Connect with us

ದಿನದ ಸುದ್ದಿ

ಕೊಡಗು ಜಿಲ್ಲೆ ಪುನರ್ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಬದ್ದ. ; ಎಚ್.ಡಿ.ಕೆ

Published

on

ಸುದ್ದಿದಿನ,ಮಡಿಕೇರಿ : ಕೊಡಗು ಪುನರ್ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಬದ್ದ. ದೂರದೃಷ್ಟಿ ಚಿಂತನೆ ಮೂಲಕ ಶಾಶ್ವತ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುವುದು. ಕೊಡಗು ಅತಿವೃಷ್ಠಿ ಪರಿಹಾರಕ್ಕೆ ತಮ್ಮ ಪರಿಹಾರ ನಿಧಿಗೆ ಬಂದಿರುವ ಸಂಪೂರ್ಣ ಹಣ ಜಿಲ್ಲೆಯ ಅಭಿವೃದ್ಧಿಗೆ ಬಳಕೆ ಮಾಡಲಾಗುವುದು ಎಂದು ಹೇಳಿದರು.

ಮಡಿಕೇರಿ ಗಾಂಧಿ ಮೈದಾನದಲ್ಲಿ ಅತಿವೃಷ್ಠಿ ಸಂತ್ರಸ್ತರೊಂದಿಗೆ ಸಂವಾದ ನಡೆಸಿದ ನಂತರ ಮಾತನಾಡಿದ ಮುಖ್ಯಮಂತ್ರಿ ಅವರು ಬಾರಿ ಮಳೆಯಿಂದ ನಲುಗಿ ಹೋಗಿರುವ ಕೊಡಗು ಜಿಲ್ಲೆಯ ಪುನರ್ ನಿರ್ಮಾಣಕ್ಕೆ ಪ್ರಾಧಿಕಾರವೊಂದನ್ನು ರಚಿಸಲಾಗುವುದು ಎಂದು ಮುಖ್ಯಮಂತ್ರಿ ಶ್ರೀಕುಮಾರ ಸ್ವಾಮಿ ಅವರು ತಿಳಿಸಿದರು.

ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ಸ್ಥಳೀಯ ಶಾಸಕರು ಇತರ ಜನಪ್ರತಿನಿಧಿಗಳನ್ನು ಒಳಗೊಂಡಂತೆ ಕೊಡಗು ಪುನರ್ ನಿರ್ಮಾಣ ಪ್ರಾಧಿಕಾರ ರಚನೆಯಾಗಲಿದೆ ಎಂದರು. ಜಿಲ್ಲೆಯಲ್ಲಿ ಹಿಂದೆಂದೂ ಕಂಡರಿಯದ ಪ್ರಕೃತಿ ಅನಾಹುತ ಸಂಭವಿಸಿದ್ದು, ಅದಕ್ಕೆ ಶಾಶ್ವತ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ. ಈಗಾಗಲೇ ಜಿಲ್ಲಾಧಿಕಾರಿಯವರೊಂದಿಗೆ ಚರ್ಚಿಸಿ ಎಲ್ಲಾ ಮಾಹಿತಿಯನ್ನು ಪಡೆಯಲಾಗಿದ್ದು, ಎಲ್ಲಾ ಸಂತ್ರಸ್ತರ ಸಂಕಷ್ಟಗಳನ್ನು ಪರಿಹರಿಸಲು ಕ್ರಮವಹಿಸಲಾಗುವುದು. ಮನೆಗಳನ್ನು ಕಳೆದುಕೊಂಡವರಿಗೆ ಮುಂದಿನ ಹತ್ತು ತಿಂಗಳ ಒಳಗಾಗಿ ಮನೆ ನಿರ್ಮಾಣ ಮಾಡಿಕೊಡಲಾಗುವುದು. ಅಲ್ಲಿಯವರೆಗೂ ಪ್ರತಿ ಕುಟುಂಬಕ್ಕೆ ಮಾಸಿಕ 10 ಸಾವಿರ ರೂ. ಮನೆ ಬಾಡಿಗೆ ನೀಡಲಾಗುವುದು. ಒಟ್ಟಾರೆ ಸುಮಾರು ತಲಾ ಎಂಟೂವರೆ ಲಕ್ಷ ರೂಪಾಯಿಗಳನ್ನು ವಸತಿ ಹೀನರ ಮನೆ ನಿರ್ಮಾಣ ಮತ್ತಿತರ ನೆರವಿಗಾಗಿ ವೆಚ್ಚ ಮಾಡಲಾಗುವುದು. ಅತಿವೃಷ್ಠಿ ಪರಿಹಾರ ಕ್ರಮಗಳಿಗಾಗಿ ಈಗಾಗಲೇ 127 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಎನ್.ಡಿ.ಆರ್.ಎಫ್ ಮತ್ತು ಎಚ್.ಡಿ.ಆರ್.ಎಫ್ ಮಾರ್ಗ ಸೂಚಿಯನ್ವಯ ನೀಡುವ ಪರಿಹಾರ ಕಡಿಮೆ ಪ್ರಮಾಣವಾಗುತ್ತದೆ ಎಂಬ ಸಂತ್ರಸ್ತರ ಬೇಡಿಕೆ ಹಿನ್ನೆಲೆಯಲ್ಲಿ ಹೆಚ್ಚಿನ ಮೊತ್ತದ ಪರಿಹಾರ ಒದಗಿಸಲು ಕ್ರಮವಹಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಹೇಳಿದರು.

