ದಿನದ ಸುದ್ದಿ
ಶ್ರೀಲಂಕಾ ಸರಣಿ ಬಾಂಬ್ ಸ್ಫೋಟ : 207 ಕ್ಕೆ ಏರಿದ ಮೃತರ ಸಂಖ್ಯೆ

ಸುದ್ದಿದಿನ, ಕೊಲಂಬೊ : ಶ್ರೀಲಂಕಾದ ಕೊಲಂಬೊದಲ್ಲಿ 8ಕಡೆ ಸರಣಿ ಬಾಂಬ್ ಸ್ಫೋಟದಲ್ಲಿ 207 ಜನರು ಸಾವನ್ನಪ್ಪಿದ್ದು, 500ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಈಸ್ಟರ್ ಹಬ್ಬದ ಆಚರಣೆ ವೇಳೆ ಉಗ್ರರ ಅಟ್ಟಹಾಸ ಮೆರೆದಿದ್ದು, ಕೊಲಂಬೊದಲ್ಲಿರುವ ಸೇಂಟ್ ಆಂಥೋನಿ ಚರ್ಚ್ ಮತ್ತು ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಬಾಂಬ್ ದಾಳಿ ಮಾಡಿದ್ದಾರೆ.
ಈ ಹಿನ್ನೆಲೆಯಲ್ಲಿ ಕೊಲಂಬೋ ದಲ್ಲಿ ಕರ್ಫ್ಯೂ ಜಾರಿ ಮಾಡಿಲಾಗಿದೆ. ದಾಳಿಯಲ್ಲಿ ಸುಮಾರು 450 ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ಆತ್ಮಾಹುತಿ ಬಾಂಬ್ ದಾಳಿಗೆ 3 ಪೊಲೀಸ್ ಆಫೀಸರ್ಸ್ ಬಲಿಯಾಗಿದ್ದಾರೆ.
ಚರ್ಚ್ ಬಾಂಬ್ ಸ್ಪೋಟಕ್ಕೆ ಸಂಬಂಧಿಸಿದಂತೆ ಶ್ರೀಲಂಕಾ ದಾಳಿ ಖಂಡನೀಯ ಎಂದಿದ್ದಾರೆ ಬ್ರಿಟನ್ ಪ್ರಧಾನಿ ತೆರೆಸಾ. ಹಾಗೇ ಮೇ ಶ್ರೀಲಂಕಾ ದಾಳಿ ತುಂಬಾ ಕ್ರೂರವಾದದು ಎಂದಿರುವ ರಷ್ಯಾ ಅಧ್ಯಕ್ಷ ವಾಡ್ಲಿಮಿರ್ ಪುಟಿನ್ ಅವರು, ಜಾಗತಿಕ ಉಗ್ರವಾದದ ವಿರುದ್ಧ ಹೋರಾಡುವಂತೆ ಕರೆ ನೀಡಿದ್ದಾರೆ.
ಚರ್ಚ್ ಒಂದರಲ್ಲೇ 50 ಜನರು ಬಲಿಯಾಗಿದ್ದು,
ಕೊಲಂಬಿಯಾ ನ್ಯಾಷನಲ್ ಆಸ್ಪತ್ರೆ ಯಲ್ಲಿ 300 ಕ್ಕೂ ಹೆಚ್ಚು ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಈ ಘಟನೆ ಬಗ್ಗೆ ಭಾರತೀಯ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು,ಕೊಲಂಬೋದಲ್ಲಿರುವ ಭಾರತೀಯ ಹೈ ಕಮಿಷನರ್ ಜೊತೆ ನಾವು ನಿರಂತರ ಸಂಪರ್ಕ ದಲ್ಲಿದ್ದೇವೆ ಸಧ್ಯದ ಸ್ಥಿತಿ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯುತ್ತಿರುವುದಾಗಿ ಹೇಳಿದ್ದಾರೆ.
Indian High Commission in Colombo has conveyed that National Hospital has informed them about the death of three Indian nationals. Their names are Lokashini, Narayan Chandrashekhar and Ramesh. We are ascertaining further details. /3
— Chowkidar Sushma Swaraj (@SushmaSwaraj) April 21, 2019
I have just spoken to the Foreign Minister of Sri Lanka H.E. Mr.Tilak Marapana. He confirmed that unfortunately, 207 persons have lost their lives and more than 450 are injured in the terror blasts. /2
— Chowkidar Sushma Swaraj (@SushmaSwaraj) April 21, 2019
Indians in distress may please contact Indian High Commission in Colombo. We will provide you all assistance. @IndiainSL Our helpline numbers are :
+94777903082,+94112422788,+94112422789, +94112422789.
