ದಿನದ ಸುದ್ದಿ
ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆ ಅನುಷ್ಟಾನ

ಸುದ್ದಿದಿನ,ಶಿವಮೊಗ್ಗ : ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು ಪ್ರಸಕ್ತ ಸಾಲಿನ ವಿವಿಧ ಯೋಜನೆಯಡಿ ಅಲ್ಪಸಂಖ್ಯಾತರ ಸಮುದಾಯದವರಿಗೆ (ಮುಸ್ಲಿಂ, ಕ್ರೈಸ್ತ, ಜೈನ, ಬೌದ್ದ, ಸಿಖ್ಖ್, ಪಾರ್ಸಿ) ಸಾಲ ಸೌಲಭ್ಯ ನೀಡಲು ಉದ್ದೇಶಿಸಿದ್ದು, ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಅಹ್ವಾನಿಸಿದೆ.
ಅರ್ಜಿ ಸಲ್ಲಿಸಲಿಚ್ಚಿಸುವ ಅಭ್ಯರ್ಥಿಗಳು ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದವರಾಗಿದ್ದು, 18-45ವರ್ಷ ವಯೋಮಿತಿಯೊಳಗಿನವರಾಗಿದ್ದು, ಕರ್ನಾಟಕ ರಾಜ್ಯದಲ್ಲಿ ಖಾಯಂ ವಾಸಿಯಾಗಿರಬೇಕು. ಅಭ್ಯರ್ಥಿಯ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ. 81,000/-, ನಗರ ಪ್ರದೇಶದವರಿಗೆ 1.03ಲಕ್ಷ ರೂ. ಮೀರಿರಬಾರದು ಹಾಗೂ ಅರಿವು ಯೋಜನೆಯಡಿ ಮಾತ್ರ ಕುಟುಂಬದ ವಾ.ಆ. ರೂ. 6.00 ಲಕ್ಷ ಮೀರಿರಬಾರದು. ತಮ್ಮ ವಿಳಾಸದ ದೃಢೀಕರಣಕ್ಕಾಗಿ ಆಧಾರ್ ಪ್ರತಿಯನ್ನು ಮತ್ತು ಅದನ್ನು ಬ್ಯಾಂಕ್ನ ಉಳಿತಾಯ ಖಾತೆಗೆ ಹೊಂದಾಣಿಕೆ (ಲಿಂಕ್) ಮಾಡಿರಬೇಕು.
ಯೋಜನೆಗಳು
ಸ್ವಯಂ ಉದ್ಯೋಗ ಯೋಜನೆ
ಈ ಯೋಜನೆಯಲ್ಲಿ ಅಲ್ಪಸಂಖ್ಯಾತರಿಗೆ ವ್ಯಾಪಾರ, ಸೇವಾ ಉದ್ದಿಮೆ, ಗುಡಿ ಕೈಗಾರಿಕೆ ಹಾಗೂ ಕೃಷಿ ಆಧಾರಿತ ಕಾರ್ಯಗಳಿಗೆ ರಾಷ್ಟ್ರೀಕೃತ ಬ್ಯಾಂಕುಗಳಿಂದ ಗರಿಷ್ಠ 35ಸಾವಿರ ರೂ.ಗಳನ್ನು ಸಹಾಯಧನ ಹಾಗೂ ಘಟಕವೆಚ್ಚ ಗರಿಷ್ಠ 2 ಲಕ್ಷ ರೂ ಸಹಾಯಧನವನ್ನು ಚಾಲ್ತಿ ಬಡ್ಡಿದರದಲ್ಲಿ ಸಾಲ ನೀಡಲಾಗುವುದು.
ಶ್ರಮಶಕ್ತಿ ಯೋಜನೆ
ಸಾಂಪ್ರದಾಯಿಕ ಕುಶಲಕರ್ಮಿಗಳಿಗೆ ಹಾಗೂ ಕುಲಕಸುಬುದಾರರಿಗೆ ತಂತ್ರಜ್ಞಾನ ಬಳಸಿ ತಮ್ಮ ಸಾಂಪ್ರದಾಯಿಕ ಮಾರುಕಟ್ಟೆ ಹಾಗೂ ವೃತ್ತಿ ಕೌಶಲ್ಯವನ್ನು ಅಭಿವೃದ್ದಿ ಪಡೆಸಿಕೊಳ್ಳಲು ಗರಿಷ್ಠ 50ಸಾವಿರ ರೂ.ಗಳನ್ನು ಹಾಗೂ ಘಟಕ ವೆಚ್ಚಕ್ಕೆ 25ಸಾವಿರ ರೂಗಳನ್ನು ಸಬ್ಸಿಡಿ ಸೇರಿ ಸಾಲ ಕೊಡಲಾಗುವುದು.
