Connect with us

ದಿನದ ಸುದ್ದಿ

ಹೊಸ ವರ್ಷಾಚರಣೆ ಸಾರ್ವಜನಿಕರು ವಹಿಸಬೇಕಾದ ಮುನ್ನೆಚ್ಚರಿಕೆ ಕ್ರಮ

Published

on

ಸುದ್ದಿದಿನ,ಶಿವಮೊಗ್ಗ : ಪೊಲೀಸ್ ಇಲಾಖೆಯು 2020 ನೇ ಹೊಸ ವರ್ಷ ಸಂಭ್ರಮಾಚರಣೆ ಸಂಬಂಧ ಡಿಸೆಂಬರ್ 31ರ ರಾತ್ರಿ ಜಿಲ್ಲಾಯಾದ್ಯಂತ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸಾರ್ವಜನಿಕರು ನಡೆದುಕೊಂಡು ಹೊಸ ವರ್ಷಾಚರಣೆಯು ಯಶಸ್ವಿಯಾಗಿ ಮತ್ತು ಶಾಂತ ರೀತಿಯಿಂದ ಆಚರಿಸುವ ಸಂಬಂಧ ಸಾರ್ವಜನಿಕರು ಈ ಕೆಳಕಂಡ ಸೂಚನೆಗಳನ್ನು ಪಾಲಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸೂಚಿಸಿದ್ದಾರೆ.

ನಗರಗಳ ಮತ್ತು ತಾಲ್ಲೂಕು ಕೇಂದ್ರಗಳಲ್ಲಿನ ಎಲ್ಲಾ ಹೋಟೆಲ್‍ಗಳು, ಭೋಜನ ಗೃಹ, ಕ್ಲಬ್‍ಗಳು, ಆಶ್ರಯ ಸ್ಥಾನಗಳು, ಮತ್ತು ಸಂಘಗಳು, ಹಮ್ಮಿಕೊಂಡಿರುವ ಔತಣಕೂಟ/ಸಮಾರಂಭಗಳನ್ನು ಡಿಸೆಂಬರ್ 31ರ ರಾತ್ರಿ ನಿಗಧಿತ ಸಮಯದೊಳಗೆ ಮುಕ್ತಾಯಗೊಳಿಸುವುದು.

ಹೊಸ ವರ್ಷದ ಔತಣಕೂಟ/ಸಮಾರಂಭಗಳನ್ನು ನಡೆಸುವ ಬಗ್ಗೆ ಪೂರ್ವಾನುಮತಿಯನ್ನು ಪಡೆಯುವುದು ಮತ್ತು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಆಯೋಜಕರು ನೋಡಿಕೊಳ್ಳುವುದು.ಏನಾದರೂ ಅಹಿತಕರ ಘಟನೆಗಳು ನಡೆದಲ್ಲಿ ಸಂಬಂಧಪಟ್ಟ ಆಯೋಜಕರ ಮೇಲೆ ಕಾನೂನು ರೀತ್ಯ ಕ್ರಮ ಜರುಗಿಸಲಾಗುವುದು.

ಹೊಸ ವರ್ಷಾವರಣೆ ಸಂದರ್ಭದಲ್ಲಿ ಯಾವುದೇ ಕಾರಣಕ್ಕೂ ಮಧ್ಯಪಾನ ವಾಹನ ಚಲಾವಣೆ ಮಾಡಬಾರದು. ಪಾನಮತ್ತರಾಗಿ ವಾಹನ ಚಾಲನೆ ಮಾಡಿದವರ ಮೇಲೆ ಡ್ರಂಕ್ & ಡ್ರೈವ್ ಪ್ರಕರಣ ದಾಖಲಿಸಿ, ಚಾಲನಾ ಪರವಾನಿಗೆಯನ್ನು ರದ್ದುಗೊಳಿಸಲಾಗುವುದು ಎಂದವರು ತಿಳಿಸಿದ್ದಾರೆ.

ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವುದಾಗಲೀ, ದ್ವಿಚಕ್ರ ವಾಹನದಲ್ಲಿ ಮೂರು ಜನ ಸವಾರಿ ಮಾಡುವುದು, ಸಾಹಸ ಪ್ರದರ್ಶನ/ವೀಲಿಂಗ್ ನಡೆಸುವುದು ನಿಷೇದಿಸಿದೆ. ಇಲಾಖಾವತಿಯಿಂದ ಚುರುಕು ಪ್ರತಿಕ್ರಯಿಸುವ ತಂಡ ಮತ್ತು ಕಾವಲು ಪಡೆಯನ್ನು ರಚಿಸಿದ್ದು, ಅಂತಹವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು.

