ದಿನದ ಸುದ್ದಿ
ಚುನಾವಣೆಗೂ ಮುನ್ನ ಕೊನೆಯ ಬಜೆಟ್–2019 | 2022ರ ವೇಳೆಗೆ ನವಭಾರತ ನಿರ್ಮಾಣ: ವಿತ್ತ ಸಚಿವ ಪಿಯೂಷ್ ಗೋಯಲ್

ಸುದ್ದಿದಿನ,ನವದೆಹಲಿ : ಆಯುಷ್ಮಾನ್ ಭಾರತ್ ಯೋಜನೆ ಮೂಲಕ ಬಡವರ ₹3000 ಕೋಟಿ ಉಳಿತಾಯ, ಶೇ 98 ಗ್ರಾಮಗಳಲ್ಲಿ ನೈರ್ಮಲ್ಯ, ಜನ ಔಷಧಿ ಕೇಂದ್ರಗಳ ಮೂಲಕ ಅತಿ ಕಡಿಮೆ ದರದಲ್ಲಿ ಜನರಿಗೆ ಔಷಧಿ ಕೊಡಲಾಗುತ್ತಿದೆ ಎಂದು ಬಜೆಟ್ ಭಾಷಣದ ನೆಪದಲ್ಲಿ ಸರ್ಕಾರದ ಸಾಧನೆಗಳನ್ನು ನಾನ್ಸ್ಟಾಪ್ ಹೊಗಳಿದರು ವಿತ್ತ ಸಚಿವ ಪಿಯೂಷ್ ಗೋಯಲ್.
ಆರೋಗ್ಯ ಕ್ಷೇತ್ರದಲ್ಲಿ ದೊಡ್ಡ ಕ್ರಾಂತಿ ಮಾಡಿರು ನಮ್ಮ ಸರ್ಕಾರದಿಂದ ಆಯುಷ್ಮಾನ್ ಭಾರತ್ ಮೂಲಕ 50 ಕೋಟಿ ಜನರಿಗೆ ಸಹಾಯವಾಗಿದೆ.ಪ್ರತಿ ವಿದ್ಯಾರ್ಥಿ ಶಾಲೆಯಿಂದ ತನ್ನ ಹಳ್ಳಿಯ ಮನೆಯ ವರೆಗೂ ಬಸ್; ಸಂಪರ್ಕ ವ್ಯವಸ್ಥೆಯಲ್ಲಿ ಅಭಿವೃದ್ಧಿಯಾಗಿದೆ. ಜಿಎಸ್ಟಿ ಅನುಷ್ಠಾನ, ಬ್ಯಾಂಕಿಂಗ್ ಸುಧಾರಣೆಗೆ ದಿಟ್ಟ ಕ್ರಮ ದೇಶದ ಆರ್ಥಿಕ ಇತಿಹಾಸದ ಮೈಲಿಗಲ್ಲುಗಳು
ಬಡವರ ಹೊಟ್ಟೆಯ ಮೇಲೆ ಹೊಡೆಯುವ ಹಣದುಬ್ಬರ ಕಣ್ಣಿಗೆ ಕಾಣದ ತೆರಿಗೆ. ಕಳೆದ ಐದು ವರ್ಷಗಳಲ್ಲಿ ಹಣದುಬ್ಬರವನ್ನು ಯಶಸ್ವಿಯಾಗಿ ನಿಯಂತ್ರಣದಲ್ಲಿಟ್ಟಿದ್ದೇವೆ ಎಂದು ಬಜೆಟ್ ಭಾಷಣದಲ್ಲಿ ನುಡಿದ ಪಿಯೂಷ್ ಗೋಯಾಲ್.
