ದಿನದ ಸುದ್ದಿ

ಆ್ಯಂಟಿಬಯೋಟಿಕ್ ಇಂಜೆಕ್ಷನ್‌’ನಿಂದ 14 ಮಕ್ಕಳು ಅಸ್ವಸ್ಥ: ಪೋಷಕರ ಆಕ್ರೋಶ

Published

on

ಸುದ್ದಿದಿನ,ಶಿವಮೊಗ್ಗ: ಆ್ಯಂಟಿಬಯೋಟಿಕ್ ಇಂಜೆಕ್ಷನ್‌ ನಿಂದ 14 ಮಕ್ಕಳು ಅಸ್ವಸ್ಥಗೊಂಡಿರುವ ಘಟನೆ ಜಿಲ್ಲೆಯ ಸಾಗರ ತಾಲೂಕಿನಲ್ಲಿ ನಡೆದಿದೆ.

ಜ್ವರ ಇನ್ನೀತರ ಕಾಯಿಲೆಯಿಂದ ಬಳಲುತ್ತಿದ್ದ ಮಕ್ಕಳನ್ನು ಚಿಕಿತ್ಸೆಗಾಗಿ ಸಾಗರ ಸರ್ಕಾರಿ ಆಸ್ಪತ್ರೆಗೆ ಪೋಷಕರು ದಾಖಲು ಮಾಡಿದ್ದರು. ಚಿಕಿತ್ಸಾ ಸಂದರ್ಭದಲ್ಲಿ ಆ್ಯಂಟಿಬಯೋಟಿಕ್ ಇಂಜೆಕ್ಷನ್‌ ನೀಡಿದ ತಕ್ಷಣ ಮಕ್ಕಳು ಅಸ್ವಸ್ಥಗೊಂಡಿದ್ದಾರೆ. ಅದೃಷ್ಟವಶಾತ್ ಎಲ್ಲಾ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

ವೈದ್ಯರ ನಿರ್ಲಕ್ಷ್ಯದಿಂದ ನಮ್ಮ ಮಕ್ಕಳಿಗೆ ತೊಂದರೆಯಾಯಿತು ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version