ಹೋಟೆಲ್/ಭೋಜನಗೃಹ/ಕ್ಲಬ್‍ಗಳಿಗೆ ಅವರುಗಳೇ ಖಾಸಗಿ ಭದ್ರತಾ ವ್ಯವಸ್ಥೆ ಏರ್ಪಡಿಸಲು ಸೂಚಿಸಿರುತ್ತೆ. ಸಿಸಿಟಿವಿ ಅಳವಡಿಸದಿದ್ದಲ್ಲಿ ಅಳವಡಿಸಲು ಸೂಚಿಸಿರುತ್ತೆ. ಹೋಟೆಲ್/ರೆಸಾರ್ಟ್/ಕ್ಲಬ್‍ಗಳ ಮುಖ್ಯಸ್ಥರುಗಳು ಕಾರ್ಯಕ್ರಮದಲ್ಲಿ ಭಾಗವಹಿಸುವವರ ಪೂರ್ಣ ವಿವರಗಳನ್ನು ಸರಹದ್ದಿನ ಪೊಲೀಸ್ ಠಾಣಾ ಅಧಿಕಾರಿಗಳಿಗೆ ಒದಗಿಸುವುದು.

ವಿವಿಧ ಸಂಘಟನೆಯವರು ವಿವಿಧ ಕಾರ್ಯಕ್ರಮಗಳ ಸಲುವಾಗಿ ಅನುಮತಿ ಪಡೆದು ಹಾಕಿರುವ ಬ್ಯಾನರ್/ಬಟ್ಟಿಂಗ್ಸ್/ಧ್ವಜಗಳ ಸುರಕ್ಷತೆಯನ್ನು ಸಂಬಂಧಪಟ್ಟವರೇ ಸುರಕ್ಷತೆಯನ್ನು ಕಾಯ್ದುಕೊಳ್ಳುವಂತೆ ಅವರು ಸೂಚಿಸಿದ್ದಾರೆ.

ಅನುಮತಿಯನ್ನು ಪಡೆಯದೇ ಬ್ಯಾನರ್/ಬಂಟ್ಟಿಂಗ್ಸ್/ಧ್ವಜಗಳನ್ನು ಹಾಕಿದ್ದೆ ಆದಲ್ಲಿ ಅಂತಹವರ ವಿರುದ್ದ ಕಾನೂನು ರೀತ್ಯ ಕ್ರಮ ಜರುಗಿಸಲಾಗುವುದು. ಆಂಪ್ಲಿಫೈಡ್ ಸೌಂಡ್ ಸಿಸ್ಟಂ ಬಳಸಿದ್ದಲ್ಲಿ ಪೂರ್ವಾನುಮತಿ ಪಡೆಯತಕ್ಕದ್ದು.

ಸೌಂಡ್ ಸಿಸ್ಟಂ ಅಳವಡಿಸಿದ್ದಲ್ಲಿ ಅಕ್ಕಪಕ್ಕದವರಿಗೆ ತೊಂದರೆಯಾಗದ ರೀತಿ ಮೇಲು ಧ್ವನಿಯಲ್ಲಿ ಬಳಕೆ ಮಾಡದೇ, ನಿಗಧಿತ ಮಿತಿಯಲ್ಲಿ ಮತ್ತು ಸಮಯದಲ್ಲಿ ಮುಗಿಸುವುದು. ವಿದೇಶಿಯರು ಹೋಟೆಲ್/ರೆಸಾರ್ಟ್/ಹೋಮ್‍ಸ್ಟೇ ಹಾಗೂ ಇತರೆ ತಂಗುದಾಣಗಳಲ್ಲಿ ವಾಸವಿದ್ದಲ್ಲಿ ಸುರಕ್ಷತೆಗಾಗಿ ಭದ್ರತೆ ಒದಗಿಸುವುದು.

ಹೊಸ ವರ್ಷದ
ಸಂಭ್ರಮಾಚರಣೆಯಲ್ಲಿರುವವರು ಸಾರ್ವಜನಿಕ ಅಸ್ಥಿಪಾಸ್ಥಿಗೆ ಹಾನಿ ಉಂಟು ಮಾಡದಂತೆ ಆಚರಣೆ ಮಾಡುವುದು. ಹೊಸವರ್ಷದ ಆಚರಣೆಯ ಸಮಾರಂಭದಲ್ಲಿ ಯಾವುದೇ ಅಹಿತಕರ ಘಟನೆ ಜರುಗಿದ್ದಲ್ಲಿ ಆಯೋಜಕರೆ ಜವಬ್ದಾರರಾಗಿರುತ್ತೀರಿ ಎಂದವರು ಎಚ್ಚರಿಸಿದ್ದಾರೆ.

