ಸಿನಿ ಸುದ್ದಿ
HaPpY BiRtHdAy | ಕಭೀ ಕಭೀ ಮೇರೆ ದಿಲ್ ಮೇ| ಗಾನ ಕೋಗಿಲೆ ಮುಖೇಶ್ ಬಗ್ಗೆ ನೀವಿಷ್ಟು ಓದಲೇ ಬೇಕು

ಭಾರತೀಯ ಚಿತ್ರರಂಗದ ಅಮರ ಗಾಯಕರಲ್ಲೊಬ್ಬರಾದ ಮುಖೇಶ್ ಅವರು ಜನಿಸಿದ್ದು ಜುಲೈ 22, 1923ರಲ್ಲಿ. 1950ರ ದಶಕದಿಂದ ಎಪ್ಪತರ ದಶಕದಲ್ಲಿ ಅವರ ಕಂಠದಿಂದ ಹರಿದ ಗಾನ ಸುಧೆ ತಣಿಸದ ಕಿವಿಗಳೇ ಇಲ್ಲ. ತಟ್ಟದ ಹೃದಯಗಳಿಲ್ಲ. ಒಂದಷ್ಟು ನಟನಾಗಿ ಸಿನಿಮಾ ಗಾಯಕನಾಗಿ ಮತ್ತು ಭಕ್ತಿಗೀತೆಗಳ ಹಾಡುಗಾರನಾಗಿ ಮುಖೇಶ್ ಮಾಡಿದ ಮೋಡಿ ಮೋಹಕವಾದದ್ದು.
ಸಂಗೀತ ಶಿಕ್ಷಕರೊಬ್ಬರು ತಮ್ಮ ಸೋದರಿಗೆ ಕಲಿಸಲು ಬರುತ್ತಿದ್ದಾಗ ಅದನ್ನು ಪಕ್ಕದ ಕೋಣೆಯಿಂದ ಆಲಿಸಿ ಹಾಡಲು ಪ್ರಾರಂಭಿಸಿದ ಮುಖೇಶ್ ಮುಂದೆ ಬೆಳೆದ ರೀತಿ ಮಹೋನ್ನತವಾದದ್ದು. ‘ನಿರ್ದೋಷ್’ ಎಂಬ ಚಿತ್ರದಲ್ಲಿ ಗಾಯಕ ನಟನಾಗಿ ಚಿತ್ರಜೀವನ ಪ್ರಾರಂಭಿಸಿದ ಮುಖೇಶ್ ಸುಮಾರು ಇನ್ನೂರಕ್ಕೂ ಹೆಚ್ಚು ಚಿತ್ರಗಳಲ್ಲಿ ತಮ್ಮ ಗಾನಸುಧೆ ಹರಿಸಿದರು.
ಕೆಲವು ವರ್ಷಗಳ ಕಾಲ ಯುಗಳಗೀತೆಗಳನ್ನು ಹಾಡಿದ ಮುಖೇಶ್ 1945ರಲ್ಲಿ ಪಹಲೀ ನಜರ್ ಚಿತ್ರದಲ್ಲಿ ಮೊದಲ ಬಾರಿಗೆ ‘ದಿಲ್ ಜಲ್ತಾ ಹೈ ತೋ ಜಲ್ನೇ ದೇ’ಹಾಡನ್ನು ಹಾಡಿದರು. ಅದು ಯಶಸ್ವಿಯಾಯಿತು. ಮುಂದೆ ನೌಶಾದ್ ಅವರ ಸಂಗೀತ ನಿರ್ದೇಶನದಲ್ಲಿ ಹಾಡಿದ ‘ಅಂದಾಜ್’ ಚಿತ್ರದಲ್ಲಿ ಹಾಡಿದ ‘ತೂ ಕಹೇ ಅಗರ್…’, ‘ಝೂಮ್ ಝೂಮ್ ಕೇ ನಾಚೇ ಆಜ್…’ , ‘ಹಮ್ ಆಜ್ ಕಹೀಂ ದಿಲ್ ಖೋ ಬೈಠೇ…’ ಮತ್ತು ‘ಟೂಟೇ ನ ದಿಲ್ ಟೂಟೇ ನ…’ ಹಾಡುಗಳಲ್ಲಿ ಮುಖೇಶರ ಸ್ವಂತಿಕೆ ಎದ್ದು ತೋರುತ್ತವೆ
‘ರಾಜ್ ಕಪೂರರ ಗಾಯನ ಸ್ವರ ಮುಖೇಶ್’ ಎಂಬ ಪ್ರಸಿದ್ಧವಾದ ಮಾತು 1948ರಲ್ಲಿ ರಾಜ್ ಕಪೂರ್ ನಿರ್ಮಿಸಿ ನಟಿಸಿದ ‘ಆಗ್’ ಚಿತ್ರದಿಂದ ಆರಂಭವಾಯಿತು. ರಾಜ್ ಕಪೂರರ ‘ಆವಾರಾ’ ಮತ್ತು ‘ಶ್ರೀ 420’ ಚಿತ್ರಗಳಲ್ಲಿ ಮುಖೇಶ್ ಹಾಡಿದ ಹಾಡು ಎಲ್ಲೆಲ್ಲೂ ಪ್ರಸಿದ್ಧವಾಗಿಬಿಟ್ಟವು.
