ದಿನದ ಸುದ್ದಿ
ಗಾಂಧೀಜಿ, ಶಾಸ್ತ್ರೀಜಿ ಆದರ್ಶಗಳನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳ ಬೇಕು | ಸಚಿವ ಸಿ.ಎಸ್.ಪುಟ್ಟರಾಜು
ಸುದ್ದಿದಿನ,ಮಂಡ್ಯ : ಭಾರತದ ಸ್ವಾತಂತ್ರ್ಯಕ್ಕಾಗಿ ತಮ್ಮ ಪ್ರಾಣವನ್ನೇ ಮುಡುಪಾಗಿಟ್ಟ ಮಹನೀಯರಾದ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಆದರ್ಶಗಳನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಬೇಕೆಂದು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಣ್ಣ ನೀರಾವರಿ ಸಚಿವರಾದ ಸಿ.ಎಸ್.ಪುಟ್ಟರಾಜು ಅವರು ತಿಳಿಸಿದರು.
ಅವರು ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ನೆಹರು ಯುವ ಕೇಂದ್ರ, ಮಂಡ್ಯ ಇವರ ಸಹಯೋಗದಲ್ಲಿ ಜಿಲ್ಲಾಧಿಕಾರಿಗಳ ಕಛೇರಿ ಮುಂಭಾಗದ ಕಾವೇರಿ ಉದ್ಯಾನವನದಲ್ಲಿರುವ ಮಹಾತ್ಮ ಗಾಂಧೀಜಿಯವರ ಪುತ್ಥಳಿಯ ಮುಂಭಾಗದಲ್ಲಿ ಹಮ್ಮಿಕೊಳ್ಳಲಾದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನಾಚರಣೆ ಸಮಾರಂಭದಲ್ಲಿ ಮಾತನಾಡಿದ ಅವರು ಗಾಂಧೀಜಿ ತನ್ನ ಚಿಂತನೆ, ಜೀವನ ಸಂದೇಶಗಳಿಂದಲೇ ಜಗತ್ತಿನುದ್ದಕ್ಕೂ ವ್ಯಾಪಿಸಿ ನಿಂತ ಈ ಮಹಾನ್ ಚೇತನವಾದ ಇವರುಗಳ ಅವರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಅದರಂತೆ ನಡೆದಾಗ ಮಾತ್ರ ಅವರಿಗೆ ನಾವು ಸಲ್ಲಿಸುವ ಗೌರವ ಎಂದು ಹೇಳಿದರು.
ಮಹಾತ್ಮ ಗಾಂಧೀಜಿ ಹಾಗೂ ಶಾಸ್ತ್ರೀಜಿ ಅವರು ನುಡಿದಂತೆ ನಡೆದವರು. ಜಗತ್ತಿನ ಎಲ್ಲಾ ಶ್ರೇಷ್ಠ ಧರ್ಮಗಳು ಮಾನವತೆಯ ಸಮಾನತೆ, ಭಾತೃತ್ವ ಹಾಗೂ ಸಹನೆಯ ಸದ್ಗುಣಗಳನ್ನು ಸಾರಿ ಸಾರಿ ಹೇಳುತ್ತವೆ. ಇದನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದ ಸಚಿವರು ಸೇವೆ ಮಾಡುವುದರ ಮೂಲಕ ನಿನ್ನನ್ನು ನೀನು ಕಾಣಬಹುದಾಗಿದೆ ಎಂದು ಅವರು ತಿಳಿಸಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ವಿಶೇಷ ಉಪನ್ಯಾಸ ನೀಡಿ ಮಾತನಾಡಿದ ಜೀವ ವಿಮಾ ನಿಗಮದ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ್ ಶೆಟ್ಟಿ ಅವರು ಸತ್ಯ, ಶಾಂತಿ, ಅಹಿಂಸೆ, ಸತ್ಯಾಗ್ರಹ ಮತ್ತು ಹೋರಾಟದ ಮೂಲಕವೇ ಜಗತ್ತನ್ನು ಗೆದ್ದವರು ಗಾಂಧೀಜಿ. ಯುಗ ಪುರುಷ, ಫಾದರ್ ಆಫ್ ದಿ ನೇಷನ್ ಎಂದು ಕರೆಸಿಕೊಂಡಿದ್ದು ಗಾಂಧೀಜೀಯವರ ಹೆಚ್ಚುಗಾರಿಕೆಯಾಗಿದೆ ಎಂದು ತಿಳಿಸಿದ ಅವರು ಶಾಸ್ತ್ರೀಜಿ ಅವರು ಕೇವಲ 19 ತಿಂಗಳು ಪ್ರಧಾನ ಮಂತ್ರಿಯಾಗಿದ್ದರೂ ಇಡೀ ಪ್ರಪಂಚವೇ ಮೆಚ್ಚುವಂತಹ ಆಳ್ವಿಕೆ ನಡೆಸಿದರು ಎಂದು ತಿಳಿಸಿದರು.
