ದಿನದ ಸುದ್ದಿ

ಪ್ರಸಕ್ತ ವರ್ಷ 14 ಲಕ್ಷದ 10 ಸಾವಿರ ಕೋಟಿ ರೂಪಾಯಿ ನೇರ ತೆರಿಗೆ ಸಂಗ್ರಹ : ಕೇಂದ್ರ ಸರ್ಕಾರ

Published

on

ಸುದ್ದಿದಿನ ಡೆಸ್ಕ್ : ಪ್ರಸಕ್ತ ವರ್ಷ 14 ಲಕ್ಷದ 10 ಸಾವಿರ ಕೋಟಿ ರೂಪಾಯಿ ನೇರ ತೆರಿಗೆ ಸಂಗ್ರಹಿಸಲಾಗಿದೆ ಎಂದು ಕೇಂದ್ರ ತಿಳಿಸಿದೆ.

ದೆಹಲಿಯಲ್ಲಿ ಬುಧವಾರ ಅಸೋಚಾಮ್ ಒಕ್ಕೂಟ ಆಯೋಜಿಸಿದ್ದ ಮೂಲದಲ್ಲಿ ತೆರಿಗೆ ಕಡಿತ – ಟಿಡಿಎಸ್ ಕುರಿತ ವಿಚಾರ ಸಂಕಿರಣದಲ್ಲಿ ಮಾತನಾಡಿದ ಕೇಂದ್ರೀಯ ನೇರ ತೆರಿಗೆ ಮಂಡಳಿ – ಸಿಬಿಡಿಟಿ ಜಂಟಿ ಕಾರ್ಯದರ್ಶಿ ಕಮಲೇಶ್ ಸಿ. ವರ್ಷ್ಣೆ, ತೆರಿಗೆ ಪಾವತಿ ಮಾಡುವ ಮೂಲಕ ನಾಗರಿಕರು ದೇಶದ ಅಭಿವೃದ್ಧಿ ಪಥದಲ್ಲಿ ಪಾಲುದಾರರಾಗಿದ್ದಾರೆ ಎಂದರು.

ಮೂಲಸೌಕರ್ಯ ನಿರ್ಮಾಣ, ಉದ್ಯೋಗ ಸೃಷ್ಟಿ ಸೇರಿದಂತೆ ಒಟ್ಟಾರೆ ಸಮಗ್ರ ಅಭಿವೃದ್ಧಿಯಲ್ಲಿ ತೆರಿಗೆ ಸಂಗ್ರಹ ಮಹತ್ವದ ಪಾತ್ರ ವಹಿಸುತ್ತದೆ ಎಂದು ಅವರು ತಿಳಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version