ಮೈಕ್ರೋ ಸಾಲಯೋಜನೆ
ಮಹಿಳಾ ಸ್ವಸಾಯ ಸಂಘಗಳಿಗೆ ಅನಕ್ಷರಸ್ಥ ಕುಶಲಿಯಲ್ಲದ ಅಲ್ಪಸಂಖ್ಯಾತ ಮಹಿಳೆಯರ 10 ರಿಂದ 20 ಮಹಿಳೆಯರನ್ನು ಹೊಂದಿರುವ ಗುಂಪಿನ ಪ್ರತಿ ಸದಸ್ಯರಿಗೆ ಆರ್ಥಿಕ ಅಭಿವೃದ್ಧಿಗಾಗಿ 5000 ಸಹಾಯಧನ ಹಾಗೂ 5000 ಸಾಲವಾಗಿ ಒಟ್ಟು 10ಸಾವಿರ ರೂಗಳನ್ನು ನೀಡಲಾಗುತ್ತದೆ.
ಕೃಷಿ ಭೂಮಿ ಖರೀದಿ ಯೋಜನೆ
ಗ್ರಾಮೀಣ ಪ್ರದೇಶದಲ್ಲಿ ವಾಸವಿರುವ ಅಲ್ಪಸಂಖ್ಯಾತ ಭೂ ರಹಿತ ಕೃಷಿ ಕಾರ್ಮಿಕರಿಗೆ 2 ಎಕರೆ ಖುಷ್ಕಿ ಅಥವ 1 ಎಕರೆ ತರಿ ಭೂಮಿಯನ್ನು ನಿಗಮದಿಂದ 5ಕಿಮಿ ವ್ಯಾಪ್ತಿಯೊಳಗೆ ಖರೀದಿ ಮಾಡಿ ಕೊಡಲಾಗುತ್ತದೆ. ಇದರಲ್ಲಿ 50% ಅವದಿ ಸಾಲ 6% ಬಡ್ಡಿದರದೊಂದಿಗೆ ಮರುಪಾವತಿಸುವುದು. ಹಾಗೂ ಇನ್ನುಳಿದ 50% ಹಣವನ್ನು ಸಹಾಯಧನವನ್ನಾಗಿ ಪರಿಗಣಿಸಲಾಗುವುದು. ಭೂಮಿಯನ್ನು ಮಾರಾಟ ಮಾಡುವವರು ಹಿಂದುಳಿದ ವರ್ಗದವರಾಗಿರಬಾರದು ಮತ್ತು ಮಾರಾಟಮಾಡುವವರು ಲಿಖಿತವಾಗಿ ಅರ್ಜಿಯೊಂದಿಗೆ ಭೂಮಿಯ ದಾಖಲೆಗಳನ್ನು ಸಲ್ಲಿಸಬೇಕು.
ಗಂಗಾ ಕಲ್ಯಾಣ ಯೋಜನೆ
ಒಂದು ಎಕರೆ ಎರಡು ಗುಂಟೆಯಿಂದ ಐದು ಎಕರೆ ಖುಷ್ಕಿ ಭೂಮಿ ಹೊಂದಿದ ಸಣ್ಣ ಅಥವ ಅತಿ ಸಣ್ಣ ರೈತರು ಕೊಳವೆ ಭಾವಿ ಕೊರೆಸಲು 3.50 ಲಕ್ಷ ಸಹಾಯಧನ ಬಯಸಿದಲ್ಲಿ 50,000 ಸಾಲವನ್ನು ಒದಗಿಸಲಾಗುತ್ತದೆ.
ಮನೆ ಮಳಿಗೆ ಯೋಜನೆ
ದುರ್ಬಲ ಹಾಗೂ ವಿಶೇಷ ಫಲಾನುಭವಿಗಳಿಗೆ 5ಲಕ್ಷ ರೂಗಳ ಸಾಲ ಸೌಲಭ್ಯ ಕೊಡುವ ಯೋಜನೆ ಇದಾಗಿದೆ. ಕೋಮುಗಲಭೆ, ಪರಿಸರ ವಿಕೋಪ, ಸಂದರ್ಭದಲ್ಲಿ ತೊಂದರೆಗೊಳಗಾದವರು, ಸನ್ನಡತೆ ಮೇಲೆ ಬಿಡುಗಡೆಯಾದ ಕೈದಿಗಳು ಹಾಗೂ ಇನ್ನಿತರೆ ಪ್ರಕರಣಗಳಲ್ಲಿ ಬಂಧಿಯಾಗಿ ಆರೋಪ ಸಾಭೀತಾಗದೆ ಬಿಡುಗಡೆಯಾದ ನಿರಪರಾಧಿಗಳಿಗೆ ಜೀವನೋಪಾಯ ಕಲ್ಪಿಸುವ ಯೋಜನೆ ಇದಾಗಿದೆ.
