Connect with us

ಸಿನಿ ಸುದ್ದಿ

ರೋರಿಂಗ್ ಸ್ಟಾರ್ ಮುರಳಿಯ ‘ಭರಾಟೆ’ ಸಿನೆಮಾ ಟೀಸರ್ ಶೂಟಿಂಗ್ ವೀಡಿಯೋ ನೋಡಿ..!

Published

on

ಸುದ್ದಿದಿನ, ಡೆಸ್ಕ್ | ರೋರಿಂಗ್ ಸ್ಟಾರ್ ಮುರಳಿ ಹಾಗೂ ‘ಭರ್ಜರಿ’ ಸಿನೆಮಾ‌ ನಿರ್ದೇಶಕ ಚೇತನ್ ಒಟ್ಟಿಗೆ ಸೇರಿ ‘ಭರಾಟೆ’ ಎಂಬ ಹೊಸ ಸಿನೆಮಾದಲ್ಲಿ ಜಾದೂ ಮಾಡಲು ಹೊರಟಿದ್ದಾರೆ.

ಇತ್ತೀಚಿಗೆಗಷ್ಟೇ ಈ‌ ಸಿನೆಮಾದ ಮಹೂರ್ತವು ಅದ್ದೂರಿಯಾಗಿ ನಡೆದಿತ್ತು. ಈಗ ಈ ಸಿನೆಮಾ ತಂಡ ‘ಟೀಸರ್’ ಗೆಂದೇ ರಾಜಸ್ಥಾನದ‌ ಐತಿಹಾಸಿಕ ಸ್ಥಳಗಳಲ್ಲಿ ಶೂಟಿಂಗ್ ಆರಂಭಿಸಿದೆ. ತುಂಬಾ ಸ್ಟೈಲಿಶ್ ಆಗಿ ಶೂಟಿಂಗ್ ನಲ್ಲಿ ಕಾಣ್ತಿರೋ ಮುರಳಿಯ ಈ ಟೀಸರ್ ಗೆ ಅಭಿಮಾನಿಗಳು ಕಾತುರರಾಗಿದ್ದಾರೆ. ಈ ಸಿನೆಮಾಕ್ಕೆ ಕನ್ನಡದ ಹೊಸ ನಟಿ ನಾಯಕಿಯಾಗಿ‌ ಮುರಳಿಯ ರಾಧೆಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

ಟೀಸರ್ ಶೂಟಿಂಗ್ ‌ವೀಡಿಯೋ

ಸಿನಿ ಸುದ್ದಿ

“ಚಾರ್ಲಿ” ಗೆದ್ದಳು ; ಸಂತಸ ತಂದಳು..!

Published

on

ಸುದ್ದಿದಿನ ಡೆಸ್ಕ್ : ಮನುಷ್ಯ ಹಾಗೂ ಶ್ವಾನದ ನಡುವಿನ ಉತ್ತಮ ಸಂಬಂಧವನ್ನು ಮನಮುಟ್ಟುವಂತೆ ನಿರ್ದೇಶಕ ಕಿರಣ್ ರಾಜ್ “777 ಚಾರ್ಲಿ” ಚಿತ್ರದಲ್ಲಿ ತೋರಿಸಿದ್ದಾರೆ. ಇಡೀ ವಿಶ್ವದಾದ್ಯಂತ ಈ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ರಕ್ಷಿತ ಶೆಟ್ಟಿ ಅವರ ಅಮೋಘ ಅಭಿನಯಕ್ಕೆ ಅಭಿಮಾನಿಗಳು ಫಿದಾ ಆಗಿದ್ದಾರೆ. “ಚಾರ್ಲಿ” ನಟನೆಗೂ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಚಿತ್ರ ಯಶಸ್ವಿ 25 ದಿನ ಪೂರೈಸಿ ಮುನ್ನಡೆಯುತ್ತಿದೆ. ಈ ಸಂತಸವನ್ನು ಚಿತ್ರತಂಡ ಹಂಚಿಕೊಂಡಿದ್ದು ಹೀಗೆ.