ಹೊಸವರ್ಷದ ಶುಭಾಶಯ ಕೋರುವ ನೆಪದಲ್ಲಿ ರಸ್ತೆಯ ಮೇಲೆ ಮನಬಂದಂತೆ ಓಡಾಡುವುದನ್ನು ಕಡ್ಡಾಯವಾಗಿ ನಿಷೇದಿಸಿದೆ. ಸಮಾರಂಭದಲ್ಲಿ ಅವಹೇಳನ ರೀತಿಯಲ್ಲಿ ನಡೆದುಕೊಳ್ಳುವುದು / ಜೂಜಾಟಗಳನ್ನು/ಕಾನೂನು ಬಾಹಿರ ಚಟುವಟಿಕೆಗಳನ್ನು ನಿಷೇದಿಸಿದೆ. ಯುವಕರು ಮತ್ತು ವಯಸ್ಕರು ರಸ್ತೆಯಲ್ಲಿ ಹೊಸವರ್ಷ ಆಚರಣೆಯ ಕಾರಣದಿಂದ ದುರ್ವರ್ತನೆ ತೋರಬಾರದು.

ಅಬಕಾರಿ ಕಾಯ್ದೆ ಅಡಿಯಲ್ಲಿ ಪರವಾನಗಿ ಅನ್ವಯ ಮಧ್ಯ ಮಾರಾಟ ವೇಳೆಯನ್ನು ಅನುಸರಿಸುವುದು. ರಸ್ತೆಯಲ್ಲಿ ಮದ್ಯಪಾನ ಮಾಡುವುದನ್ನು ನಿಷೇಧಿಸಿದೆ. ಮಹಿಳೆಯರು/ಹೆಣ್ಣು ಮಕ್ಕಳೊಂದಿಗೆ ಸಭ್ಯತೆಯಿಂದ ವರ್ತಿಸುವುದು ಮತ್ತು ಆಯೋಜಿತ ಕಾರ್ಯಕ್ರಮಗಳಲ್ಲಿ ಸ್ಥಳದಲ್ಲಿ ಮಹಿಳೆಯವರಿಗೆ ಆಸನದ ಪ್ರತ್ಯೇಕ ವ್ಯವಸ್ಥೆ ಮಾಡುವುದು. ಇತರರಿಗೆ ತೊಂದರೆಯಾಗುವ ರೀತಿ ಪಟಾಕಿ ಸುಡುವುದನ್ನು ನಿಷೇಧಿಸಲಾಗಿದೆ ಎಂದವರು ತಿಳಿಸಿದ್ದಾರೆ.

ಹೊಸವರ್ಷದ ಸಮಾರಂಭ ನಡೆಸಿದಲ್ಲಿ ವೀಡಿಯೋ ಚಿತ್ರೀಕರಿಸುವುದು. ಕರ್ತವ್ಯ ನಿರತ ಪೊಲೀಸ್ ಅಧಿಕಾರಿ/ಸಿಬ್ಬಂದಿಗಳಿಗೆ ಸಹಕರಿಸುವುದು. ಹೋಟೆಲ್/ರೆಸಾರ್ಟ್/ಕ್ಲಬ್‍ಗಳ ಸುತ್ತಲು ವಿದ್ಯುತ್ ದೀಪದ ವ್ಯವಸ್ಥೆ ಅಳವಡಿಸುವುದು. ಹೊಸ ವರ್ಷ ಅಚರಣೆಯು ಸಾರ್ವಜನಿಕರಿಗೆ ತೊಂದರೆಯಾಗದಂತೆ ಆಚರಿಸುವುದು.

ಯಾವುದೇ ಸಮಸ್ಯೆ ಉಂಟಾದಲ್ಲಿ ಕೂಡಲೇ ಸರಹದ್ದಿನ ಪೊಲೀಸ್ ಠಾಣೆಗೆ ಮತ್ತು ಈ ಕೆಳಕಂಡ ದೂರವಾಣಿ ಸಂಖ್ಯೆಗಳಿಗೆ ಮಾಹಿತಿ ನೀಡತಕ್ಕದ್ದು ಎಂದವರು ತಿಳಿಸಿದ್ದಾರೆ.