ಗಾಂಧೀಜಿ ಅವರ ಆದರ್ಶಗಳು ಹಾಗೂ ತತ್ವಗಳನ್ನು ಇಂದಿನ ಯುವಜನತೆ ಮೈಗೂಡಿಸಿಕೊಳ್ಳಬೇಕು. ಇದರಿಂದ ದೇಶದ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ತಿಳಿಸಿದ ಅವರು ತನ್ನ ಚಿಂತನೆ, ಜೀವನ ಸಂದೇಶಗಳಿಂದಲೇ ಜಗತ್ತಿನುದ್ದಕ್ಕೂ ವ್ಯಾಪಿಸಿ ನಿಂತ ಈ ಮಹಾನ್ ಚೇತನವನ್ನು ತಿಳಿಯಬೇಕಾದರೆ ಅವರು ನಡೆಸಿದ ಜೀವನವನ್ನು ತಿಳಿಯಬೇಕು ಎಂದು ಅವರು ತಿಳಿಸಿದರು.
ಜನಮನ ಸೆಳದ ಛಾಯಾಚಿತ್ರ ಪ್ರದರ್ಶನ
ಕಾವೇರಿ ಉದ್ಯಾನವನದಲ್ಲಿರುವ ಮಹಾತ್ಮ ಗಾಂಧೀಜಿಯವರ ಪುತ್ಥಳಿಯ ಮುಂಭಾಗದಲ್ಲಿ ಹಮ್ಮಿಕೊಳ್ಳಲಾದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಹಾತ್ಮ ಗಾಂಧೀಜಿಯವರ ಅಪರೂಪದ ಛಾಯಾಚಿತ್ರಗಳು ವಿಶೇಷವಾಗಿತು. ಬಾಪು ಹುಟ್ಟು, ಶಿಕ್ಷಣ, ಬಾಲ್ಯಾ ಜೀವನ, ಕರ್ನಾಟಕದಲ್ಲಿ ಗಾಂಧೀಜಿ, ಅವರು ಆರಂಭಿಸಿದ ಸತ್ಯಾಗ್ರಹ, ಉಪವಾಸ ಈ ವಿಷಯಗಳ ಛಾಯಾಚಿತ್ರಗಳು ಹೆಚ್ಚಿನ ಸಾರ್ವಜನಿಕರನ್ನು ಆಕರ್ಷಿಸಿತು.
ಈ ಸಂದರ್ಭದಲ್ಲಿ ಉಸ್ತುವಾರಿ ಸಚಿವರು ಹಾಗೂ ಜನಪ್ರತಿಧಿಗಳು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ನಿರ್ಮಿಸಲಾದ ಗಾಂಧಿ ಆತ್ಮಚರಿತ್ರೆ ಕುರಿತ ಸಾಕ್ಷ್ಯಚಿತ್ರ ಹಾಗೂ ಛಾಯಾಚಿತ್ರವನ್ನು ವಿಕ್ಷಣೆ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿ ಜಿಲ್ಲಾಡಳಿಕ್ಕೆ ಅಭಿನಂದನೆ ಸಲ್ಲಿಸಿದರು.
