಸಮಯ.

ಹೆಚ್ಚಿನ ಮಾಹಿತಿಗಾಗಿ

Achakanya Falls, Shimoga – A Hidden Beauty

ಪರಾಮರ್ಶನ

https://kanaja.karnataka.gov.in

ಕೃಪೆ | dipr shimoga

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ನೆಲದನಿ

ಶಿವಮೊಗ್ಗ ಜಿಲ್ಲೆ – ನಮ್ಮ ಹೆಮ್ಮೆ : ಮೈಸೂರು ಕಾಗದ ಕಾರ್ಖಾನೆ ನಿಯಮಿತ (ಎಂ.ಪಿ.ಎಂ)

Published

on

ಮೈಸೂರು ಸಂಸ್ಥಾನದ ಮಹಾರಾಜ ಶ್ರೀ ಕೃಷ್ಣರಾಜ ಒಡೆಯರ್ ಬಹದ್ದೂರ್ ರವರು ಮೈಸೂರು ಪೇಪರ್ ಮಿಲ್ಸ್ ಲಿಮಿಟೆಡ್ (ಎಮ್ ಪಿ ಎಮ್) ನ್ನು 1936 ರಲ್ಲಿ ಸ್ಥಾಪಿಸಿದರು. ಇದನ್ನು ಅಂದಿನ 1017ರ ಮೈಸೂರು ಕಂಪನಿಗಳ ಅಧಿನಿಯಮದ ನಿಯಮ 08ರ ಅಡಿಯಲ್ಲಿ 20 ಮೇ 1936 ರಂದು ರಿಜಿಸ್ಟಾರ್ ಮಾಡಲಾಯಿತು.

ಬಳಿಕ 1977ರಲ್ಲಿ ಸರ್ಕಾರಿ ಕಂಪನಿಯಾಗಿ ಬದಲಾಯಿತು. ಕಂಪನಿಯ ನೋಂದಾಯಿತ ಕಛೇರಿ ಬೆಂಗಳೂರಿನಲ್ಲಿದೆ ಮತ್ತು ಅದರ ಘಟಕ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿದೆ.

ಕರ್ನಾಟಕ ಸರ್ಕಾರ ಕಂಪನಿಯ 65% ಷೇರನ್ನು ಹೊಂದಿದೆ. ಐಡಿಬಿಐ ಮತ್ತು ಇತರೆ ಹಣಕಾಸು ಸಂಸ್ಥೆಗಳು 18% ಷೇರನ್ನು ಹೊಂದಿವೆ ಮತ್ತು 17%ರಷ್ಟು ಸಾರ್ವಜನಿಕರ ಷೇರುಗಳಿವೆ. 306 ಜನ ನೌಕರರು, 250 ಗುತ್ತಿಗೆದಾರರು ಸೇರಿದಂತೆ ಅನೇಕರು ಇತರೆ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. 266 ಎಕರೆ ವ್ಯಾಪ್ತಿಯಲ್ಲಿ ಈ ಉದ್ಯಮ ನಡೆಯುತ್ತಿದೆ.

75 ಸಾವಿರ ಎಕರೆ ಪ್ರದೇಶದಲ್ಲಿ ಅಕೇಶಿಯ, ನೀಲಗಿರಿ ಸೇರಿದಂತೆ ಇತರೆ ಮೆದು ಮರಗಳನ್ನು ಬೆಳೆಯಲಾಗುತ್ತಿದೆ ಮತ್ತು ಅವುಗಳನ್ನು ಕಂಪನಿಗೆ ಕಚ್ಚಾವಸ್ತುವನ್ನಾಗಿ ಬಳಸಿಕೊಳ್ಳಲಾಗುತ್ತಿದೆ.

ಬರವಣಿಗೆ ಮತ್ತು ಮುದ್ರಣಕ್ಕಾಗಿ ಕಾಗದ, ಡ್ರಾಯಿಂಗ್ ಹಾಳೆ ಸೇರಿದಂತೆ ಎಲ್ಲಾ ವಿಧದ ಕಾಗದಗಳನ್ನು, ಎಲ್ಲಾ ವಿಧದ ಗಾತ್ರಗಳಲ್ಲಿ ತಯಾರು ಮಾಡುತ್ತದೆ. ವಾರ್ಷಿಕ 88000 ಮೆಟ್ರಿಕ್ ಟನ್ ಕಾಗದಗಳನ್ನು ಉತ್ಪಾದನೆ ಮಾಡಲಾಗುತ್ತಿತ್ತು.