ಪಶು ಸಂಗೋಪನೆ
ಹೈನುಗಾರಿಕೆ, ಕೋಳಿಸಾಕಣಿಕೆ, ಕುರಿ ಸಾಕಾಣಿಕೆಗೆ ಉತ್ತೇಜನ ನೀಡುವ ಸಲುವಾಗಿ 50% ದಷ್ಟು ಸಹಾಯಧನ ಸೇರಿ 40ಸಾವಿರ ರೂಗಳನ್ನು ನೀಡುವ ಯೋಜನೆ ಇದಾಗಿದೆ. ಟ್ಯಾಕ್ಸಿ / ಗೂಡ್ಸ್ ಖರೀದಿ ಯೋಜನೆ: ಟ್ಯಾಕ್ಸಿ ಹಾಗೂ ಗೂಡ್ಸ್ ವಾಹನಗಳನ್ನು ಖರಿದಿಸಲು 3ಲಕ್ಷರೂಗಳ ಸಹಾಯಧನ ನೀಡುವ ಯೋಜನೆ ಇದಾಗಿದೆ.
ಪ್ರವಾಸಿ ಲೋನ್ ಯೋಜನೆ
ಕೊಲ್ಲಿ ರಾಷ್ಟ್ರಗಳಿಂದ ಉದ್ಯೋಗ ವಂಚಿತರಾಗಿ ಎಕ್ಸಿಟ್ ಮುದ್ರೆಯೊಂದಿಗೆ ಹಿಂದಿರುಗಿದವರಿಗೆ ಸ್ವಯಂ ಉದ್ಯೋಗ್ಯ ಕಲ್ಪಿಸುವ ಯೋಜನೆ ಇದಾಗಿದೆ.
ಇದರೊಂದಿಗೆ ವೃತ್ತಿ ಪ್ರೋತ್ಸಾಹ, ಕೃಷಿ ಆಧುನಿಕ ಯಂತ್ರೋಪಕರಣ ಖರೀದಿ, ಶೈಕ್ಷಣಿಕ ಸಾಲ ನೇರ ಅವಧಿ ಸಾಲ ಹಾಗೂ ಆಟೋಮೊಬೈಲ್ಸ್ ಸರ್ವಿಸ್ ಹಾಗೂ ತರಬೇತಿ ಸಾಲ ಯೋಜನೆಗಳು ಸೇರಿವೆ.
ಅರ್ಹ ಅಭ್ಯರ್ಥಿಗಳು ನಿಗಧಿತ ನಮೂನೆಯ ಅರ್ಜಿಯನ್ನು ನಿಗಮದ ಅಂತರ್ಜಾಲತಾಣ WWW.Kmdc.kar.nic.in/loan/login.aspx ಮೂಲಕ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಜುಲೈ 31 ರೊಳಗಾಗಿ
ಜಿಲ್ಲಾ ವ್ಯವಸ್ಥಾಪಕರು, ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ನಂಜಪ್ಪ ಆಸ್ಪತ್ರೆ ಮುಂಭಾಗ ರಸ್ತೆ, ಅಚ್ಯುತ್ರಾವ್ ಲೇಔಟ್, 4ನೇ ತಿರುವು, ಶಿವಮೊಗ್ಗ ಈ ಕಛೇರಿಗೆ ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬೇಕು. ವಿವರಗಳಿಗಾಗಿ 08182-228262ನ್ನು ಸಂಪರ್ಕಿಸಬಹುದಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9880346243

ದಿನದ ಸುದ್ದಿ
ನಟ ಮನದೀಪ್ ರಾಯ್ ನಿಧನ

ಸುದ್ದಿದಿನ ಡೆಸ್ಕ್ : ಹಿರಿಯ ಚಿತ್ರನಟ ಮನದೀಪ್ ರಾಯ್ (74 ವರ್ಷ) ಇಂದು ಬೆಳಗಿನ ಜಾವ ಅಗಲಿದ್ದಾರೆ.