ಅಲ್ಲದೇ ಆಯುಷ್ ಇಲಾಖೆಯಿಂದ ಆಯುರ್ವೇದ ಆರೋಗ್ಯ ಶಿಬಿರ ಈ ಬಾರಿ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ವಿಶೇಷವಾಗಿತ್ತು. ಕಾರ್ಯಕ್ರಮದಲ್ಲಿ ಸರ್ವಧರ್ಮ ಪ್ರಾರ್ಥನೆ ಹಾಗೂ ಭಜನೆ ಕಾರ್ಯಕ್ರಮಗಳು ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಶಾಸಕರಾದ ಕೆ.ಟಿ.ಶ್ರೀಕಂಠೇಗೌಡ, ಮಂಡ್ಯ ಜಿಲ್ಲಾಧಿಕಾರಿಗಳಾದ ಎನ್.ಮಂಜುಶ್ರೀ, ಅಪರ ಜಿಲ್ಲಾಧಿಕಾರಿಗಳಾದ ಬಿ.ಪಿ.ವಿಜಯ್, ಅಪರ ಪೊಲೀಸ್ ವರಿಷ್ಠಾಧಿಕಾರಿಗಳಾದ ಲಾವಣ್ಯ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಇತರೆ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ಮೈಸೂರು ವಿ.ವಿಯಲ್ಲಿ ಬುದ್ಧಪೀಠ ಸ್ಥಾಪನೆ : ಜಾಗ ನೀಡುವ ಭರವಸೆ ಕೊಟ್ಟ ಕುಲಪತಿ

ಸುದ್ದಿದಿನ, ಮೈಸೂರು : ಸಂಸದ ಶ್ರೀನಿವಾಸ ಪ್ರಸಾದ್ ಅವರ ಮನವಿಗೆ ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಜಿ. ಹೇಮಂತ್ ಕುಮಾರ್ ಸ್ಪಂದಿಸಿ, ಪೀಠ ಸ್ಥಾಪನೆಗೆ ಜಾಗ ನೀಡುವ ಭರವಸೆ ನೀಡಿದ್ದಾರೆ. ಬುದ್ಧ ಪೂರ್ಣಿಮೆ ಅಂಗವಾಗಿ ಮೈಸೂರಿನಲ್ಲಿಂದು ಸಮಕಾಲೀನ ಜಗತ್ತಿಗೆ ಬುದ್ಧನ ಚಿಂತನೆಗಳು ಎಂಬ ವಿಷಯ ಕುರಿತ ಉಪನ್ಯಾಸ ಕಾರ್ಯಕ್ರಮದಲ್ಲಿ ಸಂಸದ ಶ್ರೀನಿವಾಸ ಪ್ರಸಾದ್ ಮಾತನಾಡಿದರು.
ಮೈಸೂರು ವಿಶ್ವವಿದ್ಯಾಲಯದಲ್ಲಿ ಬುದ್ಧಪೀಠ ಸ್ಥಾಪಿಸಬೇಕೆಂಬ ಸಂಸದ ಶ್ರೀನಿವಾಸ ಪ್ರಸಾದ್ ಅವರ ಮನವಿಗೆ ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಜಿ. ಹೇಮಂತ್ ಕುಮಾರ್ ಸ್ಪಂದಿಸಿ, ಪೀಠ ಸ್ಥಾಪನೆಗೆ ಜಾಗ ನೀಡುವ ಭರವಸೆ ನೀಡಿದ್ದಾರೆ.
ಬುದ್ಧ ಪೂರ್ಣಿಮೆ ಅಂಗವಾಗಿ ಮೈಸೂರಿನಲ್ಲಿ ಸೋಮವಾರ ಸಮಕಾಲೀನ ಜಗತ್ತಿಗೆ ಬುದ್ಧನ ಚಿಂತನೆಗಳು ಎಂಬ ವಿಷಯ ಕುರಿತ ಉಪನ್ಯಾಸ ಕಾರ್ಯಕ್ರಮದಲ್ಲಿ ಸಂಸದ ಶ್ರೀನಿವಾಸ ಪ್ರಸಾದ್ ಮಾತನಾಡಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಬಯಲುಸೀಮೆ ಭಾಗಕ್ಕೆ ಶಾಶ್ವತ ನೀರಾವರಿ ಸೌಲಭ್ಯ : ಸಚಿವ ಜೆ.ಸಿ ಮಾಧುಸ್ವಾಮಿ

ಸುದ್ದಿದಿನ, ಚಿಕ್ಕಮಗಳೂರು : ಬಯಲುಸೀಮೆ ಭಾಗಕ್ಕೆ ಶಾಶ್ವತ ನೀರಾವರಿ ಸೌಲಭ್ಯ ಕಲ್ಪಿಸಲಾಗುವುದು ಎಂದು ಸಣ್ಣ ನೀರಾವರಿ ಸಚಿವ ಜೆ.ಸಿ ಮಾಧುಸ್ವಾಮಿ ಹೇಳಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ಭಕ್ತನಕಟ್ಟೆ ಗ್ರಾಮದಲ್ಲಿ ನಿನ್ನೆ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಈ ಭಾಗದಲ್ಲಿ ಮಳೆಯಾಧಾರಿತ ಬೆಳೆ ಬೆಳೆಯುವ ಬಯಲುಸೀಮೆ ಭಾಗಗಳಿಗೆ ಶಾಶ್ವತ ನೀರಾವರಿ ಸೌಲಭ್ಯ ಒದಗಿಸಲು ಚಿಂತಿಸಲಾಗಿದೆ ಎಂದರು.
