ದಿನದ ಸುದ್ದಿ
‘ಪೈಲಟ್ ಅಭಿನಂದನ್’ ಬಿಡುಗಡೆಗೊಂಡ ಮೊದಲ ವಿಡಿಯೋ..!

ಸುದ್ದಿದಿನ, ವಾಘಾ ಗಡಿ : ಸೆರೆಹಿಡಿದ ಇಂಡಿಯನ್ ಪೈಲಟ್ ಅಭಿನಂದನ್ ವರ್ತಮಾನ್ ಅವರ ಮೊದಲ ವೀಡಿಯೋವನ್ನು ಪಾಕಿಸ್ತಾನದ ಅಧಿಕಾರಿಗಳು ಬಿಡುಗಡೆ ಮಾಡಿದ ನಂತರ ಭಾರತದ ಗಡಿ ಭಾಗಕ್ಕೆ ಅಭಿನಂದನ್ ರನ್ನು ಕರೆತಂದರು.
ವೀಡಿಯೋ ಫೂಟೇಜ್ನಲ್ಲಿ, ಅಭಿನಂದನ್ ಪಾಕಿಸ್ತಾನದ ಅಧಿಕಾರಿಗಳ ಭಾರೀ ಕಾವಲಿನಲ್ಲಿರುವ ಭಾರತದ ಗಡಿ ಬರುತ್ತಾರೆ. ಅವರು ಭಾರತೀಯ ಸೈನ್ಯಕ್ಕೆ ಶಾಂತಿಯುತವಾಗಿ ಹಸ್ತಾಂತರಿಸುವ ಮೊದಲು, ಅಭಿನಂದನ್ ಅವರನ್ನು ಗಡಿಯುದ್ದಕ್ಕ ನಡೆಸಿರುತ್ತಾರೆ. ವಿಂಗ್ ಕಮಾಂಡರ್ ಅಭಿನಂದನ್ ನಂತರ ಪೋಲೀಸ್ ಕಾರಿನಲ್ಲಿ ತೆರಳುತ್ತಾರೆ.
ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಅಭಿನಂದನ್ ಅವರನ್ನು “ಶಾಂತಿ ಸಂಜ್ಞೆಯಾಗಿ” ಬಿಡುಗಡೆ ಮಾಡಿದರು ಮತ್ತು ಅವರು ಶುಕ್ರವಾರ ಭಾರತದ ಮಣ್ಣಿಗೆ ಮರಳಿದಾಗ ಸಾವಿರಾರು ಜನತೆ ನಾಯಕನ ಸ್ವಾಗತವನ್ನು ಕೋರಿದರು.
ಪಾಕಿಸ್ತಾನದ ಮಾದ್ಯಮಗಳಲ್ಲಿ
#अभिनंदन भारतात येताना.. असे आलेत #WingCommanderAbhinandan भारतात
LINK https://t.co/j77wZ6cpLI#WelcomeHomeAbhinandan #AbhinandanVarthaman pic.twitter.com/wcZIlgqx4T— SaamTV News (@saamTVnews) March 1, 2019
Minister of Foreign Affairs Shah Mahmood Qureshi Exclusive Talk with Dunya News while Indian pilot released at Wagah border (01.03.19)@SMQureshiPTI #PakistanLeadsWithPeace pic.twitter.com/lDeO42xtTh
— PTI (@PTIofficial) March 1, 2019
#LiveNow Pakistan releasing captured Indian pilot as a peace gesture https://t.co/NntJlbd9A2
— Radio Pakistan (@RadioPakistan) March 1, 2019
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ಓಬವ್ವ ಆತ್ಮ ರಕ್ಷಣಾ ಕಲೆ ಕರಾಟೆ ಯೋಜನೆಗೆ 18 ಕೋಟಿ ರೂಪಾಯಿ ಮೀಸಲು

ಸುದ್ದಿದಿನ,ಯಾದಗಿರಿ : ರಾಜ್ಯ ವಸತಿ ಶಾಲೆಗಳ ಹೆಣ್ಣು ಮಕ್ಕಳ ಆತ್ಮರಕ್ಷಣೆಗಾಗಿ ರೂಪಿಸಿರುವ ಓಬವ್ವ ಆತ್ಮರಕ್ಷಣಾ ಕಲೆ ಕರಾಟೆ ಯೋಜನೆಯ ಅನುಷ್ಠಾನಕ್ಕಾಗಿ 18 ಕೋಟಿ ರೂಪಾಯಿ ವೆಚ್ಚ ಮಾಡಲಾಗುತ್ತಿದೆ ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ತಿಳಿಸಿದರು.