Visuals from Lok Sabha during Finance Minister Piyush Goyal's speech #Budget2019 pic.twitter.com/6wM8qU5Pkh
— ANI (@ANI) February 1, 2019
ಹಾಗೇ ಮುಂದುವರೆದು ಮಾತನಾಡಿದ ಅವರುರೇರಾ ಕಾಯ್ದೆ ಮೂಲಕ ರಿಯಲ್ ಎಸ್ಟೇಟ್ ವಲಯದಲ್ಲಿ ಆಮೂಲಾಗ್ರ ಬದಲಾವಣೆ ಮಾಡಿದ್ದು, ಶಿಕ್ಷಣ ಮತ್ತು ಉದ್ಯೋಗ ಕ್ಷೇತ್ರದಲ್ಲಿ ಮೀಸಲಾತಿ ನೀಡಿದೆ.
ಬ್ಯಾಂಕ್ಗಳು ನೀಡಿರುವ ಸಾಲದ ಗುಣಮಟ್ಟ ಮತ್ತು ಸ್ಥಿತಿಗತಿ ಪರಿಶೀಲಿಸುವಂತೆ ಆರ್ಬಿಐಗೆ ಸೂಚನೆ ನೀಡಿದ್ದೇವೆ. 5.45 ಲಕ್ಷ ಹಳ್ಳಿಗಳು ಬಹಿರ್ದೆಸೆ ಮುಕ್ತ ಘೋಷಣೆ; ಸ್ವಚ್ಛ ಭಾರತ ಅಭಿಯಾನದ ಯಶಸ್ಸಿಗೆ ಜನತೆಗೆ ಧನ್ಯವಾದ ಅರ್ಪಿಸಿದರು ಗೋಯಲ್.
5 ವರ್ಷ ಭ್ರಷ್ಟಾಚಾರ ಮುಕ್ತ ಸರ್ಕಾರ
ಜಿಎಸ್ಟಿ ಹಾಗೂ ಇತರೆ ತೆರಿಗೆಗಳ ಮೂಲಕ ಆದಾಯ ಹೆಚ್ಚಳ ಜಾತಿವಾದ, ಭಯೋತ್ಪಾದನೆ ನಿಯಂತ್ರಣವಾಗಿದೆ. 2008 ರಿಂದ 2014ರ ವರೆಗೆ ಬ್ಯಾಂಕ್ಗಳಿಗೆ ಸಾಲ ಮರುಪಾವತಿಯಾಗಿಲ್ಲ.
ಅತಿ ಹೆಚ್ಚು ವಿದೇಶಿ ನೇರ ಹೂಡಿಕೆ(ಎಫ್ಡಿಐ) ಹರಿವು ಬಂದಿದೆ. ಹಣದುಬ್ಬರ ದರ ನಿಯಂತ್ರ; ಆರ್ಥಿಕವಾಗಿ ಮುನ್ನಡೆಯುತ್ತಿರುವ ಭಾರತ ಜಾಗತಿಕವಾಗಿ 6ನೇ ಸ್ಥಾನದಲ್ಲಿದೆ. 5 ವರ್ಷಗಳಲ್ಲಿ ಜಾಗತಿಕವಾಗಿ ಭಾರತ ಪ್ರಕಾಶಿಸುತ್ತಿದೆ– ಚೊಚ್ಚಲ ಬಜೆಟ್ ಮಂಡನೆಯಲ್ಲಿ ಪಿಯೂಷ್ ಗೋಯಲ್ 2022ರ ವೇಳೆಗೆ ನವಭಾರತ ನಿರ್ಮಾಣವಾಗಲಿದೆ ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ನಟ ಮನದೀಪ್ ರಾಯ್ ನಿಧನ

ಸುದ್ದಿದಿನ ಡೆಸ್ಕ್ : ಹಿರಿಯ ಚಿತ್ರನಟ ಮನದೀಪ್ ರಾಯ್ (74 ವರ್ಷ) ಇಂದು ಬೆಳಗಿನ ಜಾವ ಅಗಲಿದ್ದಾರೆ.