ಈವರೆಗೂ ಒಟ್ಟಾರೆ 150 ಕೋಟಿ ಗ್ರಾಸ್​ ಗಳಿಕೆಯಾಗಿದೆ. ಅದರಲ್ಲಿ 90ರಿಂದ 100 ಕೋಟಿವರೆಗೂ ಲಾಭ ಬಂದಿದೆ. ಅದರಲ್ಲಿ ಶೇ. 5ರಷ್ಟು ಚಾರ್ಲಿಗೆ ಸಲ್ಲುವಂತದ್ದು. ಅವಳ ಹೆಸರಿನಲ್ಲಿ ಭಾರತದಾದ್ಯಂತ ಶ್ವಾನಗಳ ಇಂಬ್ರಿಡಿಂಗ್​ ವಿರುದ್ಧ ಹೋರಾಡುತ್ತಿರುವ ಹಾಗೂ ಅದನ್ನು ದತ್ತು ಪಡೆಯುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿರುವ ಎನ್​ಜಿಓಗಳಿಗೆ ಸಹಾಯ ಮಾಡುವ ಕುರಿತು ಯೋಚನೆ ಮಾಡಿದ್ದೇವೆ. ಶೇ.5ರಷ್ಟು ಎಂದರೆ ಐದು ಕೋಟಿ ರೂಪಾಯಿಗಳಷ್ಟಾಗುತ್ತದೆ.

ಅದನ್ನು ನೇರವಾಗಿ ಹಂಚಿಕೆ ಮಾಡಬೇಕಾ? ಅಥವಾ ಚಾರ್ಲಿ ಹೆಸರಿನಲ್ಲಿ ಒಂದು ಅಕೌಂಟ್​ ಮಾಡಿ ದುಡ್ಡಿಟ್ಟು, ಪ್ರತಿ ತಿಂಗಳು ಸಿಗುವ ಬಡ್ಡಿಯಲ್ಲಿ ಸಹಾಯ ಮಾಡಬೇಕಾ? ಎಂಬ ವಿಷಯವಾಗಿ ಇನ್ನೂ ತೀರ್ಮಾನವಾಗಿಲ್ಲ. ಜೊತೆಗೆ ಕಲಾವಿದರು ಮತ್ತು ತಂತ್ರಜ್ಞರಿಗೆ ಶೇ. 10ರಷ್ಟು ಲಾಭದಲ್ಲಿ ಹಂಚಿಕೆ ಮಾಡಲಿದ್ದೇವೆ. ಆ ಮೊತ್ತವೇ 10 ಕೋಟಿ ರೂಪಾಯಿಗಳಷ್ಟಾಗುತ್ತದೆ. ಈ ಪಟ್ಟಿಯಲ್ಲಿ ನಾನಿಲ್ಲ. ಏಕೆಂದರೆ, ನಾನು ಒಬ್ಬ ನಟ ಮತ್ತು ನಿರ್ಮಾಪಕನಾಗಿರುವುದರಿಂದ, ನನ್ನನ್ನು ಬಿಟ್ಟು ಮಿಕ್ಕವರಿಗೆ ಹಂಚಲಿದ್ದೇವೆ ಎಂದರು ರಕ್ಷಿತ್ ಶೆಟ್ಟಿ.

25 ದಿನ ಕರ್ನಾಟಕದಲ್ಲಿ 100 ಪ್ಲಸ್​ ಸೆಂಟರ್​ಗಳಲ್ಲಿ ಚಿತ್ರ ಪ್ರದರ್ಶನವಾಗುತ್ತಿದೆ. ಬೇರೆ ದೇಶಗಳಲ್ಲಿ ಚಿತ್ರಗಳ ಬಗ್ಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಚಿತ್ರ ಬಿಡುಗಡೆಯಾಗಿ 15 ದಿನಗಳ ನಂತರ ಚಿತ್ರತಂಡದವರು ದುಬೈಗೆ ಹೋಗಿ ಬಂದಿದ್ದಾರೆ. ಮಾರಿಷಸ್​, ಜಪಾನ್​ ಮುಂತಾದ ಕಡೆ ಸಹ ಚಿತ್ರ ಪ್ರದರ್ಶನವಾಗುತ್ತಿದೆ. ಅಲ್ಲಿ ಪ್ರದರ್ಶನಗಳ ಪ್ರಮಾಣ ಕಡಿಮೆ ಇರಬಹುದು.