ಇದನ್ನೂ ಓದಿ |ನಮ್ಮ ಶಿವಮೊಗ್ಗ – ನಮ್ಮ ಹೆಮ್ಮೆ : ಕೊಡಚಾದ್ರಿ

ಲಾಭದಾಯಕವಾಗಿ ಕೆಲಸ ನಿರ್ವಹಿಸುತ್ತಿದ್ದ ಈ ಕಂಪನಿಯು ಹಲವಾರು ಕಾರಣಗಳಿಂದ ಬರು ಬರುತ್ತ ತನ್ನ ವ್ಯಾಪಾರ ವಹಿವಾಟುಗಳನ್ನು ಕಳೆದುಕೊಂಡು ಮುಚ್ಚುವ ಹಂತಕ್ಕೆ ತಲುಪಿ 2005ರಲ್ಲಿ ರಾಜ್ಯ ಸರ್ಕಾರ ಮುದ್ರಣ ಕಾಗದದ ಉತ್ಪಾದನೆಯನ್ನು ಸ್ಥಗಿತಗೊಳಿಸಿತು.

ಜಿಲ್ಲೆಯ ಕೈಗಾರಿಕಾ ನಕಾಶೆಯಲ್ಲಿ ಪ್ರಮುಖ ಸ್ಥಾನ ಪಡೆದಿದ್ದ ಭದ್ರಾವತಿಯ ಮೈಸೂರು ಕಾಗದ ಕಾರ್ಖಾನೆ ನಿಯಮಿತವು ಭದ್ರಾವತಿ ತಾಲ್ಲೂಕು ಕೇಂದ್ರದಿಂದ 03 ಕಿ.ಮೀ ಮತ್ತು ಶಿವಮೊಗ್ಗ ಜಿಲ್ಲಾ ಕೇಂದ್ರದಿಂದ 22 ಕಿ.ಮೀ ಅಂತರದಲ್ಲಿದೆ.

ಹೆಚ್ಚಿನ ಮಾಹಿತಿಗಾಗಿ

ಪರಾಮರ್ಶನ

https://mpm.karnataka.gov.in

ಕೃಪೆ : Dipr shimoga

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ನೆಲದನಿ

ನಮ್ಮ ಶಿವಮೊಗ್ಗ – ನಮ್ಮ ಹೆಮ್ಮೆ : ಕೊಡಚಾದ್ರಿ

Published

on

ಕೊಡಚಾದ್ರಿ ಬೆಟ್ಟ

ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಕಂಡು ಬರುವ ಗಿರಿ ಶಿಖರಗಳು ಚಾರಣ ಪ್ರಿಯರಿಗೆ ಹೇಳಿ ಮಾಡಿಸಿದ ತಾಣ. ಇಂತಹ ರಮಣೀಯ ಸ್ಥಳಗಳಲ್ಲಿ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಕೊಡಚಾದ್ರಿ ಬೆಟ್ಟವು ಕೂಡ ಒಂದು. ಕೊಡಚಾದ್ರಿ ಬೆಟ್ಟ ಚಾರಣ ಪ್ರಿಯರಿಗೆ ಬಹು ಪರಿಚಿತ ಸ್ಥಳ. ಇಲ್ಲಿ ಶಂಕರಾಚಾರ್ಯರು ತಪಸ್ಸು ಮಾಡಿದ ಬಗ್ಗೆ ಪ್ರತೀತಿ ಇದೆ.

