ಕ್ರೀಡೆ
ಆರೋಪ ಮುಕ್ತ ಬೆನ್ ಸ್ಟೋಕ್ ಮರಳಿ ಟೀಂಗೆ

ಸುದ್ದಿದಿನ ಡೆಸ್ಕ್ | ಇಂಗ್ಲೆಂಡ್ ಕ್ರಿಕೆಟಿಗ, ಮಧ್ಯಮ ಕ್ರಮಾಂಕದ ಬ್ಯಾಟ್ಸ್ಮನ್ ಬೆನ್ ಸ್ಟೋಕ್ಸ್ ಅವರು ಆಗಸ್ಟ್ 18 ರಿಂದ ನಡೆಯುವ ಮೊದಲೇ ಮೂರನೆಯ ಟೆಸ್ಟ್ನಲ್ಲಿ ಆಡಲು ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಇವರು ಕ್ಲಬ್ ಒಂದರಲ್ಲಿ ನಡೆದ ಗಲಾಟೆಯಲ್ಲಿ ಹಲ್ಲೆ ನಡೆಸಿದ ಆರೋಪವನ್ನು ಹೊತ್ತಿದ್ದರು. ಈ ಆರೋಪ ಮುಕ್ತವಾಗುತ್ತಿದ್ದಂತೆ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ಬೆನ್ ಸ್ಟೋಕ್ಸ್ ಅವರನ್ನು 11ತಿಂಗಳುಗಳ ವಿಚಾರಣೆ ನಡೆಸಿ ನಂತರ ಅವರನ್ನು ಅಪರಾಧಿ ಎಂದು ಪರಿಗಣಿಸುವುದು ಕಷ್ಟವೆಂದು ನ್ಯಾಯಾಲಯವು ಆದೇಶ ನೀಡಿದ ನಂತರ ಇಂಗ್ಲೆಂಡ್ ಕ್ರಿಕೆಟ್ ಮಂಡಳಿ ಅವರನ್ನು ತಂಡಕ್ಕೆ ಸೇರ್ಪಡೆ ಮಾಡಿಕೊಂಡಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ಕ್ರೀಡೆ
ಐಪಿಎಲ್ ಸುದ್ದಿ : ಇಂದು ರಾಜಸ್ಥಾನ ರಾಯಲ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿ

ಸುದ್ದಿದಿನ ಡೆಸ್ಕ್ : ಐಪಿಎಲ್ ಕ್ರಿಕೆಟ್ ಟೂರ್ನಿಯಲ್ಲಿ ಕಳೆದ ರಾತ್ರಿ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು 8 ವಿಕೆಟ್ ಗಳಿಂದ ಜಯಗಳಿಸಿದೆ.
ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಟೈಟನ್ಸ್ ತಂಡ ನಿಗದಿತ ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 168 ರನ್ ಗಳಿಸಿತು. ಹಾರ್ಧಿಕ್ ಪಾಂಡ್ಯ ಅಜೇಯ 62 ಹಾಗೂ ಮಿಲ್ಲರ್ 34 ರನ್ ಗಳಿಸಿದರು.
ಗುರಿ ಬೆನ್ನತ್ತಿದ ರಾಯಲ್ ಚಾಲೆಂಜರ್ಸ್ ಇನ್ನೂ 8 ಎಸೆತಗಳು ಬಾಕಿ ಇರುವಂತೆ 2 ವಿಕೆಟ್ ನಷ್ಟಕ್ಕೆ170 ರನ್ ಗಳಿಸಿ ಗೆಲುವಿನ ನಗೆ ಬೀರಿತು. ಈ ಜಯದೊಂದಿಗೆ ಆರ್.ಸಿ.ಬಿ ಫೇ ಆಫ್ ಹಂತಕ್ಕೇರುವ ಆಸೆ ಜೀವಂತವಾಗಿರಿಸಿಕೊಂಡಿದೆ.