ಆದರೆ, ಕನ್ನಡಿಗರು ಎಲ್ಲೆಲ್ಲಿ ಇದ್ದಾರೋ, ಅಲ್ಲೆಲ್ಲ ಪ್ರದರ್ಶನವಾಗುತ್ತಿದೆ. ಸಾಮಾನ್ಯವಾಗಿ ಚಿತ್ರಕ್ಕೆ ಜನ ಬರುತ್ತಿಲ್ಲ ಎಂದು ಆರೋಪ ಮಾಡುತ್ತಾರೆ. ಆದರೆ, ಚಿತ್ರವನ್ನು ಚೆನ್ನಾಗಿ ಪ್ರಮೋಟ್​ ಮಾಡಿದರೆ, ಖಂಡಿತಾ ಜನ ಬರುತ್ತಾರೆ ಎಂದು “777 ಚಾರ್ಲಿ” ತೋರಿಸಿಕೊಟ್ಟಿದೆ. ಚಿತ್ರಕ್ಕೆ ಈಗಲೂ ಜನ ಬರುತ್ತಿದ್ದಾರೆ. ಭಾನುವಾರ 1 ಕೋಟಿಗೂ ಹೆಚ್ಚು ಗಳಿಕೆಯಾಗಿದೆ. ಚಿತ್ರ ಬಿಡುಗಡೆಯಾಗಿ 25 ದಿನಗಳ ನಂತರವೂ ಒಳ್ಳೆಯ ಪ್ರದರ್ಶನ ಕಾಣುತ್ತಿದೆ. ಅದರಲ್ಲೂ ಮಲ್ಟಿಪ್ಲೆಕ್ಸ್​ಗಳಲ್ಲಿ ಬೇಡಿಕೆ ಇದೆ ಎಂದರು ವಿತರಕ ಕಾರ್ತಿಕ್ ಗೌಡ.

ಸಾಮಾನ್ಯವಾಗಿ ನಾಯಕಿ ಅಂದರೆ ಪ್ರೇಮಕಥೆ ಇರುತ್ತದೆ. ಇಲ್ಲಿ ಹಾಗಿಲ್ಲ. ಆದರೂ ನನ್ನ ಪಾತ್ರಕ್ಕೆ ಒಳ್ಳೆಯ ಪ್ರತಿಕ್ರಿಯೆ ಸಿಗುತ್ತಿದೆ. ಚಿತ್ರ ಈಗಲೂ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ ಎನ್ನುವುದೇ ಸಂತೋಷ. ಅವಕಾಶ ಕೊಟ್ಟ ಎಲ್ಲರಿಗೂ ನಾಯಕಿ ಸಂಗೀತ ಶೃಂಗೇರಿ ಧನ್ಯವಾದಗಳನ್ನು ಸಲ್ಲಿಸಿದರು.

ಸ್ನೇಹಿತರು ಮತ್ತು ಸಂಬಂಧಿಕರು ಚಿತ್ರ ನೋಡಿ ಖುಷಿಪಟ್ಟರು. ನಾವು 65 ಜನ ಒಟ್ಟಿಗೆ ಸಿನಿಪೊಲಿಸ್​ಗೆ ಹೋಗಿ ಚಿತ್ರ ನೋಡಿ ಕೇಕ್​ ಕಟ್​ ಮಾಡುವ ಮೂಲಕ ಸಂಭ್ರಮ ಆಚರಿಸಿದ್ದೇವೆ. ನಾನು ಕ್ಲಾಸ್​ಗೆ ಹೋಗುವಾಗ ಚಾರ್ಲಿ ಹುಡುಗಿ ಅಂತ ಎಲ್ಲ ಹೇಳುತ್ತಾರೆ. ಸೆಲ್ಫಿ ತೆಗೆಸಿಕೊಂಡು ಆಲ್​ ದಿ ಬೆಸ್ಟ್​ ಹೇಳುತ್ತಾರೆ ಎಂದು ಪುಟಾಣಿ ಶಾರ್ವರಿ ತಮ್ಮ ಅನುಭವ ಹಂಚಿಕೊಂಡರು.