ಇಲ್ಲಿರುವ ಸರ್ವಜ್ಞ ಪೀಠ ಶಂಕರಾಚಾರ್ಯರು ಪ್ರತಿಷ್ಠಾಪಿಸಿದ ಪೀಠ ಎನ್ನಲಾಗುತ್ತದೆ. ಈ ಬೆಟ್ಟದಿಂದ ಸೂರ್ಯೋದಯ ನೋಡುವುದೇ ಒಂದು ಅದ್ಭುತ ದೃಶ್ಯ. ಇಲ್ಲಿನ ಚಿತ್ರ ಮೂಲವೆಂಬ ಬೆಟ್ಟ ಕೂಡ ಚಾರಣ ಪ್ರಿಯರಿಗೆ ಹೇಳಿ ಮಾಡಿಸಿದ ಸ್ಥಳವಾಗಿದೆ. ಇದು ಆಯುರ್ವೇದ ಗಿಡಮೂಲಿಕೆಗಳ ಆಗರ. ಇಲ್ಲಿ ಹಲವು ಗುಹೆಗಳಿವೆ. ಅಲ್ಲದೇ ಇಲ್ಲಿನ ರಾಮತೀರ್ಥ ಎಂಬ ಸ್ಥಳದಲ್ಲಿ ಹರಿಯುವ ನೀರಿನ ಮಧ್ಯೆ ಈಶ್ವರಲಿಂಗದ ರಚನೆಯನ್ನು ಕಾಣಬಹುದು.

ಕೊಡಚಾದ್ರಿಗೆ ಪುರಾತನ ಕಾಲದಿಂದಲೂ ಜನರು ಯಾತ್ರೆ ಹೋಗುತ್ತಿದ್ದರು. ಇಲ್ಲಿಗೆ ಹತ್ತಿರದ ಸ್ಥಳವಾದ ನಿಲಸಕಲ್ಲು ಎಂಬಲ್ಲಿ ನವ ಶಿಲಾಯುಗದ ಕಾಲದ ನಿಲುವುಗಲ್ಲುಗಳ ಸಾಲುಗಳನ್ನು ಗಮನಿಸಿದರೆ, ಈ ಸುತ್ತಲಿನ ಪ್ರದೇಶದಲ್ಲಿ ಕನಿಷ್ಟ ಮೂರು ಸಾವಿರ ವರ್ಷಗಳ ಹಿಂದೆ ಜನ ವಸತಿ ಇದ್ದಿರಬೇಕು ಎಂದೆನಿಸುತ್ತದೆ.

ಕೊಡಚಾದ್ರಿಯಲ್ಲಿ ಪುರಾತನ ಜನವಸತಿ ಇದ್ದ ಕುರುಹುಗಳು ಇನ್ನೂ ಪತ್ತೆಯಾಗಿಲ್ಲವಾದರೂ, ಕ್ರಿ.ಶ ಏಳನೆಯ ಶತಮಾನದಲ್ಲಿ ಶಂಕರಾಚಾರ್ಯರು ಕೊಡಚಾದ್ರಿಗೆ ಬೇಟಿ ಕೊಟ್ಟಿದ್ದು, ಇಲ್ಲಿದ್ದ ಮೂಲ ಮೂಕಾಂಬಿಕೆಯನ್ನು ಪರ್ವತದ ತಳದಲ್ಲಿರುವ ಕೊಲ್ಲೂರಿನಲ್ಲಿ ಪ್ರತಿಷ್ಟೆ ಮಾಡಿದರು ಎಂದು ಕೊಲ್ಲೂರಿನ ಸ್ಥಳಪುರಾಣ ಹೇಳುತ್ತದೆ. ಶಿಖರದ ಹತ್ತಿರವಿರುವ ಮೂಲ ಮೂಕಾಂಬಿಕೆ ದೇವಾಲಯವೂ ಸಹ ಪುರಾತನವಾದುದ್ದು. ಈ ದೇವಾಲಯದ ಬಳಿ ಸುಮಾರು 40 ಅಡಿ ಎತ್ತರದ ಕಬ್ಬಿಣದ ಕಂಬವಿದ್ದು, ಇದನ್ನು ಮೂಕಾಸುರನನ್ನು ವಧಿಸಲು ದೇವಿ ಉಪಯೋಗಿಸಿದ ತ್ರಿಶೂಲ ಎಂದು ಸ್ಥಳೀಯರು ಹೇಳುತ್ತಾರೆ.