ಹಲವು ಚಿತ್ರಗಳಲ್ಲಿ ಅಭಿನಯ ಮತ್ತು ನಿರ್ಮಾಣ ಮಾಡಲು ಹೋಗಿ ಸೋಲು ಕಂಡ ಮುಖೇಶ್, 1953ರಲ್ಲಿ ಬಿಡುಗಡೆಯಾದ ರಾಜ್ ಕಪೂರರ ಆಹ್ ನಲ್ಲಿ ‘ಛೋಟಿಸೀ ಯಹ್ ಜಿಂದ್ಗಾನೀರೇ…’ ಎಂಬ ಹಾಡನ್ನು ಟಾಂಗೇವಾಲನಾಗಿ ಹಾಡಿ ಅಭಿನಯಿಸಿದ ನಂತರ ಅಭಿನಯಕ್ಕೆ ವಿದಾಯ ಹೇಳಿ ಗಾಯನಕ್ಕಷ್ಟೇ ತಮ್ಮನ್ನು ಮುಡಿಪಿಟ್ಟರು.
1958ರಲ್ಲಿ ದಿಲೀಪ್ ಕುಮಾರ್ ಅಭಿನಯದ ಯಹೂದಿ ಚಿತ್ರದ ‘ಯೆಹ್ ಮೇರಾ ದೀವಾನಾಪನ್ ಹೈ…’ ಹಾಡು ಬಿಡುಗಡೆಯಾದಾಗ ಹಲವುಕಾಲ ನಿಧಾನವಾಗಿ ಹರಿದ ಮುಖೇಶ್ ಅವರ ಬದುಕಿಗೆ ಮತ್ತೊಂದು ಮಿನುಗು ನಕ್ಷತ್ರವಾಯಿತು. ದಿಲೀಪ್ ಕುಮಾರರ ಆ ವರ್ಷದ ಇನ್ನೊಂದು ಚಿತ್ರ ಬಿಮಲ್ ರಾಯ್ ನಿರ್ದೇಶನದ ಮಧುಮತಿ ಚಿತ್ರದಲ್ಲಿ ಸಲಿಲ್ ಚೌಧುರಿ ಸಂಗೀತ ನಿರ್ದೇಶನದಲ್ಲಿ ಹಾಡಿದ ಎಲ್ಲವೂ ಜನಪ್ರಿಯವಾದವು. ಅಲ್ಲದೆ ‘ಪರ್ವರಿಶ್’ ಹಾಗೂ ಮರುವರ್ಷದ ‘ಫಿರ್ ಸುಬಹ್ ಹೋಗೀ’ ಚಿತ್ರಗಳ ಹಾಡುಗಳ ಜತೆಗೆ 1960ರಿಂದ 1976ರ ವರೆಗಿನ ಸಮಯದಲ್ಲಿ ಅತ್ಯಂತ ಹೃದಯಂಗಮ ಹಾಡುಗಳಿಂದ ಮುಖೇಶ್ ರಸಿಕರನ್ನು ರಂಜಿಸಿದರು. ನಾಲ್ಕು ಬಾರಿ ಫಿಲ್ಮ್ ಫೇರ್ ಪ್ರಶಸ್ತಿ ಮತ್ತು ಒಮ್ಮೆ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು ಶ್ರೇಷ್ಠ ಹಿನ್ನೆಲೆ ಗಾಯನಕ್ಕಾಗಿ ಪಡೆದರು.
ಅಫ್ಸಾನಾ ಚಿತ್ರದ ‘ಕಿಸ್ಮತ್ ಬಿಗ್ಡೀ, ದುನಿಯಾ ಬದ್ಲೀ’, ಯಹೂದೀ ಚಿತ್ರದ ‘ಯೆಹ್ ಮೇರಾ ದೀವಾನಾಪನ್ ಹೈ’, ದೇವರ್ ಚಿತ್ರದ ‘ಬಹಾರೋಂ ನೆ ಮೇರಾ ಚಮನ್ಈ ಚಿತ್ರದ ‘ಕಹಿಂ ದೂರ್ ಜಬ್ ದಿನ್ ಡಲ್ ಜಾಏ…’ ಕಭೀ ಕಭೀ ಚಿತ್ರದ ‘ಕಭೀ ಕಭೀ ಮೇರೆ ದಿಲ್ ಮೇ’, ಮುಂತಾದ ಹಾಡುಗಳಲ್ಲಿ ಹಾಡಿನಲ್ಲಿ ಮಾಧುರ್ಯದ ಜತೆ ದುಃಖದ ಒಳತೋಟಿಯೊಂದು ಹರಿಯುವದನ್ನು ಅನುಭವಿಸಬಹುದು.