ಸೋಲು ಹಲವು ಪಾಠ ಕಲಿಸುತ್ತದೆ. ಗೆಲುವು ಹಲವು ದಾರಿಗಳನ್ನು ತೋರಿಸುತ್ತವೆ. ಸಹಾಯಕ ನಿರ್ದೇಶಕನಾಗಿ ಮೂರು ಸಿನಿಮಾಗಳನ್ನು ಮಾಡಿದ್ದೇನೆ. ಸೋಲು, ಗೆಲುವು ಎರಡನ್ನು ನೋಡಿದ್ದೀನಿ. ಸೋಲು ನೋಡಿರುವುದರಿಂದ ಗೆಲುವಿನ ಮಹತ್ವ ಗೊತ್ತಾಯಿತು. ಈ ಜರ್ನಿಯಲ್ಲಿ ಹಲವರಿದ್ದಾರೆ. ಒಂದೇ ಮನಸ್ಥಿತಿಯವರಾದ್ದರಿಂದ ಇಂಥದ್ದೊಂದು ಪ್ರಯತ್ನ ಮಾಡುವುದಕ್ಕೆ ಸಾಧ್ಯವಾಯಿತು.

ಚಿತ್ರ 25 ದಿನ ಪೂರೈಸಿದೆ. ಮುಂದೆ ಸಹ ಇದೇ ಪ್ರಾಮಾಣಿಕ ಪ್ರಯತ್ನ ಮಾಡಿದರೆ ಲಾಭ ಕೊಡುತ್ತದೆ ಎಂಬ ನಂಬಿಕೆ ಇದೆ. ಈ ಗೆಲುವಿನಿಂದ ಇನ್ನಷ್ಟು ಪ್ರಯತ್ನಗಳನ್ನು ಮಾಡುವುದಕ್ಕೆ ಸ್ಫೂರ್ತಿ ಸಿಕ್ಕಿದೆ. ಕಿರಿಕ್​ ಪಾರ್ಟಿ ಮಾಡಿದಾಗ ಹಣದ ಅಭಾವವಿತ್ತು. ಆಗ ರಕ್ಷಿತ್ ಎಲ್ಲರನ್ನೂ ಕರೆದು, ಚಿತ್ರ ಚೆನ್ನಾಗಿ ಹೋದರೆ ಇನ್ನಷ್ಟು ಕೊಡುವುದಾಗಿ ಹೇಳಿದ್ದರು. ಅದರಂತೆ ಚಿತ್ರ ಗೆದ್ದ ಮೇಲೆ ಹಲವರಿಗೆ ಅವರ ಪಾಲು ಕೊಟ್ಟರು. ಇದನ್ನು ನೋಡಿ ಕೆಲವರು ಕಣ್ಣೀರು ಹಾಕಿದ್ದು ನೆನಪಿದೆ. ಈಗಲೂ ರಕ್ಷಿತ್​ ಅದನ್ನೇ ಮುಂದುವರೆಸಿದ್ದಾರೆ ಎಂದರು ನಿರ್ದೇಶಕ ಕಿರಣ್ ರಾಜ್.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಸಿನಿ ಸುದ್ದಿ

ಮದರ್ ತೆರೇಸಾ ಸ್ಮಾರಕ ರಾಷ್ಟ್ರೀಯ ಪ್ರಶಸ್ತಿ ಸ್ವೀಕರಿಸಿದ ನಟಿ ಹರ್ಷಿಕಾ ಪೂಣಚ್ಚ

Published

on

ಸುದ್ದಿದಿನ ಡೆಸ್ಕ್ : ಸ್ಯಾಂಡಲ್​​ವುಡ್ ನಟಿ ಹರ್ಷಿಕಾ ಪೂಣಚ್ಚ ಅವರಿಗೆ ಮದರ್​ ತೆರೇಸಾ ಸ್ಮಾರಕ ರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ.

ನಟಿ ಹರ್ಷಿಕಾ ಪೂಣಚ್ಚ ತಾವು ತೆರೆಯ ಮೇಲೆ ಮಾತ್ರ ನಾಯಕಿಯಲ್ಲ. ತೆರೆಯ ಹಿಂದೆಯೂ ನಾಯಕಿ ಅಂತಾ ಕೊರೊನಾ ವೇಳೆಯಲ್ಲಿ ತಮ್ಮ ಸಾಮಾಜಿಕ ಕಾರ್ಯದ ಮೂಲಕ ತೋರಿಸಿ ಕೊಟ್ಟಿದ್ದಾರೆ.

