ರಾಜಕೀಯ

ಭಾರತ-ಅಮೆರಿಕ ನಡುವೆ ವಾಷಿಂಗ್ಟನ್‌ನಲ್ಲಿಂದು 2ಪ್ಲಸ್ 2 ಸಮಾಲೋಚನೆ; ವಿದೇಶಾಂಗ ಸಚಿವ ಡಾ: ಎಸ್. ಜೈಶಂಕರ್ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾರತ ನಿಯೋಗದ ನೇತೃತ್ವ

Published

on

ಸುದ್ದಿದಿನ ಡೆಸ್ಕ್ : ವಾಷಿಂಗ್ಟನ್‌ನಲ್ಲಿ ಇಂದು ಭಾರತ ಮತ್ತು ಅಮೆರಿಕದ ನಡುವೆ 2 ಪ್ಲಸ್ 2ಮಾತುಕತೆ ನಡೆಯಲಿದೆ. ವಿದೇಶಾಂಗ ವ್ಯವಹಾರಗಳ ಸಚಿವ ಸಚಿವ ಡಾ: ಎಸ್. ಜೈಶಂಕರ್ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಭಾರತೀಯ ನಿಯೋಗದ ನೇತೃತ್ವ ವಹಿಸಲಿದ್ದಾರೆ.

ಅಮೆರಿಕದ ನಿಯೋಗದ ನೇತೃತ್ವವನ್ನು ವಿದೇಶಾಂಗ ಕಾರ್ಯದರ್ಶಿ ಆಂಟೋನಿ ಬ್ಲಿಂಕೆನ್ ಮತ್ತು ರಕ್ಷಣಾ ಕಾರ್ಯದರ್ಶಿ ಲಾಯ್ಡ್ ಆಸ್ಟಿನ್ ವಹಿಸಲಿದ್ದಾರೆ.

ನವದೆಹಲಿಯಲ್ಲಿ ನಿನ್ನೆ ಸಂಜೆ ಮಾಧ್ಯಮಗಳಿಗೆ ಈ ಕುರಿತು ಮಾಹಿತಿ ನೀಡಿದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ, ವಿದೇಶಾಂಗ ನೀತಿ, ರಕ್ಷಣೆ ಮತ್ತು ಭದ್ರತೆಗೆ ಸಂಬಂಧಿಸಿದ ಭಾರತ – ಅಮೆರಿಕ ದ್ವಿಪಕ್ಷೀಯ ಕಾರ್ಯಸೂಚಿಯಲ್ಲಿನ ವಿಷಯಗಳ ಕುರಿತು ಚರ್ಚೆ ನಡೆಯಲಿದೆ ಎಂದು ಹೇಳಿದರು.

2 ಪ್ಲಸ್ 2 ಮಾತುಕತೆಯು ಪ್ರಮುಖ ಪ್ರಾದೇಶಿಕ ಮತ್ತು ಜಾಗತಿಕ ಬೆಳವಣಿಗೆಗಳ ಬಗ್ಗೆ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳಲು ಅವಕಾಶ ಒದಗಿಸುತ್ತದೆ. ಅಲ್ಲದೆ, ಸಾಮಾನ್ಯ ಆಸಕ್ತಿಗಳು ಮತ್ತು ಕಾಳಜಿಗಳನ್ನು ಪರಿಹರಿಸಲು ಎರಡೂ ದೇಶಗಳು ಹೇಗೆ ಒಟ್ಟಾಗಿ ಕೆಲಸ ಮಾಡಬಹುದು ಎಂಬುದರ ಕುರಿತೂ ಸಮಾಲೋಚನೆ ನಡೆಸಲಾಗುತ್ತದೆ ಎಂದು ಅರಿಂದಮ್ ಬಾಗ್ಚಿ ಹೇಳಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version