ಇಂದಿನ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿವೆ. ಪಂದ್ಯ ರಾತ್ರಿ 7.30ಕ್ಕೆ ಆರಂಭವಾಗಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ಮಹಿಳಾ ವಿಶ್ವ ಬಾಕ್ಸಿಂಗ್ ಚಾಂಪಿಯನ್ಶಿಪ್; ಚಿನ್ನದ ಪದಕ ಜಯಿಸಿದ ಭಾರತೀಯ ಪಟು ನಿಖತ್ ಝರೀನ್; ಪ್ರಧಾನಮಂತ್ರಿ ಅಭಿನಂದನೆ

ಸುದ್ದಿದಿನ ಡೆಸ್ಕ್ : ಮಹಿಳೆಯರ ವಿಶ್ವ ಬಾಕ್ಸಿಂಗ್ ಚಾಂಪಿಯನ್ಶಿಪ್ನಲ್ಲಿ ಚಿನ್ನದ ಪದಕ ಗೆದ್ದ ನಿಖತ್ ಝರೀನ್ ಅವರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.
ಅವರು ತಮ್ಮ ಟ್ವೀಟ್ನಲ್ಲಿ ಇದೇ ಚಾಂಪಿಯನ್ಶಿಪ್ನಲ್ಲಿ ಕಂಚಿನ ಪದಕ ಗೆದ್ದಿರುವ ಮನೀಶಾ ಮೌನ್ ಮತ್ತ ಪರ್ವೀನ್ ಹುಡಾ ಅವರನ್ನೂ ಸಹ ಅಭಿನಂದಿಸಿ, ನಮ್ಮ ಬಾಕ್ಸರ್ಗಳು ನಮಗೆ ಹೆಮ್ಮೆ ತಂದಿದ್ದಾರೆ ಎಂದು ತಿಳಿಸಿದ್ದಾರೆ.
Our boxers have made us proud! Congratulations to @nikhat_zareen for a fantastic Gold medal win at the Women's World Boxing Championship. I also congratulate Manisha Moun and Parveen Hooda for their Bronze medals in the same competition. pic.twitter.com/dP7p59zQoS
— Narendra Modi (@narendramodi) May 19, 2022
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ಶುಕ್ರವಾರ | ಬೆಳಗಿನ ಪ್ರಮುಖ ಸುದ್ದಿಗಳು

ಶುಕ್ರವಾರ | ಬೆಳಗಿನ ಪ್ರಮುಖ ಸುದ್ದಿಗಳು
- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದೂ ಕೂಡ ಬೆಂಗಳೂರಿನಲ್ಲಿ ಮಳೆಯಿಂದ ಹಾನಿಗೊಳಗಾಗಿರುವ ಪ್ರದೇಶಗಳ ವೀಕ್ಷಣೆಯನ್ನು ಮುಂದುವರೆಸಲಿದ್ದಾರೆ. ಸಾಯಿ ಬಡಾವಣೆ, ನಾಗಪ್ಪ ರೆಡ್ಡಿ ಬಡಾವಣೆ ಮತ್ತು ಪೈ ಬಡಾವಣೆಗಳಿಗೆ ಅವರು ಭೇಟಿ ನೀಡಲಿದ್ದಾರೆ.
- ಪರಿಷ್ಕೃತ ಕ್ರಿಯಾ ಯೋಜನೆ 2015 ರಲ್ಲಿ ಲೋಪವಿದೆ ಎಂಬ ಕಾರಣಕ್ಕೆ ಜಲ ಮೂಲಗಳ ಬಳಕೆಯನ್ನು ವಸತಿ ಉದ್ದೇಶಕ್ಕೆ ಪರಿವರ್ತಿಸುವ ಕುರಿತಂತೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಹೊರಡಿಸಿದ್ದ ಅಧಿಸೂಚನೆಯನ್ನು ತಕ್ಷಣವೇ ರದ್ದುಪಡಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಿಡಿಎ ಆಯುಕ್ತರಿಗೆ ಸೂಚಿಸಿದ್ದಾರೆ. ಅದರಂತೆ ಬಿಡಿಎ ಆಯುಕ್ತರು ಅಧಿಸೂಚನೆ ರದ್ದುಗೊಳಿಸಿ ಆದೇಶ ಹೊರಡಿಸಿದ್ದಾರೆ.
- ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕ ಪಡೆದ ಉಡುಪಿ, ವಿಜಯಪುರ, ಬೆಳಗಾವಿ, ತಿಪಟೂರು ಸೇರಿ ಹಲವು ಜಿಲ್ಲೆಗಳ ವಿದ್ಯಾರ್ಥಿಗಳಿಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸ್ವತಃ ಕರೆ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ.