ರಾಜ್ ಕಪೂರರ ಸಂಗೀತಸ್ವರವೆಂದು ಗುರುತಿಸಲ್ಪಟ್ಟ ಮುಖೇಶ್ ಮನೋಜ್ ಕುಮಾರನಿಗೇ ಹೆಚ್ಚು ಹಾಡಿದರಲ್ಲದೆ, ಶಂಕರ್-ಜೈಕಿಶನರ ಸಂಗೀತ ನಿರ್ದೇಶನಕ್ಕಿಂತ ಅಧಿಕವಾಗಿ ಕಲ್ಯಾಣ್ಜೀ-ಆನಂದ್ಜೀಯವರ ನಿರ್ದೇಶನದಲ್ಲಿ ಹಾಡಿದರು. ರಾಜ್ ಕಪೂರರ ಸತ್ಯಮ್ ಶಿವಮ್ ಸುಂದರಮ್ ಚಿತ್ರದಲ್ಲಿ ಲಕ್ಷ್ಮೀಕಾಂತ್-ಪ್ಯಾರೇಲಾಲರ ಸಂಗೀತ ನಿರ್ದೇಶನದಲ್ಲಿ ಧ್ವನಿಮುದ್ರಿಸಲ್ಪಟ್ಟ ‘ಚಂಚಲ್, ಶೀತಲ್, ನಿರ್ಮಲ್, ಕೋಮಲ್ ಸಂಗೀತ್ ಕೀ ದೇವೀ ಸ್ವರ್ ಸಜ್ನೀ’ ಹಾಡು ಕೊನೆಯದಾಯಿತು. ನಂತರ ಲತಾ ಜತೆಗೂಡಿ ಅಮೆರಿಕಾ ಸಂಯುಕ್ತ ಸಂಸ್ಥಾನಗಳಲ್ಲಿ ಸಂಗೀತ ಪರ್ಯಟನೆಗೆ ಹೋದ ಅವರು ಆ ಪ್ರವಾಸದ ಸಮಯದಲ್ಲಿ ನಿಧನರಾದರು. ಕೇವಲ 53ವರ್ಷ ಜೀವಿಸಿದ್ದ ಮುಖೇಶ್ ತಮ್ಮ ಧ್ವನಿಯಲ್ಲಿ ಉಳಿಸಿಹೋದ ಮಾಧುರ್ಯದ ಹಾಡುಗಳು ಚಿರಂತನವಾಗುಳಿದಿವೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ಸಿನಿ ಸುದ್ದಿ
ವಿದ್ಯುತ್ ಶಾಕ್ ನಿಂದ ಜೂ.ರವಿಚಂದ್ರನ್ ಖ್ಯಾತಿಯ ಲಕ್ಷ್ಮಿನಾರಾಯಣ್ ಸಾವು

ಸುದ್ದಿದಿನ,ತುಮಕೂರು: ಜ್ಯೂನಿಯರ್ ರವಿಚಂದ್ರನ್, ಕ್ರೇಜಿ ಸ್ಟಾರ್ ಎಂದು ಖ್ಯಾತಿ ಪಡೆದಿದ್ದ ಸಂಗೀತ ಸಂಜೆ ಕಾರ್ಯಕ್ರಮದ ಕಲಾವಿದ ಲಕ್ಷ್ಮೀನಾರಾಯಣ್ ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ಹೆರೂರು ಗ್ರಾಮದಲ್ಲಿ ವಿದ್ಯುತ್ ಶಾಕ್ನಿಂದ ಸಾವನ್ನಪ್ಪಿದ್ದಾರೆ.