ಕೆಲ ದಿನಗಳ ಹಿಂದೆ ಹೃದಯಾಘಾತಕ್ಕೀಡಾಗಿದ್ದ ಅವರು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಮನದೀಪ್ ರಾಯ್ ಹವ್ಯಾಸಿ ರಂಗಭೂಮಿ ಹಿನ್ನೆಲೆಯ ಕಲಾವಿದ. ನಟ – ನಿರ್ದೇಶಕ ಶಂಕರನಾಗ್ ಅವರ ಆತ್ಮೀಯ ಒಡನಾಡಿ. ಪೋಷಕ ಪಾತ್ರ, ಹಾಸ್ಯ ನಟರಾಗಿ 500ಕ್ಕೂ ಹೆಚ್ಚು ಸಿನಿಮಾಗಳು ಹಾಗೂ ಕಿರುತೆರೆ ಸರಣಿಗಳಲ್ಲಿ ಅಭಿನಯಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕರ್ನಾಟಕದಲ್ಲಿ ಈ ವರ್ಷ ಜನಪರ ರಾಜ್ಯ ಬಜೆಟ್ ಮಂಡನೆ ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿದಿನ, ಹಾವೇರಿ : ಕರ್ನಾಟಕದಲ್ಲಿ ಮುಂದಿನ ತಿಂಗಳು ಮಂಡಿಸಲಾಗುತ್ತಿರುವ ಈ ವರ್ಷದ ರಾಜ್ಯ ಬಜೆಟ್ ರೈತರು, ದೀನ ದಲಿತರು, ಯುವಕರು, ಮಹಿಳೆಯರು, ದುಡಿಯುವ ವರ್ಗ ಮತ್ತು ಜನಪರವಾಗಿರುತ್ತದೆ ಎಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹಾವೇರಿ ಜಿಲ್ಲೆ ಶಿಗ್ಗಾಂವ್ನಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ದುಡಿಮೆಗೆ ಯೋಗ್ಯ ಬೆಲೆ ಸಿಗುವ ರೀತಿಯಲ್ಲಿ ನಮ್ಮ ಕಾರ್ಯಕ್ರಮಗಳು ಇರುತ್ತವೆ ಎಂದರು.
ಕರ್ನಾಟಕ ರಾಜ್ಯದ ಆರ್ಥಿಕ ಅಭಿವೃದ್ಧಿಯಲ್ಲಿ ನಾವು ವೇಗವನ್ನು ಕಂಡಿದ್ದೇವೆ. ಕಳೆದ ವರ್ಷ ನಾನು ಅಧಿಕಾರ ವಹಿಸಿಕೊಂಡಾಗ 5 ಸಾವಿರ ಕೋಟಿ ರೂಪಾಯಿ ರಾಜ್ಯದ ಬೊಕ್ಕಸಕ್ಕೆ ನಮ್ಮ ನಿರ್ಧಿಷ್ಟ ಗುರಿಗೆ ಕೊರತೆಯಿತ್ತು. ಅದನ್ನು ನಾವು 5 ಸಾವಿರ ಕೋಟಿ ತುಂಬುವುದಲ್ಲದೇ, 13 ಸಾವಿರ ಕೋಟಿ ಅಧಿಕವಾಗಿ ಸಂಗ್ರಹ ಮಾಡಿದ್ದೇವೆ. ಈ ವರ್ಷವೂ ಕೂಡ ನಮ್ಮ ಹಣಕಾಸಿನ ಸಂಗ್ರಹ ಉತ್ತಮವಾಗಿದೆ ಎಂದು ಕರ್ನಾಟಕದ ಮುಖ್ಯಮಂತ್ರಿ ಹೇಳಿದರು.
ಕೋವಿಡ್ ನಂತರದಲ್ಲಿ ಆರ್ಥಿಕ ಸುಧಾರಣೆ ಆಗುತ್ತಿರುವ ಸಂದರ್ಭದಲ್ಲಿ ಕೆಳಹಂತದ ಜನಸಮುದಾಯಕ್ಕೆ ಇನ್ನಷ್ಟು ಸಹಾಯ ಮಾಡಿ, ಅವರನ್ನು ಕೂಡ ಮುಖ್ಯ ವಾಹಿನಿಗೆ ಬರಬೇಕು ಎನ್ನುವ ನಿಟ್ಟಿನಲ್ಲಿ ನಾವು ಕಾರ್ಯಕ್ರಮ ರೂಪಿಸುತ್ತಿದ್ದೇವೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಂಸತ್ತಿನ ಬಜೆಟ್ ಅಧಿವೇಶನದ ಹಿನ್ನೆಲೆ ; ಇದೇ 30ರಂದು ಸರ್ವಪಕ್ಷಗಳ ಸಭೆ

ಸುದ್ದಿದಿನ ಡೆಸ್ಕ್ : ಸಂಸತ್ತಿನ ಮುಂಬರುವ ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಇದೇ 30ರಂದು ಸರ್ವಪಕ್ಷಗಳ ಸಭೆಯನ್ನು ಕರೆದಿದೆ. ಸಂಸತ್ ಭವನದ ಸಂಕೀರ್ಣದಲ್ಲಿ ಸೋಮವಾರ ಮಧ್ಯಾಹ್ನ 12 ಗಂಟೆಗೆ ಸಭೆ ನಡೆಯಲಿದೆ.
ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ, ಕೇಂದ್ರ ಸಚಿವರು ಮತ್ತು ಸಂಸತ್ತಿನ ಎರಡೂ ಸದನಗಳನ್ನು ಪ್ರತಿನಿಧಿಸುವ ಸದನ ನಾಯಕರು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಸಭೆಯಲ್ಲಿ ಸರ್ಕಾರ ಸಂಸತ್ತಿನ ಉಭಯ ಸದನಗಳ ಸುಗಮ ಕಲಾಪಕ್ಕೆ ಎಲ್ಲ ರಾಜಕೀಯ ಪಕ್ಷಗಳ ಸಹಕಾರವನ್ನು ಕೋರಲಿದೆ. ಸಂಸತ್ತಿನ ಬಜೆಟ್ ಅಧಿವೇಶನ ಇದೇ 31ರಿಂದ ಆರಂಭವಾಗಲಿದೆ. ಮೊದಲ ದಿನ ಬೆಳಿಗ್ಗೆ 11 ಗಂಟೆಗೆ ಸೆಂಟ್ರಲ್ ಹಾಲ್ ನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡುವರು.
ಅದೇ ದಿನವೇ ಆರ್ಥಿಕ ಸಮೀಕ್ಷೆಯನ್ನೂ ಸಹ ಮಂಡಿಸಲಾಗುವುದು. ಫೆಬ್ರವರಿ 1ರಂದು 2023-24ನೇ ಸಾಲಿನ ಕೇಂದ್ರ ಬಜೆಟ್ ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡನೆ ಮಾಡಲಿದ್ದಾರೆ.
ಬಜೆಟ್ ಅಧಿವೇಶನ ಏಪ್ರಿಲ್ 6ವರೆಗೆ ನಡೆಯಲಿದ್ದು, ಸುಮಾರು 66 ದಿನಗಳಲ್ಲಿ 27 ಕಲಾಪಗಳು ನಡೆಯಲಿದೆ. ಮೊದಲ ಅವಧಿಯಲ್ಲಿ ಅಧಿವೇಶನ ಫೆಬ್ರವರಿ 13ರವರೆಗೆ ನಡೆಯಲಿದೆ. ಫೆಬ್ರವರಿ 14ರಿಂದ ಮಾರ್ಚ್ 12ರವರೆಗೆ ಅಧಿವೇಶನಕ್ಕೆ ಬಿಡುವು ಇರಲಿದೆ ಆನಂತರ ಮಾರ್ಚ್ 13ರಿಂದ ಆರಂಭವಾಗುವ ಅಧಿವೇಶನ ಏಪ್ರಿಲ್ 6ಕ್ಕೆ ಕೊನೆಗೊಳ್ಳಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980336243

-
ನಿತ್ಯ ಭವಿಷ್ಯ7 days ago
ಸೋಮವಾರ- ರಾಶಿ ಭವಿಷ್ಯ ಜನವರಿ-23,2023 : ಈ ರಾಶಿಯವರಿಗೆ ಸಾಡೇ ಸಾತಿ ಶನಿಯಿಂದ ಮುಕ್ತಿ,ಎಲ್ಲಾ ನಿಮ್ಮ ಕೆಲಸಗಳು ನೆರವೇರಲಿ
-
ದಿನದ ಸುದ್ದಿ5 days ago
ಸಂಸತ್ತಿನ ಬಜೆಟ್ ಅಧಿವೇಶನದ ಹಿನ್ನೆಲೆ ; ಇದೇ 30ರಂದು ಸರ್ವಪಕ್ಷಗಳ ಸಭೆ
-
ದಿನದ ಸುದ್ದಿ19 hours ago
ಕರ್ನಾಟಕದಲ್ಲಿ ಈ ವರ್ಷ ಜನಪರ ರಾಜ್ಯ ಬಜೆಟ್ ಮಂಡನೆ ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
-
ದಿನದ ಸುದ್ದಿ18 hours ago
ನಟ ಮನದೀಪ್ ರಾಯ್ ನಿಧನ