ಕೊಡಚಾದ್ರಿಯ ಸುತ್ತ ಮುತ್ತ ಇರುವುದು ಸಹ್ಯಾದ್ರಿಯ ನಿತ್ಯ ಹರಿದ್ವರ್ಣ ಕಾಡು. ಭಾರತದ ಅತಿ ಹೆಚ್ಚು ಮಳೆ ಬೀಳುವ ಈ ಪರ್ವತ ಶ್ರೇಣಿಯಲ್ಲಿ ಬೆಳೆದಿರುವ ಈ ಕಾಡುಗಳು ತನ್ನದೇ ಆದ ವಿಶಿಷ್ಟ ಶಕ್ತಿಯನ್ನು ಹೊಂದಿದೆ. ಕೊಡಚಾದ್ರಿಯ ತುದಿಯಲ್ಲಿ ನಿಂತು ನೋಡಿದರೆ ನಾಲ್ಕೂ ದಿಕ್ಕಿನಲ್ಲಿ ನಿಬಿಡಾರಣ್ಯವು ಅಲೆ ಅಲೆಯಂತೆ ಹರಡಿರುವ ದೃಶ್ಯ ಕಾಣುತ್ತದೆ.

ಇದೇ ನಾಡಿನಲ್ಲಿ ಹುಟ್ಟಿ ಬೆಳೆದ ರಾಷ್ಟ್ರಕವಿ ಕುವೆಂಪುರವರ ಕವಿತೆಯ ಒಂದು ಸಾಲಾಗಿರುವ “ಹಸುರಿತ್ತಲ್, ಹಸುರತ್ತಲ್, ಹಸುರೆತ್ತಲ್ ಕಡಲಿನಲಿ” ಎನ್ನುವ ಸಾಲು ನೆನಪಾಗುವಂತಹ ತಾಣ ಕೊಡಚಾದ್ರಿ. ಅಲ್ಲದೇ ಇಲ್ಲಿಯ ಸೂರ್ಯಾಸ್ತ ಅಪರೂಪದ ದೃಶ್ಯವಾಗಿದ್ದು, ಈ ರಮ್ಯ ಮನೋಹರ ದೃಶ್ಯವನ್ನು ಆಸ್ವಾದಿಸಲು ದೇಶದ ಎಲ್ಲಾ ಕಡೆಗಳಿಂದಲೂ ಜನರು ಬರುತ್ತಾರೆ.

ಇದು ಹೊಸನಗರ ತಾಲ್ಲೂಕು ಕೇಂದ್ರದಿಂದ 30 ಕಿ.ಮೀ ಮತ್ತು ಶಿವಮೊಗ್ಗ ಜಿಲ್ಲಾ ಕೇಂದ್ರದಿಂದ ಸುಮಾರು 100 ಕಿ.ಮೀ ಅಂತರದಲ್ಲಿದೆ.

ಹೆಚ್ಚಿನ ಮಾಹಿತಿಗಾಗಿ

ಪರಾಮರ್ಶನ

https://kn.wikipedia.org

ಕೃಪೆ : dipr shimoga

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ಲೈಫ್ ಸ್ಟೈಲ್2 hours ago

ಗರ್ಭಾವಸ್ಥೆಯಲ್ಲಿ ಸ್ಟ್ರೆಚ್ ಮಾರ್ಕ್ಸ್ ಅನ್ನು ತಡೆಯುವುದು ಹೇಗೆ..!?

ಡಾ. ಟೀನಾ ಥಾಮಸ್,ಎಂಬಿಬಿಎಸ್, ಎಂಆರ್‌ಸಿಒಜಿ, ಪಿಜಿಡಿಎಫ್‌ಎಂ,ಸೀನಿಯರ್ ಕನ್ಸಲ್ಟೆಂಟ್ ಪ್ರಸೂತಿ ಮತ್ತು ಸ್ತ್ರೀರೋಗ ಶಾಸ್ತ್ರ,ಅಪೊಲೊ ಕ್ರೆಡಲ್ ಮತ್ತು ಮಕ್ಕಳ ಆಸ್ಪತ್ರೆ, ಬ್ರೂಕ್‌ಫೀಲ್ಡ್,ಬೆಂಗಳೂರು ಸ್ಟ್ರೆಚ್ ಮಾರ್ಕ್ಸ್ ಚರ್ಮದ ಮೇಲೆ ಒಂದು...

