ಕ್ರೀಡೆ
ಏಷ್ಯನ್ ಗೇಮ್ಸ್ : ಬೋಪಣ್ಣ ಜೋಡಿ ಫೈನಲ್ ಗೆ

ಸುದ್ದಿದಿನ, ಜಕಾರ್ತ: ಭಾರತದ ತಾರಾ ಟೆನಿಸ್ ಆಟಗಾರರಾದ ರೋಹನ್ ಬೋಪಣ್ಣ ಮತ್ತು ದಿವಿಜ್ ಶರಣ್ ಜೋಡಿ, ಏಷ್ಯನ್ ಗೇಮ್ಸ್ ಪುರುಷರ ಡಬಲ್ಸ್ ಟೆನಿಸ್ ಟೂರ್ನಿಯಲ್ಲಿ ಫೈನಲ್ ಗೆ ಲಗ್ಗೆ ಇಟ್ಟಿದೆ.
ಗುರುವಾರ ನಡೆದ ಪುರುಷರ ಡಬಲ್ಸ್ ವಿಭಾಗದ ಸೆಮಿಫೈನಲ್ ನಲ್ಲಿ ಬೋಪಣ್ಣ ಮತ್ತು ದಿವಿಜ್ ಜೋಡಿ 4-6, 6-3, 10-8 ಸೆಟ್ಗಳಲ್ಲಿ ಜಪಾನ್ನ ಕೈಟೋ ಉಸುಗೀ ಮತ್ತು ಶೊ ಶಿಮಬುಕುರೊ ಜೋಡಿ ವಿರುದ್ಧ ಗೆಲುವು ಸಾಧಿಸಿತು.
ಪಂದ್ಯದ ಆರಂಭದಲ್ಲಿ ಉತ್ತಮ ಆಟವಾಡಿದ ಬೋಪಣ್ಣ ಜೋಡಿಗೆ, ಜಪಾನ್ ಆಟಗಾರರು ಮೊದಲ ಸೆಟ್ ನಲ್ಲಿ ಶಾಕ್ ನೀಡಿದರು. ಆದರೆ 2 ನೇ ಸೆಟ್ ನಲ್ಲಿ ಜಪಾನ್ ಆಟಗಾರರ ತಂತ್ರಕ್ಕೆ ತಿರುಗೇಟು ನೀಡುವಲ್ಲಿ ಭಾರತದ ಆಟಗಾರರು ಯಶ ಕಂಡರು.
ನಿರ್ಣಾಯಕ ಎನಿಸಿದ್ದ 3 ನೇ ಸೆಟ್ ನಲ್ಲಿ ಉಭಯ ತಂಡಗಳ ಆಟಗಾರರು ಜಿದ್ದಾ ಜಿದ್ದಿನ ಪೈಪೋಟಿ ನಡೆಸಿದರು. ಆದರೆ ಅಂತಿಮ ವಾಗಿ ಬೋಪಣ್ಣ ಜೋಡಿ 2 ಪಾಯಿಂಟ್ ಮುನ್ನಡೆ ಸಾಧಿಸಿ ಪಂದ್ಯ ಜಯಿಸಿತು.
ಸುದ್ದಿದಿನ.ಕಾಂ|ವಾಟ್ಸಾಪ್ |9986715401

ಕ್ರೀಡೆ
ಐಪಿಎಲ್ ಸುದ್ದಿ

ಸುದ್ದಿದಿನ ಡೆಸ್ಕ್ : ಮುಂಬೈನ ಬ್ರೆಬೌರ್ನ್ ಕ್ರೀಡಾಂಗಣದಲ್ಲಿ ನಿನ್ನೆ ರಾತ್ರಿ ನಡೆದ ಐಪಿಎಲ್ ಟಿ-20 ಕ್ರಿಕೆಟ್ ಟೂರ್ನಿಯ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ೨೪ ರನ್ಗಳಿಂದ ಲಖನೌ ಸೂಪರ್ ಜೈಂಟ್ಸ್ ತಂಡದ ವಿರುದ್ಧ ಜಯ ಗಳಿಸಿತು.
ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡ 20ಓವರುಗಳಲ್ಲಿ 6 ವಿಕೆಟ್ ನಷ್ಟಕ್ಕೆ 178ರನ್ ಗಳಿಸಿತು.
ಈ ಗುರಿ ಬೆನ್ನತ್ತಿದ ಲಖನೌ ಸೂಪರ್ ಜೈಂಟ್ಸ್ ತಂಡಕ್ಕೆ8ವಿಕೆಟ್ ನಷ್ಟಕ್ಕೆ 154 ರನ್ ಗಳಿಸಲಷ್ಟೇ ಸಾಧ್ಯವಾಯಿತು.
ವಾಂಖೆಡೆ ಕ್ರೀಡಾಂಗಣದಲ್ಲಿ ನಿನ್ನೆಯೇ ನಡೆದ ಮತ್ತೊಂದು ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡ 7 ವಿಕೆಟ್ಗಳಿಂದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಗೆಲುವು ದಾಖಲಿಸಿತು. ಮೊದಲು ಬ್ಯಾಟ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ಕೇವಲ 133 ರನ್ ಗಳಿಸಿತು. ಉತ್ತರವಾಗಿ 134 ರನ್ ಗಳ ಗುರಿಯತ್ತ ಸಾಗಿದ ಗುಜರಾತ್ ಟೈಟಾನ್ಸ್ 19.1 ಓವರುಗಳಲ್ಲಿ 3ವಿಕೆಟ್ ನಷ್ಟಕ್ಕೆ 137 ರನ್ ಗಳಿಸಿ ವಿಜಯೋತ್ಸವ ಆಚರಿಸಿತು.
ಇಂದು ನವಿ ಮುಂಬೈನ ಡಿ.ವೈ. ಪಾಟೀಲ್ ಕ್ರೀಡಾಂಗಣದಲ್ಲಿ ರಾತ್ರಿ 7.30 ಕ್ಕೆ ಆರಂಭವಾಗಲಿರುವ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಲಿವೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ಬ್ಯಾಂಕಾಕ್ ಥಾಮಸ್ ಕಪ್ ಬ್ಯಾಡ್ಮಿಂಟನ್ ಟೂರ್ನಿ : ಇತಿಹಾಸ ನಿರ್ಮಿಸಿದ ಭಾರತ ತಂಡದ ಆಟಗಾರರಿಗೆ ಪ್ರಧಾನಿ ನರೇಂದ್ರ ಮೋದಿ ಶುಭಾಶಯ

