ದಿನದ ಸುದ್ದಿ

ಆಸ್ಪತ್ರೆಯಲ್ಲಿ ಅಗ್ನಿಅವಘಡ : 16 ಕೊರೋನಾ ಸೋಂಕಿತರು ಸಜೀವ ದಹನ

Published

on

ಸುದ್ದಿದಿನ,ಗಾಂಧಿನಗರ: ಗುಜರಾತ್ ನ ಭಾರುಚ್ ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಸಂಭವಿಸಿದ್ದು ಘಟನೆಯಲ್ಲಿ ಸುಮಾರು 16 ಮಂದಿ ಕೊರೊನಾ ಸೋಂಕಿತರು ಸಜೀವ ದಹನವಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ. ಮೋಧ್ಯ ತಿಳಿಸಿದ್ದಾರೆ.

ಅಗ್ನಿ ಅವಘಢ ಹಾಗೂ ಹೊಗೆ ತುಂಬಿಕೊಂಡಿದ್ದರಿಂದ ಸೋಂಕಿತರು ಆಸ್ಪತ್ರೆಯ ಒಳಗಡೆಯೇ ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎಂದು ಎಸ್‌ಪಿ ರಾಜೇಂದ್ರ ಸಿನ್ಹಾ ಅವರು ತಿಳಿಸಿದ್ದಾರೆ.

ಇದು ನಾಲ್ಕು ಮಹಡಿಯ ಆಸ್ಪತ್ರೆಯಾಗಿದ್ದು, ಸುಮಾರು 70 ಪಡೆಯುತ್ತಿದ್ದರು. ಅಗ್ನಿ ಅವಘಡದ ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ದಳದ ಸಿಬ್ಬಂದಿಗಳು ಕೂಡಲೇ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಅಷ್ಟೇ ಅಲ್ಲದೆ ಆಸ್ಪತ್ರೆಯ ಒಳಗಡೆ ಸಿಕ್ಕಿಹಾಕಿಕೊಂಡಿದ್ದ ರೋಗಿಗಳನ್ನು ಕೂಡ ರಕ್ಷಣೆ ಮಾಡಿದ್ದಾರೆ. ಬಳಿಕ ಸ್ಥಳೀಯ ಆಸ್ಪತ್ರೆಗೆ ಅವರನ್ನು ಸ್ಥಳಾಂತರ ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version