ಮುಖ್ಯಮಂತ್ರಿ ಪರಿಹಾರ ನಿಧಿಗೆ ಕೊಡಗು ನೆರೆ ಸಂತ್ರಸ್ತರ ಪರಿಹಾರಕ್ಕಾಗಿ ನೀಡಲಾಗಿರುವ ಅನುದಾನವನ್ನು ಸಂಪೂರ್ಣ ಇದೇ ಉದ್ದೇಶಕ್ಕೆ ಬಳಸಲಾಗುವುದು. ರಸ್ತೆ, ಕಟ್ಟಡ, ದುರಸ್ತಿ ಕಾಮಗಾರಿಗಳಿಗೆ ಸರ್ಕಾರದಿಂದ ಪ್ರತ್ಯೇಕ ಅನುದಾನ ಒದಗಿಸಲಾಗುವುದು ಎಂದು ಅವರು ಹೇಳಿದರು. ಈಗಾಗಲೇ ಲೋಕೋಪಯೋಗಿ ಹಾಗೂ ಗ್ರಾಮೀಣ ರಸ್ತೆಗಳ ದುರಸ್ತಿಗಾಗಿ 85 ಕೋಟಿ ರೂ. ಒದಗಿಸಲಾಗಿದೆ. ಶೀಘ್ರವೇ ಅಗತ್ಯ ಪ್ರಮಾಣದ ಹೆಚ್ಚುವರಿ ಹಣ ಬಿಡುಗಡೆ ಮಾಡಲಾಗುವುದು ಎಂದು ಅವರು ಹೇಳಿದರು. ಒಟ್ಟಾರೆ ಬೆಳೆಗಾರರು ಪ್ರವಾಸೋದ್ಯಮ ಮತ್ತು ಕಾರ್ಮಿಕರ ಹಿತಾಸಕ್ತಿಗಳನ್ನು ಕಾಯ್ದೆಕೊಂಡು ಕೊಡಗು ಜಿಲ್ಲೆ ಸಮಗ್ರವಾಗಿ ಪುನರ್ ನಿರ್ಮಾಣವಾಗಲು ರಾಜ್ಯ ಸರ್ಕಾರ ಎಲ್ಲಾ ರೀತಿಯ ಅಗತ್ಯ ನೆರವು ಒದಗಿಸಲಿದೆ ಎಂದು ಹೇಳಿದರು.