ಶಿವಮೊಗ್ಗ ಜಿಲ್ಲಾ ಕಂಟ್ರೋಲ್ ರೂಂ – 08182 261413, ದೂ 08182 270521. ಡಿಎಸ್‍ಪಿ ಶಿವಮೊಗ್ಗ – ಮೊ 9480803321, ದೂ 08182-261404, ವೃತ್ತ ನಿರೀಕ್ಷಕರು ಕೋಟೆ ವೃತ್ತ – ಮೊ 9480803331, ದೂ 08182-261408, ವೃತ್ತ ನಿರೀಕ್ಷಕರು ದೊಡ್ಡಪೇಟೆ ವೃತ್ತ – ಮೊ. 9480803330, ದೂ 08182261406.

ಡಿಎಸ್‍ಪಿ ಕಛೇರಿ ಭದ್ರಾವತಿ – ಮೊ 9480803320, ದೂ 08282 274252, ವೃತ್ತ ನಿರೀಕ್ಷಕರು, ಭದ್ರಾವತಿ ನಗರ ವೃತ್ತ – ಮೊ 9480803334, ದೂ 08182-266549, ವೃತ್ತ ನಿರೀಕ್ಷಕರು, ಭದ್ರಾವತಿ ಗ್ರಾಮಾಂತರ ವೃತ್ತ – ಮೊ. 9480803335, ದೂ 08182-272333, ಡಿಎಸ್‍ಪಿ ತೀರ್ಥಹಳ್ಳಿ – ಮೊ : 9480803340.

ದೂ 08181 220388, ವೃತ್ತ ನಿರೀಕ್ಷಕರು, ತೀರ್ಥಹಳ್ಳಿ – ಮೊ. 9480803333, ದೂ 08181-228310, ವೃತ್ತ ನಿರೀಕ್ಷಕರು, ಹೊಸನಗರ – ಮೊ : 9480803337, ದೂ 08185 221544., ಎ.ಎಸ್.ಪಿ. ಸಾಗರ – ಮೊ : 9480803322, ದೂ : 08183 226082, ಪೊಲೀಸ್ ಇನ್ಸ್‍ಪೆಕ್ಟರ್, ಸಾಗರ ಟೌನ್ ಠಾಣೆ . ಮೊ. 9480803336.

ದೂ. 081832 26067, ವೃತ್ತ ನಿರೀಕ್ಷಕರು, ಸಾಗರ ಗ್ರಾಮಾಂತರ, ಮೊ. 9480803360, ದೂ. 08183-226194, ಎಎಸ್‍ಪಿ ಶಿಕಾರಿಪುರ – ಮೊ : 9480803323, ದೂ 08187 222442., ವೃತ್ತ ನಿರೀಕ್ಷಕರು, ಶಿಕಾರಿಪುರ – ಮೊ. 9480803338, ದೂ. 08187 222430, ವೃತ್ತ ನಿರೀಕ್ಷಕರು ಸೊರಬ – ಮೊ : 9480803339, ದೂ. 08184 272122. ಇವರನ್ನು ಸಂಪರ್ಕಿಸಬಹುದಾಗಿದೆ.

ಒಟ್ಟಾರೆ ಹೊಸ ವರ್ಷ ಆಚರಣೆಯನ್ನು ಶಾಂತ ರೀತಿಯಾಗಿ ನೆರವೇರುವ ಸಲುವಾಗಿ ಮತ್ತು ಸಾರ್ವಜನಿಕರಿಗೆ ಅನುಕೂಲವಾಗುವ ರೀತಿಯಲ್ಲಿ ಪೊಲೀಸ್ ಇಲಾಖೆ ವತಿಯಿಂದ ಎಲ್ಲಾ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದು, ಯೋಗ್ಯವಾದ ರೀತಿಯಲ್ಲಿ ಬಂದೋಬಸ್ತ್ ನಿಯೋಜಿಸಿಕೊಂಡಿದೆ.