Pls RT— Chowkidar Sushma Swaraj (@SushmaSwaraj) April 21, 2019
7 ಶಂಕಿತರ ಬಂಧನ
ಈ ಸರಣಿ ಸ್ಪೋಟಕ್ಕೆ ಸಂಬಂಧಿಸಿದ 7 ಶಂಕಿತರನ್ನು ಬಂಧಿಸಿದ್ದು, ಇವರನ್ನು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಶ್ರೀಲಂಕಾ ರಕ್ಷಣಾ ಸಚಿವ ರುವನ್ ಮಾಹಿತಿ ನೀಡಿದ್ದಾರೆ.
Colombo: People grieve after eight blasts struck various churches and hotels in #SriLanka today. pic.twitter.com/pTjiQFLXt2
— ANI (@ANI) April 21, 2019
AFP News Agency quoting police: Curfew imposed immediately 'until further notice'. #SriLankaBlasts https://t.co/gc88ezuPvN
— ANI (@ANI) April 21, 2019
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಟ ಮನದೀಪ್ ರಾಯ್ ನಿಧನ

ಸುದ್ದಿದಿನ ಡೆಸ್ಕ್ : ಹಿರಿಯ ಚಿತ್ರನಟ ಮನದೀಪ್ ರಾಯ್ (74 ವರ್ಷ) ಇಂದು ಬೆಳಗಿನ ಜಾವ ಅಗಲಿದ್ದಾರೆ.
ಕೆಲ ದಿನಗಳ ಹಿಂದೆ ಹೃದಯಾಘಾತಕ್ಕೀಡಾಗಿದ್ದ ಅವರು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಮನದೀಪ್ ರಾಯ್ ಹವ್ಯಾಸಿ ರಂಗಭೂಮಿ ಹಿನ್ನೆಲೆಯ ಕಲಾವಿದ. ನಟ – ನಿರ್ದೇಶಕ ಶಂಕರನಾಗ್ ಅವರ ಆತ್ಮೀಯ ಒಡನಾಡಿ. ಪೋಷಕ ಪಾತ್ರ, ಹಾಸ್ಯ ನಟರಾಗಿ 500ಕ್ಕೂ ಹೆಚ್ಚು ಸಿನಿಮಾಗಳು ಹಾಗೂ ಕಿರುತೆರೆ ಸರಣಿಗಳಲ್ಲಿ ಅಭಿನಯಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕರ್ನಾಟಕದಲ್ಲಿ ಈ ವರ್ಷ ಜನಪರ ರಾಜ್ಯ ಬಜೆಟ್ ಮಂಡನೆ ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿದಿನ, ಹಾವೇರಿ : ಕರ್ನಾಟಕದಲ್ಲಿ ಮುಂದಿನ ತಿಂಗಳು ಮಂಡಿಸಲಾಗುತ್ತಿರುವ ಈ ವರ್ಷದ ರಾಜ್ಯ ಬಜೆಟ್ ರೈತರು, ದೀನ ದಲಿತರು, ಯುವಕರು, ಮಹಿಳೆಯರು, ದುಡಿಯುವ ವರ್ಗ ಮತ್ತು ಜನಪರವಾಗಿರುತ್ತದೆ ಎಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹಾವೇರಿ ಜಿಲ್ಲೆ ಶಿಗ್ಗಾಂವ್ನಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ದುಡಿಮೆಗೆ ಯೋಗ್ಯ ಬೆಲೆ ಸಿಗುವ ರೀತಿಯಲ್ಲಿ ನಮ್ಮ ಕಾರ್ಯಕ್ರಮಗಳು ಇರುತ್ತವೆ ಎಂದರು.
ಕರ್ನಾಟಕ ರಾಜ್ಯದ ಆರ್ಥಿಕ ಅಭಿವೃದ್ಧಿಯಲ್ಲಿ ನಾವು ವೇಗವನ್ನು ಕಂಡಿದ್ದೇವೆ. ಕಳೆದ ವರ್ಷ ನಾನು ಅಧಿಕಾರ ವಹಿಸಿಕೊಂಡಾಗ 5 ಸಾವಿರ ಕೋಟಿ ರೂಪಾಯಿ ರಾಜ್ಯದ ಬೊಕ್ಕಸಕ್ಕೆ ನಮ್ಮ ನಿರ್ಧಿಷ್ಟ ಗುರಿಗೆ ಕೊರತೆಯಿತ್ತು. ಅದನ್ನು ನಾವು 5 ಸಾವಿರ ಕೋಟಿ ತುಂಬುವುದಲ್ಲದೇ, 13 ಸಾವಿರ ಕೋಟಿ ಅಧಿಕವಾಗಿ ಸಂಗ್ರಹ ಮಾಡಿದ್ದೇವೆ. ಈ ವರ್ಷವೂ ಕೂಡ ನಮ್ಮ ಹಣಕಾಸಿನ ಸಂಗ್ರಹ ಉತ್ತಮವಾಗಿದೆ ಎಂದು ಕರ್ನಾಟಕದ ಮುಖ್ಯಮಂತ್ರಿ ಹೇಳಿದರು.
