ದಿನದ ಸುದ್ದಿ
30 ಸಿ ಆರ್ ಪಿ ಎಫ್ ಯೋಧರ ಬಲಿಪಡೆದ ಉಗ್ರ

ಸುದ್ದಿದಿನ, ಶ್ರೀನಗರ : ಉರಿ ದಾಳಿಯ ನಂತರ ಅತ್ಯಂತ ದೊಡ್ಡ ಮಟ್ಟದ ದಾಳಿ ಕಣಿವೆ ರಾಜ್ಯದಲ್ಲಿ ನಡೆದಿದೆ. ಉಗ್ರರು ಮತ್ತೆ ಅಟ್ಟಹಾಸ ಮೆರೆದಿದ್ದಾರೆ. ಉಗ್ರರು ಸಿ ಆರ್ ಪಿ ಎಫ್ ವಾಹನದ ಮೇಲೆ ಆತ್ಮಾಹುತಿ ದಾಳಿ ನಡೆಸಿ 30 ಯೋಧರನ್ನು ಬಲಿಪಡೆದಿದ್ದಾರೆ.
PM Modi: Spoke to Home Minister Rajnath Singh Ji and other top officials regarding the situation in the wake of the attack in Pulwama. https://t.co/qLtujgNosD
— ANI (@ANI) February 14, 2019
ಅತ್ಯಂತ ಯೋಜಿತವಾಗಿ ಈ ದುಷ್ಕ್ರತ್ಯವೆಸಗಿ 30 ಯೋಧರನ್ನು ಬಲಿ ಪಡೆದ ಉಗ್ರನನ್ನು ಆದಿಲ್ ಅಹ್ಮದ್ ದಾರ್ ಎಂದು ಗುರುತಿಸಲಾಗಿದ್ದು, ಜೈಶ್-ಎ-ಮೊಹಮ್ಮದ್ ಎಂಬ ಉಗ್ರಗಾಮಿ ಸಂಘಟನೆಯನ್ನು ಈತ ಕಳೆದ ವರ್ಷ ಸೇರಿಕೊಂಡಿದ್ದು, ಈ ಸಂಘಟನೆಯಲ್ಲಿ ‘ ಗಾಡಿ ಟಕರಾನೆವಾಲಾ’ ಎಂದೇ ವಿಖ್ಯಾತಿ ಗಳಿಸಿದ್ದ.
K Vijay Kumar, Advisor to J&K Governor: As far as the death toll is concerned I was told it was initially 18 and 3 people were taken to hospital in critical condition. So, it could be 20. But I am only basing on telephonic reports I am getting from the field. #PulwamaAttack pic.twitter.com/7WwBLSqBMu
— ANI (@ANI) February 14, 2019
ಈ ಆದಿಲ್ ಮೊಹಮ್ಮದ್ ಇಂದು ಸುಮಾರು 350 ಕೆಜಿ ತೂಕದ ಸ್ಪೋಟ ವಸ್ತುಗಳನ್ನು ಹೊತ್ತು ಅವಂತಿಪುರ್ ಪುಲ್ವಾಮಾ ಮಾರ್ಗಾ ಮದ್ಯೆ ಜಮ್ಮು- ಶ್ರೀನಗರ ಹೈವೇಯಲ್ಲಿ ಸಿ ಆರ್ ಪಿ ಎಫ್ ವಾಹನಕ್ಕೆ ಡಿಕ್ಕಿ ಹೊಡೆಸಿ 30 ಯೋಧರನ್ನು ಬಲಿ ಪಡೆದಿದ್ದಾನೆ.
12 CRPF jawans have lost their lives in an IED blast in Awantipora, Pulwama. Dozens injured. #JammuAndKashmir (visuals deferred) pic.twitter.com/bONkKeFFxt
— ANI (@ANI) February 14, 2019
ಯೋಧರ ಸಾವಿನ ಸಂಖ್ಯೆ ಕ್ಷಣ ಕ್ಷಣ ಕ್ಕೂ ಏರುತ್ತಿದೆ. ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ 13 ಯೋಧರು ಚಿಂತಾಜನಕ ಸ್ಥಿತಿಯಲ್ಲಿದ್ದಾರೆಂದು ಮೂಲಗಳು ತಿಳಿಸಿವೆ.