ಭುವನಂ ಸಂಸ್ಥೆಯ ಮೂಲಕ ನಟ ಭುವನ್‌ಗೆ ಹರ್ಷಿಕಾ ಸಾಥ್ ನೀಡಿದ್ದರು. ಈಗ ಮದರ್ ತೆರೇಸಾ ಸ್ಮಾರಕ ರಾಷ್ಟ್ರೀಯ ಪ್ರಶಸ್ತಿ ಅನ್ನು ಹರ್ಷಿಕಾ ಪೂಣಚ್ಚ ಸ್ವೀಕರಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಟಿ ಪವಿತ್ರ ಲೋಕೇಶ್ ಹೆಸರಲ್ಲಿ ನಕಲಿ ಫೇಸ್ ಬುಕ್ ಖಾತೆ: ಮೇಸೆಜ್ ಕುರಿತು ದೂರು ದಾಖಲು

Published

on

ಸುದ್ದಿದಿನ,ಮೈಸೂರು: ಅಪರಿಚಿತ ವ್ಯಕ್ತಿಯೊಬ್ಬರು ನನ್ನ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರದು ಅನುಚಿತವಾಗಿ ಮೆಸೇಜ್ ಮಾಡುತ್ತಿದ್ದಾರೆ ಎಂದು ನಟಿ ಪವಿತ್ರ ಲೋಕೇಶ್ ದೂರು ನೀಡಿದ್ದಾರೆ.

ಅಪರಿಚಿತ ವ್ಯಕ್ತಿ ನನ್ನ ಹೆಸರಲ್ಲಿ ನಕಲಿ ಖಾತೆ ತೆರೆದಿದ್ದಾರೆ. ಫೇಸ್ ಬುಕ್‌ನ ಇತರ ಪೇಜ್‌ಗಳಲ್ಲಿ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ನನ್ನ ಬಗ್ಗೆ ಸುಳ್ಳು ಸುದ್ದಿಗಳನ್ನು ಹರಡುತ್ತಿದ್ದಾರೆ. ನನ್ನ ಘನತೆಗೆ ಧಕ್ಕೆ ಬರುವ ರೀತಿಯಲ್ಲಿ ಮೆಸೇಜ್‌ಗಳನ್ನು ಮಾಡುತ್ತಿದ್ದಾರೆ. ಇದರಿಂದ ನನಗೆ ಮಾನಸಿಕವಾಗಿ ಕಿರುಕುಳವಾಗಿದೆ. ಇಂತಹವರನ್ನು ಕಂಡು ಹಿಡಿದು ಕ್ರಮ ಕೈಗೊಳ್ಳುವಂತೆ ಮೈಸೂರಿಮ ಎಸ್‌ಇಎನ್ ಠಾಣೆಯಲ್ಲಿ ನಟಿ ಪ್ರಕರಣ ದಾಖಲು ಮಾಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ5 hours ago

ದಾವಣಗೆರೆ | ತುಕ್ಕು ಹಿಡಿಯುತ್ತಿವೆ ವಾಹನಗಳು, ಪರಿಕರಗಳು : ಮಹಾನಗರ ಪಾಲಿಕೆ ವಿರುದ್ಧ ಎಸ್. ಮಂಜುನಾಥ್ ಗಡಿಗುಡಾಳ್ ಆಕ್ರೋಶ

ಸುದ್ದಿದಿನ,ದಾವಣಗೆರೆ: ಸರ್ಕಾರದ ಅನುದಾನದಿಂದ ಬಂದಿರುವ ಕೋಟ್ಯಂತರ ರೂಪಾಯಿ ವೆಚ್ಚದ ವಾಹನಗಳು ಹಾಗೂ ಪರಿಕರಗಳು ತುಕ್ಕು ಹಿಡಿಯುತ್ತಿದ್ದು, ಮಹಾನಗರ ಪಾಲಿಕೆ ಆಡಳಿತ ವರ್ಗದ ನಿರ್ಲಕ್ಷ್ಯಕ್ಕೆ ಮಹಾನಗರ ಪಾಲಿಕೆ ವಿರೋಧ...

ದಿನದ ಸುದ್ದಿ6 hours ago

ದಾವಣಗೆರೆ | ಕರ್ನಾಟಕದ ಪಪಥಮ ರೋಲ್‌ಬಾಲ್ ಆಟದ ತರಬೇತುದಾರರಾಗಿ ಪೃಥ್ವಿಕಾಂತ್‌ ಎಸ್. ಕೊಟಗಿ ಆಯ್ಕೆ

ಸುದ್ದಿದಿನ,ದಾವಣಗೆರೆ : ರೋಲ‌ರ್ ಸ್ಟೇಟಿಂಗ್ ಸೆಂಟರ್ ತರಬೇತುದಾರರಾದ ಪೃಥ್ವಿಕಾಂತ್’ ಎನ್.ಕೆ. ಅವರು ಅಂತಾರಾಷ್ಟ್ರೀಯ ಮಟ್ಟದಲ್ಲಿ ನಡೆಯುತ್ತಿರುವ ರೋಲ್ ಬಾಲ್ ಆಟದ ಕರ್ನಾಟಕದಿಂದ ಪ್ರಪ್ರಥಮವಾಗಿ ವೈಸ್ ಕ್ಯಾಪ್ಟನ್ ಆಗಿ...

