ದಿನದ ಸುದ್ದಿ
ವಾಹ್, ಮೋದೀಜೀ, ವಾಹ್..!

ಸ್ವಾತಂತ್ರ್ಯಾನಂತರದ ಅತ್ಯಂತ ಅತ್ಯಂತ ವಿಜ್ಞಾನ-ಅಪ್ರಿಯ ಸರಕಾರ, ಸಂಶೋಧನೆ ಮತ್ತು ಅಭಿವೃದ್ಧಿ ಹಾಗೂ ಇತರ ವಿಜ್ಞಾನ ಸಂಬಂಧಿ ನಿಧಿಗಳನ್ನು ತೀವ್ರವಾಗಿ ಕಡಿತ ಮಾಡಿರುವ ದಾಖಲೆ ಹೊಂದಿರುವ ಸರಕಾರ, ಖಾಸಗಿ ಚಮಚಾಗಳಿಗೆ ನೆರವಾಗಲು ಹೆಚ್.ಎ.ಎಲ್. ಗೆ ತಿವಿದಿರುವ ಸರಕಾರ, ಈಗ ರಾಜಕೀಯ ಪ್ರಯೋಜನಗಳಿಗಾಗಿ ಅಂತರಿಕ್ಷ ತಂತ್ರಜ್ಞಾನದ ಮುನ್ನಡೆಗಳನ್ನು ದುರುಪಯೋಗ ಪಡಿಸಿಕೊಳ್ಳಲು ಪ್ರಯತ್ನಿಸುತ್ತಿದೆ.
ವಾಹ್, ಮೋದೀಜೀ ವಾಹ್!
-ಹೀಗೆಂದು “ಭಾರತೀಯ ವಿಜ್ಞಾನಿಗಳ ಸಾಧನೆಗಳಿಗೆ ಒಂದು ಸಾರ್ವತ್ರಿಕ ಚುನಾವಣೆಗಳ ಸಮಯದಲ್ಲಿ ರಾಜಕೀಯ ಬಣ್ಣ ಪಡೆಯುವುದಕ್ಕೆ ಚುನಾವಣಾ ಆಯೋಗ ಅನುಮತಿ ನೀಡಲು ಇರುವ ವಿಶೇಷ ಕಾರಣಗಳ ಬಗ್ಗೆ ಇಡೀ ದೇಶ ತಿಳಿಯ ಬಯಸುತ್ತದೆ “ ಎಂದು ಚುನಾವಣಾ ಆಯೋಗಕ್ಕೆ ಪತ್ರ ಬರೆದಿರುವ ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚುರಿ ತಮ್ಮ ಟ್ವೀಟ್ ನಲ್ಲಿ ಉದ್ಗರಿಸಿದ್ದಾರೆ.
It is ironic that this most science-unfriendly govt after independence, which has slashed record funds for R&D & other science funding; which has shafted HAL to help private cronies, is now trying to exploit advances in space technology to seek political gains. Wah, Modiji, Wah!
— Sitaram Yechury (@SitaramYechury) March 27, 2019
That India had developed this capability was announced by DRDO in 2012. Following the successes of India’s anti-ballistic missile defence programme and the Agni series of missiles, this capability was incorporated into the anti-satellite weapon development programme. 2/n
— Sitaram Yechury (@SitaramYechury) March 27, 2019
(ಮಾಹಿತಿ ಕೃಪೆ : ಜನಶಕ್ತಿ ಮೀಡಿಯಾ)
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ನಟ ಮನದೀಪ್ ರಾಯ್ ನಿಧನ

ಸುದ್ದಿದಿನ ಡೆಸ್ಕ್ : ಹಿರಿಯ ಚಿತ್ರನಟ ಮನದೀಪ್ ರಾಯ್ (74 ವರ್ಷ) ಇಂದು ಬೆಳಗಿನ ಜಾವ ಅಗಲಿದ್ದಾರೆ.