Zulfiqar Hassan, IG CRPF(Operations) on Pulwama blast: J&K Police has taken up the investigation. The injured shifted to hospital. Post-blast analysis being done at the spot pic.twitter.com/BsOi2nJhfh
— ANI (@ANI) February 14, 2019
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ನಟ ಮನದೀಪ್ ರಾಯ್ ನಿಧನ

ಸುದ್ದಿದಿನ ಡೆಸ್ಕ್ : ಹಿರಿಯ ಚಿತ್ರನಟ ಮನದೀಪ್ ರಾಯ್ (74 ವರ್ಷ) ಇಂದು ಬೆಳಗಿನ ಜಾವ ಅಗಲಿದ್ದಾರೆ.
ಕೆಲ ದಿನಗಳ ಹಿಂದೆ ಹೃದಯಾಘಾತಕ್ಕೀಡಾಗಿದ್ದ ಅವರು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಮನದೀಪ್ ರಾಯ್ ಹವ್ಯಾಸಿ ರಂಗಭೂಮಿ ಹಿನ್ನೆಲೆಯ ಕಲಾವಿದ. ನಟ – ನಿರ್ದೇಶಕ ಶಂಕರನಾಗ್ ಅವರ ಆತ್ಮೀಯ ಒಡನಾಡಿ. ಪೋಷಕ ಪಾತ್ರ, ಹಾಸ್ಯ ನಟರಾಗಿ 500ಕ್ಕೂ ಹೆಚ್ಚು ಸಿನಿಮಾಗಳು ಹಾಗೂ ಕಿರುತೆರೆ ಸರಣಿಗಳಲ್ಲಿ ಅಭಿನಯಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕರ್ನಾಟಕದಲ್ಲಿ ಈ ವರ್ಷ ಜನಪರ ರಾಜ್ಯ ಬಜೆಟ್ ಮಂಡನೆ ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿದಿನ, ಹಾವೇರಿ : ಕರ್ನಾಟಕದಲ್ಲಿ ಮುಂದಿನ ತಿಂಗಳು ಮಂಡಿಸಲಾಗುತ್ತಿರುವ ಈ ವರ್ಷದ ರಾಜ್ಯ ಬಜೆಟ್ ರೈತರು, ದೀನ ದಲಿತರು, ಯುವಕರು, ಮಹಿಳೆಯರು, ದುಡಿಯುವ ವರ್ಗ ಮತ್ತು ಜನಪರವಾಗಿರುತ್ತದೆ ಎಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹಾವೇರಿ ಜಿಲ್ಲೆ ಶಿಗ್ಗಾಂವ್ನಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ದುಡಿಮೆಗೆ ಯೋಗ್ಯ ಬೆಲೆ ಸಿಗುವ ರೀತಿಯಲ್ಲಿ ನಮ್ಮ ಕಾರ್ಯಕ್ರಮಗಳು ಇರುತ್ತವೆ ಎಂದರು.
ಕರ್ನಾಟಕ ರಾಜ್ಯದ ಆರ್ಥಿಕ ಅಭಿವೃದ್ಧಿಯಲ್ಲಿ ನಾವು ವೇಗವನ್ನು ಕಂಡಿದ್ದೇವೆ. ಕಳೆದ ವರ್ಷ ನಾನು ಅಧಿಕಾರ ವಹಿಸಿಕೊಂಡಾಗ 5 ಸಾವಿರ ಕೋಟಿ ರೂಪಾಯಿ ರಾಜ್ಯದ ಬೊಕ್ಕಸಕ್ಕೆ ನಮ್ಮ ನಿರ್ಧಿಷ್ಟ ಗುರಿಗೆ ಕೊರತೆಯಿತ್ತು. ಅದನ್ನು ನಾವು 5 ಸಾವಿರ ಕೋಟಿ ತುಂಬುವುದಲ್ಲದೇ, 13 ಸಾವಿರ ಕೋಟಿ ಅಧಿಕವಾಗಿ ಸಂಗ್ರಹ ಮಾಡಿದ್ದೇವೆ. ಈ ವರ್ಷವೂ ಕೂಡ ನಮ್ಮ ಹಣಕಾಸಿನ ಸಂಗ್ರಹ ಉತ್ತಮವಾಗಿದೆ ಎಂದು ಕರ್ನಾಟಕದ ಮುಖ್ಯಮಂತ್ರಿ ಹೇಳಿದರು.