ದಿನದ ಸುದ್ದಿ7 hours ago

ಪಂ.ಪುಟ್ಟರಾಜ ಸಾಹಿತ್ಯ ಪುರಸ್ಕಾರಕ್ಕೆ ಪುಸ್ತಕ ಆಹ್ವಾನ

ಸುದ್ದಿದಿನ ಡೆಸ್ಕ್ : ಡಾ. ಪಂ. ಪುಟ್ಟರಾಜ ಸೇವಾ ಸಮಿತಿಯು ಪುಸ್ತಕ ಪ್ರಶಸ್ತಿಗಾಗಿ 2021-22 ಸಾಲಿನಲ್ಲಿ ಪ್ರಕಟವಾದ, ಕನ್ನಡ, ಹಿಂದಿ ಮತ್ತು ಸಂಸ್ಕೃತ ಭಾಷೆಯ ಸಾಹಿತ್ಯದ ಎಲ್ಲಾ...

ದಿನದ ಸುದ್ದಿ7 hours ago

ದಾವಣಗೆರೆ | ಅಕ್ರಮವಾಗಿ ಬೆಳ್ಳಿ ಗೆಜ್ಜೆ ತಂದಿದ್ದ ತಮಿಳುನಾಡಿನ ಇಬ್ಬರ ಬಂಧನ

ಸುದ್ದಿದಿನ,ದಾವಣಗೆರೆ: ಅಕ್ರಮವಾಗಿ ಬೆಳ್ಳಿ ಗೆಜ್ಜೆ ತಂದಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ತಮಿಳುನಾಡಿನ ಸೇಲಂನ ಸೆಲ್ವಂ ಮತ್ತು ಬಾಲಾಜಿ ಬಂಧಿತ ಆರೋಪಿಗಳು. ತಮಿಳುನಾಡಿನ ಸೇಲಂ ನಿಂದ...

ದಿನದ ಸುದ್ದಿ12 hours ago

ಸರಳವಾಸ್ತು ಖ್ಯಾತಿಯ ಜ್ಯೋತಿಷಿ ಚಂದ್ರಶೇಖರ್ ಹತ್ಯೆ

ಸುದ್ದಿದಿನ,ಹುಬ್ಬಳ್ಳಿ: ಸರಳ ವಾಸ್ತು ಖ್ಯಾತಿಯ, ಜ್ಯೋತಿಷಿ ಚಂದ್ರಶೇಖರ್‌ ಗುರೂಜಿ ಅವರನ್ನು ಇಂದು ಹುಬ್ಬಳ್ಳಿ ಉಣಕಲ್ ನಲ್ಲಿರುವ ಖಾಸಗಿ ಹೊಟೆಲ್‌ನಲ್ಲಿ ಹಾಡಹಗಲೇ ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. ಭಕ್ತರ...

ದಿನದ ಸುದ್ದಿ12 hours ago

ಹೊಟೇಲ್-ರೆಸ್ಟೋರೆಂಟ್‌ಗಳಲ್ಲಿ ಗ್ರಾಹಕರಿಂದ ಸೇವಾ ಶುಲ್ಕ ವಿಧಿಸುವಂತಿಲ್ಲ

ಸುದ್ದಿದಿನ,ನವದೆಹಲಿ: ಹೊಟೇಲ್ ಅಥವಾ ರೆಸ್ಟೋರೆಂಟ್‌ಗಳು ಆಹಾರದ ಬಿಲ್‌ಗಳಲ್ಲಿ ಸೇವಾ ಶುಲ್ಕವನ್ನು ವಿಧಿಸಬಾರದು ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವಾಲಯ ಹೇಳಿದೆ. ಗ್ರಾಹಕರಿಂದ ಸೇವಾ ಶುಲ್ಕವನ್ನು ಇತರ ಹೆಸರಿನಲ್ಲಿ...

