ದಿನದ ಸುದ್ದಿ

ಸರ್ಕಾರಿ ಆಸ್ಪತ್ರೆಯಲ್ಲಿ ಶೇ.100ರಷ್ಟು ಉಚಿತ ಹೆರಿಗೆ ಮಾಡಿಸಿ : ಸುಭೋದ್ ಯಾದವ್

Published

on

ಸುದ್ದಿದಿನ,ರಾಯಚೂರು : ಹೆರಿಗೆಗೆ ಖಾಸಗಿ ಆಸ್ಪತ್ರೆಗಳನ್ನು ಅವಲಂಬಿಸದೇ ಸರ್ಕಾರಿ ಆಸ್ಪತ್ರೆಯಲ್ಲಿ ಶೇ.100 ರಷ್ಟು ಉಚಿತ ಮತ್ತು ಸುರಕ್ಷಿತ ಹೆರಿಗೆ ಮಾಡಿಸಿಕೊಳ್ಳಿ. ಮನೆಯ ಹೆರಿಗೆ ಸುರಕ್ಷಿತವಲ್ಲ ಹೆರಿಗೆ ಸಂದರ್ಭದಲ್ಲಿ ಮೂಢನಂಬಿಕೆಗಳಿಗೆ ಮಾರುಹೋಗದೇ ಸುಲಲಿತ ಸುರಕ್ಷಿತ ಹೆರಿಗೆಗೆ ಆಸ್ಪತ್ರೆಗಳನ್ನೇ ಅವಲಂಬಿಸುವಂತೆ ನೋಡಿಕೊಳ್ಳಬೇಕೆಂದು ಭಾರತ ಸರ್ಕಾರದ ಜಲ ಶಕ್ತಿ ಸಚಿವಾಲಯದ ಜಂಟಿ ಕಾರ್ಯದರ್ಶಿಗಳಾದ ಸುಭೋದ್ ಯಾದವ್ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅವರು ಏ.19ರ ಮಂಗಳವಾರ ದಂದು ನಗರದ ಕೃಷಿ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಮಹಾತ್ವಕಾಂಕ್ಷೆ ಜಿಲ್ಲೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.

ಜಿಲ್ಲೆಯಲ್ಲಿ ನೀರಾವರಿ ಹೆಚ್ಚಿಗೆ ಆದರೆ ರೈತರಿಗೆ ಅನುಕೂಲವಾಗುತ್ತದೆ. ಇದರಿಂದಾಗಿ ಗುಳೆ ಹೋಗುವುದು ಕೂಡ ತಪ್ಪಿಸಬಹುದು. ಹೀಗಾಗಿ ನೀರಾವರಿಗೆ ಹೆಚ್ಚಿನ ಆಧ್ಯತ ನೀಡುವಂತೆ ಸಂಬAಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನೀತಿ ಆಯೋಗದಿಂದ ಗುರುತಿಸಲಾಗಿರುವ ದೇಶದ 112ಜಿಲ್ಲೆಗಳಲ್ಲಿ ರಾಯಚೂರು ಜಿಲ್ಲೆಯು ಕೂಡ ಒಂದು ಮಹಾತ್ವಾಕಾಂಕ್ಷಿ ಜಿಲ್ಲೆಯಾಗಿದ್ದು, ಈ ಒಂದು ಜಿಲ್ಲೆಯಲ್ಲಿ ಆರೋಗ್ಯ, ಶಿಕ್ಷಣ, ಕೃಷಿ, ಕೌಶಲ್ಯಾಭಿವೃದ್ಧಿ ಮತ್ತು ಮೂಲಭೂತ ಸೌಕರ್ಯ ಕ್ಷೇತ್ರಗಳಲ್ಲಿ ಅಭಿವೃದ್ಧಿ ಹೊಂದಲು 2018ರಿಂದ ಮಹಾತ್ವಕಾಂಕ್ಷಿ ಜಿಲ್ಲೆ ಕಾರ್ಯಕ್ರಮವನ್ನು ಕೇಂದ್ರ ಸರ್ಕಾರದ ನೀತಿ ಆಯೋಗದ ಅಡಿಯಲ್ಲಿ ಜಾರಿಗೆ ತರಲಾಗಿದೆ ಎಂದರು.

ಜಿಲ್ಲೆಯ ಮಾನವಿ ಮತ್ತು ಸಿಂಧನೂರು ತಾಲ್ಲೂಕುಗಳಲ್ಲಿ ಪ್ರವಾಸವನ್ನು ಕೈಗೊಂಡು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಂಗನವಾಡಿ ಕೇಂದ್ರಗಳು, ಕೃಷಿ ಇಲಾಖೆಯ ಸಮಗ್ರ ಕೃಷಿ ಪದ್ಧತಿ ಕುರ್ಡಿ ಕ್ರಾಸ್ ಮತ್ತು ರೈತ ಸಂಪರ್ಕ ಕೇಂದ್ರ ಹಿರೇಕೊಟ್ನೆಕಲ್, ತೋಟಗಾರಿಕೆ ಇಲಾಖೆಯ ಹನಿ ನೀರಾವರಿ ಪದ್ದತಿ ಸೀಕಲ್ ಕ್ರಾಸ್ ಮಾನವಿ, ಶಿಕ್ಷಣ ಇಲಾಖೆಯ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆ ನೀರಮಾನವಿ, ಪ್ರಧಾನಮಂತ್ರಿ ಅವಾಸ್ ಯೋಜನೆ, ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮತ್ತು ಕೌಶಲ್ಯಾಭಿವೃದ್ಧಿ ಕೇಂದ್ರಗಳಿಗೆ ಭೇಟಿ ನೀಡಿ ಈ ಯೋಜನೆಗಳಲ್ಲಿನ ಫಲಾನುಭವಿಗಳೊಂದಿಗೆ ಸಂವಾದವನ್ನು ನಡೆಸಿದರು.

ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ.ಅವಿನಾಶ್ ರಾಜೇಂದ್ರ ಮೆನನ್, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನೂರ್ ಜಹರಾ ಖಾನಂ, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಮಡೋಳಪ್ಪ, ಕೃಷಿ ಇಲಾಖೆ ಜಂಟಿ ನಿರ್ದೇಶಕಿ ದೇವಿಕ ಆರ್., ಕೃಷಿ ಉಪ ನಿರ್ದೇಶಕ ನಯೀಮ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ.ರಾಮಕೃಷ್ಣ, ಪಶು ಸಂಗೋಪನ ಇಲಾಖೆ ಉಪ ನಿರ್ದೇಶಕ ಶಿವಣ್ಣ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕ ವೀರನಗೌಡ, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳು ರಾಜೇಶ್ ಬಾವಗಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿ ಮೇನಕ ಪಾಟೀಲ್, ತೋಟಗಾರಿಕ ಇಲಾಖೆ ಉಪ ನಿರ್ದೇಶಕ ಮಹ್ಮದ್ ಅಲಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ವೃಷಬೇಂದ್ರಯ್ಯ ಸ್ವಾಮಿ, ಜಿಲ್ಲಾ ಮಹತ್ವಾಕಾಂಕ್ಷಿ ಸಂಯೋಜಕ ಮಹಮ್ಮದ್ ಯೂಸುಫ್ ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾಗಳು ಭಾಗಿಯಾಗಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version