ಸಂಪ್ಗೆ ನೀರು ತುಂಬಿಸಲು ಮೋಟರ್ ಆನ್ ಮಾಡಿದ ಸಂದರ್ಭ ವಿದ್ಯುತ್ ಸ್ಪರ್ಶಿಸಿ ಕಲಾವಿದ ಲಕ್ಷ್ಮೀನಾರಾಯಣ್ ಸಾವನ್ನಪ್ಪಿದ್ದಾರೆ. ಕುಣಿಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ಮಧ್ಯಾಹ್ನದ ಪ್ರಮುಖ ಸುದ್ದಿಗಳು

ಮಧ್ಯಾಹ್ನದ ಪ್ರಮುಖ ಸುದ್ದಿಗಳು
-
- ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ನಗರದ ಹೊರವಲಯದ ಪಾವಗಡ ರಸ್ತೆಯಲ್ಲಿ ಎ.ಹೆಚ್.ಪಿ ಯೊಜನೆಯಡಿ 48.2 ಎಕರೆಯಲ್ಲಿ ವಸತಿ ಸಮಯುಚ್ಚದ ನಿರ್ಮಾಣಕ್ಕೆ ವಸತಿ ಸಚಿವ ಸೊಮಣ್ಣ ಇಂದು ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಪ್ರತಿಯೊಬ್ಬರಿಗೂ ನಗರ ಪ್ರದೇಶದಲ್ಲಿ ನೀವಶನ ನೀಡಲು ಸಾಧ್ಯವಾಗುವುದಿಲ್ಲ. ಆದ್ದರಿಂದ ಪ್ರತಿ ಮನೆ ಮೇಲೆ ಎರಡು ಅಂತಸ್ಸಿನ ಮನೆಯನ್ನು ನಿರ್ಮಾಣ ಮಾಡಲು ಯೊಜನೆಗಳನ್ನು ರೂಪಿಸಲಾಗುತ್ತಿದೆ ಎಂದು ಹೇಳಿದರು.
- ಚಿಕ್ಕಮಗಳೂರು ಜಿಲ್ಲೆಯ ವಿವಿಧೆಡೆ ಹಲವಾರು ವರ್ಷಗಳಿಂದ ಬಗರ್ ಹುಕುಂ ಜಮೀನಿನಲ್ಲಿ ಕೃಷಿ ಮಾಡಿಕೊಂಡು ಬರುತ್ತಿರುವ ರೈತರಿಗೆ ಶಾಸಕ ಸಿ.ಟಿ ರವಿ ಇಂದು ತಮ್ಮ ಕಚೇರಿಯಲ್ಲಿ ಸಾಗುವಳಿ ಪತ್ರಗಳನ್ನು ವಿತರಣೆ ಮಾಡಿದರು. ಸುಮಾರು ೫೦ ಕ್ಕು ಹೆಚ್ಚು ಭೂ ಮಾಲೀಕರು ಈ ಸಂದರ್ಭದಲ್ಲಿ ಸಾಗುವಳಿ ಪತ್ರಗಳನ್ನು ಪಡೆದುಕೊಂಡರು.
- ಪುರಾಣದ ಪುಣ್ಯಕಥೆಗಳು, ಪವಾಡಗಳು, ಶಿವನ ಆರಾಧನೆಯನ್ನು ಬಾಲ್ಯದಿಂದಲೂ ಮೈಗೂಡಿಸಿಕೊಂಡು ಬೆಳೆದವರು ಮಲ್ಲಮ್ಮನವರು. ಮಹಾಸಾಧ್ವಿ ಶಿವಶರಣೆ ಮಲ್ಲಮ್ಮ ನವರು ವಚನಗಳನ್ನು ಬರೆಯಲಿಲ್ಲ ಅಥವಾ ಹೇಳಲಿಲ್ಲ ಮಲ್ಲಮ್ಮನವರ ಜೀವನವೇ ಒಂದು ಅಪೂರ್ವವಾದ ವಚನವಾಗಿದೆ ಎಂದು ಕನ್ನಡ ಮತ್ತು ಸಂಸ್ಕತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಎನ್.ಉದಯ ಕುಮಾರ್ ಹೇಳಿದ್ದಾರೆ. ಮಂಡ್ಯದಲ್ಲಿಂದು ಹೇಮರೆಡ್ಡಿ ಮಲ್ಲಮ್ಮ ರವರ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
- ಕಳೆದ 25ವರ್ಷಗಳಲ್ಲಿ ಅಸಾಧಾರಣ ಸೇವೆ ಸಲ್ಲಿಸಿದ ಅಸ್ಸಾಂ ಪೊಲೀಸರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ, ಗುವಾಹತಿಯಲ್ಲಿಂದು ರಾಷ್ಟ್ರಪತಿ ಪ್ರಶಸ್ತಿಯನ್ನು ಪ್ರದಾನ ಮಾಡಿದರು. ಅಸ್ಸಾಂ ಈ ಗೌರವವನ್ನು ಪಡೆದ ದೇಶದ 10ನೇ ರಾಜ್ಯವಾಗಿದೆ. ಈ ಸಂದರ್ಭದಲ್ಲಿ ಮಾತನಾಡಿದ ಅಮಿತ್ ಶಾ, ಅಸ್ಸಾಂನಲ್ಲಿ ಸಶಸ್ತ್ರ ಪಡೆಗಳ ವಿಶೇಷಾಧಿಕಾರ ಕಾಯ್ದೆಯನ್ನು 1990ರಲ್ಲಿ ಜಾರಿಗೊಳಿಸಲಾಗಿತ್ತು. ಇದನ್ನು 7 ಬಾರಿ ವಿಸ್ತರಿಸಲಾಗಿತ್ತು. 8ವರ್ಷಗಳ ಪ್ರಧಾನಮಂತ್ರಿಯವರ ಆಡಳಿತದ ನಂತರ ರಾಜ್ಯದ 23 ಜಿಲ್ಲೆಗಳು ಕಾಯ್ದೆ ಮುಕ್ತವಾಗಿವೆ.