- ಬೆಸ್ಕಾಂನ ಎಲ್ಲ ಕಾರ್ಯ ಮತ್ತು ಪಾಲನ ವಿಭಾಗಗಳಲ್ಲಿ ಪ್ರತಿ ತಿಂಗಳ ಮೂರನೇ ಶನಿವಾರದಂದು ಅಂದರೆ, ನಾಳೆ ಮಧ್ಯಾಹ್ನ 3 ಗಂಟೆಯಿಂದ 5.30ರವರೆಗೆ ಗ್ರಾಹಕ ಸಂವಾದ ಸಭೆಗಳನ್ನು ನಡೆಸಲಾಗುವುದು. ಗ್ರಾಹಕರು ವಿದ್ಯುತ್ಗೆ ಸಂಬಂಧಿಸಿದ ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದಾಗಿದೆ.
- ಜೈಪುರದಲ್ಲಿ ಇಂದು ನಡೆಯಲಿರುವ ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಪದಾಧಿಕಾರಿಗಳ ಸಭೆಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಲಿದ್ದಾರೆ. ನಂತರ ಅವರು ಪಕ್ಷದ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸೇರಿದಂತೆ ಹಲವು ರಾಷ್ಟ್ರೀಯ ನಾಯಕರು ಸಭೆಯಲ್ಲಿ ಭಾಗವಹಿಸಲಿದ್ದಾರೆ.
- ಇಂದಿನಿಂದಲೇ ಜಾರಿಗೆ ಬರುವಂತೆ ಕಚ್ಚಾ ಸೆಣಬಿನ ಮೇಲಿನ ಬೆಲೆ ಮಿತಿಯನ್ನು ತೆಗೆದುಹಾಕಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಕಳೆದ ವರ್ಷ ಸೆಪ್ಟಂಬರ್ 30ರಂದು ಸೆಣಬು ಕಾರ್ಖಾನೆಗಳು ಮತ್ತು ಇತರೆ ಬಳಕೆದಾರರು ಟಿಡಿ5 ದರ್ಜೆಯ ಸೆಣಬು ಖರೀದಿಸಲು ಪ್ರತಿ ಕ್ವಿಂಟಾಲ್ ಗೆ 6ಸಾವಿರದ 500ರೂಪಾಯಿ ಬೆಲೆ ಮಿತಿ ನಿಗದಿಪಡಿಸಲಾಗಿತ್ತು. ಕಚ್ಚಾ ಸೆಣಬು ವ್ಯಾಪಾರದ ಮಾರುಕಟ್ಟೆಯ ಎಲ್ಲ ಆಯಾಮಗಳನ್ನು ಪರಿಶೀಲಿಸಿದ ಬಳಿಕ ಈ ನಿರ್ಧಾರ ಕೈಗೊಳ್ಳಲಾಗಿದೆ.
- ಐಪಿಎಲ್ ಟಿ-20 ಕ್ರಿಕೆಟ್ನಲ್ಲಿಂದು ರಾಜಸ್ಥಾನ ರಾಯಲ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿವೆ. ಪಂದ್ಯ ರಾತ್ರಿ 7.30ಕ್ಕೆ ಆರಂಭವಾಗಲಿದೆ.
- ಬೆಂಗಳೂರಿನಲ್ಲಿ ಭಾರೀ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.