ಕೋವಿಡ್ ನಂತರದಲ್ಲಿ ಆರ್ಥಿಕ ಸುಧಾರಣೆ ಆಗುತ್ತಿರುವ ಸಂದರ್ಭದಲ್ಲಿ ಕೆಳಹಂತದ ಜನಸಮುದಾಯಕ್ಕೆ ಇನ್ನಷ್ಟು ಸಹಾಯ ಮಾಡಿ, ಅವರನ್ನು ಕೂಡ ಮುಖ್ಯ ವಾಹಿನಿಗೆ ಬರಬೇಕು ಎನ್ನುವ ನಿಟ್ಟಿನಲ್ಲಿ ನಾವು ಕಾರ್ಯಕ್ರಮ ರೂಪಿಸುತ್ತಿದ್ದೇವೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಂಸತ್ತಿನ ಬಜೆಟ್ ಅಧಿವೇಶನದ ಹಿನ್ನೆಲೆ ; ಇದೇ 30ರಂದು ಸರ್ವಪಕ್ಷಗಳ ಸಭೆ

ಸುದ್ದಿದಿನ ಡೆಸ್ಕ್ : ಸಂಸತ್ತಿನ ಮುಂಬರುವ ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಇದೇ 30ರಂದು ಸರ್ವಪಕ್ಷಗಳ ಸಭೆಯನ್ನು ಕರೆದಿದೆ. ಸಂಸತ್ ಭವನದ ಸಂಕೀರ್ಣದಲ್ಲಿ ಸೋಮವಾರ ಮಧ್ಯಾಹ್ನ 12 ಗಂಟೆಗೆ ಸಭೆ ನಡೆಯಲಿದೆ.
ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ, ಕೇಂದ್ರ ಸಚಿವರು ಮತ್ತು ಸಂಸತ್ತಿನ ಎರಡೂ ಸದನಗಳನ್ನು ಪ್ರತಿನಿಧಿಸುವ ಸದನ ನಾಯಕರು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಸಭೆಯಲ್ಲಿ ಸರ್ಕಾರ ಸಂಸತ್ತಿನ ಉಭಯ ಸದನಗಳ ಸುಗಮ ಕಲಾಪಕ್ಕೆ ಎಲ್ಲ ರಾಜಕೀಯ ಪಕ್ಷಗಳ ಸಹಕಾರವನ್ನು ಕೋರಲಿದೆ. ಸಂಸತ್ತಿನ ಬಜೆಟ್ ಅಧಿವೇಶನ ಇದೇ 31ರಿಂದ ಆರಂಭವಾಗಲಿದೆ. ಮೊದಲ ದಿನ ಬೆಳಿಗ್ಗೆ 11 ಗಂಟೆಗೆ ಸೆಂಟ್ರಲ್ ಹಾಲ್ ನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡುವರು.
ಅದೇ ದಿನವೇ ಆರ್ಥಿಕ ಸಮೀಕ್ಷೆಯನ್ನೂ ಸಹ ಮಂಡಿಸಲಾಗುವುದು. ಫೆಬ್ರವರಿ 1ರಂದು 2023-24ನೇ ಸಾಲಿನ ಕೇಂದ್ರ ಬಜೆಟ್ ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡನೆ ಮಾಡಲಿದ್ದಾರೆ.
ಬಜೆಟ್ ಅಧಿವೇಶನ ಏಪ್ರಿಲ್ 6ವರೆಗೆ ನಡೆಯಲಿದ್ದು, ಸುಮಾರು 66 ದಿನಗಳಲ್ಲಿ 27 ಕಲಾಪಗಳು ನಡೆಯಲಿದೆ. ಮೊದಲ ಅವಧಿಯಲ್ಲಿ ಅಧಿವೇಶನ ಫೆಬ್ರವರಿ 13ರವರೆಗೆ ನಡೆಯಲಿದೆ. ಫೆಬ್ರವರಿ 14ರಿಂದ ಮಾರ್ಚ್ 12ರವರೆಗೆ ಅಧಿವೇಶನಕ್ಕೆ ಬಿಡುವು ಇರಲಿದೆ ಆನಂತರ ಮಾರ್ಚ್ 13ರಿಂದ ಆರಂಭವಾಗುವ ಅಧಿವೇಶನ ಏಪ್ರಿಲ್ 6ಕ್ಕೆ ಕೊನೆಗೊಳ್ಳಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980336243