ರಾಜ್ಯದಲ್ಲಿ ಅಗಾಧ ನೀರಿನ ಸಂಪತ್ತು ಇದ್ದರೂ ಸದ್ಬಳಕೆಯಾಗುತ್ತಿಲ್ಲ. ಈ ನಿಟ್ಟಿನಲ್ಲಿ ಇಲಾಖೆ ಹಲವು ಯೋಜನೆಗಳನ್ನು ಜಾರಿಗೆ ತರಲು ರೂಪುರೇಷೆ ಸಿದ್ಧಪಡಿಸುತ್ತಿದೆ. ತಾವು ಮಂತ್ರಿಯಾದ ನಂತರ ಸಣ್ಣ ನೀರಾವರಿ ಇಲಾಖೆಗೆ 8 ಸಾವಿರ ಕೋಟಿ ರೂಪಾಯಿ ಅನುದಾನ ನೀಡಲಾಗಿದೆ ಎಂದು ಸಚಿವರು ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ರಾಜ್ಯಾದ್ಯಂತ ಶಾಲೆಗಳು ಆರಂಭ : ಪಠ್ಯ, ಸಮವಸ್ತ್ರ ಪೂರೈಕೆಗೆ ಕ್ರಮ : ಸಿಎಂ ಬೊಮ್ಮಾಯಿ

ಸುದ್ದಿದಿನ, ಬೆಂಗಳೂರು : ಶಾಲಾ ವಿದ್ಯಾರ್ಥಿಗಳಿಗೆ ಅಗತ್ಯ ಪಠ್ಯಪುಸ್ತಕ, ಸಮವಸ್ತ್ರ ಮತ್ತು ಸೈಕಲ್ ವಿತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಜೊತೆ ಮಾತನಾಡಿದ ಅವರು, ಮಕ್ಕಳಿಗೆ ಶಿಕ್ಷಣ ಬಹಳಮುಖ್ಯ ಒಳ್ಳೆಯ ವಾತಾವರಣದಲ್ಲಿ ಶಾಲೆಗಳು ಆರಂಭವಾಗುತ್ತಿರುವುದು ಉತ್ತಮ ಬೆಳವಣಿಗೆ ಎಂದು ಹೇಳಿದರು.
ಈ ನಡುವೆ ರಾಜ್ಯಾದ್ಯಂತ ಇಂದಿನಿಂದ ಶಾಲೆಗಳು ಆರಂಭವಾಗಿದ್ದು, ಶಾಲಾ ಆವರಣದಲ್ಲಿ ಚಿಣ್ಣರ ಕಲರವ ಕೇಳಿ ಬರುತ್ತಿದ್ದು, ವಿದ್ಯಾರ್ಥಿಗಳಲ್ಲಿ ಹೊಸ ಹುಮ್ಮಸ್ಸು, ಸಂಚಲನ ಮೂಡಿಸಿದೆ. ದಕ್ಷಿಣಕನ್ನಡ ಜಿಲ್ಲೆಯಲ್ಲಿ ಶಾಲಾ ಪ್ರಾರಂಭೋತ್ಸವ ವಿಜೃಂಭಣೆಯಿಂದ ನೆರವೇರಿತು. ಊರಿನ ಗಣ್ಯರು, ಶಿಕ್ಷಕರು ಮಕ್ಕಳಿಗೆ ಆರತಿ ಬೆಳಗಿ, ಹೂ ನೀಡಿ ಸ್ವಾಗತಿಸಿದರು.