- ಇದೇ 22ರಂದು ಫಿಲ್ಮಾಹಾಲಿಕ್ ಫೌಂಡೇಶನ್ ವತಿಯಿಂದ 3ನೇ ವರ್ಷದ ಕರ್ನಾಟಕ ಯುವ ಅಂತಾರಾಷ್ಟ್ರೀಯ ಕಿರುಚಿತ್ರೋತ್ಸವ ಮತ್ತು ಮೈಸೂರು ಅಂತಾರಾಷ್ಟ್ರೀಯ ಜಲ ಚಲನಚಿತ್ರೋತ್ಸವ ಆಯೋಜಿಸಲಾಗಿದೆ. ಮೈಸೂರಿನ ರಂಗಮಂದಿರದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಮೈಸೂರು ಅಂತರಾಷ್ಟ್ರೀಯ ಜಲ ಚಲನಚಿತ್ರೋತ್ಸವದ ಮುಖ್ಯ ಉದ್ದೇಶ ಹೊಸ ತಲೆಮಾರಿನ ಚಲನಚಿತ್ರ ತಯಾರಕರಿಗೆ ಕಲಾತ್ಮಕ ಸೃಜನಶೀಲತೆಯನ್ನು ಪೋಷಿಸಿ ಮತ್ತು ಉತ್ತೇಜಿಸಿ ಅವರ ಚಲನಚಿತ್ರವನ್ನು ದೊಡ್ಡ ಮಟ್ಟದಲ್ಲಿ ಪ್ರದರ್ಶಿಸುವುದೇ ಆಗಿದೆ. 91ಕ್ಕೂ ಹೆಚ್ಚು ದೇಶಗಳ ಚಲನಚಿತ್ರ ತಯಾರಕರು ಭಾಗವಹಿಸಲಿದ್ದಾರೆ.
- ಚಾಮರಾಜನಗರ ತಾಲೂಕಿನ ಸುವರ್ಣಾವತಿ ಹಾಗೂ ಚಿಕ್ಕಹೊಳೆ ಜಲಾಶಯಗಳ ಜಲಾನಯನ ಪ್ರದೇಶದಲ್ಲಿ ಹೆಚ್ಚಿನ ಮಳೆಯಾಗುತ್ತಿದ್ದು ಜಲಾಶಯಗಳು ಯಾವುದೇ ಸಮಯದಲ್ಲಿ ಭರ್ತಿಯಾಗಬಹುದಾಗಿದೆ. ಜಲಾಶಯಗಳ ನದಿಪಾತ್ರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಕಾವೇರಿ ನೀರಾವರಿ ನಿಗಮದ ಕಬಿನಿ ನಾಲೆಗಳ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಮನವಿ ಮಾಡಿದ್ದಾರೆ.
- ಮಂಡ್ಯದಲ್ಲಿ ಭಾರಿ ಮಳೆಯಿಂದ ಬೀಡಿ ಕಾಲೋನಿಯ ಅನೇಕ ಮನೆಗಳಿಗೆ ನೀರು ನುಗ್ಗಿದೆ. ಜಿಲ್ಲಾಧಿಕಾರಿ ಎಸ್. ಅಶ್ವತಿ ಬೀಡಿ ಕಾಲೋನಿಗೆ ಭೇಟಿ ನೀಡಿ, ಪರಿಶೀಲಿಸಿ ಸದ್ಯಕ್ಕೆ ಕಾಲೋನಿಯ ನಿವಾಸಿಗಳನ್ನು ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
- ಮುಂಗಾರು ಋತುವಿನಲ್ಲಿ ವಿದ್ಯುತ್ ಬೇಡಿಕೆ ಪೂರೈಸುವ ನಿಟ್ಟಿನಲ್ಲಿ ಕೂಡಲೆ ಅಗತ್ಯ ಪ್ರಮಾಣದ ಕಲ್ಲಿದ್ದಲು ಆಮದು ಮಾಡಿಕೊಳ್ಳಲು ವಿದ್ಯುತ್ ಉತ್ಪಾದನಾ ಸಂಸ್ಥೆಗಳಿಗೆ ಸೂಚಿಸುವಂತೆ ಕರ್ನಾಟಕ ಸೇರಿದಂತೆ ಹಲವು ರಾಜ್ಯ ಸರ್ಕಾರಗಳಿಗೆ ಕೇಂದ್ರ ಸರಕಾರ ಸಲಹೆ ನೀಡಿದೆ. ರಾಜ್ಯ ಸರ್ಕಾರಗಳು ವಿದ್ಯುತ್ ಉತ್ಪಾದನೆಗಾಗಿ ಕೂಡಲೇ ಅಗತ್ಯ ಕಲ್ಲಿದ್ದಲು ಪ್ರಮಾಣದ ಶೇಕಡ10ರಷ್ಟನ್ನು ಆಮದು ಮಾಡಿಕೊಳ್ಳುವಂತೆ ಹಾಗೂ ಈ ತಿಂಗಳ 31ರೊಳಗೆ ಕಲ್ಲಿದ್ದಲು ಆಮದು ಆರ್ಡರ್ ನೀಡುವಂತೆ ಸಚಿವ ಆರ್ಕೆ ಸಿಂಗ್ ಸೂಚಿಸಿದ್ದಾರೆ.