ರಾಜ್ಯ ಸರ್ಕಾರ ರೈತರ ಸಾಲಮನ್ನಾ ಮಾಡಿದೆ. ಆದರೆ ರಾಷ್ಟ್ರೀಕೃತ ಬ್ಯಾಂಕುಗಳು ಸಾಲಗಾರರ ಬಗ್ಗೆ ಇನ್ನೂ ಮಾಹಿತಿಯನ್ನು ಒದಗಿಸುತ್ತಿಲ್ಲ. ಈ ಬಗ್ಗೆ ಅಧಿಕಾರಿಗಳಿಗೆ ಪತ್ರ ಬರೆಯಲಾಗಿದೆ ಎಂದು ಅವರು ಹೇಳಿದರು. ರಾಜ್ಯದಲ್ಲಿ ಪಾರದರ್ಶಕ ಆಡಳಿತಕ್ಕೆ ಹೆಚ್ಚು ಒತ್ತು ನೀಡಲಾಗಿದೆ. ಸಾಮಥ್ರ್ಯ ಮತ್ತು ಗುಣಮಟ್ಟದ ಆಧಾರದ ಮೇಲೆ ಅಧಿಕಾರಿಗಳ ವರ್ಗಾವಣೆ ನಡೆಯುತ್ತಿದೆ. ಬೆಂಗಳೂರು ನಗರವನ್ನು ಆಡಳಿತಾತ್ಮಕವಾಗಿ ಸ್ವಚ್ಛಗೊಳಿಸಲು ಮೊದಲ ಆದ್ಯತೆ ನೀಡಲಾಗಿದೆ. ಮಹಾತ್ಮ ಗಾಂಧೀಜಿಯವರ 150ನೇ ಜನ್ಮ ವರ್ಷಾಚರಣೆ ಸಂದರ್ಭದಲ್ಲಿ ರಾಜ್ಯದಲ್ಲಿ ಗಾಂಧೀಜಿಯವರ ಆದರ್ಶಗಳನ್ನು ಹೆಚ್ಚಾಗಿ ಅಳವಡಿಸುವ ನಿಟ್ಟಿನಲ್ಲಿ ತಾವು ಕಾರ್ಯ ಪ್ರವೃತ್ತರಾಗಿರುವುದಾಗಿ ಮುಖ್ಯಮಂತ್ರಿ ಅವರು ಹೇಳಿದರು.

ತಲಕಾವೇರಿ ಭಾಗಮಂಡಲಕ್ಕೆ ತಾವು ಈ ಹಿಂದೆಯೂ ಹಲವು ಬಾರಿ ಭೇಟಿ ಮಾಡಿದ್ದು, ಅಧಿಕಾರದ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ. ದೇವರ ಮೇಲೆ ನಂಬಿಕೆ ಇಟ್ಟು ಕಾವೇರಿ ಸಂಕ್ರಮಣ ಜಾತ್ರೆಯಲ್ಲಿ ಪಾಲ್ಗೊಳ್ಳುತ್ತಿದ್ದೇನೆ ಎಂದು ಶ್ರೀಕುಮಾರ ಸ್ವಾಮಿ ಅವರು ಹೇಳಿದರು.

ಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆಯಾದರೆ ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳಲ್ಲಿ ನೆಮ್ಮದಿ ಇರುತ್ತದೆ. ಯಾವುದೇ ರೀತಿಯ ಅನಾಹುತಗಳು ಆಗದಂತೆ ಜಿಲ್ಲೆಯಲ್ಲಿ ಉತ್ತಮ ಮಳೆ ಆಗಬೇಕು. ಅದಕ್ಕೆ ಪೂರಕ ರೀತಿಯ ವ್ಯವಸ್ಥೆಗಳನ್ನು ಮಾಡಬೇಕಾಗಿದೆ ಎಂದು ಮುಖ್ಯಮಂತ್ರಿ ಅವರು ಹೇಳಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ

ಮೈಸೂರು ವಿ.ವಿಯಲ್ಲಿ ಬುದ್ಧಪೀಠ ಸ್ಥಾಪನೆ : ಜಾಗ ನೀಡುವ ಭರವಸೆ ಕೊಟ್ಟ ಕುಲಪತಿ

Published

on

ಸುದ್ದಿದಿನ, ಮೈಸೂರು : ಸಂಸದ ಶ್ರೀನಿವಾಸ ಪ್ರಸಾದ್ ಅವರ ಮನವಿಗೆ ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಜಿ. ಹೇಮಂತ್ ಕುಮಾರ್ ಸ್ಪಂದಿಸಿ, ಪೀಠ ಸ್ಥಾಪನೆಗೆ ಜಾಗ ನೀಡುವ ಭರವಸೆ ನೀಡಿದ್ದಾರೆ. ಬುದ್ಧ ಪೂರ್ಣಿಮೆ ಅಂಗವಾಗಿ ಮೈಸೂರಿನಲ್ಲಿಂದು ಸಮಕಾಲೀನ ಜಗತ್ತಿಗೆ ಬುದ್ಧನ ಚಿಂತನೆಗಳು ಎಂಬ ವಿಷಯ ಕುರಿತ ಉಪನ್ಯಾಸ ಕಾರ್ಯಕ್ರಮದಲ್ಲಿ ಸಂಸದ ಶ್ರೀನಿವಾಸ ಪ್ರಸಾದ್ ಮಾತನಾಡಿದರು.

ಮೈಸೂರು ವಿಶ್ವವಿದ್ಯಾಲಯದಲ್ಲಿ ಬುದ್ಧಪೀಠ ಸ್ಥಾಪಿಸಬೇಕೆಂಬ ಸಂಸದ ಶ್ರೀನಿವಾಸ ಪ್ರಸಾದ್ ಅವರ ಮನವಿಗೆ ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಜಿ. ಹೇಮಂತ್ ಕುಮಾರ್ ಸ್ಪಂದಿಸಿ, ಪೀಠ ಸ್ಥಾಪನೆಗೆ ಜಾಗ ನೀಡುವ ಭರವಸೆ ನೀಡಿದ್ದಾರೆ.

ಬುದ್ಧ ಪೂರ್ಣಿಮೆ ಅಂಗವಾಗಿ ಮೈಸೂರಿನಲ್ಲಿ ಸೋಮವಾರ ಸಮಕಾಲೀನ ಜಗತ್ತಿಗೆ ಬುದ್ಧನ ಚಿಂತನೆಗಳು ಎಂಬ ವಿಷಯ ಕುರಿತ ಉಪನ್ಯಾಸ ಕಾರ್ಯಕ್ರಮದಲ್ಲಿ ಸಂಸದ ಶ್ರೀನಿವಾಸ ಪ್ರಸಾದ್ ಮಾತನಾಡಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಬಯಲುಸೀಮೆ ಭಾಗಕ್ಕೆ ಶಾಶ್ವತ ನೀರಾವರಿ ಸೌಲಭ್ಯ : ಸಚಿವ ಜೆ.ಸಿ ಮಾಧುಸ್ವಾಮಿ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ, ಚಿಕ್ಕಮಗಳೂರು : ಬಯಲುಸೀಮೆ ಭಾಗಕ್ಕೆ ಶಾಶ್ವತ ನೀರಾವರಿ ಸೌಲಭ್ಯ ಕಲ್ಪಿಸಲಾಗುವುದು ಎಂದು ಸಣ್ಣ ನೀರಾವರಿ ಸಚಿವ ಜೆ.ಸಿ ಮಾಧುಸ್ವಾಮಿ ಹೇಳಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ಭಕ್ತನಕಟ್ಟೆ ಗ್ರಾಮದಲ್ಲಿ ನಿನ್ನೆ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಈ ಭಾಗದಲ್ಲಿ ಮಳೆಯಾಧಾರಿತ ಬೆಳೆ ಬೆಳೆಯುವ ಬಯಲುಸೀಮೆ ಭಾಗಗಳಿಗೆ ಶಾಶ್ವತ ನೀರಾವರಿ ಸೌಲಭ್ಯ ಒದಗಿಸಲು ಚಿಂತಿಸಲಾಗಿದೆ ಎಂದರು.