ಯಾದಗಿರಿ ಜಿಲ್ಲೆಯ ವಡಗೇರಾ ತಾಲ್ಲೂಕಿನ ಬೆಂಡೆಬೆಂಬಳಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲಾ ವಿದ್ಯಾರ್ಥಿಗಳು ನಡೆಸಿಕೊಟ್ಟ ಕರಾಟೆ ಪ್ರದರ್ಶನ ವೀಕ್ಷಿಸಿ ಮಾತನಾಡಿದ ಅವರು, ಹೆಣ್ಣು ಮಕ್ಕಳಿಗೆ ಆತ್ಮರಕ್ಷಣೆ ಕಲೆ ಅಗತ್ಯವಾಗಿದ್ದು, ಈ ಹಿನ್ನೆಲೆಯಲ್ಲಿ ಸರ್ಕಾರ ಓಬವ್ವ ಆತ್ಮರಕ್ಷಣಾ ಕಲೆ ಕರಾಟೆ ಯೋಜನೆಯನ್ನು ರಾಜ್ಯದ ಎಲ್ಲ ವಸತಿ ಶಾಲೆಗಳಲ್ಲಿ ಆರಂಭಿಸಿದೆ. ಈಗಾಗಲೇ ಒಂದು ಸಾವಿರ ಕರಾಟೆ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗಿದೆ. ಮಕ್ಕಳ ಕರಾಟೆ ಕಲೆ ಹಾಗೂ ಸಮವಸ್ತ್ರಕ್ಕಾಗಿ 18 ಕೋಟಿ ರೂಪಾಯಿ ವೆಚ್ಚ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಬಡವರು, ಆರ್ಥಿಕವಾಗಿ ಹಿಂದುಳಿದವರು, ಅಲೆಮಾರಿಗಳ ಮಕ್ಕಳೇ ವಿಶೇಷವಾಗಿ ಈ ವಸತಿ ಶಾಲೆಗಳಿಗೆ ದಾಖಲಾಗುತ್ತಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಸರ್ಕಾರ ಬದ್ಧವಾಗಿದೆ. ಈ ಹಿನ್ನೆಲೆಯಲ್ಲಿ ವಸತಿ ಶಾಲೆಗಳನ್ನು ಮತ್ತುಷ್ಟು ಬಲಪಡಿಸಲು ಕ್ರಮ ವಹಿಸಲಾಗುವುದು ಎಂದು ಸಚಿವರು ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಟ ಮನದೀಪ್ ರಾಯ್ ನಿಧನ

ಸುದ್ದಿದಿನ ಡೆಸ್ಕ್ : ಹಿರಿಯ ಚಿತ್ರನಟ ಮನದೀಪ್ ರಾಯ್ (74 ವರ್ಷ) ಇಂದು ಬೆಳಗಿನ ಜಾವ ಅಗಲಿದ್ದಾರೆ.