- ಬಂಗಾಳ ಕೊಲ್ಲಿಯಲ್ಲಿ ವಾಯುಬಾರ ಕುಸಿತದಿಂದ ತೀವ್ರಗೊಂಡಿರುವ ’ಅಸಾನಿ’ ಚಂಡಮಾರುತ ಎರಡು ದಿನಗಳಲ್ಲಿ ಪಶ್ಚಿಮ ಮಧ್ಯ ಭಾಗದಿಂದ ಪಶ್ಚಿಮ ವಾಯವ್ಯ ದಿಕ್ಕಿನತ್ತ ಚಲಿಸುವ ಸಾಧ್ಯತೆಯಿದ್ದು, ದುರ್ಬಲಗೊಳ್ಳುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಮಧ್ಯೆ, ಉತ್ತರ ಆಂಧ್ರಪ್ರದೇಶ ಮತ್ತು ಒಡಿಶಾ ಕರಾವಳಿ ಸೇರಿದಂತೆ ಹಲವು ಪ್ರದೇಶಗಳಲ್ಲಿ ಚಂಡಮಾರುತದಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ.
- ಕೋವಿಡ್-19 ವಿರುದ್ಧದ ಹೋರಾಟದ ಭಾಗವಾಗಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಇದುವರೆಗೆ193 ಕೋಟಿ 53ಲಕ್ಷ ಕೋವಿಡ್ ಲಸಿಕಾ ಡೋಸ್ಗಳನ್ನು ಒದಗಿಸಲಾಗಿದೆ. ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 18 ಕೋಟಿ 15ಲಕ್ಷ ಬಳಕೆಯಾಗದ ಲಸಿಕಾ ಡೋಸ್ಗಳು ಬಾಕಿ ಉಳಿದಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
- ಅಫ್ಘಾನಿಸ್ತಾನದಲ್ಲಿ ಹತ್ಯೆಗೀಡಾಗಿದ್ದ ದಾನಿಶ್ ಸಿದ್ದಿಕಿ ಸೇರಿದಂತೆ ನಾಲ್ವರು ಭಾರತೀಯ ಛಾಯಾಗ್ರಾಹಕರು 2022ನೇ ಸಾಲಿನ ‘ಪುಲಿಟ್ಜರ್’ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಅದ್ನಾನ್ ಅಬಿದಿ, ಸನಾ ಇರ್ಷಾದ್ ಮಟ್ಟೂ ಹಾಗೂ ಅಮಿತ್ ದವೆ ಅವರು ‘ಪುಲಿಟ್ಜರ್’ ಪ್ರಶಸ್ತಿಗೆ ಭಾಜನರಾದ ಇತರ ಭಾರತೀಯ ಛಾಯಾಗ್ರಾಹಕರು. ‘ಫೀಚರ್ ಫೋಟೊಗ್ರಫಿ’ ವಿಭಾಗದಲ್ಲಿ ಇವರಿಗೆ ಪ್ರಶಸ್ತಿ ಲಭಿಸಿದೆ.
- ದೆಹಲಿ ವಿಭಾಗದ ಉತ್ತರ ರೈಲ್ವೆಯು, ತಾಯಂದಿರು ತಮ್ಮ ಶಿಶುಗಳೊಂದಿಗೆ ಆರಾಮವಾಗಿ ಮಲಗಲು ಅನುಕೂಲವಾಗುವಂತೆ ಆಯ್ದ ರೈಲುಗಳಲ್ಲಿ ಪ್ರಾಯೋಗಿಕ ಆಧಾರದ ಮೇಲೆ ’ಬೇಬಿ ಬರ್ತ್’ ಅನ್ನು ಪರಿಚಯಿಸಿದೆ ಎಂದು ಸುದ್ದಿ ಸಂಸ್ಥೆ ವರದಿ ಮಾಡಿದೆ.
- ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ತೀವ್ರಗೊಂಡಿರುವ ‘ಅಸಾನಿ’ ಚಂಡಮಾರುತ ಮುಂದಿನ ೪೮ ಗಂಟೆಗಳಲ್ಲಿ ಪಶ್ಚಿಮ ಮಧ್ಯ ಭಾಗದಿಂದ ಪಶ್ಚಿಮ ವಾಯವ್ಯ ದಿಕ್ಕಿನತ್ತ ಚಲಿಸುವ ಸಾಧ್ಯತೆಯಿದ್ದು, ದುರ್ಬಲಗೊಳ್ಳುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ. ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಇತರೆ ಭಾಗಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
- ಜಕಾರ್ತದಲ್ಲಿ ನಡೆಯಲಿರುವ ಏಷ್ಯಾ ಕಪ್ ಹಾಕಿ ಟೂರ್ನಿಯಲ್ಲಿ ಹಿರಿಯ ಡ್ರ್ಯಾಗ್ ಫ್ಲಿಕ್ಕರ್ ರೂಪಿಂದರ್ ಪಾಲ್ ಸಿಂಗ್ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ. ವಿಶ್ವಕಪ್ ಅರ್ಹತಾ ಟೂರ್ನಿಗಳ ಪೈಕಿ ಒಂದಾಗಿರುವ ಏಷ್ಯಾ ಕಪ್ ಟೂರ್ನಿ ಮೇ 23ರಿಂದ ಜೂನ್ 1ರವರೆಗೆ ನಡೆಯಲಿದೆ. ಹಲವು ದಿನಗಳ ನಂತರ ಕರ್ನಾಟಕದ ಹಿರಿಯ ಆಟಗಾರ ಎಸ್.ವಿ. ಸುನಿಲ್ ತಂಡದಲ್ಲಿ ಮತ್ತೆ ಸ್ಥಾನ ಪಡೆದಿದ್ದಾರೆ.
- ಮುಂಬೈನಲ್ಲಿಂದು ರಾತ್ರಿ 7.30ಕ್ಕೆ ಆರಂಭವಾಗಲಿರುವ ಐಪಿಎಲ್ ಟಿ-20 ಕ್ರಿಕೆಟ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಲಿವೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ಬೆಳಗಿನ ಪ್ರಮುಖ ಸುದ್ದಿಗಳು

ಬೆಳಗಿನ ಪ್ರಮುಖ ಸುದ್ದಿಗಳು
- ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಪಾಲನೆಗೆ ವಿಶೇಷ ಮುತುವರ್ಜಿ ವಹಿಸಬೇಕು. ಸಮಾಜದಲ್ಲಿ ಶಾಂತಿ, ಸೌಹಾದ ವಾತಾವರಣಕ್ಕೆ ಧಕ್ಕೆ ಬಾರದಂತೆ ಕಟ್ಟುನಿಟ್ಟಿನ ಕ್ರಮ ವಹಿಸಬೇಕು ಎಂದು ಪೊಲೀಸ್ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ. ಬೆಂಗಳೂರಿನಲ್ಲಿ ನಿನ್ನೆ ನಡೆದ ಪೊಲೀಸ್ ಮತ್ತು ಕಾನೂನು ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಮುಖ್ಯಮಂತ್ರಿ ಈ ಸೂಚನೆ ನೀಡಿದ್ದಾರೆ.
- ಗುವಾಹತಿಯಲ್ಲಿ ಇಂದು ನಡೆಯಲಿರುವ ಅಸ್ಸಾಂ ಪೊಲೀಸ್ ವಿಶೇಷ ಪರೇಡ್ನಲ್ಲಿ ಉತ್ತಮ ಸಾಧನೆ ಮಾಡಿದ ಪೊಲೀಸ್ ಸಿಬ್ಬಂದಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಷ್ಟ್ರಪತಿ ಪದಕ ಪ್ರದಾನ ಮಾಡಲಿದ್ದಾರೆ. ಅಸ್ಸಾಂನಲ್ಲಿ ಬಿಜೆಪಿ ಸರ್ಕಾರ ಒಂದು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ವಾರ್ಷಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಲಿರುವ ಕೇಂದ್ರ ಸಚಿವ ಅಮಿತ್ ಶಾ, ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.
- ತಮಿಳುನಾಡಿನ ಕೊಯಮತ್ತೂರಿನಲ್ಲಿ ನಿನ್ನೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಅತ್ಯುತ್ತಮ ಸ್ಟಾರ್ಟ್ ಅಪ್ ಸಂಸ್ಥೆಗಳಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಎಂಎಸ್ಎಂಇ ವಲಯಕ್ಕೆ ಕೇಂದ್ರ ಸರ್ಕಾರ ಅಗತ್ಯ ಉತ್ತೇಜನ ನೀಡುತ್ತಿದೆ ಎಂದು ಸಚಿವರು ತಿಳಿಸಿದರು.