ರಾಜ್ಯದಲ್ಲಿ ಅಗಾಧ ನೀರಿನ ಸಂಪತ್ತು ಇದ್ದರೂ ಸದ್ಬಳಕೆಯಾಗುತ್ತಿಲ್ಲ. ಈ ನಿಟ್ಟಿನಲ್ಲಿ ಇಲಾಖೆ ಹಲವು ಯೋಜನೆಗಳನ್ನು ಜಾರಿಗೆ ತರಲು ರೂಪುರೇಷೆ ಸಿದ್ಧಪಡಿಸುತ್ತಿದೆ. ತಾವು ಮಂತ್ರಿಯಾದ ನಂತರ ಸಣ್ಣ ನೀರಾವರಿ ಇಲಾಖೆಗೆ 8 ಸಾವಿರ ಕೋಟಿ ರೂಪಾಯಿ ಅನುದಾನ ನೀಡಲಾಗಿದೆ ಎಂದು ಸಚಿವರು ಹೇಳಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ರಾಜ್ಯಾದ್ಯಂತ ಶಾಲೆಗಳು ಆರಂಭ : ಪಠ್ಯ, ಸಮವಸ್ತ್ರ ಪೂರೈಕೆಗೆ ಕ್ರಮ : ಸಿಎಂ ಬೊಮ್ಮಾಯಿ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ, ಬೆಂಗಳೂರು : ಶಾಲಾ ವಿದ್ಯಾರ್ಥಿಗಳಿಗೆ ಅಗತ್ಯ ಪಠ್ಯಪುಸ್ತಕ, ಸಮವಸ್ತ್ರ ಮತ್ತು ಸೈಕಲ್ ವಿತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಜೊತೆ ಮಾತನಾಡಿದ ಅವರು, ಮಕ್ಕಳಿಗೆ ಶಿಕ್ಷಣ ಬಹಳಮುಖ್ಯ ಒಳ್ಳೆಯ ವಾತಾವರಣದಲ್ಲಿ ಶಾಲೆಗಳು ಆರಂಭವಾಗುತ್ತಿರುವುದು ಉತ್ತಮ ಬೆಳವಣಿಗೆ ಎಂದು ಹೇಳಿದರು.

ಈ ನಡುವೆ ರಾಜ್ಯಾದ್ಯಂತ ಇಂದಿನಿಂದ ಶಾಲೆಗಳು ಆರಂಭವಾಗಿದ್ದು, ಶಾಲಾ ಆವರಣದಲ್ಲಿ ಚಿಣ್ಣರ ಕಲರವ ಕೇಳಿ ಬರುತ್ತಿದ್ದು, ವಿದ್ಯಾರ್ಥಿಗಳಲ್ಲಿ ಹೊಸ ಹುಮ್ಮಸ್ಸು, ಸಂಚಲನ ಮೂಡಿಸಿದೆ. ದಕ್ಷಿಣಕನ್ನಡ ಜಿಲ್ಲೆಯಲ್ಲಿ ಶಾಲಾ ಪ್ರಾರಂಭೋತ್ಸವ ವಿಜೃಂಭಣೆಯಿಂದ ನೆರವೇರಿತು. ಊರಿನ ಗಣ್ಯರು, ಶಿಕ್ಷಕರು ಮಕ್ಕಳಿಗೆ ಆರತಿ ಬೆಳಗಿ, ಹೂ ನೀಡಿ ಸ್ವಾಗತಿಸಿದರು.

ಜಿಲ್ಲೆಯ ಪುಂಜಾಲಕಟ್ಟೆ ಶಾಲೆಯಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಶಾಲಾ ಆರಂಭಕ್ಕೆ ಚಾಲನೆ ನೀಡಿದರು. ಬಳಿಕ ಅವರು ಮಾತನಾಡಿ, ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ಅವರನ್ನು ಸತ್ಪ್ರಜೆಗಳನ್ನಾಗಿ ರೂಪಿಸುವುದು ಎಲ್ಲರ ಕರ್ತವ್ಯ ಎಂದು ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶಾಲೆಗಳನ್ನು ಸ್ವಚ್ಛಗೊಳಿಸಿ, ತಳಿರು ತೋರಣಗಳೊಂದಿಗೆ ಸಿಂಗರಿಸಲಾಗಿತ್ತು. ಮಕ್ಕಳಿಗೆ ಹೂ ಹಾಗೂ ಸಿಹಿ ನೀಡಿ ಸ್ವಾಗತಿಸಲಾಯಿತು. ಜಿಲ್ಲೆಯ ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಶಾಸಕ ಟಿ.ವೆಂಕಟರಮಣಯ್ಯ ಮಕ್ಕಳಿಗೆ ಹೂ ಹಾಗೂ ಸಿಹಿ ನೀಡಿ ಸ್ವಾಗತಿಸಿದರು.

