ದಿನದ ಸುದ್ದಿ
ಪ್ರವೀಣ್ ಕುಟುಂಬಕ್ಕೆ 1 ಲಕ್ಷ ರೂ. ನೀಡುತ್ತೇನೆ: ರೇಣುಕಾಚಾರ್ಯ
ಸುದ್ದಿದಿನ,ದಾವಣಗೆರೆ: ದಕ್ಷಿಣ ಕನ್ನಡ ಜಿಲ್ಲೆ ಸುಳ್ಯದ ಬಿಜೆಪಿ ಪಕ್ಷದ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ವೈಯಕ್ತಿಕವಾಗಿ 1ಲಕ್ಷ ರೂಪಾಯ ಧನಸಹಾಯ ನೀಡುತ್ತೇನೆ ಎಂದು ಹೊನ್ನಾಳಿ ಶಾಸಕ ಹೇಳಿದ್ದಾರೆ.
ನಾವು ಎಷ್ಟು ಕೋಟಿ ಕೊಟ್ಟರೂ ಪ್ರವೀಣ್ ಅವರ ಜೀವವನ್ನು ವಾಪಾಸ್ ತರಲು ಸಾಧ್ಯವಿಲ್ಲ ಎನ್ನುವುದು ಗೊತ್ತಿರುವ ವಿಚಾರ. ಆದರೆ ಪ್ರವೀಣ್ ಅವರ ಕುಟುಂಬದ ದುಃಖದಲ್ಲಿ ಭಾಗಿಯಾಗುವುದು ನಮ್ಮೆಲ್ಲರ ಕರ್ತವ್ಯ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಪ್ರವೀಣ್ ಅವರ ಬರ್ಬರ ಹತ್ಯೆ ಮಾಡಿರುವ ದುಷ್ಕರ್ಮಿಗಳನ್ನು ನಡುರಸ್ತೆಯಲ್ಲಿ ಎನ್ಕೌಂಟರ್ ಮಾಡಬೇಕು. ಹಿಂದೂ ಕಾರ್ಯಕರ್ತರ ಹತ್ಯೆಗಳು ಇಲ್ಲಿಗೆ ಕೊನೆಯಾಗಬೇಕು, ದುಷ್ಕರ್ಮಿಗಳು ಭಯ ಬೀಳುವ ರೀತಿಯಲ್ಲಿ ಕಠಿಣ ಶಿಕ್ಷೆ ನೀಡಬೇಕೆಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಲ್ಲಿ ಮನವಿ ಮಾಡುತ್ತೇನೆ ಎಂದಿದ್ದಾರೆ.
ಪ್ರವೀಣ್ ರ ಆತ್ಮಕ್ಕೆ ಶಾಂತಿ ಸಿಗಲಿ, ಈ ನೋವನ್ನು ಭರಿಸುವ ಶಕ್ತಿಯನ್ನು ದೇವರು ಅವರ ಕುಟುಂಬಕ್ಕೆ ಕರುಣಿಸಲಿ ಎಂದು ಪ್ರಾರ್ಥಿಸುವುದಾಗಿ ರೇಣುಕಾಚಾರ್ಯ ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243