ದಿನದ ಸುದ್ದಿ
ಹದಡಿ ಕೆರೆ ಏರಿ ದುರಸ್ತಿಗೆ 1.70 ಕೋಟಿ ಮಂಜೂರು : ಸಚಿವ ಬೈರತಿ ಬಸವರಾಜ್
ಸುದ್ದಿದಿನ,ದಾವಣಗೆರೆ : ದಾವಣಗೆರೆ ಚನ್ನಗಿರಿ (Davangere – Channagiri) ಸಂಪರ್ಕಿಸುವ ರಾಜ್ಯ ಹೆದ್ದಾರಿ (Highway) ಪಕ್ಕದ ಹದಡಿ ಕೆರೆಯ (HadadiLake) ಏರಿ ಒಂದು ಭಾಗದಲ್ಲಿ ಸತತ ಕುಸಿತಕ್ಕೊಳಗಾಗುತ್ತಿದ್ದು ಶಾಶ್ವತ ದುರಸ್ತಿಗೆ ಸರ್ಕಾರ 1.70 ಕೋಟಿ ( 1.70 crore ) ಮಂಜೂರು ಮಾಡಿದೆ ಎಂದು ನಗರಾಭಿವೃದ್ದಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ ಎ ಬಸವರಾಜು ( Minister B.A. Basavaraju ) ಹೇಳಿದರು.
ಕೆರೆ ಏರಿಯ ಕುಸಿತದ ಭಾಗ ಪರಿಶೀಲಿಸಿದ ಅವರು ಪತ್ರಕರ್ತ ರೊಂದಿಗೆ ಮಾತನಾಡಿ ಮಳೆ ಮುಗಿದ ತಕ್ಷಣ ಕಾಮಗಾರಿ ಆರಂಭಿಸಿ ಶೀಘ್ರದಲ್ಲಿ ಕಾಮಗಾರಿ ಮುಗಿಸಲಾಗುವುದು ಹಾಗೂ ಕಾಮಗಾರಿ ಮುಗಿಯುವವರೆಗೆ ಭಾರಿ ವಾಹನಗಳು ಈ ರಸ್ತೆಯಲ್ಲಿ ಸಂಚರಿಸದಂತೆ ನೋಡಿಕೊಳ್ಳಲು ಜಿಲ್ಲಾಧಿಕಾರಿ ಹಾಗೂ ಎಸ್.ಪಿ.ಅವರಿಗೆ ಸೂಚಿಸಲಾಗಿದೆ ಎಂದರು.
ರೈತರು ಹಾಗೂ ಸ್ಥಳೀಯ ಗ್ರಾಮಸ್ಥರು ರಸ್ತೆ ಪಕ್ಕ ತಡೆಗೋಡೆ ನಿರ್ಮಿಸುವಂತೆ ಕೇಳುತಿದ್ದಾರೆ, ಈ ಬಗೆಗೆ ಶೀಘ್ರದಲ್ಲಿ ಅಧಿಕಾರಿಗಳು ಇಂಜಿನಿಯರ್ ಗಳ ಸಭೆ ನಡೆಸಿ ಸಾಧ್ಯಾಸಾಧ್ಯತೆಗಳ ಪರಿಶೀಲಿಸಲಾಗುವುದು ಎಂದರು.
ಮಳೆ ಹಾನಿ ತುರ್ತು ಕಾರ್ಯಗಳಿಗೆ ಸರ್ಕಾರ ಜಿಲ್ಲೆಗೆ 15 ಕೋಟಿ ರೂಗಳನ್ನು ನೀಡಿದೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ, ಜಿ.ಪಂ.ಸಿಇಓ ಡಾ.ಚೆನ್ನಪ್ಪ, ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್, ಅಡಿಷನ್ ಎಸ್.ಪಿ ರಾಮಗೊಂಡ ಬಸರಗಿ, ಮಹಾನಗರ ಪಾಲಿಕೆ ಆಯುಕ್ತ ವಿಶ್ವನಾಥ್ ಮುದಜ್ಜಿ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243