ದಾವಣಗೆರೆ ಜಿಲ್ಲೆಯಲ್ಲಿ ಪ್ರಾಥಮಿಕ ಮತು ಪ್ರೌಢಶಾಲೆಗಳು ಇಂದು ಆರಂಭವಾಗಿವೆ. ಮಕ್ಕಳ ಸ್ವಾಗತಕ್ಕೆ ಶಾಲೆಗಳನ್ನು ವಿಶೇಷವಾಗಿ ಅಲಂಕರಿಸಲಾಗಿತ್ತು. ಮಕ್ಕಳು ಶಾಲಾ ಅಂಗಳಕ್ಕೆ ಬರುತ್ತಿದ್ದಂತೆಯೆ ಶಿಕ್ಷಕರು ಸಿಹಿತಿನಿಸು ಮತ್ತು ಹೂಗಳನ್ನು ನೀಡಿ ಸ್ವಾಗತಿಸಿದರು.

ಜಿಲ್ಲೆಯಲ್ಲಿ 587 ಕಿರಿಯ ಪ್ರಾಥಮಿಕ, 947 ಹಿರಿಯ ಪ್ರಾಥಮಿಕ ಮತ್ತು 503 ಪ್ರೌಢಶಾಲೆಗಳು ಸೇರಿದಂತೆ ಒಟ್ಟಾರೆ 2ಸಾವಿರದ 960 ಶಾಲೆಗಳು ಆರಂಭಗೊಂಡಿವೆ ಎಂದು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಜಿ.ಆರ್.ತಿಪ್ಪೇಶಪ್ಪ ತಿಳಿಸಿದ್ದಾರೆ.

ಚಿತ್ರದುರ್ಗ ಜಿಲ್ಲೆಯಲ್ಲೂ ಶಾಲೆಗಳ ಆವರಣದಲ್ಲಿ ಹಬ್ಬದ ಸಡಗರ-ಸಂಭ್ರಮ ಮನೆ ಮಾಡಿದೆ. 2 ವರ್ಷಗಳ ನಂತರ ಶಾಲೆ ಪುನಾರಂಭಗೊಂಡ ಹಿನ್ನೆಲೆಯಲ್ಲಿ ಶಿಕ್ಷಕರು, ಮಕ್ಕಳಿಗೆ ಹೂ ನೀಡಿ ಆತ್ಮೀಯವಾಗಿ ಬರಮಾಡಿಕೊಂಡರು.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಶಾಲೆಗಳು ಆರಂಭವಾಗಿದ್ದು ನಗರದ ಬಸವನಹಳ್ಳಿ ಬಾಲಕಿಯರ ಶಾಲೆಯಲ್ಲಿ ಶಿಕ್ಷಣ ಅಧಿಕಾರಿಗಳು ಶಾಲಾ ಸಿಬ್ಬಂದಿ ಮಕ್ಕಳಿಗೆ ಹೂಗಳನ್ನು ನೀಡಿ ಸ್ವಾಗತಿಸಿದರು.

ಗದಗ ಜಿಲ್ಲೆಯಲ್ಲಿ ಇಂದಿನಿಂದ 1ಸಾವಿರದ 381ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಆರಂಭಗೊಂಡಿವೆ. ಲಕ್ಕುಂಡಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ, ಶಾಲಾ ಮಕ್ಕಳಿಗೆ ಸಿಹಿವಿತರಿಸಿ, ಹೂ ನೀಡುವ ಮೂಲಕ ಶಾಲೆಯ ಆರಂಭಕ್ಕೆ ಚಾಲನೆ ನೀಡಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ4 hours ago

ಮೈಸೂರು ವಿ.ವಿಯಲ್ಲಿ ಬುದ್ಧಪೀಠ ಸ್ಥಾಪನೆ : ಜಾಗ ನೀಡುವ ಭರವಸೆ ಕೊಟ್ಟ ಕುಲಪತಿ

ಸುದ್ದಿದಿನ, ಮೈಸೂರು : ಸಂಸದ ಶ್ರೀನಿವಾಸ ಪ್ರಸಾದ್ ಅವರ ಮನವಿಗೆ ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಜಿ. ಹೇಮಂತ್ ಕುಮಾರ್ ಸ್ಪಂದಿಸಿ, ಪೀಠ ಸ್ಥಾಪನೆಗೆ ಜಾಗ ನೀಡುವ ಭರವಸೆ...