ದಿನದ ಸುದ್ದಿ2 hours ago

1ಸಾವಿರ ಆಕ್ಸಿಜನ್ ಬೆಡ್ ತಾತ್ಕಾಲಿಕ ಆಸ್ಪತ್ರೆಗೆ ವಿದ್ಯುತ್ ಪೂರೈಕೆಗೆ ಜಿಲ್ಲಾ ಉಸ್ತುವಾರಿ ಸಚಿವ ಆನಂದಸಿಂಗ್ ಅವರಿಂದ ಚಾಲನೆ

ಸುದ್ದಿದಿನ,ಬಳ್ಳಾರಿ : ಜಿಂದಾಲ್ ಎದುರುಗಡೆ ನಿರ್ಮಿಸಲಾಗಿರುವ 1ಸಾವಿರ ಆಕ್ಸಿಜನ್ ಬೆಡ್ ಗಳ ತಾತ್ಕಾಲಿಕ ಆಸ್ಪತ್ರೆಗೆ ನಿರಂತರ ವಿದ್ಯುತ್ ಪೂರೈಕೆಗೆ ಮೂಲಸೌಕರ್ಯ ಅಭಿವೃದ್ಧಿ, ಹಜ್ ಮತ್ತು ವಕ್ಫ್ ಹಾಗೂ...

ದಿನದ ಸುದ್ದಿ3 hours ago

ಕುವೈತ್ ರಾಷ್ಟ್ರದಿಂದ 75 ಮೆಟ್ರಿಕ್ ಟನ್ ಆಕ್ಸಿಜನ್ ಪೂರೈಕೆ ; ಸಮರ್ಪಕ ವಿತರಣೆಗೆ ಕ್ರಮ ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ಸುದ್ದಿದಿನ,ಧಾರವಾಡ: ಭಾರತ ಸರ್ಕಾರದ ವಿದೇಶಾಂಗ ಮಂತ್ರಾಲಯ ಮತ್ತು ವಾಣಿಜ್ಯ ಮಂತ್ರಾಲಯದಿಂದ ಬೇರೆ ಬೇರೆ ರಾಷ್ಟ್ರಗಳ ಜೊತೆ ಭಾರತದ ಉತ್ತಮ ಸಂಬಂಧ ಹೊಂದಿರುವದರಿಂದ ಮತ್ತು ಜಾಗತೀಕ ಟೆಂಡರ ಮೂಲಕ...

ದಿನದ ಸುದ್ದಿ3 hours ago

ನವಿಲೇಹಾಳ್ ಗ್ರಾಮಪಂಚಾಯತಿ ಸಭಾಂಗಣದಲ್ಲಿ ಕೊರೋನ ನಿರ್ವಹಣಾ ಪಡೆ ಸಭೆ ; ಜನ ಜಾಗೃತಿ

ಸುದ್ದಿದಿನ, ದಾವಣಗೆರೆ-ಚನ್ನಗಿರಿ : ಕೊರೋನಾ ಪಾಸಿಟಿವ್ ಪ್ರಕರಣಗಳು ಗ್ರಾಮಗಳಲ್ಲಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ನವಿಲೆಹಾಳ್ ಗ್ರಾಮಪಂಚಾಯತಿ ಸಭಾಂಗಣದಲ್ಲಿ ಕೊರೋನ ನಿರ್ವಹಣಾ ಪಡೆ ಸಭೆ ನೆಡೆಸಲಾಯಿತು. ಪಂಚಾಯತಿ ವ್ಯಾಪ್ತಿಯ...

ನೆಲದನಿ8 hours ago

ಶಿವಮೊಗ್ಗ ಜಿಲ್ಲೆ – ನಮ್ಮ ಹೆಮ್ಮೆ : ಅಚ್ಚಕನ್ಯೆ ಜಲಪಾತ

ತೀರ್ಥಹಳ್ಳಿ ಎಂದೊಡನೆ ನೆನಪಾಗುವುದು ಹಚ್ಚ ಹಸಿರ ಪ್ರಕೃತಿ. ಕಾಡಿನ ನಡುನಡುವೆ ಅಲ್ಲಲ್ಲಿ ತಲೆ ಎತ್ತಿ ನಿಂತಿರುವ ಅಡಕೆ ತೋಟಗಳು. ಮಾರಿಗೊಂದೊಂದು ಮನೆಗಳು. ಈ ಎಲ್ಲಾ ಸೌಂದರ್ಯಕ್ಕೆ ತನ್ನದೊಂದು...