- ಇದೇ 21 ಮತ್ತು 22ರಂದು ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆ ಯಾದಗಿರಿ ಜಿಲ್ಲೆಯಲ್ಲಿ ನಡೆಯಲಿದ್ದು, 6 ಸಾವಿರದ 625 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ. 28 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಡಾ. ಆರ್. ರಾಗಪ್ರಿಯಾ ಯಾದಗಿರಿಯಲ್ಲಿ ತಿಳಿಸಿದ್ದಾರೆ.
- ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮೇ 21ರಂದು ನಿಗದಿಯಾಗಿದ್ದ ಜಿಲ್ಲಾಧಿಕಾರಿಗಳ ನಡೆ-ಹಳ್ಳಿಗಳ ಕಡೆ ಕಾರ್ಯಕ್ರಮವನ್ನು ಮೇ 27ಕ್ಕೆ ಮುಂದೂಡಲಾಗಿದೆ. ಗ್ರಾಮ ಪಂಚಾಯಿತಿ ಸ್ಥಾನಗಳಿಗೆ ರಾಜ್ಯ ಚುನಾವಣಾ ಆಯೋಗ ಉಪ ಚುನಾವಣೆ ಘೋಷಿಸಿರುವುದರಿಂದ ಚುನಾವಣಾ ನೀತಿ ಸಂಹಿತೆ ಹಾಗೂ ಶಿಕ್ಷಣ ಇಲಾಖೆಯ ಟಿಇಟಿ ಪರೀಕ್ಷೆಯನ್ನು ಮೇ 21 ರಂದು ನಿಗದಿಗೊಳಿಸಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ತಿಳಿಸಿದ್ದಾರೆ.
- ದಾವಣಗೆರೆ ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಧಾರಾಕಾರ ಮಳೆಯಿಂದ ಕೆರೆ ಕಟ್ಟೆಗಳಿಗೆ ನೀರು ಬಂದಿದ್ದು, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ಮಳೆಯ ಅಬ್ಬರಕ್ಕೆ ಹರಿಹರ ಮತ್ತು ಹೊನ್ನಾಳಿ ತಾಲ್ಲೂಕಿನಲ್ಲಿ ಕೊಯ್ಲಿಗೆ ಬಂದಿದ್ದ ಭತ್ತ ನೆಲ ಕಚ್ಚಿದ್ದು, 1 ಸಾವಿರಕ್ಕೂ ಅಧಿಕ ಎಕರೆ ಪ್ರದೇಶದಲ್ಲಿ ಬೆಳೆ ಹಾಳಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದ್ದಾರೆ.
- ಅವಧಿಗೆ ಮುನ್ನವೇ ಮುಂಗಾರು ಅಪ್ಪಳಿಸಿರುವ ಕೇರಳದಲ್ಲಿ ಕಳೆದ ಕೆಲವು ದಿನಗಳಿಂದ ಭಾರಿ ಮಳೆಯಾಗುತ್ತಿದೆ. ಮುಂದಿನ 48 ಗಂಟೆಗಳಲ್ಲಿ ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ನಡುವೆ ಇಂದು ಕೂಡ ಕೇರಳ ರಾಜಧಾನಿ ತಿರುವನಂತಪುರಂ, ಕೊಲ್ಲಂ ಸೇರಿದಂತೆ ಒಟ್ಟು 12 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹವಾಮಾನ ಇಲಾಖೆ ಎಲ್ಲೋ ಅಲರ್ಟ್ ಘೋಷಿಸಿದೆ.