ಕೆಲ ದಿನಗಳ ಹಿಂದೆ ಹೃದಯಾಘಾತಕ್ಕೀಡಾಗಿದ್ದ ಅವರು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಮನದೀಪ್ ರಾಯ್ ಹವ್ಯಾಸಿ ರಂಗಭೂಮಿ ಹಿನ್ನೆಲೆಯ ಕಲಾವಿದ. ನಟ – ನಿರ್ದೇಶಕ ಶಂಕರನಾಗ್ ಅವರ ಆತ್ಮೀಯ ಒಡನಾಡಿ. ಪೋಷಕ ಪಾತ್ರ, ಹಾಸ್ಯ ನಟರಾಗಿ 500ಕ್ಕೂ ಹೆಚ್ಚು ಸಿನಿಮಾಗಳು ಹಾಗೂ ಕಿರುತೆರೆ ಸರಣಿಗಳಲ್ಲಿ ಅಭಿನಯಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕರ್ನಾಟಕದಲ್ಲಿ ಈ ವರ್ಷ ಜನಪರ ರಾಜ್ಯ ಬಜೆಟ್ ಮಂಡನೆ ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿದಿನ, ಹಾವೇರಿ : ಕರ್ನಾಟಕದಲ್ಲಿ ಮುಂದಿನ ತಿಂಗಳು ಮಂಡಿಸಲಾಗುತ್ತಿರುವ ಈ ವರ್ಷದ ರಾಜ್ಯ ಬಜೆಟ್ ರೈತರು, ದೀನ ದಲಿತರು, ಯುವಕರು, ಮಹಿಳೆಯರು, ದುಡಿಯುವ ವರ್ಗ ಮತ್ತು ಜನಪರವಾಗಿರುತ್ತದೆ ಎಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹಾವೇರಿ ಜಿಲ್ಲೆ ಶಿಗ್ಗಾಂವ್ನಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ದುಡಿಮೆಗೆ ಯೋಗ್ಯ ಬೆಲೆ ಸಿಗುವ ರೀತಿಯಲ್ಲಿ ನಮ್ಮ ಕಾರ್ಯಕ್ರಮಗಳು ಇರುತ್ತವೆ ಎಂದರು.
ಕರ್ನಾಟಕ ರಾಜ್ಯದ ಆರ್ಥಿಕ ಅಭಿವೃದ್ಧಿಯಲ್ಲಿ ನಾವು ವೇಗವನ್ನು ಕಂಡಿದ್ದೇವೆ. ಕಳೆದ ವರ್ಷ ನಾನು ಅಧಿಕಾರ ವಹಿಸಿಕೊಂಡಾಗ 5 ಸಾವಿರ ಕೋಟಿ ರೂಪಾಯಿ ರಾಜ್ಯದ ಬೊಕ್ಕಸಕ್ಕೆ ನಮ್ಮ ನಿರ್ಧಿಷ್ಟ ಗುರಿಗೆ ಕೊರತೆಯಿತ್ತು. ಅದನ್ನು ನಾವು 5 ಸಾವಿರ ಕೋಟಿ ತುಂಬುವುದಲ್ಲದೇ, 13 ಸಾವಿರ ಕೋಟಿ ಅಧಿಕವಾಗಿ ಸಂಗ್ರಹ ಮಾಡಿದ್ದೇವೆ. ಈ ವರ್ಷವೂ ಕೂಡ ನಮ್ಮ ಹಣಕಾಸಿನ ಸಂಗ್ರಹ ಉತ್ತಮವಾಗಿದೆ ಎಂದು ಕರ್ನಾಟಕದ ಮುಖ್ಯಮಂತ್ರಿ ಹೇಳಿದರು.