ಜಿಲ್ಲೆಯ ಪುಂಜಾಲಕಟ್ಟೆ ಶಾಲೆಯಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಶಾಲಾ ಆರಂಭಕ್ಕೆ ಚಾಲನೆ ನೀಡಿದರು. ಬಳಿಕ ಅವರು ಮಾತನಾಡಿ, ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ಅವರನ್ನು ಸತ್ಪ್ರಜೆಗಳನ್ನಾಗಿ ರೂಪಿಸುವುದು ಎಲ್ಲರ ಕರ್ತವ್ಯ ಎಂದು ಹೇಳಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶಾಲೆಗಳನ್ನು ಸ್ವಚ್ಛಗೊಳಿಸಿ, ತಳಿರು ತೋರಣಗಳೊಂದಿಗೆ ಸಿಂಗರಿಸಲಾಗಿತ್ತು. ಮಕ್ಕಳಿಗೆ ಹೂ ಹಾಗೂ ಸಿಹಿ ನೀಡಿ ಸ್ವಾಗತಿಸಲಾಯಿತು. ಜಿಲ್ಲೆಯ ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಶಾಸಕ ಟಿ.ವೆಂಕಟರಮಣಯ್ಯ ಮಕ್ಕಳಿಗೆ ಹೂ ಹಾಗೂ ಸಿಹಿ ನೀಡಿ ಸ್ವಾಗತಿಸಿದರು.
ದಾವಣಗೆರೆ ಜಿಲ್ಲೆಯಲ್ಲಿ ಪ್ರಾಥಮಿಕ ಮತು ಪ್ರೌಢಶಾಲೆಗಳು ಇಂದು ಆರಂಭವಾಗಿವೆ. ಮಕ್ಕಳ ಸ್ವಾಗತಕ್ಕೆ ಶಾಲೆಗಳನ್ನು ವಿಶೇಷವಾಗಿ ಅಲಂಕರಿಸಲಾಗಿತ್ತು. ಮಕ್ಕಳು ಶಾಲಾ ಅಂಗಳಕ್ಕೆ ಬರುತ್ತಿದ್ದಂತೆಯೆ ಶಿಕ್ಷಕರು ಸಿಹಿತಿನಿಸು ಮತ್ತು ಹೂಗಳನ್ನು ನೀಡಿ ಸ್ವಾಗತಿಸಿದರು.
ಜಿಲ್ಲೆಯಲ್ಲಿ 587 ಕಿರಿಯ ಪ್ರಾಥಮಿಕ, 947 ಹಿರಿಯ ಪ್ರಾಥಮಿಕ ಮತ್ತು 503 ಪ್ರೌಢಶಾಲೆಗಳು ಸೇರಿದಂತೆ ಒಟ್ಟಾರೆ 2ಸಾವಿರದ 960 ಶಾಲೆಗಳು ಆರಂಭಗೊಂಡಿವೆ ಎಂದು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಜಿ.ಆರ್.ತಿಪ್ಪೇಶಪ್ಪ ತಿಳಿಸಿದ್ದಾರೆ.
ಚಿತ್ರದುರ್ಗ ಜಿಲ್ಲೆಯಲ್ಲೂ ಶಾಲೆಗಳ ಆವರಣದಲ್ಲಿ ಹಬ್ಬದ ಸಡಗರ-ಸಂಭ್ರಮ ಮನೆ ಮಾಡಿದೆ. 2 ವರ್ಷಗಳ ನಂತರ ಶಾಲೆ ಪುನಾರಂಭಗೊಂಡ ಹಿನ್ನೆಲೆಯಲ್ಲಿ ಶಿಕ್ಷಕರು, ಮಕ್ಕಳಿಗೆ ಹೂ ನೀಡಿ ಆತ್ಮೀಯವಾಗಿ ಬರಮಾಡಿಕೊಂಡರು.