ಕೋವಿಡ್ ನಂತರದಲ್ಲಿ ಆರ್ಥಿಕ ಸುಧಾರಣೆ ಆಗುತ್ತಿರುವ ಸಂದರ್ಭದಲ್ಲಿ ಕೆಳಹಂತದ ಜನಸಮುದಾಯಕ್ಕೆ ಇನ್ನಷ್ಟು ಸಹಾಯ ಮಾಡಿ, ಅವರನ್ನು ಕೂಡ ಮುಖ್ಯ ವಾಹಿನಿಗೆ ಬರಬೇಕು ಎನ್ನುವ ನಿಟ್ಟಿನಲ್ಲಿ ನಾವು ಕಾರ್ಯಕ್ರಮ ರೂಪಿಸುತ್ತಿದ್ದೇವೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಂಸತ್ತಿನ ಬಜೆಟ್ ಅಧಿವೇಶನದ ಹಿನ್ನೆಲೆ ; ಇದೇ 30ರಂದು ಸರ್ವಪಕ್ಷಗಳ ಸಭೆ

ಸುದ್ದಿದಿನ ಡೆಸ್ಕ್ : ಸಂಸತ್ತಿನ ಮುಂಬರುವ ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಇದೇ 30ರಂದು ಸರ್ವಪಕ್ಷಗಳ ಸಭೆಯನ್ನು ಕರೆದಿದೆ. ಸಂಸತ್ ಭವನದ ಸಂಕೀರ್ಣದಲ್ಲಿ ಸೋಮವಾರ ಮಧ್ಯಾಹ್ನ 12 ಗಂಟೆಗೆ ಸಭೆ ನಡೆಯಲಿದೆ.
ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ, ಕೇಂದ್ರ ಸಚಿವರು ಮತ್ತು ಸಂಸತ್ತಿನ ಎರಡೂ ಸದನಗಳನ್ನು ಪ್ರತಿನಿಧಿಸುವ ಸದನ ನಾಯಕರು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಸಭೆಯಲ್ಲಿ ಸರ್ಕಾರ ಸಂಸತ್ತಿನ ಉಭಯ ಸದನಗಳ ಸುಗಮ ಕಲಾಪಕ್ಕೆ ಎಲ್ಲ ರಾಜಕೀಯ ಪಕ್ಷಗಳ ಸಹಕಾರವನ್ನು ಕೋರಲಿದೆ. ಸಂಸತ್ತಿನ ಬಜೆಟ್ ಅಧಿವೇಶನ ಇದೇ 31ರಿಂದ ಆರಂಭವಾಗಲಿದೆ. ಮೊದಲ ದಿನ ಬೆಳಿಗ್ಗೆ 11 ಗಂಟೆಗೆ ಸೆಂಟ್ರಲ್ ಹಾಲ್ ನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡುವರು.
ಅದೇ ದಿನವೇ ಆರ್ಥಿಕ ಸಮೀಕ್ಷೆಯನ್ನೂ ಸಹ ಮಂಡಿಸಲಾಗುವುದು. ಫೆಬ್ರವರಿ 1ರಂದು 2023-24ನೇ ಸಾಲಿನ ಕೇಂದ್ರ ಬಜೆಟ್ ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡನೆ ಮಾಡಲಿದ್ದಾರೆ.
ಬಜೆಟ್ ಅಧಿವೇಶನ ಏಪ್ರಿಲ್ 6ವರೆಗೆ ನಡೆಯಲಿದ್ದು, ಸುಮಾರು 66 ದಿನಗಳಲ್ಲಿ 27 ಕಲಾಪಗಳು ನಡೆಯಲಿದೆ. ಮೊದಲ ಅವಧಿಯಲ್ಲಿ ಅಧಿವೇಶನ ಫೆಬ್ರವರಿ 13ರವರೆಗೆ ನಡೆಯಲಿದೆ. ಫೆಬ್ರವರಿ 14ರಿಂದ ಮಾರ್ಚ್ 12ರವರೆಗೆ ಅಧಿವೇಶನಕ್ಕೆ ಬಿಡುವು ಇರಲಿದೆ ಆನಂತರ ಮಾರ್ಚ್ 13ರಿಂದ ಆರಂಭವಾಗುವ ಅಧಿವೇಶನ ಏಪ್ರಿಲ್ 6ಕ್ಕೆ ಕೊನೆಗೊಳ್ಳಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980336243