ಕೆಲ ದಿನಗಳ ಹಿಂದೆ ಹೃದಯಾಘಾತಕ್ಕೀಡಾಗಿದ್ದ ಅವರು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಮನದೀಪ್ ರಾಯ್ ಹವ್ಯಾಸಿ ರಂಗಭೂಮಿ ಹಿನ್ನೆಲೆಯ ಕಲಾವಿದ. ನಟ – ನಿರ್ದೇಶಕ ಶಂಕರನಾಗ್ ಅವರ ಆತ್ಮೀಯ ಒಡನಾಡಿ. ಪೋಷಕ ಪಾತ್ರ, ಹಾಸ್ಯ ನಟರಾಗಿ 500ಕ್ಕೂ ಹೆಚ್ಚು ಸಿನಿಮಾಗಳು ಹಾಗೂ ಕಿರುತೆರೆ ಸರಣಿಗಳಲ್ಲಿ ಅಭಿನಯಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕರ್ನಾಟಕದಲ್ಲಿ ಈ ವರ್ಷ ಜನಪರ ರಾಜ್ಯ ಬಜೆಟ್ ಮಂಡನೆ ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿದಿನ, ಹಾವೇರಿ : ಕರ್ನಾಟಕದಲ್ಲಿ ಮುಂದಿನ ತಿಂಗಳು ಮಂಡಿಸಲಾಗುತ್ತಿರುವ ಈ ವರ್ಷದ ರಾಜ್ಯ ಬಜೆಟ್ ರೈತರು, ದೀನ ದಲಿತರು, ಯುವಕರು, ಮಹಿಳೆಯರು, ದುಡಿಯುವ ವರ್ಗ ಮತ್ತು ಜನಪರವಾಗಿರುತ್ತದೆ ಎಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹಾವೇರಿ ಜಿಲ್ಲೆ ಶಿಗ್ಗಾಂವ್ನಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ದುಡಿಮೆಗೆ ಯೋಗ್ಯ ಬೆಲೆ ಸಿಗುವ ರೀತಿಯಲ್ಲಿ ನಮ್ಮ ಕಾರ್ಯಕ್ರಮಗಳು ಇರುತ್ತವೆ ಎಂದರು.
ಕರ್ನಾಟಕ ರಾಜ್ಯದ ಆರ್ಥಿಕ ಅಭಿವೃದ್ಧಿಯಲ್ಲಿ ನಾವು ವೇಗವನ್ನು ಕಂಡಿದ್ದೇವೆ. ಕಳೆದ ವರ್ಷ ನಾನು ಅಧಿಕಾರ ವಹಿಸಿಕೊಂಡಾಗ 5 ಸಾವಿರ ಕೋಟಿ ರೂಪಾಯಿ ರಾಜ್ಯದ ಬೊಕ್ಕಸಕ್ಕೆ ನಮ್ಮ ನಿರ್ಧಿಷ್ಟ ಗುರಿಗೆ ಕೊರತೆಯಿತ್ತು. ಅದನ್ನು ನಾವು 5 ಸಾವಿರ ಕೋಟಿ ತುಂಬುವುದಲ್ಲದೇ, 13 ಸಾವಿರ ಕೋಟಿ ಅಧಿಕವಾಗಿ ಸಂಗ್ರಹ ಮಾಡಿದ್ದೇವೆ. ಈ ವರ್ಷವೂ ಕೂಡ ನಮ್ಮ ಹಣಕಾಸಿನ ಸಂಗ್ರಹ ಉತ್ತಮವಾಗಿದೆ ಎಂದು ಕರ್ನಾಟಕದ ಮುಖ್ಯಮಂತ್ರಿ ಹೇಳಿದರು.