ಕೆಲ ದಿನಗಳ ಹಿಂದೆ ಹೃದಯಾಘಾತಕ್ಕೀಡಾಗಿದ್ದ ಅವರು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಮನದೀಪ್ ರಾಯ್ ಹವ್ಯಾಸಿ ರಂಗಭೂಮಿ ಹಿನ್ನೆಲೆಯ ಕಲಾವಿದ. ನಟ – ನಿರ್ದೇಶಕ ಶಂಕರನಾಗ್ ಅವರ ಆತ್ಮೀಯ ಒಡನಾಡಿ. ಪೋಷಕ ಪಾತ್ರ, ಹಾಸ್ಯ ನಟರಾಗಿ 500ಕ್ಕೂ ಹೆಚ್ಚು ಸಿನಿಮಾಗಳು ಹಾಗೂ ಕಿರುತೆರೆ ಸರಣಿಗಳಲ್ಲಿ ಅಭಿನಯಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕರ್ನಾಟಕದಲ್ಲಿ ಈ ವರ್ಷ ಜನಪರ ರಾಜ್ಯ ಬಜೆಟ್ ಮಂಡನೆ ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿದಿನ, ಹಾವೇರಿ : ಕರ್ನಾಟಕದಲ್ಲಿ ಮುಂದಿನ ತಿಂಗಳು ಮಂಡಿಸಲಾಗುತ್ತಿರುವ ಈ ವರ್ಷದ ರಾಜ್ಯ ಬಜೆಟ್ ರೈತರು, ದೀನ ದಲಿತರು, ಯುವಕರು, ಮಹಿಳೆಯರು, ದುಡಿಯುವ ವರ್ಗ ಮತ್ತು ಜನಪರವಾಗಿರುತ್ತದೆ ಎಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹಾವೇರಿ ಜಿಲ್ಲೆ ಶಿಗ್ಗಾಂವ್ನಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ದುಡಿಮೆಗೆ ಯೋಗ್ಯ ಬೆಲೆ ಸಿಗುವ ರೀತಿಯಲ್ಲಿ ನಮ್ಮ ಕಾರ್ಯಕ್ರಮಗಳು ಇರುತ್ತವೆ ಎಂದರು.
ಕರ್ನಾಟಕ ರಾಜ್ಯದ ಆರ್ಥಿಕ ಅಭಿವೃದ್ಧಿಯಲ್ಲಿ ನಾವು ವೇಗವನ್ನು ಕಂಡಿದ್ದೇವೆ. ಕಳೆದ ವರ್ಷ ನಾನು ಅಧಿಕಾರ ವಹಿಸಿಕೊಂಡಾಗ 5 ಸಾವಿರ ಕೋಟಿ ರೂಪಾಯಿ ರಾಜ್ಯದ ಬೊಕ್ಕಸಕ್ಕೆ ನಮ್ಮ ನಿರ್ಧಿಷ್ಟ ಗುರಿಗೆ ಕೊರತೆಯಿತ್ತು. ಅದನ್ನು ನಾವು 5 ಸಾವಿರ ಕೋಟಿ ತುಂಬುವುದಲ್ಲದೇ, 13 ಸಾವಿರ ಕೋಟಿ ಅಧಿಕವಾಗಿ ಸಂಗ್ರಹ ಮಾಡಿದ್ದೇವೆ. ಈ ವರ್ಷವೂ ಕೂಡ ನಮ್ಮ ಹಣಕಾಸಿನ ಸಂಗ್ರಹ ಉತ್ತಮವಾಗಿದೆ ಎಂದು ಕರ್ನಾಟಕದ ಮುಖ್ಯಮಂತ್ರಿ ಹೇಳಿದರು.
ಕೋವಿಡ್ ನಂತರದಲ್ಲಿ ಆರ್ಥಿಕ ಸುಧಾರಣೆ ಆಗುತ್ತಿರುವ ಸಂದರ್ಭದಲ್ಲಿ ಕೆಳಹಂತದ ಜನಸಮುದಾಯಕ್ಕೆ ಇನ್ನಷ್ಟು ಸಹಾಯ ಮಾಡಿ, ಅವರನ್ನು ಕೂಡ ಮುಖ್ಯ ವಾಹಿನಿಗೆ ಬರಬೇಕು ಎನ್ನುವ ನಿಟ್ಟಿನಲ್ಲಿ ನಾವು ಕಾರ್ಯಕ್ರಮ ರೂಪಿಸುತ್ತಿದ್ದೇವೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