ದಿನದ ಸುದ್ದಿ4 hours ago

ಬಯಲುಸೀಮೆ ಭಾಗಕ್ಕೆ ಶಾಶ್ವತ ನೀರಾವರಿ ಸೌಲಭ್ಯ : ಸಚಿವ ಜೆ.ಸಿ ಮಾಧುಸ್ವಾಮಿ

ಸುದ್ದಿದಿನ, ಚಿಕ್ಕಮಗಳೂರು : ಬಯಲುಸೀಮೆ ಭಾಗಕ್ಕೆ ಶಾಶ್ವತ ನೀರಾವರಿ ಸೌಲಭ್ಯ ಕಲ್ಪಿಸಲಾಗುವುದು ಎಂದು ಸಣ್ಣ ನೀರಾವರಿ ಸಚಿವ ಜೆ.ಸಿ ಮಾಧುಸ್ವಾಮಿ ಹೇಳಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ...

ದಿನದ ಸುದ್ದಿ4 hours ago

ರಾಜ್ಯಾದ್ಯಂತ ಶಾಲೆಗಳು ಆರಂಭ : ಪಠ್ಯ, ಸಮವಸ್ತ್ರ ಪೂರೈಕೆಗೆ ಕ್ರಮ : ಸಿಎಂ ಬೊಮ್ಮಾಯಿ

ಸುದ್ದಿದಿನ, ಬೆಂಗಳೂರು : ಶಾಲಾ ವಿದ್ಯಾರ್ಥಿಗಳಿಗೆ ಅಗತ್ಯ ಪಠ್ಯಪುಸ್ತಕ, ಸಮವಸ್ತ್ರ ಮತ್ತು ಸೈಕಲ್ ವಿತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸೋಮವಾರ...

ನಿತ್ಯ ಭವಿಷ್ಯ7 hours ago

ಮಂಗಳವಾರ ರಾಶಿ ಭವಿಷ್ಯ-ಮೇ-17,2022 ಈ ರಾಶಿಯವರು ಏಕಾಂಗಿಯಾಗಿ ಕುಟುಂಬದ ಸಮಸ್ಯೆಗಳು ಎದುರಿಸುವರು!

ಈ ರಾಶಿಯವರು ಏಕಾಂಗಿಯಾಗಿ ಕುಟುಂಬದ ಸಮಸ್ಯೆಗಳು ಎದುರಿಸುವರು! ಈ ರಾಶಿಯವರು ಒಬ್ಬ ಕುಟುಂಬ ಸದಸ್ಯನನ್ನು ಕಳೆದುಕೊಳ್ಳುವ ಭೀತಿ ಕಾಡಲಿದೆ! ಮಂಗಳವಾರ ರಾಶಿ ಭವಿಷ್ಯ-ಮೇ-17,2022 ನಾರದ ಜಯಂತಿ ಸೂರ್ಯೋದಯ:...

ದಿನದ ಸುದ್ದಿ13 hours ago

ಹವಾಮಾನ ವರದಿ

ಸುದ್ದಿದಿನ ಡೆಸ್ಕ್ : ನಾಳೆಯಿಂದ ರಾಜಸ್ಥಾನ, ಪಂಜಾಬ್, ಹರಿಯಾಣ ಮತ್ತು ದೆಹಲಿಯಲ್ಲಿ ಬಿಸಿಗಾಳಿ ತೀವ್ರತೆ ಕಡಿಮೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಇಂದಿನಿಂದ ಈ ಭಾಗದಲ್ಲಿ...

ಸಿನಿ ಸುದ್ದಿ14 hours ago

ಫ್ರಾನ್ಸ್‌ನಲ್ಲಿ ನಾಳೆಯಿಂದ ಪ್ರತಿಷ್ಠಿತ ಕೇನ್ಸ್ ಚಲನಚಿತ್ರೋತ್ಸವ ಆರಂಭ

ಸುದ್ದಿದಿನ ಡೆಸ್ಕ್ : ಪ್ರತಿಷ್ಠಿತ ಕೇನ್ಸ್ ಚಲನಚಿತ್ರೋತ್ಸವ ಫ್ರಾನ್ಸ್‌ನಲ್ಲಿ ನಾಳೆ ಆರಂಭವಾಗಲಿದೆ. 75ನೇ ಕೇನ್ಸ್ ಚಲನಚಿತ್ರೋತ್ಸವದಲ್ಲಿ ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವ ಅನುರಾಗ್ ಸಿಂಗ್ ಠಾಕೂರ್...