2020ನೇ ಹೊಸ ವರ್ಷ ಎಲ್ಲರ ಬಾಳಲಿ ನೆಮ್ಮದಿಯನ್ನು ಹಾಗೂ ಸುಖ ಶಾಂತಿಯನ್ನು ತರಲಿ ಎಂದು ಶಿವಮೊಗ್ಗ ಪೊಲೀಸ್ ಇಲಾಖೆ ಹಾರೈಸುತ್ತದೆ ಎಂದು ಪೊಲೀಸ್ ಅಧೀಕ್ಷಕರು ಪತ್ರಿಕಾಹೇಳಿಕೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ನಟ ಮನದೀಪ್‌ ರಾಯ್‌ ನಿಧನ

Published

on

ಸುದ್ದಿದಿನ ಡೆಸ್ಕ್ : ಹಿರಿಯ ಚಿತ್ರನಟ ಮನದೀಪ್‌ ರಾಯ್‌ (74 ವರ್ಷ) ಇಂದು ಬೆಳಗಿನ ಜಾವ ಅಗಲಿದ್ದಾರೆ.

ಕೆಲ ದಿನಗಳ ಹಿಂದೆ ಹೃದಯಾಘಾತಕ್ಕೀಡಾಗಿದ್ದ ಅವರು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಮನದೀಪ್‌ ರಾಯ್‌ ಹವ್ಯಾಸಿ ರಂಗಭೂಮಿ ಹಿನ್ನೆಲೆಯ ಕಲಾವಿದ. ನಟ – ನಿರ್ದೇಶಕ ಶಂಕರನಾಗ್‌ ಅವರ ಆತ್ಮೀಯ ಒಡನಾಡಿ. ಪೋಷಕ ಪಾತ್ರ, ಹಾಸ್ಯ ನಟರಾಗಿ 500ಕ್ಕೂ ಹೆಚ್ಚು ಸಿನಿಮಾಗಳು ಹಾಗೂ ಕಿರುತೆರೆ ಸರಣಿಗಳಲ್ಲಿ ಅಭಿನಯಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕರ್ನಾಟಕದಲ್ಲಿ ಈ ವರ್ಷ ಜನಪರ ರಾಜ್ಯ ಬಜೆಟ್ ಮಂಡನೆ ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Published

on

ಸುದ್ದಿದಿನ, ಹಾವೇರಿ : ಕರ್ನಾಟಕದಲ್ಲಿ ಮುಂದಿನ ತಿಂಗಳು ಮಂಡಿಸಲಾಗುತ್ತಿರುವ ಈ ವರ್ಷದ ರಾಜ್ಯ ಬಜೆಟ್ ರೈತರು, ದೀನ ದಲಿತರು, ಯುವಕರು, ಮಹಿಳೆಯರು, ದುಡಿಯುವ ವರ್ಗ ಮತ್ತು ಜನಪರವಾಗಿರುತ್ತದೆ ಎಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಹಾವೇರಿ ಜಿಲ್ಲೆ ಶಿಗ್ಗಾಂವ್‌ನಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ದುಡಿಮೆಗೆ ಯೋಗ್ಯ ಬೆಲೆ ಸಿಗುವ ರೀತಿಯಲ್ಲಿ ನಮ್ಮ ಕಾರ್ಯಕ್ರಮಗಳು ಇರುತ್ತವೆ ಎಂದರು.

ಕರ್ನಾಟಕ ರಾಜ್ಯದ ಆರ್ಥಿಕ ಅಭಿವೃದ್ಧಿಯಲ್ಲಿ ನಾವು ವೇಗವನ್ನು ಕಂಡಿದ್ದೇವೆ. ಕಳೆದ ವರ್ಷ ನಾನು ಅಧಿಕಾರ ವಹಿಸಿಕೊಂಡಾಗ 5 ಸಾವಿರ ಕೋಟಿ ರೂಪಾಯಿ ರಾಜ್ಯದ ಬೊಕ್ಕಸಕ್ಕೆ ನಮ್ಮ ನಿರ್ಧಿಷ್ಟ ಗುರಿಗೆ ಕೊರತೆಯಿತ್ತು. ಅದನ್ನು ನಾವು 5 ಸಾವಿರ ಕೋಟಿ ತುಂಬುವುದಲ್ಲದೇ, 13 ಸಾವಿರ ಕೋಟಿ ಅಧಿಕವಾಗಿ ಸಂಗ್ರಹ ಮಾಡಿದ್ದೇವೆ. ಈ ವರ್ಷವೂ ಕೂಡ ನಮ್ಮ ಹಣಕಾಸಿನ ಸಂಗ್ರಹ ಉತ್ತಮವಾಗಿದೆ ಎಂದು ಕರ್ನಾಟಕದ ಮುಖ್ಯಮಂತ್ರಿ ಹೇಳಿದರು.