- ’ಒಂದು ರಾಷ್ಟ್ರ – ಒಂದು ಗುಣಮಟ್ಟ’ ಪರಿಕಲ್ಪನೆ ಸಾಕಾರಕ್ಕೆ ಕೇಂದ್ರ ಸರ್ಕಾರ ಆದ್ಯತೆ ನೀಡಿದೆ ಎಂದು ಕೇಂದ್ರ ಗ್ರಾಹಕ ವ್ಯವಹಾರ ಮತ್ತು ಸಾರ್ವಜನಿಕ ವಿತರಣೆ ಖಾತೆ ಸಚಿವ ಪಿಯೂಷ್ ಗೋಯಲ್ ಹೇಳಿದ್ದಾರೆ. ಭಾರತೀಯ ಉತ್ಪನ್ನಗಳು ಅತ್ಯಂತ ಶ್ರೇಷ್ಠ ಗುಣಮಟ್ಟ ಹೊಂದಿರಬೇಕು, ಗ್ರಾಹಕರ ಹಿತರಕ್ಷಣೆಗೆ ಆದ್ಯತೆ ನೀಡಬೇಕು ಎಂಬುದು ಸರ್ಕಾರದ ಕಾಳಜಿಯಾಗಿದೆ ಎಂದು ಸಚಿವರು ತಿಳಿಸಿದರು.
- ದೇಶದ ಭದ್ರತಾ ಪಡೆಗಳ ಕ್ಯಾಂಟೀನ್ಗಳಲ್ಲಿ ಖಾದಿ ಮತ್ತು ಗ್ರಾಮೀಣ ಕೈಗಾರಿಕಾ ಉತ್ಪನ್ನಗಳ ಮಾರಾಟವನ್ನು ಹಂತ ಹಂತವಾಗಿ ಆರಂಭಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ.
- ಹೆದ್ದಾರಿ ವಲಯದಲ್ಲಿ ರಸ್ತೆ ನಿರ್ಮಾಣ ವೆಚ್ಚ ಕಡಿಮೆ ಮಾಡುವುದು ಮತ್ತು ಉತ್ತಮ ಗುಣಮಟ್ಟದ ರಸ್ತೆ ನಿರ್ಮಿಸುವುದು ಮಹತ್ವದ ಕಾರ್ಯ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.
- ರಸ್ತೆ ಸಾರಿಗೆ ಮತ್ತು ಹೆದ್ದಾರಿ ವಲಯದಲ್ಲಿ ಸುಸ್ಥಿರ ಮತ್ತು ಪುನರ್ ಬಳಕೆ ತಂತ್ರಜ್ಞಾನ ಅಳವಡಿಸಲಾಗುತ್ತಿದೆ ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಖಾತೆ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ತಿಳಿಸಿದ್ದಾರೆ.
- ಕಬ್ಬು ಬೆಳೆಗಾರರು ಹಾಗೂ ಸಕ್ಕರೆ ಕಾರ್ಖಾನೆ ಮಾಲೀಕರ ಸಮಸ್ಯೆಗಳ ಕುರಿತು ಚರ್ಚಿಸಲು ಬೆಂಗಳೂರಿನಲ್ಲಿ ಇಂದು ರಾಜ್ಯಮಟ್ಟದ ಸಭೆ ಕರೆಯಲಾಗಿದೆ ಎಂದು ಸಕ್ಕರೆ, ಕಬ್ಬು ಅಭಿವೃದ್ಧಿ ಹಾಗೂ ಜವಳಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಬೆಳಗಾವಿಯಲ್ಲಿ ಹೇಳಿದ್ದಾರೆ. ಕಬ್ಬು ಬೆಳೆಗಾರರ ಬಾಕಿ ಬಿಲ್ ಪಾವತಿ, ಸಕ್ಕರೆ ಕಾರ್ಖಾನೆಗಳ ಸಮಸ್ಯೆ ಸೇರಿದಂತೆ ವಿವಿಧ ವಿಚಾರಗಳ ಕುರಿತು ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಅವರು ತಿಳಿಸಿದರು.
- ಮುಂಬರುವ ಮುಂಗಾರು ಹಂಗಾಮಿಗೆ ರಾಜ್ಯದಲ್ಲಿ ರಸಗೊಬ್ಬರದ ಕೊರತೆ ಇಲ್ಲ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ತಿಳಿಸಿದ್ದಾರೆ.
- ಶಬ್ದಮಾಲಿನ್ಯ ಉಂಟುಮಾಡುವ ಯಾವುದೇ ಚಟುವಟಿಕೆಗಳನ್ನು ನಿಯಂತ್ರಿಸಲು ನ್ಯಾಯಾಲಯಗಳ ಆದೇಶದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಎಚ್ಚರಿಸಿದ್ದಾರೆ. ನ್ಯಾಯಾಲಯದ ಆದೇಶವನ್ನು ಎಲ್ಲರೂ ಗೌರವಿಸಬೇಕು. ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
- ಗುವಾಹತಿಯಲ್ಲಿ ಇಂದು ನಡೆಯಲಿರುವ ಅಸ್ಸಾಂ ಪೊಲೀಸ್ ವಿಶೇಷ ಪರೇಡ್ನಲ್ಲಿ ಉತ್ತಮ ಸಾಧನೆ ಮಾಡಿದ ಪೊಲೀಸ್ ಸಿಬ್ಬಂದಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಷ್ಟ್ರಪತಿ ಪದಕ ಪ್ರದಾನ ಮಾಡಲಿದ್ದಾರೆ. ನಂತರ ಅಸ್ಸಾಂ ಪೊಲೀಸ್ ಅಧಿಕಾರಿಗಳು ಮತ್ತು ಭದ್ರತಾ ಪಡೆ ಸಿಬ್ಬಂದಿಯೊಂದಿಗೆ ಸಚಿವರು ಸಂವಾದ ನಡೆಸಲಿದ್ದಾರೆ.