ಕೋವಿಡ್ ನಂತರದಲ್ಲಿ ಆರ್ಥಿಕ ಸುಧಾರಣೆ ಆಗುತ್ತಿರುವ ಸಂದರ್ಭದಲ್ಲಿ ಕೆಳಹಂತದ ಜನಸಮುದಾಯಕ್ಕೆ ಇನ್ನಷ್ಟು ಸಹಾಯ ಮಾಡಿ, ಅವರನ್ನು ಕೂಡ ಮುಖ್ಯ ವಾಹಿನಿಗೆ ಬರಬೇಕು ಎನ್ನುವ ನಿಟ್ಟಿನಲ್ಲಿ ನಾವು ಕಾರ್ಯಕ್ರಮ ರೂಪಿಸುತ್ತಿದ್ದೇವೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಂಸತ್ತಿನ ಬಜೆಟ್ ಅಧಿವೇಶನದ ಹಿನ್ನೆಲೆ ; ಇದೇ 30ರಂದು ಸರ್ವಪಕ್ಷಗಳ ಸಭೆ

ಸುದ್ದಿದಿನ ಡೆಸ್ಕ್ : ಸಂಸತ್ತಿನ ಮುಂಬರುವ ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಇದೇ 30ರಂದು ಸರ್ವಪಕ್ಷಗಳ ಸಭೆಯನ್ನು ಕರೆದಿದೆ. ಸಂಸತ್ ಭವನದ ಸಂಕೀರ್ಣದಲ್ಲಿ ಸೋಮವಾರ ಮಧ್ಯಾಹ್ನ 12 ಗಂಟೆಗೆ ಸಭೆ ನಡೆಯಲಿದೆ.
ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ, ಕೇಂದ್ರ ಸಚಿವರು ಮತ್ತು ಸಂಸತ್ತಿನ ಎರಡೂ ಸದನಗಳನ್ನು ಪ್ರತಿನಿಧಿಸುವ ಸದನ ನಾಯಕರು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಸಭೆಯಲ್ಲಿ ಸರ್ಕಾರ ಸಂಸತ್ತಿನ ಉಭಯ ಸದನಗಳ ಸುಗಮ ಕಲಾಪಕ್ಕೆ ಎಲ್ಲ ರಾಜಕೀಯ ಪಕ್ಷಗಳ ಸಹಕಾರವನ್ನು ಕೋರಲಿದೆ. ಸಂಸತ್ತಿನ ಬಜೆಟ್ ಅಧಿವೇಶನ ಇದೇ 31ರಿಂದ ಆರಂಭವಾಗಲಿದೆ. ಮೊದಲ ದಿನ ಬೆಳಿಗ್ಗೆ 11 ಗಂಟೆಗೆ ಸೆಂಟ್ರಲ್ ಹಾಲ್ ನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡುವರು.
ಅದೇ ದಿನವೇ ಆರ್ಥಿಕ ಸಮೀಕ್ಷೆಯನ್ನೂ ಸಹ ಮಂಡಿಸಲಾಗುವುದು. ಫೆಬ್ರವರಿ 1ರಂದು 2023-24ನೇ ಸಾಲಿನ ಕೇಂದ್ರ ಬಜೆಟ್ ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡನೆ ಮಾಡಲಿದ್ದಾರೆ.
ಬಜೆಟ್ ಅಧಿವೇಶನ ಏಪ್ರಿಲ್ 6ವರೆಗೆ ನಡೆಯಲಿದ್ದು, ಸುಮಾರು 66 ದಿನಗಳಲ್ಲಿ 27 ಕಲಾಪಗಳು ನಡೆಯಲಿದೆ. ಮೊದಲ ಅವಧಿಯಲ್ಲಿ ಅಧಿವೇಶನ ಫೆಬ್ರವರಿ 13ರವರೆಗೆ ನಡೆಯಲಿದೆ. ಫೆಬ್ರವರಿ 14ರಿಂದ ಮಾರ್ಚ್ 12ರವರೆಗೆ ಅಧಿವೇಶನಕ್ಕೆ ಬಿಡುವು ಇರಲಿದೆ ಆನಂತರ ಮಾರ್ಚ್ 13ರಿಂದ ಆರಂಭವಾಗುವ ಅಧಿವೇಶನ ಏಪ್ರಿಲ್ 6ಕ್ಕೆ ಕೊನೆಗೊಳ್ಳಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980336243