ಸುದ್ದಿದಿನ ಡೆಸ್ಕ್ : ಬ್ಯಾಂಕಾಕ್ನಲ್ಲಿ ನಡೆದ ಥಾಮಸ್ ಕಪ್ ಬ್ಯಾಡ್ಮಿಂಟನ್ ಟೂರ್ನಿ ಗೆದ್ದು, ಇತಿಹಾಸ ನಿರ್ಮಿಸಿದ ಭಾರತ ತಂಡದ ಆಟಗಾರರಿಗೆ ಪ್ರಧಾನಿ ನರೇಂದ್ರ ಮೋದಿ ಶುಭಾಶಯ ಕೋರಿದ್ದಾರೆ.
ತಂಡದ ಆಟಗಾರರೊಂದಿಗೆ ಈ ಐತಿಹಾಸಿಕ ಸಾಧನೆಯ ಕುರಿತು ಮಾತನಾಡಿರುವ ಪ್ರಧಾನಮಂತ್ರಿಯವರು ಎಲ್ಲರಿಗೂ ಅಭಿನಂದನೆ ಸಲ್ಲಿಸಿ ದೇಶೀಯ ಕ್ರೀಡೆಯಲ್ಲಿ ಇದೊಂದು ಆಕರ್ಷಣೀಯ ಗೆಲುವಾಗಿದೆ ಎಂದು ಶ್ಲಾಘನೆ ವ್ಯಕ್ತಪಡಿಸಿದರು.
ಪ್ರತಿಯೊಬ್ಬ ಆಟಗಾರ ಪ್ರತಿಷತ 100ರಷ್ಟು ಸಾಮರ್ಥ್ಯ ತೋರಿದ್ದು, ತಂಡದ ಸ್ಫೂರ್ತಿಗೆ ನಿದರ್ಶನವಾಗಿದೆ. ಜೊತೆಗೆ ತರಬೇತುದಾರರು ಸಹ ಈ ಗೆಲುವಿಗೆ ಅರ್ಹರು ಎಂದು ಪ್ರಧಾನಿಯವರು ಈ ಸಂದರ್ಭದಲ್ಲಿ ಹೇಳಿದರು.
ಎಲ್ಲಾ ಆಟಗಾರರು ಸ್ವದೇಶದಿಂದ ಹಿಂತಿರುಗಿದ ಬಳಿಕ ತಮ್ಮ ಕೋಚ್ಗಳೊಂದಿಗೆ ನಿವಾಸಕ್ಕೆ ಆಗಮಸುವಂತೆಯೂ ಆಹ್ವಾನ ನೀಡಿರುವ ನರೇಂದ್ರ ಮೋದಿಯವರು ಅನೇಕ ಆಟಗಾರರ ಅನುಭವವನ್ನು ಕೇಳಿ ತಿಳಿದುಕೊಂಡರು.
ಥಾಮಸ್ ಕಪ್ ಬ್ಯಾಡ್ಮಿಂಟನ್ ಟೂರ್ನಿಯ ಫೈನಲ್ನಲ್ಲಿ ಭಾರತದ ಪುರುಷರ ತಂಡ 14 ಬಾರಿಯ ಚಾಂಪಿಯನ್ ಇಂಡೋನೇಷಿಯಾ ತಂಡದ ವಿರುದ್ಧ 3-0 ಅಂಕಗಳಿಂದ ಜಯಗಳಿಸಿ ಈ ಐತಿಹಾಸಿಕ ಸಾಧನೆ ಮಾಡಿತ್ತು.
A special interaction with our badminton 🏸 champions, who have won the Thomas Cup and made 135 crore Indians proud. pic.twitter.com/KdRYVscDAK
— Narendra Modi (@narendramodi) May 15, 2022
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ನಾಳೆಯಿಂದ ಬೆಂಗಳೂರಿನಲ್ಲಿ ಮಿನಿ ಓಲಂಪಿಕ್ ಕ್ರೀಡಾಕೂಟ