ಕೋವಿಡ್ ನಂತರದಲ್ಲಿ ಆರ್ಥಿಕ ಸುಧಾರಣೆ ಆಗುತ್ತಿರುವ ಸಂದರ್ಭದಲ್ಲಿ ಕೆಳಹಂತದ ಜನಸಮುದಾಯಕ್ಕೆ ಇನ್ನಷ್ಟು ಸಹಾಯ ಮಾಡಿ, ಅವರನ್ನು ಕೂಡ ಮುಖ್ಯ ವಾಹಿನಿಗೆ ಬರಬೇಕು ಎನ್ನುವ ನಿಟ್ಟಿನಲ್ಲಿ ನಾವು ಕಾರ್ಯಕ್ರಮ ರೂಪಿಸುತ್ತಿದ್ದೇವೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಂಸತ್ತಿನ ಬಜೆಟ್ ಅಧಿವೇಶನದ ಹಿನ್ನೆಲೆ ; ಇದೇ 30ರಂದು ಸರ್ವಪಕ್ಷಗಳ ಸಭೆ

ಸುದ್ದಿದಿನ ಡೆಸ್ಕ್ : ಸಂಸತ್ತಿನ ಮುಂಬರುವ ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಇದೇ 30ರಂದು ಸರ್ವಪಕ್ಷಗಳ ಸಭೆಯನ್ನು ಕರೆದಿದೆ. ಸಂಸತ್ ಭವನದ ಸಂಕೀರ್ಣದಲ್ಲಿ ಸೋಮವಾರ ಮಧ್ಯಾಹ್ನ 12 ಗಂಟೆಗೆ ಸಭೆ ನಡೆಯಲಿದೆ.
ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ, ಕೇಂದ್ರ ಸಚಿವರು ಮತ್ತು ಸಂಸತ್ತಿನ ಎರಡೂ ಸದನಗಳನ್ನು ಪ್ರತಿನಿಧಿಸುವ ಸದನ ನಾಯಕರು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಸಭೆಯಲ್ಲಿ ಸರ್ಕಾರ ಸಂಸತ್ತಿನ ಉಭಯ ಸದನಗಳ ಸುಗಮ ಕಲಾಪಕ್ಕೆ ಎಲ್ಲ ರಾಜಕೀಯ ಪಕ್ಷಗಳ ಸಹಕಾರವನ್ನು ಕೋರಲಿದೆ. ಸಂಸತ್ತಿನ ಬಜೆಟ್ ಅಧಿವೇಶನ ಇದೇ 31ರಿಂದ ಆರಂಭವಾಗಲಿದೆ. ಮೊದಲ ದಿನ ಬೆಳಿಗ್ಗೆ 11 ಗಂಟೆಗೆ ಸೆಂಟ್ರಲ್ ಹಾಲ್ ನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡುವರು.
ಅದೇ ದಿನವೇ ಆರ್ಥಿಕ ಸಮೀಕ್ಷೆಯನ್ನೂ ಸಹ ಮಂಡಿಸಲಾಗುವುದು. ಫೆಬ್ರವರಿ 1ರಂದು 2023-24ನೇ ಸಾಲಿನ ಕೇಂದ್ರ ಬಜೆಟ್ ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡನೆ ಮಾಡಲಿದ್ದಾರೆ.
ಬಜೆಟ್ ಅಧಿವೇಶನ ಏಪ್ರಿಲ್ 6ವರೆಗೆ ನಡೆಯಲಿದ್ದು, ಸುಮಾರು 66 ದಿನಗಳಲ್ಲಿ 27 ಕಲಾಪಗಳು ನಡೆಯಲಿದೆ. ಮೊದಲ ಅವಧಿಯಲ್ಲಿ ಅಧಿವೇಶನ ಫೆಬ್ರವರಿ 13ರವರೆಗೆ ನಡೆಯಲಿದೆ. ಫೆಬ್ರವರಿ 14ರಿಂದ ಮಾರ್ಚ್ 12ರವರೆಗೆ ಅಧಿವೇಶನಕ್ಕೆ ಬಿಡುವು ಇರಲಿದೆ ಆನಂತರ ಮಾರ್ಚ್ 13ರಿಂದ ಆರಂಭವಾಗುವ ಅಧಿವೇಶನ ಏಪ್ರಿಲ್ 6ಕ್ಕೆ ಕೊನೆಗೊಳ್ಳಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980336243