- ದೇಶದಲ್ಲಿ ರೋಗ ನಿರೋಧಕ ಆರೋಗ್ಯ ಸೇವೆ ಹಾಗೂ ಅತ್ಯಾಧುನಿಕ ವೈದ್ಯಕೀಯ ಸೌಲಭ್ಯಗಳ ನಡುವೆ ಸಮನ್ವಯ ಸಾಧಿಸಲು ಸರ್ಕಾರ ಹೆಚ್ಚಿನ ಆದ್ಯತೆ ನೀಡಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ತಿಳಿಸಿದ್ದಾರೆ.
- ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ತೀವ್ರಗೊಂಡಿರುವ ’ಅಸಾನಿ’ ಚಂಡಮಾರುತ ಮುಂದಿನ 48ಗಂಟೆಗಳಲ್ಲಿ ಪಶ್ಚಿಮ ಮಧ್ಯ ಭಾಗದಿಂದ ಪಶ್ಚಿಮ ವಾಯವ್ಯ ದಿಕ್ಕಿನತ್ತ ಚಲಿಸುವ ಸಾಧ್ಯತೆಯಿದ್ದು, ದುರ್ಬಲಗೊಳ್ಳುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ. ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಇತರೆ ಭಾಗಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಕ್ರೀಡೆ6 days ago
ಮಧ್ಯಾಹ್ನದ ಪ್ರಮುಖ ಸುದ್ದಿಗಳು
-
ಕ್ರೀಡೆ6 days ago
ಬೆಳಗಿನ ಪ್ರಮುಖ ಸುದ್ದಿಗಳು
-
ದಿನದ ಸುದ್ದಿ6 days ago
ವಿಧಾನ ಪರಿಷತ್ತಿನ 7 ಸ್ಥಾನಗಳಿಗೆ ಜೂನ್ 3ರಂದು ಚುನಾವಣೆ : ಆಯೋಗದಿಂದ ವೇಳಾಪಟ್ಟಿ ಪ್ರಕಟ
-
ಸಿನಿ ಸುದ್ದಿ6 days ago
ವಿದ್ಯುತ್ ಶಾಕ್ ನಿಂದ ಜೂ.ರವಿಚಂದ್ರನ್ ಖ್ಯಾತಿಯ ಲಕ್ಷ್ಮಿನಾರಾಯಣ್ ಸಾವು
-
ನಿತ್ಯ ಭವಿಷ್ಯ7 days ago
ಈ ರಾಶಿಯವರ ನಿಂತಿದ್ದ ಮದುವೆ ವಿಜೃಂಭಣೆಯಿಂದ ಚಾಲನೆ! ಈ ರಾಶಿವರ ಪ್ರೇಮ ವಿಚಾರದಲ್ಲಿ ಏರುಪೇರು ಸಂಭವ! ಮಂಗಳವಾರ ರಾಶಿ ಭವಿಷ್ಯ-ಮೇ-10,2022
-
ದಿನದ ಸುದ್ದಿ7 days ago
ದಕ್ಷತೆ, ಸಮಯ ಬದ್ಧತೆಯಿಂದ ಕಾರ್ಯನಿರ್ವಹಿಸಲು ಜಿಲ್ಲಾ ಪಂಚಾಯತ್ ಸಿಇಒಗಳಿಗೆ ಮುಖ್ಯಮಂತ್ರಿ ಸೂಚನೆ
-
ನಿತ್ಯ ಭವಿಷ್ಯ6 days ago
ಈ ರಾಶಿಯ ನವದಂಪತಿಗಳಿಗೆ ಘರ್ಷಣೆ ಸಾಧ್ಯತೆ! ಈ ರಾಶಿಯ ಉದ್ಯೋಗಿಗಳು ಎದುರಾಳಿಯ ಪಿತೂರಿಗಳು ಎದುರಿಸಬೇಕಾಗುವುದು! ಬುಧವಾರ ರಾಶಿ ಭವಿಷ್ಯ-ಮೇ-11,2022
-
ದಿನದ ಸುದ್ದಿ5 days ago
ದಾವಣಗೆರೆ | ಮತದಾರರ ಪಟ್ಟಿ ಪರಿಷ್ಕರಣೆಗೆ ಮನೆ-ಮನೆ ಭೇಟಿ