ಕೋವಿಡ್ ನಂತರದಲ್ಲಿ ಆರ್ಥಿಕ ಸುಧಾರಣೆ ಆಗುತ್ತಿರುವ ಸಂದರ್ಭದಲ್ಲಿ ಕೆಳಹಂತದ ಜನಸಮುದಾಯಕ್ಕೆ ಇನ್ನಷ್ಟು ಸಹಾಯ ಮಾಡಿ, ಅವರನ್ನು ಕೂಡ ಮುಖ್ಯ ವಾಹಿನಿಗೆ ಬರಬೇಕು ಎನ್ನುವ ನಿಟ್ಟಿನಲ್ಲಿ ನಾವು ಕಾರ್ಯಕ್ರಮ ರೂಪಿಸುತ್ತಿದ್ದೇವೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸಂಸತ್ತಿನ ಬಜೆಟ್ ಅಧಿವೇಶನದ ಹಿನ್ನೆಲೆ ; ಇದೇ 30ರಂದು ಸರ್ವಪಕ್ಷಗಳ ಸಭೆ

Published

on

ಸುದ್ದಿದಿನ ಡೆಸ್ಕ್ : ಸಂಸತ್ತಿನ ಮುಂಬರುವ ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಇದೇ 30ರಂದು ಸರ್ವಪಕ್ಷಗಳ ಸಭೆಯನ್ನು ಕರೆದಿದೆ. ಸಂಸತ್ ಭವನದ ಸಂಕೀರ್ಣದಲ್ಲಿ ಸೋಮವಾರ ಮಧ್ಯಾಹ್ನ 12 ಗಂಟೆಗೆ ಸಭೆ ನಡೆಯಲಿದೆ.

ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ, ಕೇಂದ್ರ ಸಚಿವರು ಮತ್ತು ಸಂಸತ್ತಿನ ಎರಡೂ ಸದನಗಳನ್ನು ಪ್ರತಿನಿಧಿಸುವ ಸದನ ನಾಯಕರು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಸಭೆಯಲ್ಲಿ ಸರ್ಕಾರ ಸಂಸತ್ತಿನ ಉಭಯ ಸದನಗಳ ಸುಗಮ ಕಲಾಪಕ್ಕೆ ಎಲ್ಲ ರಾಜಕೀಯ ಪಕ್ಷಗಳ ಸಹಕಾರವನ್ನು ಕೋರಲಿದೆ. ಸಂಸತ್ತಿನ ಬಜೆಟ್ ಅಧಿವೇಶನ ಇದೇ 31ರಿಂದ ಆರಂಭವಾಗಲಿದೆ. ಮೊದಲ ದಿನ ಬೆಳಿಗ್ಗೆ 11 ಗಂಟೆಗೆ ಸೆಂಟ್ರಲ್ ಹಾಲ್ ನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡುವರು.

ಅದೇ ದಿನವೇ ಆರ್ಥಿಕ ಸಮೀಕ್ಷೆಯನ್ನೂ ಸಹ ಮಂಡಿಸಲಾಗುವುದು. ಫೆಬ್ರವರಿ 1ರಂದು 2023-24ನೇ ಸಾಲಿನ ಕೇಂದ್ರ ಬಜೆಟ್ ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡನೆ ಮಾಡಲಿದ್ದಾರೆ.

ಬಜೆಟ್ ಅಧಿವೇಶನ ಏಪ್ರಿಲ್ 6ವರೆಗೆ ನಡೆಯಲಿದ್ದು, ಸುಮಾರು 66 ದಿನಗಳಲ್ಲಿ 27 ಕಲಾಪಗಳು ನಡೆಯಲಿದೆ. ಮೊದಲ ಅವಧಿಯಲ್ಲಿ ಅಧಿವೇಶನ ಫೆಬ್ರವರಿ 13ರವರೆಗೆ ನಡೆಯಲಿದೆ. ಫೆಬ್ರವರಿ 14ರಿಂದ ಮಾರ್ಚ್ 12ರವರೆಗೆ ಅಧಿವೇಶನಕ್ಕೆ ಬಿಡುವು ಇರಲಿದೆ ಆನಂತರ ಮಾರ್ಚ್ 13ರಿಂದ ಆರಂಭವಾಗುವ ಅಧಿವೇಶನ ಏಪ್ರಿಲ್ 6ಕ್ಕೆ ಕೊನೆಗೊಳ್ಳಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980336243

Continue Reading

Trending