ದಿನದ ಸುದ್ದಿ14 hours ago

ದ್ವೀಪ ರಾಷ್ಟ್ರ ಶ್ರೀಲಂಕಾದಲ್ಲಿ ಇಂದು ರಾತ್ರಿಯಿಂದ ಕರ್ಫ್ಯೂ ಜಾರಿ

ಸುದ್ದಿದಿನ ಡೆಸ್ಕ್ : ದ್ವೀಪ ರಾಷ್ಟ್ರ ಶ್ರೀಲಂಕಾದಲ್ಲಿ ಇಂದು ರಾತ್ರಿ 8 ಗಂಟೆಯಿಂದ ನಾಳೆ ಬೆಳಗಿನಜಾವ 5 ಗಂಟೆಯವರೆಗು ಕರ್ಫ್ಯೂ ಜಾರಿಯಲ್ಲಿರಲಿದೆ ಎಂದು ಅಧ್ಯಕ್ಷರ ಮಾಧ್ಯಮ ವಿಭಾಗ...

ದಿನದ ಸುದ್ದಿ15 hours ago

ವಾರಾಣಸಿಯ ಗ್ಯಾನವಾಪಿ ಮಸೀದಿಯಲ್ಲಿ ವಿಡಿಯೋ ಸಮೀಕ್ಷೆ ಮುಕ್ತಾಯ

ಸುದ್ದಿದಿನ ಡೆಸ್ಕ್ : ಉತ್ತರ ಪ್ರದೇಶದ ವಾರಾಣಸಿಯ ಕಾಶಿ ವಿಶ್ವನಾಥ ದೇವಾಲಯಕ್ಕೆ ಹೊಂದಿಕೊಂಡಂತಿರುವ ಗ್ಯಾನವಾಪಿ ಮಸೀದಿಯಲ್ಲಿ ನಡೆಯುತ್ತಿದ್ದ ವಿಡಿಯೊ ಸಮೀಕ್ಷೆ ಇಂದು ಮುಕ್ತಾಯಗೊಂಡಿದೆ. ಈ ಪ್ರದೇಶದಲ್ಲಿ ಶಿವಲಿಂಗ...

ದಿನದ ಸುದ್ದಿ15 hours ago

ಭಾರತ-ನೇಪಾಳ ನಡುವೆ ಆರು ಪ್ರಮುಖ ಒಪ್ಪಂದಗಳಿಗೆ ಅಂಕಿತ

ಸುದ್ದಿದಿನ ಡೆಸ್ಕ್ : ಭಾರತ ಮತ್ತು ನೇಪಾಳ ಇಂದು ಆರು ಮಹತ್ವದ ಒಡಂಬಡಿಕೆಗಳು ಮತ್ತು ಒಪ್ಪಂದಗಳಿಗೆ ಸಹಿ ಹಾಕಿ, ವಿನಿಮಯ ಮಾಡಿಕೊಂಡಿವೆ. ಭಾರತೀಯ ಸಾಂಸ್ಕೃತಿಕ ಸಂಬಂಧಗಳ ಪರಿಷತ್ತು...

ದಿನದ ಸುದ್ದಿ15 hours ago

ದಾವಣಗೆರೆ | ಡೆಂಗ್ಯೂ ದಿನಾಚರಣೆಯ ಪ್ರಯುಕ್ತ ಕಾಲ್ನಡಿಗೆ ಜಾಥಾ

ಸುದ್ದಿದಿನ,ದಾವಣಗೆರೆ : ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಂಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಕೀಟಜನ್ಯ ರೋಗಗಳ ನಿಯಂತ್ರಣಾಧಿಕಾರಿಗಳ ಕಚೇರಿ ದಾವಣಗೆರೆ ಇವರ ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ...

Trending