ದಿನದ ಸುದ್ದಿ9 hours ago

ತೌಕ್ತೆ ಚಂಡಮಾರುತ : ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ

ಸುದ್ದಿದಿನ ಡೆಸ್ಕ್ : ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ತೌಕ್ತೆ ಚಂಡಮಾರುತ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕರ್ನಾಟಕದ ಕರಾವಳಿ ಜಿಲ್ಲೆಗಳು ಸೇರಿದಂತೆ ಕೇರಳ, ಮಹಾರಾಷ್ಟ್ರ, ಗುಜರಾತ್ ರಾಜ್ಯಗಳಲ್ಲಿ ಭಾರಿ...

ನಿತ್ಯ ಭವಿಷ್ಯ12 hours ago

ನಿಮ್ಮ ಜನ್ಮಕುಂಡಲಿಯಲ್ಲಿ ಮನೆ ,ಆಸ್ತಿ ಖರೀದಿಸುವ ಯೋಗಫಲ 

  ಸೋಮಶೇಖರ್B.Sc ಜಾತಕ ಬರೆಯುವುದು, ಜಾತಕ ವಿಶ್ಲೇಷಣೆಗಾರರು, ರಾಶಿ ಹರಳು ತಿಳಿಸುವುದು. ವಂಶಪಾರಂಪರಿಕ ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ, ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು. Mob.9353488403 ಕೆಲವರು ರಾತ್ರಿ-ಹಗಲು ಕಷ್ಟಪಟ್ಟು ದುಡಿದರೂ...

ನಿತ್ಯ ಭವಿಷ್ಯ12 hours ago

ಈ ರಾಶಿಯವರಿಗೆ ಸಂಗಾತಿಯ ಭಾವನೆಗಳಲ್ಲಿ ವ್ಯತ್ಯಾಸ..! ವ್ಯಾಪಾರದಲ್ಲಿ ಸಮೃದ್ಧಿ..! ಸೋಮವಾರ ರಾಶಿ ಭವಿಷ್ಯ-ಮೇ-17,2021

ಸೂರ್ಯೋದಯ: 05:52 AM, ಸೂರ್ಯಸ್ತ : 06:36 P ಸ್ವಸ್ತಿ ಶ್ರೀ ಮನೃಪ ಶಾಲಿವಾಹನ ಶಕೆ1943, ಸಂವತ್2077, ಪ್ಲವ ನಾಮ ಸಂವತ್ಸರ ವೈಶಾಖ ಮಾಸ, ವಸಂತ ಋತು,...

ದಿನದ ಸುದ್ದಿ23 hours ago

ಚಿತ್ರದುರ್ಗ | ಜಿಲ್ಲೆಯಲ್ಲಿ 640 ಜನರಿಗೆ ಕೊರೋನಾ ಪಾಸಿಟಿವ್ : 141 ಮಂದಿ ಬಿಡುಗಡೆ

ಸುದ್ದಿದಿನ,ಚಿತ್ರದುರ್ಗ : ಚಿತ್ರದುರ್ಗ ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ಗೆ ಸಂಬಂಧಿಸಿದಂತೆ ಭಾನುವಾರದ ವರದಿಯಲ್ಲಿ 640 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 20,730 ಕ್ಕೆ...

ನೆಲದನಿ1 day ago

ಶಿವಮೊಗ್ಗ ಜಿಲ್ಲೆ – ನಮ್ಮ ಹೆಮ್ಮೆ : ಮೈಸೂರು ಕಾಗದ ಕಾರ್ಖಾನೆ ನಿಯಮಿತ (ಎಂ.ಪಿ.ಎಂ)

ಮೈಸೂರು ಸಂಸ್ಥಾನದ ಮಹಾರಾಜ ಶ್ರೀ ಕೃಷ್ಣರಾಜ ಒಡೆಯರ್ ಬಹದ್ದೂರ್ ರವರು ಮೈಸೂರು ಪೇಪರ್ ಮಿಲ್ಸ್ ಲಿಮಿಟೆಡ್ (ಎಮ್ ಪಿ ಎಮ್) ನ್ನು 1936 ರಲ್ಲಿ ಸ್ಥಾಪಿಸಿದರು. ಇದನ್ನು...

Trending