ದಿನದ ಸುದ್ದಿ12 hours ago

ಎಡಿಜಿಪಿ ಬಂಧನ ; ಹೈಕೋರ್ಟ್‌ ನ್ಯಾಯಮೂರ್ತಿ ಹೆಚ್‌.ಪಿ ಸಂದೇಶ್‌ ಛೀಮಾರಿ

ಸುದ್ದಿದಿನ,ಬೆಂಗಳೂರು: ಭ್ರಷ್ಟಾಚಾರ ನಿಗ್ರಹದಳದ ಹೆಚ್ಚುವರಿ ಪೊಲೀಸ್‌ ಮಹಾ ನಿರ್ದೇಶಕ ಸೀಮಂತ್‌ ಕುಮಾರ್‌ ಸಿಂಗ್‌ ಅವರ ವಿರುದ್ಧ ಹೈಕೋರ್ಟ್‌ ನ್ಯಾಯಮೂರ್ತಿ ಹೆಚ್‌ಪಿ ಸಂದೇಶ್‌ ಕಿಡಿಕಾರಿದ್ದಾರೆ. ಎಸಿಬಿಯಲ್ಲಿ ವ್ಯಾಪಕ ಭ್ರಷ್ಟಾಚಾರ...

ದಿನದ ಸುದ್ದಿ13 hours ago

ವಿ.ವಿ.ಗಳಿಗೆ ಬೋಧಕರ ನೇಮಕಾತಿ ; ಕೆಇಎ ಮೂಲಕ ಪರೀಕ್ಷೆ: ಮೆರಿಟ್ ಪಟ್ಟಿಯಲ್ಲೇ ಆಯ್ಕೆ

ಸುದ್ದಿದಿನ,ಬೆಂಗಳೂರು: ವಿಶ್ವವಿದ್ಯಾಲಯಗಳಿಗೆ ಬೋಧಕ ಸಿಬ್ಬಂದಿಯನ್ನು ನೇಮಕಾತಿ ಮಾಡಿಕೊಳ್ಳುವುದಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಮೂಲಕ ಲಿಖಿತ ಪರೀಕ್ಷೆ ನಡೆಸಿ, ಅರ್ಹರ ಮೆರಿಟ್ ಪಟ್ಟಿಯನ್ನು ಸಿದ್ಧಪಡಿಸಲಾಗುವುದು ಎಂದು ಉನ್ನತ...

ನೆಲದನಿ13 hours ago

“ಟುಕ್ಡೇ ಗ್ಯಾಂಗ್” ನ ಅಸಹ್ಯ ಅಟ್ಟಹಾಸದಲ್ಲಿ..!

ಸಂಜ್ಯೋತಿ ವಿ. ಕೆ, ಬೆಂಗಳೂರು ಚಂದಿರನು ಜೊತೆಗಿರುವುದನ್ನೂ ಸಹಿಸದವರು ಎಲ್ಲೆಲ್ಲರನ್ನೂ ದೂರದೂರ ತಳ್ಳುವ ದ್ವೇಷಪ್ರೇಮಿಗಳೇ ಹೊರತು, ಸಾಮರಸ್ಯ, ಸಹಬಾಳ್ವೆಯಿಂದ ದೇಶ ಬೆಳಗುವುದನ್ನು ಬಯಸುವ ದೇಶಪ್ರೇಮಿಗಳಂತೂ ಅಲ್ಲ. ನಿಜದ...

ಸಿನಿ ಸುದ್ದಿ13 hours ago

“ಚಾರ್ಲಿ” ಗೆದ್ದಳು ; ಸಂತಸ ತಂದಳು..!

ಸುದ್ದಿದಿನ ಡೆಸ್ಕ್ : ಮನುಷ್ಯ ಹಾಗೂ ಶ್ವಾನದ ನಡುವಿನ ಉತ್ತಮ ಸಂಬಂಧವನ್ನು ಮನಮುಟ್ಟುವಂತೆ ನಿರ್ದೇಶಕ ಕಿರಣ್ ರಾಜ್ “777 ಚಾರ್ಲಿ” ಚಿತ್ರದಲ್ಲಿ ತೋರಿಸಿದ್ದಾರೆ. ಇಡೀ ವಿಶ್ವದಾದ್ಯಂತ ಈ...

Trending