ಸುದ್ದಿದಿನ ಡೆಸ್ಕ್ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಕ್ರೀಡಾ ಪ್ರಾಧಿಕಾರ, ಕರ್ನಾಟಕ ಓಲಂಪಿಕ್ಸ್ ಸಂಸ್ಥೆ ಜಂಟಿಯಾಗಿ ಆಯೋಜಿಸಿರುವ ಮಿನಿ ಓಲಂಪಿಕ್ ಕ್ರೀಡಾಕೂಟ – 2022 ನಾಳೆಯಿಂದ ಬೆಂಗಳೂರಿನ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ಆರಂಭವಾಗಲಿದೆ.
ರಾಜ್ಯಪಾಲ ಥಾವರ್ ಚೆಂದ್ ಗೆಲ್ಹೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜಂಟಿಯಾಗಿ ಕ್ರೀಡಾಕೂಟಕ್ಕೆ ಚಾಲನೆ ನೀಡಲಿದ್ದಾರೆ. ಈ ಮಿನಿ ಓಲಂಪಿಕ್ ಕ್ರೀಡಾಕೂಟದಲ್ಲಿ 3 ಸಾವಿರ ಅಥ್ಲೇಟ್ಗಳು ಭಾಗವಹಿಸಲಿದ್ದಾರೆ. ಕ್ರೀಡಾಕೂಟದಲ್ಲಿ 21 ವಿವಿಧ ಕ್ರೀಡಾ ಸ್ಪರ್ಧೆಗಳು ನಡೆಯಲಿವೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಕ್ರೀಡೆ7 days ago
ಮಧ್ಯಾಹ್ನದ ಪ್ರಮುಖ ಸುದ್ದಿಗಳು
-
ಸಿನಿ ಸುದ್ದಿ7 days ago
ವಿದ್ಯುತ್ ಶಾಕ್ ನಿಂದ ಜೂ.ರವಿಚಂದ್ರನ್ ಖ್ಯಾತಿಯ ಲಕ್ಷ್ಮಿನಾರಾಯಣ್ ಸಾವು
-
ದಿನದ ಸುದ್ದಿ7 days ago
ವಿಧಾನ ಪರಿಷತ್ತಿನ 7 ಸ್ಥಾನಗಳಿಗೆ ಜೂನ್ 3ರಂದು ಚುನಾವಣೆ : ಆಯೋಗದಿಂದ ವೇಳಾಪಟ್ಟಿ ಪ್ರಕಟ
-
ನಿತ್ಯ ಭವಿಷ್ಯ6 days ago
ಈ ರಾಶಿಯ ನವದಂಪತಿಗಳಿಗೆ ಘರ್ಷಣೆ ಸಾಧ್ಯತೆ! ಈ ರಾಶಿಯ ಉದ್ಯೋಗಿಗಳು ಎದುರಾಳಿಯ ಪಿತೂರಿಗಳು ಎದುರಿಸಬೇಕಾಗುವುದು! ಬುಧವಾರ ರಾಶಿ ಭವಿಷ್ಯ-ಮೇ-11,2022
-
ದಿನದ ಸುದ್ದಿ6 days ago
ಸಮೀಕ್ಷೆ ಆಧಾರದಲ್ಲಿ ಹಿಂದುಳಿದ ವರ್ಗಗಳಿಗೆ ರಾಜಕೀಯ ಮೀಸಲಾತಿ ರೂಪಿಸಿ ; ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲು ಅವಕಾಶ ಕೊಡಿ : ಸಿಎಂ ಬೊಮ್ಮಾಯಿ ಗೆ ಸಿದ್ದರಾಮಯ್ಯ ಆಗ್ರಹ
-
ದಿನದ ಸುದ್ದಿ6 days ago
ದಾವಣಗೆರೆ | ಮತದಾರರ ಪಟ್ಟಿ ಪರಿಷ್ಕರಣೆಗೆ ಮನೆ-ಮನೆ ಭೇಟಿ
-
ದಿನದ ಸುದ್ದಿ6 days ago
15 ದಿನಗಳಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ; ಆದೇಶ ಪಾಲಿಸಲು ಕ್ರಮ : ಸಿಎಂ ಬೊಮ್ಮಾಯಿ
-
ದಿನದ ಸುದ್ದಿ6 days ago
ಶ್ರೀಲಂಕಾ ಮಾಜಿ ಪ್ರಧಾನಿ ಮಹಿಂದಾ ರಾಜಪಕ್ಸ ಭಾರತಕ್ಕೆ ಪಲಾಯನ ಕುರಿತ ವರದಿ ನಿರಾಧಾರ : ಕೊಲಂಬೊದ ಭಾರತೀಯ ರಾಯಭಾರಿ ಕಚೇರಿ ಸ್ಪಷ್ಟನೆ