- ವಾರ್ಷಿಕ ಅಮರನಾಥ ಯಾತ್ರೆ ಹಾಗೂ ಮಚಲಿ ಯಾತ್ರೆಯ ಹಿನ್ನೆಲೆಯಲ್ಲಿ ಸೇನಾ ಪಡೆಗಳ ಹಾಗೂ ಗುಪ್ತಚರ ಇಲಾಖೆಯ ಹಿರಿಯ ಅಧಿಕಾರಿಗಳು ಭದ್ರತಾ ಪರಿಶೀಲನೆ ನಡೆಸಿದರು. ಲೆಫ್ಟಿನೆಂಟ್ ಜನರಲ್ ಮಂಜಿಂದರ್ ಸಿಂಗ್ ನೇತೃತ್ವದಲ್ಲಿ ಸೇನಾ ಪಡೆಗಳ ತಂಡ ಜಮ್ಮು ವಲಯದ ನಗ್ರೋಟಾ ಎಂಬಲ್ಲಿ ಭದ್ರತಾ ಸಿದ್ಧತೆಗಳ ಪರಿಶೀಲನೆ ನಡೆಸಿತು. ಜಮ್ಮು ಪೊಲೀಸ್ ಇಲಾಖೆಯ ಹೆಚ್ಚುವರಿ ಮಹಾ ನಿರ್ದೇಶಕ ಮುಖೇಶ್ ಸಿಂಗ್ ಹಾಗೂ ಗುಪ್ತಚರ ದಳದ ಹಿರಿಯ ಅಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.
- ಐಪಿಎಲ್ ಕ್ರಿಕೆಟ್ನಲ್ಲಿ ನಿನ್ನೆ ನಡೆದ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು 8 ವಿಕೆಟ್ಗಳಿಂದ ಜಯಗಳಿಸಿದೆ. ಟೈಟನ್ಸ್ ತಂಡ ಒಡ್ಡಿದ 169ರನ್ಗಳ ಗುರಿ ಬೆನ್ನೆತ್ತಿದ ಬೆಂಗಳೂರು ತಂಡ ಇನ್ನೂ 8ಎಸೆತಗಳು ಬಾಕಿ ಇರುವಂತೆ 2 ವಿಕೆಟ್ ನಷ್ಟಕ್ಕೆ 170ರನ್ಗಳಿಸಿ ಗೆಲುವಿನ ನಗೆ ಬೀರಿತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ನಿತ್ಯ ಭವಿಷ್ಯ7 days ago
ಇಂದಿನಿಂದಲೇ ಈ ರಾಶಿಗಳಿಗೆ ಧನ ಲಾಭ, ಸುಖ ಸಂಪತ್ತು ಪ್ರಾಪ್ತಿ! ಶನಿವಾರ ರಾಶಿ ಭವಿಷ್ಯ-ಮೇ-14,2022
-
ಅಂತರಂಗ7 days ago
ರಾಜ್ಯದ ಗಡಿಯಿಂದ ದೇಶದ ಗಡಿಗೆ ಪ್ರವಾಸದ ಕ್ಷಣಗಳು..!
-
ಬಹಿರಂಗ5 days ago
ಡಾಕಿನಿ ಎಂದರೆ ಬೌದ್ಧ ಭಿಕ್ಕುಣಿ / ಬೌದ್ಧ ಯೋಗಿಣಿ
-
ನೆಲದನಿ5 days ago
ಕಾಯಕ ಜೀವಿಗಳ ಚಳುವಳಿಯಲ್ಲಿ ಬುದ್ಧಪ್ರಜ್ಞೆ
-
ಬಹಿರಂಗ5 days ago
ದಯೆಯಾಗಿ ಚಳುವಳಿ ಕೈಗೊಂಡ ಮಹಾ ಜ್ಞಾನಿ ಬುದ್ಧ
-
ನಿತ್ಯ ಭವಿಷ್ಯ5 days ago
ಸೋಮವಾರ- ರಾಶಿ ಭವಿಷ್ಯ ಮೇ-16,2022 : ಈ ಚಂದ್ರ ಗ್ರಹಣದಿಂದಾಗಿ ಈ ರಾಶಿಗಳಿಗೆ ಸಂತೋಷವೇ ಸಂತೋಷ!
-
ನಿತ್ಯ ಭವಿಷ್ಯ6 days ago
ಭಾನುವಾರ- ರಾಶಿ ಭವಿಷ್ಯ ಮೇ-15,2022
-
ದಿನದ ಸುದ್ದಿ4 days ago
ಪರಿಶಿಷ್ಟ ಜಾತಿ ಕಾನೂನು ಪದವೀಧರರಿಗೆ ಶಿಷ್ಯ ವೇತನಕ್ಕೆ ಅರ್ಜಿ ಆಹ್ವಾನ