ಚಿಕ್ಕಮಗಳೂರು ಜಿಲ್ಲೆಯಲ್ಲಿ ಶಾಲೆಗಳು ಆರಂಭವಾಗಿದ್ದು ನಗರದ ಬಸವನಹಳ್ಳಿ ಬಾಲಕಿಯರ ಶಾಲೆಯಲ್ಲಿ ಶಿಕ್ಷಣ ಅಧಿಕಾರಿಗಳು ಶಾಲಾ ಸಿಬ್ಬಂದಿ ಮಕ್ಕಳಿಗೆ ಹೂಗಳನ್ನು ನೀಡಿ ಸ್ವಾಗತಿಸಿದರು.
ಗದಗ ಜಿಲ್ಲೆಯಲ್ಲಿ ಇಂದಿನಿಂದ 1ಸಾವಿರದ 381ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಆರಂಭಗೊಂಡಿವೆ. ಲಕ್ಕುಂಡಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ, ಶಾಲಾ ಮಕ್ಕಳಿಗೆ ಸಿಹಿವಿತರಿಸಿ, ಹೂ ನೀಡುವ ಮೂಲಕ ಶಾಲೆಯ ಆರಂಭಕ್ಕೆ ಚಾಲನೆ ನೀಡಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಕ್ರೀಡೆ7 days ago
ಮಧ್ಯಾಹ್ನದ ಪ್ರಮುಖ ಸುದ್ದಿಗಳು
-
ಸಿನಿ ಸುದ್ದಿ7 days ago
ವಿದ್ಯುತ್ ಶಾಕ್ ನಿಂದ ಜೂ.ರವಿಚಂದ್ರನ್ ಖ್ಯಾತಿಯ ಲಕ್ಷ್ಮಿನಾರಾಯಣ್ ಸಾವು
-
ದಿನದ ಸುದ್ದಿ7 days ago
ವಿಧಾನ ಪರಿಷತ್ತಿನ 7 ಸ್ಥಾನಗಳಿಗೆ ಜೂನ್ 3ರಂದು ಚುನಾವಣೆ : ಆಯೋಗದಿಂದ ವೇಳಾಪಟ್ಟಿ ಪ್ರಕಟ
-
ನಿತ್ಯ ಭವಿಷ್ಯ6 days ago
ಈ ರಾಶಿಯ ನವದಂಪತಿಗಳಿಗೆ ಘರ್ಷಣೆ ಸಾಧ್ಯತೆ! ಈ ರಾಶಿಯ ಉದ್ಯೋಗಿಗಳು ಎದುರಾಳಿಯ ಪಿತೂರಿಗಳು ಎದುರಿಸಬೇಕಾಗುವುದು! ಬುಧವಾರ ರಾಶಿ ಭವಿಷ್ಯ-ಮೇ-11,2022
-
ದಿನದ ಸುದ್ದಿ6 days ago
ಸಮೀಕ್ಷೆ ಆಧಾರದಲ್ಲಿ ಹಿಂದುಳಿದ ವರ್ಗಗಳಿಗೆ ರಾಜಕೀಯ ಮೀಸಲಾತಿ ರೂಪಿಸಿ ; ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲು ಅವಕಾಶ ಕೊಡಿ : ಸಿಎಂ ಬೊಮ್ಮಾಯಿ ಗೆ ಸಿದ್ದರಾಮಯ್ಯ ಆಗ್ರಹ
-
ದಿನದ ಸುದ್ದಿ6 days ago
ದಾವಣಗೆರೆ | ಮತದಾರರ ಪಟ್ಟಿ ಪರಿಷ್ಕರಣೆಗೆ ಮನೆ-ಮನೆ ಭೇಟಿ
-
ದಿನದ ಸುದ್ದಿ6 days ago
15 ದಿನಗಳಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ; ಆದೇಶ ಪಾಲಿಸಲು ಕ್ರಮ : ಸಿಎಂ ಬೊಮ್ಮಾಯಿ
-
ದಿನದ ಸುದ್ದಿ6 days ago
ಶ್ರೀಲಂಕಾ ಮಾಜಿ ಪ್ರಧಾನಿ ಮಹಿಂದಾ ರಾಜಪಕ್ಸ ಭಾರತಕ್ಕೆ ಪಲಾಯನ ಕುರಿತ ವರದಿ ನಿರಾಧಾರ : ಕೊಲಂಬೊದ ಭಾರತೀಯ ರಾಯಭಾರಿ ಕಚೇರಿ ಸ್ಪಷ್ಟನೆ